Crime News: ಖಿನ್ನತೆ, ಕೊಲೆ, ಆತ್ಮಹತ್ಯೆ; ವೈದ್ಯನ ಮನೆಯಲ್ಲಿ ನಡೆದಿದ್ದು ಬೆಚ್ಚಿ ಬೀಳಿಸುವ ಘಟನೆ! - Vistara News

ಕ್ರೈಂ

Crime News: ಖಿನ್ನತೆ, ಕೊಲೆ, ಆತ್ಮಹತ್ಯೆ; ವೈದ್ಯನ ಮನೆಯಲ್ಲಿ ನಡೆದಿದ್ದು ಬೆಚ್ಚಿ ಬೀಳಿಸುವ ಘಟನೆ!

Crime News: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂಡು ಆತ್ಮಹ್ಯತೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

VISTARANEWS.COM


on

crime new
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ಪತ್ನಿ, ತನ್ನಿಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ರಾಯ್‌ಬರೇಲಿ (Rae Bareli) ರೈಲ್ವೇ ಕಾಲೊನಿಯಲ್ಲಿ ನಡೆದಿದೆ. ರೈಲ್ವೆಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನೇತ್ರ ತಜ್ಞ, 45 ವರ್ಷದ ಡಾ. ಅರುಣ್ ಕುಮಾರ್ ಈ ಕೃತ್ಯ ಎಸಗಿದ್ದಾರೆ. ಅವರನ್ನು ರಾಯ್ ಬರೇಲಿಯ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ನಿಯೋಜಿಸಲಾಗಿತ್ತು. ಡಾ. ಅರುಣ್ ಕುಮಾರ್ ಡಿಪ್ರೆಶನ್‌ನಿಂದ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ (Crime News).

ಮಿರ್ಜಾಪುರದ ನಿವಾಸಿಯಾಗಿರುವ ಡಾ. ಅರುಣ್ ಕುಮಾರ್ ರೈಲ್ವೇಸ್‌ ಕ್ವಾಟರ್ಸ್‌ನಲ್ಲಿ ಪತಿ, ಮಕ್ಕಳೊಂದಿಗೆ ವಾಸವಾಗಿದ್ದರು. ಭಾನುವಾರ ಡಾ. ಅರುಣ್ ಕುಮಾರ್ ಅವರನ್ನು ಸಹೋದ್ಯೋಗಿಗಳು ಕೊನೆಯ ಬಾರಿ ಮಾತನಾಡಿಸಿದ್ದರು. ಅದಾಗಿ ಎರಡು ದಿನಗಳಿಂದ ಅವರ ಪತ್ತೆ ಇರಲಿಲ್ಲ. ಹೀಗಾಗಿ ಅನುಮಾನಗೊಂಡು ಅವರ ಮನೆಗೆ ತೆರಳಿದ್ದರು. ಮನೆಯ ಬೆಲ್‌ ಮಾಡಿದಾಗ ಯಾರೂ ಬಾಗಿಲು ತೆರೆಯಲಿಲ್ಲ. ಕೊನೆಗೆ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಸಾಮೂಹಿಕ ಕೊಲೆಯ ಪ್ರಕರಣ ಬಯಲಾಗಿದೆ. ಡಾ. ಅರುಣ್ ಕುಮಾರ್, ಪತ್ನಿ ಅರ್ಚನಾ, ಪುತ್ರಿ ಆದಿವಾ (12) ಮತ್ತು ಪುತ್ರ ಆರವ್‌ (12) ಮೃತದೇಹ ಕಂಡು ಬಂದಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮನೆಯೊಳಗೆ ರಕ್ತಸಿಕ್ತವಾದ ಸುತ್ತಿಗೆ ಮತ್ತು ರಾಸಾಯನಿಕ ತುಂಬಿದ ಇಂಜೆಕ್ಷನ್‌ ಕಂಡು ಬಂದಿದೆ. ಡಾ. ಅರುಣ್ ಕುಮಾರ್ ಮೊದಲು ಮಕ್ಕಳು ಮತ್ತು ಪತ್ನಿಗೆ ಇಂಜೆಕ್ಷನ್‌ ಚುಚ್ಚಿ ಪ್ರಜ್ಞೆ ತಪ್ಪಿಸಿ ಬಳಿಕ ಅವರ ತಲೆಗೆ ಸುತ್ತಿಗೆಯಿಂದ ಬಡಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಾ. ಅರುಣ್ ಕುಮಾರ್ ಕೈ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು. ಅದು ಸಾಧ್ಯವಾಗದಿದ್ದಾಗ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ʼʼಮೇಲ್ನೋಟಕ್ಕೆ ಈ ರೀತಿಯ ಸಾಧ್ಯತೆ ಕಂಡು ಬಂದಿದೆ. ಪೋಸ್ಟ್‌ ಮಾರ್ಟಮ್‌ ಬಳಿಕ ಇನ್ನೂ ಹೆಚ್ಚಿನ ವಿವರ ತಿಳಿದು ಬರಲಿದೆʼʼ ಎಂದು ರಾಯ್‌ ಬರೇಲಿಯ ಎಸ್‌.ಪಿ. ಅಲೋಕ್‌ ಪ್ರಿಯದರ್ಶನ್‌ ತಿಳಿಸಿದ್ದಾರೆ.

ಇದನ್ನೂ ಓದಿ: Cyber crime : ಹೈಕೋರ್ಟ್‌ ಲೈವ್‌ ಸ್ಟ್ರೀಮಿಂಗ್‌ನಲ್ಲಿ ಹರಿದಾಡಿದ ಅಶ್ಲೀಲ ದೃಶ್ಯ!

“ವೈದ್ಯರ ಮಾನಸಿಕ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲು ಅವರ ಸ್ನೇಹಿತರು, ಕುಟುಂಬ, ಸಹೋದ್ಯೋಗಿಗಳು ಮತ್ತು ಪರಿಚಿತರಿಂದ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದೇವೆʼʼ ಎಂದು ಅಲೋಕ್‌ ಪ್ರಿಯದರ್ಶನ್‌ ಹೇಳಿದ್ದಾರೆ.

ನೆರೆ ಮನೆಯವರು ಹೇಳಿದ್ದೇನು?

ನೆರೆಮನೆಯ ಕಮಲ್‌ ಕುಮಾರ್‌ ದಾಸ್‌ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ʼʼಡಾ. ಅರುಣ್‌ ಕುಮಾರ್‌ ರೋಗಿಗಳು ಮತ್ತು ಇತರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕುಟುಂಬದೊಳಗಿನ ಸಮಸ್ಯೆಯಿಂದ ಡಾ. ಅರುಣ್‌ ಕುಮಾರ್‌ ಇಂತಹ ಕೃತ್ಯ ಎಸಗಿರುವ ಸಾಧ್ಯತೆ ಇದೆʼʼ ಎಂದು ಅವರು ಊಹಿಸಿದ್ದಾರೆ. ಇನ್ನು ಕೆಲವರು ಡಾ. ಅರುಣ್‌ ಕುಮಾರ್‌ ಸದಾ ಜಗಳವಾಡುತ್ತಿದ್ದರು ಎಂದು ತಿಳಿಸಿದ್ದಾರೆ. ʼʼನೆರೆ ಮನೆಯವರು, ಸಂಬಂಧಿಕರ ಹೇಳಿಕೆ ಪಡೆದು, ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುವುದುʼʼ ಲಕ್ನೋ ವಲಯ ಐಜಿ ತರುಣ್ ಗೌಬಾ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading

ದೇಶ

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

Stampede Tips and Tricks: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂಥ ಕಾಲ್ತುಳಿತ ಉಂಟಾದಾಗ ನಮ್ಮನ್ನು ನಾನು ರಕ್ಷಿಸಿಕೊಳ್ಳುವುದು ಹೇಗೆ? ಪ್ರಾಣಾಪಾಯದಿಂದ ಪಾರಾಗುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ.

VISTARANEWS.COM


on

By

Stampede Tips and Tricks
Koo

ಹತ್ರಾಸ್‌ನಲ್ಲಿ (Hathras) ಇತ್ತೀಚೆಗೆ (Stampede Tips and Tricks) ಬಾಬಾ ಭೋಲೆ (Baba Bhole) ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂತಹ ಕಾಲ್ತುಳಿತ ಸಂದರ್ಭಗಳಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Viral Video) ಶೇರ್‌ ಆಗುತ್ತಿದೆ.

ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ (satsang) ಮುಖ್ಯ ಭಾಷಣಕಾರರಾಗಿ ಭೋಲೆ ಬಾಬಾ ಆಗಮಿಸಿದ್ದರು. ಭೋಲೆ ಬಾಬಾ ಅವರು ಅವರು ಅಲ್ಲಿಗೆ ಆಗಮಿಸಿದಾಗ ಭಕ್ತರು ಆ ಪ್ರದೇಶದ ಮಣ್ಣನ್ನು ಸಂಗ್ರಹಿಸಲು ಪ್ರಾರಂಭಿಸಲು ತೊಡಗಿದಾಗ ಕಾಲ್ತುಳಿತ ಉಂಟಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಜನರು ಕಾಲ್ತುಳಿತದಿಂದ ಹೇಗೆ ಬದುಕಬಹುದು ಎಂಬುದನ್ನು ವಿವರಿಸಲು ತಜ್ಞರು ಸ್ವಯಂಸೇವಕರ ಗುಂಪಿನ ಸಹಾಯವನ್ನು ಬಳಸಿದ್ದಾರೆ.
ಜನರು ಕಾಲ್ತುಳಿತದಲ್ಲಿ ಹೇಗೆ ಸಿಲುಕಿಕೊಂಡರು ಎಂಬುದನ್ನು ಪ್ರದರ್ಶಿಸುವ ದೃಶ್ಯವೂ ಇದರಲ್ಲಿದೆ. ಇದಲ್ಲದೆ ಇಂತಹ ಸಂದರ್ಭಗಳು ಜನಸಮೂಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನೂ ವಿವರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಜನರು ಎಂದಾದರೂ ಇಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡರೆ ಬದುಕುಳಿಯಬಹುದು ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಇದಕ್ಕಾಗಿ ಪರಿಣಿತರು ಸಹಾಯಕವಾದ ಸಲಹೆಗಳು ಮತ್ತು ಭಂಗಿಗಳನ್ನು ಹೇಳಿದ್ದಾರೆ. ಇಂಥ ಕಾಲ್ತುಳಿತ ಸಂದರ್ಭದಲ್ಲಿ ಅಡ್ಡಲಾಗಿ ಮಲಗುವ ಮೂಲಕ ಮತ್ತು ಎರಡೂ ಕೈಗಳಿಂದ ತಲೆ ಮತ್ತು ಮುಖವನ್ನು ರಕ್ಷಿಸಿಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ವಿಡಿಯೊದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಗಿದೆ.

ಕಾಲ್ತುಳಿತದಲ್ಲಿ ಸಿಲುಕಿಕೊಳ್ಳುವ ಜನರು ವಿವಿಧ ಕಡೆಯಿಂದ ಒಂದೇ ಬಾರಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಆಗ ಉಸಿರು ಕಟ್ಟುತ್ತದೆ. ಪಕ್ಕೆಲುಬುಗಳು, ಹೃದಯ ಮತ್ತು ಪ್ರಮುಖ ಅಂಗಗಳಿಗೆ ಹಾನಿಯುಂಟಾಗುತ್ತದೆ. ಈ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುವ ಭಂಗಿಯನ್ನು ತಜ್ಞರು ವಿವರಿಸಿದ್ದಾರೆ.

ಹತ್ರಾಸ್‌ನಲ್ಲಿ ಏನಾಗಿತ್ತು?

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಲಕ್ಷಾಂತರ ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿತ್ತು. ಧಾರ್ಮಿಕ ಸಭೆ ಮುಗಿದ ಅನಂತರ ಕಾಲ್ತುಳಿತ ಉಂಟಾಗಿತ್ತು.


ಘಟನೆಯ ಬಳಿಕ ಸ್ವಯಂ ಘೋಷಿತ ಬೋಧಕ ಬಾಬಾ ನಾರಾಯಣ ಹರಿ ಅಲಿಯಾಸ್ ಸಾಕರ್ ವಿಶ್ವ ಹರಿ ‘ಭೋಲೆ ಬಾಬಾ’ ಅವರು ಬೆಂಗಾವಲು ಪಡೆಯೊಂದಿಗೆ ಗ್ರಾಮವನ್ನು ತೊರೆದಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ‘ಸೇವಕ್’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಪಡೆ ವಾಹನ ರಸ್ತೆ ದಾಟುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದರು.

ಈ ಕುರಿತು ಮಾಹಿತಿ ನೀಡಿರುವ ಪ್ರತ್ಯಕ್ಷದರ್ಶಿ ಗೋಪಾಲ್ ಕುಮಾರ್, ಬಾಬಾ ಅವರು ಬೈಪಾಸ್ ಮಾಡುವ ಮೂಲಕ ಗೊತ್ತುಪಡಿಸಿದ ಮಾರ್ಗದಿಂದ ಆಗಮಿಸಿ, ನಿರ್ಗಮಿಸಿದರು. ಅವರ ಸುತ್ತಲೂ ವಾಹನಗಳಿದ್ದವು ಮತ್ತು ಹೆದ್ದಾರಿಯ ಒಂದು ಭಾಗವು ಭಕ್ತರು ಮತ್ತು ವಾಹನಗಳಿಂದ ತುಂಬಿ ಬಹುತೇಕ ಜಾಮ್ ಆಗಿತ್ತು ಎಂದು ಹೇಳಿದರು.

ಬಾಬಾ ಅವರ ವಾಹನವು ಹೆದ್ದಾರಿಯನ್ನು ತಲುಪುತ್ತಿದ್ದಂತೆ ನೂರಾರು ಭಕ್ತರು ಅವರ ಪಾದದ ಅಡಿಯ ಮಣ್ಣು ಪಡೆಯಲು ಅವರ ಕಾರಿನ ಕಡೆಗೆ ಧಾವಿಸಿದರು. ಇದರಲ್ಲಿ ಕೆಲವರು ಬಿದ್ದರು. ಬೃಹತ್ ಜನಸಮೂಹವು ಹೆದ್ದಾರಿಯತ್ತ ಧಾವಿಸಿದ್ದು, ಬಿದ್ದವರಲ್ಲಿ ಕೆಲವರಿಗೆ ಮೇಲಕ್ಕೆ ಎಳಲೂ ಸಾಧ್ಯವಾಗಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅವರಲ್ಲಿ ಕೆಲವರು ಸತ್ತರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಆರು ಜನರು ಸೇರಿ ಎಲ್ಲಾ ಸೇವಾದಾರರನ್ನು ಬಂಧಿಸಿದ್ದರೆ ಎಂದು ತಿಳಿಸಿದರು.

ಪ್ರಮುಖ ಆರೋಪಿ ಪ್ರಕಾಶ್ ಮಧುಕರ್ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೇಳದ ಕಾರಣ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಐಜಿ (ಅಲಿಗಢ ರೇಂಜ್) ಶಲಭ್ ಮಾಥುರ್ ತಿಳಿಸಿದ್ದಾರೆ.

Continue Reading

ದೇಶ

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Deadly Attack: ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Deadly Attack
Koo

ಚಂಢಿಗಡ: ಪಂಜಾಬ್‌ನ ಶಿವಸೇನೆ ಮುಖಂಡ(Shivsena Leader)ನ ಮೇಲೆ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ(Deadly Attack) ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದಿದೆ. ಶಿವಸೇನೆ ನಾಯಕ ಸಂದೀಪ್‌ ಥಾಪರ್‌ ಅಲಿಯಾಸ್‌ ಗೋರಾ ಮೇಲೆ ಸ್ಕೂಟರ್‌ನಲ್ಲಿ ಬಂದ ನಿಹಾಂಗ್ ಉಡುಪಿನಲ್ಲಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ವೈರಲ್‌(Viral Video) ಆಗಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ನಿಹಾಂಗ್ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್‌ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅಲ್ಲೇ ಇದ್ದ ಪ್ರಯಾಣಿಕರು ಆಘಾತದಿಂದ ನೋಡುತ್ತಿದ್ದಂತೆ ದಾಳಿಕೋರರು ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಅನೇಕ ಜನ ಥಾಪರ್‌ ಸಹಾಯಕ್ಕೆ ಬರಲೇ ಇಲ್ಲ. ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಥಾಪರ್ ಅವರು ಸಂವೇದನಾ ಟ್ರಸ್ಟ್ ಎಂಬ ಎನ್‌ಜಿಒ ಕಚೇರಿಯಿಂದ ಸಿವಿಲ್ ಆಸ್ಪತ್ರೆ ಬಳಿ ತೆರಳಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಥಾಪರ್‌ನನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಸ್ಥಳೀಯ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು. ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಸ್ಕಿರಂಜಿತ್ ಸಿಂಗ್ ತೇಜಾ ತಿಳಿಸಿದ್ದಾರೆ.

ಘಟನೆಯ ನಂತರ, ಶಿವಸೇನಾ ಪಂಜಾಬ್ ನಾಯಕರು ಸಿವಿಲ್ ಆಸ್ಪತ್ರೆಯ ಹೊರಗೆ ಜಮಾಯಿಸಿ ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಥಾಪರ್‌ಗೆ ಮೂವರು ಬಂದೂಕುಧಾರಿಗಳ ಭದ್ರತೆ ನೀಡಲಾಗಿತ್ತು. ಪೊಲೀಸರು ಒಂದು ವಾರದ ಹಿಂದೆ ಅವರ ಭದ್ರತೆಯನ್ನು ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ. ಥಾಪರ್‌ ಮೇಲಿನ ದಾಳಿಗೆ ಹಿಂದೂ ಸಂಘಟನೆ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಿಗೆ ಸರ್ಕಾರ ಭದ್ರತೆ ನೀಡುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಇಂತಹ ಕ್ರೂರ ದಾಳಿ ಖಂಡನೀಯ. ಇದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ತುಮಕೂರು

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Assault Case : ತುಮಕೂರಿನಲ್ಲಿ ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault case
Koo

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.

ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಲಕ್ಷ್ಮಣಯ್ಯಗೆ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ದೇವನಹಳ್ಳಿಯ ಶಾಲೆ ಹಿಂಭಾಗ ಶವ ಪತ್ತೆ

ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಂದಿನಿ ಶಾಲೆ ಹಿಂಭಾಗ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
BSP President
ದೇಶ2 mins ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ15 mins ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ21 mins ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ45 mins ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ50 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್52 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ56 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ1 hour ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು1 hour ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ1 hour ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ5 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ8 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ9 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು11 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ15 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌