BBK Season 10: ಬಿಗ್‌ಬಾಸ್‌ ಮನೆಯೊಳಗೆ ಎಂಟ್ರಿ ಕೊಟ್ರು ಸ್ಪೆಷಲ್‌ ಗೆಸ್ಟ್‌ - Vistara News

ಕಿರುತೆರೆ

BBK Season 10: ಬಿಗ್‌ಬಾಸ್‌ ಮನೆಯೊಳಗೆ ಎಂಟ್ರಿ ಕೊಟ್ರು ಸ್ಪೆಷಲ್‌ ಗೆಸ್ಟ್‌

BBK Season 10: ದಿನ ಕಳೆದಂತೆ ಬಿಗ್‌ಬಾಸ್‌ ಕನ್ನಡ ಸೀಸನ್‌ ವೀಕ್ಷಕರನ್ನು ಆಕರ್ಷಿಸುತ್ತಿದ್ದು, ಈ ಬಾರಿ ಮನೆಯೊಳಗೆ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದಾರೆ.

VISTARANEWS.COM


on

guruji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಲವು ವಿಶೇಷತೆಗಳೊಂದಿಗೆ ಆರಂಭವಾದ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್‌ 10 (BBK Season 10) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅದಕ್ಕೆ ತಕ್ಕಂತೆ ದಾಖಲೆಯ ಪ್ರಮಾಣದಲ್ಲಿ ಟಿಆರ್‌ಪಿಯೂ ದೊರೆತಿದೆ. ಸ್ಪರ್ಧಿಗಳ ಜಗಳ, ಸ್ನೇಹ, ಒಂದಲ್ಲ ಒಂದು ವಿವಾದ ಇನ್ನಿತರ ಕಾರಣಗಳಿಂದ ಈ ಶೋ ಗಮನ ಸೆಳೆಯುತ್ತಿದೆ. ಜತೆಗೆ ಮನೆಯೊಳಕ್ಕೆ ವಿಶೇಷ ಅತಿಥಿಗಳೂ ಆಗಮಿಸಿ ಸ್ಪರ್ಧಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಇದೀಗ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಬ್ರಹ್ಮಾಂಡ ಗುರೂಜಿ (Brahmanda Guruji) ಎಂದೇ ಜನಪ್ರಿಯರಾಗಿರುವ ನರೇಂದ್ರ ಬಾಬು ಶರ್ಮಾ ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ.

ನರೇಂದ್ರ ಬಾಬು ಶರ್ಮಾ ಬಿಗ್‌ಬಾಸ್‌ ಮನೆಯೊಳಗೆ ಆಗಮಿಸುವ ಪ್ರೋಮೋವನ್ನು ಕಲರ್ಸ್‌ ಕನ್ನಡ ವಾಹಿನಿ ಪ್ರಸಾರ ಮಾಡಿದೆ. ಅವರು ಮನೆಯೊಳಗೆ ಆಗಮಿಸಿದ್ದು ಎಲ್ಲರಿಗೂ ಅಚ್ಚರಿ ತಂದಿದೆ. ಗುರೂಜಿ ಮನೆಯೊಳಗೆಲ್ಲ ಓಡಾಡುತ್ತಿರುವುದು ಪ್ರೋಮೋದಲ್ಲಿ ಕಂಡುಬಂದಿದೆ. ಅವರು ಸ್ಪರ್ಧಿಗಳ ಜತೆ ಲವಲವಿಕೆಯಿಂದ ಮಾತುಕತೆಯನ್ನೂ ನಡೆಸಿದ್ದಾರೆ. ಅವರು ಮನೆಯಲ್ಲಿ ಎಲ್ಲರನ್ನು ಹುಡುಕುತ್ತಾ ಓಡಾಡುತ್ತಿದ್ದಾರೆ. ʼʼಎಲ್ರೋ ಇದ್ದೀರಾ? ಬಿಗ್ ಬಾಸ್ ಇವರನ್ನೆಲ್ಲಾ ಒಂದೆಡೆ ಸ್ಟ್ಯಾಚು ಮಾಡಿ ಬಿಡಿ. ನನ್ನ ಕೈಯಲ್ಲಿ ಓಡಾಡಲು ಆಗಲ್ಲ. ಮನೆಯಿಂದ ಹೊರಗೆ ಹೋಗ್ತಿನಿʼʼ ಎಂದು ಎಂದಿನ ತಮ್ಮ ಶೈಲಿಯಲ್ಲಿ ಡೈಲಾಗ್‌ ಹೊಡೆದಿದ್ದಾರೆ.

ಬಿಗ್‌ಬಾಸ್‌ ನಂಟು

ಬ್ರಹ್ಮಾಂಡ ಗುರೂಜಿ ಮತ್ತು ಬಿಗ್‌ಬಾಸ್‌ ನಡುವೆ ಉತ್ತಮ ನಂಟಿದೆ. ಅವರು ಮೊದಲ ಸೀಸನ್​ನ ಸ್ಪರ್ಧಿಯಾಗಿದ್ದರು. ಅಲ್ಲದೆ ಮೂರನೇ ರನ್ನರ್​ ಅಪ್​ ಆಗಿ ಅವರು ಹೊರಹೊಮ್ಮಿದ್ದರು. ಜೀ ಕನ್ನಡ ವಾಹಿನಿಯ ಬೃಹತ್ ಬ್ರಹ್ಮಾಂಡ, ಸುವರ್ಣ ವಾಹಿನಿಯ ಭವ್ಯ ಬ್ರಹ್ಮಾಂಡ ಮತ್ತು ಸುವರ್ಣ ನ್ಯೂಸ್ ಚಾನೆಲ್‌ನ ಬ್ರಹ್ಮಾಂಡದಂತಹ ಕಾರ್ಯಕ್ರಮಗಳ ಸರಣಿಯಿಂದ ಅವರು ಜನಪ್ರಿಯಯಾಗಿದ್ದರು. ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದಾರೆ. ಬಳಿಕ ಬಿಗ್‌ ಬಾಸ್‌ ಸ್ಪರ್ದಿಯಾಗಿ ಇನ್ನಷ್ಟು ಗಮನ ಸೆಳೆದರು. ಸದ್ಯ 10ನೇ ಸೀಸನ್‌ ಮನೆಯೊಳಗೆ ಬಂದಿದ್ದು, ಯಾವ ರೀತಿಯ ಟ್ವಿಸ್ಟ್‌ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: BBK Season 10 : ಡ್ರೋನ್‌ ಪ್ರತಾಪ್‌ ಅಮ್ಮನಿಗೆ LOVE YOU ಎಂದು ಹೇಳಿದ ಕಿಚ್ಚ ಸುದೀಪ್!

ಡಬಲ್‌ ಎಲಿಮಿನೇಷನ್‌

ಬಿಗ್‌ ಬಾಸ್‌ ಈ ವಾರ ಸ್ಪರ್ಧಿಗಳಿಗೆ ಡಬಲ್‌ ಶಾಕ್‌ ನೀಡಿತ್ತು. ಅಂದರೆ ಎರಡೆರಡು ಎಲಿಮಿನೇಷನ್‌ ನಡೆಸಲಾಗಿದೆ. ಶನಿವಾರದ (ನ. 18) ಸಂಚಿಕೆಯಲ್ಲಿ ಇಶಾನಿ ಮನೆಯಿಂದ ಹೊರ ನಡೆದಿದ್ದರೆ, ಭಾನುವಾರ(ನ. 19)ದ ‘ಸೂಪರ್ ಸಂಡೇ ವಿತ್ ಕಿಚ್ಚ ಸುದೀಪ’ ಸಂಚಿಕೆಯಲ್ಲಿ ಭಾಗ್ಯಶ್ರೀ ಔಟ್‌ ಆಗಿದ್ದರು. ಈ ಹಿಂದೆ ಎರಡೆರೆಡು ಬಾರಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿರಲಿಲ್ಲ. ದಸರಾ ಹಬ್ಬ ಮತ್ತು ವರ್ತೂರ್ ಸಂತೋಷ್‌ ಅವರ ಕಾರಣದಿಂದ ಎಲಿಮಿನೇಷನ್ ನಡೆಯದೆ ಸ್ಪರ್ಧಿಗಳು ಬಚಾವಾಗಿದ್ದರು. ಆದರೆ ಈ ಬಾರಿ ಹಾಗಾಗಲಿಲ್ಲ. ಬಿಗ್‌ ಬಾಸ್‌ ಮನೆಯಿಂದ ಇದುವರೆಗೆ 5 ಮಂದಿ ಹೊರ ಹೋಗಿದ್ದಾರೆ. ಸ್ನೇಕ್ ಶ್ಯಾಮ್, ಗೌರೀಶ್‌ ಅಕ್ಕಿ, ರಕ್ಷಕ್ ನಂತರ ಇದೀಗ ಇಶಾನಿ ಮತ್ತು ಭಾಗ್ಯಶ್ರೀ ತಮ್ಮ ಸ್ಪರ್ಧೆಯನ್ನು ಕೊನೆಗೊಳಿಸಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

Kannada Serials TRP: 25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

VISTARANEWS.COM


on

Kannada Serials TRP Lakshmi Baramma in Top 5 new serials not in demand
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಭಾರಿ ಪೈಪೋಟಿ ನೀಡುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.  25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

ಲಕ್ಷ್ಮೀ ನಿವಾಸ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಾ ರಾಮ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ.

‘ಲಕ್ಷ್ಮೀ ಬಾರಮ್ಮ’

ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮೀ ಬಾರಮ್ಮ’ ಅನ್ನೋದು ವಿಶೇಷ. ಲಕ್ಷ್ಮೀಗೆ ಈಗ ವೈಷ್ಣವ್‌ ಪ್ರೀತಿ ಗೊತ್ತಾಗಿದೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಕೊನೆಗೂ ವೈಷ್ಣವ್‌ಗೆ ತಾಯಿ ಕಾವೇರಿ ಮಾಡಿದ ಮೋಸ ಏನು ಅಂತ ಗೊತ್ತಾಗಿದೆ. ಕಾವೇರಿ ಮಾಡಿದ ಮೋಸ ಏನು ಅಂತ ಲಕ್ಷ್ಮೀಗೂ ಗೊತ್ತಾಗಿದೆ. ಈಗ ಏನಾಗುವುದು ಎಂದು ಕಾದು ನೋಡಬೇಕಿದೆ. ವೈಷ್ಣವ್ ಪಾತ್ರಕ್ಕೆ ಶಮಂತ್ ಬ್ರೊ ಗೌಡ, ಕೀರ್ತಿ ಪಾತ್ರಕ್ಕೆ ತನ್ವಿ ರಾವ್, ಲಕ್ಷ್ಮೀ ಪಾತ್ರಕ್ಕೆ ಭೂಮಿಕಾ ರಮೇಶ್ ಅವರು ಜೀವ ತುಂಬುತ್ತಿದ್ದಾರೆ.

ಅಮೃತಧಾರೆ

ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿತ್ತು. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. 

ಹೊಸ ಧಾರಾವಾಹಿ ‘ನಿನಗಾಗಿ’ ಟಿಆರ್​ಪಿ ಕಡಿಮೆ ಆಗಿದೆ. ಈ ಧಾರಾವಾಹಿ 22ನೇ ವಾರದಲ್ಲಿ ಆರನೇ ಸ್ಥಾನ ಪಡೆದಿತ್ತು. 23ನೇ ವಾರದ ಧಾರಾವಾಹಿಯಲ್ಲಿ ಒಂಭತ್ತನೇ ಸ್ಥಾನಕ್ಕೆ ಇಳಿದಿತ್ತು. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

ಶ್ರೀಗೌರಿ ಕೂಡ ಬೇಡಿಕೆ ಕಡಿಮೆಯಾಗಿದೆ. ಮುಖ್ಯ ಭೂಮಿಕೆಯಲ್ಲಿ ‘ಕಮಲಿ’ ಧಾರಾವಾಹಿಯ ಅಮೂಲ್ಯ ಗೌಡ ಅಭಿನಯ ಮಾಡಿದ್ದಾರೆ. ಅಮೂಲ್ಯ ಮೊದಲು ʻಅನುರಾಗ ಸಂಗಮʼ ಎನ್ನುವ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ʻಸ್ವಾತಿ ಮುತ್ತುʼ, ʻಪುನರ್ ವಿವಾಹʼ, ʻಅರಮನೆʼ, ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಅಮೂಲ್ಯ ಗೌಡಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಧಾರಾವಾಹಿ ಕಮಲಿ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

Continue Reading

ಸಿನಿಮಾ

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Hina Khan: ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ.

VISTARANEWS.COM


on

Hina Khan diagnosed with breast cancer
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ನನಗೆ ಸ್ತನ ಕ್ಯಾನ್ಸರ್ (‘Yeh Rishta Kya Kehlata Hai’.) 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ. ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ ʻʻಎಲ್ಲರಿಗೂ ನಮಸ್ಕಾರ, ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರೊಂದಿಗೆ ಕೆಲವು ಪ್ರಮುಖ ಸುದ್ದಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ ಮೂರನೇ ಹಂತದಲ್ಲಿ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇದರಿಂದ ಆದಷ್ಟು ಬೇಗ ಗುಣಮುಖಳಾಗಿ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದ ನನ್ನ ಮೇಲೆ ಇರಲಿ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜತೆಗೆ ಗಟಿಯಾದ ನಿರ್ಧಾರದ ಜತೆಗೆ ಪಾಸಿಟಿವ್‌ ಆಗಿರಲು ಬಯಸುತ್ತೇನೆ.
ಪರಮಾತ್ಮನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿ ಮತ್ತೆ ನಿಮ್ಮ ಮುಂದೆ ಬರುತ್ತೇಬೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು



ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ, ಅಭಿಮಾನಿಗಳು ಮತ್ತು ಸ್ನೇಹಿತರು ನಟಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದಾರೆ. “ನೀವು ಯಾವಾಗಲೂ ತುಂಬಾ ಬಲಶಾಲಿಯಾಗಿದ್ದೀರಿʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಅಂಕಿತಾ ಲೋಖಂಡೆ ಕೂಡ”ಹೀನಾ ನೀನು ಇದಕ್ಕಿಂತ ಬಲಶಾಲಿ ಆದ ಹುಡುಗಿ!!! ದೇವರು ನಿಮ್ಮನ್ನು ಆಶೀರ್ವದಿಸಲಿ. ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಕಿರುತೆರೆ

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Shri Devi Mahathme: ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು (star suvrna) ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ (Shri Devi Mahathme) ಹಾಗು ಎಡೆಯೂರು ಶ್ರೀ ಸಿದ್ದಲಿಂಗೇಶ್ವರದಂತಹ ಧಾರಾವಾಹಿಗಳನ್ನು ನೀಡುತ್ತಾ ಬಂದಿದೆ. ಇದೀಗ ನಿಮ್ಮ ಮನರಂಜನೆಯನ್ನು ದುಪ್ಪಟ್ಟುಗೊಳಿಸಲು ಜಗವನು ಕಾಯುವ ಕರುಣೆಯ ತಾಯಿ ‘ಪಾರ್ವತಿ’ಯ ಕಥೆಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ ಅದೇ “ಶ್ರೀ ದೇವೀ ಮಹಾತ್ಮೆ”.

ಪುರಾಣಗಳ ಪ್ರಕಾರ ಸತಿಯು ಅತ್ಯಂತ ಸುಂದರವಾಗಿರುತ್ತಾಳೆ. ತಪಸ್ವಿ ಶಿವನಿಗೆ ಮನಸೋಲುವ ಸತಿ, ಮುಂದೆ ಪಾರ್ವತಿಯಾಗಿ ಹೇಗೆ ಮರು ಜನ್ಮತಾಳುತ್ತಾಳೆ ? ಹಾಗು ಮಹಾಕಾಳಿಯ ರುದ್ರಾವತಾರವನ್ನು ಏಕೆ ಧರಿಸುತ್ತಾಳೆ ? ಎಂಬುದರ ಜೊತೆಗೆ ಜಗನ್ಮಾತೆಯ ಮಹಿಮೆಯನ್ನು, ಪವಾಡಗಳನ್ನು ಅರ್ಥಗರ್ಭಿತವಾಗಿ ಎಳೆ ಎಳೆಯಾಗಿ ಮನಮುಟ್ಟುವಂತೆ ಜನರಿಗೆ ತಿಳಿಸುವುದೇ ‘ಶ್ರೀ ದೇವೀ ಮಹಾತ್ಮೆ’ಯ ಮುಖ್ಯ ಉದ್ದೇಶ.

ಇನ್ನು ಈ ಧಾರಾವಾಹಿಯು ಅದ್ಧೂರಿಯಾಗಿ, ಅಮೋಘ ಸೆಟ್‌ ಗಳು ಮತ್ತು ಅತ್ಯದ್ಭುತವಾಗಿರುವ ಗ್ರಾಫಿಕ್ಸ್‌ ತಂತ್ರಜ್ಞಾನಗಳಿಂದ ಚಿತ್ರೀಕರಣಗೊಳ್ಳುತ್ತಿದೆ. ಟಿವಿಯಲ್ಲಿ ಪ್ರಸಾರವಾಗುತ್ತಿರುವ ಪ್ರೋಮೋಗಳಿಗೆ ಜನರು ಮನಸೋತಿದ್ದು, ಧಾರಾವಾಹಿಯನ್ನು ನೋಡಲು ಕಾತರತೆಯಿಂದ ಕಾಯುತ್ತಿದ್ದಾರೆ. ಶಿವನ ಪಾತ್ರವನ್ನು ಅರ್ಜುನ್ ರಮೇಶ್, ಪಾರ್ವತಿಯ ಪಾತ್ರವನ್ನು ಜೀವಿತಾ ವಸಿಷ್ಠ ನಿರ್ವಹಿಸುತ್ತಿದ್ದಾರೆ. ಜೊತೆಗೆ ಈ ಪೌರಾಣಿಕ ಧಾರಾವಾಹಿಯು ಅತ್ಯುತ್ತಮ ತಾರಾಗಣವನ್ನು ಹೊಂದಿದ್ದು, ನಂದಿ ಮೂವೀಸ್ ನಿರ್ಮಾಣ ಸಂಸ್ಥೆಯು ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ” ನಿಮ್ಮ ಮನೆ ಮನದಂಗಳದಲ್ಲಿ ಇದೇ ಜುಲೈ 1 ರಿಂದ ಸೋಮ-ಶನಿವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

{ಬದಲಾದ ಸಮಯದಲ್ಲಿ ಬರ್ತಿದೆ ನಿಮ್ಮ ನೆಚ್ಚಿನ ಧಾರಾವಾಹಿ “ಗೌರಿ ಶಂಕರ” ಇದೇ ಸೋಮವಾರದಿಂದ ಸಂಜೆ 6.30 ತಪ್ಪದೇ ವೀಕ್ಷಿಸಿ}

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading
Advertisement
Assam Tour
ಪ್ರವಾಸ6 mins ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ21 mins ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ21 mins ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ24 mins ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ51 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ54 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ7 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌