Sperminator: ಈತನಿಂದ ಗರ್ಭ ಧರಿಸಿದ ಹೆಂಗಸರು 180; 200 ಮಕ್ಕಳಿಗೆ ಅಪ್ಪ! ಆದರೂ ಅವಿವಾಹಿತ - Vistara News

ಪ್ರಮುಖ ಸುದ್ದಿ

Sperminator: ಈತನಿಂದ ಗರ್ಭ ಧರಿಸಿದ ಹೆಂಗಸರು 180; 200 ಮಕ್ಕಳಿಗೆ ಅಪ್ಪ! ಆದರೂ ಅವಿವಾಹಿತ

Sperminator: ಇಂಗ್ಲೆಂಡ್ ಮೂಲದ 51 ವರ್ಷದ ಜೋ ಅಮೆರಿಕ ಸೇರಿದಂತೆ ವಿವಿಧ ದೇಶಗಳ ಮಹಿಳೆಯರಿಗೆ ವೀರ್ಯ ದಾನ ಮಾಡಿದ್ದಾರೆ. ಪರೋಕ್ಷವಾಗಿ 200ಕ್ಕೂ ಹೆಚ್ಚು ಮಕ್ಕಳಿಗೆ ತಂದೆಯಾಗಿದ್ದಾನೆ

VISTARANEWS.COM


on

Sperminator joe impregnated more than 180 women but he is still single
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್‌: ಇಂಗ್ಲೆಂಡ್‌ ಮೂಲದ ಈ ವ್ಯಕ್ತಿ 180 ಮಹಿಳೆಯರನ್ನು ಗರ್ಭಿಣಿ ಮಾಡಿದ್ದಾನೆ (impregnated women) ಮತ್ತು 200 ಮಕ್ಕಳಿಗೆ (200 Sons) ತಂದೆಯಾಗಿದ್ದಾನೆ! ಆದರೂ ಈತ ಅವಿವಾಹಿತ (Still Single) ಎಂದರೆ ನಂಬುತ್ತೀರಾ? ಬೇರೆ ದಾರಿಯೇ ಇಲ್ಲ. ನಂಬಲೇಬೇಕು, ಯಾಕೆಂದರೆ, ಈತ ವೀರ್ಯ ದಾನಿ(Sperm Donor)! ಈತನ ಸಂತಾನಶಕ್ತಿ ಎಷ್ಟು ಸ್ಟ್ರಾಂಗ್ ಇದೆ ಅಂದ್ರೆ, ಮಕ್ಕಳಾಗದ ಬ್ರಿಟನ್ ಮಹಿಳೆಯರೆಲ್ಲ ಈತನ ವೀರ್ಯ ದಾನಕ್ಕೆ ಎದುರು ನೋಡುತ್ತಿರುತ್ತಾರೆ. ಅಂದ ಹಾಗೆ ವೀರ್ಯ ದಾನಿ ಯಾರೆಂದರೆ, 51 ವರ್ಷದ ಜೋ(Sperminator Jeo).

ಈಗಲೂ ಸಿಂಗಲ್ ಆಗಿರುವ ಬಗ್ಗೆ ತಾವೇ ಕಾರಣವನ್ನು ನೀಡುತ್ತಾರೆ. ವೀರ್ಯ ದಾನಿಯ ಜೀವನ ಶೈಲಿಯನ್ನು ಸಹಿಸಿಕೊಳ್ಳಬಲ್ಲ ವ್ಯಕ್ತಿಯನ್ನು ಕಂಡುಹಿಡಿಯುವುದು ತುಂಬಾ ಕಷ್ಟ. ಹಾಗಾಗಿ, ಇದುವರೆಗೂ ತನ್ನನ್ನು ಒಪ್ಪುವ ಯಾರೂ ಸಿಕ್ಕಿಲ್ಲ ಎನ್ನುತ್ತಾರೆ 51 ವರ್ಷದ ವೀರ್ಯ ದಾನಿ ಜೋ. ಇವರು ನ್ಯೂಕ್ಯಾಸಲ್‌ನಲ್ಲಿ ವಾಸವಾಗಿದ್ದಾರೆ.

ತಮ್ಮನ್ನು ತಾವು ಏಂಜೆಲ್ ಆಫ್ ದಿ ನಾರ್ತ್ ಎಂದು ಹೇಳಿಕೊಳ್ಳುವ ಜೋ, 13 ವರ್ಷಗಳಲ್ಲಿ 180ಕ್ಕೂ ಅಧಿಕ ಮಹಿಳೆಯರಿಗೆ ಗರ್ಭ ಧರಿಸಲು ವೀರ್ಯ ದಾನ ಮಾಡಿದ್ದಾರೆ ಮತ್ತು 200 ಮಕ್ಕಳಿಗೆ ಪರೋಕ್ಷವಾಗಿ ತಂದೆಯಾಗಿದ್ದಾರೆ. ಈ ವ್ಯಕ್ತಿ ಇಂಗ್ಲೆಂಡ್‌ನ ವಾಸಿಯಾಗಿದ್ದರೂ ವೀರ್ಯ ದಾನಕ್ಕಾಗಿ ಅಮೆರಿಕದಿಂದ ಅರ್ಜೇಂಟಿನಾ, ಸಿಂಗಾಪುರದವರೆಗೂ ನಾನಾ ದೇಶಗಳಿಗೆ ಭೇಟಿ ನೀಡಿದ್ದಾರೆ. ಸಾಕಷ್ಟು ಹೆಣ್ಣು ಮಕ್ಕಳಿಗೆ ಗರ್ಭ ಧರಿಸಲು ಅವಕಾಶ ಕಲ್ಪಿಸಿದ್ದಾರೆ.

ಅಮೆರಿಕದಂಥ ದೇಶಗಳಲ್ಲಿ ಕೃತಕ ಗರ್ಭಧಾರಣೆ ಮತ್ತು ವಿಟ್ರೊ ಫಲೀಕರಣ ಮಾಡಲು ಸಾಕಷ್ಟು ವೆಚ್ಚವಾಗುತ್ತದೆ. ಈ ವೆಚ್ಚ ಭರಿಸಲು ಸಾಧ್ಯವಾಗದವರು ಖಾಸಗಿ ವೀರ್ಯಾಣು ದಾನಿಗಳ ಕಡೆಗೆ ಹೆಚ್ಚು ಮುಖ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಕೃತಕ ಗರ್ಭಧಾರಣೆಗೆ ಸುಮಾರು 11,000 ಡಾಲರ್ ವೆಚ್ಚವಾಗುತ್ತದೆ.

ಗರ್ಭ ಧರಿಸಲು ಇಚ್ಛಿಸುವ ಮಹಿಳೆಯರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮನ್ನು ಸಂಪರ್ಕಿಸುತ್ತಾರೆ ಎಂದು ಜೋ ಹೇಳಿದ್ದಾರೆ. ಬಳಿಕ, ಆ ಮಹಿಳೆಯರ ಪಿರಿಯಡ್ ಮತ್ತು ಇತರ ಮಾಹಿತಿಯನ್ನು ಕೇಳಿ ಪಡೆದುಕೊಳ್ಳುತ್ತಾರೆ. ಒಂದೊಮ್ಮೆ ಎಲ್ಲವೂ ಹೊಂದಾಣಿಕೆಯಾದರೆ, ಇಚ್ಛಿತ ಮಹಿಳೆಗೆ ಗರ್ಭಾದಾನಕ್ಕೆ ದಿನಾಂಕವನ್ನು ನೀಡಲಾಗುತ್ತದೆ. ಮಹಿಳೆಯರು ಎಐ(ಕೃತಕ ಗರ್ಭಧಾರಣೆ), ಪಿಐ(ಭಾಗಶಃ ಗರ್ಭಧಾರಣೆ) ಮತ್ತು ಎನ್ಐ(ನೈಸರ್ಗಿಕ ಗರ್ಭಧಾರಣೆ)… ಈ ಪೈಕಿ ಯಾವುದಾದರೂ ಒಂದು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ಈ ಗರ್ಭಾದಾನದಲ್ಲಿ ನೈಸರ್ಗಿಕ ಗರ್ಭಧಾರಣೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಆದರೆ, ಗರ್ಭಣಿಯಾಗಲು ಬಯಸುವ ಮಹಿಳೆಯರು ಈಗಾಗಲೇ ಸಂಬಂಧದಲ್ಲಿರುತ್ತಾರೆ. ಇದರಿಂದ ಅವರ ಸಂಬಂಧಲ್ಲಿ ಬಿರುಕು ಮೂಡುವ ಸಾಧ್ಯತೆಗಳಿರುವುದರಿಂದ ಅವರು ಕೃತಕ ಗರ್ಭಧಾರಣೆಯನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುತ್ತಾರೆ ಜೋ. ಇನ್ನೂ ವಿಶೇಷ ಎಂದರೆ, ಜೋ ಎಂದೂ ಭೇಟಿಯಾಗದ ಇಬ್ಬರು ಮಹಿಳೆಯರು ಕೂಡ ಇವರ ವೀರ್ಯದಿಂದಲೇ ಗರ್ಭಿಣಿಯಾಗಿದ್ದಾರೆ. ಜೋ ಅವರ ಆ ಮಹಿಳೆಗೆ ತಮ್ಮ ವೀರ್ಯವನ್ನು ಕೋರಿಯರ್ ಮಾಡಿದ್ದರಂತೆ!

ಈ ಸುದ್ದಿಯನ್ನೂ ಓದಿ: High court : ನಿಮಗೆ ಆಗದಿದ್ದರೆ, ಬೇರೆಯವರ ವೀರ್ಯ, ಅಂಡಾಣುನಿಂದ ಮಗು ಮಾಡ್ಕೊಬಹುದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Deisel Price Hike: ಟಾಂಗಾ, ಸೈಕಲ್ ಸವಾರಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು!

Petrol Deisel Price Hike: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಬೆಂಗಳೂರಿನಲ್ಲಿ ಜೆಡಿಎಸ್ ಉಗ್ರ ಪ್ರತಿಭಟನೆ ನಡೆಸಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

JDS protest against petrol diesel price hike in bengaluru
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಪೆಟ್ರೋಲ್ ಮತ್ತು ಡೀಸೆಲ್ (Petrol Deisel Price Hike) ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಜೆಡಿಎಸ್ ತೀವ್ರ ಪ್ರತಿಭಟನೆ ನಡೆಸಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿದಂತೆ ಅನೇಕ ನಾಯಕರು ಟಾಂಗಾ ಗಾಡಿ ಹತ್ತಿ, ಸೈಕಲ್ ತುಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

ಈ ಸಂದರ್ಭದಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದೆ ಎಂದು ಆಪಾದಿಸಿದರು.

ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕೆ ಜನರ ಕಿಸೆಗೆ ಕೈ ಹಾಕಿದೆ ಸರ್ಕಾರ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ. ಪೆಟ್ರೋಲ್-ಡಿಸೇಲ್‌ ಬೆಲೆ ಏರಿಕೆಯಿಂದ ಈಗ ದಿನಬಳಕೆ ವಸ್ತುಗಳ ಬೆಲೆ ಗಗನಮುಖಿ ಆಗಿದೆ. ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಎಂದು ಅವರು ದೂರಿದರು.

ಒಂದು ಕಡೆ ಗ್ಯಾರಂಟಿ ಕೊಡುತ್ತಿರುವ ಸರ್ಕಾರ, ಮತ್ತೊಂದು ಕಡೆ ಅದೇ ಜನರ ಮೇಲೆ ತೆರಿಗೆ ವಿಧಿಸುತ್ತಿದೆ. ಇದು ಯಾವ ನ್ಯಾಯ? ಒಂದು ಕೈಯ್ಯಲ್ಲಿ ಕೊಟ್ಟು ಇನ್ನೊಂದು ಕೈಯ್ಯಲ್ಲಿ ಕಿತ್ತುಕೊಳ್ಳುವ ಈ ಸರ್ಕಾರ ಜನ ವಿರೋಧಿ ಆಗಿದೆ ಎಂದು ಇತರೆ ನಾಯಕರು ಕಿಡಿಕಾರಿದರು.

ಕಾರ್ಯಕರ್ತರು ಸರ್ಕಾರದ ವಿರುದ್ಧ ನಾಮಫಲಕ, ಘೋಷಣ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಅಲ್ಲದೆ, ಕೂಡಲೇ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ತೆರಿಗೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

ದೇಶ

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Kannur Bomb Blast: ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Kannur Bomb Blast
Koo

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯ ಜಮೀನಿನಲ್ಲಿ ಬಾಂಬ್‌ (Kannur Bomb Blast) ಸ್ಫೋಟಗೊಂಡು 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕುಡಕ್ಕಲಮ್‌ ಗ್ರಾಮದ ಆಯಿನಾತ್‌ ವೇಲಾಯುಧನ್‌ (Aayinatt Velayudhan) ಅವರು ಮೃತರು. ಆಯಿನಾತ್‌ ವೇಲಾಯುಧನ್‌ ಅವರು ಜಮೀನಿನಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋದಾಗ, ಬಾಂಬ್‌ ಇದ್ದ ಪೊಟ್ಟಣ ಕಂಡಿದೆ. ಅದನ್ನು ಅವರು ಎತ್ತಿಕೊಂಡು, ತೆಗೆದು ನೋಡಿದಾಗ ಅದು ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ವೈದ್ಯರು ಘೋಷಿಸಿದರು ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ಸ್ಫೋಟಗೊಂಡ ಜಮೀನು.

“ಬಾಂಬ್‌ ಸ್ಫೋಟದ ಕುರಿತು ತನಿಖೆ ಆರಂಭಿಸಲಾಗಿದೆ. ಬಾಂಬ್‌ ಸ್ಫೋಟಗೊಂಡ ಸ್ಥಳದಲ್ಲಿ ಬಾಂಬ್‌ ನಿಷ್ಕ್ರೀಯ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಬುಧವಾರ ನಡೆಸಲಾಗುತ್ತದೆ. ಮರಣೋತ್ತರ ವರದಿ ಬಂದ ಬಳಿಕ ಇನ್ನಷ್ಟು ಮಾಹಿತಿ ದೊರೆಯಲಿದೆ” ಎಂಬುದಾಗಿ ತಲಸ್ಸೇರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಇದುವರೆಗೆ ಜಮೀನಿನಲ್ಲಿ ಬಾಂಬ್‌ ಹೇಗೆ ಬಂತು? ಅದನ್ನು ಎಲ್ಲಿ ತಯಾರಿಸಲಾಗಿತ್ತು? ಅದನ್ನೇಕೆ ಜಮೀನಿನಲ್ಲಿ ಬಿಸಾಡಲಾಗಿತ್ತು ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಕಣ್ಣೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಾಂಬ್‌ಗಳ ಉತ್ಪಾದನೆ ಹಾಗೂ ಸ್ಫೋಟದಂತಹ ಪ್ರಕರಣಗಳು ಹೆಚ್ಚಾಗಿವೆ. ಆರು ತಿಂಗಳ ಹಿಂದೆಯೇ ಕಸ ಸಂಗ್ರಹಿಸುವ ವ್ಯಕ್ತಿಯೊಬ್ಬರು ಕಸ ಆಯ್ದುಕೊಳ್ಳುವಾಗ ಬಾಂಬ್‌ ಸ್ಫೋಟಗೊಂಡು ಗಾಯಗೊಂಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರ ಮನೆಯ ಮೇಲೂ ಬಾಂಬ್‌ ದಾಳಿ ನಡೆದಿತ್ತು. ತಂಡವೊಂದು ಬಾಂಬ್‌ ತಯಾರಿಸುವಾಗಲೇ ಸ್ಫೋಟಗೊಂಡು ಸಿಪಿಎಂ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಇಂತಹ ಪ್ರಕರಣಗಳನ್ನು ನಿಗ್ರಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Continue Reading

ಬೆಂಗಳೂರು

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Bengaluru Power Cut: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್ ಮತ್ತು 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ (Bengaluru Power Cut) ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ (Power outage) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಚ್.ಬಿ.ಆರ್’ ಸ್ಟೇಷನ್‌ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10:30ರಿಂದ 4 ಗಂಟೆಯವರೆಗೆ ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ.

ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ‍್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಭಾಗದಲ್ಲಿ ವಿದ್ಯುತ್‌ ಕಡಿತವಾಗಲಿದೆ.

ಇದನ್ನೂ ಓದಿ | PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಆಸ್ಟಿನ್ ಟೌನ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸ್ಥಳಗಳು

66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿದ ಮಧ್ಯಾಹ್ನ 03 ಗಂಟೆಯವರೆಗೆ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್‌ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ, ರತ್ನ ಅವೆನ್ಯೂ, ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಠಲ್ ಮಲ್ಯ ರಸ್ತೆ, ಫುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ಬರ್ಟ್‌ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಮಂಡ್ ಸರ್ಕಲ್, ಎಂಬಸ್ಸಿ ಕಚೇರಿ, ಕಮಿಷನರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮಾರ್ಕ್ಹಮ್ ರಸ್ತೆ , ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಸಂಬಂಧಿತ ಯಾವುದೇ ದೂರಿಗಾಗಿ ಗ್ರಾಹಕರು ಬೆಸ್ಕಾಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ದೇಶ

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Kisan Samman Nidhi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದಾರೆ.

VISTARANEWS.COM


on

Kisan Samman Nidhi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ಅಲ್ಲದೆ, ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (Kisan Samman Nidhi) ಯೋಜನೆಯ 17ನೇ ಕಂತಿನ ಮೊತ್ತವಾದ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದರು.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿದ ಬಳಿಕ ನರೇಂದ್ರ ಮೋದಿ ಅವರು ಮೊದಲಿಗೆ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ ಮಾಡುವ ದಿಸೆಯಲ್ಲಿ 20 ಸಾವಿರ ಕೋಟಿ ರೂ. ಕಿಸಾನ್‌ ಸಮ್ಮಾನ್‌ ನಿಧಿ ಬಿಡುಗಡೆ ಮಾಡುವ ಕಡತಕ್ಕೆ ಸಹಿ ಮಾಡಿದ್ದರು. ಅದರಂತೆ ಮಂಗಳವಾರ ಮೋದಿ ಅವರು ರೈತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Continue Reading
Advertisement
Self Harming
ಕರ್ನಾಟಕ6 mins ago

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Adequately deposit the crop insurance amount in the farmers account says MLA Shivaram Hebbar
ಉತ್ತರ ಕನ್ನಡ6 mins ago

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Youth Empowerment and Sports Department Progress Review Meeting by CM Siddaramaiah
ಕರ್ನಾಟಕ13 mins ago

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

JDS protest against petrol diesel price hike in bengaluru
ಕರ್ನಾಟಕ16 mins ago

Petrol Deisel Price Hike: ಟಾಂಗಾ, ಸೈಕಲ್ ಸವಾರಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು!

Protest demanding adequate bus facility in Shira
ತುಮಕೂರು18 mins ago

Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Two bears were spotted in Devasamudra village of Kampli
ಕರ್ನಾಟಕ21 mins ago

Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

Kannur Bomb Blast
ದೇಶ53 mins ago

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Bengaluru Power Cut
ಬೆಂಗಳೂರು59 mins ago

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Kids Hair Fashion
ಫ್ಯಾಷನ್1 hour ago

Kids Hair Fashion: ಹೆಣ್ಣುಮಕ್ಕಳ ಸಿಂಗಾರಕ್ಕೆ ಬಂತು ಕ್ಯೂಟ್‌ ಹೇರ್ ಆಕ್ಸೆಸರೀಸ್‌

Kisan Samman Nidhi
ದೇಶ2 hours ago

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌