Pandit Ganapati Bhat: ಪಂಡಿತ ಗಣಪತಿ ಭಟ್ ಹಾಸಣಗಿಗೆ ಪ್ರತಿಷ್ಠಿತ ತಾನ್‌ಸೇನ್ ಸಮ್ಮಾನ್ ಪುರಸ್ಕಾರ - Vistara News

ಉತ್ತರ ಕನ್ನಡ

Pandit Ganapati Bhat: ಪಂಡಿತ ಗಣಪತಿ ಭಟ್ ಹಾಸಣಗಿಗೆ ಪ್ರತಿಷ್ಠಿತ ತಾನ್‌ಸೇನ್ ಸಮ್ಮಾನ್ ಪುರಸ್ಕಾರ

Pandit Ganapati Bhat: ಡಿಸೆಂಬರ್ 24ರಂದು ಗ್ವಾಲಿಯರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಡಿತ ಗಣಪತಿ ಭಟ್ ಹಾಸಣಗಿ ಅವರಿಗೆ ತಾನ್‌ಸೇನ್ ಸಮ್ಮಾನ್ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

Pandit Ganapati Bhat Hasanagi selected for tansen Sanman Award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ಹಿಂದೂಸ್ತಾನಿ ಸಂಗೀತಗಾರ(hindustani classical vocalist), ಕರ್ನಾಟಕದವರೇ ಆದ ಪಂಡಿತ ಗಣಪತಿ ಭಟ್ ಹಾಸಣಗಿ (Pandit Ganapati Bhat Hasanagi) ಅವರು ಮಧ್ಯ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ತಾನ್‌ಸೇನ್ ಸಮ್ಮಾನ್ ಪುರಸ್ಕಾರಕ್ಕೆ (tansen samman puraskar) ಆಯ್ಕೆಯಾಗಿದ್ದಾರೆ. ಡಿಸೆಂಬರ್ 24ರಂದು ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಗುತ್ತದೆ.

ತಮ್ಮ ಸಂಗೀತ ವಿದ್ವತ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಪಂಡಿತ ಗಣಪತಿ ಭಟ್ ಹಾಸಣಗಿ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಾಸಣಗಿ ಊರಿನವರು. ಪಂಡಿತ ಬಸವರಾಜ ರಾಜಗುರು ಅವರ ಮೆಚ್ಚಿನ ಶಿಷ್ಯರಾದ ಗಣಪತಿ ಭಟ್ ಅವರು, ಕಿರಾಣಾ-ಗ್ವಾಲಿಯರ್ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

1980ರಿಂದ ಪಂಡಿತ ಗಣಪತಿ ಭಟ್ ಅವರು ತಮ್ಮ ಹಾಸಣಗಿ ಗ್ರಾಮದಲ್ಲಿ ಗುರುಕುಲ ಮಾದರಿಯಲ್ಲಿ ಹಿಂದೂಸ್ತಾನಿ ಸಂಗೀತ ತರಬೇತಿ ಶಾಲೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಹುಬ್ಬಳ್ಳಿಯ ಡಾ. ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ನಲ್ಲಿ ಸ್ಥಾನಿಕ ಗುರುಗಳಾಗಿದ್ದಾರೆ.

ಪಂಡಿತ ಗಣಪತಿ ಭಟ್ ಅವರು 1979ರಿಂದ ಅಖಿಲ ಭಾರತ ಆಕಾಶವಾಣಿಯಲ್ಲಿ ಬಿ ಹೈ ಗ್ರೇಡ್ ಕಲಾವಿದರಾಗಿದ್ದರು. ಬಳಿಕ 1988ರಿಂದ ಎ ಗ್ರೇಡ್ ಕಲಾವಿದರಾಗಿ ಗುರುತಿಸಿಕೊಂಡರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾಗಿ 1995ರಿಂದ 1998ರವರೆಗೆ ಕೆಲಸ ಮಾಡಿದ್ದಾರೆ. 2001ರಿಂದ 2003ರವರೆಗೆ ಭಾರತ ಸರ್ಕಾರದ ಎಚ್‌ಆರ್‌ಡಿ ಮ್ಯೂಸಿಕ್ ಎಕ್ಸ್‌ಪರ್ಟ್ ಸಮಿತಿಯ ಸದಸ್ಯರಾಗಿದ್ದರು. ಅವರು ಆಕಾಶವಾಣಿ ಆಡಿಷನ್ ಸಮಿತಿಯ ಸದಸ್ಯರೂ ಆಗಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಂಗೀತ ವಿಭಾಗದ ಪರೀಕ್ಷಾ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

ಪಂಡಿತ ಗಣಪತಿ ಭಟ್ ಹಾಸಣಗಿ ಅವರಿಗೆ 1993ರಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. 2007ರಲ್ಲಿ ಕರ್ನಾಟಕ ಸಂಗೀತ ನಾಟಕ ನೃತ್ಯ ಅಕಾಡೆಮಿ ಪ್ರಶಸ್ತಿ, ಪುಣೆಯ ಆರ್ಯ ಪ್ರಸಾರಕ ಮಂಡಳ ನೀಡುವ ವತ್ಸಲಾಬಾಯಿ ಭೀಮಸೇನ ಜೋಶಿ ಅವಾರ್ಡ್(2006), ಪುಟ್ಟರಾಜ ಗವಾಯಿ ಪ್ರಶಸ್ತಿ(2015), ನಿಜಗುಣ ಪುರಂದರ ಪ್ರಶಸ್ತಿ(2017), ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ(2020) ಸೇರಿ ಹಲವು ಪ್ರಶಸ್ತಿಗಳನ್ನು ಪಂಡಿತ ಗಣಪತಿ ಭಟ್ ಹಾಸಣಗಿ ಅವರನ್ನು ಅರಸಿ ಬಂದಿವೆ.

ಈ ಸುದ್ದಿಯನ್ನೂ ಓದಿ: Nobel Peace Prize:‌ ನೊಬೆಲ್ ಶಾಂತಿ ಪ್ರಶಸ್ತಿ ಪ್ರದಾನ, ಜೈಲಿನಲ್ಲಿರುವ ಪುರಸ್ಕೃತೆಗಾಗಿ ಖಾಲಿ ಕುರ್ಚಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Traffic violation : ಬೈಕ್‌ ಓಡಿಸುವಾಗ ಸವಾರರು ಹೆಲ್ಮೆಟ್‌ ಹಾಕಿಲ್ಲವೆಂದರೆ ದಂಡ ವಿಧಿಸುವುದು ಮಾಮೂಲಿ. ಆದರೆ ಹೊನ್ನಾವರದಲ್ಲಿ ಟಿಪ್ಪರ್‌ ಲಾರಿ ಚಾಲಕ ಹೆಲ್ಮೆಟ್‌ ಧರಿಸದೇ ಇರುವುದಕ್ಕೆ ದಂಡ ತೆತ್ತಿದ್ದಾನೆ. ಟ್ರಾಫಿಕ್‌ ಪೊಲೀಸರ ಈ ಎಡವಟ್ಟು ಈಗ ನಗೆಪಾಟಲಿಗೆ ಕಾರಣವಾಗಿದೆ. ಟಿಪ್ಪರ್‌ ಲಾರಿ ಚಾಲಕನಿಗೆ ನೀಡಿರುವ ರಶೀದಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

By

traffic violation
Koo

ಕಾರವಾರ: ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್‌ ಪೊಲೀಸರು ದಂಡ ಹಾಕಿ (Traffic violation) ರಶೀದಿ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಘಟನೆ ನಡೆದಿದೆ.

ಹೊನ್ನಾವರದ ಉಸುಕು ಸಾಗಾಟದ ಟಿಪ್ಪರ್ ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿದ್ದಾರೆ. ಹೊನ್ನಾವರದ ಉಪ್ಪೋಣಿಯ ವಿನುತಾ ವಿನೋದ ನಾಯ್ಕ ಮಾಲೀಕತ್ವದ ಟಿಪ್ಪರ್ ಲಾರಿಯನ್ನು ಚಾಲಕ ಚಂದ್ರಕಾಂತ ಎಂಬಾತ ಚಲಾಯಿಸುತ್ತಿದ್ದ.

ಚಂದ್ರಕಾಂತ ಸಮವಸ್ತ್ರ ಧರಿಸದೇ ವಾಹನ ಚಲಾಯಿಸಿದ್ದನ್ನು ಕಂಡು ಪೊಲೀಸರು ವಾಹನವನ್ನು ತಡೆದಿದ್ದರು. ಈ ವೇಳೆ ಹೆಲ್ಮೆಟ್ ಧರಿಸದ ಕಾರಣಕ್ಕೆ ರಶೀದಿ ನೀಡಿ 500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇತ್ತ ದಂಡದ ರಶೀದಿ ಕಂಡು ಟಿಪ್ಪರ್ ಚಾಲಕ ಅವಾಕ್ಕಾಗಿದ್ದಾರೆ.

ಇನ್ನು ಟಿಪ್ಪರ್ ಲಾರಿ ಚಾಲಕನ ಹೆಲ್ಮೆಟ್ ದಂಡದ ರಶೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೇ ದಂಡ ಹಾಕುವಾಗ ಸಮವಸ್ತ್ರದ ಬದಲು ಹೆಲ್ಮೆಟ್ ಆಯ್ಕೆಯಾಗಿರುವುದು ಇದಕ್ಕೆಲ್ಲ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ಬೆಂಗಳೂರು: ಮದುವೆ ಎನ್ನುವುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎನ್ನುವ ಮಾತಿದೆ. ಜತೆಗೆ ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಶಾಸ್ತ್ರೋಕ್ತವಾಗಿ ವಧು-ವರರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಈ ಅಪರೂಪದ ಘಳಿಗೆಯನ್ನು ಸ್ಮರಣೀಯವಾಗಿಸಲು ಮೊದಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತದೆ. ಆದರೆ ಕೆಲವೊಮ್ಮೆ ಮದುವೆ ಮನೆಯಲ್ಲಿ ನಡೆಯುವ ಎಡವಟ್ಟುಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗುತ್ತವೆ. ಸದ್ಯ ಅಂತಹದ್ದೇ ವಿಡಿಯೊವೊಂದು ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ (Viral Video).

ಅದ್ಧೂರಿ ಮದುವೆಯೊಂದನ್ನು ಆಯೋಜಿಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ವಧು ವಿಚಿತ್ರವಾಗಿ ಆಡಲು ಶುರು ಮಾಡುತ್ತಾಳೆ. ಅದುವರೆಗೆ ಸಂತೋಷದಿಂದ ಕೂಡಿದ್ದ ಮದುವೆ ಹಾಲ್‌ ಗೊಂದಲದ ಗೂಡಾಗುತ್ತದೆ. ಈ ವಿಡಿಯೊದ ಮೂಲ ಎಲ್ಲಿ ಎನ್ನುವುದು ಪತ್ತೆಯಾಗಿಲ್ಲ. ಸದ್ಯ ವೈರಲ್‌ ಆಗಿರುವ ಈ ವಿಡಿಯೊವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಅ‍ದ್ಧೂರಿ ವಿವಾಹ ಮಂಟಪ. ಬಲ್ಪ್‌, ಹೂಗಳಿಂದ ಅಲಂಕರಿಸಿರುವ ಈ ಮಂಟಪದ ಆಸನದಲ್ಲಿ ಚೆನ್ನಾಗಿ ಮೇಕಪ್‌ ಮಾಡಿಕೊಂಡ ವಧು ಕೂತಿರುತ್ತಾಳೆ. ಆಕೆಯ ಎದುರು ವರ ನಿಂತಿದ್ದರೆ ಸುತ್ತ ನೆಂಟರಿಷ್ಟರು ನೆರೆದಿದ್ದಾರೆ. ಇದ್ದಕ್ಕಿದ್ದಂತೆ ವದು ಮೈಮೇಲೆ ದೆವ್ವ ಬಂದಂತೆ ಆಡಲು ಶುರು ಮಾಡುತ್ತಾಳೆ. ಕಣ್ಣನ್ನು ವಿಚಿತ್ರವಾಗಿ ತಿರುಗಿಸಿ ಅಕ್ಷರಶಃ ʼಆಪ್ತಮಿತ್ರʼ ಸಿನಿಮಾದಲ್ಲಿ ಬರುವ ನಾಗವಲ್ಲಿ ಅವತಾರ ತಾಳುತ್ತಾಳೆ. ಕೂದಲನ್ನು ಬಿಚ್ಚಿ ಹಾಕಿ ದೆವ್ವ ಮೈಮೇಲೆ ಬಂದವರು ಆಡುತ್ತಾರೆ ಎನ್ನುತ್ತಾರ ಹಾಗೆ ವರ್ತಿಸುತ್ತಾಳೆ. ಜತೆಗೆ ಜೋರಾಗಿ ನಗುತ್ತಾಳೆ. ಇದರಿಂದ ಬೆಚ್ಚಿಬೀಳುವ ವರ ಹಾರಿ ಬೀಳುತ್ತಾನೆ. ಸುತ್ತಲಿದ್ದವರು ಭಯ, ಗೊಂದಲದಲ್ಲಿ ಏನು ಮಾಡಬೇಕೆಂದು ತೋಚದೆ ದಿಗ್ಭ್ರಾಂತರಾಗಿ ನಿಲ್ಲುತ್ತಾರೆ. ಆಗ ಆಕೆಯ ಸಂಬಂಧಿಕರಿಬ್ಬರು ಧೈರ್ಯದಿಂದ ಮುಂದೆ ಬಂದು ಆಕೆಯನ್ನು ಹಿಡಿದುಕೊಳ್ಳುತ್ತಾರೆ. ಇವಿಷ್ಟು ವಿಡಿಯೊದಲ್ಲಿ ಕಂಡು ಬಂದಿದೆ.

ನೆಟ್ಟಿಗರು ಏನಂದ್ರು?

ಕೇವಲ 17 ಸೆಕೆಂಡ್‌ಗಳ ಈ ವಿಡಿಯೊದ ಬಗ್ಗೆಯೇ ಚರ್ಚೆ ಆರಂಭವಾಗಿದೆ. ಹಲವರು ವಿಡಿಯೊ ನೋಡಿ ಅಲ್ಲಿದ್ದವರಂತೆ ಶಾಕ್‌ಗೆ ಒಳಗಾಗಿದ್ದಾರೆ. ಪಾಪದ ವರ ಇದನ್ನು ನೋಡಿ ಕೋಮಾಕ್ಕೆ ಜಾರಿರಬೇಕು ಎನ್ನುವ ಕ್ಯಾಪ್ಶನ್‌ ನೀಡಿ ವಿಡಿಯೊ ಹಂಚಿಕೊಳ್ಳಲಾಗಿದೆ. ಕೆಲವರು ಇದನ್ನು ಪೂರ್ವ ನಿಯೋಜಿತ ಎಂದು ಕರೆದಿದ್ದಾರೆ. ಹೆಚ್ಚು ವ್ಯೂವ್ಸ್‌ ಪಡೆದುಕೊಳ್ಳಲು ಬೇಕಂತಲೇ ನಾಟಕ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೊ ನೋಡಿದ ಕೆಲವರು ನಾಗವಲ್ಲಿ ಪಾತ್ರವನ್ನು ನೆಪಿಸಿಕೊಂಡಿದ್ದಾರೆ. ಇನ್ನು ಕೆಲವರು ಇದು ನಿಜವೆ? ಎಲ್ಲಿ ನಡೆದಿರುವುದು? ಮುಂತಾಗಿ ಪ್ರಶ್ನಿಸಿದ್ದಾರೆ.

ಇನ್ನೊಂದು ವಿಡಿಯೊ

ಇದೇ ರೀತಿಯ ಇನ್ನೊಂದು ಘಟನೆಯ ವಿಡಿಯೊ ಕೂಡ ಇದೀಗ ಸದ್ದು ಮಾಡುತ್ತಿದೆ. ಇದರಲ್ಲಿ ಈ ವಧು-ವರರಿಬ್ಬರು ವೇದಿಕೆ ಮೇಲೆ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ವರ ಚಪ್ಪಲಿ ಕೈಯಲ್ಲಿ ಹಿಡಿದು ಹಲ್ಲೆಗೆ ಮುಂದಾದರೆ ತಾನು ಯಾವುದರಲ್ಲಿಯೂ ಕಡಿಮೆ ಇಲ್ಲ ಎನ್ನುವಂತೆ ವಧು ಕೂಡ ಪ್ರತಿ ದಾಳಿ ನಡೆಸುತ್ತಾಳೆ. ಪಕ್ಕದಲ್ಲಿದ್ದವರು ತಡೆಯಲು ಪ್ರಯತ್ನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Uttara Kannada News: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಯಲ್ಲಾಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Yallapur Tehsildar Tanuja T savadatti instructed to create awareness about infectious diseases
Koo

ಯಲ್ಲಾಪುರ: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ (infectious diseases) ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ (Uttara Kannada News) ಹೇಳಿದರು.

ಶುಕ್ರವಾರ ಮಿನಿ ವಿಧಾನಸೌಧದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತು ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲೀಚಿಂಗ್ ಪೌಂಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ಡೆಂಗ್ಯೂ, ಚಿಕುನ್‌ಗುನ್ಯ, ಮಲೇರಿಯಾ, ಆನೆಕಾಲುರೋಗ, ಮೆದುಳು ಜ್ವರಗಳ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ಕಲುಷಿತ ನೀರಿನಿಂದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವುದು ಸೂಕ್ತ. ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡಬೇಕು ಎಂದ ಅವರು, ಓ.ಆರ್.ಎಸ್. ತಯಾರಿಸಿ ಬಳಸುವ ವಿಧಾನ, ಸೊಳ್ಳೆ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಲಸಿಕಾ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರ್‌.ಸಿ.ಎಚ್.‌ ಅಧಿಕಾರಿ ಡಾ. ನಟರಾಜ್‌ ಕೆ., ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ದಡಾರ ಕೂಡ ಒಂದಾಗಿದ್ದು, ದಡಾರ ನಿರ್ಮೂಲನೆಗೆ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಸಭೆಯಲ್ಲಿ ಬಿಪಿಎಂ ಎಸ್‌.ಎಸ್‌. ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ ವಂದಿಸಿದರು.

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ13 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ25 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ40 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ41 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್48 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್49 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ54 mins ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್58 mins ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌