Japan Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ - Vistara News

ಪ್ರಮುಖ ಸುದ್ದಿ

Japan Earthquake: ಜಪಾನ್‌ನಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು (Japan Earthquake) ಸಂಭವಿಸಿದ ನಂತರ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ ಎಂದು ವರದಿಗಳು ಹೇಳಿವೆ.

VISTARANEWS.COM


on

Earthquake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೋಕಿಯೋ: ಜಪಾನ್‌ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದ್ದು, ಸುನಾಮಿ ಅಲರ್ಟ್‌ (Tsunami Alert) ನೀಡಲಾಗಿದೆ.

ಸೋಮವಾರ ಉತ್ತರ ಮಧ್ಯ ಜಪಾನ್‌ನಲ್ಲಿ 7.6 ರಿಕ್ಟರ್‌ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ನಂತರ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ ಎಂದು ವರದಿಗಳು ಹೇಳಿವೆ.

ಹೊಕುರಿಕು ಎಲೆಕ್ಟ್ರಿಕ್ ಪವರ್ ಸಂಸ್ಥೆಯ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಏನಾದರೂ ಹಾನಿಯಾಗಿದೆಯೇ ಎಂದು ಪರಿಶೀಲಿಸುತ್ತಿದೆ. ಜಪಾನ್ ಹವಾಮಾನ ಏಜೆನ್ಸಿಯು ಇಶಿಕಾವಾ ಮತ್ತು ಹತ್ತಿರದ ಪ್ರಾಂತಗಳಲ್ಲಿ ಭೂಕಂಪನವನ್ನು ವರದಿ ಮಾಡಿದೆ. ಅವುಗಳಲ್ಲಿ ಒಂದು 7.4ರ ಪ್ರಾಥಮಿಕ ತೀವ್ರತೆಯನ್ನು ದಾಖಲಿಸಿದೆ.

ಸಮುದ್ರ ತೀರದಲ್ಲಿ ಅಲೆಗಳು 5 ಮೀಟರ್ (16.5 ಅಡಿ) ಎತ್ತರ ತಲುಪಬಹುದು ಎಂದು ಹವಾಮಾನ ಸಂಸ್ಥೆ ಎಚ್ಚರಿಸಿದೆ. ಸಾಧ್ಯವಾದಷ್ಟು ಬೇಗ ಎತ್ತರದ ಪ್ರದೇಶಗಳು ಅಥವಾ ಹತ್ತಿರದ ಕಟ್ಟಡದ ಮೇಲ್ಭಾಗಕ್ಕೆ ಹೋಗಲು ಜನತೆಗೆ ತಿಳಿಸಿದೆ. ಇಶಿಕಾವಾ ಪ್ರಿಫೆಕ್ಚರ್‌ನ ವಾಜಿಮಾ ನಗರದ ತೀರಕ್ಕೆ 1 ಮೀಟರ್‌ಗಿಂತಲೂ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದವು. “ಎಲ್ಲಾ ನಿವಾಸಿಗಳು ತಕ್ಷಣವೇ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಬೇಕು” ಎಂದು ರಾಷ್ಟ್ರೀಯ ಬ್ರಾಡ್‌ಕಾಸ್ಟರ್ NHKಯು ಸೂಚನೆ ನೀಡಿದೆ.

ಏತನ್ಮಧ್ಯೆ ಜಪಾನ್‌ನಲ್ಲಿ 7.6 ತೀವ್ರತೆಯ ಭೂಕಂಪದ ನಂತರ ಪೂರ್ವ ಕರಾವಳಿಯ ಕೆಲವು ಭಾಗಗಳಲ್ಲಿ ಸಮುದ್ರ ಮಟ್ಟವು ಹೆಚ್ಚಾಗಬಹುದು ಎಂದು ದಕ್ಷಿಣ ಕೊರಿಯಾದ ಹವಾಮಾನ ಸಂಸ್ಥೆ ಹೇಳಿದೆ. ಕನ್ಸಾಯ್ ಎಲೆಕ್ಟ್ರಿಕ್ ಪವರ್‌ ಸಂಸ್ಥೆಯ ವಕ್ತಾರರು, ಪ್ರಸ್ತುತ ಅದರ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ. ಪಶ್ಚಿಮ ಜಪಾನ್‌ನಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ನಂತರ ಎಲ್ಲಾ ಹೈಸ್ಪೀಡ್ ರೈಲುಗಳು ಇಶಿಕಾವಾ ಪ್ರಿಫೆಕ್ಚರ್‌ನಲ್ಲಿ ನಿಂತಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದೊಡ್ಡ ಭೂಕಂಪಗಳು ಇಲ್ಲಿ ಆಗಾಗ ಸಂಭವಿಸುವ ಪರಿಣಾಮ ನಿವಾಸಿಗಳು ಅದಕ್ಕೆ ಇಲ್ಲಿ ಸದಾ ಸಿದ್ಧರಿರುತ್ತಾರೆ. “ನಿಮ್ಮ ಮನೆ, ನಿಮ್ಮ ವಸ್ತುಗಳು ನಿಮಗೆ ಅಮೂಲ್ಯವೆಂದು ನಾವು ಅರಿತುಕೊಂಡಿದ್ದೇವೆ, ಆದರೆ ನಿಮ್ಮ ಜೀವನವು ಎಲ್ಲಕ್ಕಿಂತ ಮುಖ್ಯವಾಗಿದೆ. ಸಾಧ್ಯವಾದಷ್ಟು ಎತ್ತರದ ಜಾಗ ಹೋಗಿ” ಎಂದು ಟಿವಿ ನಿರೂಪಕರು ಹೇಳಿದರು.

ಇಲ್ಲಿನ ಕಟ್ಟಡಗಳು ಪ್ರಬಲವಾದ ಭೂಕಂಪಗಳನ್ನು ತಡೆದುಕೊಳ್ಳಬಲ್ಲಂತೆ ಜಪಾನ್ ಕಟ್ಟುನಿಟ್ಟಾದ ನಿರ್ಮಾಣ ನಿಯಮಗಳನ್ನು ಹೊಂದಿದೆ. ದೊಡ್ಡ ಭೂಕಂಪನಕ್ಕೆ ತಯಾರಾಗುವ ತುರ್ತು ಅಭ್ಯಾಸಗಳನ್ನು ಹೊಂದಿದೆ.

ಮಾರ್ಚ್ 11, 2011ರಂದು ಈಶಾನ್ಯ ಜಪಾನ್‌ನಲ್ಲಿ 9.0 ರಿಕ್ಟರ್‌ ವ್ರತೆಯ ಭಾರಿ ಭೂಕಂಪ ಸಂಭವಿಸಿದ ಬಳಿಕ ಸುನಾಮಿ ಅಪ್ಪಳಿಸಿತ್ತು. ಇದು ಹಲವು ಪಟ್ಟಣಗಳನ್ನು ವಿಧ್ವಂಸಗೊಳಿಸಿತು ಮತ್ತು ಫುಕುಶಿಮಾ ಪರಮಾಣು ಸ್ಥಾವರಕ್ಕೆ ದೊಡ್ಡ ಹಾನಿ ಎಸಗಿತ್ತು. ಅದು ಸುಮಾರು 18,500 ಜನರನ್ನು ಕೊಂದಿತ್ತು.

ಇದನ್ನೂ ಓದಿ: China Earthquake: ಪ್ರಬಲ ಭೂಕಂಪಕ್ಕೆ ತತ್ತರಿಸಿದ ಚೀನಾ, 110ಕ್ಕೂ ಅಧಿಕ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು.

VISTARANEWS.COM


on

Joe Biden
Koo

ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಪನ್ನುನ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಈ ಮಾತಿನಲ್ಲಿ ಸತ್ಯವೆಷ್ಟಿದೆ, ಸುಳ್ಳೆಷ್ಟು ಎಂಬುದು ಇಡೀ ಜಗತ್ತಿಗೇ ಗೊತ್ತು. ಈ ಭೂಮಿಯಲ್ಲಿ ಎಲ್ಲ ದೇಶಗಳ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ದೇಶ ಒಂದಿದ್ದರೆ ಅದು ಅಮೆರಿಕ. ರಷ್ಯ ಕೂಡ ಸುಮ್ಮಸುಮ್ಮನೇ ಆರೋಪ‌ ಮಾಡಲಾರದು. ಅದರ ಬೇಹುಗಾರಿಕೆ ಶಕ್ತಿ ಕೂಡ ಬಲವಾಗಿಯೇ ಇದೆ. ಹೀಗಾಗಿ ಅದು ಹಂಚಿಕೊಂಡಿರುವ ಮಾಹಿತಿ ಪೂರ್ತಿ ಸುಳ್ಳು ಎನ್ನಲಾಗುವುದಿಲ್ಲ. ರಷ್ಯ ಹಾಗೂ ಅಮೆರಿಕ ಸಾಂಪ್ರದಾಯಿಕ ವೈರಿಗಳಾಗಿರುವುದರಿಂದ, ಆ ಅಂಶವೂ ರಷ್ಯದ ಹೇಳಿಕೆಯ ಹಿಂದೆ ಸ್ವಲ್ಪ ಕೆಲಸ ಮಾಡಿರಬಹುದು ಅನ್ನೋಣ.

ಅನ್ಯ ದೇಶಗಳ ವಿಚಾರದಲ್ಲಿ ಮೂಗು ತೂರಿಸುವ ಅಮೆರಿಕದ ಚಾಳಿಗೆ ಸಾಕಷ್ಟು ಇತಿಹಾಸವಿದೆ. ಅದು ಕ್ಯೂಬಾದ, ರಷ್ಯದ ಅಧ್ಯಕ್ಷರ ಹತ್ಯೆಗೆ ಯತ್ನಿಸಿದೆ; ಅಫ್ಘಾನಿಸ್ತಾನವನ್ನು ಭಯೋತ್ಪಾದಕರನ್ನು ಬೆಳೆಸಿ ಪೂರ್ತಿ ನಾಶ ಮಾಡಿದೆ. ಪಾಕ್ ಅದೇ ಹಾದಿಯಲ್ಲಿದೆ. ಗಲ್ಫ್ ದೇಶಗಳಲ್ಲಿ ಅಮೆರಿಕದ ಮೂಗಿನ ನೇರಕ್ಕೆ ಕುಣಿಯದ ಇರಾನ್, ಟರ್ಕಿ, ಮುಂತಾದ ದೇಶಗಳನ್ನು ಬೆದರಿಸುತ್ತದೆ. ನ್ಯಾಟೋ ಮೂಲಕ ಯುರೋಪ್ ದೇಶಗಳನ್ನು ಕುಣಿಸುತ್ತಿದೆ. ಲ್ಯಾಟಿನ್ ಅಮೆರಿಕದ ಡ್ರಗ್ಸ್ ಜಾಲವನ್ನು ಗುಮ್ಮನಗುಸಕನಂತೆ ಪೋಷಿಸಿದೆ. ವಿಯೆಟ್ನಾಂ ಮೊದಲಾದ ದೇಶಗಳನ್ನು ನೇರ ಮಿಲಿಟರಿ ದಾಳಿ ಮೂಲಕ ಬಗ್ಗುಬಡಿಯಲು ಯತ್ನಿಸಿದೆ. ಅಮೆರಿಕ ಎಸಗದ ಕುಕೃತ್ಯವೇ ಇಲ್ಲ. ಇಂಥ ದೇಶದ ಮಿಲಿಟರಿ ಮತ್ತು ಬೇಹುಗಾರಿಕೆ ನಮ್ಮ ದೇಶದ ಚುನಾವಣೆಯಲ್ಲಿ ಕರಾಮತ್ತಿಗೆ ಮುಂದಾದರೆ ಆಶ್ಚರ್ಯವಿಲ್ಲ.

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಭಾರತದ ರಸಗೊಬ್ಬರ ಸಬ್ಸಿಡಿ, ಭತ್ತದ ಇಳುವರಿಯ ಹೆಚ್ಚಳ ಇತ್ಯಾದಿಗಳ ಬಗ್ಗೆ ಅದರ ಕೊಂಕು ಇದೆ. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು. ಸದ್ಯ ಅದು ಪನ್ನುನ್ ಹತ್ಯೆ ಸಂಚಿನ ನೆಪ ಹಿಡಿದುಕೊಂಡು ಭಾರತಕ್ಕೆ ಮುಜುಗರ ಸೃಷ್ಟಿಸುವ ಯತ್ನದಲ್ಲಿದೆ. ಆದರೆ ಪನ್ನುನ್ ಭಾರತಕ್ಕೆ ಪೀಡಕನಾದ ಒಬ್ಬ ಭಯೋತ್ಪಾದಕ ಎಂಬುದನ್ನು ಒಪ್ಪಿಕೊಳ್ಳಲು ಅದು ಸಿದ್ಧವಿಲ್ಲ.

ಆದರೆ ಭಾರತ ಇದನ್ನೆಲ್ಲ ಅರ್ಥ ಮಾಡಿಕೊಳ್ಳಲು ಆಗದ ದಡ್ಡ ದೇಶವಲ್ಲ. ನಮಗೆ ನಮ್ಮದೇ ರಾಜನೀತಿಯಿದೆ, ಸಂವಿಧಾನವಿದೆ. ನಮ್ಮ ಸಾರ್ವಭೌಮತ್ವವನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನಮ್ಮ ಚುನಾವಣೆಗಳು ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ. ಅಮೆರಿಕದ ಕೈವಾಡವನ್ನು ಪತ್ತೆ ಹಚ್ಚುವಷ್ಟು, ಅದನ್ನು ಮೊಳಕೆಯಲ್ಲೇ ನಿಗ್ರಹಿಸುವಷ್ಟು ಶಕ್ತವಾಗಿದೆ ನಮ್ಮ ಬೇಹುಗಾರಿಕೆ ಶಕ್ತಿ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Continue Reading

ಭವಿಷ್ಯ

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಚೌತಿ 26:03 ವಾರ: ಶನಿವಾರ
ನಕ್ಷತ್ರ: ಮೃಗಶಿರಾ 10:14 ಯೋಗ: ಸುಕರ್ಮ 10:01
ಕರಣ: ವಣಿಜ 14:20 ಅಮೃತಕಾಲ: ಮಧ್ಯರಾತ್ರಿ 12:22 ರಿಂದ 01:59

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ .ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ:ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ:ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧದ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕುಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕವಾಗಿ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ:ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Narendra Modi: “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು. ಹಾಗೆಯೇ, ನಕಲಿ ಎನ್‌ಸಿಪಿ, ನಕಲಿ ಶಿವಸೇನೆ ಎಂದು ಕೂಡ ಚಾಟಿ ಬೀಸಿದರು.

VISTARANEWS.COM


on

Narendra Modi
Koo

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಹರಿದು ಹಂಚಿ ಹೋಗಿರುವ ಕಾರಣ ಈ ಬಾರಿಯ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶವು ತೀವ್ರ ಕುತೂಹಲ ಕೆರಳಿಸಿದೆ. ಶಿವಸೇನೆಯನ್ನು ಇಬ್ಭಾಗ ಮಾಡಿದ ಏಕನಾಥ್‌ ಶಿಂಧೆ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಶರದ್‌ ಪವಾರ್‌ (Sharad Pawar) ನೇತೃತ್ವದ ಎನ್‌ಸಿಪಿಯನ್ನು ಒಡೆದ ಅಜಿತ್‌ ಪವಾರ್‌ (Ajit Pawar) ಈಗ ಉಪ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ, ರಾಜ್ಯದ ಎರಡು ಪ್ರಮುಖ ಪಕ್ಷಗಳೀಗ ಹರಿದು ಹಂಚಿ ಹೋಗಿವೆ. ಇದರ ಮಧ್ಯೆಯೇ, ಉದ್ಧವ್‌ ಠಾಕ್ರೆ (Uddhav Thackeray) ಬಣದ ಶಿವಸೇನೆಗೆ ಹಾಗೂ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ನರೇಂದ್ರ ಮೋದಿ (Narendra Modi) ಹೊಸ ಸಲಹೆ ನೀಡಿದ್ದಾರೆ.

ಮಹಾರಾಷ್ಟ್ರದ ನಂದುರ್‌ಬರ್‌ನಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಎನ್‌ಸಿಪಿ ಹಾಗೂ ಶಿವಸೇನೆಗೆ ಪರೋಕ್ಷವಾಗಿ ಚಾಟಿ ಬೀಸಿದರು. ಹಾಗೆಯೇ ಸಲಹೆಯನ್ನೂ ನೀಡಿದರು. “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು.

ನಕಲಿ ಪಕ್ಷಗಳು ಎಂದು ವಾಗ್ದಾಳಿ

ಶರದ್‌ ಪವಾರ್‌ ಅವರ ಎನ್‌ಸಿಪಿ ಹಾಗೂ ಉದ್ಧವ್‌ ಠಾಕ್ರೆ ಅವರ ಶಿವಸೇನೆಯನ್ನು ನರೇಂದ್ರ ಮೋದಿ ಅವರು ನಕಲಿ ಪಕ್ಷಗಳು ಎಂದು ಜರಿದರು. “ರಾಜ್ಯದಲ್ಲಿ ಕಳೆದ 40-50 ವರ್ಷದಿಂದ ರಾಜಕೀಯ ಮಾಡುತ್ತಿರುವ ಪ್ರಮುಖ ನಾಯಕರೊಬ್ಬರು ಬಾರಾಮತಿ ಲೋಕಸಭೆ ಕ್ಷೇತ್ರದ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ಜೂನ್‌ 4ರ ನಂತರ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನವಾಗಲಿವೆ ಎಂಬುದಾಗಿ ಹೇಳಿದ್ದಾರೆ. ಇದರ ಅರ್ಥವು ನಕಲಿ ಎನ್‌ಸಿಪಿ ಹಾಗೂ ನಕಲಿ ಶಿವಸೇನೆಯು ಕಾಂಗ್ರೆಸ್‌ ಜತೆ ವಿಲೀನ ಮಾಡಿಕೊಳ್ಳುತ್ತವೆ ಎಂಬುದಾಗಿದೆ. ಇದರ ಬದಲು ಅಜಿತ್‌ ಹಾಗೂ ಶಿಂಧೆ ಬಣಗಳೊಂದಿಗೆ ವಿಲೀನಗೊಳಿಸುವುದು ಉತ್ತಮ” ಎಂದು ಹೇಳಿದರು.

ಶರದ್‌ ಪವಾರ್‌ ಹೇಳಿದ್ದೇನು?

ಮಹಾರಾಷ್ಟ್ರದ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಎಂಬುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದ ವೇಳೆ ಎನ್‌ಸಿಪಿ ವರಿಷ್ಠ ನಾಯಕ ಶರದ್‌ ಪವಾರ್‌ ಹೇಳಿದ್ದರು. “ಮುಂದಿನ ಎರಡು ವರ್ಷಗಳಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಇಲ್ಲವೇ ವಿಲೀನಗೊಳಿಸಲು ಚಿಂತನೆ ನಡೆಸಲಿವೆ. ಪ್ರಾದೇಶಿಕ ಪಕ್ಷಗಳು ಅಸ್ತಿತ್ವಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ” ಎಂದು ಹೇಳಿದ್ದರು. ಹಾಗಾಗಿ, ಮೋದಿ ಅವರು ಶರದ್‌ ಪವಾರ್‌ ಹಾಗೂ ಉದ್ಧವ್‌ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ಕ್ರೀಡೆ

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

IPL 2024: ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಅಹಮದಾಬಾದ್​: ಆರಂಭಿಕ ಜೋಡಿ ಸಾಯಿ ಸುದರ್ಶನ್​​ (103 ರನ್​, 5 ಫೋರ್​, 7 ಸಿಕ್ಸರ್​) ಶುಭ್​ಮನ್​ ಗಿಲ್​​ (104 ರನ್​, 9 ಪೋರ್​, 6 ಸಿಕ್ಸರ್​) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಮಿಂಚಿದ ಗುಜರಾತ್ ಜೈಂಟ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 35 ರನ್​ಗಳ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್​ಸಿಬಿಯ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುಜರಾತ್​ ಜೈಂಟ್ಸ್ ಕೂಡ 10 ಅಂಕಗಳನ್ನು ಪಡೆದಿದ್ದು ಆರ್​ಸಿಬಿಯ ಸಮಾನವಾಗಿ ನಿಂತಿದೆ. ಹೀಗಾಗಿ ಪ್ಲೇಆಫ್​ಗೆ ಪೈಪೋಟಿ ಅಧಿಕವಾಗಿದೆ. ಈ ಗೆಲುವಿನೊಂದಿಗೆ ಗುಜರಾತ್ ತಂಡ ಎರಡು ಸ್ಥಾನ ಮೇಲಕ್ಕೇರಿ 8ನೇ ಸ್ಥಾನಕ್ಕೆ ಬಂದಿದೆ. ಮುಂಬಯಿ 9 ರಲ್ಲಿ ಇದ್ದರೆ ಪಂಜಾಬ್​ 10ರಲ್ಲಿದೆ. ಚೆನ್ನೈ ನಾಲ್ಕನೇ ಸ್ಥಾನದಲ್ಲಿಯೇ ಇದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಅಬ್ಬರ ಪ್ರದರ್ಶನ ನೀಡಿತು. ಆರಂಭಿಕರಾದ ಸಾಯಿ ಸುದರ್ಶನ್​ ಹಾಗೂ ನಾಯಕ ಗಿಲ್ ಭರ್ಜರಿ ಪ್ರದರ್ಶ ನೀಡಿದರು. ಅವರಿಬ್ಬರೂ ಶತಕ ಬಾರಿಸುವ ಮೂಲಕ ಭರ್ಜರಿ ಪ್ರದರ್ಶನ ನೀಡಿದರು. ಗಿಲ್ ಹಾಗೂ ಸಾಯಿ ಸುದರ್ಶನ್​ ತಲಾ 50 ಎಸೆತಗಳಲ್ಲಿ ಶತಕ ಬಾರಿಸಿದರು. ಹೀಗಾಗಿ ಮೊದಲ ವಿಕೆಟ್​ಗೆ ಚೆನ್ನೈ ತಂಡ 210 ರನ್ ಬಾರಿಸಿತು. ಬಳಿಕ ಡೇವಿಲ್​ ಮಿಲ್ಲರ್ 16 ರನ್ ಬಾರಿಸಿದರೆ ಶಾರುಖ್ ಖಾನ್ 3 ರನ್ ಗಳಿಸಿದರು.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈ ತಂಡ ಆರಂಭದಲ್ಲೇ ಸತತವಾಗಿ ವಿಕೆಟ್​ಗಳನ್ನು ಕಳೆದುಕೊಂಡಿತು. ಅಜಿಂಕ್ಯ ರಹಾನೆ 1 ರನ್​ಗೆ ಔಟಾದರೆ, ರಚಿನ್ ರವೀಂದ್ರ ಕೂಡ ಅದೇ ಮೊತ್ತಕ್ಕೆ ಔಟಾದರು. ಅವರು ಡೇವಿಡ್​ ಮಿಲ್ಲರ್ ಮಾಡಿರುವ ಅಮೋಘ ರನ್​ಔಟ್​ಗೆ ಬಲಿಯಾದರು. ನಾಯ್ಕ ಋತುರಾಜ್ ಕೊಡುಗೆ ಕೂಡ ಶೂನ್ಯ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್​ ಮಿಚೆಲ್ (34 ಎಸೆತಕ್ಕೆ 63 ರನ್ ) ಅರ್ಧ ಶತಕ ಬಾರಿಸಿದರೆ ಮೊಯಿಲ್ ಅಲಿ ಕೂಡ 56 ರನ್ ಬಾರಿಸಿದರು. ಇವರಿಬ್ಬರೂ ನಾಲ್ಕನೇ ವಿಕೆಟ್​ಗೆ 109 ರನ್ ಬಾರಿಸಿದರು. ಆದರೆ ಇವರ ಜತೆಯಾಟ ಮುರಿದ ಬಳಿಕ ಒಂದೊಂದೆ ವಿಕೆಟ್​ಗಳು ಉರುಳಿದವು. ಶಿವಂ ದುಬೆ 21 ರನ್ ಹೊಡೆದರೆ, ರವೀಂದ್ರ ಜಡೇಜಾ 18 ರನ್​ಗೆ ಸೀಮಿತಗೊಂಡರು. ಕೊನೆಯಲ್ಲಿ ಧೋನಿ 11 ಎಸೆತಕ್ಕೆ 26 ರನ್ ಬಾರಿಸಿದರೂ ತಂಡಕ್ಕೆ ಅದರಿಂದ ಗೆಲವು ಪಡೆಯಲು ಸಾಧ್ಯವಾಗಲಿಲ್ಲ.

ಮೋಹಿತ್ ಶರ್ಮಾ 31 ರನ್​ ಗೆ 3 ವಿಕೆಟ್ ಪಡೆದರೆ ರಶೀದ್ ಖಾನ್​ 3 ರನ್ ನೀಡಿ 2 ವಿಕೆಟ್ ಪಡೆದರು.

Continue Reading
Advertisement
K S Rajanna
ದೇಶ19 mins ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ36 mins ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ1 hour ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ1 hour ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ2 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ2 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ2 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ3 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ4 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ20 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ21 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ22 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌