IPL 2022 | ಐಪಿಎಲ್‌ನಲ್ಲಿ ಹಿಟ್‌ ವಿಕೆಟ್‌ ಆಗಿದ್ದು ಸಾಯಿ ಸುದರ್ಶನ್‌ ಮೊದಲಿಗರಲ್ಲ: ಇಲ್ಲಿದೆ ಪಟ್ಟಿ - Vistara News

ಐಪಿಎಲ್ 2024

IPL 2022 | ಐಪಿಎಲ್‌ನಲ್ಲಿ ಹಿಟ್‌ ವಿಕೆಟ್‌ ಆಗಿದ್ದು ಸಾಯಿ ಸುದರ್ಶನ್‌ ಮೊದಲಿಗರಲ್ಲ: ಇಲ್ಲಿದೆ ಪಟ್ಟಿ

ವೃತ್ತಿಪರ ಕ್ರಿಕೆಟ್‌ನಲ್ಲಿ ಹಿಟ್‌ ವಿಕೆಟ್‌ನಂತಹ ಮಾರ್ಗದಲ್ಲಿ ಔಟ್‌ ಆಗುವುದು ಅಪರೂಪ. ಆದರೆ ಇದೀಗ ಸಾಯಿ ಸುದರ್ಶನ್‌ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಕ್ರಿಕೆಟ್‌ ಘಟಾನುಘಟಿಗಳೂ ಈ ರೀತಿ ಔಟ್‌ ಆದ ಇತಿಹಾಸವಿದೆ.

VISTARANEWS.COM


on

ಸಾಯಿ ಸುದರ್ಶನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೂ ಸಣ್ಣಪುಟ್ಟ ತಪ್ಪುಗಳು ಆಗುತ್ತವೆ. ಅಂತಾಷ್ಟ್ರೀಯ ಕ್ರಿಕೆಟ್‌ ಮಾತ್ರವಲ್ಲ, ದೇಶೀಯವಾಗಿ ನಡೆಯುವ ಐಪಿಎಲ್‌ನಂತಹ ವೃತ್ತಿಪರ ಕ್ರಿಡಾಕೂಟಗಳಲ್ಲಿಯೂ ಸಿಲ್ಲಿ ಕಾರಣಗಳಿಗಾಗಿ ಔಟ್‌ ಆಗುವ ಸಂದರ್ಭಗಳಿರುತ್ತವೆ. ಸುಲಭವಾಗಿ ಕೈಗೆ ಬಂದ ಕ್ಯಾಚ್‌ ಅನ್ನು ಕೈಚೆಲ್ಲುವ ಸಂದರ್ಭ ಈಗಿನ ವೃತ್ತಿಪರ ಕ್ರಿಕೆಟ್‌ನಲ್ಲಿ ತೀರಾ ಅಪರೂಪ. ಬ್ಯಾಟರ್‌ ಹಿಟ್‌ ವಿಕೆಟ್‌ ಮಾಡಿಕೊಂಡು ಔಟ್‌ ಆಗುವುದೂ ತುಂಬಾ ಕಡಿಮೆಯೇ. ಐಪಿಎಲ್‌ 2022 ರಲ್ಲಿ ಗುಜರಾಜ್‌ ಟೈಗರ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ನ ಸಾಯಿ ಸುದರ್ಶನ್‌ ಹಿಟ್‌ ವಿಕೆಟ್‌ ಆಗಿದ್ದಾರೆ. ಇದು ಐಪಿಎಲ್‌ 2022ರ ಮೊದಲ ಹಿಟ್‌ ವಿಕೆಟ್‌.

ಗುಜರಾತ್ ಟೈಟನ್ಸ್‌ ಎರಡು ವಿಕೆಟ್‌ಗೆ 138 ರನ್‌ನಲ್ಲಿ ಆಟವಾಡುತ್ತಿದ್ದಾಗ ಪೊಲಾರ್ಡ್‌ ಮಾಡಿದ ಚೆಂಡನ್ನು ಸುದರ್ಶನ್‌ ಬ್ಯಾಟ್‌ ಹಿಂಬಾಲಿಸಿ ಹೋಯಿತು. ಆದರೆ ಚೆಂಡನ್ನು ತಪ್ಪಿಸಿಕೊಂಡ ಬ್ಯಾಟ್‌, ಸಮತೋಲನ ಕಳೆದುಕೊಂಡು ವಿಕೆಟ್‌ಗೆ ಬಡಿಯಿತು. ಒಬ್ಬ ಬ್ಯಾಟರ್‌ ಯಾವ ರೀತಿ ಔಟ್‌ ಆಗಬಾರದು ಎಂದು ಬಯಸುತ್ತಾನೊ ಆ ರೀತಿಯಲ್ಲಿ ಸಾಯಿ ಸುದರ್ಶನ್‌ ಹೊರನಡೆದರು.

ಹಾಗೆಂದು ಐಪಿಎಲ್‌ನಲ್ಲಿ ಹಿಟ್‌ ವಿಕೆಟ್‌ ಆದವರಲ್ಲಿ ಸಾಯಿ ಸುದರ್ಶನ್‌ ಮೊದಲಿಗರಲ್ಲ. ಅಂತಾರಾಷ್ಟ್ರೀಯ ಕ್ರಿಕೆಟಿಗ ಯುವರಾಜ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಸೇರಿ ಅನೇಕರು ಈ ಸಾಲಿನಲ್ಲಿ ಈಗಾಗಲೇ ಇದ್ದಾರೆ. ಇಲ್ಲಿದೆ, ಈ ಹಿಂದೆ ಐಪಿಎಲ್‌ನಲ್ಲಿ ಹಿಟ್‌ ವಿಕೆಟ್‌ ಆದವರ ಪಟ್ಟಿ.

ಬ್ಯಾಟರ್‌ತಂಡವಿರುದ್ಧಸೀಸನ್‌
ಎಂ. ಖೋಟೆಮುಂಬೈ ಇಂಡಿಯನ್ಸ್‌ಕಿಂಗ್ಸ್‌ XI ಪಂಜಾಬ್‌ಐಪಿಎಲ್‌ 2008
ಮಿಸ್ಬಾ ಉಲ್‌ ಹಕ್‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರುಕಿಂಗ್ಸ್‌ XI ಪಂಜಾಬ್‌ಐಪಿಎಲ್‌ 2008
ಎಸ್‌. ಅಸ್ನೋಡ್ಕರ್‌ರಾಜಾಸ್ಥಾನ್‌ ರಾಯಲ್ಸ್‌ಚೆನ್ನೈ ಸೂಪರ್‌ ಕಿಂಗ್ಸ್‌ಐಪಿಎಲ್‌ 2009
ಆರ್‌. ಜಡೇಜಾಚೆನ್ನೈ ಸೂಪರ್‌ ಕಿಂಗ್ಸ್‌ಡೆಕ್ಕನ್‌ ಚಾರ್ಜರ್ಸ್‌ಐಪಿಎಲ್‌ 2012
ಸೌರಭ್‌ ತಿವಾರಿರಾಯಲ್‌ ಚಾಲೆಂಜರ್ಸ್‌ ಬೆಂಗಳೂರುಮುಂಬೈ ಇಂಡಿಯನ್ಸ್‌ಐಪಿಎಲ್‌ 2012
ಯುವರಾಜ್‌ ಸಿಂಗ್‌ಸನ್‌ರೈಸರ್ಸ್‌ ಹೈದರಾಬಾದ್‌ಮುಂಬೈ ಇಂಡಿಯನ್ಸ್‌ಐಪಿಎಲ್‌ 2016
ಡಿ ಹೂಡಾಸನ್‌ರೈಸರ್ಸ್‌ ಹೈದರಾಬಾದ್‌ಡೆಲ್ಲಿ ಡೇರ್‌ಡೆವಿಲ್ಸ್‌ಐಪಿಎಲ್‌ 2016
ಡೇವಿಡ್‌ ವಾರ್ನರ್‌ಸನ್‌ರೈಸರ್ಸ್‌ ಹೈದರಾಬಾದ್‌ಕಿಂಗ್ಸ್‌ XI ಪಂಜಾಬ್‌ಐಪಿಎಲ್‌ 2016
ಎಸ್‌. ಜಾಕ್ಸನ್‌ಕೊಲ್ಕತಾ ನೈಟ್‌ ರೈಡರ್ಸ್‌ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ಐಪಿಎಲ್‌ 2017
ಆರ್‌. ಪರಾಗ್‌ರಾಜಾಸ್ಥಾನ್‌ ರಾಯಲ್ಸ್‌ಕೊಲ್ಕತಾ ನೈಟ್‌ ರೈಡರ್ಸ್‌ಐಪಿಎಲ್‌ 2019
ಹಾರ್ದಿಕ್‌ ಪಾಂಡ್ಯಮುಂಬೈ ಇಂಡಿಯನ್ಸ್‌ಕೊಲ್ಕತಾ ನೈಟ್‌ ರೈಡರ್ಸ್‌ಐಪಿಎಲ್‌ 2020
ಜಾಣಿ ಬೈರ್ಸ್ಟೋಸನ್‌ರೈಸರ್ಸ್‌ ಹೈದರಾಬಾದ್‌ಮುಂಬೈ ಇಂಡಿಯನ್ಸ್‌ಐಪಿಎಲ್‌ 2021
ಸಾಯಿ ಸುದರ್ಶನ್‌ಗುಜರಾತ್‌ ಟೈಟನ್ಸ್‌ಮುಂಬೈ ಇಂಡಿಯನ್ಸ್‌ಐಪಿಎಲ್‌ 2022

ಇದನ್ನೂ ಓದಿ | IPL 2022 | ದುಬಾರಿ ದುಡ್ಡಿಗೆ ಮಾರಾಟವಾದವರು ಹೇಗೆ ಆಡಿದರು ನೋಡಿ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

Ruturaj Gaikwad: ಅಬ್ಬರದ ಫಿಫ್ಟಿ ಜತೆಗೆ ಕನ್ನಡಿಗನ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್!

Ruturaj Gaikwad: ಟಾಸ್‌ ಸೋತು ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಋತುರಾಜ್‌ ಗಾಯಕ್ವಾಡ್‌, ಶಿವಂ ದುಬೆ ಹಾಗೂ ಧೋನಿ ಬ್ಯಾಟಿಂಗ್‌ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Ruturaj Gaikwad
Koo

ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 14) ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್‌ ಬಾರಿಸಿದ ಋತುರಾಜ್‌ ಗಾಯಕ್ವಾಡ್‌, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.

ಋತುರಾಜ್‌ ಗಾಯಕ್ವಾಡ್‌ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್‌ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್‌ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್‌ ಜೈಂಟ್ಸ್‌ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ಹೆಸರಲ್ಲಿತ್ತು. ರಾಹುಲ್‌ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದ್ದರು.

ಮುಂಬೈ ವಿರುದ್ಧ ಋತುರಾಜ್‌ ಗಾಯಕ್ವಾಡ್‌ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್‌ ಸಮೇತ 69 ರನ್‌ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್‌ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್‌ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್‌ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.

Ruturaj Gaikwad becomes fastest Indian to 2000 IPL runs during 69-run knock vs MI

ರೋಹಿತ್‌ ಶರ್ಮಾ ರೆಕಾರ್ಡ್

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್​​ನಲ್ಲಿ 500 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್​ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್​ನಲ್ಲಿ ಬಂದ ಮೂರನೇ ಸಿಕ್ಸರ್​ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್​​ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.‌

ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

Continue Reading

ಐಪಿಎಲ್ 2024

MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

MS Dhoni: IPL 2024 : ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇನ್ನು, ಸಿಎಸ್‌ಕೆ ಕೊನೆಯ ಓವರ್‌ನಲ್ಲಿ ಮೂರು ಸಿಕ್ಸ್‌ ಬಾರಿಸಿದ ಮಹೇಂದ್ರ ಸಿಂಗ್‌ ಧೋನಿ ಅವರು ವಿಶೇಷ ದಾಖಲೆಯನ್ನೂ ಬರೆದರು.

VISTARANEWS.COM


on

MS Dhoni
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂದ್ಯವು ಗೆಲುವು (IPL 2024) ಸಾಧಿಸಿದೆ. ಅದರಲ್ಲೂ, ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ (MS Dhoni) ಅವರು ಬಾರಿಸಿದ ಮೂರು ಸಿಕ್ಸರ್‌ಗಳು ತಂಡದ ಗೆಲುವಿಗೆ ಕಾರಣವಾಗುವ ಜತೆಗೆ ಅಭಿಮಾನಿಗಳ ಮನವನ್ನೂ ತಣಿಸಿವೆ. ಧೋನಿ ಅವರು ಮೂರು ಸಿಕ್ಸರ್‌ ಮೂಲಕ ಗಮನ ಸೆಳೆದಿದ್ದಲ್ಲದೆ, ವಿರಾಟ್‌ ಕೊಹ್ಲಿ (Virat Kohli) ನಂತರ ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸ್‌ ಪರವಾಗಿ 250 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎನಿಸಿದ್ದಾರೆ.

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಸಿಎಸ್‌ಕೆ ಪರವಾಗಿ 250 ಪಂದ್ಯಗಳನ್ನು ಆಡುವುದಷ್ಟೇ ಕ್ಯಾಪ್ಟನ್‌ ಆಗಿಯೂ 200 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಮುನ್ನಡೆಸಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್‌ಕೆಯು 2010, 2011, 2018, 2021 ಹಾಗೂ 2023ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈಗ ಋತುರಾಜ್‌ ಗಾಯಕ್ವಾಡ್‌ ಅವರು ಸಿಎಸ್‌ಕೆಯನ್ನು ಮುನ್ನಡೆಸುತ್ತಿದ್ದು, ಧೋನಿ ಮಾರ್ಗದರ್ಶನವು ಮುಂದುವರಿದಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಗೆಲುವು

ಮತೀಶ್​ ಪತಿರಾಣಾ (4 ವಿಕೆಟ್​, 28 ರನ್​​) ಅವರ ಮಾರಕ ಬೌಲಿಂಗ್ ಹಾಗೂ ಋತುರಾಜ್ ಗಾಯಕ್ವಾಡ್​ (69 ರನ್​, 40 ಎಸೆತ, 5 ಫೋರ್, 5 ಸಿಕ್ಸರ್​) , ಶಿವಂ ದುಬೆ (66 ರನ್​, 38 ರನ್​,10 ಫೋರ್​, 2 ಸಿಕ್ಸರ್​ ) ಅವರ ಅರ್ಧ ಶತಕಗಳ ನೆರವಿನಿಂದ ಮಿಂಚಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು. ಅಂದ ಹಾಗೆ ಚೆನ್ನೈ ಪರ ಕೊನೇ ನಾಲ್ಕು ಎಸೆತಗಳನ್ನು ಎದುರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ​ 20 ರನ್​ಗಳನ್ನು ಬಾರಿಸಿದ್ದರು. ಅದರಲ್ಲಿ 3 ಸಿಕ್ಸರ್​ಗಳಿದ್ದವು. ಅದೇ ರನ್​ಗಳ ಅಂತರದಿಂದ ಚೆನ್ನೈ ಗೆದ್ದು ಬೀಗಿದ್ದು ವಿಶೇಷ. ಆದರೆ, ಮುಂಬೈ ಪರ ಏಕಾಂಗಿ ಹೋರಾಟ ನಡೆಸಿ ಅಮೋಘ 105 ರನ್ ಬಾರಿಸಿದ ರೋಹಿತ್ ಶರ್ಮಾ ಅವರ ಶತಕದ ಹೋರಾಟ ವ್ಯರ್ಥಗೊಂಡಿತು.

ಈ ಗೆಲುವು ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ನಾಲ್ಕನೆಯದ್ದು. ಅದೇ ರೀತಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಲ್ಕನೇ ಸೋಲು. ಹಾರ್ದಿಕ್ ಪಾಂಡ್ಯ ಬಳಗ ತವರಿನಲ್ಲಿ ನಡೆದ ಈ ಹಿಂದಿನ ಎರಡು ಪಂದ್ಯಗಳನ್ನು ಗೆದಿದ್ದರೆ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು. ಅಲ್ಲದೆ ಪ್ಲೇ ಆಫ್ ಹಾದಿಯನ್ನು ಕಠಿಣಗೊಳಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ಗೆಲುವಿನ ಪಾರಮ್ಯದ ಅಂತರ ಕಡಿಮೆಯಾಯಿತು ಒಟ್ಟು 36 ಪಂದ್ಯಗಳಲ್ಲಿ ಮುಂಬೈ 20 ರಲ್ಲಿ ಗೆದ್ದಿದ್ದರೆ, ಚೆನ್ನೈ 17 ಪಂದ್ಯಗಳಲ್ಲಿ ಗೆದ್ದಂತಾಯಿತು.

ಇದನ್ನೂ ಓದಿ: IPL 2024: ಅಬ್ಬರದ ಫೀಲ್ಡಿಂಗ್‌ ವೇಳೆ ಕಳಚಿದ ರೋಹಿತ್‌ ಶರ್ಮಾ ಪ್ಯಾಂಟ್;‌ ವಿಡಿಯೊ ವೈರಲ್!

Continue Reading
Advertisement
love jihad
ಕರ್ನಾಟಕ3 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ3 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು3 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ3 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ3 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ4 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ4 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ4 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ4 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202410 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202412 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202414 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202415 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ17 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌