DK Shivakumar : ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ: ಯತ್ನಾಳ್‌ಗೆ ಸಿದ್ದರಾಮಯ್ಯ ತಿರುಗೇಟು - Vistara News

ಕರ್ನಾಟಕ

DK Shivakumar : ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ: ಯತ್ನಾಳ್‌ಗೆ ಸಿದ್ದರಾಮಯ್ಯ ತಿರುಗೇಟು

DK Shivakumar : ಈ ಹಿಂದಿನ ರಾಜ್ಯ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ಕಾನೂನು ಬಾಹಿರವಾಗಿ ಅನುಮತಿ ನೀಡಿತ್ತು. ಈ ಆದೇಶವನ್ನು ನಮ್ಮ ಸರ್ಕಾರ ವಾಪಸ್‌ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

CM Siddaramaiah and Basanagowda patil yatnal infront of Karnataka High court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ, ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ (CBI probe) ವಹಿಸಿದ್ದ ಪ್ರಕರಣದ ಅನುಮತಿಯನ್ನು ವಾಪಸ್ ಪಡೆದಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಹೈಕೋರ್ಟ್‌ನಲ್ಲಿ (High Court) ದಾವೆ ಹೂಡಿರುವ ಬಗ್ಗೆ ಈ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದಿನ ರಾಜ್ಯ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ಕಾನೂನು ಬಾಹಿರವಾಗಿ ಅನುಮತಿ ನೀಡಿತ್ತು. ಈ ಆದೇಶವನ್ನು ನಮ್ಮ ಸರ್ಕಾರ ವಾಪಸ್‌ ಪಡೆದಿದೆ ಎಂದು ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ: Congress Karnataka : ಸಿಎಂ, ಡಿಸಿಎಂ ನಡೆಗೆ ಹಿರಿಯ ಸಚಿವರ ಮುನಿಸು; ಅಭಿಪ್ರಾಯ ಕೇಳುತ್ತಿಲ್ಲವೆಂದ ಪರಮೇಶ್ವರ್!

ಹೈಕೋರ್ಟ್‌ ಮೆಟ್ಟಿಲೇರಿರುವ ಯತ್ನಾಳ್‌

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ವಿರುದ್ಧ ಸಿಬಿಐ ದಾಖಲಿಸಿಕೊಂಡಿರುವ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು (CBI Case against DK Shivakumar) ಹಿಂದಕ್ಕೆ ಪಡೆಯುವ ರಾಜ್ಯ ಸಚಿವ ಸಂಪುಟದ (State Cabinet meeting) ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagowda pateel Yatnal) ಅವರು ಹೈಕೋರ್ಟ್‌ (Karnataka High court) ಮೆಟ್ಟಿಲೇರಿದ್ದಾರೆ. ಸರ್ಕಾರದ ಈ ನಡೆ ಕಾನೂನುಬಾಹಿರವಾಗಿದ್ದು, ಇದನ್ನು ತಡೆಯಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದಾವೆಯಲ್ಲಿ ಮನವಿ ಮಾಡಲಾಗಿದೆ.

ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗುವುದಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಂದೆಯೇ ಪ್ರಕಟಿಸಿದ್ದು, ಅದರಂತೆ ನಡೆದುಕೊಂಡಿದ್ದಾರೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ತನಿಖೆಯನ್ನೇ ನಿಷ್ಫಲಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಯತ್ನಾಳ್‌ ತಮ್ಮ ದಾವೆಯಲ್ಲಿ ಹೇಳಿದ್ದಾರೆ.

ಮುಕ್ತಾಯದ ಹಂತಕ್ಕೆ ಬಂದಿರುವ ಪ್ರಕರಣವನ್ನು ಕೆಲವೊಂದು ಸಂಬಂಧವಿಲ್ಲದ ತಾಂತ್ರಿಕ ತೊಡಕುಗಳನ್ನು ಮುಂದಿಟ್ಟು ಮೊಟಕುಗೊಳಿಸುವ ಉದ್ದೇಶವನ್ನು ಸರ್ಕಾರದ ನಿರ್ಧಾರ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನ ನಡೆದಿದೆ ಎಂದಿರುವ ಯತ್ನಾಳ್‌, ಈ ವಿಚಾರಕ್ಕೆ ಸೀಮಿತವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಬೇಕು, ಪ್ರಕರಣ ವಾಪಸ್‌ ಪಡೆಯಲು ಅವಕಾಶ ನೀಡಬಾರದು ಎಂದು ಕೋರಿದ್ದಾರೆ. ಈಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಯಾರು ಬೇಕಾದರೂ ಕೋರ್ಟ್‌ ಮೊರೆ ಹೋಗಬಹುದು ಎಂದು ಹೇಳಿದ್ದಾರೆ.

ನಿಗಮ – ಮಂಡಳಿ ಅಧ್ಯಕ್ಷರ ಆಯ್ಕೆ ಅಂತಿಮಗೊಂಡಿಲ್ಲ

ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನದ ನೇಮಕಾತಿ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷರ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆಯಲಾಗಿಲ್ಲ. ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಗುಣಮಟ್ಟದ ಹಾಲು ಪೂರೈಕೆಯಾಗುತ್ತಿದೆ

ಶಾಲೆಗಳಿಗೆ ಗುಣಮಟ್ಟದ ಹಾಲಿನ ಪೂರೈಕೆಯಾಗುತ್ತಿಲ್ಲ ಎಂದು ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ಕೆಎಂಎಫ್‌ನ ನಂದಿನಿ ಗುಣಮಟ್ಟದ ಹಾಲನ್ನು ಪೂರೈಸುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar : ನಮ್ಮ ಜಾಹೀರಾತಲ್ಲಿ ಮತಯಾಚನೆ ಮಾಡಿಲ್ಲ; ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ: ಡಿಕೆಶಿ

ತೆಲಂಗಾಣದಲ್ಲಿ ಕರ್ನಾಟಕದ ಸಾಧನೆ ಬಗ್ಗೆ ಮಾಡಿದ ಪ್ರಚಾರದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಪ್ರಚಾರಕ್ಕೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಚಾರವನ್ನು ಕೈಬಿಡಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Karnataka Rain : ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದ್ದು, ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಯುವಕನೊರ್ವ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿ.

ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಾಯಾಳುಗಳು. ಈ ಮೂವರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿ ಬೈಕ್‌ ಮೇಲೆ ಬಿದ್ದಿದೆ.

ಮರ ಬಿದ್ದ ರಭಸಕ್ಕೆ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದೊಂದಿಗೆ ರಸ್ತೆ ಮೇಲೆ ಬಿದ್ದಿದ್ದ ಮರ ತೆರವು ಮಾಡಿದರು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರ

ಭಾನುವಾರ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಅಡ್ಡಿಯಾಗಿತ್ತು. ಶಿವಾಜಿನಗರ, ಮೆಜೆಸ್ಟಿಕ್‌, ರಾಜಾಜಿನಗರ, ವಿಧಾನಸೌಧ, ಕೆಆರ್‌ ಸರ್ಕಲ್‌ ಹಾಗೂ ಟೌನ್ ಹಾಲ್ ಹಾಗೂ ಜೆ.ಸಿ ರಸ್ತೆ ಸುತ್ತಮುತ್ತ ಮಳೆಯಾಗಿತ್ತು. ವೀಕೆಂಡ್ ಕಳೆಯಲು ಕಬ್ಬನ ಪಾರ್ಕ್‌ಗೆ ಬಂದವರಿಗೆ ದಿಢೀರ್‌ ಮಳೆಯಿಂದಾಗಿ ತೊಂದರೆ ಆಯಿತು. ಮಳೆಯಿಂದ ಆಶ್ರಯ ಪಡೆಯಲು ಓಡುತ್ತಿದ್ದ ದೃಶ್ಯ ಕಂಡು ಬಂತು. ಜೋರಾಗಿ ಸುರಿದ ಒಂದೂವರೆ ಗಂಟೆ ಮಳೆಗೆ ಕೆಆರ್‌ ಸರ್ಕಲ್‌ ರಸ್ತೆಯು ಕೆರೆಯಂತಾಗಿತ್ತು. ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಅಂಡರ್‌ ಪಾಸ್‌ ಕ್ಲೋಸ್‌ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Modi 3.0 Cabinet: ಮೂಲಗಳ ಪ್ರಕಾರ ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ.

VISTARANEWS.COM


on

Modi 3.0 Cabinet
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ಇಂದು (ಜೂನ್‌ 9) ಸಂಜೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಮಧ್ಯೆ ಮೋದಿ ಅವರೊಂದಿಗೆ ಸಚಿವರಾಗಿ ಯಾರೆಲ್ಲ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ (V. Somanna) ಅವರಿಗೆ ಮಣೆ ಹಾಕಲಾಗಿದೆ.

ರಾಜ್ಯದಿಂದ ಯಾರೆಲ್ಲ?

ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎನ್ನಲಾಗುತ್ತಿದೆ.

ಸೋಮಣ್ಣ ಅಚ್ಚರಿಯ ಆಯ್ಕೆ

ವಿಶೇಷ ಎಂದರೆ ಸೋಮಣ್ಣ ಅವರದ್ದು ಅಚ್ಚರಿಯ ಆಯ್ಕೆ. ಉಳಿದ ನಾಲ್ವರ ನಾಲ್ವರ ಹೆಸರು ಮೊದಲೇ ಚಾಲ್ತಿಯಲ್ಲಿದ್ದರೂ ಸೋಮಣ್ಣ ಅವರ ಬಗ್ಗೆ ಹೆಚ್ಚು ಚರ್ಚೆ ನಡೆದಿರಲಿಲ್ಲ. ಇದೀಗ ಅವರು ಅಚ್ಚರಿ ಎಂಬಂತೆ ಆಯ್ಕೆಯಾಗಿದ್ದಾರೆ. ವಿ. ಸೋಮಣ್ಣ ಅವರು ಈ ಹಿಂದೆ ಗೋವಿಂದ ರಾಜ ನಗರ ಕ್ಷೇತ್ರದ ಶಾಸಕರಾಗಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್‌ ಶಾ ಅವರ ಸೂಚನೆ ಮೇರೆಗೆ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ತಮ್ಮನ್ನು ಅತಂತ್ರಗೊಳಿಸಿದ ವಿಚಾರದಲ್ಲಿ ಅವರು ಸಿಟ್ಟಾಗಿದ್ದು, ಬಿಜೆಪಿ ಬಿಡುವ ಬಗ್ಗೆ ಮಾತನಾಡಿದ್ದರು. ಬಳಿಕ ಹೈಕಮಾಂಡ್‌ ಅವರನ್ನು ಸಮಾಧಾನ ಮಾಡಿತ್ತು.

ಒಂದು ಹಂತದಲ್ಲಿ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವ ಸುದ್ದಿ ಹರಡಿತ್ತಾದರೂ ಅದು ನಾರಾಯಣ ಭಾಂಡಗೆ ಅವರಿಗೆ ಒಲಿದ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಮತ್ತೆ ನಿರಾಸೆ ಅನುಭವಿಸಿದ್ದರು. ಇದೀಗ ಅವರು ಬಯಸಿದಂತೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಸ್ಪರ್ಧಿಸಿ ಜಯ ಗಳಿಸಿದ್ದು, ಸಚಿವ ಸ್ಥಾನ ಒಲಿಯುತ್ತಿದೆ.

ದಲಿತ, ಒಬಿಸಿ ಕೋಟಾದ ಸಂಸದರಿಗೆ ನಿರಾಸೆ

ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಪ್ರಯತ್ನಿಸಿದ್ದ ಗೋವಿಂದ ಕಾರಜೋಳ ಮತ್ತು ರಮೇಶ್ ಜಿಗಜಿಣಿಗೆ ಅವರಿಗೆ ನಿರಾಸೆಯಾಗಿದೆ. ಒಬಿಸಿ ಕೋಟಾದಲ್ಲಿ ಸಚಿವ ಸ್ಥಾನದ ಆಸೆಯಲ್ಲಿ ಇದ್ದ ಕೋಟಾ ಶ್ರೀನಿವಾಸ ಪ್ರಸಾದ್ ಮತ್ತು ಪಿ.ಸಿ. ಮೋಹನ್ ಅವರಿಗೂ ಅದೃಷ್ಟ ಒಲಿದಿಲ್ಲ. ಇನ್ನು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಕೂಡ ನಿರಾಸೆಗೆ ಒಳಗಾಗಿದ್ದಾರೆ. ಲಿಂಗಾಯತ ಕೋಟಾದಲ್ಲಿ ತಮ್ಮ ಪುತ್ರ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಕೊಡಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಯತ್ನಿಸಿದ್ದರು. ಇದು ಕೂಡ ಕೈಗೂಡಿಲ್ಲ. ಇತ್ತ ಲಿಂಗಾಯತ ಕೋಟಾದಲ್ಲಿ ಸೋಮಣ್ಣ ಅವರಿಗೆ ಜಾಕ್‌ಪಾಟ್‌ ಹೊಡೆದಿದೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Continue Reading

ಬೆಂಗಳೂರು ಗ್ರಾಮಾಂತರ

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

Murder Case : ಮನೆ ಬಾಡಿಗೆ ಪಡೆಯುವ ವಿಚಾರಕ್ಕೆ ಹಾಗೂ ಪತ್ನಿ ಶೀಲ ಶಂಕಿಸಿದ್ದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಪರಾರಿ ಆಗಿದ್ದ. ಇದೀಗ ಸರ್ಜಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Murder Case
Koo

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ (Murder Case) ಪಾಪಿ ಪತಿಯೊಬ್ಬ ಅರೆಸ್ಟ್ ಆಗಿದ್ದಾನೆ. ಗಂಗಿರೆಡ್ಡಿ ಬಂಧಿತ ಆರೋಪಿ ಆಗಿದ್ದಾನೆ. ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿತ್ತು. ಇದೇ ವೇಳೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು, ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಬಂಧಿಸಿದ್ದಾರೆ.

ಸುಮ್ಮನಹಳ್ಳಿಯಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಾಕಾಲುವೆ ಬಳಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ವ್ಯಕ್ತಿಯನ್ನು ಹತ್ಯೆ ನಡೆಸಿ ರಾಜಕಾಲುವೆ ಪಕ್ಕ ಬಿಸಾಡಿ ಹೋಗಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Road Accident :ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿದ ಯುವಕನೊಬ್ಬ ವೃದ್ಧೆಯೊಬ್ಬರ ಪ್ರಾಣವನ್ನೇ ಕಸಿದಿದ್ದಾನೆ. ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧೆಗೆ ಹಿಂಬದಿಯಿಂದ ಬಂದ ಬೈಕ್‌ ಗುದ್ದಿದೆ. ಡಿಕ್ಕಿ ರಭಸಕ್ಕೆ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾಕಿಂಗ್‌ಗೆ (Walking) ತೆರಳಿದ್ದ ಮಹಿಳೆಗೆ ಬೈಕ್‌ವೊಂದು (Bike Hit) ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಹೇರೋಹಳ್ಳಿ ನಿವಾಸಿ ಶಿವಮ್ಮ (66) ಮೃತ ದುರ್ದೈವಿ.

ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಹೇರೋಹಳ್ಳಿಯ ಸಮೀಪ ನಡೆದಿದೆ. ಶಿವಮ್ಮ ವಾಕಿಂಗ್‌ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಪಲ್ಸರ್ ಬೈಕ್‌ ಶಿವಮ್ಮರಿಗೆ ಗುದ್ದಿದೆ.

ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಶಿವಮ್ಮ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಶಿವಮ್ಮರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇತ್ತ ಬೈಕ್‌ ಸವಾರ ಸುನೀಲ್‌ ಎಂಬಾತನಿಗೂ ಗಾಯವಾಗಿದ್ದು, ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿರುವುದು ಪತ್ತೆಯಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿ ಸುನೀಲ್‌ನನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ramoji Rao Funeral
ಸಿನಿಮಾ9 mins ago

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

Karnataka Rain
ಮಳೆ11 mins ago

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Modi 3.0 Cabinet
ದೇಶ21 mins ago

Modi 3.0 Cabinet: ಈ ನಾಲ್ಕು ಮಹತ್ವದ ಖಾತೆಗಳು ಬಿಜೆಪಿ ಕೈಯಲ್ಲೇ ಉಳಿಯಲಿವೆ!

Kangana Ranaut Slapped incident Hrithik Roshan Backs Post
ಬಾಲಿವುಡ್38 mins ago

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Modi 3.0 Cabinet
Lok Sabha Election 20241 hour ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Murder Case
ಬೆಂಗಳೂರು ಗ್ರಾಮಾಂತರ1 hour ago

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

IND vs PAK
ಕ್ರೀಡೆ1 hour ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Modi 3.0 Cabinet
ದೇಶ2 hours ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು2 hours ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌