Arindam Bagchi: ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮದ ವರದಿ; ಭಾರತದ ಸ್ಪಷ್ಟನೆ ಏನು? - Vistara News

ದೇಶ

Arindam Bagchi: ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮದ ವರದಿ; ಭಾರತದ ಸ್ಪಷ್ಟನೆ ಏನು?

Arindam Bagchi: ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎನ್ನುವ ವರದಿಯಲ್ಲಿ ಭಾರತ ತಳ್ಳಿ ಹಾಕಿದೆ.

VISTARANEWS.COM


on

arindam bhagchi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಸೇರಿದಂತೆ ಹಲವು ಸಿಖ್ ಪ್ರತ್ಯೇಕತಾವಾದಿಗಳ (Sikh separatists) ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನವದೆಹಲಿ ಏಪ್ರಿಲ್‌ನಲ್ಲಿ ರಹಸ್ಯ ಮೆಮೋ ಹೊರಡಿಸಿದೆ ಎಂದು ಹೇಳಲಾದ ಮಾಧ್ಯಮ ವರದಿಯನ್ನು ಕೇಂದ್ರ ಸರ್ಕಾರ ಭಾನುವಾರ ʼನಕಲಿ ಮತ್ತು ಸತ್ಯಕ್ಕೆ ದೂರವಾದುದುʼ ಎಂದು ಸ್ಪಷ್ಟಪಡಿಸಿದೆ.

ಭಾರತದ ವಿರುದ್ಧದ ನಿರಂತರ ತಪ್ಪು ಮಾಹಿತಿ ಅಭಿಯಾನದ ಭಾಗವಾಗಿ ಈ ಸುದ್ದಿಯನ್ನು ಹರಡಲಾಗಿದೆ ಮತ್ತು ಇದು ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಹೂಡಿದ ಸಂಚಿನ ಭಾಗ ಎಂದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಹೇಳಿದ್ದಾರೆ. ಅಮೆರಿಕದ ಆನ್‌ಲೈನ್‌ ಮಾಧ್ಯಮ ಸಂಸ್ಥೆ ʼದಿ ಇಂಟರ್ ಸೆಪ್ಟ್ʼ ಈ ವರದಿಯನ್ನು ಪ್ರಕಟಿಸಿತ್ತು.

ಅರಿಂದಮ್ ಬಾಗ್ಚಿ ಹೇಳಿದ್ದೇನು?

“ಇಂತಹ ವರದಿಗಳು ನಕಲಿ ಮತ್ತು ಸಂಪೂರ್ಣವಾಗಿ ಕಪೋಲಕಲ್ಪಿತ ಎಂದು ನಾವು ಬಲವಾಗಿ ಪ್ರತಿಪಾದಿಸುತ್ತೇವೆ. ಅಂತಹ ಯಾವುದೇ ಮೆಮೊ ಹೊರಡಿಸಿಲ್ಲ. ಇದು ಭಾರತದ ವಿರುದ್ಧ ನಿರಂತರ ತಪ್ಪು ಮಾಹಿತಿ ಹರಡುವ ಅಭಿಯಾನದ ಭಾಗ. ಪಾಕಿಸ್ತಾನದ ಗುಪ್ತಚರರು ಹರಡುವ ನಕಲಿ ಸುದ್ದಿಗಳನ್ನು ಪ್ರಚಾರ ಮಾಡಲು ʼದಿ ಇಂಟರ್ ಸೆಪ್ಟ್ʼ ಸಂಸ್ಥೆ ಹೆಸರುವಾಸಿ. ಈ ಹಿಂದಿನ ಪೋಸ್ಟ್‌ಗಳು ಇದನ್ನು ದೃಢಪಡಿಸುತ್ತವೆ” ಎಂದು ಅರಿಂದಮ್ ಬಾಗ್ಚಿ ಹೇಳಿದರು.

ಜೂನ್ 18ರಂದು ಕೆನಡಾದಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಭಾರತವು ಈ ಆರೋಪಗಳನ್ನು ಬಲವಾಗಿ ತಿರಸ್ಕರಿಸಿ, ಆರೋಪವನ್ನು ʼಅಸಂಬದ್ಧʼ ಎಂದು ಕರೆದಿತ್ತು. ಪಾಶ್ಚಿಮಾತ್ಯ ದೇಶಗಳಲ್ಲಿನ ಕೆಲವು ಸಿಖ್ ಘಟಕಗಳ ವಿರುದ್ಧ ʼಕಠಿಣ ಕ್ರಮʼಗಳನ್ನು ಕೈಗೊಳ್ಳುವಂತೆ ಭಾರತ ಸರ್ಕಾರ ಸೂಚನೆಗಳನ್ನು ನೀಡಿದೆ ಎಂದು ಇಂಟರ್ಸೆಪ್ಟ್ ತನ್ನ ವರದಿಯಲ್ಲಿ ಹೇಳಿಕೊಂಡಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಏಪ್ರಿಲ್‌ನಲ್ಲಿ ಹೊರಡಿಸಿದ ರಹಸ್ಯ ಜ್ಞಾಪಕ ಪತ್ರದಲ್ಲಿ ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಸೇರಿದಂತೆ ಹಲವು ಸಿಖ್ ನಾಯಕರ ಪಟ್ಟಿಯನ್ನು ತಯಾರಿಸಿದೆ ಎಂದು ಹೇಳಿತ್ತು.

ಜಸ್ಟಿನ್ ಟ್ರುಡೋ ಹೇಳಿದ್ದೇನು?

ಜೂನ್‌ 18ರಂದು ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ, ಭಾರತದ ಏಜೆಂಟರೇ ಹತ್ಯೆ ಮಾಡಿದ್ದಾರೆ ಎಂದು ಜಸ್ಟಿನ್‌ ಟ್ರುಡೋ ಆರೋಪಿಸಿದ್ದರು. ಆದರೆ ಅವರು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದರು. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರೂ ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿರಲಿಲ್ಲ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದರು. ಆದರೆ ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದರು.

ಇದನ್ನೂ ಓದಿ: ರಜಪೂತ ನಾಯಕನ ಹತ್ಯೆ ಸಂಚು ನಡೆದಿದ್ದು ಕೆನಡಾದಲ್ಲಿ; ಇದರ ಹಿಂದೆ ಇರೋದು ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಮತ್ತೆ ನರೇಂದ್ರ ಮೋದಿ ಅವರ ಆಡಳಿತ ಶುರುವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಈಶ್ವರನ ಹೆಸರಿನಲ್ಲಿ ನರೇಂದ್ರ ಮೋದಿ ಅವರು ಪದಗ್ರಹಣ ಮಾಡಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ (Narendra Modi Oath) ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದಿರು. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್‌ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದ ಲೈವ್‌ ವೀಕ್ಷಣೆಗೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಎಲ್‌ಇಡಿ ಪರದೆ, ಟಿವಿಗಳ ವ್ಯವಸ್ಥೆ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಲೇ ಭಾರತ್‌ ಮಾತಾ ಕೀ ಜೈ, ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿದವು.

ವಿದೇಶಿ ನಾಯಕರು ಭಾಗಿ

ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿದ್ದರು.

ಉದ್ಯಮಿಗಳು, ಗಣ್ಯರ ಉಪಸ್ಥಿತಿ

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅದಾನಿ ಗ್ರೂಪ್‌ ಚೇರ್ಮನ್‌ ಗೌತಮ್‌ ಅದಾನಿ, ಬಾಲಿವುಡ್‌ ನಟರಾದ ಶಾರುಖ್‌ ಖಾನ್‌, ಅಕ್ಷಯ್‌ ಕುಮಾರ್‌, 12th ಫೇಲ್‌ ಸಿನಿಮಾ ಖ್ಯಾತಿ ವಿಕ್ರಾಂತ್‌ ಮಾಸ್ಸೆ, ಸೂಪರ್‌ ಸ್ಟಾರ್‌ ರಜನಿಕಾಂತ್‌ ಸೇರಿ ಹಲವು ಗಣ್ಯರು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 293 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 272ರ ಮ್ಯಾಜಿಕ್‌ ನಂಬರ್‌ ಗೆರೆಯನ್ನು ದಾಟಿದೆ. ಇನ್ನು, ಕಳೆದ ಬಾರಿ 303 ಕ್ಷೇತ್ರಗಳಲ್ಲಿ ಜಯಿಸಿದ್ದ ಬಿಜೆಪಿಯ ಕ್ಷೇತ್ರಗಳು ಈ ಬಾರಿ 240ಕ್ಕೆ ಇಳಿಕೆಯಾಗಿದೆ. ಇದರಿಂದಾಗಿ, 10 ವರ್ಷಗಳ ಬಳಿಕ ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ. ಇಂಡಿಯಾ ಒಕ್ಕೂಟವು 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಜಯ ಕಂಡು, ಎರಡನೇ ಬೃಹತ್‌ ಪಕ್ಷ ಎನಿಸಿದೆ.

ಇದನ್ನೂ ಓದಿ: Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Continue Reading

ಪ್ರಮುಖ ಸುದ್ದಿ

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Narendra Modi 3.0: ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

VISTARANEWS.COM


on

Narendra Modi 3.0
Koo

ಬೆಂಗಳೂರು: ಎನ್​ಡಿಎ ಮೈತ್ರಿಕೂಟದ ನೂತನ ಸರ್ಕಾರದಲ್ಲಿ ಪ್ರಧಾನಮಂತ್ರಿಯಾಗಿ (Narendra Modi 3.0) ನರೇಂದ್ರ ಮೋದಿ ಭಾನುವಾರ ಸಂಜೆಯ ವೇಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಅವರ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆದಿದೆ. ಸಾವಿರಾರು ಬೈಕ್​ಗಳ ಮೂಲಕ ಹೊಸಪೇಟೆಯ ಪ್ರಮುಖ ರಸ್ತೆಗಳಲ್ಲಿ ಸಾಗಿದ ಅಭಿಮಾನಿಗಳು ಮೋದಿ ಹಾಗೂ ಕೇಂದ್ರ ಸರ್ಕಾರದ ಪರ ಜೈಕಾರ ಕೂಗಿದ್ದಾರೆ. ನಗರದ ಭಟ್ರಳ್ಳಿ ಆಂಜನೇಯ ದೇಗುಲದಿಂದ ಆರಂಭಗೊಂಡ ಬೈಕ್​ ರ್ಯಾಲಿ ಹೊಸಪೇಟೆ ತಾಲೂಕಿನ ವಿವಿಧ ಹಳ್ಳಿಗಳಿಗೆ ಸಾಗಿದೆ. ಹಂಪಿಗೆ ಹೋಗುವ ಬೈಪಾಸ್ ರಸ್ತೆ, ರಾಮಾ ಥಿಯೇಟರ್, ಪುನೀತ್ ಸರ್ಕಲ್, ಉದ್ಯೋಗ ಪೆಟ್ರೋಲ್ ಬಂಕ್, ಪಟೇಲ್ ನಗರ ಸೇರಿ ಹತ್ತಾರು ಸರ್ಕಲ್ ಗಳಲ್ಲಿ ಬೈಕ್ ರ್ಯಾಲಿ ಸಾಗಿತು. ಮಳೆಯನ್ನೂ ಲೆಕ್ಕಿಸದೇ ಅವರು ಬೈಕ್​ ರ್ಯಾಲಿ ನಡೆಸಲಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಜೆಡಿಎಸ್ ಕಾರ್ಯಕರ್ತರು, ಯುವ ಬ್ರಿಗೇಡ್ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸಾಥ್ ನೀಡಿದರು. ಇದೇ ವೇಳೆ ಪ್ರಮಾಣ ವಚನ ಸಮಾರಂಭ ನೋಡಲು ಬೃಹತ್​ ಎಲ್​ಇಡಿ ಪರದೆಯ ವ್ಯವಸ್ಥೆಯೂ ಮಾಡಲಾಗಿದೆ. ಹೊಸಪೇಟೆಯ ಬಿಜೆಪಿ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

ರಾಮನಗರದಲ್ಲಿ ಕೇಕ್​ ಕತ್ತರಿಸಿದ ಕಾರ್ಯಕರ್ತರು

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಪರಸ್ಪರ ಶುಭ ಕೋರಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್​​ ಮೈತ್ರಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಿಸಿದ್ದರು. ಮೋದಿ 3.0 ಎಂಬ ಕೇಕ್ ಕತ್ತರಿಸಿ ಪರಸ್ಪರ ಸಂಭ್ರಮಿಸಿದ್ದಾರೆ

ಚಿತ್ರದುರ್ಗದಲ್ಲಿ ವಿಶೇಷ ಪೂಜೆ

ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಲು ಚಿತ್ರದುರ್ಗ ಬಿಜೆಪಿ ಘಟಕದಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಮಾಜಿ ಶಾಸಕ ತಿಪ್ಪಾರೆಡ್ಡಿ ಹಾಗೂ ಕಾರ್ಯಕರ್ತರಿಂದ ಪೂಜೆ ಆಯೋಜನೆ ಮಾಡಲಾಗಿತ್ತು. ನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸುಭದ್ರ ಸರ್ಕಾರಕ್ಕಾಗಿ ಪ್ರಾರ್ಥನೆ ಮಾಡಿದರು. ಈ ವೇಳೆ ಮೋದಿ ಭಾವಚಿತ್ರ ಹಿಡಿದು ಜೈಕಾರ ಕೂಗಿದರು.

ಉಜ್ಜಯಿನಿ ಮಠದ ಶ್ರೀಗಳಿಂದ ಶುಭಾಶಯ

ಕೊಟ್ಟೂರು ತಾಲೂಕಿನಲ್ಲಿ ಉಜ್ಜಯಿನಿ ಮಠದ ಶ್ರೀಗಳು ಮೋದಿಗೆ ಶುಭಾಶಯ ಕೋರಿದರು. ಭಾರತ ದೇಶದ ನೇತೃತ್ವವನ್ನು ಮೋದಿ ಅವರು ಮೂರನೇ ಬಾರಿಗೆ ಹಿಡಿಯುತ್ತಿದ್ದಾರೆ. ಭಾರತ ದೇಶಕ್ಕೆ ಸಾವಿರಾರು ವರ್ಷಗಳ ಸನಾತನ ಧರ್ಮದ ಹಿನ್ನೆಲೆ ಇದೆ. ವಿವಿಧತೆಯಲ್ಲಿ ಏಕತೆ ಕಾಣುವ ದೇಶ ಭಾರತ. ಭಾರತ ದೇಶಕ್ಕಾಗಿ ಪ್ರಧಾನಿ ಮೋದಿ ಅವರು ತಮ್ಮದೇ ಆದ ಕನಸು ಕಂಡಿದ್ದಾರೆ ಮೂರನೇ ಅವಧಿಯಲ್ಲಿ ಆ ಎಲ್ಲಾ ಕನಸುಗಳು ಈಡೇರಲಿ ಎಂದು ಅವರು ಆಶಯ ಕೋರಿದರು.

ಹಾವೇರಿಯಲ್ಲಿ ಹೋಳಿಗೆ ಊಟ

ನರೇಂದ್ರ ಮೋದಿ ಮೂರನೆ ಬಾರಿ ಪ್ರಧಾನಿಯಾಗುತ್ತಿರುವುದರ ಖುಷಿಗೆ ಅಭಿಮಾನಿಗಳು ಹೊಳಿಗೆ ಊಟ ವಿತರಿಸಿದರು. ಹಾವೇರಿ ಜಿಲ್ಲೆಯ ರಾಣಿಬೇನ್ನೂರು ತಾಲೂಕಿನ ಹಲಗೇರಿಯಲ್ಲಿ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೋದಿ ಟಿ ಸ್ಟಾಲ್ ಮಾಲೀಕರು ಮತ್ತು ಅಭಿಮಾನಿಗಳಿಂದ ಹೋಳಿಗೆ ಊಟ ವಿತರಣೆ ಮಾಡಲಾಯಿತು. ಬರೊಬ್ಬರಿ ನಾಲ್ಕು ಸಾವಿರ ಮಂದಿಗೆ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬಿರಿಯಾನಿ ವಿತರಣೆ

ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಜತೆಗೆ ಸಿಹಿಯೂ ಹಂಚಲಾಯಿತು. ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಿಹಿ ಹಂಚಿ‌ ಸಂಭ್ರಮಿಸಲಾಯಿತು. ಚಿಂತಾಮಣಿ ನಗರದ ಹೃದಯಭಾಗಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಗೆ ಇಂಧನ ಹಾಕಿಸಲು ಬಂದವರಿಗೆ ಪೆಟ್ರೋಲ್ ಬಂಕ್ ಮಾಲೀಕರಿಂದ ಸಿಹಿ ಹಂಚಿಕೆ ಮಾಡಿದರು. ಅನುಪಮಾರೆಡ್ಡಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮಾಲೀಕ ಬಿರಿಯಾನಿ ಹಂಚಿದ್ದರು.

Continue Reading

Lok Sabha Election 2024

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Modi 3.0 Cabinet: ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಪ್ರಲ್ಹಾದ ಜೋಶಿ ಅವರು ರಾಜ್ಯ ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು. ಇದೇ ವೇಳೆ ಪ್ರಲ್ಹಾದ ಜೋಶಿಯವರಿಗೆ ಸಿಹಿ ತಿನಿಸಿ ಬೆನ್ನು ತಟ್ಟಿ ಬೆಂಬಲಿಸಿದರು.

VISTARANEWS.COM


on

By

Modi 3.0 Cabinet BS Yediyurappa congratulates Pralhad Joshi
Koo

ಹುಬ್ಬಳ್ಳಿ: ನರೇಂದ್ರ ಮೋದಿ (Narendra Modi) ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ (Modi 3.0 Cabinet) ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಭಾನುವಾರ ಪ್ರಮಾಣ ವಚನಕ್ಕೂ ಮುನ್ನ ರಾಜ್ಯ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ಅವರ (BS Yediyurappa) ಆಶೀರ್ವಾದ ಪಡೆದರು. ಎನ್‌ಡಿಎ ಮೈತ್ರಿ ಕೂಟದಿಂದ ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪ್ರಲ್ಹಾದ ಜೋಶಿ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೋದಿ ಅವರ ಎರಡನೇ ಅವಧಿಯಲ್ಲಿ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಖಾತೆ ಸಚಿವರಾಗಿ ಸಮರ್ಥವಾಗಿ ನಿಭಾಯಿಸಿ ಪ್ರಧಾನಿಯಿಂದ ಪ್ರಶಂಸೆ ಪಡೆದಿದ್ದ ಪ್ರಲ್ಹಾದ ಜೋಶಿ ಅವರಿಗೆ ಮತ್ತೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Modi 3.0 Cabinet BS Yediyurappa congratulates Pralhad Joshi

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

ಸಿಹಿ ತಿನಿಸಿ ಬೆನ್ನು ತಟ್ಟಿದ ಬಿಎಸ್‌ವೈ

ಯಡಿಯೂರಪ್ಪ ಅವರು ಜೋಶಿ ಅವರಿಗೆ ಸಿಹಿ ತಿನಿಸಿ ಬೆನ್ನು ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಸಿಹಿ ತಿನಿಸಿ ಸಂಭ್ರಮದಲ್ಲಿ ಭಾಗಿಯಾದರು. ಸಂಸದರಾದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ, ಹರೀಶ್ ಪೂಂಜಾ, ಧಾರವಾಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೋದಿ-ಜೋಶಿ ದಾಖಲೆ

ಕೇಂದ್ರದಲ್ಲಿ ಕಾಂಗ್ರೆಸ್ಸೇತರವಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ, ಇತ್ತ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಅವರದ್ದು ಒಂದು ದಾಖಲೆ ಆಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ 5ನೇ ಬಾರಿ ಗೆಲುವು ಸಾಧಿಸಿ ಮತ್ತೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ಪಡೆಯುವ ಮೂಲಕ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರಲ್ಹಾದ ಜೋಶಿ ಅವರು ಮತ್ತೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕುಟುಂಬದವರಲ್ಲಿ, ಬೆಂಬಲಿಗರಲ್ಲಿ ಮತ್ತು ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi Live: ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

VISTARANEWS.COM


on

Narendra Modi Live
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 293 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ, ಜೆಡಿಎಸ್‌ ಸೇರಿ ಹಲವು ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಪ್ರಮಾಣವಚನ ಕಾರ್ಯಕ್ರಮದ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ…

10 ವರ್ಷದಲ್ಲಿ ಮೋದಿ ಸಾಧನೆಗಳು

ಮೂಲ ಸೌಕರ್ಯ ಅಭಿವೃದ್ಧಿ

ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಶೌಚಾಲಯ ನಿರ್ಮಾಣದಿಂದ ಹಿಡಿದು ಸಾಮಾನ್ಯ ಜನರೂ ವಿಮಾನದಲ್ಲಿ ಪ್ರಯಾಣಿಸುವ ಉಡಾನ್‌ ಯೋಜನೆತನಕ ಮೋದಿ ಆಡಳಿತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾಗಿದೆ. ದೇಶಾದ್ಯಂತ 11.72 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 3.5 ಕೋಟಿ ಮನೆ ನಿರ್ಮಾಣ, ಉಜ್ವಲ ಯೋಜನೆ ಅಡಿಯಲ್ಲಿ 9.6 ಕೋಟಿ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಉಡಾನ್‌ ಯೋಜನೆ ಅಡಿಯಲ್ಲಿ ದೇಶಾದ್ಯಂತ ಇದ್ದ 74 ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 141ಕ್ಕೆ ಏರಿಸಲಾಗಿದೆ. ಜನಧನ್‌ ಯೋಜನೆ ಮೂಲಕ 50 ಕೋಟಿ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ರೈಲು ನಿಲ್ದಾಣಗಳನ್ನು ಅತ್ಯಾಧುನೀಕರಣ ಮಾಡಲಾಗಿದೆ. ರೈಲುಗಳಲ್ಲಿ ಜೈವಿಕ ಶೌಚಾಲಯಗಳ ಅಳವಡಿಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು ದೇಶದ ನರನಾಡಿಗಳಂತೆ ಕಾಣುತ್ತಿವೆ.

ಡಿಜಿಟಲ್‌ ಇಂಡಿಯಾ ಮೇನಿಯಾ

ನರೇಂದ್ರ ಮೋದಿ ಅವರು ಕಂಡ ಡಿಜಿಟಲ್‌ ಇಂಡಿಯಾ ಕನಸು ಬಹುತೇಕ ನನಸಾಗಿದೆ. ಮೊದಲೆಲ್ಲ ಯಾರಿಗಾದರೂ ಹಣ ಕಳುಹಿಸಬೇಕು ಎಂದರೆ ನೆಟ್‌ ಬ್ಯಾಂಕಿಂಗ್‌ ಮೊರೆ ಹೋಗಬೇಕಿತ್ತು. ಇಲ್ಲವೇ, ಬ್ಯಾಂಕ್‌ನಲ್ಲಿ ಕ್ಯೂ ನಿಂತು ಎನ್‌ಇಎಫ್‌ಟಿ (NEFT) ಮಾಡಬೇಕಿತ್ತು. ಆದರೆ, ಡಿಜಿಟಲ್‌ ಇಂಡಿಯಾ ಅಭಿಯಾನವು ಯಶಸ್ವಿಯಾಗಿದ್ದು, ಈಗ ಯುಪಿಐ ಮೂಲಕ ಕ್ಷಣಮಾತ್ರದಲ್ಲಿ ಹಣ ಕಳುಹಿಸಬಹುದಾಗಿದೆ. ಡಿಜಿಟಲ್‌ ಆರ್ಥಿಕತೆ ಸೃಷ್ಟಿಯಾಗಿದೆ. ಗ್ರಾಮದ ಗೂಡಂಗಡಿಗಳಿಂದ ಹಿಡಿದು ನಗರಗಳಲ್ಲಿ ತರಕಾರಿ ಮಾರುವವರೂ ಈಗ ಕ್ಯೂಆರ್‌ ಕೋಡ್‌ ಸ್ಕ್ಯಾನರ್‌ ಇಟ್ಟುಕೊಂಡಿದ್ದಾರೆ. ಸದ್ಯ, ಶೇ. 75ರಷ್ಟು ಚಿಲ್ಲರೆ ವ್ಯಾಪಾರವು ಯುಪಿಐ ಮೂಲಕವೇ ಆಗುತ್ತಿದೆ. ಕೋಟ್ಯಂತರ ಜನ, ಲಕ್ಷಾಂತರ ಕೋಟಿ ರೂಪಾಯಿಯನ್ನು ಯುಪಿಐ ಮೂಲಕವೇ ವರ್ಗಾವಣೆ ಮಾಡುತ್ತಿದ್ದಾರೆ. ಯುಪಿಐ ವ್ಯವಸ್ಥೆಯನ್ನು ಬೇರೆ ದೇಶಗಳೂ ಅಳವಡಿಸಿಕೊಂಡಿವೆ.

Digital Payment

370ನೇ ವಿಧಿ ರದ್ದು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿರುವುದು ನರೇಂದ್ರ ಮೋದಿ ಸರ್ಕಾರದ ದಿಟ್ಟ ತೀರ್ಮಾನಗಳಲ್ಲಿ ಒಂದಾಗಿದೆ. ಉಗ್ರರ ತಾಣವಾಗಿದ್ದ, ಪ್ರತ್ಯೇಕವಾದಿಗಳ ಗೂಡಾಗಿದ್ದ, ಕಲ್ಲು ತೂರಾಟಗಾರರ ಪ್ರಯೋಗ ತಾಣವಾಗಿದ್ದ ಕಾಶ್ಮೀರದಲ್ಲಿ ಈಗ ಜಿ-20 ಸಭೆ ನಡೆಯುವಂತಾಗಿದ್ದರೆ ಅದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣವಾಗಿದೆ. 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದು ಬಳಿಕ ಉಗ್ರರ ಉಪಟಳ ನಿಲ್ಲದಿದ್ದರೂ ಪ್ರತ್ಯೇಕವಾದಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಕಾಶ್ಮೀರದಲ್ಲಿ ವಿದೇಶಿ ಗಣ್ಯರು ಬಂದು ಶಾಪಿಂಗ್‌ ಮಾಡುವಂತಾಗಿದೆ. ಆದರೂ, ಕೇಂದ್ರ ಸರ್ಕಾರವು ಕಾಶ್ಮೀರ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಹಿನ್ನಡೆ ಅನುಭವಿಸಿದ್ದು, ಅದರ ಕುರಿತು ಹೆಚ್ಚಿನ ಗಮನ ಹರಿಸಬೇಕಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೊನೆಯ ಹಂತಕ್ಕೆ ಬಂದಿದ್ದು, ಇದನ್ನು ಸುಗಮವಾಗಿ ಕೈಗೊಂಡ ಕೀರ್ತಿ, ಬಿಜೆಪಿ ನೀಡಿದ ಭರವಸೆಯನ್ನು ಈಡೇರಿಸಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ಪರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ದೇಶಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಂಡಿದ್ದು, ಸುಗಮವಾಗಿ ರಾಮಮಂದಿರ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದು ಕೇಂದ್ರ ಸರ್ಕಾರದ ಸಾಧನೆಯಾಗಿದೆ. ಅಷ್ಟೇ ಅಲ್ಲ, 2024ರ ಜನವರಿಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಸರ್ಕಾರ ಸಿದ್ಧವಾಗಿದೆ. ಹಾಗೆಯೇ, ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.

PM Narendra Modi

ಕೊರೊನಾ ಸಂದರ್ಭದಲ್ಲಿ ಉಚಿತವಾಗಿ ಆಹಾರ ಧಾನ್ಯ ವಿತರಣೆ

ಕೊರೊನಾ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ದೇಶದ ಕೋಟ್ಯಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾಗ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮೂಲಕ (PMGKAY) ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಿದ್ದು ಕೂಡ ಕೇಂದ್ರದ ಸಾಧನೆಯಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುವ ಮೂಲಕ ಜನರ ನೆರವಿಗೆ ಕೇಂದ್ರ ಸರ್ಕಾರ ನಿಂತಿದ್ದು ಸ್ಮರಣೀಯ.

ದೇಶದ ಗಡಿ ಭದ್ರ, ಉಗ್ರರಿಗೆ ತಿರುಗೇಟು

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಗಡಿಗಳು ಮತ್ತಷ್ಟು ಭದ್ರವಾಗಿವೆ. ಉಗ್ರರ ದಾಳಿಗಳು ಬಹುತೇಕವಾಗಿ ನಿಂತುಹೋಗಿವೆ. 2016ರಲ್ಲಿ ಪಾಕಿಸ್ತಾನದ ಉಗ್ರರು ಜಮ್ಮು-ಕಾಶ್ಮೀರದ ಉರಿ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರ ಚಟುವಟಿಕೆಗಳಿಗೆ ಪ್ರತ್ಯುತ್ತರ ನೀಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ, ಕಲ್ಲು ತೂರಾಟ, ಪ್ರತ್ಯೇಕವಾದಿಗಳನ್ನು ಹೆಡೆಮುರಿಕಟ್ಟಿದ್ದು ಮೋದಿ ಸರ್ಕಾರದ ದಿಟ್ಟ ನಿರ್ಧಾರವಾಗಿದೆ.

ಎಲ್ಲರಿಗೂ ಲಸಿಕೆ ವಿತರಣೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶೀಯವಾಗಿ ಕೊರೊನಾ ನಿರೋಧಕ ಲಸಿಕೆ ಉತ್ಪಾದನೆ ಜತೆಗೆ ದೇಶಾದ್ಯಂತ ಕೋಟ್ಯಂತರ ಜನರಿಗೆ ವಿತರಣೆ ಮಾಡಿದ್ದು, ಎರಡು ಲಾಕ್‌ಡೌನ್‌ ಮಾಡಿಯೂ ಆರ್ಥಿಕತೆ ದಿವಾಳಿಯಾಗದಂತೆ ನೋಡಿಕೊಂಡಿದ್ದು, ಆಮ್ಲಜನಕ ಕೊರತೆ, ವೈದ್ಯಕೀಯ ಮೂಲ ಸೌಕರ್ಯಗಳ ಕೊರತೆ ಮಧ್ಯೆಯೂ ಕೊರೊನಾ ನಿರ್ವಹಣೆ ಮಾಡಿದ್ದು ಮೋದಿ ಸರ್ಕಾರದ ಸಾಧನೆ ಎಂಬುದರಲ್ಲಿ ಎರಡು ಮಾತಿಲ್ಲ. ಕೊರೊನಾ ನಿರೋಧಕ ಲಸಿಕೆಯ 200 ಕೋಟಿಗೂ ಅಧಿಕ ಡೋಸ್‌ ವಿತರಣೆ ಮಾಡಿದ್ದು, ಬೇರೆ ರಾಷ್ಟ್ರಗಳಿಗೂ ಲಸಿಕೆ ರವಾನೆ ಮಾಡಿದ್ದು ಸಾಧನೆಯಾಗಿದೆ.

ರೈತರ ಖಾತೆಯಲ್ಲಿ ಕಾಂಚಾಣ ಝಣಝಣ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ವರ್ಷದಲ್ಲಿ ತಲಾ 2 ಸಾವಿರ ರೂ. ನಂತೆ ಮೂರು ಬಾರಿ 6 ಸಾವಿರ ರೂ. ನೀಡುವ ಮೂಲಕ ಕೇಂದ್ರ ಸರ್ಕಾರ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದರಿಂದ ದೇಶದ ಕೋಟ್ಯಂತರ ರೈತರ ಖಾತೆಗೆ ಹಣ ಜಮೆಯಾಗುತ್ತಿದ್ದು, ಯೋಜನೆ ಜಾರಿಯಲ್ಲಿ ಎಲ್ಲೂ ಲೋಪವಾಗದಂತೆ ಕೇಂದ್ರ ಸರ್ಕಾರ ನೋಡಿಕೊಂಡಿದೆ.

ವಿದೇಶಗಳಿಂದ ಭಾರತೀಯರ ರಕ್ಷಣೆ

ಮೋದಿ ಸರ್ಕಾರವು ಎರಡನೇ ಅವಧಿಯ ವೇಳೆ, ಬೇರೆ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ರಕ್ಷಿಸುವಲ್ಲಿ ಬೇರೆ ರಾಷ್ಟ್ರಗಳಿಗೂ ಮಾದರಿ ಎನಿಸಿದೆ. ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಆರಂಭವಾದಾಗ ಕೇಂದ್ರ ಸರ್ಕಾರವು 700 ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ. ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ಆರಂಭಿಸಿದಾಗ 23 ಸಾವಿರ ಭಾರತೀಯರನ್ನು ತಾಯ್ನಾಡಿಗೆ ಕರೆದುಕೊಂಡು ಬಂದಿದೆ. ಅಷ್ಟೇ ಏಕೆ, ಕೆಲ ದಿನಗಳ ಹಿಂದೆಯೇ ಸುಡಾನ್‌ನಲ್ಲಿ ಆಂತರಿಕ ಸಂಘರ್ಷ ಉಂಟಾದಾಗ, ‘ಆಪರೇಷನ್‌ ಕಾವೇರಿ’ ಮೂಲಕ ಕನ್ನಡಿಗರೂ ಸೇರಿ ನೂರಾರು ಭಾರತೀಯರನ್ನು ಸರ್ಕಾರ ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ.

ದೇಶದಲ್ಲಿ ಇಷ್ಟೆಲ್ಲ ಬದಲಾವಣೆಗೆ ಕಾರಣವಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಅವರು ನೆಹರು ಅವರ ದಾಖಲೆಯನ್ನು ಮುರಿಯಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Continue Reading
Advertisement
Narendra Modi
ದೇಶ6 mins ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ11 mins ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ36 mins ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 202457 mins ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ1 hour ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ1 hour ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Narendra Modi Live
ದೇಶ1 hour ago

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Champions Trophy 2025
ಪ್ರಮುಖ ಸುದ್ದಿ2 hours ago

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Fake CBI Gang
ಕ್ರೈಂ2 hours ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್2 hours ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌