Dina Bhavishya : ಈ ರಾಶಿಯವರು ಇಂದು ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಇಂದು ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

read your daily horoscope predictions for janaury 9 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಧನಸ್ಸು ರಾಶಿಯಿಂದ ಮಂಗಳವಾರ ರಾತ್ರಿ 08:33ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಮಿಥುನ ರಾಶಿಯವರ ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಕಟಕ ರಾಶಿಯವರು ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷ
ತಿಥಿ: ತ್ರಯೋದಶಿ 22:24 ವಾರ: ಮಂಗಳವಾರ
ನಕ್ಷತ್ರ: ಜೇಷ್ಠಾ 21:10 ಯೋಗ: ವೃದ್ಧಿ 24:20
ಕರಣ: ಗರಜ 11:16 ಅಮೃತ ಕಾಲ: ಮಧ್ಯಾಹ್ನ 12:42 ರಿಂದ 02:15 ರವರೆಗೆ
ದಿನದ ವಿಶೇಷ: ಉಡುಪಿ ಸಪ್ತೋತ್ಸವ, ಮಹಾಪ್ರದೋಷ

ಸೂರ್ಯೋದಯ : 06:44  ಸೂರ್ಯಾಸ್ತ : 06:09

ರಾಹುಕಾಲ : ಮಧ್ಯಾಹ್ನ 3 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಹಾಳಾಗದಂತೆ ಜಾಗ್ರತೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಸಿಗಲಿದೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಅಗತ್ಯ ವಸ್ತುಗಳ ಖರೀದಿ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading

ಕರ್ನಾಟಕ

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Brand Bengaluru: ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar
Koo

ಬೆಂಗಳೂರು: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ (Brand Bengaluru) ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಬೆಂಗಳೂರು ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜತೆ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಜುಲೈ 27) ‘ನಾಗರಿಕರ ಧ್ವನಿ-ಅದೇ ಸರ್ಕಾರದ ಧ್ವನಿ’ ಸಭೆ ನಡೆಸಿದರು. ಹಾಗೆಯೇ, ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ವಿವರಿಸಿದರು.

“ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸಿ ನಮ್ಮೆಲ್ಲರಿಗೂ ಸುಂದರ ನಗರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಬೆಂಗಳೂರು, ಅಪಾರ ಮಾನವ ಸಂಪನ್ಮೂಲ, ಸಂಸ್ಕೃತಿ, ಉದ್ಯೋಗ, ಹವಾಮಾನದಿಂದ ನೆರೆಹೊರೆ ರಾಜ್ಯದ ಜನರನ್ನು ಸೆಳೆಯುತ್ತಿದೆ. ಆದರೆ ಬೆಂಗಳೂರು ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಕಾವೇರಿ ನೀರಿನ ಸಮಸ್ಯೆ, ಟ್ರಾಫಿಕ್‌, ಕಸದ ನಿರ್ವಹಣೆ, ಕೆರೆಗಳ ನಿರ್ವಹಣೆ ಇತ್ಯಾದಿಗಳನ್ನು ಕುರಿತು ಕೂಲಂಕಷವಾಗಿ ಚರ್ಚಿಸಲಾಗುತ್ತಿದೆ” ಎಂದು ತಿಳಿಸಿದರು.

70 ಸಾವಿರ ನಾಗರಿಕರಿಂದ ಸಲಹೆ

“ಭವಿಷ್ಯದ ದೃಷ್ಟಿಯಿಂದ, ಬೆಂಗಳೂರು ಅಭಿವೃದ್ಧಿಯನ್ನು ಪಾರದರ್ಶಕವಾಗಿ ಮಾಡಬೇಕಾಗಿದೆ. ಅತ್ಯುತ್ತಮ ಕಾರ್ಯಕ್ರಮದ ಆಯ್ಕೆಯ ಕುರಿತು ಚರ್ಚಿಸಲಾಗುತ್ತಿದೆ. 70 ಸಾವಿರ ನಾಗರಿಕರು ಈ ಕುರಿತು ಸಲಹೆಗಳನ್ನು ನೀಡಿದ್ದಾರೆ. ಉತ್ತಮ ಯೋಜನೆಗಳನ್ನು ರೂಪಿಸಿ ಜನಪರ ಆಡಳಿತ ನೀಡುವ ಉದ್ದೇಶದಿಂದ ಈ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.

“ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ಅವರು ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸು ಮಾಡಿದರೆ ಇಂದು ಸಂಜೆಯೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು. ಇಂದು ಈ ಎಲ್ಲ ವಿಚಾರವಾಗಿ ಎಷ್ಟು ಹೊತ್ತು ಬೇಕಾದರೂ ಚರ್ಚೆ ಮಾಡಲು ಸಿದ್ಧ. ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿ” ಎಂದು ಹೇಳಿದರು.

“ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬಹಳ ಸವಾಲಿನ ಇಲಾಖೆ. ಬೆಂಗಳೂರಿನ ಸಮಸ್ಯೆಗಳಿಗೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಕೇಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಕೆಂಗಲ್ ಹನುಮಂತಯ್ಯನವರು ಇಲ್ಲಿ ವಿಧಾನಸೌಧ ಕಟ್ಟಿಸಿದರು. ಎಸ್.ಎಂ ಕೃಷ್ಣ ಅವರು ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೋಯ್ದರು. ಬೆಂಗಳೂರು ಯೋಜಿತ ನಗರವಲ್ಲ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.04 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ” ಎಂದು ತಿಳಿಸಿದರು.

“ಇಲ್ಲಿರುವ ತಂತ್ರಜ್ಞಾನ, , ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ. ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ ಬಂದವರು ಕೂಡ ಇಲ್ಲೇ ಉಳಿದುಕೊಂಡಿದ್ದಾರೆ. ಹೀಗೆ ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದೆ. ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದ್ದು, ಇಲ್ಲಿಯವರೆಗೂ ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಪ್ರಯತ್ನ ಮಾಡುತ್ತಿದ್ದೇವೆ. ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಕಳೆದ ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು. ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು. ಇದಕ್ಕಾಗಿ ಏನು ಮಾಡಬೇಕು ಚರ್ಚೆ ಮಾಡಲಾಗುತ್ತಿದೆ. ಅಂತರ್ಜಲ ಹೆಚ್ಚಿಸದಿದ್ದರೆ ಪರ್ಯಾಯ ಅವಕಾಶವಿಲ್ಲ” ಎಂದು ಹೇಳಿದರು.

“ಕಸದ ವಿಚಾರ ನಿಮಗೆಲ್ಲ ತಿಳಿದಿದೆ. ಇನ್ನು ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಇದನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದು, ಆದರೆ ಅದು ಸಾಧ್ಯವಾಗುತ್ತಿಲ್ಲ. ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿದ್ದೇವೆ. ಬೆಂಗಳೂರಿನ ಎಲ್ಲಾ ಇಲಾಖೆಗಳಲ್ಲಿ ಪಾರದರ್ಶಕವಾಗಿ ಕೆಲಸ ಮಾಡಲಾಗುತ್ತಿದೆ. ಕಾನೂನು ಚೌಕಟ್ಟಿನ ಆಚೆಗೆ ಯಾವುದೇ ಕೆಲಸ ಮಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲ ಪ್ರಕ್ರಿಯೆ ನಡೆಯಬೇಕು. ನಾನು ತಪ್ಪು ಮಾಡಲು ಹೋದರೂ ನನಗೆ ಎಚ್ಚರಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಟಿಡಿಆರ್ ವಿಚಾರವಾಗಿ ದೊಡ್ಡ ಹಗರಣವಾಗಿದೆ. ಅವುಗಳನ್ನು ಬಗೆಹರಿಸಲು ಹೊಸ ವ್ಯವಸ್ಥೆ ತರಲಾಗುತ್ತಿದೆ. ಈ ಬಗ್ಗೆಯೂ ನಿಮಗೆ ಮಾಹಿತಿ ನೀಡುತ್ತೇವೆ” ಎಂದರು.

ಪ್ರವಾಸೋದ್ಯಮಕ್ಕೆ ಆದ್ಯತೆ

“ಇನ್ನು ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಡ ಬಿಟ್ಟರೆ ಪ್ರವಾಸಿಗರ ಆಕರ್ಷಕ ಕೇಂದ್ರಗಳು ಹೆಚ್ಚಾಗಿಲ್ಲ. ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನೋಡುತ್ತಿದ್ದ ಕಾಲ ಮುಗಿದಿದೆ. ಸಣ್ಣ ಮಕ್ಕಳು ನೆಹರು ಪ್ಲಾನೆಟೋರಿಯಂ ನೋಡಬಹುದು. ಇದರ ಹೊರತಾಗಿ ಪ್ರಮುಖವಾಗಿ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ವಿಚಾರವಾಗಿ ವಿವರಣೆ ನೀಡಲಾಗುವುದು” ಎಂದು ಹೇಳಿದರು..

ಇದಕ್ಕೂ ಮುನ್ನ ಬ್ರ್ಯಾಂಡ್ ಬೆಂಗಳೂರು ಕುರಿತ ಕಿರುಹೊತ್ತಗೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಸತಿ ಸಚಿವ ಜಮೀರ್ ಅಹ್ಮದ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬಿಡುಗಡೆಗೊಳಿಸಿದರು.

ಇದನ್ನೂ ಓದಿ: DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

Continue Reading

ದೇಶ

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Road Accident: ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

VISTARANEWS.COM


on

Road Accident
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಣಿವೆಗೆ ಉರುಳಿದೆ ಎಂಬುದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿತ್ತು. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಳೆದ ವರ್ಷ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು 300 ಅಡಿ ಆಳದ ಕಣಿವೆಗೆ ಬಿದ್ದು, 38 ಜನ ಮೃತಪಟ್ಟಿದ್ದರು. ಅಸ್ಸಾರ್‌ ಪ್ರದೇಶದ ತ್ರುಂಗಲ್‌ ಬಳಿ ಚಲಿಸುತ್ತಿದ್ದ ಬಸ್‌ ಕಂದಕಕ್ಕೆ ಉರುಳಿತ್ತು. ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿತ್ತು.

ಇದನ್ನೂ ಓದಿ: Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Continue Reading

ಪ್ರಮುಖ ಸುದ್ದಿ

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

VISTARANEWS.COM


on

dk shivakumar hd kumarswamy
Koo

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಬೃಂದಾವನ ಮೇಲ್ದರ್ಜೆಗೆ ಏರಿಕೆ

ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading
Advertisement
Paris Olympics 2024
ಫ್ಯಾಷನ್33 seconds ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ33 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ42 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ57 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ59 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌