Kamal Haasan: ಒಂದೇ ಸೆಟ್‌ನಲ್ಲಿ ಬಿಗಿದಪ್ಪಿಕೊಂಡ ಕಮಲ್-ರಜನಿಕಾಂತ್! - Vistara News

South Cinema

Kamal Haasan: ಒಂದೇ ಸೆಟ್‌ನಲ್ಲಿ ಬಿಗಿದಪ್ಪಿಕೊಂಡ ಕಮಲ್-ರಜನಿಕಾಂತ್!

Kamal Haasan: ಎರಡೂ ಚಿತ್ರಗಳ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಪೋಸ್ ಕೊಟ್ಟಿರುವ ಫೋಟೊಗಳನ್ನು ಹಂಚಿಕೊಂಡಿದೆ. ಈ ಮೂಲಕ ಒಬ್ಬರಿಗೊಬ್ಬರು ಭೇಟಿಯಾಗಿದ್ದಾರೆ.

VISTARANEWS.COM


on

Rajinikanth, Kamal Haasan shoot in same studio after 21 years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ‘ಇಂಡಿಯನ್ 2’ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ. ಈ ಮಧ್ಯೆ ರಜನಿಕಾಂತ್ ಅವರು ‘ತಲೈವರ್ 170’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ, ಇಬ್ಬರೂ ಮೆಗಾಸ್ಟಾರ್‌ಗಳು 21 ವರ್ಷಗಳ ನಂತರ ಚೆನ್ನೈನ ಒಂದೇ ಸ್ಟುಡಿಯೋದಲ್ಲಿ ತಮ್ಮ ತಮ್ಮ ಪ್ರಾಜೆಕ್ಟ್‌ಗಳ ಚಿತ್ರೀಕರಣ ಮಾಡುತ್ತಿದ್ದಾರೆ. ಎರಡೂ ಚಿತ್ರಗಳ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಪೋಸ್ ಕೊಟ್ಟಿರುವ ಫೋಟೊಗಳನ್ನು ಹಂಚಿಕೊಂಡಿದೆ. ಈ ಮೂಲಕ ಒಬ್ಬರಿಗೊಬ್ಬರು ಭೇಟಿಯಾಗಿದ್ದಾರೆ.

ಲೈಕಾ ಪ್ರೊಡಕ್ಷನ್ಸ್‌ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಕಮಲ್ ಹಾಸನ್ ಮತ್ತು ರಜನಿಕಾಂತ್ ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಂಡ ಫೋಟೊಗಳನ್ನು ಹಂಚಿಕೊಂಡಿದೆ. “ಭಾರತೀಯ ಚಿತ್ರರಂಗದ 2 ಅಪ್ರತಿಮ ಲೆಜೆಂಡ್‌ಗಳು. ‘ಉಲಗನಾಯಗನ್’ ಮತ್ತು ‘ಸೂಪರ್‌ಸ್ಟಾರ್’ ರಜನಿಕಾಂತ್‌ 21 ವರ್ಷಗಳ ನಂತರ ಒಂದೇ ಸ್ಟುಡಿಯೋದಲ್ಲಿ ತಮ್ಮ ಚಿತ್ರಗಳಾದ ಇಂಡಿಯನ್-2 ಮತ್ತು ತಲೈವರ್ 170 ಚಿತ್ರೀಕರಣದ ಸಮಯದಲ್ಲಿ ಅದ್ಭುತ ಕ್ಷಣವನ್ನು ಹಂಚಿಕೊಂಡಿದ್ದಾರೆ! ನಾವು (ಲೈಕಾಪ್ರೊಡಕ್ಷನ್ಸ್) ಎರಡೂ ಚಿತ್ರಗಳನ್ನು ನಿರ್ಮಿಸುತ್ತಿರುವುದಕ್ಕೆ ತುಂಬಾ ಸಂತೋಷ ಮತ್ತು ಹೆಮ್ಮೆಯಿದೆ! ಎಂದು ಬರೆದುಕೊಂಡಿದೆ.

ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸಿಸುತ್ತಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು. ಕಮಲ್‌ ಅವರ ಬದ್ಧತೆ ಮತ್ತು ನಟನಾ ಮಯದಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ʻಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬುದಾಗಿಯೂ ವರದಿಯಾಗಿದೆ. ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ರಕುಲ್ ಪ್ರೀತ್ ಸಿಂಗ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ .’ ಇಂಡಿಯನ್ 2′, ಅದೇ ಹೆಸರಿನ 1996 ರ ಕ್ಲಾಸಿಕ್‌ನ ಮುಂದುವರಿದ ಭಾಗವಾಗಿದ್ದು, ಭ್ರಷ್ಟಾಚಾರದ ವಿರುದ್ಧ ಯುದ್ಧ ಮಾಡಲು ನಿರ್ಧರಿಸುವ ವಯಸ್ಸಾದ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಮೊದಲ ಭಾಗದಂತೆಯೇ ಚಿತ್ರವು ಬಲವಾದ ಸಂದೇಶವನ್ನು ಹೊಂದಿರುವ ಸಾಧ್ಯತೆಯಿದೆ. ‘ಇಂಡಿಯನ್ 2’ ಚಿತ್ರದಲ್ಲಿ ನಯನತಾರಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಪಾತ್ರವರ್ಗದಲ್ಲಿ ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್ ಮತ್ತು ಸಿದ್ಧಾರ್ಥ್ ಇದ್ದಾರೆ. ‘ಇಂಡಿಯನ್ 2’ ಚಿತ್ರವನ್ನು ಸುಬಾಸ್ಕರನ್ ಅಲ್ಲಿರಾಜ ಮತ್ತು ಉದಯನಿಧಿ ಸ್ಟಾಲಿನ್ ನಿರ್ಮಿಸಿದ್ದಾರೆ.

ಇದನ್ನೂ ಓದಿ: Kamal Haasan: ಕಮಲ್ ಹಾಸನ್ ಬರ್ತ್‌ಡೇ ಪಾರ್ಟಿಯಲ್ಲಿ ಮಿಂಚಿದ ಶಿವಣ್ಣ!

ತಲೈವರ್‌ 170

ಅಮಿತಾಭ್‌ ಬಚ್ಚನ್ ಸೇರಿದಂತೆ ಬೃಹತ್ ತಾರಾಗಣವನ್ನು ಒಳಗೊಂಡಿರುವ ಅವರ 170ನೇ (Thalaivar 170) ಪ್ರಾಜೆಕ್ಟ್ ಮೇಲೆ ಗಮನ ಹರಿಸಿದ್ದಾರೆ. ಈಗಾಗಲೇ 170ನೇ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.ಟಿ.ಜೆ ಜ್ಞಾನವೇಲ್ ‘ತಲೈವರ್ 170’ ನಿರ್ದೇಶನ ಮಾಡುತ್ತಿದ್ದಾರೆ. ರಿತಿಕಾ ಸಿಂಗ್, ಮಂಜು ವಾರಿಯರ್, ತುಷಾರ ವಿಜಯನ್, ರಾಣಾ ದಗ್ಗುಬಾಟಿ ಮತ್ತು ಫಹಾದ್ ಫಾಸಿಲ್ ಸಹ ಪೋಷಕ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ನಟ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ, ಚಿತ್ರ ಫೇಕ್‌ ಎನ್‌ಕೌಂಟರ್‌ನ ಬಗ್ಗೆ ಇರಲಿದೆ ಎಂದು ಹೇಳಲಾಗಿದೆ. ಪೆಟ್ಟಾ, ದರ್ಬಾರ್, ಜೈಲರ್ ನಂತರ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ರಜನಿಕಾಂತ್ ಅವರ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Actor Jaggesh: ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

VISTARANEWS.COM


on

Actor Jaggesh talk about body shame
Koo

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) ಅವರು ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ಈ ಬಗ್ಗೆ ಒಂದು ಇಂಟ್ರೆಸ್ಟಿಂಗ್ ಸಂಗತಿ ಬಿಚ್ಚಿಟ್ಟಿದ್ದಾರೆ.

ಜಗ್ಗೇಶ್‌ ಪೋಸ್ಟ್‌ನಲ್ಲಿ ʻʻನನ್ನನ್ನು ಕಪ್ಪು ಎಂದು ಅಣಕ ಮಾಡುತ್ತಿದ್ದರು ಬಾಲ್ಯದಲ್ಲಿ ಎಲ್ಲರು..!!
ಆಗ ನನಗೆ ಬಹಳ ಸಿಟ್ಟು ಬರುತ್ತಿತ್ತು. ನಾನು ಯವ್ವನದಲ್ಲಿ ಬೆಳ್ಳಗಾಗಲು ಅನೇಕ ಕೆಟ್ಟ ಪ್ರಯತ್ನ ಮಾಡಿದ್ದುಂಟು!
ನಟನಾದ ಮೇಲೆ ನನ್ನ ಮ್ಯಾಕ್ಸ್‌ ಫ್ಯಾಕ್ಟರ್‌ (max factor) ಮೇಕಪ್‌, ಅಂಬರೀಶ್‌ ಅವರ, ರಜನಿಯವರ, ವಿಜಯಕಾಂತ್, ಶಿವಣ್ಣ ಕೂಡ ಬಳಸುತ್ತಿದ್ದರು. ನಾನು ಬಳಸುತ್ತಿದ್ದ ಪ್ಯಾನ್‌ ಕೇಕ್‌ ಇಂದು ವಿಶ್ವದಲ್ಲಿ ಮರೆಯಾದ ಪ್ಯಾನ್‌ ಕೇಕ್‌ . ಆದರೆ ನನ್ನ ಅದೃಷ್ಟ ಅದು ನನ್ನ ಬಳಿ ಇನ್ನೂ 50 ಸಿನಿಮಾಗೆ ಸಾಕಾಗುತ್ತದೆ ಅಪ್ಟಿದೆ. ಅನೇಕರು ಕೇಳಿದರು ಈ ಪ್ಯಾನ್‌ ಕೇಕ್‌ ಕೊಡಿ ಎಂದು (pancake). ನಾನು ನೀಡುವುದಿಲ್ಲಾ ಎಂದೆ. ಕಾರಣ ಅದರ ಮೇಲಿನ ವಿಪರೀತ ಪ್ರೀತಿ ಹಾಗೂ ಭಕ್ತಿ. ಅದು ಹಚ್ಚಿದರೆ ನನ್ನ ಕಪ್ಪು ಅಂದವರು ಮೌನವಾಗುತ್ತಾರೆ. ಇದನ್ನು ಬಳಸುವಾಗ ಅಯ್ಯೋ ನಾನು ನಿಜವಾಗಲು ಈ ಬಣ್ಣ ಹೊಂದಿದ್ದರೆ ಚೆನ್ನಾಗಿರುತ್ತಿತ್ತು ಎನ್ನಿಸುತ್ತದೆ. ಆದರೆ ನನ್ನ ಮೊಮ್ಮಗ ಅರ್ಜುನ ಯಾವ pancake ಬಳಸದಂತೆ ಬಣ್ಣ ಹಚ್ಚಿಕೊಂಡೇ ಬಂದಿದ್ದಾನೆ. ಭೂಮಿಗೆ ಇಷ್ಟು ಹೇಳಲು ಕಾರಣ ಇಂದು ಇವನು 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಅಂದರೆ ಅವನ ಹುಟ್ಟುಹಬ್ಬ. ಹುಟ್ಟು ಹಬ್ಬದ ಶುಭಾಶಯಗಳು ಕಂದ. ದೇವರು ಒಳ್ಳೆಯದು ಮಾಡಲಿʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Jaggesh: ರಂಗ ನಾಯಕ, ʻಕಿತ್ತೋದ್‌ ನನ್ಮಗʼ ಮಾತಿಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ ಜಗ್ಗೇಶ್‌!

ಬಾಡಿ ಶೇಮಿಂಗ್ ಬಗ್ಗೆ ಜಗ್ಗೇಶ್‌ ಅವರು ಈ ಮೂಲಕ ಹೇಳಿಕೊಂಡಿದ್ದಾರೆ. ನಟ ಜಗ್ಗೇಶ್ ತಮ್ಮ ಕಪ್ಪು ಮೈಬಣ್ಣದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಕೆಲವೊಮ್ಮೆ ಅದನ್ನೇ ತಮಾಷೆಯಾಗಿ ಹೇಳಿಕೊಂಡು ನಕ್ಕಿದ್ದಾರೆ, ನಗಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರ ಮಗ ಅರ್ಜುನ್. ಮೊಮ್ಮಗ ಎಂದರೆ ಜಗ್ಗೇಶ್ ಅವರಿಗೆ ಬಹಳ ಪ್ರೀತಿ.

ʻಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್‌ ಅವರು ಮುದ್ದಿನ ಶ್ವಾನ ಅರ್ಜುನನನ್ನು ನೆನೆದು ಭಾವುಕರಾಗಿದ್ದರು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್ ಅವರು ʻಅರ್ಜುನʼ ಎಂಬ ಹೆಸರಿನ ಸಾಕು ನಾಯಿಯ ಜತೆ ಇರುವ ಫೋಟೊವನ್ನು ತೋರಿಸಿದಾಗ, ʻಇವನ ಹೆಸರನ್ನೇ ನಾನು ನನ್ನ ಮೊಮ್ಮಗನಿಗೆ ಇಟ್ಟಿದ್ದೇನೆ. ಕಾರಣವೇನೆಂದರೆ, ಲ್ಯಾಬ್ರೇಡರ್ ನಾಯಿ ಜಾಸ್ತಿ ದಿನ ಬದುಕುವುದಿಲ್ಲ. ಆದರೆ ಅವನು ಹದಿನಾಲ್ಕುವರೆ ವರ್ಷ ನಮ್ಮ ಜತೆ ಬದುಕಿದ್ದʼ ಎಂದಿದ್ದರು. ಸಿನಿಮಾಗಳ ವಿಚಾರಕ್ಕೆ ಬಂದರೆ ಕೊನೆಯದಾಗಿ ಜಗ್ಗೇಶ್ ನಟಿಸಿದ ‘ರಂಗನಾಯಕ’ ಸಿನಿಮಾ ತೆರೆಗೆ ಬಂದಿತ್ತು. ಆದರೆ ಚಿತ್ರ ಗೆಲ್ಲಲಿಲ್ಲ.

Continue Reading

ಟಾಲಿವುಡ್

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Nandamuri Balakrishna: ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ.

VISTARANEWS.COM


on

Nandamuri Balakrishna touch actress anjali back
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ. ವೇದಿಕೆಗೆ ಅಂಜಲಿ ಹೊರಟು ನಿಂತಾಗ ನಟ ಬಾಲಯ್ಯ ಆಕೆಯ ಹಿಂಬದಿಯನ್ನು ನಯವಾಗಿ ತಟ್ಟಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ಬಾಲಕೃಷ್ಣ ಕುಳಿತಿದ್ದಾಗ ಅವರ ಕಾಲ ಬಳಿ ನೀರಿನ ಬಾಟಲ್‌ನಲ್ಲಿ ಮದ್ಯದ ರೀತಿಯ ಪಾನೀಯ ಇರುವುದು ಕಂಡುಬಂದಿತ್ತು. ಇದನ್ನು ನೋಡಿ ಅವರು ಕುಡಿದು ವೇದಿಕೆಯಲ್ಲಿ ಆ ರೀತಿ ನಡೆದುಕೊಂಡಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಆದರೆ ಅದೆಲ್ಲಾ ಗ್ರಾಫಿಕ್ಸ್ ಎಂದು ಕಾರ್ಯಕ್ರಮದ ಆಯೋಜಕರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದರು “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

Dolly Dhananjay: ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

VISTARANEWS.COM


on

Dolly Dhananjay kotee distribution rights held by KRG Studios
Koo

ಬೆಂಗಳೂರು: ಡಾಲಿಯ ʻಕೋಟಿʼ (Dolly Dhananjay) ಸಿನಿಮಾ ಹವಾ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ʻಕೋಟಿʼ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆಯ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳೋದು ಸಲೀಸಿನ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ಸಂಗತಿ. ಯಾಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನಡಾಗಿಸಿಕೊಳ್ಳುತ್ತೆ. ಇದೀಗ ಕೋಟಿ ವಿತರಣಾ ಹಕ್ಕು ಕೆಆರ್ ಜಿ ಪಾಲಾಗಿರೋದೇ, ಈ ಚಿತ್ರದೆಡೆಗಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಕೋಟಿ ಸಿನಿಮಾವನ್ನು ಇಡೀ ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, “ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧವು ‘ಕೋಟಿ’ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ನಾನು ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

Continue Reading

ಸ್ಯಾಂಡಲ್ ವುಡ್

Sanjana Anand: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಸಂಜನಾ ಆನಂದ್!

Sanjana Anand: ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

VISTARANEWS.COM


on

Sanjana Anand Hot Photoshoot
Koo

ʻಕೆಮೆಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಂಜನಾ ಆನಂದ್ (Sanjana Anand) ಸಖತ್‌ ಹಾಟ್ ಆಗಿದ್ದಾರೆ. ಮಾಡರ್ನ್ ಡ್ರೆಸ್‌ನಲ್ಲಿ ಪೋಸ್ ನೀಡುತ್ತಿದ್ದಾರೆ.

ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. 

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

ದುನಿಯಾ ವಿಜಯ್ ನಟನೆಯ `ಸಲಗ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ನಟಿ ಸಂಜನಾ ಆನಂದ್‌ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading
Advertisement
Assault Case
ಬೆಳಗಾವಿ15 mins ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Actor Jaggesh talk about body shame
ಸ್ಯಾಂಡಲ್ ವುಡ್34 mins ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Modi Meditation
ದೇಶ35 mins ago

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Cristiano Ronaldo
ಕ್ರೀಡೆ36 mins ago

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Chikkamagaluru Tragedy
ಚಿಕ್ಕಮಗಳೂರು52 mins ago

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Valmiki Corporation Scam
ಕರ್ನಾಟಕ58 mins ago

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

rahul gandhi
ಪ್ರಮುಖ ಸುದ್ದಿ1 hour ago

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Salman Khan Cops arrest 4 with alleged links to Bishnoi gang
ಬಾಲಿವುಡ್1 hour ago

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Chikkalluru Siddappaji temple
ಧಾರ್ಮಿಕ1 hour ago

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌