Dina Bhavishya : ಈ ರಾಶಿಯವರು ಮಾತಿಗೆ ವಿರಾಮ ನೀಡಿದರೆ ಒಳ್ಳೆಯದು - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಮಾತಿಗೆ ವಿರಾಮ ನೀಡಿದರೆ ಒಳ್ಳೆಯದು

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಂಗಳವಾರವೂ ಮೀನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ. ವೃಷಭ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಮಿಥುನ ರಾಶಿಯವರು ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ನವಮಿ 25:09 ವಾರ: ಮಂಗಳವಾರ
ನಕ್ಷತ್ರ: ಶತತಾರ 20:00 ಯೋಗ: ವ್ಯಾಘಾತ 17:39
ಕರಣ: ಬಾಲವ 14:12 ಅಮೃತ ಕಾಲ: ಮಧ್ಯಾಹ್ನ 1:15 ರಿಂದ ಮಧ್ಯಾಹ್ನ 02:45 ರವರೆಗೆ
ದಿನ ವಿಶೇಷ: ಕೂಷ್ಮಾಂಡನವಮಿ, ವಿಶ್ವ ದೂರದರ್ಶನ ದಿನ

ಸೂರ್ಯೋದಯ : 06:29  ಸೂರ್ಯಾಸ್ತ : 05:55

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12.00 ರಿಂದ 1.30
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ. ದೊಡ್ಡ ಯೋಜನೆ ಬಗ್ಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮಗೆ ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ, ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆಯು ಅಪಾರ ಯಶಸ್ಸು ಹಾಗೂ ಕೀರ್ತಿಯನ್ನು ತಂದು ಕೊಡಲಿದೆ. ಪ್ರಯಾಣದ ಕುರಿತಾಗಿ ಯೋಚಿಸುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ತರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆಯು ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ದಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಕೋಪದಲ್ಲಿ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ:ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Bridge Collapse: ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 10 ಸೇತುವೆಗಳು ಕುಸಿದಿರುವುದು (Bridge Collapse) ದೇಶಾದ್ಯಂತ ಸುದ್ದಿಯಾಗಿದೆ. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

ಬಿಹಾರದಲ್ಲಿ ಸೇತುವೆಗಳ ನಿರ್ಮಾಣದ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣ ಸೇತುವೆಗಳು ಕುಸಿದಿವೆ. ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರವು 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಜಲ ಸಂಪನ್ಮೂಲ ಇಲಾಖೆಯ 11 ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು, ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳಿಂದ ವಿವರಣೆ ಕೇಳಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದ್ದು, ಇನ್ನಷ್ಟು ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

Bridge Collapse

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಜುಲೈ 3ರಂದು ಸಿವಾನ್‌ ಜಿಲ್ಲೆಯಲ್ಲಿ 2 ಸೇತುವೆ ಬಿದ್ದಿದ್ದವು. ಇನ್ನು, ಜುಲೈ 4ರಂದು ಸರಣ್‌ ಜಿಲ್ಲೆಯಲ್ಲಿ ಒಂದು ಸೇತುವೆ ಕುಸಿದಿತ್ತು. ಜೂನ್‌ 28ರಂದು ಮಧುಬನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು. ಇದಕ್ಕೂ ಒಂದು ದಿನ ಮೊದಲೇ ಅಂದರೆ ಜೂನ್‌ 27ರಂದು ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆ ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading

Latest

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Viral Video: ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅವರು ನಟಿಸಿದ ʼRRR’ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ”ಗೆ ಯುವಕನೊಬ್ಬ ಹುಚ್ಚೆದ್ದು ಡ್ಯಾನ್ಸ್‌ ಮಾಡಿದ್ದಾನೆ. ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ, ಇನ್ನು ಕೆಲವರಿಗೆ ಇದರಿಂದ ಕಿರಿಕಿರಿಯಾಗಿದೆ. ಈ ವಿಡಿಯೊ ಇರುವ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ಕೆಲವರಿಗೆ ಡ್ಯಾನ್ಸ್‌ ಎಂದರೆ ವಿಪರೀತ ಮೋಹವಿರುತ್ತದೆ. ಹಾಡು ಕಿವಿಗೆ ಬಿದ್ದಾಕ್ಷಣ ಕಾಲು ಕೂಡ ನಿಲ್ಲಲ್ಲ. ಈಗಂತೂ ಸಾರ್ವಜನಿಕ ಸ್ಥಳವೆಂದೂ ನೋಡದೇ ಕುಣಿಯುವುದಕ್ಕೆ ಶುರು ಮಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ಹಾಡೊಂದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಹುಚ್ಚೆದ್ದು ಕುಣಿದಿದ್ದು, ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಸಚಿನ್ ಎಂಬ ವ್ಯಕ್ತಿ ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್‌ ಅವರು ನಟಿಸಿದ ‘ಆರ್‌ಆರ್‌ಆರ್’ ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ” ಗೆ ಉತ್ಸಾಹದಿಂದ ಡ್ಯಾನ್ಸ್ ಮಾಡಿದ್ದಾನೆ.

ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ ಕೆಲವರಿಗೆ ಇದರಿಂದ ಅಡ್ಡಿಯಾಗಿದೆ ಎನ್ನಲಾಗಿದೆ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ಸಚಿನ್ ಮೆಟ್ರೋ ರೈಲಿನಲ್ಲಿ ಮಧ್ಯದಲ್ಲಿ ನಿಂತು ಹಾಡಿಗೆ ಉತ್ಸಾಹದಿಂದ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿರುವುದನ್ನು ಮೊದಲು ಕಾಣಿಸುತ್ತದೆ. ನಂತರ ಇಂದ್ರಪ್ರಸ್ಥ ನಿಲ್ದಾಣದಲ್ಲಿ ಮೆಟ್ರೋ ನಿಂತು ಬಾಗಿಲು ತೆರೆಯುತ್ತಿದ್ದಂತೆ, ಅವನು ಪ್ಲಾಟ್‍ಫಾರ್ಮ್ ನಿಂದ ಹೊರಗೆ ಓಡಿ ಕುಳಿದು ಮತ್ತೆ ಬೋಗಿಗೆ ಪ್ರವೇಶಿಸಿ ಡ್ಯಾನ್ಸ್ ಮಾಡುತ್ತಾನೆ. ನಂತರ ಅವನು ಜಿಗಿದು ತನ್ನ ಡ್ಯಾನ್ಸ್ ಅನ್ನು ಹಂತ ಹಂತವಾಗಿ ಮುಂದುವರಿಸುತ್ತಾನೆ, ಇದು ಅವನ ಸ್ನೇಹಿತರು ಮತ್ತು ಸಹ ಪ್ರಯಾಣಿಕರಿಗೆ ಆಶ್ಚರ್ಯ ಮತ್ತು ಮನರಂಜನೆಯನ್ನು ನೀಡುತ್ತದೆ. ಕೆಲವರು ಈ ಡ್ಯಾನ್ಸ್ ನೋಡಿ ಸುಮ್ಮನಿದ್ದರೆ ಕೆಲವರ ಮುಖದಲ್ಲಿ ನಗು ಮೂಡಿದೆ ಎನ್ನಲಾಗಿದೆ.

ಈ ಪೋಸ್ಟ್ ಕೆಲವು ದಿನಗಳ ಹಿಂದೆ ಹಂಚಿಕೊಳ್ಳಲಾಗಿದ್ದು, ಇದಕ್ಕೆ 13.8 ಮಿಲಿಯನ್ ವೀವ್ಸ್ ಹಾಗೂ ಒಂದು ಮಿಲಿಯನ್ ಲೈಕ್ಸ್ ಬಂದಿದೆ. ಸಚಿನ್ ಡ್ಯಾನ್ಸ್‌ಗೆ ಹಲವು ನೆಟ್ಟಿಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿನ್ ಅವರ ಈ ಕೃತ್ಯಕ್ಕೆ ಜನರು ನಿರಾಶೆಗೊಂಡಿದ್ದಾರೆ.

ಈ ಹಿಂದೆ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬಳು ಡ್ಯಾನ್ಸ್ ಮಾಡಿದ್ದು, ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಆಗಿದೆ. ವಿಡಿಯೋದಲ್ಲಿ ಆಕೆ ಕಪ್ಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಳು.

ಇದನ್ನೂ ಓದಿ: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

Viral Video

ಅವಳು ವಿಮಾನದ ಮಧ್ಯದಲ್ಲಿ ನಿಂತು ಡ್ಯಾನ್ಸ್‌ ಮಾಡಿದ್ದಳು. ಈಕೆಯ ಡ್ಯಾನ್ಸ್‌ ನೋಡಿ ಇತರ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದರು.

Continue Reading

ಪ್ರಮುಖ ಸುದ್ದಿ

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Virat kohli : ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು.

VISTARANEWS.COM


on

Virat kohli
Koo

ಬೆಂಗಳೂರು: ಸ್ಟಾರ್​ ಬ್ಯಾಟರ್ ವಿರಾಟ್​ ಕೊಹ್ಲಿಯ (Virat Kohli) ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಪ್ರಸ್ತುತ ತಮ್ಮ ಇಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜತೆ ಲಂಡನ್​​ನಲ್ಲಿದ್ದಾರೆ. ಬಾರ್ಬಡೋಸ್​​ನಿಂದ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ ತಕ್ಷಣವೇ ಲಂಡನ್​ಗೆ ಹೋಗಿದ್ದಾರೆ. ಜೂನ್ 29ರಂದು ಟೀಮ್ ಇಂಡಿಯಾ ಟಿ 20 ವಿಶ್ವಕಪ್ ಗೆದ್ದ ತಕ್ಷಣವೇ ಕೊಹ್ಲಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಲಂಡನ್​ಗೆ ತೆರಳಿರುವ ಅವರು ಭವಿಷ್ಯದಲ್ಲಿ ಕಾಯಂ ಅಲ್ಲೇ ನೆಲೆಗೊಳ್ಳಲಿದ್ದರೆ ಎಂಬುದಾಗಿ ಹೇಳಲಾಗಿದೆ.

ಅನುಷ್ಕಾ ಮತ್ತು ವಿರಾಟ್ ಆಗಾಗ್ಗೆ ಲಂಡನ್​ಗೆ ಭೇಟಿ ನೀಡುತ್ತಿರುವ ಕಾರಣ ಈ ಊಹಾಪೋಹಗಳು ಎದ್ದಿವೆ. . 2023 ರಲ್ಲಿ, ವಿರಾಟ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮ ತೆಗೆದುಕೊಂಡು ಲಂಡನ್​​ನಲ್ಲಿ ಅನುಷ್ಕಾ ಅವರೊಂದಿಗೆ ಸ್ವಲ್ಪ ಸಮಯ ಕಳೆದರು. ವೈರಲ್ ಫೋಟೋದಲ್ಲಿ ಅನುಷ್ಕಾ ಮತ್ತು ವಿರಾಟ್ ಲಂಡನ್​​​ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದರು. ಅಕಾಯ್ ಅವರ ಜನನವನ್ನು ಘೋಷಿಸಿದ ಕೆಲವು ದಿನಗಳ ನಂತರ ವಿರಾಟ್ ಲಂಡನ್​ನ ರೆಸ್ಟೋರೆಂಟ್​​ನಲ್ಲಿ ವಮಿಕಾ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

ಅನುಷ್ಕಾ ಶರ್ಮಾ ತನ್ನ ಗರ್ಭಧಾರಣೆಯ ಹಲವಾರು ತಿಂಗಳುಗಳನ್ನು ಲಂಡನ್​ನಲ್ಲಿ ಕಳೆದರು ಎಂದು ವರದಿಯಾಗಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಐದು ದಿನಗಳ ನಂತರ ಘೋಷಿಸಿದ್ದರು. ಅಲ್ಲಿಯವರೆಗೆ ಅಭಿಮಾನಿಗಳಿಗೆ ಅಕಾಯ್ ಜನನದ ಬಗ್ಗೆ ಯಾವುದೇ ಸುಳಿವು ಇರಲಿಲ್ಲ . ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ತಮ್ಮ ಎರಡನೇ ಮಗುವಿನ ಜನನಕ್ಕಾಗಿ ಇಂಗ್ಲೆಂಡ್​​ ಪ್ರಯಾಣಿಸಿದ್ದಾರೆ ಎಂದು ವರದಿಗಳು ಹೇಳಿದವು.

ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದ ಅನುಷ್ಕಾ ಶರ್ಮಾ ಅನುಪಸ್ಥಿತಿಯೂ ಈ ಊಹಾಪೋಹಗಳಿಗೆ ಕಾರಣವಾಯಿತು. ಕಳೆದ ವರ್ಷ ನಟಿ ಇನ್ನು ಮುಂದೆ ಹೆಚ್ಚು ಚಲನಚಿತ್ರಗಳನ್ನು ಮಾಡಲು ಬಯಸುವುದಿಲ್ಲ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸುವೆ ಎಂದಿದ್ದರು. “ನನಗೆ ನಟನೆ ಇಷ್ಟ. ನಾನು ಮೊದಲು ಮಾಡಿದಷ್ಟು ಹೆಚ್ಚು ಚಲನಚಿತ್ರಗಳನ್ನು ಮಾಡಲು ಇಷ್ಟಪಡುವುದಿಲ್ಲ . ನಾನು ವರ್ಷಕ್ಕೆ ಒಂದು ಚಿತ್ರ ಮಾಡಲು ಬಯಸುತ್ತೇನೆ. ಹೆಚ್ಚಾಗಿ ಕುಟುಂಬಕ್ಕೆ ಸಮಯ ನೀಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ವಿರಾಟ್ ಕೊಹ್ಲಿ ಕೂಡ ಲಂಡನ್​​ನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಾರೆ ಎಂದು ಆಗಾಗ್ಗೆ ವ್ಯಕ್ತಪಡಿಸಿದ್ದರು. “ಕುಟುಂಬದೊಂದಿಗೆ ಸಮಯ ಕಳೆಯಲು ಸಿಗುವ ಅವಕಾಶಕ್ಕಾಗಿ ದೇವರಿಗೆ ಕೃತಜ್ಞತೆ ಹೇಳುವೆ. ಸಾಮಾನ್ಯ ವ್ಯಕ್ತಿಯಾಗಿ ಅಲ್ಲಿರುವುದು ಖುಷಿ ” ಎಂದು ವಿರಾಟ್ ಕೊಹ್ಲಿ ಹೇಳಿದ್ದರು.

ಸ್ಟಾರ್ ಕ್ರಿಕೆಟಿಗ ಕೊಹ್ಲಿ ಮೇ ತಮ್ಮ ಅಭಿಪ್ರಾಯ ಹೇಳಿದ್ದರು. “ನಾನು ಕ್ರಿಕೆಟ್​​ ಮುಗಿದ ನಂತರ ಕುಟುಂಬದ ಜತೆ ಹೋಗುತ್ತೇನೆ. ನೀವು ಸ್ವಲ್ಪ ಸಮಯದವರೆಗೆ ನೋಡಲು ಆಗುವುದಿಲ್ಲ. ಆದ್ದರಿಂದ ನಾನು ಆಡುವ ಸಮಯದವರೆಗೆ ನನ್ನಲ್ಲಿರುವ ಎಲ್ಲವನ್ನೂ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದರು

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

Continue Reading

ದೇಶ

Lalu Prasad Yadav: ಮುಂದಿನ ತಿಂಗಳು ಮೋದಿ ರಾಜೀನಾಮೆ; ಲಾಲು ಪ್ರಸಾದ್‌ ಯಾದವ್‌ ಸ್ಫೋಟಕ ಭವಿಷ್ಯ

Lalu Prasad Yadav: ರಾಷ್ಟ್ರೀಯ ಜನತಾದಳದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರು ಮಾತನಾಡಿದರು. ಇದೇ ವೇಳೆ ಅವರು, ಮುಂದಿನ ತಿಂಗಳು ನರೇಂದ್ರ ಮೋದಿ ಸರ್ಕಾರ ಪತನವಾಗಲಿದೆ. ಹಾಗಾಗಿ, ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಿರಬೇಕು ಎಂಬುದಾಗಿ ಸೂಚಿಸಿದ್ದಾರೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Lalu Prasad Yadav
Koo

ಪಟನಾ: ಟಿಡಿಪಿ, ಜೆಡಿಯು ಸೇರಿ ಹಲವು ಪಕ್ಷಗಳ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟವು ಕೇಂದ್ರದಲ್ಲಿ ಸರ್ಕಾರ ರಚಿಸಿದೆ. ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ನರೇಂದ್ರ ಮೋದಿ ಸರ್ಕಾರ (Narendra Modi Government) ಪತನವಾಗುತ್ತದೆ ಎಂದೇ ಪ್ರತಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಮೊದಲಿಗೆ ಮಮತಾ ಬ್ಯಾನರ್ಜಿ, ನಂತರ ಮಲ್ಲಿಕಾರ್ಜುನ ಖರ್ಗೆ ಅವರು, “ಶೀಘ್ರದಲ್ಲೇ ಮೋದಿ ಸರ್ಕಾರ ಪತನವಾಗುತ್ತದೆ” ಎಂದು ಹೇಳಿದ್ದರು. ಈಗ ಮೋದಿ ಸರ್ಕಾರ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಭವಿಷ್ಯ ನುಡಿದಿದ್ದಾರೆ.

“ನರೇಂದ್ರ ಮೋದಿ ಸರ್ಕಾರವು ತುಂಬ ದುರ್ಬಲವಾಗಿದೆ. ಅದು ಆಗಸ್ಟ್‌ನಲ್ಲಿ ಪತನವಾಗುವ ಸಾಧ್ಯತೆ ಇದೆ. ಯಾವಾಗ ಬೇಕಾದರೂ ಮತ್ತೆ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ, ಪಕ್ಷದ ಕಾರ್ಯಕರ್ತರು, ಮುಖಂಡರು ಚುನಾವಣೆಗೆ ಸಜ್ಜಾಗಿರಬೇಕು” ಎಂದು ಹೇಳಿದ್ದಾರೆ. ರಾಷ್ಟ್ರೀಯ ಜನತಾದಳದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಕ್ಷದ ಕಾರ್ಯಕರ್ತರಿಗೆ ಹೀಗೆ ಕರೆ ನೀಡಿದ್ದಾರೆ.

15 ದಿನದಲ್ಲಿ ಪತನ ಎಂದಿದ್ದ ಖರ್ಗೆ

“ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು” ಎಂಬುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ ಹಾಗೂ ಏಕನಾಥ್‌ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.

ಮೊದಲು ಭವಿಷ್ಯ ನುಡಿದಿದ್ದು ಮಮತಾ

ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ ಎಂದು ಮೋದಿ ಪ್ರಮಾಣವಚನ ಸ್ವೀಕರಿಸುತ್ತಲೇ ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ. ಯಾವ ಸರ್ಕಾರವೂ 15 ದಿನದಲ್ಲಿ ಬೇಕಾದರು ಪತನವಾಗಬಹುದು” ಎಂದಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading
Advertisement
Brain Eating Amoeba
ಆರೋಗ್ಯ3 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ31 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು35 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ37 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ42 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ45 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ46 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ1 hour ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest1 hour ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Anganwadi workers should make good use of mobile phones says MLA Channareddy Patil Thunnur
ಯಾದಗಿರಿ1 hour ago

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌