Bus Accident: ಹೊಸಕೋಟೆಯಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯ - Vistara News

ಕರ್ನಾಟಕ

Bus Accident: ಹೊಸಕೋಟೆಯಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯ

‌Bus Accident: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

VISTARANEWS.COM


on

Bus accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಕೋಟೆ: ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಗಳವಾರ ನಡೆದಿದೆ. ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತ (Bus Accident) ನಡೆದಿದೆ.

ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಹೊರಟಿದ್ದ ಖಾಸಗಿ ಬಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬನಹಳ್ಳಿ ಗೇಟ್ ಬಳಿ ಪಲ್ಟಿಯಾಗಿದೆ. ವೇಗವಾಗಿ ಬಂದು ರಸ್ತೆಯಲ್ಲಿನ ಸ್ಪೀಡ್ ಬ್ರೇಕರ್ ಬಳಿ ಬ್ರೇಕ್‌ ಹಾಕಿದ್ದರಿಂದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Bengaluru News : ಕುಡಿತ ತಂದ ಆಪತ್ತು; ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ಸ್ಕೂಲ್ ವ್ಯಾನ್ ಡಿಕ್ಕಿ; ಮಹಿಳೆ‌ ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಸ್ಕೂಲ್ ವ್ಯಾನ್ ಡಿಕ್ಕಿಯಾಗಿ ಮಹಿಳೆ‌ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಚಿಂತಾಮಣಿ ತಾಲೂಕಿನ ಚಲಂಕೋಟೆ ಗ್ರಾಮದಲ್ಲಿ ನಡೆದಿದೆ. ಮುರುಗಮಲ್ಲ ಗ್ರಾಮದ ನಿವಾಸಿ ನಜ್ಮಾತಾಜ್ (38) ಮೃತರು. ಮನೆಗೆ ಸೌದೆ ಹೊತ್ತೊಯ್ಯುವಾಗ ಮಹಿಳೆಗೆ, ಚಿಂತಾಮಣಿಯ ಪ್ರತಿಷ್ಠಿತ ಎಸ್‌ಎನ್‌ಆರ್ ಸ್ಕೂಲ್ ವ್ಯಾನ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು

ಚಿಕ್ಕೋಡಿ: ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹಂಜಾನಟ್ಟಿ ಗ್ರಾಮದ ಚಾಲಕ ಮಹಾರುದ್ರ ಸಂಕೇಶ್ವರಿ (24) ಮೃತ.

ಹಂಜಾನಟ್ಟಿ ಗ್ರಾಮದಿಂದ ಸಂಕೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಾಟ ಮಾಡುತ್ತಿದ್ದಾಗ ದುರಂತ ನಡೆದಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Killer Bmtc : ಎರಡು ದಿನದ ಅಂತರದಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿ

ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ,; ಸವಾರ ಸಾವು

ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮಿಣಜಗಿ ಗ್ರಾಮದ ಶ್ರೀಧರ ಮಾದರ (24) ಮೃತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Dengue Fever: ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ದಂಡಾಸ್ತ್ರ ಪ್ರಯೋಗ ಮಾಡುವ ಬಗ್ಗೆ ತೀರ್ಮಾನವಾಗಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Biometric Attendance

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (Biometric Attendance) ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ. ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಇದನ್ನೂ ಓದಿ | Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ದರ್ಶಿಗಳಿಗೆ ಸೂಚನ ನೀಡಿದ್ದಾರೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Prajwal Revanna Case: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.

VISTARANEWS.COM


on

Prajwal Revanna case Three FIRs against Prajwal Wanted list in all three
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಬೆಂಗಳೂರು

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Biometric Attendance: ಸರ್ಕಾರಿ ಕಚೇರಿಗಳು, ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

VISTARANEWS.COM


on

Biometric Attendance
Koo

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (Biometric Attendance) ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ. ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ದರ್ಶಿಗಳಿಗೆ ಸೂಚನ ನೀಡಿದ್ದಾರೆ.

ಇದನ್ನೂ ಓದಿ | Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

salary hike cm siddaramaiah

ಬೆಂಗಳೂರು: ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ (Cabinet meeting) ಸರಕಾರಿ ನೌಕರರ (Govt Employees) ವೇತನ ಹೆಚ್ಚಳದ (Salary Hike) ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಸಲವಾದರೂ ಏರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ ನಿರಾಸೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ (guarantee Schemes) ಹೆಚ್ಚಿನ ಹಣ ಹರಿದುಹೋಗುತ್ತಿರುವುದರಿಂದ ಹಾಗೂ ವಿವಿಧ ಮೂಲಗಳಿಂದ ನಿರೀಕ್ಷಣ ಪ್ರಮಾಣದ ಹಣಕಾಸು (Finance) ಬರುತ್ತಿಲ್ಲವಾದ್ದರಿಂದ ಸದ್ಯ ನೌಕರರ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಸಚಿವ ಸಂಪುಟಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಿಎಸ್‌ಟಿ ಸೇರಿ, ವಿವಿಧ ಮೂಲಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಹರಿದುಹೋಗುತ್ತಿದೆ. ಹೀಗಾಗಿ ವೇತನ ಪರಿಷ್ಕರಣೆ ಸದ್ಯದ ಮಟ್ಟಿಗೆ ಸಾಧ್ಯವಾಗದು ಎಂದು ಅಧಿಕಾರಿಗಳು ಕಳೆದ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ವೇತನ ಪರಿಷ್ಕರಣೆ, ಹೊಸ ಪಿಂಚಣಿ ಯೋಜನೆಯಲ್ಲಿ ಇರುವವರನ್ನು ಹಳೇ ಪಿಂಚಣಿ ಯೋಜನೆಯ ವ್ಯಾಪ್ತಿಗೆ ತರಬೇಕು ಎನ್ನುವ ಬೇಡಿಕೆ ಸಹ ಈಡೇರಿಸಲು ಸಾಧ್ಯವಾಗದು. ಈ ಬೇಡಿಕೆ ಈಡೇರಿಸಿದರೆ ಪ್ರತಿ ತಿಂಗಳು ವಿವಿಧ ಬಾಬುಗಳಿಗೆ ಹಣವನ್ನು ಹೊಂದಿಸಲು ಕಷ್ಟ ಆಗಬಹುದು ಎಂದು ಅಧಿಕಾರಿಗಳ ತಂಡ ಸಂಪುಟ ಸದಸ್ಯರಿಗೆ ವಿವರಿಸಿದೆ.

ಹಣದ ಕೊರತೆ ಇದೆ ಎಂದ ಮಾತ್ರಕ್ಕೆ ವೇತನ ಪರಿಷ್ಕರಣೆ ಮಾಡದೇ ಇರಲು ಸಾಧ್ಯವಿಲ್ಲ. ತಕ್ಷಣಕ್ಕೆ ಆಗದೇ ಇದ್ದರೂ ಮುಂದೆ ಮಾಡಲೇಬೇಕಾಗುತ್ತದೆ ಎಂದು ಆರ್ಥಿಕ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಶೇ 27.50ರಷ್ಟು ಫಿಟ್‌ಮೆಂಟ್‌ಗೆ ಶಿಫಾರಸು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನು ಮಾರ್ಚ್ 16ರಂದು ಮುಖ್ಯಮಂತ್ರಿಗೆ ಸಲ್ಲಿಸಿತ್ತು. ಏಳನೇ ವೇತನ ಆಯೋಗವು ಶೇ. 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಶಿಫಾರಸು ಮಾಡಿತ್ತು. ಶಿಫಾರಸು ಮಾಡಿದ ದಿನದಿಂದಲೇ ಚುನಾವಣೆಯ ನೀತಿ ಸಂಹಿತೆ ಆರಂಭವಾದ ಕಾರಣ ಶಿಫಾರಸು ಜಾರಿ ಸಾಧ್ಯವಾಗಿರಲಿಲ್ಲ. ಈಗ ನೀತಿ ಸಂಹಿತೆ ಮುಗಿದು ತಿಂಗಳು ಕಳೆದರೂ ಕ್ರಮ ಕೈಗೊಂಡಿಲ್ಲ ಎನ್ನುವುದು ನೌಕರರ ಆರೋಪ.

Continue Reading

ಹಾಸನ

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Wild Animal Attack : ಆಹಾರ ಅರಸಿ ಕಾಡುಪ್ರಾಣಿಗಳು ನಾಡಿಗೆ ಬರುತ್ತಿದ್ದು, ಕಾಡಂಚಿನ ಗ್ರಾಮಗಳ ಜನರು ಭಯಭೀತಿಗೊಂಡಿದ್ದಾರೆ. ಹಾಸನ ಹಾಗೂ ಚಿಕ್ಕಮಗಳೂರಲ್ಲಿ ಕಾಡಾನೆಯು ದಾಳಿ (Elephant Attack ) ಮಾಡಿದೆ.

VISTARANEWS.COM


on

By

Elephant attack in Hassan and Chikmagalur
ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಆನೆ.. ಕಾಡಾನೆ ದಾಳಿಗೆ ತುತ್ತಾಗಿ ಆಸ್ಪತ್ರೆಪಾಲಾದ ವ್ಯಕ್ತಿ
Koo

ಹಾಸನ/ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದೆ. ಕಾಡಾನೆ ದಾಳಿಯಿಂದ ಲಕ್ಷ್ಮಣ (46) ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ವಾಟೆಹಳ್ಳಿ ಗ್ರಾಮದಲ್ಲಿ (Wild Animal attack) ಘಟನೆ ನಡೆದಿದೆ.

ಐಬಿಸಿ ಎಸ್ಟೇಟ್‌ನಲ್ಲಿ ರೈಟರ್ ಕೆಲಸ ಮಾಡುತ್ತಿದ್ದ ಲಕ್ಷ್ಮಣ, ಕಾಫಿ ತೋಟದಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಈ ಸಮಯದಲ್ಲಿ ಏಕಾಏಕಿ ಒಂಟಿ ಸಲಗವೊಂದು ದಾಳಿ ಮಾಡಿದೆ. ಲಕ್ಷ್ಮಣ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.

ಲಕ್ಷ್ಮಣ ಚಿರಾಟ ಕೇಳಿ ಅಲ್ಲಿದ್ದವರು ಕಾಡಾನೆಯನ್ನು ಓಡಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಲಕ್ಷ್ಮಣ ಅವರನ್ನು ಕೂಡಲೇ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಯನ್ನು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಬಾಳೆ ತೋಟಕ್ಕೆ ನುಗ್ಗಿ ಧ್ವಂಸ ಮಾಡಿದ ಆನೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ತೋಟಕ್ಕೆ ನುಗ್ಗಿದ ಕಾಡಾನೆ ಹಾನಿ ಮಾಡಿದೆ. ತೋಟ ಹಾಗೂ ಮನೆಯ ಮುಂಭಾಗದ ಬಾಳೆ ತೋಟ ಧ್ವಂಸ ಮಾಡಿದೆ. ಬಾಳೆ, ಎಲಕ್ಕಿ, ಕಾಫಿ ಬೆಳೆ ಹಾನಿ ಮಾಡಿದೆ. ದಿನ ನಿತ್ಯವೂ ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಕಾಡಾನೆ ದಾಳಿ ಮಾಡುತ್ತಿದೆ.

ಇದನ್ನೂ ಓದಿ: Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

ಕೊಡಗಿನಲ್ಲಿ ಕಾಡಾನೆ ಪ್ರತ್ಯಕ್ಷ

ಕೊಡಗಿನ ಆನೆಕಾಡು ಬಳಿಯ ಮೆಟ್ನಳನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಹೆದ್ದಾರಿಯಲ್ಲಿ ಸಾಗಿದ ಕಾಡಾನೆಯಿಂದ ಕೆಲಕಾಲ‌ ಆತಂಕ ಸೃಷ್ಟಿಯಾಗಿತ್ತು. ಆಹಾರ ಅರಸಿ ಕಾಡಿನಿಂದ ನಾಡಿಗೆ ಸಲಗವೊಂದು ಲಗ್ಗೆ ಇಟ್ಟಿತ್ತು. ಕಾಡಾನೆ ಓಡಾಟದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಹಾಸನನಲ್ಲೂ ಕಾಡಾನೆಗಳ ಉಪಟಳ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಆನೆಗಳ ದಾಳಿಗೆ ಅಪಾರ ಪ್ರಮಾಣದ ಬಾಳೆ, ಕಾಫಿ ಬೆಳೆ ನಾಶವಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

ಪರಮೇಶ್ ಎಂಬುವವರ ಮನೆಯ ಸಮೀಪವೇ ಬಂದಿದ್ದ ಕಾಡಾನೆಗಳು, ಬಾಳೆ ಮತ್ತು ಕಾಫಿ ತೋಟವನ್ನು ಸಂಪೂರ್ಣ ನಾಶಪಡಿಸಿವೆ. ಬೆಳೆ ಕಳೆದುಕೊಂಡು ಪರಮೇಶ್ ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಗ್ರಾಮದ ಅನತಿ ದೂರದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸೂಕ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

wild animal attack

ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಎಂಟ್ರಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಪದೆ ಪದೇ ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಬರುತ್ತಿದ್ದು, ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಬಿಳಿಗಿರಿರಂಗನ ಬೆಟ್ಟದ ಹಾಡಿಯಲ್ಲಿ ಕಾಡಾನೆ ಸಂಚಾರ ಮಾಡುತ್ತಿದ್ದು, ಸ್ಥಳೀಯರು ಸೈರನ್ ಹಾಕಿ ಓಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯೂ ಕೂಡ ಪೋಡಿಯಲ್ಲಿ ಆನೆಯೊಂದು ಕಾಣಿಸಿಕೊಂಡಿತ್ತು. ಇದೀಗ ಎಲ್ಲೆಂದರಲ್ಲಿ ಕಾಡಾನೆ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dengue Fever
ಕರ್ನಾಟಕ15 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Fire accident
ದೇಶ25 mins ago

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Rashmika Mandanna Kubera interesting first look
ಕಾಲಿವುಡ್31 mins ago

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

IND vs ZIM
ಕ್ರೀಡೆ34 mins ago

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

Edu Guide
ಶಿಕ್ಷಣ45 mins ago

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Prajwal Revanna case Three FIRs against Prajwal Wanted list in all three
ಕ್ರೈಂ48 mins ago

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Biometric Attendance
ಬೆಂಗಳೂರು57 mins ago

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Vinay Rajkumar wedding pictures swathishta krishnan have gone viral
ಸ್ಯಾಂಡಲ್ ವುಡ್57 mins ago

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Elephant attack in Hassan and Chikmagalur
ಹಾಸನ60 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Hina Khan mom weeps as actor cuts her hair
ಬಾಲಿವುಡ್1 hour ago

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack in Hassan and Chikmagalur
ಹಾಸನ60 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು2 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ7 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ22 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ24 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಟ್ರೆಂಡಿಂಗ್‌