IND vs AFG 1st T20: ಅಪಾಯಕಾರಿ ಆಫ್ಘನ್​ ಸವಾಲು ಎದರಿಸಲು ಸಿದ್ಧವಾದ ಟೀಮ್​ ಇಂಡಿಯಾ - Vistara News

ಕ್ರಿಕೆಟ್

IND vs AFG 1st T20: ಅಪಾಯಕಾರಿ ಆಫ್ಘನ್​ ಸವಾಲು ಎದರಿಸಲು ಸಿದ್ಧವಾದ ಟೀಮ್​ ಇಂಡಿಯಾ

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯ ಬಳಿಕ ರೋಹಿತ್​ ಶರ್ಮ ಅವರು ಆಡುತ್ತಿರುವ ಮೊದಲ ಟಿ20 ಸರಣಿ ಇದಾಗಿದೆ.

VISTARANEWS.COM


on

Rinku Singh and Sanju Samson find a reason to smile
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ: ಭಾರತ ಮತ್ತು ಅಫಘಾನಿಸ್ತಾನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ(IND vs AFG 1st T20) ಪಂದ್ಯವನ್ನಾಡಲು ಸಜ್ಜಾಗಿ ನಿಂತಿದೆ. ಇದೇ ವರ್ಷ ಟಿ20 ವಿಶ್ವಕಪ್​ ಟೂರ್ನಿ ನಡೆಯಲಿರುವ ಕಾರಣ ಇತ್ತಂಡಗಳಿಗೂ ಈ ಸರಣಿ ಮಹತ್ವದ್ದಾಗಿದೆ. ಮೊಹಾಲಿಯಲ್ಲಿ ನಾಳೆ ಮೊದಲ ಪಂದ್ಯ ನಡೆಯಲಿದೆ.

ಕೊಹ್ಲಿ ಅಲಭ್ಯ


ವಿರಾಟ್​ ಕೊಹ್ಲಿ ಅವರು ತಮ್ಮ ಪುತ್ರಿಯ ಹುಟ್ಟುಹಬ್ಬದ ಕಾರಣದಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಶುಭಮನ್​ ಗಿಲ್​ ಆಡಲಿದ್ದಾರೆ. ನಾಯಕ ರೋಹಿತ್ ಶರ್ಮಾ ಜತೆಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡಲಿದ್ದಾರೆ ಎಂದು ಈಗಾಗಲೇ ತಂಡದ ಕೋಚ್​ ರಾಹುಲ್​ ದ್ರಾವಿಡ್​ ಖಚಿತಪಡಿಸಿದ್ದಾರೆ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಗಾಯದಿಂದಾಗಿ ಅಲಭ್ಯರಾದ ಕಾರಣ ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್​ ಮತ್ತು ಶಿವಂ ದುಬೆ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವ ಅಗತ್ಯವಿದೆ.

ರೋಹಿತ್​ಗೆ ಅಗ್ನಿಪರೀಕ್ಷೆ


2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯ ಬಳಿಕ ರೋಹಿತ್​ ಶರ್ಮ ಅವರು ಆಡುತ್ತಿರುವ ಮೊದಲ ಟಿ20 ಸರಣಿ ಇದಾಗಿದೆ. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ ಆಡಿದ್ದ ರೋಹಿತ್​ ಬಳಿಕ ಭಾರತ ಪರ ಆಡಿಲ್ಲ. 14 ತಿಂಗಳ ಬಳಿಕ ಟಿ20 ತಂಡ ಸೇರಿದ ರೋಹಿತ್​ ಯುವ ಬ್ಯಾಟರ್​ಗಳ ಮುಂದೆ ತಮ್ಮ ಬ್ಯಾಟಿಂಗ್​ ಸಾಮರ್ಥ್ಯ ತೋರಬೇಕಿದೆ. ಈ ಸರಣಿಯಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸದೇ ಹೋದರೆ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿಗೆ ಆಯ್ಕೆಯಾಗುವುದು ಕಷ್ಟ ಸಾದ್ಯ. ಏಕೆಂದರೆ ಹಿರಿಯ ಆಟಗಾರರನ್ನು ಬಿಸಿಸಿಐ ಈಗಾಗಲೇ ಟಿ20 ಸರಣಿಯಿಂದ ದೂರ ಇಟ್ಟಿತ್ತು. ಸದ್ಯ ಸಿಕ್ಕ ಒಂದು ಅವಕಾಶವನ್ನು ಹಿರಿಯ ಆಟಗಾರರು ಸರಿಯಾಗಿ ಬಳಸಿಕೊಳ್ಳಬೇಕಿದೆ.

ಆಫ್ಘನ್ ಸವಾಲು ಸುಲಭವಲ್ಲ


ಅಫಘಾನಿಸ್ತಾನ ತಂಡವನ್ನು ಕ್ರಿಕೆಟ್​ ಶಿಶು ಎನ್ನುವ ಕಾಲ ಬದಲಾಗಿದೆ. ಇದಕ್ಕೆ ಕಳೆದ ವರ್ಷ ಭಾರತದಲ್ಲೇ ನಡೆದ ಏಕದಿನ ವಿಶ್ವಕಪ್​ ಟೂರ್ನಿಯೇ ಉತ್ತಮ ನಿದರ್ಶನ. ಬಲಿಷ್ಠ ತಂಡವಾದ ಇಂಗ್ಲೆಂಡ್​, ಪಾಕಿಸ್ತಾನ ಸೇರಿ ಹಲವು ತಂಡಗಳಿಗೆ ಹೀನಾಯ ಸೋಲುಣಿಸಿತ್ತು. ಅಲ್ಲದೆ ಭಾರತಕ್ಕೂ ಪ್ರಬಲ ಪೈಪೋಟಿ ನೀಡಿತ್ತು. ಹೀಗಾಗಿ ಅಫಘಾನಿಸ್ತಾನದ ಸವಾಲನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಯುವ ಮತ್ತು ಹಿರಿಯ ಆಟಗಾರರಿಂದ ಕೂಡಿದೆ.

ಇದನ್ನೂ ಓದಿ Rahul Dravid: ಅಯ್ಯರ್​,ಇಶಾನ್​ ಅಶಿಸ್ತು ವಿಚಾರದಲ್ಲಿ ಸ್ಪಷ್ಟನೆ ನೀಡಿದ ಕೋಚ್​​ ದ್ರಾವಿಡ್

ಉಭಯ ತಂಡಗಳ ಆಡುವ ಸಂಭಾವ್ಯ ತಂಡ


ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ತಿಲಕ್​ ವರ್ಮ, ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಅಕ್ಷರ್​ ಪಟೇಲ್, ಕುಲದೀಪ್ ಯಾದವ್, ಶಿವಂ ದುಬೆ, ಅರ್ಶ್​ದೀಪ್​ ಸಿಂಗ್, ಮುಖೇಶ್ ಕುಮಾರ್, ಆವೇಶ್​ ಖಾನ್​.

ಅಫಘಾನಿಸ್ತಾನ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಮ್ ಜನತ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ನವೀನ್ ಉಲ್ ಹಕ್, ಕೈಸ್ ಅಹ್ಮದ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

T20 World Cup 2024: ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಯುವರಾಜ್​ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂದು ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್(Yuvraj Singh) ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂದು ಹೇಳಿದ್ದಾರೆ.​​

​ಐಸಿಸಿ​ ಸಂದರ್ಶವೊಂದರಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ನಾನು ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ” ಎಂದು ಹೇಳಿದರು.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್​ ಪಂತ್​ ಅವರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು. ಪಂತ್​ ದೀರ್ಘಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಅವರ ಪ್ರದರ್ಶನದಲ್ಲಿ ಯಾವುದೇ ವ್ಯತ್ಯಾಸ ಮಾತ್ರ ಕಂಡುಬಂದಿರಲಿಲ್ಲ. ಹಳೆಯ ಫಾರ್ಮ್​ನಂತೆ ಪ್ರದರ್ಶನ ತೋರಿದ್ದರು. ಹೀಗಾಗಿ ಯುವರಾಜ್​ ಕೂಡ ಪಂತ್​ರನ್ನು ಟಿ20ಯಲ್ಲಿ ಆಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Viral Video: ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ.

VISTARANEWS.COM


on

viral video
Koo

ಅಹಮದಾಬಾದ್​: ಆರ್​ಸಿಬಿ(RCB) ವಿರುದ್ಧ ನಿನ್ನೆ(ಬುಧವಾರ) ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್(​RCB vs RR Eliminator) ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(Rajasthan Royals)​ ತಂಡ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿ ಕ್ವಾಲಿಫೈಯರ್​ ಹಂತಕ್ಕೆ ತೇರ್ಗಡೆಗೊಂಡಿತು. ಆದರೆ, ಇದೇ ಪಂದ್ಯದಲ್ಲಿ ಔಟಾದ ಹತಾಶೆಯಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್(Yashasvi Jaiswal)​ ತಾಳ್ಮೆ ಕಳೆದುಕೊಂಡ(Yashasvi Jaiswal Loses Cool) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ. ಅಲ್ಲದೆ ಜೋರಾಗಿ ಕಿರುಚಾಟ ಕೂಡ ನಡೆಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದ್ದು ನೆಟ್ಟಿಗರು ಈ ರೀತಿಯ ವರ್ತನೆ ಸರಿಯಲ್ಲ ಎಂದು ಬುದ್ಧಿಮಾತು ಹೇಳಿದ್ದಾರೆ.

ಕಳೆದ ವರ್ಷದ ಐಪಿಎಲ್​ ಟೂರ್ನಿಯಲ್ಲಿ ಜೈಸ್ವಾಲ್​ 14 ಪಂದ್ಯ ಆಡಿ 625 ರನ್ ಗಳಿಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ನೀಡಿಲ್ಲ. ಮುಂಬೈ ವಿರುದ್ಧದ ಪಂದ್ಯದಲ್ಲಿ ತಕವೊಂದನ್ನು ಬಾರಿಸಿದ್ದು ಬಿಟ್ಟರೆ ಇವರ ಬ್ಯಾಟ್​ನಿಂದ ದೊಡ್ಡ ಇನಿಂಗ್ಸ್​ ಕಂಡುಬಂದಿಲ್ಲ. ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್​ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜೈಸ್ವಾಲ್​ ಕೂಡ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

ಈ ಸೋಲಿನೊಂದಿಗೆ ಆರ್​ಸಿಬಿ ತಂಡದ 2024ರ ಐಪಿಎಲ್​ ಅಭಿಯಾನ ಮುಕ್ತಾಯಗೊಂಡಿತು. ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿರುವುದೇ ರೆಡ್​ ಆರ್ಮಿಯ ದೊಡ್ಡ ಸಾಧನೆ ಎನಿಸಿಕೊಂಡಿತು. ಜತೆಗೆ ಆರ್​​ಸಿಬಿಯ ಅಪಾರ ಅಭಿಮಾನಿಗಳ ಹೃದಯ ಛಿದ್ರಗೊಂಡಿತು. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂಬ ಆಸೆ ಕಮರಿತು. ಕಷ್ಟದಲ್ಲಿ ಪ್ಲೇಆಫ್​ ಹಂತಕ್ಕೇರಿದ ಹೊರತಾಗಿಯೂ ಮುಂದಿನ ಹಂತಕ್ಕೆ ಹೋಗಲು ಸಾಧ್ಯವಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಚೆನ್ನೈ ವಿರುದ್ಧದ ಲೀಗ್ ಪಂದ್ಯದಲ್ಲಿ ಹೆಚ್ಚು ನಿಖರವಾಗಿ ಆಡಿದ್ದ ಆರ್​ಸಿಬಿ ಈ ಪಂದ್ಯದಲ್ಲಿ ನಿರ್ಲಕ್ಷ್ಯ ತೋರಿತು. ಬ್ಯಾಟಿಂಗ್​ನಲ್ಲಿ ಅನಗತ್ಯವಾಗಿ ವಿಕೆಟ್​ ಒಪ್ಪಿಸಿದರೆ ಬೌಲಿಂಗ್ ವೇಳೆಯೂ ಕ್ಯಾಚ್​ ಕೈಚೆಲ್ಲಿ, ಕಳಪೆ ಫೀಲ್ಡಿಂಗ್ ಮಾಡಿ, ರನ್​ಔಟ್​ ಚಾನ್ಸ್​ ಕಳೆದುಕೊಂಡಿತು. ಇದು ಸೋಲಿಗೆ ಕಾರಣವಾಯಿತು.

Continue Reading

ಕ್ರೀಡೆ

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

SRH vs RR: ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

VISTARANEWS.COM


on

SRH vs RR
Koo

ಚೆನ್ನೈ: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್(SRH vs RR Qualifier 2)​ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ(MA Chidambaram Stadium, Chennai) ನಾಳೆ(ಶುಕ್ರವಾರ) ನಡೆಯುವ ಈ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(SRH vs RR)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ತಂಡಗಳು ಕಾದಾಟ ನಡೆಸಲಿವೆ. ಗೆದ್ದವರು ಮೇ 26ರಂದು ನಡೆಯುವ ಫೈನಲ್​ನಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ. ರಾಜಸ್ಥಾನ್(Rajasthan Royals) ಮತ್ತು ಹೈದರಾಬಾದ್​ ತಂಡದ ನಾಕೌಟ್​/ಪ್ಲೇ ಆಫ್​ ಸಾಧನೆಯ ಇಣುಕು ನೋಡ ಇಂತಿದೆ.

ಲೀಗ್​ನಲ್ಲಿ 1 ರನ್​ ಗೆಲುವು


ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುನೇಶ್ವರ್​ ಕುಮಾರ್​ ಅವರು ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಸೋಲಿಗೆ ರಾಜಸ್ಥಾನ್​ ಕ್ವಾಲಿಫೈಯರ್​ ಪಂದ್ಯದಲ್ಲಿ ಸೇಡು ತೀರಿಸಲು ಪಣ ತೊಟ್ಟಿದೆ.

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಬಲಾಬಲ


ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

ಹೈದರಾಬಾದ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2013ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಚಾಂಪಿಯನ್‌

2017ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2018ರಲ್ಲಿ ಮೊದಲ ಸ್ಥಾನ. ರನ್ನರ್ ಅಪ್‌

2019ರಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2020ರಲ್ಲಿ 3ನೇ ಸ್ಥಾನ. ಕ್ವಾಲಿಫೈಯರ್‌-2ನಲ್ಲಿ ಸೋಲು

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಹವಾಮಾನ ವರದಿ


ಪಂದ್ಯ ಚೆನ್ನೈಯಲ್ಲಿ ನಡೆಯುವ ಕಾರಣ ಪಂದ್ಯಕ್ಕೆ ಮಳೆ ಭೀತಿ ಇದ್ದೇ ಇದೆ. ಈಗಾಗಲೇ ತಮಿಳುನಾಡಿನಲ್ಲಿ ವರುಣನ ಆರ್ಭಟದಿಂದ ಕೆಲವು ಪ್ರದೇಶಗಳು ವಿಪರೀತ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಪಂದ್ಯಕ್ಕೂ ಮಳೆಯ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ. ಇದರ ಲಾಭ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಸಿಗಲಿದೆ. ಹೈದರಾಬಾದ್​ ತಂಡ ಲೀಗ್​ ಹಂತದಲ್ಲಿ ದ್ವಿತೀಯ ಸ್ಥಾನಿಯಾಗಿತ್ತು.

Continue Reading

ಕ್ರೀಡೆ

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

RCB Funny Memes: ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ

VISTARANEWS.COM


on

RCB Funny Memes
Koo

ಬೆಂಗಳೂರು: ಐಪಿಎಲ್​ನ(IPL 2024) ಸಾಂಪ್ರದಾಯಿಕ ಬದ್ಧ ಎದುರಾಳಿಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್(CSK)​ ಮತ್ತು ಆರ್​ಸಿಬಿ(RCB). ಅಭಿಮಾನಿಗಳ ಅತಿಯಾದ ಹುಚ್ಚಾಟದಿಂದಲೇ ಉಭಯ ತಂಡಗಳನ್ನು ಬುದ್ಧ ಎದುರಾಳಿಗಳೆಂದು ಕರೆಯಲಾಗುತ್ತದೆ. ಯಾರೇ ಗೆದ್ದರೂ ಅಥವಾ ಸೋತರೂ ಅಭಿಮಾನಿಗಳು ಪರಸ್ಪರ ಟ್ರೋಲ್​ ಮಾಡುತ್ತಾರೆ. ಅಲ್ಲದೆ ಹೊಡೆದಾಟ ನಡೆಸಿದ ನಿದರ್ಶನ ಕೂಡ ಸಾಕಷ್ಟಿದೆ.

ಕಳೆದ ಶನಿವಾರ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಈ ವೇಳೆ ಆರ್​ಸಿಬಿ ಅಭಿಮಾನಿಗಳು ಎಲ್ಲೆ ಮೀರಿದ ಸಂಭ್ರಮಾಚರಣೆ ಮಾಡಿ ಚೆನ್ನೈ ಅಭಿಮಾನಿಗಳಿಗೆ ಎಲ್ಲೆಂದರಲ್ಲಿ ಕಾಟ ಕೊಟ್ಟಿದ್ದರು. ಇದೀಗ ಆರ್​ಸಿಬಿ ರಾಜಸ್ಥಾನ್​ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ. ಇದೇ ಸಂತಸದಲ್ಲಿ ಆರ್​ಸಿಬಿ ಅಭಿಮಾನಿಗಳನ್ನು ಚೆನ್ನೈ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್​ ಮಾಡಿದ್ದಾರೆ.

ಆರ್‌ಸಿಬಿ ಅಭಿಮಾನಿಗಳಿ ತಮ್ಮ ತಂಡದ ಸೋಲಿನ ನಿರಾಸೆ ಮಧ್ಯೆ ಇದೀಗ ಚೆನ್ನೈ ಅಭಿಮಾನಿಗಳ ಟ್ರೋಲ್​ ಮತ್ತು ಮೀಮ್ಸ್​ಗಳ ಬಿಸಿ ಮುಟ್ಟಿದೆ. ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತ ಫ್ಯಾನ್ಸ್ ಪುಟದಲ್ಲಿ ಆರ್‌ಸಿಬಿ ಸೋಲನ್ನು ಟ್ರೋಲ್ ಮಾಡಲಾಗಿದ್ದು. ‘ಕರ್ಮ’ ಗುರಿಯಿಟ್ಟವನ ಬಳಿಗೇ ತಿರುಗು ಬಾಣದಂತೆ ಹಿಂತಿರುಗಲಿದೆ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

Continue Reading
Advertisement
Narendra Modi
ದೇಶ12 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್15 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ28 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ31 mins ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ33 mins ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Share Market
ದೇಶ51 mins ago

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Viral Video
ವೈರಲ್ ನ್ಯೂಸ್55 mins ago

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

cm siddaramaiah meet 2
ಪ್ರಮುಖ ಸುದ್ದಿ1 hour ago

CM Siddaramaiah: ರೈತರ ಬರ ಪರಿಹಾರ ಸಮಸ್ಯೆಯಾದರೆ ಸಹಿಸುವುದಿಲ್ಲ- ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

viral video
ಕ್ರೀಡೆ2 hours ago

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ11 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌