BJP JDS Alliance: ಲೋಕಸಭೆಗೆ ನಿಖಿಲ್‌ ಸ್ಪರ್ಧೆ ಇಲ್ಲವೆಂದ ಎಚ್‌ಡಿಕೆ; ಕೇಂದ್ರ ಮಂತ್ರಿ ಆಗ್ತಾರಾ ಕುಮಾರಸ್ವಾಮಿ? - Vistara News

ಕರ್ನಾಟಕ

BJP JDS Alliance: ಲೋಕಸಭೆಗೆ ನಿಖಿಲ್‌ ಸ್ಪರ್ಧೆ ಇಲ್ಲವೆಂದ ಎಚ್‌ಡಿಕೆ; ಕೇಂದ್ರ ಮಂತ್ರಿ ಆಗ್ತಾರಾ ಕುಮಾರಸ್ವಾಮಿ?

BJP JDS Alliance: ಪ್ರಧಾನಿ ನರೇಂದ್ರ ಮೋದಿ ಅವರನ್ನು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಎಚ್‌ಡಿಕೆ, ಜನವರಿ ಅಂತ್ಯಕ್ಕೆ ಕ್ಷೇತ್ರ ಹಂಚಿಕೆ ಆಗಲಿದೆ ಎಂದು ಹೇಳಿದ್ದಾರೆ. ಇನ್ನು ಈ ಬಾರಿ ಲೋಕಸಭೆ ಚುನಾವಣೆಗೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಲ್ಲ. 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

VISTARANEWS.COM


on

Nikhil Kumaraswamy and HD Kumarswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನಿಖಿಲ್ ಕುಮಾರಸ್ವಾಮಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸ್ಪರ್ಧೆ ಮಾಡುವುದಿಲ್ಲ. ಅವರು ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಆದರೆ, ಬಿಜೆಪಿ – ಜೆಡಿಎಸ್‌ ಮೈತ್ರಿಯ (BJP JDS Alliance) ಭಾಗವಾಗಿ ಕೇಂದ್ರದಲ್ಲಿ ಮಂತ್ರಿ ಆಗುತ್ತೀರಾ ಎಂಬ ಪ್ರಶ್ನೆಗೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.

ಅವರು ನವ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಿಖಿಲ್‌ ಕುಮಾರಸ್ವಾಮಿ ಅವರು ಈ ಬಾರಿ ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.

ಜನವರಿ ಅಂತ್ಯದ ಹೊತ್ತಿಗೆ ಕ್ಷೇತ್ರ ಹಂಚಿಕೆ

ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ ಎಂದ ಎಚ್‌ಡಿಕೆ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ಯಾರ ಹಣೆಯ ಮೇಲೆ ಏನು ಬರೆದಿದೆಯೋ ಅಂತ ಗೊತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ.‌ ಅಜಿತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.

ಪ್ರಧಾನಿಗಳ ಭೇಟಿ ಬಗ್ಗೆ ಎಚ್‌ಡಿಕೆ ಹರ್ಷ

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ನಡೆ ಬಗ್ಗೆ ಕಟು ಟೀಕೆ:

ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್‌ ಪಕ್ಷ ಸಂಸತ್‌ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್‌ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಈ ವೈಫಲ್ಯದ ಬಗ್ಗೆ ಕಾಂಗ್ರೆಸ್ಸಿಗರು ಯಾಕೆ ಚರ್ಚೆ ಮಾಡುತ್ತಿಲ್ಲ? ಎಂದು ಪ್ರಶ್ನೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಕರ್ನಾಟಕದಲ್ಲಿ ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ 24+4 ಫಾರ್ಮುಲಾ? ಆ 4 ಕ್ಷೇತ್ರ ಯಾವುದು?

ಪ್ರಧಾನಿ ಜತೆ ಯಾವೆಲ್ಲ ವಿಷಯಗಳ ಚರ್ಚೆ?

ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯ ರಾಜಕೀಯ ಪರಿಸ್ಥಿತಿ, ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಜತೆ ಚರ್ಚೆ ನಡೆಸಿದರು. ಅಲ್ಲದೆ, ನಾಫೆಡ್‌ ಮೂಲಕ ಕೊಬ್ಬರಿಯನ್ನು ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ, ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಸಿ.ಎನ್. ಬಾಲಕೃಷ್ಣ ಜತೆಯಲ್ಲಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಕರ್ನಾಟಕ

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

MLC Election: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ

VISTARANEWS.COM


on

MLC Election Withdrawal of nomination paper says Suresh Sajjan
Koo

ಬೆಂಗಳೂರು: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (MLC Election) ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದರು.

ಇದನ್ನೂ ಓದಿ: Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದು ತಿಳಿಸಿದರು. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದರು.

ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಅಮರನಾಥ ಪಾಟೀಲ್‌ ಅವರ ಗೆಲುವಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಸಜ್ಜನ್ ತಿಳಿಸಿದರು.

Continue Reading

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Veerabhadreswara Fair: ಪ್ರತಿವರ್ಷ ಜರುಗುವ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತಾ ಬರುತ್ತಿದೆ. ಈ ವೇಳೆ ಹತ್ತಾರು‌ ಸಾವಿರ ಭಕ್ತರ ಸಮ್ಮುಖದಲ್ಲಿ ಜಯಘೋಷಗಳೊಂದಿಗೆ ರಥೋತ್ಸವ ನಡೆಯುತ್ತದೆ. ಶನಿವಾರ ರಥೋತ್ಸವದ ವೇಳೆ ಭಕ್ತರೆಲ್ಲರೂ ಸೇರಿ ರಥ ಎಳೆಯುವಾಗ ರಥದ ಚಕ್ರದಡಿ ಇಬ್ಬರು ಬಿದ್ದಿದ್ದಾರೆ. ಇದು ಗೊತ್ತಾಗದೇ ಎಳೆದಿದ್ದರಿಂದ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Two killed after being hit by the wheel of a chariot while performing at Veerabhadreswara fair
Koo

ಗದಗ: ಗದಗ ಜಿಲ್ಲೆ ರೋಣ ಪಟ್ಟಣದ ವೀರಭದ್ರೇಶ್ವರ ಜಾತ್ರೆಯಲ್ಲಿ (Veerabhadreswara Fair) ರಥದ ಚಕ್ರದಡಿ‌ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ರಥ ಎಳೆಯುವ ವೇಳೆ ಈ ಅವಘಡ ನಡೆದಿದೆ.

ಪ್ರತಿವರ್ಷ ಜರುಗುವ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತಾ ಬರುತ್ತಿದೆ. ಈ ವೇಳೆ ಹತ್ತಾರು‌ ಸಾವಿರ ಭಕ್ತರ ಸಮ್ಮುಖದಲ್ಲಿ ಜಯಘೋಷಗಳೊಂದಿಗೆ ರಥೋತ್ಸವ ನಡೆಯುತ್ತದೆ. ಶನಿವಾರ ರಥೋತ್ಸವದ ವೇಳೆ ಭಕ್ತರೆಲ್ಲರೂ ಸೇರಿ ರಥ ಎಳೆಯುವಾಗ ರಥದ ಚಕ್ರದಡಿ ಇಬ್ಬರು ಬಿದ್ದಿದ್ದಾರೆ. ಇದು ಗೊತ್ತಾಗದೇ ಎಳೆದಿದ್ದರಿಂದ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಬ್ಬ ಭಕ್ತನ ತಲೆ‌ ಮೇಲೆ ರಥದ ಚಕ್ರ ಹತ್ತಿಳಿದಿದ್ದರಿಂದ ತಲೆಬುರುಡೆ ಅಪ್ಪಚ್ಚಿಯಾಗಿದೆ. ಮತ್ತೊಬ್ಬನ ಬೆನ್ನಿನ ಮೇಲೆ ಹಾದು ಹೋಗಿದೆ. ಹೀಗಾಗಿ ಆತನೂ ಅಲ್ಲಿಯೇ ಉಸಿರು ಚೆಲ್ಲಿದ್ದಾನೆ. ರಥೋತ್ಸವಕ್ಕೆ‌ ಎಸೆಯುವ ಉತ್ತುತ್ತೆಯನ್ನು ಆರಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಲ್ಲಪ್ಪ ಲಿಂಗನಗೌಡರ (55) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ರೋಣ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

ಮುಂಬೈ: ಗಂಡ-ಹೆಂಡತಿ, ಪ್ರಿಯತಮ-ಪ್ರಿಯತಮೆ ಸೇರಿ ಯಾವುದೇ ಸಂಬಂಧದಲ್ಲಿ ಅನುಮಾನ ಎಂಬ ಪೀಡೆ ಹೊಕ್ಕರೆ ಅಲ್ಲಿಗೆ ಮುಗಿಯಿತು ಕತೆ. ಒಂದೋ ಆ ಸಂಬಂಧದಲ್ಲಿ ಬಿರುಕು ಮೂಡುತ್ತದೆ, ಇಲ್ಲವೇ ಪರಸ್ಪರ ಹಿಂಸೆಗೆ ದಾರಿ ಮಾಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ.

ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

Physical Abuse

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಶೀಲ ಶಂಕಿಸಿ ಪತ್ನಿಯ ಕುತ್ತಿಗೆ ಹಿಸುಕಿ ಕೊಂದ ಸಂಶಯ ಪಿಶಾಚಿ ಗಂಡ

ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading
Advertisement
Russia Tourism
ಪ್ರವಾಸ1 min ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ2 mins ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ8 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 20249 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ30 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ31 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ34 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ35 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ45 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ53 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌