Contaminated Water: ಕಲುಷಿತ ನೀರು ಸೇವನೆಗೆ ಕಾರಿಗನೂರು ಗ್ರಾಮದಲ್ಲಿ ಮೊದಲ ಬಲಿ - Vistara News

ಕರ್ನಾಟಕ

Contaminated Water: ಕಲುಷಿತ ನೀರು ಸೇವನೆಗೆ ಕಾರಿಗನೂರು ಗ್ರಾಮದಲ್ಲಿ ಮೊದಲ ಬಲಿ

Contaminated Water: ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದರು. ಈ ಪೈಕಿ ಚಿಕಿತ್ಸೆ ಫಲಿಸದೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Seethamma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು. ಈ ಪೈಕಿ ವೃದ್ಧೆಯೊಬ್ಬರು ಮೃತಪಟ್ಟಿರುವುದು ಕಂಡುಬಂದಿದೆ.

ಕಾರಿಗನೂರಿನ RBSSN ಕ್ಯಾಂಪ್ ನಿವಾಸಿ ಸೀತಮ್ಮ (66) ಮೃತ ವೃದ್ಧೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರಿಂದ ಗ್ರಾಮದ 30ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಸೀತಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Water supply

ಟ್ಯಾಂಕರ್‌ ಕ್ಲೀನ್‌ ಮಾಡದೆ ಪೂರೈಕೆ ಮಾಡಿದ್ದರಿಂದ ಗ್ರಾಮಕ್ಕೆ ಪಾಚಿ ಮಿಶ್ರಿತ ಕುಡಿಯುವ ನೀರು ಸರಬರಾಜು ಆಗಿತ್ತು. ಅನಿವಾರ್ಯತೆಯಿಂದ ಆ ನೀರನ್ನೇ ಕುಡಿದ ಹಿನ್ನೆಲೆಯಲ್ಲಿ 30ಕ್ಕೂ ಅಧಿಕ ಜನಕ್ಕೆ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದರು. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ ಶಾಸಕ ಗವಿಯಪ್ಪ, ಡಿಸಿ ದಿವಾಕರ್ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದರು.

ಇದನ್ನೂ ಓದಿ | ಅಕ್ಕ-ತಮ್ಮನ ಮೇಲೆ ನೈತಿಕ ಪೊಲೀಸ್ ಗಿರಿ ಕೇಸ್‌; ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ

ವರದಕ್ಷಿಣಿಗಾಗಿ ಹೆಂಡತಿನಾ ಹೆಲ್ಮೆಟ್‌ನಿಂದ ಹೊಡೆದು ಕೊಂದ ದುಷ್ಟ ಪತಿ

Husband kills wife by hitting her with helmet

ದಾವಣಗೆರೆ: ಹೆಲ್ಮೆಟ್‌ನಿಂದ ಹೊಡೆದು ಪತ್ನಿ ‌ಕೊಲೆ (Murder Case) ಮಾಡಿ ಅಪಘಾತದ ನಾಟಕವಾಡಿದ್ದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ. ಯಶೋಧ (23) ಹತ್ಯೆಯಾದವಳು. ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಮೂರು ತಿಂಗಳ‌ ಗರ್ಭಿಣಿಯಾಗಿದ್ದ ಪತ್ನಿಯನ್ನು ಪತಿಯೇ ಹೊಡೆದು ಕೊಂದಿದ್ದಾನೆ.

ಕಳೆದ ಜನವರಿ 4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತ ಕೊಲೆ ಆರೋಪಿ ಆಗಿದ್ದಾನೆ. ಈ ತಿಪ್ಪೇಶ್‌ ಹಾಗೂ ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ಯಶೋಧಾಳನ್ನು ಪರಸ್ಪರ ಪ್ರೀತಿಸಿ, ಆರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ.

ಕಳೆದ ಜನವರಿ 4ರಂದು ತಿಪ್ಪೇಶ್‌ ಜತೆ ಯಶೋಧ ತವರಿಗೆ ಬಂದಿದ್ದಳು. ನಂತರ ವಾಪಸ್ಸು ಹೋಗುವಾಗ ಬೈಕ್ ಅಪಘಾತವಾಗಿ ಯಶೋಧಾ ಮೃತಪಟ್ಟಿದ್ದಾಳೆ ಎಂದು ಸಂಬಂಧಿಕರಿಗೆ ಮಾಹಿತಿ‌ ನೀಡಿದ್ದ. ಆದರೆ ಯಶೋಧಾಳ ಮೃತದೇಹವನ್ನು ನೋಡಿದ ತಂದೆ ಚಂದ್ರಪ್ಪಗೆ ಅನುಮಾನ ಮೂಡಿತ್ತು. ಹೀಗಾಗಿ ನನ್ನ ಮಗಳು ಬೈಕ್ ಅಪಘಾತದಲ್ಲಿ ಮೃತಪಟ್ಟಿಲ್ಲ, ಬದಲಿಗೆ ಕೊಲೆಯಾಗಿದೆ ಎಂದು ದೂರು ನೀಡಿದ್ದರು.

ಇದನ್ನೂ ಓದಿ | ‌BK Hariprasad: ಬಿ.ಕೆ. ಹರಿಪ್ರಸಾದ್ ವಿರುದ್ಧ ಪುನೀತ್ ಕೆರೆಹಳ್ಳಿ ಕಂಪ್ಲೇಂಟ್; ಕಾಂಗ್ರೆಸ್‌ನಿಂದ ಪ್ರತಿ ದೂರು

ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪೊಲೀಸರಿಗೆ ಅಪಘಾತದ ಹಿಂದಿನ ರಹಸ್ಯ ಬಹಿರಂಗಗೊಳಿಸಿದ್ದಾರೆ. ತಿಪ್ಪೇಶ್‌ನನ್ನು ಬಂಧಿಸಿ ತನಿಖೆಗೊಳಪಡಿಸಿದಾಗ ತಾನೇ ಹೆಲ್ಮೆಟ್‌ನಿಂದ ಹೊಡೆದು ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ ಮಾಡಿ ಬೈಕ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು‌ ‌ಕಥೆ ಕಟ್ಟಿದ್ದಾಗಿ ತಿಳಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತಿಪ್ಪೇಶ್‌ನನ್ನು ಜೈಲಿ ಅಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಶಾಸಕ ಹರೀಶ್‌ ಪೂಂಜಾ ಅವರು ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ವಿಡಿಯೊಗಳು ಎಲ್ಲೆಡೆ ವೈರಲ್‌ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಪೊಲೀಸರು ಬುಧವಾರ ಮಧ್ಯಾಹ್ನ ಶಾಸಕರ ನಿವಾಸಕ್ಕೆ ಆಗಮಿಸಿ ಬಂಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಅಲ್ಲಿಂದ ತೆರಳಿದ್ದಾರೆ.

VISTARANEWS.COM


on

Harish Poonja case Belthangady BJP MLA Harish Poonja arrested for taunting police
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿದೆ. ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಬುಧವಾರ ಹೈಡ್ರಾಮಾವೇ ನಡೆಯಿತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ರಾಜಕೀಯ

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

MLC Election: ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದ ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದ್ದಾರೆ.

VISTARANEWS.COM


on

MLC Election South West Graduate Constituency bjp Candidate Dr Dhananjaya Sarji pressmeet
Koo

ಸೊರಬ: ನೈರುತ್ಯ ಪದವೀಧರರ ಕ್ಷೇತ್ರದ (MLC Election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡಿದ್ದೇನೆ. ಜತೆಗೆ ಅನೇಕ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಅನುಭವವಿದೆ. ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಕಾರ್ಯಕರ್ತರನ್ನೇ ಶಕ್ತಿಯನ್ನಾಗಿಸಿಕೊಂಡಿರುವ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯಕರ್ತರು ತಾವೇ ಅಭ್ಯರ್ಥಿ ಎನ್ನುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮತದಾರರಿದ್ದು, ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತು ಭದ್ರತೆಗಾಗಿ ಬಿಜೆಪಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.

ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಎಚ್.ಎಸ್. ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಯಲಸಿ ಉಪಸ್ಥಿತರಿದ್ದರು.

Continue Reading

ತುಮಕೂರು

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

Tumkur News: ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ನ್ನು ತೆರೆಯಲಾಗಿದೆ ತಹಸೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.

VISTARANEWS.COM


on

Fodder Bank inauguration at kasaba
Koo

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ (Tumkur News) ತಿಳಿಸಿದರು.

ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಮೂರನೇ ಮೇವು ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ ಅವರು, ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು, ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಮೇವು ಬ್ಯಾಂಕ್ ತೆರೆಯಲಾಗಿದೆ. ಈಗಾಗಲೇ ತಾಲೂಕಿನ ಹೊಳವನಹಳ್ಳಿ ಹಾಗೂ ಬುಕ್ಕಾಪಟ್ಟಣಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿದ್ದು ರೈತರ ಮನವಿ ಹಿನ್ನಲೆಯಲ್ಲಿ ಕಸಬಾ ಹೋಬಳಿ ರೈತರಿಗೆ ಅನುಕೂಲವಾಗುವಂತೆ ಮೇವು ಬ್ಯಾಂಕ್ ತೆರೆಯಲಾಗಿದೆ, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಬೇಕು ಇದರಿಂದ ಸರ್ಕಾರದ ಯೋಜನೆಯ ಅನುದಾನಗಳನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯಿಸಲು ಅನುಕೂಲವಾಗುತ್ತದೆ ಎಂದರು.

ಪಶು ಇಲಾಖಾ ಸಹಾಯಕ ನಿರ್ದೇಶಕ ನಾಗಭೂಷಣ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲದ ಹಿನ್ನಲೆಯಲ್ಲಿ ಮೇವು ಇಲ್ಲದೆ ರೈತರು ಪರದಾಡುತ್ತಿದ್ದು, ಇದನ್ನು ಮನಗೊಂಡ ಸರ್ಕಾರ ಮೇವು ಬ್ಯಾಂಕ್‌ಗಳನ್ನು ತೆರೆಯಲು ಆದೇಶಿಸಿದೆ, ಈಗಾಗಲೇ ಮಳೆ ಪ್ರಾರಂಭವಾಗಿದ್ದರೂ ಇನ್ನು ಕೆಲವು ದಿನಗಳ ಕಾಲ ಮೇವಿಗೆ ಅಭಾವವಿರುತ್ತದೆ, ಅದರಲ್ಲೂ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ, ಅದಕ್ಕಾಗಿ ಕಸಬಾ ಹೋಬಳಿಯ ಮೂರನೇ ಮೇವು ಬ್ಯಾಂಕ್ ತೆರೆದಿದ್ದು, ರೈತರು ಶಾಂತಿಯಿಂದ ಮೇವನ್ನು ಪಡೆಯಬೇಕು, ಪ್ರತಿಯೊಬ್ಬ ಜಾನುವಾರು ಹೊಂದಿರುವ ರೈತರಿಗೆ ಮೇವು ತಲುಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಇದನ್ನೂ ಓದಿ: Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಈ ಸಂದರ್ಭದಲ್ಲಿ ಪಶು ಇಲಾಖೆಯ ಡಾ.ಮಂಜನಾಥ್, ಡಾ.ಚಂದ್ರಶೇಖರ್, ಕಂದಾಯ ಇಲಾಖೆಯ ಕಸಬಾ ಆರ್.ಐ ಬಸವರಾಜು, ವಿ.ಎ.ಗಳಾದ ಮೋಹನ್‌ಕುಮಾರ್, ಪವನ್ ಕುಮಾರ್, ಗುರುಶಂಕರ್, ಮೀನಾಕುಮಾರಿ ಹಾಗೂ ಕಂದಾಯ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Bengaluru News: ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ದ ಅಡಿಯಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಸಜ್ಜಾಗಿದೆ. ಕರ್ನಾಟಕ ಸರ್ಕಾರ ಹಾಗೂ ಸತ್ವ ಸಂಸ್ಥೆಯ ಸಹಯೋಗದಲ್ಲಿ 2025-26 ಶೈಕ್ಷಣಿಕ ವರ್ಷದ ವೇಳೆಗೆ ತುಮಕೂರು, ದಾವಣಗೆರೆ, ಹಾವೇರಿ, ಯಾದಗಿರಿ ಮತ್ತು ಚಿತ್ರದುರ್ಗ ಜಿಲ್ಲೆಗಳ 210 ಕ್ಕೂ ಹೆಚ್ಚು ಶಾಲೆಗಳು ಮತ್ತು ಅಂಗನವಾಡಿಗಳು/ಪ್ರಿಸ್ಕೂಲ್‌ಗಳನ್ನು ಪರಿವರ್ತಿಸಲು ರೂಪುರೇಷೆಗಳು ಸಿದ್ಧವಾಗುತ್ತಿವೆ.

VISTARANEWS.COM


on

YIPP co founder Nikhil Kamath
ವೈಐಪಿಪಿ ಸಹ-ಸಂಸ್ಥಾಪಕ ನಿಖಿಲ್ ಕಾಮತ್
Koo

ಬೆಂಗಳೂರು: ವೈಐಪಿಪಿ (ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್‌ ) ಸಹ-ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಅಡಿಯಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಜ್ಜಾಗಿದೆ. ಕರ್ನಾಟಕ ಸರ್ಕಾರ ಹಾಗೂ ಸತ್ವ ಸಂಸ್ಥೆಯ ಸಹಯೋಗದಲ್ಲಿ 2025-26 ಶೈಕ್ಷಣಿಕ ವರ್ಷದ ವೇಳೆಗೆ ತುಮಕೂರು, ದಾವಣಗೆರೆ, ಹಾವೇರಿ, ಯಾದಗಿರಿ ಮತ್ತು ಚಿತ್ರದುರ್ಗ ಜಿಲ್ಲೆಗಳ 210 ಕ್ಕೂ ಹೆಚ್ಚು ಶಾಲೆಗಳು ಮತ್ತು ಅಂಗನವಾಡಿಗಳು/ಪ್ರಿಸ್ಕೂಲ್‌ಗಳನ್ನು ಪರಿವರ್ತಿಸಲು ರೂಪುರೇಷೆಗಳು (Bengaluru News) ಸಿದ್ಧವಾಗುತ್ತಿವೆ.

ಭಾರತೀಯ ವ್ಯಾಪಾರ ಮತ್ತು ಲೋಕೋಪಕಾರಿ ಸಮುದಾಯದ ಪ್ರಮುಖ ವ್ಯಕ್ತಿ ನಿಖಿಲ್ ಕಾಮತ್ ಮತ್ತು ಯುವ ಅನ್‌ಸ್ಟಾಪಬಲ್ ನ ಸ್ಥಾಪಕ ಅಮಿತಾಬ್‌ ಶಾ ಜತೆಗೂಡಿ ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್ (YIPP) ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್, ಜೆಎಸ್‌ಡಬ್ಲ್ಯೂ ಫೌಂಡೇಶನ್, ಸ್ವಿಸ್ರೆ, ಪ್ರಶಾಂತ್ ಪ್ರಕಾಶ್ ಮತ್ತು ವೈ ಐಪಿಪಿ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಕರ್ನಾಟಕದಾದ್ಯಂತ ಹಮ್ಮಿಕೊಂಡಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

ಕಳೆದ ಒಂದೂವರೆ ವರ್ಷದಲ್ಲಿ ಕೆಎಂಎಸ್‌ಪಿಪಿ ಶಾಲೆಯ ಪರಿವರ್ತನೆಗೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಗಣನೀಯ ಪಾತ್ರ ವಹಿಸಿದೆ. ಪ್ರಾರಂಭಿಕವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಮುಖ ಉಪಕ್ರಮಗಳಲ್ಲಿ ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯವನ್ನು ಹೆಚ್ಚಿಸುವುದು, 21ನೇ ಶತಮಾನದ ಕೌಶಲ್ಯಗಳನ್ನು ಸಂಯೋಜಿಸುವುದು, ವಿಜ್ಞಾನ ಮತ್ತು ಎಸ್‌ಟಿಇಎಂ ಶಿಕ್ಷಣಕ್ಕೆ ಒತ್ತು ನೀಡುವುದು, ಫೌಂಡೇಶನಲ್ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ (FLN) ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು, ವೃತ್ತಿ ಸಮಾಲೋಚನೆಯನ್ನು ಒದಗಿಸುವುದರ ಜತೆಯಲ್ಲಿ ಅನಿಯಮಿತ ವಿದ್ಯಾರ್ಥಿಗಳನ್ನು ಮರುಸಂಘಟಿಸುವುದು ಮತ್ತು ಶಿಕ್ಷಕರು ಮತ್ತು ಶಿಕ್ಷಣ ಅಧಿಕಾರಿಗಳಿಗೆ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗಿದೆ.

ಈ ಕುರಿತು ವೈಐಪಿಪಿಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮಾತನಾಡಿ, “ಈ ಕಾರ್ಯಕ್ರಮವು ಮೂಲಸೌಕರ್ಯಗಳನ್ನು ಮಾತ್ರವಲ್ಲದೆ ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಅಧಿಕಾರಿಗಳಲ್ಲಿ ಶಿಕ್ಷಣದ ಗ್ರಹಿಕೆಯನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಭಾವದ ಮೌಲ್ಯಮಾಪನವನ್ನು ಖಾತ್ರಿಪಡಿಸುವ, ತಳಮಟ್ಟದ ಮಧ್ಯಸ್ಥಿಕೆಗಳನ್ನು ಪರಿಷ್ಕರಿಸಲು ಈ ಯೋಜನೆ ದೃಢವಾದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಸಹ ಸ್ಥಾಪಿಸಿದೆ. ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕರ (SPD) ನೇತೃತ್ವದ ರಾಜ್ಯ ಮಟ್ಟದ ಚಾಲನಾ ಸಮಿತಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಗಳೊಂದಿಗೆ ಕೆಎಂಎಸ್‌ಪಿಪಿ ರಾಜ್ಯಾದ್ಯಂತ ಉತ್ತಮ ಅಭ್ಯಾಸಗಳನ್ನು ಸಾಂಸ್ಥಿಕಗೊಳಿಸುತ್ತಿದೆ ಮತ್ತು ವ್ಯವಸ್ಥಿತ ಬದಲಾವಣೆಗೆ ಚಾಲನೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Virat kohli
ಕ್ರೀಡೆ4 mins ago

Virat kohli : ಐಪಿಎಲ್​ನಲ್ಲಿ 8000 ರನ್ ಬಾರಿಸಿ ದಾಖಲೆ ಬರೆದ ಕೊಹ್ಲಿ

Harish Poonja case Belthangady BJP MLA Harish Poonja arrested for taunting police
ರಾಜಕೀಯ22 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

MLC Election South West Graduate Constituency bjp Candidate Dr Dhananjaya Sarji pressmeet
ರಾಜಕೀಯ26 mins ago

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

Fodder Bank inauguration at kasaba
ತುಮಕೂರು27 mins ago

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

YIPP co founder Nikhil Kamath
ಕರ್ನಾಟಕ29 mins ago

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Virat Kohli
ಪ್ರಮುಖ ಸುದ್ದಿ36 mins ago

Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

Jayashree Gurannavar
ಕ್ರೈಂ55 mins ago

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

CGI Technology In Film
ಸಿನಿಮಾ56 mins ago

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

Bus Siege Andhra Pradesh bus seized in Gadag and 49 tourists in trouble
ಗದಗ58 mins ago

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Shah Rukh Khan
ಪ್ರಮುಖ ಸುದ್ದಿ1 hour ago

Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌