Road Accident : ರಸ್ತೆ ತಿರುವಿನಲ್ಲಿ ಅವಿತಿದ್ದ ಜವರಾಯ; ಟಿಪ್ಪರ್‌ ಚಕ್ರಕ್ಕೆ ಸಿಲುಕಿ ಸವಾರ ಮೃತ್ಯು - Vistara News

ಉಡುಪಿ

Road Accident : ರಸ್ತೆ ತಿರುವಿನಲ್ಲಿ ಅವಿತಿದ್ದ ಜವರಾಯ; ಟಿಪ್ಪರ್‌ ಚಕ್ರಕ್ಕೆ ಸಿಲುಕಿ ಸವಾರ ಮೃತ್ಯು

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸಾವು- ನೋವಿಗೆ ಕಾರಣವಾಗಿದೆ. ಯಮಸ್ವರೂಪಿ ವಾಹನಗಳಿಗೆ ಸವಾರರು ಪ್ರಾಣ ಬಿಟ್ಟಿದ್ದಾರೆ.

VISTARANEWS.COM


on

Road Accident in dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಹೈವೇಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ (Road Accident) ಹೊಡೆದಿದೆ. ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯುವಾಗಿದ್ದಾನೆ. ನಾಗಯ್ಯ ಹಿರೇಮಠ್ (56) ಮೃತ ದುರ್ದೈವಿ. ಧಾರವಾಡದ ಹೊರವಲಯದ ಹೊಯ್ಸಳ ನಗರದ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯ ತಾರಿಹಾಳ ನಗರದ ನಿವಾಸಿಯಾಗಿರುವ ನಾಗಯ್ಯ ಬೈಕ್‌ನಲ್ಲಿ ಬರುತ್ತಿದ್ದರು. ತಾರಿಹಾಳದಿಂದ ಬೇಲೂರು ಕಡೆಗೆ ಹೋಗುವಾಗ ವೇಗವಾಗಿ ಬಂದ ಟಿಪ್ಪರ್‌ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಸಮೇತ ಹಾರಿ ಸವಾರ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಟೈಯರ್ ಅಡಿ ಸಿಲುಕಿ ಸವಾರ ನಾಗಯ್ಯ ಜೀವಬಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಟಿಪ್ಪರ್‌ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned in water tank : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ವರ್ಷದ ಕೂಸು!

ಗೋವಾ ಪಾರ್ಟಿ ಮುಗಿಸಿ ಬರುವಾಗ ಅಪಘಾತಕ್ಕೀಡಾದ ಕಾರು, ವ್ಯಕ್ತಿ ಸಾವು

ಗೋವಾ ಪ್ರವಾಸ ಮುಗಿಸಿ ವಾಪಸ್‌ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮದಲ್ಲಿ ಈ ಅಪಘಾತ ನಡೆದಿದೆ.

ಗುರುಮೂರ್ತಿ (35) ಮೃತ ದುರ್ದೈವಿ. ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸ ವರ್ಷಾಚರಣೆ ಮಾಡಲು ಜಗಳೂರಿನಿಂದ ಡಿ. 31ರಂದು ಗೋವಾಕ್ಕೆ ಐವರು ಪ್ರವಾಸಕ್ಕೆ ಹೋಗಿದ್ದರು. ಗೋವಾದಲ್ಲಿ ಪಾರ್ಟಿ ಮುಗಿಸಿ ಬರುವಾಗ ಮಂಗಳವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Road Accident : ತುಂಡಾದ ಆ್ಯಕ್ಸಲ್‌ ಬ್ಲೇಡ್‌; ಉರುಳುತ್ತಿದ್ದ ಬಸ್ಸನ್ನು ಹಿಡಿದು ನಿಲ್ಲಿಸಿದ ಆಪದ್ಭಾಂಧವರು

ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಸ್ಕೂಟಿ ಮೇಲಿಂದ ಹಾರಿ ಬಿದ್ದಳು

ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ಯುವತಿ 50 ಮೀಟರ್ ಹಾರಿ ಕೆಳಗೆ ಬಿದ್ದಿದ್ದಾಳೆ. ಸ್ಕೂಟಿಗೆ ಡಿಕ್ಕಿ ಹೊಡೆದು ಮುಂದೆ ಇದ್ದ ಮತ್ತೆರಡು ಕಾರಿಗಳಿಗೂ ರಭಸವಾಗಿ ಗುದ್ದಿದೆ.

ಗಾಡಿ ಓಡಿಸುತ್ತಿದ್ದ ದಿವ್ಯಾ ಸುಜಯ್ ಪಾಟೀಲ (23) ಎಂಬಾಕೆ ಗಂಭೀರ ‌ಗಾಯಗೊಂಡಿದ್ದಾಳೆ. ಬೆಳಗಾವಿಯ ಬ್ರಹ್ಮನಗರದ ನಿವಾಸಿಯಾಗಿರುವ ದಿವ್ಯಾ, ಬೆಳಗಾವಿಯ ಮಜಗಾಂವ ಕಡೆಯಿಂದ ಪೀರನವಾಡಿ ಕಡೆಗೆ ಹೊರಟಿದ್ದಳು. ಗಂಭೀರ ಗಾಯಗೊಂಡಿದ್ದ ದಿವ್ಯಾಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಿಂದಾಗಿ ಸ್ಕೂಟಿ ಎರಡು ಪೀಸ್‌ ಆಗಿದ್ದರೆ, ಮೂರು ಕಾರುಗಳು ಜಖಂಗೊಂಡಿವೆ. ಸರಣಿ ಅಪಘಾತದ ಭಯಾನಕ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಮಾಡಿದ ಕಾರು ಚಾಲಕ ಭರತ ಚೌಗಲೇ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ‌ದಕ್ಷಿಣ ಸಂಚಾರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Road Accident : ಎಲೆಕ್ಟ್ರಿಕ್‌ ಬಸ್‌- ಜೀಪ್‌ ಮಧ್ಯೆ ಭೀಕರ ಅಪಘಾತ; ನಾಲ್ವರು ಸಾವು

ಉಡುಪಿಯಲ್ಲಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಆಂಬ್ಯುಲೆನ್ಸ್‌

ಉಡುಪಿಯ ಲಕ್ಷ್ಮೀಂದ್ರ ನಗರದಲ್ಲಿರುವ ಜನೌಷಧಿ ಕೇಂದ್ರಕ್ಕೆ ಆಂಬ್ಯುಲೆನ್ಸ್‌ವೊಂದು ನುಗ್ಗಿದೆ. ನಸುಕಿನ ಜಾವ ಬರುವಾಗ ಆಂಬ್ಯುಲೆನ್ಸ್‌ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಏಕಾಏಕಿ ಜನೌಷಧಿ ಕೇಂದ್ರಕ್ಕೆ ನುಗ್ಗಿದೆ. ಘಟನೆಯಲ್ಲಿ ಚಾಲಕನಿಗೆ ಗಾಯಗಳಾಗಿವೆ.

ಚಿತ್ರದುರ್ಗದಲ್ಲಿ ಶಾಲಾ ವಾಹನ ಪಲ್ಟಿ

ಶಾಲಾ ವಾಹನ ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಬಸ್ ಚನ್ನಸಮುದ್ರ ಗ್ರಾಮದಿಂದ ಹೋಗುತ್ತಿದ್ದಾಗ ಪಲ್ಟಿಯಾಗಿದೆ.

ತೆಂಗಿನ ತೋಟದ ಕೆಲಸಕ್ಕೆ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಯಲ್ಲಿ ಗುಂಡಿ ತೆಗೆಯಲಾಗಿತ್ತು. ಆದರೆ ರಸ್ತೆ ಗುಂಡಿಯನ್ನು ಅರ್ಧಂಬರ್ಧ ಮುಚ್ಚಿದ್ದೆ ಬಸ್‌ ಪಲ್ಟಿಯಾಗಲು ಕಾರಣ ಎನ್ನಲಾಗಿದೆ. ಬಸ್‌ನಲ್ಲಿದ್ದ ಸುಮಾರು 15 ರಿಂದ 20 ಮಕ್ಕಳು ಗಾಯಗೊಂಡಿದ್ದು, ಅವರನ್ನೆಲ್ಲ ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Road Accident : ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Chitradurga News
Koo

ಚಿತ್ರದುರ್ಗ : ಶನಿವಾರ ಮುಂಜಾನೆ ವೇಳೆಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ(Road Accident) ನಡೆದಿದೆ. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಡಿವೈಡರ್ ಕಲ್ಲುಗಳಿಗೆ ಬಡಿದು ಕಾರು ಪಲ್ಟಿ

ರಸ್ತೆ ಮಧ್ಯೆ ಇಟ್ಟಿದ್ದ ಕಲ್ಲಿಗೆ ಕಾಣದೇ ಗುದ್ದಿದ ಕಾರೊಂದು ಪಲ್ಟಿಯಾ ಘಟನೆ ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

ಮಣಿಪಾಲದಿಂದ ಉಡುಪಿಯತ್ತ ಬರುತ್ತಿದ್ದ ಫೋರ್ಡ್ ಫಿಗೊ ಕಾರು ರಸ್ತೆ ಮಧ್ಯದಲ್ಲಿ ನಿರ್ಲಕ್ಷ್ಯದಿಂದ ಇಡಲಾಗಿದ್ದ ಕಲ್ಲಿಗೆ ಗುದ್ದಿದೆ. ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದ ತಕ್ಷಣ ಕಲ್ಲಿನ ತುಂಡೊಂದು ಹಾರಿ ಸಮೀಪದಲ್ಲಿ ಹೋಗುತ್ತಿದ್ದ ಹಾರಿ ಬೈಕ್ ಗೂ ತೀವ್ರ ಹಾನಿಯಾಗಿದೆ. ಆದರೆ, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮಧ್ಯೆ ವಿಭಜಕವನ್ನು ನಿರ್ಮಿಸಲು ಬಳಸುತ್ತಿದ್ದ ಕಲ್ಲುಗಳನ್ನು ಎಲ್ಲೆಂದರಲ್ಲಿ ಇಡಲಾಗಿತ್ತು. ಮುಂಜಾನೆ ವೇಳೆ ಹೆಡ್​ ಲೈಟ್ ಪ್ರಭಾವಕ್ಕೆ ಕಲ್ಲುಗಳು ಇರುವುದನ್ನು ಅರಿಯದ ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದಾನೆ.

Continue Reading

ಮಳೆ

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Rain News : ವಾರಾಂತ್ಯದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ್ದರೆ, ಕರಾವಳಿ-ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯು (Karnataka Weather Forecast) ಜೋರಾಗಿ ಇರಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ವಾರಾಂತ್ಯದಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸಲಿದೆ. ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸೂರ್ಯ ತನ್ನ ದರ್ಶನ ಕೊಡಲಿದ್ದಾನೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 40-50 ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟರೆ, ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಜ್ಜು-ಗುಜ್ಜಾಗಿತ್ತು. ಮತ್ತೊಂದು ಕಡೆ ಬಸ್‌ ಚಲಾಯಿಸುವಾಗಲೇ ಚಾಲಕನಿಗೆ ತಲೆಸುತ್ತು ಬಂದಿದ್ದು, ರಸ್ತೆ ಬದಿಯ ಜಮೀನಿಗೆ ನುಗ್ಗಿದೆ.

VISTARANEWS.COM


on

By

Train Accident
Koo

ಚಿಕ್ಕಬಳ್ಳಾಪುರ: ಹಳಿ ದಾಟುವಾಗ ಅಚಾನಕ್‌ ಆಗಿ ರೈಲಿಗೆ ಸಿಲುಕಿ (Train Accident) ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಭವ್ಯ ಬಾಯಿ(17) ಮೃತ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಘಟನೆ ನಡೆದಿದೆ.

ಭವ್ಯಬಾಯಿ ಗೌರಿಬಿದನೂರು ನಗರದಲ್ಲಿರುವ ಎಸ್‌ಇಎ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು. ಕಾಲೇಜು ಮುಗಿಸಿ ವಾಪಸ್‌ ಹಾಸ್ಟೆಲ್‌ಗೆ ಹೋಗುತ್ತಿದ್ದಾಗ, ರೈಲಿಗೆ ಸಿಲುಕಿದ್ದಾಳೆ. ಗಂಭೀರ ಗಾಯಗೊಂಡು ತೀವ್ರಸ್ರಾವವಾಗಿ ಮೃತಪಟ್ಟಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

ಡಿವೈಡರ್‌ಗೆ ಡಿಕ್ಕಿ ಹೊಡೆದು ನಜ್ಜು-ಗುಜ್ಜಾದ ಕಾರು

ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ನಜ್ಜುಗುಜ್ಜಾಗಿದೆ. ಉಡುಪಿ ಅಂಬಾಗಿಲು ವಿನಲ್ಲಿ ಘಟನೆ ನಡೆದಿದೆ. ಕಾರೊಂದು ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಅತೀ ವೇಗವಾಗಿ ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕಾರಿನ ಇಂಜಿನ್ ಮಾರುದ್ದ ಹಾರಿ ಬಿದ್ದಿತ್ತು.

ಕಾರು ಡಿಕ್ಕಿಯಾಗಿ ಜಿಂಕೆ ಸಾವು

ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಆನೆಕಾಡಿನ ರಾಷ್ಟ್ರೀಯ ಹೆದ್ದಾರಿ‌ 275ರ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಅರಣ್ಯದ ಒಂದು ಕಡೆಯಿಂದ ಮತ್ತೊಂದು ಕಡೆಗೆ ದಾಟುವಾಗ ಕಾರಿಗೆ ಜಿಂಕೆ ಅಡ್ಡ ಬಂದಿದೆ.

ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಮೃತಪಟ್ಟಿದೆ. ಸ್ಥಳಕ್ಕೆ ಆನೆಕಾಡು ಉಪ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನಿಗೆ ತಲೆ ತಿರುಗಿ ಜಮೀನಿಗೆ ನುಗ್ಗಿದ ಬಸ್‌

ಬಸ್‌ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆ ಸುತ್ತು ಬಂದಿದ್ದು, ನಿಯಂತ್ರಣ ತಪ್ಪಿ ರಸ್ತೆಯಿಂದ ಜಮೀನಿಗೆ ಬಸ್‌ಗೆ ನುಗ್ಗಿದ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ.

ಸಾರಿಗೆ ಸಂಸ್ಥೆಯ ಬಸ್‌ವೊಂದು ಮುಂಡರಗಿ ಪಟ್ಟಣದಿಂದ ಹಮ್ಮಿಗಿ ಗ್ರಾಮಕ್ಕೆ ತೆರಳುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನಿಗೆ ತಲೆ ಸುತ್ತು ಬಂದಿದೆ. ನೋಡನೋಡುತ್ತಿದ್ದಂತೆ ರಸ್ತೆ ಬದಿ ಜಮೀನಿಗೆ ಬಸ್‌ ನುಗ್ಗಿದೆ. ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
T20 World Cup 2024 Super 8
ಕ್ರಿಕೆಟ್5 mins ago

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

Indresh Kumar
Lok Sabha Election 20247 mins ago

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

Actor darshan
ಉತ್ತರ ಕನ್ನಡ9 mins ago

Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

Gold Rate Today
ಚಿನ್ನದ ದರ14 mins ago

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Actor Darshan new statement to police
ಸ್ಯಾಂಡಲ್ ವುಡ್16 mins ago

Actor Darshan: ಎರಡೇ ಎರಡೇಟು ಬಿಟ್ಟಿದ್ದೆ, ಹಿಂಗಾಗೋಯ್ತು ಸಾರ್‌! ಪೊಲೀಸರ ಮುಂದೆ ದರ್ಶನ್‌ ಹೇಳಿಕೆ!

snake bite
ಚಿಕ್ಕಬಳ್ಳಾಪುರ31 mins ago

Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

Actor Darshan case Film chamber visit to the renukaswamy house
ಸ್ಯಾಂಡಲ್ ವುಡ್43 mins ago

Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

India Coach
ಕ್ರೀಡೆ49 mins ago

India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

tumkur Murder
ತುಮಕೂರು1 hour ago

Tumkur Murder : ಬೈಕ್ ಆ್ಯಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್; ಎದುರಾಳಿಯನ್ನು ಕೊಂದ ಹಂತಕರು ಅರೆಸ್ಟ್‌

Sapthami Gowda breakup story in stage
ಸ್ಯಾಂಡಲ್ ವುಡ್1 hour ago

Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು19 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು19 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ20 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌