Just Pass Movie: ಜಸ್ಟ್‌ ಪಾಸ್ ಚಿತ್ರತಂಡಕ್ಕೆ ʼಕಾಟೇರʼನ ಬಲ; ಜ.12ಕ್ಕೆ ಮೊದಲ ವಿಡಿಯೊ ಸಾಂಗ್‌ ರಿಲೀಸ್‌ - Vistara News

South Cinema

Just Pass Movie: ಜಸ್ಟ್‌ ಪಾಸ್ ಚಿತ್ರತಂಡಕ್ಕೆ ʼಕಾಟೇರʼನ ಬಲ; ಜ.12ಕ್ಕೆ ಮೊದಲ ವಿಡಿಯೊ ಸಾಂಗ್‌ ರಿಲೀಸ್‌

Just Pass Movie: ʼಜಸ್ಟ್ ಪಾಸ್ʼ ಚಿತ್ರದ ಮೊದಲ ವಿಡಿಯೋ ಸಾಂಗ್ ಅನ್ನು ನಟ ದರ್ಶನ್ ಅವರು ಜ. 12ರಂದು ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

Just Pass Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಯ್ಸ್ ಎಂಟರ್ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ವಿ. ಶಶಿಧರ್ ನಿರ್ಮಾಣದ,
ಕೆ.ಎಂ. ರಘು ಆ್ಯಕ್ಷನ್ ಕಟ್ ಹೇಳಿರುವ ʼಜಸ್ಟ್ ಪಾಸ್ʼ ಚಿತ್ರದ ಟೀಸರ್ ಬಿಡುಗಡೆಯಾಗಿ ಸದ್ದು ಮಾಡುತ್ತಿರುವಾಗಲೇ, ಚಿತ್ರತಂಡ ಮತ್ತೊಂದು ಸುದ್ದಿಯನ್ನು ಹಂಚಿಕೊಂಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೊಸ ತಂಡಗಳಿಗೆ ಮತ್ತು ಸ್ನೇಹಿತರಿಗೆ ಯಾವಾಗಲೂ ಬೆನ್ನೆಲುಬಾಗಿ ನಿಲ್ಲುವುದಕ್ಕೆ ಎತ್ತಿದ ಕೈ. ಇದೀಗ ʼಜಸ್ಟ್ ಪಾಸ್ʼ ಚಿತ್ರದ ಮೊದಲ ವಿಡಿಯೋ ಸಾಂಗ್ ಅನ್ನು ದರ್ಶನ್ ಅವರು ಜ. 12ಕ್ಕೆ ಬಿಡುಗಡೆ ಮಾಡಲಿದ್ದಾರೆ.

“ಸಿಂಗಾರ ಸಿರಿಯೇ” ಎಂದು “ಕಾಂತಾರ” ಚಿತ್ರದ ಮೂಲಕ ತಮ್ಮ ಸಾಹಿತ್ಯದ ಕೌಶಲ್ಯವನ್ನು ಮೆರೆದಂತಹ ಪ್ರಮೋದ್ ಮರವಂತೆ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ ಹುಕ್ ಸ್ಟೆಪ್‌ಗಳ ಮೂಲಕ ಹೆಚ್ಚು ಸುದ್ದಿಯಾಗುವಂತಹ ಭೂಷಣ್ ಈ ಹಾಡನ್ನು ಕೋರಿಯೋಗ್ರಫಿ ಮಾಡಿದ್ದಾರೆ. 12ನೇ ವಯಸ್ಸಿಗೆ ಕೀಬೋರ್ಡ್ ನುಡಿಸುವುದರ ಮೂಲಕ ಘಟಾನುಘಟಿ ಮ್ಯೂಸಿಕ್ ಡೈರೆಕ್ಟರ್‌ಗಳ ಜತೆ ಕೆಲಸ ಮಾಡಿರುವಂತಹ ಹರ್ಷವರ್ಧನ್ ರಾಜ್ ಅವರ ಮ್ಯಾಜಿಕ್ ಸಂಗೀತ ಸಂಯೋಜನೆ ಇದೆ. ಹೆಸರಾಂತ ಛಾಯಾಗ್ರಾಹಕ ಸತ್ಯ ಹೆಗಡೆ ಜತೆಗೆ ಕೆಲಸ ಮಾಡಿರುವಂತಹ ಅನುಭವಿ ಸುಜಯ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ʼಜಸ್ಟ್ ಪಾಸ್ʼ ಚಿತ್ರದ ತಾರಾ ಗಣದಲ್ಲಿ ಶ್ರೀ ಪ್ರಣತಿ ಹಾಗೂ ಹೊಸ ಯುವಕರ ಜೊತೆಗೆ ರಂಗಾಯಣ ರಘು ಸಾಧು ಕೋಕಿಲ ಸುಚೇಂದ್ರ ಪ್ರಸಾದ್ ಕಾಂತಾರʼ ಫೇಮ್‌ನ ಪ್ರಕಾಶ್ ತುಂಬಿನಾಡು, ದೀಪಕ್ ರೈ , ‘ಕಾಮಿಡಿ ಕಿಲಾಡಿʼ ಖ್ಯಾತಿಯ ಗೋವಿಂದೇಗೌಡ, ದಾನಪ್ಪ ಹೀಗೆ ಕಲಾವಿದರ ದಂಡೆ ಇದೆ.

ಇದನ್ನೂ ಓದಿ | Rishab Shetty: ಭಯ ಪಡಬೇಡ ನಾನಿದ್ದೇನೆ ಎಂದು ರಿಷಬ್ ಶೆಟ್ಟಿಗೆ ದೈವದ ಅಭಯ!

Yash Birthday: ಯಶ್‌ಗೆ ಅಡ್ವಾನ್ಸ್‌ ಬರ್ತ್‌ಡೇ ವಿಶ್ ಮಾಡಿದ ಶಿವಣ್ಣ; ಫ್ಯಾನ್ಸ್‌ ಫುಲ್‌ ಖುಷ್‌!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ಭರವಸೆಯ ನಟ ಎಂಬ ಖ್ಯಾತಿಯನ್ನು ಪಡೆದಿರುವ ಪ್ಯಾನ್‌ ಇಂಡಿಯಾ ಸಿನಿಮಾ ನಾಯಕ, ರಾಕಿಂಗ್‌ ಸ್ಟಾರ್‌ ಯಶ್‌ (Rocking Star Yash) ಅವರಿಗೆ ಜನವರಿ 8ಕ್ಕೆ ಹುಟ್ಟುಹಬ್ಬದ ಸಂಭ್ರಮ. ಆದರೆ ಯಶ್‌ ಈ ಬಾರಿ ಅಭಿಮಾನಿಗಳ ಜತೆ ಜನುಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಇಡೀ ಸ್ಯಾಂಡಲ್‌ವುಡ್ ನಟ ಯಶ್ ಸಪೋರ್ಟ್‌ಗೆ ನಿಂತಿದೆ. ಶಿವರಾಜ್‌ಕುಮಾರ್ ಯಶ್ ಹುಟ್ಟುಹಬ್ಬಕ್ಕೆ ‘ಸಿಡಿಪಿ’ ಕಾಮನ್ ʻಡಿಪಿ’ಯನ್ನು ರಿಲೀಸ್ ಮಾಡಿದ್ದಾರೆ. ಈ ಮೂಲಕ ಅಡ್ವಾನ್ಸ್‌ ಆಗಿ ಬರ್ತ್‌ಡೇ ವಿಶ್ ಮಾಡಿದ್ದಾರೆ.

ನೆಚ್ಚಿನ ನಟನನ್ನು ನೋಡುವ ಕಾತುರದಲ್ಲಿದ್ದ ಅಭಿಮಾನಿಗಳಿಗೆ ರಾಕಿ ಭಾಯ್‌ಮೊನ್ನೆಯಷ್ಟೇ ಪತ್ರ ಬರೆದಿದ್ದರು. ನೂತನ ಚಿತ್ರಕ್ಕೆ (Yash 19 Movie Update) ಸಂಬಂಧಪಟ್ಟಂತೆ ಅನಿವಾರ್ಯವಾಗಿ ತಾವು ಈ ಬಾರಿಯ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಾರಣ ಹೇಳಿದ್ದರು. ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ತಮಗೆ ಗಿಫ್ಟ್‌ ಎಂದು ಬರೆದುಕೊಂಡಿದ್ದರು ಟಾಕ್ಸಿಕ್‌ ಸಿನಿಮಾದ (Toxic movie) ಪ್ರಯುಕ್ತ ಬ್ಯುಸಿಯಾಗಿರುವುದಾಗಿ ಹೇಳಿದ್ದರು.

ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಯಶ್ ಅವರ ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹುಟ್ಟುಹಬ್ಬಕ್ಕೂ ಮೊದಲೇ ರಾಕಿಂಗ್ ಸ್ಟಾರ್‌ಗೆ ಸೆಂಚುರಿ ಸ್ಟಾರ್ ಗಿಫ್ಟ್ ನೀಡಿದ್ದಾರೆ. “ಯಶ್ ಹಾಗೂ ಅವರ ಎಲ್ಲಾ ಅಭಿಮಾನಿಗಳಿಗೂ ಶುಭಾಶಯಗಳು! CDP ತುಂಬಾ ಚೆನ್ನಾಗಿದೆ”ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಶಿವಣ್ಣ.

ಇದನ್ನೂ ಓದಿ: Yash Birthday: ಈ ಹುಟ್ಟುಹಬ್ಬಕ್ಕೂ ಇರಲ್ಲ ಯಶ್‌! ಪತ್ರ ಬರೆದ ರಾಕಿ ಭಾಯ್‌; ಅಭಿಮಾನಿಗಳಿಗೆ ಭಾರಿ ನಿರಾಸೆ

ಯಶ್‌ ಟಾಕ್ಸಿಕ್‌’ ಸಿನಿಮಾ ಅನೌನ್ಸ್‌ ಮಾಡಿದ್ದಾಗಿನಿಂದ (Yash 19 Movie Update) ಹೊಸ ಹೊಸ ಅಪ್‌ಡೇಟ್‌ಗಳು ಬರುತ್ತಲೇ ಇವೆ. ಯಶ್ ಕನ್ನಡ ಸಿನಿಮಾವನ್ನು ಗ್ಲೋಬಲ್ ಲೆವೆಲ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನೊಂದು ಇಂಟ್ರೆಸ್ಟಿಂಗ್ ವಿಷಯ ಅಂದರೆ, ‘ಟಾಕ್ಸಿಕ್’ ಸಿನಿಮಾವನ್ನು ಕೇವಲ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಅಷ್ಟೇ ನಿರ್ಮಾಣ ಮಾಡುತ್ತಿಲ್ಲ. ಕೆವಿನ್‌ ಸಂಸ್ಥೆಯ ವೆಂಕಟ್ ಕೆ. ನಾರಾಯಣ್ ಜತೆ ಯಶ್ ತಮ್ಮ ʻಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ʼ ಮೂಲಕ ಕೈ ಜೋಡಿಸಿದ್ದಾರೆ. ಹಾಗೇ ಚಿತ್ರದಲ್ಲಿ ಮಲಯಾಳಂ ಸ್ಟಾರ್‌ ನಟರೊಬ್ಬರು ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುಳಿವೂ ಕೂಡ ವೈರಲ್‌ ಆಗುತ್ತಿದೆ.

ಯಶ್ ಅವರ ಈ ಸಿನಿಮಾ ಬಜೆಟ್ ಬರೋಬ್ಬರಿ 170 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಈ ಬಗ್ಗೆ ಕೆವಿಎನ್ ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಇದರ ಜತೆಗೆ ಇನ್ನೊಂದು ಸುದ್ದಿ ಸಖತ್‌ ವೈರಲ್‌ ಆಗಿದೆ. ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಪೂರಕವಾಗಿ, ನಟ ತಮ್ಮ ಇನ್‌ಸ್ಟಾದಲ್ಲಿ ಫಸ್ಟ್‌ ಲುಕ್‌ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಜೋಕರ್‌ ಪಾತ್ರದಲ್ಲಿ ಏನಾದರೂ ಟೊವಿನೋ ಥಾಮಸ್ ಕಾಣಿಸಿಕೊಳ್ಳಲಿದ್ದಾರಾ ಎಂದು ಕಮೆಂಟ್‌ ಮಾಡಿದ್ದಾರೆ. ಜೋಕರ್ ಝಲಕ್‌ನ ಮಾತ್ರ ಟೊವಿನೋ ಥಾಮಸ್ ಹಂಚಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

ಇದನ್ನೂ ಓದಿ | Guntur Kaaram: ಪೋಸ್ಟ್‌ಪೋನ್‌ ಆಯ್ತು ಮಹೇಶ್‌ ಬಾಬು ಸಿನಿಮಾ ಪ್ರಿ-ರಿಲೀಸ್ ಇವೆಂಟ್‌!

ಭಾರತ, ಮಲೇಷ್ಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಯುಕೆ, ಯೂರೋಪ್ ಸೇರಿದಂತೆ ಹಲವೆಡೆ ಟೈಟಲ್ ರಿವೀಲ್ ಆಗಿದೆ. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಕೂಡ ಕನ್ಫರ್ಮ್ ಆಗಿದೆ. ಗೀತು ಮೋಹನ್​ದಾಸ್​ ಕಲ್ಪನೆಯ ಕತೆಗೆ ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. 2025ರ ಏಪ್ರಿಲ್‌ 10ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್‌ ಆಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Kannada New Movie: ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

VISTARANEWS.COM


on

Kannada New Movie sahara movie release tomorrow
Koo

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ (Kannada New Movie) ನಾಳೆ (ಜೂನ್ 7) ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು.
ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು ಕಂಡು, ಅದನ್ನು ನನಸಾಗಿಸುವ ಹಾದಿಯಲ್ಲಿ ಆಕೆ ಎದುರಿಸುವ ಅಡೆತಡೆಗಳು, ಹೇಗೆ ಅವುಗಳನ್ನು ಮೀರಿ‌ ಸಾಧನೆಯ ಮೆಟ್ಟಿಲೇರುತ್ತಾಳೆ,ಎಲ್ಲವನ್ನೂ ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಈ‌ ನಿಟ್ಟಿನಲ್ಲಿ “ಸಹಾರಾ” ಚಿತ್ರ ಸಿನಿ‌ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ, ಗೋಲ್ಡನ್ ಸ್ಟಾರ್ ಗಣೇಶ್ “ಸಹಾರಾ” ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿರುವುದು ಎಲ್ಲೆಡೆ ಸದ್ದು ಮಾಡುತ್ತಿದೆ.

“ಸಹಾರಾ” ಚಿತ್ರಕ್ಕೆ ಮಂಜೇಶ್ ಭಗವತ್ ಆಕ್ಷನ್ ಕಟ್ ಹೇಳಿದ್ದು, ಅಂಕುಶ್ ರಜತ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ಆಂಟೊನಿ ರುತ್ ವಿನ್ಸೆಂಟ್ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಜಯ್ ಎಂ ಕುಮಾರ್ ಸಂಕಲನಕಾರರಾಗಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಮಹಿಳಾ ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಪಿ.ಆರ್.ಸಂಸ್ಥೆ ಸಪೋರ್ಟ್ ಮಾಡಿದೆ. ಆಡಿಯೋ ಹಕ್ಕನ್ನು ಕೂಡ ಪಡೆದುಕೊಂಡಿದೆ. ಕೆಆರ್.ಜಿ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.

ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ. ಇದರೊಟ್ಟಿಗೆ ಚಿತ್ರಕ್ಕೆ ಆಂಥೋನಿ ರುತ್ ವಿನ್ಸೆಂಟ್ ಕ್ಯಾಮರಾವರ್ಕ್ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಕೊಟ್ಟಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ಕೊರಿಯೋಗ್ರಫಿ ಚಿತ್ರದಲ್ಲಿದೆ.

Continue Reading

ಟಾಲಿವುಡ್

Miss You First Look Out: ಆಶಿಕಾ ರಂಗನಾಥ್‌ಗೆ ʻಮಿಸ್ ಯುʼ ಎಂದ ನಟ ಸಿದ್ಧಾರ್ಥ್!

Miss You First Look Out: ಸಿದ್ಧಾರ್ಥ್ ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ವರದಿ ಇದೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್.

VISTARANEWS.COM


on

Miss You First Look Out Siddharth unveils intriguing poster
Koo

ಬೆಂಗಳೂರು: ಸಿದ್ಧಾರ್ಥ್ (Siddharth) ಅವರ ಮುಂದಿನ ಚಿತ್ರ `ಇಂಡಿಯನ್ 2′ ಬಿಡುಗಡೆಗೆ ಸಜ್ಜಾಗಿದ್ದಾರೆ. ಇದೀಗ ನಟ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸಿದ್ಧಾರ್ಥ್ ಅವರ ಮುಂದಿನ ಚಿತ್ರ, ʻಮಿಸ್ ಯುʼ ಸಿನಿಮಾ (Miss You First Look Out). ಇದೀಗ ಮಿಸ್‌ ಯು ಸಿನಿಮಾ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದೆ ಪೋಸ್ಟರ್‌ನಲ್ಲಿ ನಟ ಟ್ರಾವೆಲ್‌ ಮೂಡ್‌ನಲ್ಲಿ ಇರುವಂತಿದೆ.

ʻಮಿಸ್ ಯುʼ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ಗೆ ಆರ್ ಮಾಧವನ್ ತಮಾಷೆಯ ಶೀರ್ಷಿಕೆಯನ್ನು ಬರೆದಿದ್ದಾರೆ, ʻಚಾಕ ಲೇಟ್ ಬಾಯ್ ಅಲ್ಲ.. ಆದರೆ ಲವರ್ ಮ್ಯಾನ್ ಸಿದ್ ಹೇಗೆ ಮರಳಿದ್ದಾರೆ ನೋಡಿʼʼಎಂದು ಬರೆದುಕೊಂಡಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಲಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ನಟ ಶಿವ ಕಾರ್ತಿಕೇಯನ್ ಅವರು ಬಿಡುಗಡೆ ಮಾಡಿದರು. ಈ ಪೋಸ್ಟರ್ ನೋಡಿದರೆ ಸಿದ್ಧಾರ್ಥ್ ರೈಲ್ವೇ ನಿಲ್ದಾಣದಿಂದ ಹೊರ ಬರುತ್ತಿರುವಂತೆ ಕಾಣುತ್ತಿದ್ದಾರೆ.

7 ಮೈಲ್ಸ್ ಪರ್ ಸೆಕೆಂಡ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸ್ಯಾಮ್ಯುಯೆಲ್ ಮ್ಯಾಥ್ಯೂ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಈ ಚಿತ್ರಕ್ಕೆ ಗಿಬ್ರಾನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಕರುಣಾಕರನ್, ಬಾಲಾ, ಸಾಸ್ತಿಕಾ ರಾಜೇಂದ್ರನ್ ಮುಂತಾದವರು ಈ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Indian 2 : ‘ಇಂಡಿಯನ್ 2ʼ ಸಿನಿಮಾದಲ್ಲಿ ಸಿದ್ಧಾರ್ಥ್: ಫಸ್ಟ್‌ ಲುಕ್‌ ಔಟ್‌!

ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರ

ಸಿದ್ಧಾರ್ಥ್ ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ವರದಿ ಇದೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ. ಸಿದ್ಧಾರ್ಥ್ ಇತ್ತೀಚೆಗೆ ನಟಿ ಅದಿತಿ ರಾವ್ ಹೈದರಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಅದಿತಿ ಅವರು ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು.

ಸಿದ್ಧಾರ್ಥ್‌ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿ ʻʻಯಾವುದೇ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾದರೂ, ಬ್ಲಾಕ್ ಬಸ್ಟರ್ ಆಗಲಿದೆ. ಈ ಸಿನಿಮಾಕ್ಕೆ ನನ್ನನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ನನಗೆ ಸಂತೋಷವಿದೆ. ಇಷ್ಟು ವರ್ಷಗಳ ನಂತರ ಮತ್ತೆ ನಿರ್ದೇಶಕರಾದ ಶಂಕರ್‌ ಹಾಗೂ ಕಮಲ್ ಹಾಸನ್‌ ಅವರೊಂದಿಗೆ ಕೆಲಸ ಮಾಡುತ್ತಿರುವುದು ನನ್ನ ಅದೃಷ್ಟ. ನಿರ್ದೇಶಕರಿಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆʼʼ ಎಂದು ಸಿದ್ಧಾರ್ಥ್ ಹೇಳಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

Kannada New Movie: ಐದು ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ʻಕ್ಯಾನ್ಬೆರಿ ಬೇಬೀಸ್ʼ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ಇನ್ನು ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಎಸ್.ನಾಗು ಅವರ ಸಂಗೀತವಿದ್ದು, ರಾಮ್ ನಾರಾಯಣ್ ಸಾಹಿತ್ಯ ರಚಿಸಿದ್ದಾರೆ. ಎಸ್.ಎಸ್.ಈಶ್ವರ್ ಹಿನ್ನೆಲೆ ಸಂಗೀತ ಒದಗಿಸುತ್ತಿದ್ದಾರೆ. ಆರ್ಯನ್ ರೋಷನ್ ಅವರ ಕೊರಿಯೋಗ್ರಫಿ, ಧನುಷ್ ಅವರ ಸಂಕಲನ, ವೀರೇಶ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

VISTARANEWS.COM


on

Kannada New Movie cranberry babies movie On set
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ (Kannada New Movie) ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾ ಪ್ರಧಾನ ಸಸ್ಪೆನ್ಸ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಾನ್ಸೆಪ್ಟ್ ಇಟ್ಟುಕೊಂಡು “ಕ್ಯಾನ್ಬೆರಿ ಬೇಬೀಸ್” ಎಂಬ ಚಿತ್ರವನ್ನು ನಿರ್ದೇಶನ ಮಾಡಹೊರಟಿದ್ದಾರೆ.

ಐದು ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ʻಕ್ಯಾನ್ಬೆರಿ ಬೇಬೀಸ್ʼ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಶ್ರೀಪಲ್ಲವಿ ʻʻನಾನು ಚಿತ್ರರಂಗಕ್ಕೆ ಬಂದು ಎಂಟು ವರ್ಷವಾಯ್ತು. ಕೆಲ ಚಿತ್ರಗಳಿಗೆ ಅಸೋಸಿಯೇಟ್ ಆಗಿ ಕೆಲಸ ಮಾಡಿದ ನಂತರ ಮಾಯಾಜಾಲ ಎಂಬ ಸಿನಿಮಾ ಡೈರೆಕ್ಟ್ ಮಾಡಿದ್ದೆ. ಇದು ಎರಡನೇ ಚಿತ್ರ. ದೊಡ್ಡ ಕನಸಿಟ್ಟುಕೊಂಡು ಬೆಂಗಳೂರಿಗೆ ಬರುವ ಐವರು ಯುವತಿಯರು ಇಲ್ಲಿ ಬಂದಮೇಲೆ ಏನೆಲ್ಲ ತೊಂದರೆ ರಿಸ್ಕ್ ಗಳನ್ನು ಎದುರಿಸಿದರು ಎಂದು ಚಿತ್ರದಲ್ಲಿ ಹೇಳಿದ್ದೇವೆ. ಬೆಂಗಳೂರು ಸುತ್ತಮುತ್ತ 25ರಿಂದ 30 ದಿನಗಳ ಕಾಲ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆʼʼ ಎಂದರು.

Kannada New Movie:

ಇದನ್ನೂ ಓದಿ: Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

ನಂತರ ಕಲಾವಿದರು ನಂದಿನಿಗೌಡ, ರಕ್ಷಾ,ಸಿಂಚನ ಶೆಟ್ಟಿ, ಸಂದೀಪ್ ಮಲಾನಿ, ಪ್ರಕಾಶ್, ಸುಶ್ಮಿತಾಗೌಡ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಹಾಸ್ಯನಟ ವಿಜಯ್ ಚೆಂಡೂರ್ ಅವರು ಚಿತ್ರದ ಕಥೆಗೆ ಹೊಸ ತಿರುವು ಕೊಡುವ ಕಾನ್ಸ್‌ಟೇಬಲ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಬ್ಬ ಹಿರಿಯ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಚಿತ್ರದಲ್ಲಿ ಒಬ್ಬ ವಿಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಾಗೇಂದ್ರ ಅರಸ್ ಮಾತನಾಡಿ ʻʻಪಲ್ಲವಿ ಅವರು ಒಳ್ಳೇ ಕಥೆ ಮಾಡಿಕೊಂಡಿದ್ದಾರೆ, ಅಲ್ಲದೆ ಅವರ ಪ್ರಯತ್ನಕ್ಕೆ ಸಪೋರ್ಟ್ ಮಾಡಬೇಕೆಂದು ಈ ಚಿತ್ರ ಒಪ್ಪಿದೆ. ಕನಸಿಟ್ಟುಕೊಂಡು ಬರುವ ಯುವತಿಯರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯ ಮಾಡುವ ಸೈಂಟಿಸ್ಟ್ʼʼ ಎಂದು ಹೇಳಿದರು.

ಇನ್ನು ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಎಸ್.ನಾಗು ಅವರ ಸಂಗೀತವಿದ್ದು, ರಾಮ್ ನಾರಾಯಣ್ ಸಾಹಿತ್ಯ ರಚಿಸಿದ್ದಾರೆ. ಎಸ್.ಎಸ್.ಈಶ್ವರ್ ಹಿನ್ನೆಲೆ ಸಂಗೀತ ಒದಗಿಸುತ್ತಿದ್ದಾರೆ. ಆರ್ಯನ್ ರೋಷನ್ ಅವರ ಕೊರಿಯೋಗ್ರಫಿ, ಧನುಷ್ ಅವರ ಸಂಕಲನ, ವೀರೇಶ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಟಾಲಿವುಡ್

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Aishwarya Arjun: ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

VISTARANEWS.COM


on

Aishwarya Arjun reception dates out
Koo

ಬೆಂಗಳೂರು: ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ, ‘ಆ್ಯಕ್ಷನ್ ಕಿಂಗ್’ (Action King) ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಅವರ ನಿಶ್ಚಿತಾರ್ಥವು ತಮಿಳುನಾಡಿನ ಚೆನ್ನೈನಲ್ಲಿ ನಟ ತಂಬಿ ರಾಮಯ್ಯ ಅವರ ಪುತ್ರ (Aishwarya Arjun ಉಮಾಪತಿ ರಾಮಯ್ಯ(umapathy ramaiah) ಜತೆಗೆ ಆಗಿತ್ತು.ಇದೀಗ ಜೋಡಿ ಜೂನ್ 10 ರಂದು ಚೆನ್ನೈನ ಹನುಮಾನ್ ದೇವಸ್ಥಾನದಲ್ಲಿ ವಿವಾಹವಾಗಲಿದೆ. ನಿಶ್ಚಿತಾರ್ಥ ಆದ ಸ್ಥಳದಲ್ಲಿಯೇ ವಿವಾಹ ನಡೆಯಲಿದೆ. ಜೂನ್ 14 ರಂದು ಚೆನ್ನೈನಲ್ಲಿ ಆರತಕ್ಷತೆಯನ್ನು ಕುಟುಂಬ ಆಯೋಜಿಸಿದೆ ಎಂದು ವರದಿಯಾಗಿದೆ.

ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ.

ಐಶ್ವರ್ಯಾ ಅರ್ಜುನ್ 2013ರಲ್ಲಿ ವಿಶಾಲ್ ಅವರ ‘ಪಟ್ಟತ್ತು ಯಾನೈ’ ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅವರು ಕೊನೆಯ ಬಾರಿಗೆ ತಂದೆ ಅರ್ಜುನ್ ಸರ್ಜಾ ನಿರ್ದೇಶನದ ‘ಪ್ರೇಮ ಬರಹ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಉಮಾಪತಿ ಅವರು 2017 ರಲ್ಲಿ ‘ಅದಗಪ್ಪಟ್ಟದ್ದು ಮಗಜನಂಗಳೆ’ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ತಂಬಿ ರಾಮಯ್ಯ ಬರೆದು ನಿರ್ದೇಶಿಸಿದ ‘ಮಣಿಯಾರ್ ಕುಟುಂಬ’ದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading
Advertisement
A rider standing on a bike and Young man and woman fight in road
ಕ್ರೈಂ4 mins ago

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Valmiki Corporation Scam
ಪ್ರಮುಖ ಸುದ್ದಿ17 mins ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ; ಸಚಿವ ನಾಗೇಂದ್ರ ರಾಜೀನಾಮೆ

David Warner
ಕ್ರೀಡೆ36 mins ago

David Warner: ಕ್ರಿಸ್​ ಗೇಲ್​ ದಾಖಲೆ ಮುರಿದ ಡೇವಿಡ್​ ವಾರ್ನರ್​

Modi 3.0 Government
ದೇಶ36 mins ago

Modi 3.0 Government: ನರೇಂದ್ರ ಮೋದಿ ಮುಂದೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟಿರುವ ಬೇಡಿಕೆಗಳು ಇಷ್ಟು!

Amruthadhare Serial goutham bhumika in first night scene
ಕಿರುತೆರೆ36 mins ago

Amruthadhare Serial: ಡುಮ್ಮ ಸರ್ ಎದೆ ಢವ ಢವ! ಗೌತಮ್-ಭೂಮಿಕಾ ಮನಸುಗಳು ಬೆರೆತಾಯ್ತು!

Prajwal Revanna Case
ಕರ್ನಾಟಕ40 mins ago

Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

Election Results 2024
Lok Sabha Election 202454 mins ago

Election Results 2024: ಠೇವಣಿ ಕಳೆದುಕೊಂಡ ದೆಹಲಿಯ 148 ಅಭ್ಯರ್ಥಿಗಳು; ಏನಿದು ಠೇವಣಿ ನಷ್ಟ?

rahul gandhi
ಪ್ರಮುಖ ಸುದ್ದಿ1 hour ago

Rahul Gandhi: ನಾಳೆ ಬೆಂಗಳೂರಿನಲ್ಲಿ ಕೋರ್ಟ್‌ ಕಟಕಟೆ ಏರಲಿರುವ ರಾಹುಲ್‌ ಗಾಂಧಿ

NEET UG 2024
ಶಿಕ್ಷಣ1 hour ago

NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

Valmiki corporation Scam
ಕರ್ನಾಟಕ1 hour ago

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌