DL RC card : ನಿಮ್ಮ ಡಿಎಲ್‌-ಆರ್‌ಸಿ ಕಾರ್ಡ್‌ ಮೇಲೆ ಕ್ಯೂಆರ್‌ ಕೋಡ್‌! ಏನಿದು ಹೊಸ ರೂಲ್ಸ್? - Vistara News

ಕರ್ನಾಟಕ

DL RC card : ನಿಮ್ಮ ಡಿಎಲ್‌-ಆರ್‌ಸಿ ಕಾರ್ಡ್‌ ಮೇಲೆ ಕ್ಯೂಆರ್‌ ಕೋಡ್‌! ಏನಿದು ಹೊಸ ರೂಲ್ಸ್?

DL RC card : ಚಾಲನಾ ಪರವಾನಗಿ ಮತ್ತು ವಾಹನಗಳ ನೋಂದಣಿ ಪ್ರಮಾಣ ಪತ್ರಗಳಿಗೆ ಹೊಸ ರೂಪವನ್ನು ಕೊಡಲು ಮುಂದಾಗಲಾಗಿದೆ. ಈ ಹಿನ್ನೆಲೆಯಲಿ ಎರಡೂ ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಚಿಪ್‌ ಹಾಗೂ ಕ್ಯೂರ್‌ ಕೋಡ್‌ ಕಾಣಿಸಿಕೊಳ್ಳಲಿದೆ.

VISTARANEWS.COM


on

Your DL and RC card will get a QR code
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಗಾಗಲೇ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ (HSRP Number Plate) ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೆ, ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಅದರ ಭಾಗವಾಗಿ ಚಾಲನಾ ಪರವಾನಗಿ (Driving License) ಮತ್ತು ವಾಹನಗಳ ನೋಂದಣಿ ಪ್ರಮಾಣಪತ್ರ (Vehicle Registration Certificate)ಗಳಿಗೆ (DL RC card) ಹೊಸ ರೂಪವನ್ನು ಕೊಡಲು ಮುಂದಾಗಲಾಗಿದೆ. ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಚಿಪ್‌ ಹಾಗೂ ಕ್ಯೂರ್‌ ಕೋಡ್‌ (Cure Code) ಕಾಣಿಸಿಕೊಳ್ಳಲಿದೆ.

ಈಗಾಗಲೇ ಡಿಎಲ್‌ ಹಾಗೂ ಆರ್‌ಸಿಯ ಸ್ಮಾರ್ಟ್‌ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಈ ಕಾರ್ಡ್‌ಗಳಿಗೆ ಚಿಪ್‌ ಅಳವಡಿಕೆ ಮಾಡಲಾಗಿದೆ. ಇನ್ನು ಇದರ ಜತೆಗೆ ಕ್ಯೂ ಆರ್‌ ಕೋಡ್‌ ಸಹ ಇರಲಿದೆ. ಈ ಯೋಜನೆಯನ್ನು ಮುಂದಿನ ತಿಂಗಳಿನಿಂದ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಹೀಗಾಗಿ ವಾಹನ ಹಾಗೂ ಮಾಲೀಕರ ವಿವರಗಳ ಲಭ್ಯತೆ ಮತ್ತಷ್ಟು ಸುಲಭವಾಗಲಿದೆ.

ಮುಂದಿನ ವರ್ಷ ಗುತ್ತಿಗೆ ಕಂಪನಿ ಅವಧಿ ಮುಕ್ತಾಯ

ಹಾಲಿ ಸ್ಮಾರ್ಟ್ ಕಾರ್ಡ್‌ ಪ್ರಸ್ತುತ ವಿತರಣೆ ಮಾಡುತ್ತಿರುವ ಕಂಪನಿಯ ಗುತ್ತಿಗೆ ಅವಧಿ 2024ರ ಫೆಬ್ರವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಖಾಸಗಿ ಕಂಪನಿಯೊಂದು 2009ರ ಗುತ್ತಿಗೆ ಪಡೆದುಕೊಂಡಿದೆ. ಈಗಾಗಲೇ ತಲಾ 2 ಕೋಟಿಗೂ ಹೆಚ್ಚು ಆರ್‌ಸಿ ಮತ್ತು ಡಿಎಲ್ ಸ್ಮಾರ್ಟ್‌ ಕಾರ್ಟ್‌ಗಳನ್ನು ವಿತರಣೆ ಮಾಡಲಾಗಿದೆ. ಹೀಗಾಗಿ ಮುಂದಿನ ವರ್ಷ ಫೆಬ್ರವರಿ ನಂತರ ನೀಡುವ ಹೊಸ ಕಾರ್ಡ್‌ಗಳಲ್ಲಿ ಕ್ಯೂ ಆರ್‌ ಕೋಡ್ ಅಳವಡಿಸಿ ವಿತರಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ.

ಏಕರೂಪ ಕಾರ್ಡ್‌ಗಳು!

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿಗದಿಪಡಿಸಿರುವ ನಿಯಮಗಳನ್ನು ಇದರಲ್ಲಿ ಅಳವಡಿಸಿಕೊಳ್ಳಲಾಗುವುದು. ಅಲ್ಲದೆ, ದೇಶಾದ್ಯಂತ ಈ ಕಾರ್ಡ್‌ಗಳು ಏಕರೂಪದಲ್ಲಿ ಇಡಲು ಚಿಂತನೆ ನಡೆಸಲಾಗಿದೆ.

ಕ್ಯೂ ಆರ್‌ ಕೋಡ್‌ ಹೊಂದಿರುವ ಕಾರ್ಡ್ ಹೇಗಿರಲಿದೆ?

ಡಿಎಲ್‌ನ ಮುಂಭಾಗದಲ್ಲಿ ಕಾರ್ಡ್ ಮಾಲೀಕರ ಹೆಸರು, ಭಾವಚಿತ್ರ, ವಿಳಾಸ, ಸಿಂಧುತ್ವ, ಹುಟ್ಟಿದ ದಿನಾಂಕ ಮತ್ತು ರಕ್ತದ ಗುಂಪು ಮತ್ತು ಹಿಂಭಾಗದಲ್ಲಿ ವಾಹನದ ಮಾದರಿ ಹಾಗೂ ಸಂಪರ್ಕ ಸಂಖ್ಯೆಯನ್ನು ನಮೂದು ಮಾಡಲಾಗಿರುತ್ತದೆ. ಈ ಎಲ್ಲ ವಿಷಯಗಳನ್ನು ಚಿಪ್‌ನಲ್ಲಿ ಅಳವಡಿಸಿದರೆ, ಕ್ಯೂ ಆರ್ ಕೋಡ್ ಜತೆಯಲ್ಲಿ ತುರ್ತು ಸಂಪರ್ಕ ಸಂಖ್ಯೆಯನ್ನು ಸಹ ಅಳವಡಿಸಲಾಗಿರುತ್ತದೆ.

ಆರ್‌ಸಿ ಕಾರ್ಡ್‌ ಹೀಗಿರಲಿದೆ

ಆರ್‌ಸಿ ಕಾರ್ಡ್‌ನ ಮುಂಭಾಗದಲ್ಲಿ ವಾಹನದ ನೋಂದಣಿ ಸಂಖ್ಯೆ, ನೋಂದಣಿ ದಿನಾಂಕ, ಕಾರ್ಡ್ ಅಂತ್ಯಗೊಳ್ಳುವ ದಿನಾಂಕ, ಚಾಸಿಸ್, ಎಂಜಿನ್ ಸಂಖ್ಯೆ, ವಾಹನ ಟ್ರ್ಯಾಕಿಂಗ್ ಸಿಸ್ಟಂ ಅನ್ನು ಅಳವಡಿಕೆ ಮಾಡಲಾಗಿರುತ್ತದೆ ಎಂದು ತಿಳಿದುಬಂದಿದೆ. ಹಿಂಭಾಗದಲ್ಲಿ ವಾಹನ ತಯಾರಕರ ಹೆಸರು, ವಾಹನದ ಮಾದರಿ, ಆಸನ ಸಾಮರ್ಥ್ಯದ ಮಾಹಿತಿಯನ್ನು ನಮೂದು ಮಾಡಲಾಗಿರುತ್ತದೆ. ಕ್ಯೂಆರ್ ಕೋಡ್ ಅಳವಡಿಕೆಯಿಂದ ಪೊಲೀಸರು ವಾಹನ ಮತ್ತು ಮಾಲೀಕರ ದೃಢೀಕರಣ ಮತ್ತಿತರ ಮಾಹಿತಿಗಳನ್ನು ಸಂಗ್ರಹಿಸಲು ಸಹಾಯಕವಾಗುತ್ತದೆ.

ಹೊಸ ಕಾರ್ಡ್‌ಗಳಿಗೆ ಟೆಂಡರ್‌ ಐದು ವರ್ಷಕ್ಕೆ?

ಈಗಾಗಲೇ ಡಿಎಲ್‌ ಹಾಗೂ ಆರ್‌ಸಿ ಕಾರ್ಡ್‌ಗಳನ್ನು ಪೂರೈಕೆ ಮಾಡುವ ಕಂಪನಿಯ ಗುತ್ತಿಗೆ ಅವಧಿ ಪೂರ್ಣಗೊಳ್ಳುವ ದಿನಾಂಕ ಹತ್ತಿರ ಬಂದಿದೆ. ಇದಕ್ಕೆ ಮೊದಲೇ ನೂತನ ಮಾದರಿಯ ಕಾರ್ಡ್‌ಗಳಿಗೆ ಗುತ್ತಿಗೆ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ ಎನ್ನಲಾಗಿದೆ. 5 ವರ್ಷಗಳಿಗೆ ಗುತ್ತಿಗೆ ನೀಡುವ ಸಂಬಂಧ ಟೆಂಡರ್ ಕರೆಯಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಿಲ್ವಾ? ಕೂಡಲೇ ಈ ಕೆಲಸ ಮಾಡಿ!

ಪೇಪರ್‌ಲೆಸ್‌ ಆದ ಆರ್‌ಸಿ-ಡಿಎಲ್‌!

2009ಕ್ಕಿಂತ ಮುಂಚೆ ಡಿಎಲ್‌ ಹಾಗೂ ಆರ್‌ಸಿ ಬುಕ್‌ ಕಾಗದದ ರೂಪದಲ್ಲಿತ್ತು. ಆದರೆ, 2009ರಿಂದ ಸ್ಮಾರ್ಟ್‌ ಕಾರ್ಡ್‌ ಅನ್ನು ವಿತರಣೆ ಮಾಡಲು ಸಾರಿಗೆ ಇಲಾಖೆ ಮುಂದಾಯಿತು. ಆದರೆ, ಈ ಸ್ಮಾಟ್ ಕಾರ್ಡ್‌ಗಳನ್ನು ಪರಿಶೀಲಿಸುವ ಉಪಕರಣಗಳು ಸಂಚಾರಿ ಪೊಲೀಸ್ ಅಥವಾ ಸಾರಿಗೆ ಇಲಾಖೆ ಬಳಿ ಇರಲಿಲ್ಲ. ಇದರಿಂದಾಗಿ ಸವಾರರು ಮುದ್ರಿತ ಪ್ರತಿಯನ್ನೂ ತಮ್ಮ ಬಳಿ ಇಟ್ಟುಕೊಳ್ಳಬೇಕಾಗಿತ್ತು. 2020 ಅಕ್ಟೋಬರ್ 1ರಿಂದ ದೇಶದ್ಯಂತ ಡಿಜಿಲಾಕರ್ ಅಥವಾ ಎಂ ಪರಿವರ್ತನ್ ರೂಪದಲ್ಲಿ ಮೊಬೈಲ್‌ಗಳಲ್ಲಿ ದಾಖಲೆಗಳನ್ನು ಅಪ್ಡೇಟ್‌ ಮಾಡಲು ಅನುಮತಿ ನೀಡಿದ ತರುವಾಯ ಈಗ ಸಮಸ್ಯೆಯಾಗುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

Renuka Swamy Murder: ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ.

VISTARANEWS.COM


on

pattanagere shed darshan renuka swamy murder
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ದರ್ಶನ್‌ (Actor Darshan) ನಡೆಸಿದ ಕರಾಳ ಕೃತ್ಯದ ನಂತರ ಕಳೆದ ಒಂದು ವರ್ಷದ ಸಿಸಿಟಿವಿ ದಾಖಲಾತಿಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಎಕ್ಸ್‌ಕ್ಲೂಸಿವ್‌ ಮಾಹಿತಿ ವಿಸ್ತಾರ ನ್ಯೂಸ್‌ಗೆ ದೊರೆತಿದೆ.

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಆ ಭಯಾನಕ ಶೆಡ್!‌

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

ಇದನ್ನೂ ಓದಿ: Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Continue Reading

ಬೆಳಗಾವಿ

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Murder Case : ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

murder Case in chikkodi
Koo

ಚಿಕ್ಕೋಡಿ: ಭಾನುವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ‌ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದವನು.

ಯಕ್ಸಂಬಾ ಪಟ್ಟಣದ ಬೀರೇಶ್ವರ ಕಾಲೋನಿಯಲ್ಲಿ ಈ ಕೃತ್ಯ ನಡೆದಿದೆ. ಮುಂಜಾನೆ ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Water Price Hike : ರಾಜಧಾನಿ ಬೆಂಗಳೂರು ಲೈಫ್‌ ಮತ್ತಷ್ಟು ಕಾಸ್ಟ್‌ಲಿಯಾಗಲಿದೆ. ಇತ್ತೀಚೆಗೆ ತೈಲ ಬೆಲೆ ಏರಿಕೆಯು ಜನರಿಗೆ ತಲೆ ಬಿಸಿ ಹೆಚ್ಚು ಮಾಡಿತ್ತು. ಇದೀಗ ಕುಡಿಯುವ ನೀರು ಕೂಡ ದುಬಾರಿಯಾಗಲಿದೆ. ಕಾವೇರಿ ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

VISTARANEWS.COM


on

By

water Price hike in bwssb
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರು ಮಂದಿಗೆ ಬ್ಯಾಕ್‌ ಟು ಬ್ಯಾಕ್‌ ಶಾಕ್‌ ನೀಡುತ್ತಿದೆ. ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯಿಂದ ಕಂಗಲಾಗಿದ್ದವರಿಗೆ ಇದೀಗ ಕುಡಿಯುವ ನೀರು ಬಿಸಿತುಪ್ಪವಾಗಲಿದೆ. ಯಾಕೆಂದರೆ ನೀರಿನ ದರ ಹೆಚ್ಚಳಕ್ಕೆ (Water Price Hike) ಜಲಮಂಡಳಿ (BWSSB) ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವುದೊಂದೆ ಬಾಕಿ ಇದೆ.

ಹಿಂದೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ನೀರಿನ ದರ ಏರಿಕೆ ಆಗಬಹುದು ಎಂದು ಸುಳಿವು ನೀಡಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದರ ಏರಿಕೆಗೆ ಬ್ರೇಕ್‌ ಹಾಕಿದ್ದರು. ಇದೀಗ ತೈಲ ಬೆಲೆ ಏರಿಕೆ ಬೆನ್ನಲ್ಲೆ ಜಲಮಂಡಳಿ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಇದರಿಂದಾಗಿ ಜನರಿಗೆ ಮತ್ತಷ್ಟು ಹೊರೆಯಾಗಲಿದೆ.

ಇದೀಗ ತೆರೆ ಮರೆಯಲ್ಲಿ ದರ ಪರಿಷ್ಕರಣಗೆ ಸಿದ್ಧತೆ ನಡೆದಿದ್ದು, ಗೃಹ ಬಳಕೆ, ವಾಣಿಜ್ಯ ಸೇರಿ ಎಲ್ಲ ರೀತಿಯ ನೀರು ಪೂರೈಕೆ ಮೇಲೆ ಶೇ. 40 ರಷ್ಟು ದರ ಏರಿಕೆಗೆ ಚರ್ಚೆ ನಡೆಯುತ್ತಿದೆ. ಇತ್ತ ನೀರಿನ ದರ ಏರಿಕೆ ಕುರಿತು ಜನ ಸಾಮಾನ್ಯರು ಗರಂ ಆಗಿದ್ದಾರೆ.

10 ವರ್ಷಗಳ ಬಳಿಕ ದರ ಏರಿಕೆ ಪ್ಲ್ಯಾನ್‌

ಬಿಡಬ್ಲ್ಯುಎಸ್​ಎಸ್​ಬಿ ಪರಿಸ್ಥಿತಿ ಚಿಂತಾಜನಕವಾಗಿದ್ದು, 2014ರಿಂದ ಇಲ್ಲಿಯವರೆಗೂ ನೀರಿನ ದರ ಪರಿಷ್ಕರಣೆಯಾಗಿಲ್ಲ. ಸಂಸ್ಥೆಯಲ್ಲಿ ವೇತನ ಹಾಗೂ ವಿದ್ಯುತ್ ಬಿಲ್ ಪಾವತಿಗೆ ಹಣವಿಲ್ಲದಂತಾಗಿದೆ. ಇದರಿಂದ ಇಲ್ಲಿನ ಸಿಬ್ಬಂದಿ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರಿಗೆ ಪರಿಹಾರ ಕಂಡುಕೊಡಬೇಕಾದರೆ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ.

ಜಲಮಂಡಳಿಯ ಆದಾಯ ತೀರಾ ಕಡಿಮೆ ಇದೆ. ಈ ಸಂಸ್ಥೆಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಆದರೂ ಬರುವ 104 ಕೋಟಿ ರೂಪಾಯಿಯಲ್ಲಿ 90 ರಿಂದ 95 ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸಲು ಖರ್ಚಾಗುತ್ತಿದೆ ಎಂದು ಹಿಂದೊಮ್ಮೆ ಡಿ.ಕೆ ಶಿವಕುಮಾರ್‌ ತಿಳಿಸಿದ್ದರು. ಇಲ್ಲಿ ಸಂಪನ್ಮೂಲ ಕ್ರೋಡೀಕರಣ ಆಗಬೇಕಿದೆ. ಇಲ್ಲದಿದ್ದರೆ ಸಂಸ್ಥೆ ಉಳಿಯಲು ಸಾಧ್ಯವಿಲ್ಲ ಎಂದಿದ್ದರು. ಮೂಲಗಳ ಪ್ರಕಾರ ನೀರಿನ ದರ ಏರಿಕೆಯಾಗುವುದು ಖಚಿತ ಎನ್ನಲಾಗುತ್ತಿದೆ.

ಇದನ್ನೂ ಓದಿ: Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ (Petrol Diesel Price) ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು.‌ 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ಎಂದರು.

ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.

ಕಳ್ಳ ದಾರಿ ಮೂಲಕ ಸೇಡು

ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ದೂರಿದರು.

ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್ ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.

ಆಸ್ತಿ ಮಾರಾಟ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದ್ದಾರೆ. ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ಎಂದರು.

ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ‌. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Petrol Diesel Price: ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ.

VISTARANEWS.COM


on

petrol diesel price hike
Koo

ಬೆಂಗಳೂರು: ಇದ್ದಕ್ಕಿದ್ದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest) ಮುಂದಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಹಾಗೂ ರಾಜ್ಯದ ನಾನಾ ಕಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯಲಿವೆ.

ಲೋಕಸಭಾ ಚುನಾವಣೆ (Lok Sabha Election results) ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಹಾಗೂ ಜನಸಾಮಾನ್ಯರು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿದ್ದಾರೆ. ದರ ಏರಿಕೆ ವಿರೋಧಿಸಿ ಇಂದು ಪ್ರತಿಭಟನೆಗೆ ಕರೆ ನೀಡಿರುವ ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್. ಅಶೋಕ್ (R Ashok) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಆರಂಭವಾಗಲಿದೆ. ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಪ್ರತಿಪಕ್ಷ ನಿರ್ಧರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ಪರಿಣಾಮ ಎತ್ತಿನ ಗಾಡಿಯೇ ಗತಿಯಾಗಿದೆ ಎಂದು ಸೂಚಿಸಲು ಎತ್ತಿನಗಾಡಿ, ಸೈಕಲ್ ಮೂಲಕ ಪ್ರಯಾಣ ಮಾಡಿ ಸರ್ಕಾರದ ನೀತಿಯನ್ನು ಖಂಡಿಸಲಿದ್ದಾರೆ. ಬಳಿಕ ಸಿಎಂ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.

ಹೆಚ್ಚಿಸಿರುವ ಅಷ್ಟೂ ದರವನ್ನು ಇಳಿಸುವಂತೆ ಬಿಜೆಪಿ ಆಗ್ರಹಿಸಿದ್ದು, ದರ ಇಳಿಸುವವರೆಗೂ ಹಂತಹಂತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಬೆಂಬಲವನ್ನೂ ಕೋರಿದೆ.

ರಾಜ್ಯದ ಜನರಿಗೆ ಬರೆ: ವಿಜಯೇಂದ್ರ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಗ್ಯಾರಂಟಿ ಬಗ್ಗೆ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನೆ ಅಂತ ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಸ್ಟ್ಯಾಂಪ್ ಡ್ಯೂಟಿ ಜಾಸ್ತಿ ಮಾಡಿದೆ. ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೂರಿದ್ದಾರೆ.

“ಬರಗಾಲದಲ್ಲಿ ರಾಜ್ಯ ಸರ್ಕಾರದ ಈ ಕೆಟ್ಟ ನಡವಳಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ಬರುವ ಶುಕ್ರವಾರ ಕೂಡ ಮತ್ತೊಂದು ಹೋರಾಟ ರೂಪಿಸುತ್ತೇವೆ. ನಾವು ಸುಮ್ಮನೆ ಕೂರುವುದಿಲ್ಲ. ನೆರೆಯ ರಾಜ್ಯದಲ್ಲಿ ನಮಗಿಂತ ದರ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಆದೇಶವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ರಾಜ್ಯದ ಮುಗ್ಧ ಮತದಾರರು ಚುನಾವಣೆ ಸಂಧರ್ಭದಲ್ಲಿ ಮತ ಕೊಟ್ಟು ಅಧಿಕಾರಕ್ಕೆ ತಂದಿದ್ದಾರೆ. ಇಂದು ಅದೇ ಜನ ಸಿಎಂಗೆ ಶಾಪ‌ ಹಾಕ್ತಿದ್ದಾರೆ. ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಹಾರಾಡುತ್ತಿದ್ದರು. ಇಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹಾಳಾಗಿದೆ. ರೈತರ ಮೇಲೆ ಹೊರೆಯಾಗುತ್ತಿದೆ. ತೈಲ ದರ ಏರಿಕೆಯಿಂದ ಟ್ಯಾಕ್ಸಿ, ಬಸ್ ಆಪರೇಟರ್, ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಸಿಎಂ‌ ಕೂಡಲೇ ದರ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಪತ್ರಿಕಾಗೋಷ್ಠಿ

ಇಂದು ಮಧ್ಯಾಹ್ನ 12.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರಿಕಾಗೋಷ್ಠಿ ಕರೆದಿದ್ದಾರೆ. ಪೆಟ್ರೋಲ್- ಡಿಸೇಲ್ ದರ ಹೆಚ್ಚಳ ಕುರಿತು ಸಿಎಂ ಮಾತನಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ದರ ಹೆಚ್ಚಳ ಕುರಿತು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ವಿವರಣೆ ನೀಡಲಿದ್ದಾರೆ. ಪ್ರತಿಪಕ್ಷ ಬಿಜೆಪಿ ದರ ಹೆಚ್ಚಳದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ದರ ಹೆಚ್ಚಳದ ಅನಿವಾರ್ಯತೆ ಹಾಗೂ ಅಂಕಿ ಅಂಶಗಳನ್ನು ಸಿಎಂ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Continue Reading
Advertisement
Actor Darshan Please leave Pavitra Darshan request to police
ಸಿನಿಮಾ11 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest12 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ18 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ19 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest29 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್33 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ40 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ51 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ1 hour ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್1 hour ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌