ಮಹಿಳೆ ಮೇಲೆ ಹಲ್ಲೆ ಪ್ರಕರಣ; ಮೂಕ ಪ್ರೇಕ್ಷಕರಾಗಿದ್ದ ಗ್ರಾಮಸ್ಥರಿಗೆ ಹೈಕೋರ್ಟ್ ದಂಡ - Vistara News

ಕರ್ನಾಟಕ

ಮಹಿಳೆ ಮೇಲೆ ಹಲ್ಲೆ ಪ್ರಕರಣ; ಮೂಕ ಪ್ರೇಕ್ಷಕರಾಗಿದ್ದ ಗ್ರಾಮಸ್ಥರಿಗೆ ಹೈಕೋರ್ಟ್ ದಂಡ

ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿದ್ದು, ಈಗಾಗಲೇ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Pepper spray
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ (Woman Assault Case) ಗ್ರಾಮಸ್ಥರ ವರ್ತನೆ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದೆ. ಮಹಿಳೆ ಮೇಲೆ ಹಲ್ಲೆ ನಡೆಯುತ್ತಿದ್ದರೆ ಮೂಕ ಪ್ರೇಕ್ಷಕರಾಗಿ ನಿಂತಿದ್ದ ಗ್ರಾಮಸ್ಥರಿಗೆ ದಂಡ ವಿಧಿಸಿ, ಆ ಹಣವನ್ನು ಸಂತ್ರಸ್ತೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಡ್‌ ಸೂಚಿಸಿದೆ.

ನ್ಯಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ ಕೃಷ್ಣ ದೀಕ್ಷಿತರಿದ್ದ ಪೀಠ ಪಿಐಎಲ್ ಅರ್ಜಿ ವಿಚಾರಣೆಯನ್ನು ನಡೆಸಿದ್ದು, ಹಲ್ಲೆ ಆಗುತ್ತಿದ್ದರು ಸುಮ್ಮನೆ ನಿಂತ ಜನರ ವರ್ತನೆಯನ್ನು ಖಂಡಿಸಿದ್ದಾರೆ. ಗ್ರಾಮದ ಎಲ್ಲರಿಗೂ, ನಿರ್ದಿಷ್ಟವಾಗಿ ತಪ್ಪು ಮಾಡಿದವರು ಹಣ ಪಾವತಿಸುವಂತೆ ಮಾಡಬೇಕು. ಬ್ರಿಟಿಷ್ ಗವರ್ನರ್‌ ಜನರಲ್‌ ವಿಲಿಯಮ್‌ ಬೆಂಟಿಂಕ್‌ ಆಡಳಿತದಲ್ಲಿ ಕಳ್ಳರು ಇರುವ ಗ್ರಾಮಕ್ಕೆ ಪುಂಡ ದಂಡ ಎಂಬ ತೆರಿಗೆ ವಿಧಿಸುತ್ತಿದ್ದ. ಅದೇ ರೀತಿಯಲ್ಲಿ ತೆರಿಗೆ ವಿಧಿಸಿದಲ್ಲಿ ಗ್ರಾಮಗಳಲ್ಲಿ ಜನರಿಗೆ ಸ್ವಲ್ಪ ಜವಾಬ್ದಾರಿ ಹೆಚ್ಚಾಗಲಿದೆ. ಆಗ ಇಂತಹ ಘಟನೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಮೌನವಾಗಿರದೆ ತಡೆಯಲು ಯತ್ನಿಸುತ್ತಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪ್ರಕರಣದಲ್ಲಿ ಗ್ರಾಮಸ್ಥರ ಪಾತ್ರ ಏನಿದೆ? ಈ ಘಟನೆಗೆ ಜನರು ಏಕೆ ಮೂಕಪ್ರೇಕ್ಷಕರಾಗಿದ್ದರು ಎಂಬುದಕ್ಕೆ ಕಾರಣಗಳಿವೆಯೇ? ಅವರು ಪೊಲೀಸ್‌, ನ್ಯಾಯಾಂಗ, ರಾಜಕೀಯ ವ್ಯಕ್ತಿಗಳಿಗೆ ಹೆದರಿದ್ದಾರೆಯೇ ಎಂದು ನ್ಯಾಯಪೀಠ ಪ್ರಶ್ನಿಸಿದ್ದು, ಜನರು ಏಕೆ ಅಪರಾಧದ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂಬ ವಿಚಾರವನ್ನು ನಿರ್ಲಕ್ಷಿಸಲಾಗದು. ಘಟನೆ ನಡೆಯುತ್ತಿದ್ದರೂ ಇಡೀ ಗ್ರಾಮದಲ್ಲಿ ಯಾರೂ ಏಕೆ ಮುಂದೆ ಬರಲಿಲ್ಲ. ಈ ವಿಚಾರಗಳನ್ನು ತನಿಖಾ ಅಧಿಕಾರಿಗಳು ಸಂಗ್ರಹಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ | Murder Case : ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಸಿಐಡಿ ತನಿಖೆ ಆರಂಭ

ಮಹಿಳೆ ಮೇಲೆ ಹಲ್ಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಪ್ರಕರಣದ ತನಿಖೆಗಾಗಿ ಸಿಐಡಿ ಡಿಐಜಿ ಸುಧೀರಕುಮಾರ್‌ ರೆಡ್ಡಿ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರವಷ್ಟೇ ಸಿಐಡಿ ಎಸ್ಪಿ ಪೃಥ್ವಿಕ್‌, ರಶ್ಮಿ ಪರಡ್ಡಿ ಹಾಗೂ ಡಿವೈಎಸ್‌ಪಿ ಅಂಜುಮಳ ನಾಯಕ ಸೇರಿ 6 ಜನರ ತಂಡ ನಗರಕ್ಕೆ ಆಗಮಿಸಿತ್ತು.

ಕಾಕತಿ ಪೊಲೀಸ್ ಠಾಣೆಯಿಂದ ಫೈಲ್ ಪಡೆದಿರುವ ಸಿಐಡಿ ತಂಡ ತನಿಖೆ ಆರಂಭಿಸಿದೆ. ಸಂತ್ರಸ್ತೆ, ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು, ಸದ್ಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾಹಿತಿ ಪಡೆಯಲಿದ್ದಾರೆ.

ಮಾನವ ಹಕ್ಕುಗಳ ಆಯೋಗದ ಡಿಐಜಿ ಆಗಮನ

ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ಕಲೆ ಹಾಕಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲಕುಮಾರ್ ಮೀನಾ ಅವರು ದೆಹಲಿಯಿಂದ ಬೆಳಗಾವಿಗೆ ಆಗಮಿಸಿದ್ದಾರೆ. ಘಟನಾ ಸ್ಥಳ ವಂಟಮೂರಿ ಗ್ರಾಮಕ್ಕೆ ತೆರಳಿದ್ದ ಅವರು, ಸಂತ್ರಸ್ತೆಯ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ನಂತರ ನೆರೆ ಹೊರೆಯ ಜನರಿಂದ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಈಗಾಗಲೇ ಘಟನಾ ಸ್ಥಳಕ್ಕೆ ಬಿಜೆಪಿ ರಾಷ್ಟ್ರೀಯ ‌ಸತ್ಯಶೋಧನಾ ಸಮಿತಿ, ರಾಷ್ಟ್ರೀಯ ‌ಮಹಿಳಾ ಆಯೋಗ ಹಾಗೂ ಪರಿಶಿಷ್ಟ ಪಂಗಡಗಳ ಆಯೋಗವೂ ಭೇಟಿ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಸಿಐಡಿ ಹಾಗೂ ಸ್ಥಳೀಯ ಪೊಲೀಸರ ಸಭೆ ನಡೆಸಿದ್ದು, ಘಟನೆಯ ಸಂಪೂರ್ಣ ವಿವರವನ್ನು ಸಿಐಡಿ ಡಿಜಿಪಿ ಪಡೆದಿದ್ದಾರೆ.

ಇದನ್ನೂ ಓದಿ | ನಾದಿನಿ ಜತೆ ಅನೈತಿಕ ಸಂಬಂಧ; ಹೆಂಡ್ತಿಗೆ ಗೊತ್ತಾಗಿದ್ದಕ್ಕೆ ಇಬ್ಬರೂ ನೇಣಿಗೆ ಶರಣು

ಏನಿದು ಘಟನೆ?

ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದರು. ಡಿ.10ರಂದು ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯ, ಮಾತ್ರವಲ್ಲದೆ ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು 11 ಮಂದಿಯನ್ನು ಬಂಧಿಸಿದ್ದು, ಪ್ರಕರಣದ ತನಿಕೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Murder case: ರೇಣುಕಾ ಸ್ವಾಮಿ ಎಂಬಾತ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಬಂಧಿಯಾಗಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬೇಡ ಜಂಗಮ ಸಮುದಾಯದವರು ಒತ್ತಾಯಿಸಿದ್ದಾರೆ.

VISTARANEWS.COM


on

By

actor Darshan
Koo

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧಿಯಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯವು ಕೇಳಿ ಬಂದಿದೆ. ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಮೃತ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ದರ್ಶನ್‌, ಪವಿತ್ರಗೌಡ ಸೇರಿ 13 ಮಂದಿ ಬಂಧನ

ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರೀಗ ಗಂಭೀರ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ (Renukaswamy) ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ದರ್ಶನ್‌ ಅವರ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 364ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ಇನ್ನು ಗೋಡೌನ್‌ನಲ್ಲಿ ಇರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ. ಹಾಗಾಗಿ, ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕೇಸ್‌ ದಾಖಲಾಗಲಿದೆ. ಇನ್ನು ಹತ್ಯೆ ಬಳಿಕ ಶವವನ್ನು ಬಿಸಾಕಿದ ಕಾರಣ ಸಾಕ್ಷ್ಯ ನಾಶದ ಪ್ರಕರಣವನ್ನೂ ಸೇರಿಸಲಾಗುತ್ತದೆ. ಹಾಗಾಗಿ, ಯಾವ ಪ್ರಕರಣಗಳಲ್ಲಿ ಆರೋಪ ಸಾಬೀತಾದರೂ ದರ್ಶನ್‌ ಅವರಿಗೆ ಜೈಲು ಶಿಕ್ಷೆಯಾಗಲಿದೆ. ಕೊಲೆ ಕೇಸ್‌ನಲ್ಲಿ ಆರೋಪ ಸಾಬೀತಾದರಂತೂ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

Bengaluru News: ಬೆಂಗಳೂರಿನ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಇದೇ ಜೂ. 29ರಂದು ಶನಿವಾರ ಸಂಜೆ 5.30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಭಾರತ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನಾ ಸಮಾರಂಭ ಹಾಗೂ ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Lifetime achievement felicitation ceremony for retired Judge Chandrashekharaiah on June 29 in Bengaluru
Koo

ಬೆಂಗಳೂರು: ಬೆಂಗಳೂರಿನ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಇದೇ ಜೂ. 29ರಂದು ಶನಿವಾರ ಸಂಜೆ 5.30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಭಾರತ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನಾ ಸಮಾರಂಭ ಹಾಗೂ ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಇದನ್ನೂ ಓದಿ: Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ, ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಕರ್ನಾಟಕ ಕರ್ನಾಟಕ ಹೈಕೋರ್ಟ್‌ ನ್ಯಾ. ಟಿ. ಜಿ. ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜಸ್ಥಾನ ಐಜಿಪಿ ರಾಘವೇಂದ್ರ ಸುಹಾಸ್‌, ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಜೀತ್‌ ವಿ.ಜೆ., ಡಾ.ಎನ್‌.ಎಸ್‌. ನಾಗೇಶ್‌ ಪಾಲ್ಗೊಳ್ಳುವರು. ವಿಶೇಷ ಅತಿಥಿಗಳಾಗಿ ಐಎಎಸ್‌ ಅಧಿಕಾರಿಗಳಾದ ಪ್ರದೀಪ್‌ ಪ್ರಭಾಕರ್‌, ಮಂಜುಶ್ರೀ ಎನ್‌. ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಾಗೇಂದ್ರ ಬಾಬು, ಶಶಾಂತ್‌ ಎನ್‌.ಎಂ., ಸುಮಾ ಎಚ್‌.ಕೆ., ನವ್ಯ ಕೆ., ಚಂದನ್‌ ಬಿ.ಎಸ್‌., ಡಾ. ವಿವೇಕ್‌, ಲೇಖನ್‌ ಎಂ., ರಕ್ಷಿತ್‌ ಕೆ. ಗೌಡ, ರಾಹುಲ್‌ ಗೌಡ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್‌ ಮತ್ತು ಎನ್‌.ಆರ್‌.ಐ ಒಕ್ಕಲಿಗರ ಬ್ರಿಗೇಡ್‌ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ.

Continue Reading

ಮೈಸೂರು

Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Murder case : ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿಯನ್ನು ಕೊಂದಿದ್ದ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆರೋಪಿಯನ್ನು ಕೆಆರ್‌ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

murder case
ವಿಷ ಸೇವಿಸಿದ ರವಿ ಹಾಗೂ ಕೊಲೆಯಾದ ಸ್ವಾಮೀಜಿ ಶಿವಾನಂದ
Koo

ಮೈಸೂರು: ಮೈಸೂರಿನ ಸಿದ್ದಾರ್ಥನಗರದಲ್ಲಿ ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಅವರ ಆಪ್ತ ಸಹಾಯಕನಿಂದಲೇ ಬರ್ಬರವಾಗಿ ಕೊಂದು (Murder case ) ಹಾಕಿದ್ದ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ರವಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿದ್ದ ಆರೋಪಿ ರವಿಯನ್ನು ಪೊಲೀಸರು ಕೆಆರ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಡಿತದ ಚಟಕ್ಕೆ ಒಳಗಾಗಿದ್ದ ರವಿಗೆ ಶಿವಾನಂದ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಸ್ವಾಮೀಜಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ರವಿ ಕೊಲೆ ಮಾಡಿದ್ದ ಎನ್ನಲಾಗಿದೆ. ಸದ್ಯ ಆರೋಪಿ‌ ರವಿ ಗುಣಮುಖನಾದ ಬಳಿಕ ಪೊಲೀಸರು ತನಿಖೆಯನ್ನು ಮುಂದುವರಿಸಲಿದ್ದಾರೆ.

ಇದನ್ನೂ ಓದಿ:Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಏನಿದು ಪ್ರಕರಣ?

ನಿನ್ನೆ ಸೋಮವಾರ (ಜೂ.10) ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿತ್ತು. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿತ್ತು.

ರವಿ (60) ಎಂಬಾತನಿಂದ ಈ ಕೃತ್ಯ ನಡೆದಿತ್ತು. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Koratagere News: ಗ್ರಾಮೀಣ ಹೆಣ್ಣುಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಮಹಿಳಾ ಆಯೋಗದ ಅಧ್ಯಕ್ಷೆ

Koratagere News: ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಸಾಡಿಹಟ್ಟಿ ಗ್ರಾಮದಲ್ಲಿ ಸೋಮವಾರ ಮೌಢ್ಯಾಚರಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

VISTARANEWS.COM


on

Womens Commission president Dr Nagalakshmi Chaudhary visit bisaadihatti village
Koo

ಕೊರಟಗೆರೆ: ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು ಮೊದಲ ಆದ್ಯತೆಯಾಗಿದೆ. ಹೆಣ್ಣು ಮಕ್ಕಳು ವಿದ್ಯಾವಂತರಾಗಿ, ಆರೋಗ್ಯವಂತರಾಗಿ ಮೌಢ್ಯರಹಿತ ಸಮಾಜದಲ್ಲಿ ಸಂತೋಷದಿಂದ ಬದುಕಬೇಕು ಎಂಬುದೇ ಆಯೋಗದ ಆಶಯವಾಗಿದೆ. ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ (Koratagere News) ತಿಳಿಸಿದರು.

ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಸಾಡಿಹಟ್ಟಿ ಗ್ರಾಮದಲ್ಲಿ ಸೋಮವಾರ ಮೌಢ್ಯಾಚರಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಕುಡಿಯುವ ನೀರು ಮತ್ತು ಶೌಚಾಲಯ ಅತಿ ಮುಖ್ಯ. ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛ ಶೌಚಾಲಯದ ವ್ಯವಸ್ಥೆಯಿದ್ದಲ್ಲಿ ಗ್ರಾಮೀಣ ಭಾಗದ ಮಹಿಳೆಯರು ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

ರಾಜ್ಯ ಸರ್ಕಾರವು ಬಾಣಂತಿ ಮತ್ತು ಮಗುವಿಗಾಗಿ, ಕೃಷ್ಣ ಕುಟೀರ ನಿರ್ಮಿಸಿದ್ದು .ಈ ಕುಟೀರದಲ್ಲಿ ಬಾಣಂತಿಯರಿಗೆ ಅಗತ್ಯವಾದ ಬಿಸಿನೀರು, ಶುದ್ಧ ಕುಡಿಯುವ ನೀರು ಮತ್ತು ಇತರೆ ಮೂಲ ಸೌಕರ್ಯಗಳು ಹೆಚ್ಚು ಹೆಚ್ಚು ದೊರೆಯಬೇಕು, ಈ ವಿಷಯವನ್ನು ತಾವು ಸರ್ಕಾರದ ಗಮನಕ್ಕೆ ತರುವುದಾಗಿ ಅವರು ತಿಳಿಸಿದರು.

ಮನೆಯಲ್ಲಿ ದೌರ್ಜನ್ಯ ನಡೆದ ಸಂದರ್ಭ ಹೆಣ್ಣು ಮಕ್ಕಳು 112 ಸಹಾಯವಾಣಿಗೆ ಕರೆ ಮಾಡಬೇಕು. ಆಗ ತಕ್ಷಣ ಪೊಲೀಸರ ಪ್ರವೇಶವಾಗುವುದು. ಠಾಣೆಯಲ್ಲಿ ಹೆಣ್ಣು ಮಕ್ಕಳನ್ನು ಸರಿಯಾಗಿ ನಡೆಸಿಕೊಳ್ಳದಿದ್ದಲ್ಲಿ ಅಥವಾ ಸ್ಪಂದಿಸದಿದ್ದಲ್ಲಿ ಮಹಿಳಾ ಆಯೋಗವನ್ನು ಸಂಪರ್ಕಿಸಬಹುದು. ಮಹಿಳೆಯರು ಯಾವುದೇ ಸಂದರ್ಭದಲ್ಲೂ ಸಹ ಸಮಸ್ಯೆ ಉಂಟಾದಲ್ಲಿ ತಮಗೆ ಮೆಸೇಜ್ ಮಾಡುವ ಮೂಲಕ ಅಥವಾ ವಾಟ್ಸಪ್ ಮೂಲಕ ಧೈರ್ಯವಾಗಿ ಸಂಪರ್ಕಿಸಬಹುದಾಗಿರುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಬಹುತೇಕ ಬಡ ಹೆಣ್ಣು ಮಕ್ಕಳು ವಾಸಿಸುವ ಮನೆಗಳು ಸೋರುತ್ತವೆ, ಯಾವಾಗ ಬಿದ್ದು ಹೋಗುತ್ತವೆ ತಿಳಿಯುವುದಿಲ್ಲ. ಆದುದರಿಂದ ಮೊದಲಿಗೆ ಅರ್ಹ ಮಹಿಳಾ ಫಲಾನುಭವಿಗಳಿಗೆ ವಸತಿ ವ್ಯವಸ್ಥೆಯಾಗಬೇಕು. ಶುದ್ಧ ಕುಡಿಯುವ ನೀರು ಉತ್ತಮ ರಸ್ತೆ, ವಿದ್ಯುತ್‌ ಕಂಬಗಳು ಮುಂತಾದ ಮೂಲ ಸೌಕರ್ಯಗಳನ್ನು ಅಧಿಕಾರಿಗಳು ಕಲ್ಪಿಸಿ ಕೊಡಬೇಕು ಎಂದು ತಿಳಿಸಿದರು.

ಬಿಸಾಡಿಹಟ್ಟಿ ದತ್ತು

ಬಿಸಾಡಿ ಹಟ್ಟಿಯ ಹೆಣ್ಣು ಮಕ್ಕಳಿಗೆ ಮೂಲಸೌಕರ್ಯ ಒದಗಿಸಿ ಅವರನ್ನು ಮೌಢ್ಯಾಚರಣೆಗಳಿಂದ ಹೊರತರುವ ನಿಟ್ಟಿನಲ್ಲಿ ದತ್ತು ಪಡೆಯುವುದಾಗಿ ಘೋಷಿಸಿದರು. ಇದಕ್ಕೂ ಮುನ್ನ ಹಟ್ಟಿಯ ಕೃಷ್ಣ ಕುಟೀರದಲ್ಲಿ ಇದ್ದಂತಹ ಬಾಣಂತಿ ಮಕ್ಕಳನ್ನು ಭೇಟಿಯಾದ ಅವರು, ಅಲ್ಲಿ ಒದಗಿಸಲಾಗಿರುತ್ತಿರುವ ಮೂಲ ಸೌಕರ್ಯ ಮುಂತಾದ ವ್ಯವಸ್ಥೆಯನ್ನು ಪರಿಶೀಲಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

ಈ ಸಂದರ್ಭದಲ್ಲಿ ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಇಒ ಅಪೂರ್ವ , ತಹಸೀಲ್ದಾರ್ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
RSA vs BAN
ಕ್ರೀಡೆ4 mins ago

RSA vs BAN: ಬಾಂಗ್ಲಾ ಸೋಲಿಗೆ ಐಸಿಸಿ ಹೊಸ ನಿಯಮವೇ ಕಾರಣ; ಬೌಂಡರಿ ದಾಖಲಾದರೂ ರನ್​ ನೀಡಲಿಲ್ಲವೇಕೆ?

actor Darshan
ಚಿತ್ರದುರ್ಗ15 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Mohan Bhagwat
ದೇಶ23 mins ago

Mohan Bhagwat: ಜನ ಸೇವಕ ಎಂದಿಗೂ ಅಹಂಕಾರಿ ಆಗಿರುವುದಿಲ್ಲ: ಮೋಹನ್‌ ಭಾಗವತ್‌

Lifetime achievement felicitation ceremony for retired Judge Chandrashekharaiah on June 29 in Bengaluru
ಬೆಂಗಳೂರು42 mins ago

Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

murder case
ಮೈಸೂರು46 mins ago

Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Womens Commission president Dr Nagalakshmi Chaudhary visit bisaadihatti village
ತುಮಕೂರು48 mins ago

Koratagere News: ಗ್ರಾಮೀಣ ಹೆಣ್ಣುಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಮಹಿಳಾ ಆಯೋಗದ ಅಧ್ಯಕ್ಷೆ

IND vs USA
ಕ್ರೀಡೆ54 mins ago

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

Chandrababu Naidu
ದೇಶ1 hour ago

Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Contaminated water
ಕರ್ನಾಟಕ1 hour ago

Contaminated Water: ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವಾಂತಿ, ಭೇದಿಯಿಂದ 35 ಜನ ಅಸ್ವಸ್ಥ; ಕಲುಷಿತ ನೀರು ಸೇವನೆ ಶಂಕೆ

Actor Darshan
ಕರ್ನಾಟಕ1 hour ago

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

actor Darshan
ಚಿತ್ರದುರ್ಗ15 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 hour ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಟ್ರೆಂಡಿಂಗ್‌