Kadlekai Parishe 2023: ನಾಳೆಯಿಂದ ಕಡಲೆಕಾಯಿ ಪರಿಷೆ; 5 ದಿನ ಈ ಮಾರ್ಗ ಬಂದ್‌! - Vistara News

ಕರ್ನಾಟಕ

Kadlekai Parishe 2023: ನಾಳೆಯಿಂದ ಕಡಲೆಕಾಯಿ ಪರಿಷೆ; 5 ದಿನ ಈ ಮಾರ್ಗ ಬಂದ್‌!

Kadlekai Parishe 2023 : ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಶುರುವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

VISTARANEWS.COM


on

Kadlekai Parishe 2023 to start from Dec 9th change in route for 5 days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಾರಂಪರಿಕ ಕಡಲೆಕಾಯಿ ಪರಿಷೆ 2023 (Kadlekai Parishe 2023) ಡಿ.9 ರಿಂದ ಶುರುವಾಗುತ್ತಿದೆ. ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪರಿಷೆಗೆ ಚಾಲನೆ ನೀಡಲಾಗುತ್ತಿದೆ. ಡಿ. 9 ರಿಂದ 13ರವರೆಗೆ ಕಡಲೆಕಾಯಿ ಪರಿಷೆ ನಡೆಯಲಿದ್ದು, ಬಸವನಗುಡಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಬುಲ್‌ ಟೆಂಪಲ್ ರಸ್ತೆಯ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

1)ಲಾಲ್‌ಬಾಗ್ ವೆಸ್ಟ್‌ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜ ಪೇಟೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಬುಲ್‌ ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮುಂದೆ ಸಾಗಿ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

2)ಆರ್.ವಿ. ಟೀಚರ್ಸ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಠಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್‌ ರಾಕ್‌ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್‌ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.

3)ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಕಾಲೋನಿ ರಸ್ತೆಯಲ್ಲಿ ಬುಲ್‌ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ತಿಗುಪ್ಪೆ ರಸ್ತೆಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್‌ನಲ್ಲಿ ಕೆ.ಜಿ. ನಗರ ಮುಖ್ಯರಸ್ತೆ ಅಥವಾ ಹಯವಧನರಾವ್ ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: Marriage Cancel : ತಾಳಿ ಕಟ್ಟಲು ಬಂದ್ರೆ ತಾಳಿಯನ್ನೇ ದೂಡಿದ ವಧು; ಅರ್ಧದಲ್ಲೇ ನಿಂತು ಹೋಯಿತು ಮದುವೆ

ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ?

ಕಡಲೆಕಾಯಿ ಪರಿಷೆಗೆ ಭೇಟಿ ನೀಡುವ ಸಾರ್ವಜನಿಕರು, ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ ಆಟದ ಮೈದಾನಗಳನ್ನು ಬಳಸಿಕೊಳ್ಳಬಹುದಾಗಿದೆ.
1)ಎ.ಪಿ.ಎಸ್.ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ
2)ಹಯವಧನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ ಹಾಗೂ ರಾಮಕೃಷ್ಣ ಆಶ್ರಮ ಜಂಕ್ಷನ್
3)ಬುಲ್‌ ಟೆಂಪಲ್ ರಸ್ತೆಯಲ್ಲಿರುವ ಉದಯಭಾನು ಆಟದ ಮೈದಾನ.

ಪರಿಷೆಗೆ ಬನ್ನಿ-ಕೈಚೀಲ ತನ್ನಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಪರಿಷೆಗೆ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ. ಪರಿಷೆಗೆ ಬನ್ನಿ-ಕೈಚೀಲ’ ತನ್ನಿ ಎಂಬ ಆಹ್ವಾನದೊಂದಿಗೆ ಪರಿಸರ ಸ್ನೇಹಿ ಪರಿಷೆ ನಡೆಸಲು ಬಿಬಿಎಂಪಿ ಸಿದ್ಧತೆಗಳನ್ನು ಮಾಡಿಕೊಂಡಿದೆ.

500 ವರ್ಷಗಳ ಇತಿಹಾಸವಿರುವ ಬಸವನಗುಡಿ ಕಡಲೆಕಾಯಿ ಪರಿಷೆಯು ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ನಡೆಯುತ್ತದೆ. ಈಗಾಗಲೇ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಸ್ವಚ್ಚತೆ ಕಾರ್ಯವನ್ನು ಮಾಡಲಾಗುತ್ತಿದೆ. ವರ್ಷಕ್ಕೊಮ್ಮೆ ದೊಡ್ಡ ಬಸವನಿಗೆ ಎಣ್ಣೆ ಹಾಕಿ ಸ್ವಚ್ಚ ಮಾಡಲಾಗುತ್ತದೆ.

ವ್ಯಾಪಾರಿಗಳು ಕೂಡ 5 ದಿನದ ಮೊದಲೆ ಕಡಲೆಕಾಯಿ ವ್ಯಾಪಾರ ಮಾಡಲು ತಮ್ಮ ತಮ್ಮ ಜಾಗವನ್ನು ಕಾಯಿದ್ದಿರಿಸಿಕೊಂಡಿದ್ದಾರೆ. ವ್ಯಾಪಾರಸ್ಥರು ಈ ಬಾರಿ ಹೆಚ್ಚಿನ ಆದಾಯದ ನಿರೀಕ್ಷೆಯಲ್ಲಿದ್ದಾರೆ. ಇನ್ನು ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ಪರಿಸರ ಪ್ರೇಮಿ ಕಡಲೆಕಾಯಿ ಪರಿಷೆ ನಡೆಸಲು ತೀರ್ಮಾನಿಸಲಾಗಿದೆ.

ಬಸವನಗುಡಿ ಕಡಲೆ ಕಾಯಿ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ವಿದ್ಯುತ್ ದೀಪಾಲಂಕಾರ, ವಿವಿಧ ಬಗೆಯ ಆಹಾರದ ಮಳಿಗೆಗಳು, ಆಟಿಕೆಗಳು ಮಕ್ಕಳನ್ನು ಆಕರ್ಷಿಸಲಿವೆ. ಮಲ್ಲೆಶ್ವರದ ಕಡಲೆಕಾಯಿ ಪರಿಷೆಯ ನಂತರ ಈಗ ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ರುಚಿ ರುಚಿಯಾದ ಕಡಲೆಕಾಯಿ ಸವಿಯಲು ಸಿಲಿಕಾನ್ ಸಿಟಿ ಮಂದಿ ಕಾತುರದಿಂದ ಕಾಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Actor Darshan: ಮಗುವಿಗೆ ಕೈದಿ ನಂಬರ್ ಡ್ರೆಸ್ ಹಾಕಿಸಿ ಫೋಟೊ ಶೂಟ್ ಮಾಡಿಸುವ ಮೂಲಕ ಅತಿರೇಖದ ವರ್ತನೆ ತೋರಿದ ಪೋಷಕರಿಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಟ್ರೆಂಡ್‌ ಆಗುತ್ತಿದೆ. ಕೆಲ ಅಭಿಮಾನಿಗಳು ದರ್ಶನ್‌ ಕೈದಿ ಸಂಖ್ಯೆ 6106 ಅನ್ನು ವಾಹನಗಳ ಮೇಲೆ ಸ್ಟಿಕ್ಕರ್‌, ಕೈ ಮೇಲೆ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮಗುವಿಗೆ ಕೈದಿ 6106 ಫೋಟೋ ಶೂಟ್ ಮಾಡಿಸಿದವರಿಗೆ ಇದೀಗ ಕಾನೂನು ಕಂಟಕ ಎದುರಾಗಿದೆ. ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೇಸ್ ದಾಖಲಿಸಿಕೊಂಡಿದ್ದು, ಕೈದಿ ಫೋಟೊ ಶೋಟ್‌ ಮಾಡಿಸಿದವರಿಗೆ ನೋಟಿಸ್‌ ನೀಡಿದೆ.

ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಹಾಗಿಲ್ಲ. ಕುಟುಂಬಸ್ಥರಿಗೆ ಸಮನ್ಸ್ ಜಾರಿ ಮಾಡುತ್ತೇವೆ. ಈ ಬಗ್ಗೆ ಪೊಲೀಸ್ ಐಟಿ ಸೆಲ್‌ಗೆ ಪತ್ರ ಬರೆಯಲಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ತಿಳಿಸಿದ್ದಾರೆ.

ಪೋಷಕರ ನಡೆಯಿಂದ ಮಗುವಿನ ಭವಿಷ್ಯಕ್ಕೆ ತೊಂದರೆ ಉಂಟಾಗಲಿದೆ. ಮುಂದೆ ಆ ಮಗುವನ್ನು ಕೈದಿ ಎಂದು ಕರೆಯಬಹುದು. ಇದು ಮಗುವಿನ ಮಾನಸಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಡ್ರೆಸ್ ಹಾಕಿರುವುದು ಮಗುವಿನ ಆಯ್ಕೆಯಾಗಿರಲ್ಲ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಂತೆ. ಇದೇ ಕಾರಣಕ್ಕೆ ಆಯೋಗ ಕೇಸ್ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

lovers death self harming

ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ (Lovers death) ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ʼಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Viral News: ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ!

VISTARANEWS.COM


on

viral news signboard
Koo

ಬೆಂಗಳೂರು: ಕರ್ನಾಟಕದ ಕೊಡಗಿನ (Coorg) ಬಳಿಯ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ತುರ್ತು ಸೂಚನಾ ಫಲಕವೊಂದು (Sign Board) ಇದೀಗ ಅಂತರ್ಜಾಲವನ್ನು (Internet) ನಗೆಗಡಲಿನಲ್ಲಿ (Viral News) ತೇಲಿಸುತ್ತಿದೆ. ಕನ್ನಡದಿಂದ ಇಂಗ್ಲಿಷ್‌ಗೆ ತಪ್ಪಾಗಿ ಅನುವಾದ (Translation) ಮಾಡಿರುವುದರಿಂದ ಉಂಟಾದ ಅವಾಂತರವಿದು. ಮಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ (Mangalore Mysore National Highway) ಹಾದುಹೋಗುವ ಸಂಪಾಜೆಯಲ್ಲಿ (Sampaje) ಈ ಫಲಕವಿದೆ.

ʼಕೊಡಗು ಕನೆಕ್ಟ್’ ಎಂಬ ಹೆಸರಿನ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಸೈನ್‌ಬೋರ್ಡ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ! ಈ ಸೂಚನಾ ಫಲಕವನ್ನು ವಾಹನ ಚಾಲಕರು ಅಕ್ಷರಶಃ ಪಾಲಿಸಲು ಹೋದರೆ ಅನರ್ಥವೇ ಆಗುತ್ತದೆ!

ಕಳಪೆ ಇಂಗ್ಲಿಷ್‌ನಲ್ಲಿ ಅನುವಾದ ಮಾಡಲಾಗಿರುವ ಈ ಫಲಕದಲ್ಲಿ ಇಂಗ್ಲಿಷ್‌ ವಾಕ್ಯ ʼOverspeeding Causes accidents’ ಎಂದು ಇರಬೇಕಾಗಿತ್ತು. ಇಂಟರ್ನೆಟ್ ಬಳಕೆದಾರರು ಇದರ ಬಗ್ಗೆ ಹಾಸ್ಯಮಯ ಕಾಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಸೈನ್‌ಬೋರ್ಡ್‌ಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವ ಸರ್ಕಾರದ ಪ್ರಯತ್ನವನ್ನು ಕೆಲವರು ಪ್ರಶ್ನಿಸಿದ್ದಾರೆ. ಇತರರು ಈ ದೋಷವನ್ನು ತಮಾಷೆಯಾಗಿ, ಸ್ವಾರಸ್ಯಕರವಾಗಿ ತೆಗೆದುಕೊಂಡಿದ್ದಾರೆ.

“ಇದಕ್ಕೂ ಸಹ ಅನುವಾದಕರು ಚಾಟ್‌ಜಿಪಿಟಿ ಬಳಸಿದ್ದಾರೆ” ಎಂದು ಒಬ್ಬ ಬಳಕೆದಾರರು ತಮಾಷೆ ಮಾಡಿದ್ದಾರೆ. “ಕನ್ನಡವು ಇಂಗ್ಲಿಷ್ ಅಲ್ಲ” ಎಂದು ಮತ್ತೊಬ್ಬರು ಟೀಕಿಸಿದ್ದಾರೆ. “urgent ನಂತರ ಒಂದು ಅಲ್ಪವಿರಾಮ ಹಾಕಿದರೆ ಅರ್ಥ ಸಂಪೂರ್ಣವಾಗಿ ಬದಲಾಗುತ್ತದೆ” ಎಂದು ಬೇರೊಬ್ಬರು ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು, “ಇನ್ಶುರೆನ್ಸ್ ಏಜೆಂಟ್ಸ್ ಅನ್ನು ಟ್ಯಾಗ್ ಮಾಡಿ. ಅವರು ಇದನ್ನು ವೇಗವಾಗಿ ಸರಿಪಡಿಸುತ್ತಾರೆ” ಎಂದು ತಮಾಷೆ ಮಾಡಿದ್ದಾರೆ.

ಮಾರ್ಚ್‌ನಲ್ಲಿ, ಕೊಡಗು ಜಿಲ್ಲೆಯ ಒಂದು ಕಡೆಯ ಸ್ಥಳೀಯರು ಗೂಗಲ್‌ನ ನ್ಯಾವಿಗೇಷನ್ ತಪ್ಪಿನ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡುವ ತಾತ್ಕಾಲಿಕ ಸೈನ್‌ಬೋರ್ಡ್ ಅನ್ನು ಹಾಕಿದ್ದರು. ʼಗೂಗಲ್ ತಪ್ಪು ಮಾಡಿದೆ. ಈ ರಸ್ತೆ ಕ್ಲಬ್ ಮಹೀಂದ್ರಾ ರೆಸಾರ್ಟ್‌ಗೆ ಹೋಗುವುದಿಲ್ಲ’ ಎಂದು ಫಲಕದಲ್ಲಿತ್ತು. ಗೂಗಲ್‌ ಮ್ಯಾಪ್‌ನಿಂದಾಗಿ ದಾರಿ ತಪ್ಪಿದ ಪ್ರಯಾಣಿಕರು ಸದಾ ದಾರಿ ಕೇಳುವುದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಆ ಸೈನ್‌ಬೋರ್ಡ್ ಅನ್ನು ಹಾಕಿದ್ದರು.

ಇದನ್ನೂ ಓದಿ: Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Continue Reading

ಕರ್ನಾಟಕ

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Stray Dogs Attack: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ 15 ಕುರಿಗಳು ಮೃತಪಟ್ಟಿವೆ.

VISTARANEWS.COM


on

Stray Dogs Attack
Koo

ಯಾದಗಿರಿ: ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿಯಾಗಿರುವ ಘಟನೆ (Stray Dogs Attack) ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಸಂಜೀವಪ್ಪ ದೇವಾಪುರ ಎಂಬುವವರ ಕುರಿಗಳು ಮೃತಪಟ್ಟಿವೆ.

ಗ್ರಾಮದ ಹೊರ ಭಾಗದ ಕುರಿ ಹಟ್ಟಿಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ನಾಲ್ಕೈದು ಬೀದಿ ನಾಯಿಗಳು ದಾಳಿ‌ ಮಾಡಿ, ಕೊಂದಿವೆ. ಕುರಿಗಳನ್ನೇ ನಂಬಿಕೊಂಡು ಕುರಿಗಾಹಿ ಸಂಜೀವಪ್ಪ ಜೀವನ ಸಾಗಿಸುತ್ತಿದ್ದರು. ಕುರಿಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಕುರಿಗಾಹಿ ಮನವಿ‌‌ ಮಾಡಿದ್ದಾರೆ.

ಇದನ್ನೂ ಓದಿ | Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ

ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.

ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.

ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ | Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕ್ರೈಂ

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

Lovers Death: ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು.

VISTARANEWS.COM


on

lovers death self harming
Koo

ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ (Lovers death) ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ʼಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

Continue Reading
Advertisement
Actor Darshan
ಕರ್ನಾಟಕ20 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ27 mins ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ29 mins ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್40 mins ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ42 mins ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ55 mins ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ60 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

lovers death self harming
ಕ್ರೈಂ1 hour ago

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

Anant-Radhika Wedding
ದೇಶ1 hour ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ1 hour ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌