ಶೇರ್‌ ಮಾರ್ಕೆಟ್ ಟಿಪ್ಸ್‌ ಪಡೆಯುವ ಮುನ್ನ ಎಚ್ಚರ!: ₹2.5ಲಕ್ಷ ವಂಚಿಸಿದ ಪ್ರಕರಣ ಬಯಲು - Vistara News

ಕ್ರೈಂ

ಶೇರ್‌ ಮಾರ್ಕೆಟ್ ಟಿಪ್ಸ್‌ ಪಡೆಯುವ ಮುನ್ನ ಎಚ್ಚರ!: ₹2.5ಲಕ್ಷ ವಂಚಿಸಿದ ಪ್ರಕರಣ ಬಯಲು

ಮೇಕ್ ಇನ್ ಪ್ರಾಫಿಟ್ ಎಂಬ ಕಂಪನಿಯ ಹೆಸರಲ್ಲಿ ಸಾರ್ವಜನಿಕರಿಗೆ ಷೇರು ಮಾರುಕಟ್ಟೆಯ ಬಗ್ಗೆ ಸುಳ್ಳು ಟಿಪ್ಸ್‌ ನೀಡಿ ಸಾರ್ವಜನಿಕರನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

VISTARANEWS.COM


on

ಬಂಧಿತ ಆರೋಪಿಗಳಾದ ರೆಹಮತ್‍ಉಲ್ಲಾ, ಎಂ.ಸಿ.ಮಲ್ಲಯ್ಯಸ್ವಾಮಿ, ಸಿ.ದುರ್ಗಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಷೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸಲು ಟಿಪ್ಸ್ ನೀಡುವುದಾಗಿ ಸಾರ್ವಜನಿಕರಿಗೆ ಕರೆಮಾಡಿ ನಂಬಿಸಿ ವಂಚಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇಕ್‌ಇನ್ ಪ್ರಾಫಿಟ್ ಎಂಬ ಕಂಪನಿಯ ಹೆಸರಲ್ಲಿ ಸಾರ್ವಜನಿಕರಿಗೆ ಷೇರು ಮಾರುಕಟ್ಟೆಯ ಬಗ್ಗೆ ಸುಳ್ಳು ಟಿಪ್ಸ್‌ ನೀಡಲಾಗಿತ್ತು ಹಾಗೂ ಸಾರ್ವಜನಿಕಾರಿಂದ ಹಣ ವಸೂಲಿ ಮಾಡಲಾಗಿತ್ತು. ಬೆಂಗಳೂರು ನಗರದ ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕಂಪನಿ ಸ್ಟಾಕ್ ಮಾರ್ಕೆಟ್‌ನಲ್ಲಿ ಪರಿಣಿತ ಕಂಪನಿಯಾಗಿದೆ ಹಾಗೂ ಹಣ ನೀಡಿದರೆ ಷೇರು ಮಾರುಕಟ್ಟೆಯಲ್ಲಿ ಲಾಭಗಳಿಸಲು ಟಿಪ್ಸ್ ನೀಡುವುದಾಗಿ ತಿಳಿಸಲಾಗಿತ್ತು. ಇದರಿಂದ ಸಾರ್ವಜನಿಕರು ಹೆಚ್ಚಿನ ಲಾಭ ಗಳಿಸಬಹುದಾಗಿ ನಂಬಿಸಿದ್ದರು. ಸಾರ್ವಜನಿಕರಿಂದ ಆನ್‌ಲೈನ್‌ ಮೂಲಕ ಹಣ ಪಡೆದಿದ್ದ ಆರೋಪಿಗಳು, ವಂಚಿಸಿದ್ದರು ಎನ್ನಲಾಗಿದೆ.

ಫೆಬ್ರುವರಿ 14ರಂದು ಈ ಕಂಪನಿಯಿಂದ ವಂಚನೆಗೊಳಗಾದವರಿಂದ ದೂರು ನೀಡಲಾಗಿತ್ತು. ಮಾರುಕಟ್ಟೆಯಲ್ಲಿ ಹಣ ಹೂಡಲು ಟಿಪ್ಸ್‌ ಪಡೆಯುವ ಕಾರಣಕ್ಕೆ ಹಂತ ಹಂತವಾಗಿ ಆರೋಪಿಗಳ ಬ್ಯಾಂಕ್‌ ಖಾತೆಗೆ ಹಣ ಪಾವತಿಸಲಾಗಿತ್ತು ಎಂದು ತಿಳಿಸಲಾಗಿತ್ತು. ಒಟ್ಟು ₹2,15,000 ಆರೋಪಿಗಳ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿತ್ತು. ಅಲ್ಲದೆ, ಅವರು ನೀಡಿದ ಟಿಪ್ಸ್‌ ಇಂದು ಸ್ಟಾಕ್‌ ಮಾರುಕಟ್ಟೆಯಲ್ಲಿ ಹೂಡಿದ ಸುಮಾರು ₹2,50,000 ನಷ್ಟವಾಗಿತ್ತು ಎಂದು ಪಿರ್ಯಾದಾರರು ತಿಳಿಸಿದ್ದಾರೆ. ಈಗ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬLಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಗ್ರಾಮದಲ್ಲಿ ಪತ್ತೆ ಮಾಡಿ ಸೆರೆ ಹಿಡಿದಿದ್ದಾರೆ. ಈ ಆರೋಪಿಗಳು ಹೀಗೇ ಅನೇಕ ಸಾರ್ವಜನಿಕರಿಗೆ ವಂಚಿಸಿ ಹಣಗಳಿಸಿದ್ದಾರೆ ಎಂದು ವಿಚಾರಣೆಯ ಸಂದರ್ಭದಲ್ಲಿ ತಿಳಿದು ಬಂದಿರುತ್ತದೆ. ಇದೇ ವೇಳೆ ಪೊಲೀಸರು ಆರೋಪಿಗಳಿಗೆ ಸಂಬಂಧಿಸಿದ 3 ಮೊಬೈಲ್ ಫೋನ್‍ಗಳು ಮತ್ತು 6 ಸಿಮ್ ಕಾರ್ಡ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಈಶಾನ್ಯ ವಿಭಾಗ ಉಪ ಪೊಲೀಸ್ ಆಯುಕ್ತರಾದ ಡಾ. ಅನೂಪ್ ಎ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆದಿರುತ್ತದೆ. ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಗಳಾದ ಸಂತೋಷ್ ರಾಮ್. ಆರ್ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀರಾಮನ್ ಗೌಡ, ಪಿ.ಎಸ್.ಐ ಶ್ರೀ ಓಬಲೇಶ್ ಹೆಚ್.ಸಿ. ಶ್ರೀಮತಿ ಶಶಿಕಲಾ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ದಸ್ತಗಿರಿಯಾದ ಆರೊಪಿಗಳ ವಿವರ:

1) ರೆಹಮತ್‍ಉಲ್ಲಾ.ಕೆ.ಸ್ ಬಿನ್ ಶೇಖ್‍ಶವಾಲಿ.ಕೆ
ವಯಸ್ಸು 29
2) ಎಂ.ಸಿ.ಮಲ್ಲಯ್ಯಸ್ವಾಮಿ ಬಿನ್ ಲೇಟ್ ಎಂ.ಇರಿಸ್ವಾಮಿ,
ವಯಸ್ಸು : 29
3) ಸಿ.ದುರ್ಗಪ್ಪ ಬಿನ್ ಮಲ್ಲಿಖಾರ್ಜುನ,
ವಯಸ್ಸು: 28

ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್‌ಐಆರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯಪುರ

Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

Accident News : ವಿಜಯಪುರದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅವಘಡ ನಡೆದಿದೆ. ಕಾರ ಹುಣ್ಣಿಮೆಯಲ್ಲಿ ಎತ್ತು ಬೆದರಿಸಲು ಹೋಗಿ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದರೆ, ಮತ್ತೊಂದು ಕಡೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

Accident Case
Koo

ವಿಜಯಪುರ: ಎತ್ತು ಬೆದರಿಸಿ ನಂತರ ತಪ್ಪಿಸಿಕೊಳ್ಳಲು ಯತ್ನಿಸುವಾಗ ಆಯಾ ತಪ್ಪಿ ಬಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಕಾರ ಹುಣ್ಣಿಮೆ ಕರಿ ದಿನವೇ (Accident News) ಅವಘಡವೊಂದು ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಾರ ಹುಣ್ಣಿಮೆಯನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಗೊಳಸಂಗಿ ಗ್ರಾಮ ಪಂಚಾಯತಿ ಆವರಣದಲ್ಲಿ ಕಾರ ಹುಣ್ಣಿಮೆಯ ಕರಿ ಹರಿಯುವ ವೇಳೆ ಎತ್ತುಗಳು ಓಟ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎತ್ತು ಬೆದರಿ ತಪ್ಪಿಸಿಕೊಳ್ಳಲು ಯತ್ನಿಸುವಾಗ ಆಯಾ ತಪ್ಪಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಪ್ರಶಾಂತ ಬಸಪ್ಪ ರೂಡಗಿ (48) ಎಂಬುವವರು ತಪ್ಪಿಸಿಕೊಳ್ಳುವ ಭರದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಮೂಗು ಮತ್ತು ಹಣೆಗೆ ತೀವ್ರ ಗಾಯವಾಗಿದ್ದು, ಕೂಡಲೇ ಅವರನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೇ ವೇಳೆ ಸಿದ್ದು ಅರ್ಜುನ ಸಾಳುಂಕೆ (42), ಮುದಕಪ್ಪ ದೂಡಮನಿ (55) ಎಂಬುವವರು ಕಾಲು ಜಾರಿ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಇದನ್ನೂ ಓದಿ: Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

ಅಪರಿಚಿತ ವಾಹನ ಡಿಕ್ಕಿಗೆ ಸವಾರ ಸಾವು

ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಅಸುನೀಗಿದ್ದಾನೆ. ವಿಜಯಪುರ ಜಿಲ್ಲೆಯ ಶಿವಣಗಿ ಸಮೀಪ ಅಪಘಾತ ನಡೆದಿದೆ. ಆಲಮೇಲ ನಿವಾಸಿ ಪರಶುರಾಮ್ ಯಂಟಮಾನ್ ಸ್ಥಳದಲ್ಲೆ ಮೃತಪಟ್ಟವರು.

ಪರಶುರಾಮ್‌ ಬೈಕ್‌ನಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತ ಮಾಡಿ ಆರೋಪಿಗಳು ಪರಾರಿ ಆಗಿದೆ. ಡಿಕ್ಕಿ ರಭಸಕ್ಕೆ ಪರಶುರಾಮ್‌ ಕೈ ಕಟ್‌ ಆಗಿ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್‌ ಆ್ಯಂಡ್‌ ರನ್‌ ಕೇಸ್‌ ದಾಖಲು ಮಾಡಲಾಗಿದೆ.

ಕರೆಂಟ್‌ ಶಾಕ್‌ನಿಂದ ರೈತ ಸಾವು

ಜಮೀನಿಗೆ ನೀರು ಹಾಯಿಸಲು ಹೋಗಿ ರೈತರೊಬ್ಬರು ಕರೆಂಟ್‌ ಶಾಕ್‌ನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಕುರಳಿ ಗ್ರಾಮದ ರೈತ ಸರಜೇರಾವ ಗಡಕರಿ (60) ಮೃತ ದುರ್ದೈವಿ. ಜಮೀನಿಗೆ ನೀರು ಹಾಯಿಸಲು ಹೋಗಿ ವಿದ್ಯುತ್ ತಂತಿ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

Bengaluru News : ಸೋಪಿನ ಮೇಲೆ ಕಾಲಿಟ್ಟು ಪರಿಣಾಮ ಆಯತಪ್ಪಿ ಕಟ್ಟಡದ ಮೇಲಿಂದ ಮಹಿಳೆಯೊಬ್ಬರು ಕೆಳಗೆ ಬಿದ್ದಿದ್ದು, ಕೋಮಾ ತಲುಪಿದ್ದಾರೆ. ಈ ಭಯಾನಕ ದೃಶ್ಯವು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

By

Bengaluru News Accident Case Dj Halli
Koo

ಬೆಂಗಳೂರು: ಕೆಲಸ ಮಾಡುವಾಗ ಸ್ವಲ್ಪ ಮೈಮರೆತರೂ ಏನೆಲ್ಲ ಅಚಾತುರ್ಯ ನಡೆಯಬಹುದು ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಮಹಿಳೆಯೊಬ್ಬಳು ಟೆರೇಸ್‌ ಮೇಲೆ ಕೆಲಸ ಮಾಡುವಾಗ ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದಿಂದ ಹೊರಗೆ ಹಾರಿದ ಘಟನೆ ಬೆಂಗಳೂರಿನ (Bengaluru News) ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರುಬಾಯ್ ಎಂಬಾಕೆ ತನ್ನ ಪತಿಯೊಂದಿಗೆ ಡಿಜೆ ಹಳ್ಳಿಯಲ್ಲಿರುವ ಆರ್‌ಕೆ ಪ್ಯಾಲೇಸ್ ಮೇಲ್ಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅಚಾನಕ್ ಆಗಿ ಸೋಪಿನ ಮೇಲೆ‌ ಕಾಲಿಟ್ಟ ರುಬಾಯ್‌ಳ ಕಾಲು ಜಾರಿತ್ತು. ನೋಡನೋಡುತ್ತಿದ್ದಂತೆ ಕಟ್ಟಡದಿಂದ ಹಾರಿ ಟೆರಸ್‌ ಭಾಗದಲ್ಲಿ ನೇತಾಡುತ್ತಿದ್ದಳು.

ಆಕೆಯ ಕೂಗಾಟ ಕೇಳಿ ನೋಡಿದಾಗ ಪತ್ನಿ ಕಟ್ಟಡದ ಮೇಲಿಂದ ನೇತಾಡುತ್ತಿರುವುದು ಕಂಡಿದೆ. ಕೂಡಲೇ ಓಡಿ ಬಂದ ಪತಿ ಆಕೆಯ ಕೈಹಿಡಿದು ಎಳೆದುಕೊಳ್ಳಲು ಮುಂದಾಗಿದ್ದರು. ಆಕೆ ಕೆಳಗೆ ಬೀಳದಂತೆ ಅದೆಷ್ಟೇ ಹರಸಾಹಸ ಪಟ್ಟರು ಆಗಿಲ್ಲ. ಇತ್ತ ಪತಿ-ಪತ್ನಿಯ ಚಿರಾಟ ಕೇಳಿ ಸುತ್ತಮುತ್ತಲಿನ ಜನರು ಓಡಿ ಬಂದಿದ್ದರು. ಆದರೆ ಕೆಲ ಸಮಯದ ನಂತರ ಕೈ ಜಾರಿದ್ದು, 3ನೇ ಅಂತಸ್ತಿನ ಕಟ್ಟಡದ ಮೇಲಿಂದ ರುಬಾಯ್‌ ಕೆಳಗೆ ಬಿದ್ದಿದ್ದರು.

ಇದನ್ನೂ ಓದಿ: Accident Case : ವೃದ್ಧೆಯರಿಬ್ಬರ ದುರಂತ ಅಂತ್ಯ; ಕೆಎಸ್‌ಆರ್‌ಟಿಸಿ ಬಸ್‌, ರೈಲು ಬಡಿದು ಸಾವು

ಕಟ್ಟಡದ ಕೆಳಗೆ ಬೈಕ್‌ಗಳನ್ನು ಪಾರ್ಕಿಂಗ್‌ ಮಾಡಿದ್ದರಿಂದ, ಸ್ಥಳೀಯರು ರುಬಾಯ್‌ಳನ್ನು ಕಾಪಾಡಲು ಆಗಲಿಲ್ಲ. ರುಬಾಯ್‌ ಮೇಲಿಂದ ಬೈಕ್‌ಗಳ ಮೇಲೆ ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಆಟೋವೊಂದನ್ನು ಅಡ್ಡಗಟ್ಟಿ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಡಿ.ಜೆ‌ ಹಳ್ಳಿಯ ಆರ್.ಕೆ ಪ್ಯಾಲೇಸ್ ಬಳಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟು ಎತ್ತರದಿಂದ ಬಿದ್ದಂತಹ ರುಬಾಯ್‌ಗೆ ಕೋಮಾದಲ್ಲಿದ್ದು, ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಡಿಜೆ ಹಳ್ಳಿ ಪೊಲೀಸರು ಇದೀಗ ಸಿಕ್ಕಿರುವ‌ ವಿಡಿಯೊವನ್ನು ಆಧರಿಸಿ ತನಿಖೆಗೆ ಮುಂದಾಗಿದ್ದಾರೆ. ತನಿಖೆಯ ನಂತರವೇ ಈ ಘಟನೆಯ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣ ವಿರುದ್ಧ ನಮಗೆ ಇನ್ನೂ ಅಧಿಕೃತ ದೂರು ಬಂದಿಲ್ಲ: ಗೃಹ ಸಚಿವ ಪರಮೇಶ್ವರ್‌

Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದು, ಪ್ರಕರಣ ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸೂರಜ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ‌ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ಇಂದು ಮತ್ತೊಂದು ದೂರು ದಾಖಲು?

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯದಿಂದ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!

ಮತ್ತೊಂದೆಡೆ ದೂರು ನೀಡಿದ್ದ ವ್ಯಕ್ತಿ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೆಡಿಎಸ್‌ ಕಾರ್ಯಕರ್ತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Continue Reading

ದೇಶ

Communal Violence: ಭಾರೀ ಕೋಮು ಗಲಭೆ… ಕಲ್ಲು ತೂರಾಟ; ಪೊಲೀಸರಿಗೆ ಗಂಭೀರ ಗಾಯ

Communal Violence: ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಎರಡೂ ದುಷ್ಕರ್ಮಿಗಳ ತಂಡ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಅಂಗಡಿ, ಮನೆಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಪೊಲೀಸರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಇನ್ನು ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಕಡೆಗಳಿಂದ ದೂರು ದಾಖಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

VISTARANEWS.COM


on

Communal Violence
Koo

ಜೋಧ್‌ಪುರ: ಸ್ಮಶಾನದ ಗೇಟ್‌ ನಿರ್ಮಾಣ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾರಾಮಾರಿ(Communal Violence) ನಡೆದಿರುವ ಘಟನೆ ರಾಜಸ್ಥಾನದ ಜೋಧ್‌ಪುರ(Jodhpur)ದಲ್ಲಿ ನಡೆದಿದೆ. ಸೂರ್‌ ಸಾಗರ್‌ ಪ್ರದೇಶದಲ್ಲಿರುವ ರಾಜಗ್ರಾಮ್‌ ಸರ್ಕಲ್‌ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಈದ್ಗಾ ಮಸೀದಿ(Eidgah)ಯ ಹಿಂದೆ ನಿರ್ಮಾಣ ಹಂತದಲ್ಲಿರುವ ಗೋಡೆ ಮತ್ತು ಗೇಟ್‌ ವಿಚಾರವಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಗಲಾಟೆ ನಡೆದಿತ್ತು. ಘಟನೆಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಗಲಾಟೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಎರಡೂ ದುಷ್ಕರ್ಮಿಗಳ ತಂಡ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಅಂಗಡಿ, ಮನೆಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಪೊಲೀಸರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಇನ್ನು ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಕಡೆಗಳಿಂದ ದೂರು ದಾಖಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

Continue Reading
Advertisement
DCM D K Shivakumar statement about new advertising policy
ಕರ್ನಾಟಕ4 mins ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

2nd Puc Exam 3
ಶಿಕ್ಷಣ5 mins ago

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

Actor darshan Satish Reddy On Darshan Case
ರಾಜಕೀಯ5 mins ago

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

govt employees
ಕರ್ನಾಟಕ8 mins ago

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Viarl Video
Latest9 mins ago

Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

Pandit Laxmikant Mathuranath Dixit
ದೇಶ16 mins ago

Pandit Laxmikant Mathuranath Dixit: ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ ಅರ್ಚಕ ವಿಧಿವಶ

Sonakshi Sinha Wedding
ಸಿನಿಮಾ24 mins ago

Sonakshi Sinha Wedding: ಸೋನಾಕ್ಷಿ ಮದುವೆ ಬಗ್ಗೆ ಅಸಮಾಧಾನ ಇತ್ತು, ಆದರೆ…: ಶತ್ರುಘ್ನ ಸಿನ್ಹಾ ವಿವರಣೆ

Virat Kohli
ಕ್ರಿಕೆಟ್34 mins ago

Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

Rushikonda Palace
ರಾಜಕೀಯ52 mins ago

Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ!

Accident Case
ವಿಜಯಪುರ60 mins ago

Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ20 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌