New Year Celebration: ಹೊಸ ವರ್ಷಾಚರಣೆ; ಬೆಂಗಳೂರಿನಲ್ಲಿ ಬಿಗಿ ಭದ್ರತೆಗೆ ಪೊಲೀಸ್‌ ಆಯುಕ್ತ ಸೂಚನೆ - Vistara News

ಕರ್ನಾಟಕ

New Year Celebration: ಹೊಸ ವರ್ಷಾಚರಣೆ; ಬೆಂಗಳೂರಿನಲ್ಲಿ ಬಿಗಿ ಭದ್ರತೆಗೆ ಪೊಲೀಸ್‌ ಆಯುಕ್ತ ಸೂಚನೆ

New Year Celebration: ಬೆಂಗಳೂರಿನ ಕಬ್ಬನ್‌ಪಾರ್ಕ್ ಉಪವಿಭಾಗದ ಅಶೋಕನಗರ ಮತ್ತು ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ಕೈಗೊಳ್ಳಲು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಸೂಚಿಸಿದ್ದಾರೆ.

VISTARANEWS.COM


on

B Dayanand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ (New Year Celebration) ಡಿಸೆಂಬರ್‌ 31ರಂದು ರಾತ್ರಿ ಕಬ್ಬನ್‌ಪಾರ್ಕ್ ಉಪವಿಭಾಗದ ಅಶೋಕನಗರ ಮತ್ತು ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಆರ್‌ಎಚ್‌ಪಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಸ್ತೂರ ಬಾ ರಸ್ತೆ ಸೇರಿ ವಿಭಾಗದ ವಿವಿಧ ರಸ್ತೆಗಳಲ್ಲಿ ಸಾವಿರಾರು ಜನ ಸೇರುವುದರಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಬೇಕು ಎಂದು ಕೇಂದ್ರ ವಿಭಾಗದ ಎಸಿಪಿ ಮತ್ತು ಠಾಣಾಧಿಕಾರಿಗಳಿಗೆ ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಸೂಚಿಸಿದ್ದಾರೆ.

ಕಬ್ಬನ್‌ಪಾರ್ಕ್ ಉಪವಿಭಾಗದ ಅಶೋಕನಗರ ಮತ್ತು ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಚಿಸಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪೊಲೀಸ್‌ ಠಾಣಾಧಿಕಾರಿಗಳಿಗೆ ನೀಡಿರುವ ಸೂಚನೆಗಳು

  • ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ಗಸ್ತು ನಿರ್ವಹಿಸಲು ಕ್ರಮ, ಹೊಸ ವರ್ಷಾಚರಣೆಯನ್ನು ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಮುಂಗಡವಾಗಿ ಮಾಹಿತಿ ಸಂಗ್ರಹಿಸಿ ಅಂತಹ ಸಂಘ ಸಂಸ್ಥೆಗಳ ಚಲನವಲನಗಳ ಬಗ್ಗೆ ಗುಪ್ತ ಮಾಹಿತಿ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು.
  • ಮಾಲ್‌ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ, ಮಾಲ್‌ಗಳಿಗೆ ಆಗಮಿಸುವ ವಾಹನಗಳನ್ನು ಸೂಕ್ತವಾಗಿ ಪರಿಶೀಲಿಸಿದ ನಂತರ ಒಳಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಸಂಬಂಧಪಟ್ಟ ಮಾಲ್‌ಗಳ ಮಾಲೀಕರಿಗೆ ಸೂಕ್ತ ತಿಳಿವಳಿಕೆ ನೀಡುವುದು.
  • ಎಲ್ಲಾ ಪಿಐಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡು ಮೇಲುಸ್ತುವಾರಿ ವಹಿಸುವುದು. ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣಾ ಪಾಯಿಂಟ್ / ಪಿಕೆಟಿಂಗ್ ಪಾಯಿಂಟ್ ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸುವುದು.
  • ರಾತ್ರಿ ಸಮಯದಲ್ಲಿ ಸಾರ್ವಜನಿಕರು ಮದ್ಯಪಾನ ಸೇವಿಸಿ ಬರುವ ಸಂಭವವಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಟ್ಟೆಚ್ಚರ ವಹಿಸುವುದು. ಪ್ರಮುಖವಾಗಿ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಕಿಸೆ ಕಳ್ಳತನ, ಸರ ಅಪಹರಣ ಇತ್ಯಾದಿಗಳು ನಡೆಯುವ ಸಾದ್ಯತೆಗಳಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿಗಳು, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸುವುದು ಮತ್ತು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸುವುದು.
  • ನೂತನ ವರ್ಷಾಚರಣೆ ಸಂದರ್ಭದಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವವರ ವಿರುದ್ದ ಕೂಡಲೇ ಗಮನಹರಿಸಿ ಕಾನೂನಿನಡಿಯಲ್ಲಿ ಬಂದನಕ್ಕೆ ಒಳಗಾಗಿಸುವುದು. ಕುಡಿದು ರಸ್ತೆಗಳ ಮೇಲೆ ಬಾಟಲಿಗಳನ್ನು ಹೊಡೆದು / ಎಸೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಅಗತ್ಯ ಕಾನೂನು ಕ್ರಮ ಜರುಗಿಸುವುದು.
  • ಹೊಸ ವರ್ಷಾಚರಣೆಯ ಸಂದರ್ಭವನ್ನು ಬಳಸಿಕೊಂಡು ದಾಂಧಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು. ಎಲ್ಲಾ ಠಾಣೆಯ ಅಧಿಕಾರಿಗಳು, ಎಲ್ಲಾ ಉಪ ವಿಭಾಗಾಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಚಟುವಟಿಕೆಯಲ್ಲಿರುವ ರೌಡಿಗಳು ಹಾಗೂ ಅವರ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದು.
  • ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕೆಲವು ಸಮಾಜ ಘಾತುಕ ಚಟುವಟಿಕೆಗಳು ಶಾಂತಿಭಂಗವನ್ನುಂಟು ಮಾಡುವ ಸಂಭವವಿದ್ದು, ಅಂತಹವರ ಮೇಲೆ ಸೂಕ್ತ ನಿಗಾವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು.
  • ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಮದ್ಯಪಾನ ಮಾಡುವ ಸಾಧ್ಯತೆಯಿದ್ದು, ಮದ್ಯಪಾನ ಮಾಡಿದ ನಂತರ ತಮ್ಮ ಮನೆಗಳಿಗೆ ಹೋಗುವ ಸಮಯದಲ್ಲಿ ಸ್ವಂತ ವಾಹನಗಳನ್ನು ಬಳಸಲಿದ್ದು, ಅಂತಹ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಅಫಘಾತಗಳು ನಡೆಯುವ ಸಾಧ್ಯತೆಯಿರುತ್ತದೆ. ಆದ್ದರಿಂದ ಹೊಸ ವರ್ಷಾಚರಣೆಯ ಸಮುಯದಲ್ಲಿ ಹೆಚ್ಚಿನ ಸಂಖ್ಯೆಯ ಮದ್ಯಪಾನ ಪ್ರಕರಣಗಳನ್ನು ದಾಖಲಿಸುವ ಬಗ್ಗೆ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರುಗಳು ಅಗತ್ಯ ಕ್ರಮ ವಹಿಸುವುದು.

ಇದನ್ನೂ ಓದಿ | New year Celebration : ಹೊಸ ವರ್ಷಾಚರಣೆಗೆ ಕೋವಿಡ್‌ ಮಾರ್ಗಸೂಚಿ ಇಲ್ಲ, ಬಿಗಿ ಭದ್ರತೆ ಮಾತ್ರ

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕರ್ನಾಟಕ

    Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

    Dengue fever: ಶಿರಸಿಯ ಕಸ್ತೂರಬಾ ನಗರದ 12 ವರ್ಷದ ವಿದ್ಯಾರ್ಥಿನಿ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಇದುವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದೆ.

    VISTARANEWS.COM


    on

    Dengue fever
    Koo

    ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

    ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

    ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

    ಇದನ್ನೂ ಓದಿ | Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

    ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

    Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

    ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ (Dengue fever) ಜಿಲ್ಲೆಯಲ್ಲಿ 9 ವರ್ಷದ ಮಗು ಬಲಿಯಾಗಿದೆ. ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು. ಕಳೆದ 12 ದಿನಗಳ ಹಿಂದೆ ಜ್ವರದಿಂದ ಬಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

    ಶುಕ್ರವಾರ ತಡರಾತ್ರಿ ಬೆಂಗಳೂರಿನ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದ. ಇದರ ಬೆನ್ನಲ್ಲೇ ಬ್ಯಾಡಗಿ ತಾಲೂಕಿನಲ್ಲಿ 9 ವರ್ಷದ ಬಾಲಕಿ ಮೃತಪ್ಟಿದ್ದಾಳೆ. ರಾಜ್ಯದಲ್ಲಿ ಶುಕ್ರವಾರ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿತ್ತು.

    ನೆನ್ನೆ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 155 ಮಂದಿಗೆ ಸೋಂಕು ದೃಢವಾಗಿತ್ತು. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿದ್ದವು. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಹಾಸನದಲ್ಲಿ ಒಂದು ವಾರದಲ್ಲಿ ನಾಲ್ವರು ಬಾಲಕಿಯರ ಸಾವು

    ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಬಾಲಕಿಯೊಬ್ಬಳು ಶುಕ್ರವಾರ ಮೃತಪಟ್ಟಿದ್ದಳು. ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಳು.

    ಇದನ್ನೂ ಓದಿ | Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

    ಇದರಿಂದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಮೂರು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬುಧವಾರ ಹೊಳೆನರಸೀಪುರ ತಾಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಳು. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

    Continue Reading

    ಕರ್ನಾಟಕ

    Elephant Arjuna: ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ; 50 ಲಕ್ಷ ವೆಚ್ಚದಲ್ಲಿ ನಿರ್ಮಾಣ

    Elephant Arjuna: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯ ವಲಯದ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

    VISTARANEWS.COM


    on

    Elephant Arjuna
    Koo

    ಹಾಸನ: ದಸರಾ ಆನೆ ಅರ್ಜುನನ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ (Elephant Arjuna) ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯ ವಲಯದ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕ (elephant Arjuna’s memorial) ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ.

    2023ರ ಡಿ. 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕ್ಯಾಪ್ಟನ್ ಅರ್ಜುನ ವೀರ ಮರಣವನ್ನಪ್ಪಿತ್ತು. ಬಳಿಕ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಗಳು ಕೇಳಿಬಂದಿದ್ದರಿಂದ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಇದೀಗ ಅರ್ಜುನನ ಅಭಿಮಾನಿಗಳ ಆಸೆ ಈಡೇರಿದೆ.

    ಮಳೆಯ ನಡುವೆಯೇ ಸ್ಮಾರಕ ನಿರ್ಮಾಣಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಿಇಒ ಪೂರ್ಣಿಮಾ, ಸಿಸಿಎಫ್ ರವಿಶಂಕರ್ ಉಪಸ್ಥಿತರಿದ್ದರು.

    ಜ.1ಕ್ಕೆ ಸ್ಮಾರಕ ಲೋಕಾರ್ಪಣೆ

    ಶಂಕುಸ್ಥಾಪನೆ ಬಳಿಕ ಮಾತನಾಡಿದ ಸಚಿವ ಸಚಿವ ಈಶ್ವರ್ ಖಂಡ್ರೆ ಅವರು, ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಎಲ್ಲರ ಗಮನ ಸೆಳೆದಿತ್ತು. ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸರ್ಜುನ ಸಾವನ್ನಪ್ಪಿತ್ತು, ಇದು ರಾಜ್ಯದ ಜನತೆಗೆ ಅತ್ಯಂತ ದು:ಖದ ಸಂಗತಿಯಾಗಿತ್ತು. 1968ರಲ್ಲಿ ಈ ಆನೆಯನ್ನು ಸೆರೆ ಹಿಡಿಯಲಾಗಿತ್ತು, ಆದಾದ ನಂತರ ತರಬೇತಿ ನೀಡಲಾಗಿತ್ತು. 2012ರಿಂದ ದಸರಾದಲ್ಲಿ ಅಂಬಾರಿ ಹೊತ್ತಿತ್ತು. ಅರ್ಜುನ ನಮ್ಮಿಂದ ದೂರ ಹೋಗುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ. ದಬ್ಬಳ್ಳಿಕಟ್ಟೆ ಹಾಗೂ ಬಳ್ಳೆ ಎರಡೂ ಕಡೆ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿ ಆರಂಭವಾಗುತ್ತದೆ ಎಂದು ತಿಳಿಸಿದರು.

    ಇದನ್ನೂ ಓದಿ | Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

    ಐವತ್ತು ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಜ.1 ರಂದು ಸ್ಮಾರಕ ಲೋಕಾರ್ಪಣೆ ಮಾಡುತ್ತೇವೆ. ಸ್ಮಾರಕ ಅಭಿವೃದ್ಧಿ ಮಾಡಲು ಹಣದ ಸಮಸ್ಯೆ ಇಲ್ಲ, ಎಷ್ಟು ಹಣ ಬೇಕಾದರೂ ಖರ್ಚು ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

    Continue Reading

    ಮಳೆ

    Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

    Karnataka Weather Forecast: ಮುಂಗಾರು ಅಬ್ಬರಕ್ಕೆ ಜನರು ವಿಲವಿಲ ಅಂತ ಒದ್ದಾಡುವಂತೆ ಮಾಡಿದೆ. ಮಳೆ ಬಂದರೂ (Heavy rain Effect) ಕಷ್ಟ ಬಾರದೆ ಇದ್ದರೂ ಸಂಕಷ್ಟ ಎಂಬಂತಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳಲ್ಲಿ (Trekking) ಚಾರಣಕ್ಕೆ ನಿಷೇಧ ಹೇರಲಾಗಿದೆ.

    VISTARANEWS.COM


    on

    By

    karnataka weather Forecast
    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು/ಮಂಗಳೂರು: ವ್ಯಾಪಕ ಮಳೆಯಿಂದಾಗಿ (Karnataka Weather Forecast) ಕರಾವಳಿಯ ಹಲವೆಡೆ ಪ್ರವಾಸಿಗರಿಗೆ ನಿಷೇಧ ಹಾಕಲಾಗಿದೆ. ಗಿರಿಶಿಖರಗಳಲ್ಲಿ ಚಾರಣಕ್ಕೆ ಹೋಗಬೇಕಾದರೆ ಮಳೆಗಾಲ (Heavy rain) ಮುಗಿಯುವವರೆಗೂ ಕಾಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತ , ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿವೆ. ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿ ಶಿಖರಗಳಿಗೆ ಚಾರಣಕ್ಕೆ ಹೋಗುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹಾಕಲಾಗಿದೆ. ಇವೆಲ್ಲದರ ಜತೆಗೆ ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಅಲ್ಲೂ ನದಿ ಹಾಗು ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ ಚಟುವಟಿಕೆಗಳಿಗೂ ಬ್ರೇಕ್‌ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿಷೇಧ ಆದೇಶವನ್ನು ಹೊರಡಿಸಿದ್ದಾರೆ.

    ಇಲ್ಲೆಲ್ಲ ಮಳೆ ಅಬ್ಬರ

    ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾದರೆ, ಹೊನ್ನಾವರದಲ್ಲಿ 16 ಹಾಗೂ ಉಡುಪಿಯಲ್ಲಿ 15, ಅಂಕೋಲಾದಲ್ಲಿ 13 ಸೆಂ.ಮೀ ಮಳೆಯಾಗಿದೆ.

    ಜು.7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 30-40ಕಿ.ಮೀ ಇರಲಿದ್ದು, ಜತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗಾಳಿ ವೇಗವು 30 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

    ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ,ಕೊಡಗು, ಮೈಸೂರು, ರಾಮನಗರ ಸೇರಿದಂತೆ ದಾವಣಗೆರೆ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

    ಉಕ್ಕಿ ಹರಿಯುವ ನದಿಯಲ್ಲಿ ಮೀನು ಹಿಡಿಯುವ ಸಾಹಸ!

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಳೆ ಪ್ರಮಾಣದಿಂದಾಗಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದಲ್ಲಿಯೂ ನಿರಂತರವಾಗಿ ಮಳೆ ಹೆಚ್ಚಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ತೀರ ಪ್ರದೇಶದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

    ಪ್ರವಾಹದ ಭೀತಿ ಇರುವುದರಿಂದ ನೇತ್ರಾವತಿ ನದಿ ತೀರದವರಿಗೆ, ದ್ವೀಪ ಪ್ರದೇಶ ಜನರಿಗೂ ಸೂಚನೆ ನೀಡಲಾಗಿದೆ. ನದಿಯಲ್ಲಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದರೂ, ಸ್ಥಳೀಯರು ದೋಣಿ ಮೂಲಕ ಮೀನು ಹಿಡಿಯುತ್ತಿರುವುದು ಕಂಡು ಬಂದಿದೆ.

    ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ

    ದಾವಣಗೆರೆಯ ಹರಿಹರದ ಬಳಿಯ ರಾಜನಹಳ್ಳಿ ಜಾಕ್ ವೆಲ್ ಬಳಿ ನೀರು ನಾಯಿಗಳ ಹಿಂಡು ಹಿಂಡಾಗಿ ಪ್ರತ್ಯಕ್ಷವಾಗಿದೆ. ನೀರು ನಾಯಿಗಳು ಜನರ ಕಣ್ಣಿಗೆ ಕಾಣುವುದು ಅಪರೂಪ. ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ದಡದಲ್ಲಿ ನೀರು ನಾಯಿಗಳು ಆಟವಾಡುತ್ತಿರುವುದು ಕಂಡು ಬಂದಿದೆ. ನೀರು ನಾಯಿ ಕಂಡರೆ ಸಮೃದ್ಧಿ ಮಳೆ ಬೆಳೆ ಆಗುತ್ತೆ ಎಂಬ ನಂಬಿಕೆ ಇದೆ.

    ಅಬ್ಬಿ ಜಲಪಾತಕ್ಕೆ ಸಾಕು ನಾಯಿ ಜತೆಗೆ ಬಂದ ಪ್ರವಾಸಿಗರು!

    ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಸಾಕು ನಾಯಿ ಹಿಡಿದು ಪ್ರವಾಸಿತಾಣವಾದ ಮಡಿಕೇರಿ ಸಮೀಪದ ಅಬ್ಬಿ ಜಲಪಾತಕ್ಕೆ ಬಂದಿದ್ದಾರೆ. ಶ್ವಾನವನ್ನು ಒಳಗೆ ತರಬೇಡಿ ಎಂದರು ಹೇಳಿದರೆ ಪ್ರವಾಸಿಗರು ಪೊಲೀಸರೊಟ್ಟಿಗೆ ಕೂಗಾಟ ಶುರು ಮಾಡುತ್ತಿದ್ದಾರೆ.

    ಇತ್ತ ಪ್ರವಾಸಿಗರನ್ನು ಕಂಡು ಶ್ವಾನಗಳು ಕಚ್ಚಲು ಎಳೆದಾಡುತ್ತಿದ್ದ ದೃಶ್ಯ ಕಂಡು ಬಂತು. ಮಕ್ಕಳು ಸೇರಿದಂತೆ ನೂರಾರು ಪ್ರವಾಸಿಗರು ಇರುವ ಸ್ಥಳದಲ್ಲಿ ಜರ್ಮನ್ ಶೆಫರ್ಡ್, ಎರಡು ಲ್ಯಾಬ್ ಸೇರಿದಂತೆ ಶ್ವಾನವನ್ನು ಹಿಡಿದು ಒಳಗೆ ಬಂದಿದ್ದಾರೆ. ಬಳಿಕ ಬಲವಂತವಾಗಿ ಪೊಲೀಸರು ಹೊರಗೆ ಕಳುಹಿಸಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಕರ್ನಾಟಕ

    BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

    BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು (BJP Karnataka) ನೇಮಿಸಲಾಗಿದೆ.

    VISTARANEWS.COM


    on

    BJP Karnataka
    Koo

    ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆ, ಒಂದು ಸ್ಥಾನಕ್ಕೆ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಉಸ್ತುವಾರಿಗಳನ್ನು ನೇಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು (BJP Karnataka) ನೇಮಿಸಲಾಗಿದೆ.

    ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಉಸ್ತುವಾರಿ ನಾಯಕರು ಅಭಿಪ್ರಾಯ ಸಂಗ್ರಹ ಮತ್ತು ವರದಿ ತಯಾರಿಸಿ, ಹೈ ಕಮಾಂಡ್‌ಗೆ ನೀಡಲಿದ್ದಾರೆ.

    ಉಸ್ತುವಾರಿಗಳ ಪಟ್ಟಿ

    ದಕ್ಷಿಣ ಕನ್ನಡ (ಸ್ಥಳೀಯ ಸಂಸ್ಥೆ)

    ಬಸವರಾಜ್ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಬ್ರಿಜೇಶ್ ಚೌಟ, ಪ್ರೀತಂ ಗೌಡ

    ಶಿಗ್ಗಾಂವಿ

    ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪಿ. ರಾಜೀವ್

    ಸಂಡೂರು

    ಗೋವಿಂದ ಕಾರಜೋಳ, ಸುನೀಲ್ ಕುಮಾರ್, ಎನ್.ರವಿಕುಮಾರ್, ಕೆ.ಎಸ್ ನವೀನ್

    ಚನ್ನಪಟ್ಟಣ

    ಸಿ.ಎನ್ ಅಶ್ವತ್ಥ್‌ ನಾರಾಯಣ್, ಎಂ.ಕೃಷ್ಣಪ್ಪ, ಗೋಪಿನಾಥ್ ರೆಡ್ಡಿ, ನಂದೀಶ್ ರೆಡ್ಡಿ

    ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

    ಬೆಂಗಳೂರು: ರಾಜ್ಯ ಬಿಜೆಪಿಗೆ (BJP Karnataka) ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

    ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

    ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

    Channapatna By Election

    ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ (Channapatna By Election) ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸ್ಪಷ್ಟನೆ ನೀಡಿದ್ದಾರೆ.

    ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ | MyMUL President: ಸಚಿವ ಕೆ.ವೆಂಕಟೇಶ್ ಕಿರುಕುಳದಿಂದಲೇ ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಪಿ.ಎಂ.ಪ್ರಸನ್ನ

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು, ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಕಣಕ್ಕಿಳಿಸಲಿವೆ ಎಂದು ಚರ್ಚೆಯಾಗುತ್ತಿತ್ತು. ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅನಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿತ್ತು. ಇದಕ್ಕೆ ಡಾ.ಮಂಜುನಾಥ್‌ ಅವರು ಸ್ಪಷ್ಟನೆ ನೀಡಿದ್ದಾರೆ.

    Continue Reading
    Advertisement
    ZIM vs IND
    ಪ್ರಮುಖ ಸುದ್ದಿ1 min ago

    ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

    Dengue fever
    ಕರ್ನಾಟಕ4 mins ago

    Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

    Project Zorawar
    ದೇಶ28 mins ago

    Project Zorawar: ಚೀನಾಗೆ ಪೆಟ್ಟು ಕೊಡಲು ದೇಶೀಯವಾಗಿ ಯುದ್ಧ ಟ್ಯಾಂಕ್‌ ಉತ್ಪಾದನೆ; ಏನಿವುಗಳ ವಿಶೇಷ?

    Anant Ambani-Radhika Merchant wedding
    ಪ್ರಮುಖ ಸುದ್ದಿ42 mins ago

    Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

    Elephant Arjuna
    ಕರ್ನಾಟಕ54 mins ago

    Elephant Arjuna: ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ; 50 ಲಕ್ಷ ವೆಚ್ಚದಲ್ಲಿ ನಿರ್ಮಾಣ

    Hathras Stampede
    ದೇಶ1 hour ago

    Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

    karnataka weather Forecast
    ಮಳೆ2 hours ago

    Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

    Ambani Family Fashion
    ಫ್ಯಾಷನ್2 hours ago

    Ambani Family Fashion: ಅಂಬಾನಿ ಮಹಿಳೆಯರ ದುಬಾರಿ ಉಡುಗೆಗಳು; ಇವರ ಮದುವೆ ಡ್ರೆಸ್‌‌ಗಳು ಹೇಗಿವೆ?

    Team India :
    ಪ್ರಮುಖ ಸುದ್ದಿ2 hours ago

    Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

    BJP Karnataka
    ಕರ್ನಾಟಕ2 hours ago

    BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka weather Forecast
    ಮಳೆ2 hours ago

    Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

    Murder case
    ಯಾದಗಿರಿ4 hours ago

    Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

    karnataka Rain
    ಮಳೆ5 hours ago

    Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

    Food Poisoning
    ರಾಯಚೂರು8 hours ago

    Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    Wild Animal Attack Elephant attack
    ರಾಮನಗರ9 hours ago

    Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

    karnataka Weather Forecast
    ಮಳೆ14 hours ago

    Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

    karnataka Weather Forecast
    ಮಳೆ1 day ago

    Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

    Lovers Fighting
    ಚಿಕ್ಕಬಳ್ಳಾಪುರ1 day ago

    Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

    Medical negligence
    ದಾವಣಗೆರೆ1 day ago

    Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

    karnataka rain
    ಮಳೆ1 day ago

    Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

    ಟ್ರೆಂಡಿಂಗ್‌