ಅಮೆರಿಕದ 4 ವರ್ಷದ ಬಾಲಕಿ ಸೇರಿ ಮತ್ತೆ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ - Vistara News

ಪ್ರಮುಖ ಸುದ್ದಿ

ಅಮೆರಿಕದ 4 ವರ್ಷದ ಬಾಲಕಿ ಸೇರಿ ಮತ್ತೆ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

Israel Palestine War:‌ ಮೂರನೇ ಹಂತದಲ್ಲಿ ಇಸ್ರೇಲ್‌ನ 13 ನಾಗರಿಕರು ಸೇರಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್‌ ಉಗ್ರರು ಬಿಡುಗಡೆ ಮಾಡಿದ್ದಾರೆ. ಇಸ್ರೇಲ್‌ ಹಾಗೂ ಹಮಾಸ್‌ ಮಧ್ಯೆ ತಾತ್ಕಾಲಿಕ ಒಪ್ಪಂದ ಏರ್ಪಟ್ಟಿರುವ ಕಾರಣ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

VISTARANEWS.COM


on

Israel Hostages
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವೆ ಘೋಷಣೆಯಾದ ಕದನವಿರಾಮದ (Ceasefire) ನಿಯಮಗಳಿಗೆ ತಕ್ಕಂತೆ ಹಮಾಸ್‌ ಉಗ್ರರು (Hamas Terrorists) ಮೂರನೇ ಹಂತದಲ್ಲಿ ಇಸ್ರೇಲ್‌ನ 13 ನಾಗರಿಕರು ಸೇರಿ 17 ಒತ್ತೆಯಾಳುಗಳನ್ನು (Israel Hostages) ಬಿಡುಗಡೆ ಮಾಡಿದ್ದಾರೆ. ಇಸ್ರೇಲ್‌ನ 13 ನಾಗರಿಕರು, ಮೂವರು ಥಾಯ್ಲೆಂಡ್‌ ನಾಗರಿಕರು ಹಾಗೂ ಅಮೆರಿಕದ ನಾಲ್ಕು ವರ್ಷದ ಬಾಲಕಿ ಸೇರಿ 17 ನಾಗರಿಕರನ್ನು ಹಮಾಸ್‌ ಬಿಡುಗಡೆ ಮಾಡಿದೆ. ಅತ್ತ, ಇಸ್ರೇಲ್‌ ಕೂಡ ಪ್ಯಾಲೆಸ್ತೀನ್‌ನ 39 ಕೈದಿಗಳನ್ನು ಬಿಡುಗಡೆ ಮಾಡಿದೆ.

ಇದರೊಂದಿಗೆ ಹಮಾಸ್‌ ಉಗ್ರರು ಮೂರೂ ಹಂತಗಳಲ್ಲಿ ಒಟ್ಟು 69 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದಂತಾಗಿದೆ. ಸೋಮವಾರ (ನವೆಂಬರ್‌ 27) ನಾಲ್ಕನೇ ಹಂತದಲ್ಲಿ ಇನ್ನಷ್ಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ. ನಾಲ್ಕು ದಿನಗಳವರೆಗೆ ಇಸ್ರೇಲ್‌ ಹಾಗೂ ಹಮಾಸ್‌ ಮಧ್ಯೆ ಕದನವಿರಾಮ ಘೋಷಣೆಯಾಗಿದೆ. ಸೋಮವಾರ ಕೊನೆಯ ದಿನವಾದ ಕಾರಣ ಇನ್ನಷ್ಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮತ್ತೊಂದೆಡೆ, ಹಮಾಸ್‌ ಉಗ್ರರು ಅಮೆರಿಕದ ನಾಲ್ಕು ವರ್ಷದ ಬಾಲಕಿಯನ್ನು ಬಿಡುಗಡೆ ಮಾಡಿರುವುದನ್ನು ಅಮೆರಿಕ ದೃಢಪಡಿಸಿದೆ.

ಹಮಾಸ್ ಮತ್ತು ಇಸ್ರೇಲ್‌ ನಡುವಿನ ತಾತ್ಕಾಲಿಕ ಕದನ ವಿರಾಮದ ಒಪ್ಪಂದದ ಪ್ರಕಾರ, ಹಮಾಸ್ ಉಗ್ರರು ನವೆಂಬರ್‌ 24ರಂದು ಮೊದಲ ಹಂತದಲ್ಲಿ 13 ಇಸ್ರೇಲಿ ಪ್ರಜೆಗಳು ಸೇರಿ 25 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದರು. ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಉಗ್ರರು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ್ದರು. ಬಿಡುಗಡೆಯಾದ ಒತ್ತೆಯಾಳುಗಳ ಪೈಕಿ 12 ಥಾಯ್ ಪ್ರಜೆಗಳಿದ್ದರು. ಎರಡನೇ ಹಂತದಲ್ಲಿ ನವೆಂಬರ್‌ 25ರಂದು 17 ಒತ್ತೆಯಾಳುಗಳನ್ನು ಹಮಾಸ್‌ ಉಗ್ರರು ಬಿಡುಗಡೆಗೊಳಿಸಿದ್ದರು.

ಹಮಾಸ್‌ ಉಗ್ರರ ದಾಳಿಗೆ ಪ್ರತಿದಾಳಿ ಆರಂಭಿಸಿದ ಇಸ್ರೇಲ್‌ ಸೇನೆಯು ಗಾಜಾ ನಗರದ ಮೇಲೆ ಭಾಗಶಃ ಹಿಡಿತ ಸಾಧಿಸಿದ್ದರು. ನಿರಂತರ ದಾಳಿ ಮೂಲಕ ಸಾವಿರಾರು ಜನರನ್ನು ಹತ್ಯೆಗೈದಿದ್ದರು. ಹಾಗಾಗಿ, ಕತಾರ್‌ ಮಧ್ಯಪ್ರವೇಶಿಸಿ ಕದನವಿರಾಮಕ್ಕೆ ಕರೆ ನೀಡಿದೆ. ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಕೊನೆಗೆ ಒಪ್ಪಿದೆ. ಅದರಂತೆ, ಈಜಿಪ್ತ್‌ ಮೂಲಕ 17 ಒತ್ತೆಯಾಳುಗಳನ್ನು ಇಸ್ರೇಲ್‌ಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ ಡೆಡ್‌ಲೈನ್‌ಗೆ ಮಣಿದ ಹಮಾಸ್‌; 17 ಒತ್ತೆಯಾಳುಗಳ ಬಿಡುಗಡೆ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಲ್ಲೆ ನೆಲಸಲಿದ್ದು, ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 13:19 ವಾರ: ಶುಕ್ರವಾರ
ನಕ್ಷತ್ರ: ಪುಷ್ಯ 25:19 ಯೋಗ: ಶಿವ 23:32
ಕರಣ: ವಿಷ್ಟಿ (ಭದ್ರ) 13:19 ಅಮೃತಕಾಲ: ಸಂಜೆ 06:28 ರಿಂದ 08:11
ದಿನದ ವಿಶೇಷ: ವಿದ್ಯಾಪಯೋನಿಧಿ ತೀರ್ಥರ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:12

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ:
ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣದಿಂದ ಆಯಾಸ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಮೇತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ, ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

Bengaluru Murder : ವೈಯಾಲಿಕಾವಲ್ ಮಹಿಳೆಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನ (Bengaluru Murder) ವೈಯಾಲಿಕಾವಲ್ ಮಹಾಲಕ್ಷ್ಮೀ ಮರ್ಡರ್ ಕೇಸ್‌ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮಹಿಳೆಯನ್ನು ಕೊಲೆ ಮಾಡಿದವನು ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಪೊಲೀಸರ ಮುಂದೆ ಪ್ರಶ್ನೆಗಳ ಸರಮಾಲೆಯೇ ಇದೆ. ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನನ್ನು ಟ್ರೇಸ್‌ ಮಾಡಿ ಇನ್ನೇನು ಹಿಡಿಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ಎಂಬಾತ ಒಡಿಶಾದಲ್ಲಿ ನಿನ್ನೆ (ಸೆ.25) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾಲಕ್ಷ್ಮೀ ಮರ್ಡರ್ ಕೇಸ್ ಪೊಲೀಸರ ಮುಂದೆ ಹಲವು ಸವಾಲುಗಳನ್ನಿಟ್ಟಿದೆ‌. ಆರೋಪಿ ಅರೆಸ್ಟ್ ಆದಮೇಲೆ ಪ್ರಕರಣಕ್ಕೆ ಒಂದು ಫುಲ್ ಸ್ಟಾಪ್ ಇಡಬಹುದಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

ಮದುವೆ ಆಗುವಂತೆ ಒತ್ತಾಯಿಸಿದ್ದಳು ಮಹಾಲಕ್ಷ್ಮಿ

ಇನ್ನು ತನಿಖೆ ವೇಳೆ ಒಂದಷ್ಟು ಸ್ಫೋಟಕ ವಿಚಾರಗಳು ಹೊರ ಬಿದ್ದಿದ್ದು, ಮದುವೆಯಾಗುವಂತೆ ಮುಕ್ತಿ ರಂಜನ್‌ನ ಮಹಾಲಕ್ಷ್ಮಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿ ಕೊಲೆ ನಡೆದಿರಬಹುದು ಎಂಬ ಅನುಮಾನ ಮೂಡಿದೆ. ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್‌ ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಹೀಗಾಗಿ ಇಬ್ಬರ ಮಧ್ಯೆ ಸ್ನೇಹ, ಸಲುಗೆ ಬೆಳದಿತ್ತು.

ಮುಕ್ತಿರಂಜನ್‌ನನ್ನು ತುಂಬಾ ಹಚ್ಡಿಕೊಂಡಿದ್ದ ಮಹಾಲಕ್ಷ್ಮಿ ಆತನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಕೆಲಸ ಮಾಡುತ್ತಿದ್ದ ಸ್ಟೋರ್‌ನಲ್ಲಿ ಬೇರೆ ಹುಡುಗೀಯರ ಜತೆ ಮುಕ್ತಿರಂಜನ್‌ ಮಾತನಾಡಿದರೆ ಮಹಾಲಕ್ಷ್ಮಿ ಸ್ವಲ್ಪವೂ ಸಹಿಸುತ್ತಿರಲಿಲ್ಲ. ಕೂಡಲೇ ಆ ಯುವತಿಯರಿಗೆ ವಾರ್ನ್ ಮಾಡುತ್ತಿದ್ದಳು. ಇನ್ನು ಮುಕ್ತಿರಂಜನ್ ಸಹ ಸ್ವತಃ ಹಠಮಾರಿ ಸ್ವಭಾವದವನಾಗಿದ್ದ ಎಂಬುದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಸೆಪ್ಟೆಂಬರ್ 1ರಂದು ಇಬ್ಬರೂ ಕೆಲಸಕ್ಕೆ ಹಾಜರಾಗಿದ್ದರು. ಎರಡನೇ ತಾರೀಖು ಇಬ್ಬರೂ ರಜೆ ಹಾಕಿ ವೈಯಾಲಿಕಾವಲ್ ಮನೆಗೆ ಹೋಗಿದ್ದರಂತೆ. ಈ ವೇಳೆ ಜಗಳ ಆಗಿ, ಕೊಲೆ ಮಾಡಿ ಮುಕ್ತಿರಂಜನ್‌ ಎಸ್ಕೇಪ್ ಆಗಿರಬಹುದು ಎನ್ನಲಾಗಿದೆ.

ಮನೆಯಲ್ಲಿ ಎಲ್ಲೂ ರಕ್ತ ಹರಿದಿಲ್ಲ; ಮೂವರ ಫಿಂಗರ್‌ ಪ್ರಿಂಟ್‌ ಪತ್ತೆ

ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿರುವ ಬಗ್ಗೆಯಂತೂ ಪೊಲೀಸರಿಗೆ ಅನುಮಾನಗಳ ಮೇಲೆ ಅನುಮಾನ ಹುಟ್ಟಿಸಿದೆ. ದೇಹ ಕತ್ತರಿಸುವ ರೀತಿ, ಮನೆಯಲ್ಲಿ ರಕ್ತ ಎಲ್ಲಿಯೂ ಸಹ ಸಿಡಿಯದಂತೆ ಮೃತದೇಹ ಕತ್ತರಿಸಲಾಗಿದೆ. ಹತ್ಯೆಗೈದು ಮೃತದೇಹದ ರಕ್ತ ಹರಿದ ನಂತರ ಕತ್ತರಿಸಲಾಗಿತ್ತಾ ಅನ್ನೋ ಪ್ರಶ್ನೆ ಮುಂದಿವೆ. ಅಲ್ಲದೇ ಮನೆಯಲ್ಲಿ ಇಬ್ಬರಿಂದ ಮೂರು ಜನರ ಫಿಂಗರ್ ಪ್ರಿಂಟ್‌ಗಳು ಪತ್ತೆಯಾಗಿದ್ದು, ಆರೋಪಿಯ ಕೃತ್ಯಕ್ಕೆ ಬೇರೆ ಯಾರಾದರೂ ಸಾಥ್ ನೀಡಿದ್ದರಾ? ಹತ್ಯೆಗೈದು ಇಷ್ಟು ದಿನ ಆರೋಪಿ ತಲೆಮರೆಸಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ತಲೆ ಕೆಡಿಸಿದೆ.

ಸದ್ಯ ಒಡಿಶಾದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು, ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡಿತಿದೆ. ಈಗಾಗಲೇ ರಾಜ್ಯ ಪೊಲೀಸರ ಎರಡು ತಂಡಗಳು ಒಡಿಶಾದಲ್ಲಿರುವುದರಿಂದ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಮಹಿಳೆ ಮೊಬೈಲ್ ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

assault case : ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಿಕೆ ಗಿಡಗಳು ಬಲಿಯಾಗಿವೆ. ಪತ್ನಿ ಮನೆಗೆ ಬಾರದ್ದಕ್ಕೆ ಕೋಪಗೊಂಡ ಅಳಿಯ ಮಾವನ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾನೆ.

VISTARANEWS.COM


on

By

assault case
Koo

ಹಾವೇರಿ : ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಅಡಕೆ ತೋಟ ನಾಶಪಡಿಸಿದ್ದಾನೆ. ಮಾವ ಬೆಳೆಸಿದ್ದ 106 ಅಡಿಕೆ ಗಿಡಗಳನ್ನು ಕಡಿದು ಸಿಟ್ಟು (Assault Case) ಹೊರಹಾಕಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಸಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

assault case
assault case

ದೇವೆಂದ್ರಪ್ಪ ಫಕ್ಕಿರಪ್ಪ ಗಾಣಿಗೇರಗೆ ಸೇರಿದ ಅಡಿಕೆ ತೋಟವನ್ನು ಅಳಿಯ ಬಸವರಾಜ್ ಎಂಬಾತ ಅಡಿಕೆ ಬೆಳೆ ನಾಶ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಬಸವರಾಜ್ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ಆದರೆ ಪತ್ನಿ ಜತೆಗೆ ನಿತ್ಯವು ಜಗಳವಾಡುತ್ತಿದ್ದ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ತವರು ಮನೆ ಸೇರಿದ್ದಳು. ಮೂರು ತಿಂಗಳಿನಿಂದ ಪತ್ನಿ ತವರು ಮನೆಯಲ್ಲಿ ಇದ್ದಿದ್ದಕ್ಕೆ ಸಿಟ್ಟಾದ ಬಸವರಾಜ್‌, ಅಡಿಕೆ ತೋಟವನ್ನು ನಾಶ ಮಾಡಿದ್ದಾನೆ. ಪತಿ- ಪತ್ನಿ ನಡುವಿನ ಜಗಳಕ್ಕೆ ಅಡಕೆ ಗಿಡಗಳು ಬಲಿಯಾಗಿವೆ.

ಇದನ್ನೂ ಓದಿ: Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ

ಬೆಳಗಾವಿ: ಕಂಠ ಪೂರ್ತಿ ಕುಡಿದು ಪೀಡಿಸುತ್ತಿದ್ದ ಅಳಿಯನಿಗೆ ಅತ್ತೆಯಿಂದ ಗೂಸಾ ಬಿದ್ದಿದೆ. ನಡುಬೀದಿಯಲ್ಲೇ ಕುಡುಕ ಅಳಿಯನ ಹಿಡಿದು ಅತ್ತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಮನೆಗೆ ಕರೆದುಕೊಂಡು ಹೋಗಲು ಪತ್ನಿ, ಅತ್ತೆ ಹರಸಾಹಸ ಪಡುತ್ತಿದ್ದರು. ಮನೆಗೆ ಬರಲು ಹಿಂದೇಟ್ಟು ಹಾಕುತ್ತಿದ್ದ ಕುಡುಕ ಅಳಿಯನಿಗೆ ಕಪಾಳಮೋಕ್ಷ ಮಾಡಿ ಹಿಗ್ಗಾಮುಗ್ಗಾ ಥಳಿಸಿದರು. ಕುಡುಕನ ಅವಾಂತರಕ್ಕೆ ಸ್ಥಳೀಯರು ಹೈರಾಣಾದರು. ಜತೆಗೆ ಅಲ್ಲಿದ್ದವರೇ ವಿಡಿಯೊ ಮಾಡಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka weather Forecast
ಮಳೆ5 ಗಂಟೆಗಳು ago

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Dina Bhavishya
ಭವಿಷ್ಯ5 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು17 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ18 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ19 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು21 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ22 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ23 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ23 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌