Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿಯಿಂದ 31.35 ಲಕ್ಷ ಕಾಣಿಕೆ ಸಂಗ್ರಹ - Vistara News

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿಯಿಂದ 31.35 ಲಕ್ಷ ಕಾಣಿಕೆ ಸಂಗ್ರಹ

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆದಿದ್ದು, ಒಟ್ಟು ಹಣ ಹುಂಡಿಯಲ್ಲಿ 31,35,360 ರೂ. ಕಾಣಿಕೆ ಸಂಗ್ರಹವಾಗಿದೆ.

VISTARANEWS.COM


on

Hundi count of sri renukamba temple in chandragutti at soraba
ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊರಬ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ (Chandragutti Sri Renukamba Temple) ಕಾಣಿಕೆ ಹುಂಡಿ ಎಣಿಕೆ (Hundi Count) ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆದಿದ್ದು, ಒಟ್ಟು ಹಣ ಹುಂಡಿಯಲ್ಲಿ 31,35,360 ರೂ. ಕಾಣಿಕೆ ಸಂಗ್ರಹವಾಗಿದೆ.

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 25,08,680 ರೂ. ಸಂಗ್ರಹವಾಗಿತ್ತು, ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 31,35,360 ರೂ. ಕಾಣಿಕೆ ಸಂಗ್ರಹವಾಗಿದೆ.

ಹುಂಡಿ ಎಣಿಕೆ ಕಾರ್ಯಕ್ಕೆ ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್. ಯತೀಶ್ ಭೇಟಿ ನೀಡಿ, ಪರಿಶೀಲಿಸಿದರು. ಇದಕ್ಕೂ ಮೊದಲು ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Uttara Kannada News: ಡಿ.30ರಿಂದ ಅಶೋಕೆಯಲ್ಲಿ ಅತಿರುದ್ರಾಭಿಷೇಕ

ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ ಅವರನ್ನು ದೇವಸ್ಥಾನದಿಂದ ಕಾರ್ಯ ನಿರ್ವಹಣಾಧಿಕಾರಿಗಳು ಗೌರವಿಸಿ, ಸನ್ಮಾನಿಸಿದರು.

ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಆಳವಡಿಸಲಾಗಿತ್ತು. ಸ್ಥಳೀಯ ಗ್ರಾ.ಪಂ. ಸದಸ್ಯ ಎಂ.ಪಿ. ರತ್ನಾಕರ್‌ ಎಣಿಕೆ ಕಾರ್ಯಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ: Shivamogga News: ಚಿಕ್ಕಜೇನಿಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಹುಂಡಿ ಎಣಿಕೆ ಕಾರ್ಯದಲ್ಲಿ ತಾಲ್ಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್, ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್, ಮುಜರಾಯಿ ಇಲಾಖೆಯ ಎಂ.ಶೃತಿ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಾಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

Agee hunnime Thousands of devotees have darshan of Shri Renukamba Devi of Chandragutti
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

Accident Case : ಗೊಬ್ಬರ ಚೀಲಗಳನ್ನು ಹೊತ್ತು ಬರುತ್ತಿದ್ದ ಟ್ರ್ಯಾಕ್ಟರ್‌ ಇಳಿಜಾರಿನಲ್ಲಿ ಪಲ್ಟಿಯಾಗಿದ್ದು, ಅದರಡಿ ಸಿಲುಕಿದ ಯುವಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಇತ್ತ ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್‌ ಬೋಟ್‌ ಡಿಕ್ಕಿ ಹೊಡೆದಿದ್ದು, ಬಾಲಕನೊರ್ವ ಗಾಯಗೊಂಡಿದ್ದಾನೆ.

VISTARANEWS.COM


on

By

Accident Case
Koo

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿ; ಪಾರಾದ ತಂದೆ-ಮಗ

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿಯಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ತಂದೆ- ಮಗ ಪಾರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ತನ್ಮಡಗಿಯ ಶರಾವತಿ ನದಿಯಲ್ಲಿ ಘಟನೆ ನಡೆದಿದೆ. ಮೀನುಗಾರಿಕಾ ಬೋಟ್‌ನಲ್ಲಿದ್ದ ಸಮರ್ಥ ಅಂಬಿಗ (16) ಎಂಬಾತ ಎಡಗೈಗೆ ಗಂಭೀರ ಗಾಯವಾಗಿದೆ.

ಸಮರ್ಥ ತನ್ನ ತಂದೆ ವಾಮನ ಅಂಬಿಗ ಜತೆ ಮೀನುಗಾರಿಕೆಗೆ ತೆರಳಿದ್ದ. ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೂರಿಸ್ಟ್ ಬೋಟ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

ಡಿಸೇಲ್‌ ಖಾಲಿ ಮಾರ್ಗ ಮಧ್ಯದಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್

ಕುಂದಾಪುರ- ಶಿವಮೊಗ್ಗ- ಬೆಂಗಳೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹೊಸನಗರ ಘಾಟ್‌ನ ಮಾಸ್ತಿಕಟ್ಟೆ ಬಳಿ ಡಿಸೇಲ್‌ ಖಾಲಿ ಆಗಿ ಮಾರ್ಗ ಮಧ್ಯದಲ್ಲೇ ನಿಂತು ಹೋದ ಘಟನೆ ನಡೆದಿದೆ. ಡಿಸೇಲ್ ಖಾಲಿ ಆದ ಕಾರಣ ಮಾರ್ಗ ಮಧ್ಯದಲ್ಲೇ ಬಸ್ ನಿಲ್ಲಿಸಿದ ಬಸ್ ಚಾಲಕ, ಪ್ರಯಾಣಿಕರಿಂದ ಬಸ್ ತಳ್ಳಿಸಿದ್ದಾರೆ. ನಂತರ ಪುರುಷರಿಗೆ ಟಿಕೆಟ್‌ನ ಅರ್ಧ ಹಣ ಕೊಟ್ಟು ಖಾಸಗಿ ಬಸ್‌ನಲ್ಲಿ ಕಳುಹಿಸಿದ್ದಾರೆ. ಶಕ್ತಿ ಯೋಜನೆಯಲ್ಲಿ ಪ್ರಯಾಣ ಮಾಡಿದ ಮಹಿಳೆಯರಿಗೆ ತೊಂದರೆಯುಂಟಾಯ್ತು. ಇದರಿಂದಾಗಿ ಅಧಿಕಾರಿಗಳಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದರು. ಸ್ಥಳೀಯ ಜನರ ಸಹಾಯದಿಂದ ಬೇರೆ ಬಸ್‌ನಲ್ಲಿ ಪ್ರಯಾಣಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

MLC Election: ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದ ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದ್ದಾರೆ.

VISTARANEWS.COM


on

MLC Election South West Graduate Constituency bjp Candidate Dr Dhananjaya Sarji pressmeet
Koo

ಸೊರಬ: ನೈರುತ್ಯ ಪದವೀಧರರ ಕ್ಷೇತ್ರದ (MLC Election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡಿದ್ದೇನೆ. ಜತೆಗೆ ಅನೇಕ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಅನುಭವವಿದೆ. ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಕಾರ್ಯಕರ್ತರನ್ನೇ ಶಕ್ತಿಯನ್ನಾಗಿಸಿಕೊಂಡಿರುವ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯಕರ್ತರು ತಾವೇ ಅಭ್ಯರ್ಥಿ ಎನ್ನುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮತದಾರರಿದ್ದು, ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತು ಭದ್ರತೆಗಾಗಿ ಬಿಜೆಪಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.

ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಎಚ್.ಎಸ್. ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಯಲಸಿ ಉಪಸ್ಥಿತರಿದ್ದರು.

Continue Reading
Advertisement
Narendra Modi
ದೇಶ3 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ4 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ4 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ4 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ5 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ5 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ5 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ6 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ22 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌