Rama Mandir : ರಾಮ ಮಂದಿರ ಉದ್ಘಾಟನೆ ಬಹಿಷ್ಕಾರ ಸುದ್ದಿ ಸುಳ್ಳು; ಶೃಂಗೇರಿ ಮಠ ಸ್ಪಷ್ಟನೆ - Vistara News

ಕರ್ನಾಟಕ

Rama Mandir : ರಾಮ ಮಂದಿರ ಉದ್ಘಾಟನೆ ಬಹಿಷ್ಕಾರ ಸುದ್ದಿ ಸುಳ್ಳು; ಶೃಂಗೇರಿ ಮಠ ಸ್ಪಷ್ಟನೆ

Rama Mandir : ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಪೀಠ ಬಹಿಷ್ಕರಿಸಿಲ್ಲ ಎಂದು ಶೃಂಗೇರಿ ಮಠ ಸ್ಪಷ್ಟಪಡಿಸಿದೆ. ಕೆಲವರು ಮಠದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದೆ.

VISTARANEWS.COM


on

Shringeri temple denies boycotting Rama Mandir Inauguration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರ (Rama Mandir) ಉದ್ಘಾಟನೆ ಕಾರ್ಯಕ್ರಮವನ್ನು ಶೃಂಗೇರಿ ಶಾರದಾ ಪೀಠ (Shringeri matt) ಬಹಿಷ್ಕರಿಸಿದೆ ಎಂಬ ವರದಿಗಳನ್ನು ಶೃಂಗೇರಿ ಶ್ರೀಗಳು ತಳ್ಳಿ ಹಾಕಿದ್ದಾರೆ. ಶೃಂಗೇರಿ ಪೀಠದ ಆಡಳಿತ ಮಂಡಳಿಯು ಶ್ರೀಗಳು ಹಾಗೂ ಆಡಳಿತ ಅಧಿಕಾರಿ ಗೌರಿ ಶಂಕರ್ (Administrator Gowrishankar) ಅವರ ಹೆಸರಿನಲ್ಲಿ ಬಹಿರಂಗ ಪತ್ರವೊಂದನ್ನು ಪ್ರಕಟಿಸಿದ್ದು, ಇದರಲ್ಲಿ ಮಠದ ವತಿಯಿಂದ ಬಹಿಷ್ಕಾರ ಹಾಕಲಾಗಿದೆ ಎಂಬುದು ಅಪಪ್ರಚಾರ ಎಂದು ತಿಳಿಸಲಾಗಿದೆ. ಶೃಂಗೇರಿ ಶ್ರೀಗಳ ಭಾವಚಿತ್ರ, ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ನಿಜವಲ್ಲ ಎಂದು ಮಠದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ.

ಜಾಲತಾಣದಲ್ಲಿ ಏನು ಪ್ರಚಾರ ಮಾಡಲಾಗಿತ್ತು?

WWW.jainikajagaran.com ಎಂಬ ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಮಠವು ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಿದೆ ಎಂದು ಪ್ರಚಾರ ಮಾಡಲಾಗಿತ್ತು. ಶೃಂಗೇರಿ ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳ ಹೆಸರಲ್ಲಿ ಈ ಹೇಳಿಕೆಯನ್ನು ನೀಡಲಾಗಿತ್ತು. ಅದಕ್ಕೆ ಕಿರಿಯ ಶ್ರೀಗಳು ಮತ್ತು ಮಠದ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುವಂತೆ ಶ್ರೀಗಳು ಕರೆ ನೀಡಿದ್ದಾರೆ ಎಂಬುದು ಸುಳ್ಳು ಮಾಹಿತಿ. ಪ್ರತಿಯೊಬ್ಬರು ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಶ್ರೀರಾಮ ತಾರಕ ಜಪ ಮಂತ್ರ ಪಠಿಸುವಂತೆ ಶೃಂಗೇರಿ ಶ್ರೀಗಳು ಆಗಲೇ ಕರೆ ನೀಡಿದ್ದಾರೆ. ಹೀಗಾಗಿ ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡಬಾರದು ಎಂದು ಪೀಠ ಮನವಿ ಮಾಡಿದೆ.

ಬಹಿರಂಗಪತ್ರದಲ್ಲಿ ಏನಿದೆ?

ಆಸ್ತಿಕಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ. ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) .ಸೋಮವಾರದಂದು ಪ್ರಾಣಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.

ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ “www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಜಗದ್ಗುರು ಶ್ರೀಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.

“sharadapeetham” ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.

ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ- ಇದು ಬಹಿರಂಗ ಪತ್ರದಲ್ಲಿರುವ ಮಾಹಿತಿ.

Shringeri Matt letter

ಇತರ ಶಂಕರ ಮಠಗಳಿಂದ ಬಹಿಷ್ಕಾರ

ಈ ನಡುವೆ, ಪುರಿ ಗೋವರ್ಧನ ಮಠ ಹಾಗೂ ಉತ್ತರಾಖಂಡದ ಜ್ಯೋತಿರ್‌ ಮಠವು ಈ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ನೇರವಾಗಿ ಘೋಷಣೆ ಮಾಡಿವೆ. ಉತ್ತರಾಖಂಡ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ದೇಶದ ಯಾವುದೇ ಪ್ರಮುಖ ಶಂಕರಾಚಾರ್ಯ ಮಠಗಳ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ

ದೇಶದಲ್ಲಿ ಈಗ ಶಂಕರಾಚಾರ್ಯ ಪರಂಪರೆಯ ನಾಲ್ಕು ಪ್ರಮುಖ ಮಠಗಳಿವೆ. ಉತ್ತರಾಖಂಡದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠ, ಶೃಂಗೇರಿಯ ಶಾರದಾ ಪೀಠ ಮತ್ತು ಗುಜರಾತ್‌ನ ದ್ವಾರಕೆಯ ದ್ವಾರಕಾ ಶಾರದಾ ಪೀಠಗಳು ಪ್ರಮುಖವಾಗಿವೆ. ಅವುಗಳ ಪೈಕಿ ಎರಡು ಪೀಠಗಳು ಈಗ ರಾಮ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎಂದು ಪ್ರಕಟಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Bhavani Revanna: ಕಳೆದ ವಾರ ಕಿಡ್ನಾಪ್‌ ಕೇಸ್‌ನಲ್ಲಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು.

VISTARANEWS.COM


on

bhavani revanna bail
Koo

ಬೆಂಗಳೂರು: ಕೆಆರ್ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯನ್ನು ಕಿಡ್ನಾಪ್ (kidnap case) ಮಾಡಿದ ಪ್ರಕರಣದಲ್ಲಿ ಎಸ್‌ಐಟಿ (SIT) ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು (Anticipatory Bail) ದೊರೆತಿದೆ.

ಕಳೆದ ವಾರ ಕಿಡ್ನಾಪ್‌ ಕೇಸ್‌ನಲ್ಲಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ಆದೇಶವನ್ನು ಪೀಠ ಪ್ರಕಟಿಸಿದೆ.

“ಪೊಲೀಸರು ಮುಂದಿಟ್ಟ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರವನ್ನೇ ಕೊಡಬೇಕೆಂದಿಲ್ಲ” ಎಂದು ಕೋರ್ಟ್‌ ಪೀಠ ಹೇಳಿದೆ. “ಸಂತ್ರಸ್ತೆಗೆ ಭವಾನಿ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಅಕ್ಕ ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ” ಎಂದೂ ಕೋರ್ಟ್‌ ಗಮನಿಸಿದೆ.

ಆದರೆ, ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಹೈಕೋರ್ಟ್ ವಿಧಿಸಿದೆ. ತನಿಖೆಗೆ ಎಸ್‌ಐಟಿಗೆ ಸಹಕರಿಸಬೇಕು ಎಂದು ಆದೇಶಿಸಿದೆ. ಮಾಜಿ ಸಚಿವ ರೇವಣ್ಣ ಅವರಿಗೂ ದೇಶ ಬಿಟ್ಟು ಹೊರಹೋಗಬಾರದು ಎಂಬ ಆದೇಶ ವಿಧಿಸಲಾಗಿತ್ತು.

ಎರಡು ವಾರದ ಹಿಂದೆ, ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿದ್ದರು. ಅಲ್ಲಿಯವರೆಗೂ ಭವಾನಿ ತಲೆಮರೆಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು.

ʼʼಸಂತ್ರಸ್ತೆ ನಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನಾನು ಅವರನ್ನು ಅಪಹರಣ ಮಾಡಿಸಿಲ್ಲ. ಆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರೋ ಸಂಚು ರೂಪಿಸಿದ್ದು, ಇದರ ಭಾಗವಾಗಿ ಈ ಆರೋಪ ಹೊರಿಸಲಾಗುತ್ತಿದೆʼʼ ಎಂದು ಭವಾನಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ.

ಇಂದೇ ಮತ್ತೊಮ್ಮೆ ಪ್ರಜ್ವಲ್‌ ರೇವಣ್ಣ ಕಸ್ಟಡಿಗೆ

ಇನ್ನೊಂದೆಡೆ, ಪ್ರಜ್ವಲ್‌ ರೇವಣ್ಣ (Prajwal Revanna case) ಅವರ ಕಸ್ಟಡಿಯೂ ಇಂದೇ ಮುಕ್ತಾಯವಾಗುತ್ತಿದ್ದು, ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಿ ಮತ್ತೊಮ್ಮೆ ಕಸ್ಟಡಿಗೆ ಪಡೆಯಲು ಎಸ್‌ಐಟಿ ಮುಂದಾಗಿದೆ. ಈಗಾಗಲೇ ಎರಡೆರಡು ಬಾರಿ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದಾರೆ. ಕೋರ್ಟ್‌ಗೆ ಮನವರಿಕೆ ಮಾಡಿ, ಪ್ರಜ್ವಲ್ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣವಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಎಸ್ಐಟಿ ಹಾಜರುಪಡಿಸಲಿದೆ. ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

ಪ್ರತಿಯೊಂದು ಪ್ರಕರಣದಲ್ಲಿಯೂ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಒಟ್ಟು ಮೂರು ಪ್ರಕರಣಗಳಿದ್ದು, ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್ಐಟಿ ಹರಸಾಹಸ ಪಡುತ್ತಿದೆಯಾದರೂ, ಅದು ಸಾಧ್ಯವಾಗಿಲ್ಲ. ಎಸ್‌ಐಟಿ ವಶದಲ್ಲಿರುವ ಅಶ್ಲೀಲ ವಿಡಿಯೋಗಳಲ್ಲಿ ಪ್ರಜ್ವಲ್‌ ಮುಖ ಕಾಣಿಸುತ್ತಿಲ್ಲ. ಹಲವಾರು ಮಹಿಳೆಯರ ಜೊತೆಗಿನ ಲೈಂಗಿಕ ಕ್ರಿಯೆಗಳು ದಾಖಲಾಗಿವೆಯಾದರೂ, ಅವರಲ್ಲಿ ಯಾರೂ ದೂರು ನೀಡಿಲ್ಲ. ಪ್ರಜ್ವಲ್‌ ಮನೆಯಲ್ಲಿ ನಡೆದ ಮಹಜರು ವೇಲೆ ವಶಪಡಿಸಿಕೊಳ್ಳಲಾದ ವಸ್ತುಗಳಲ್ಲಿ ಸಂಸದರ ವಿರುದ್ಧ ನಿಲ್ಲಬಹುದಾದ ಮಹತ್ವದ ಸಾಕ್ಷಿಗಳು ದೊರೆತಿಲ್ಲ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಯಾದಗಿರಿ

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

Drowned in Water : ಪ್ರತ್ಯೇಕ ಕಡೆಗಳಲ್ಲಿ ಬಾಲಕರಿಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕನೊಬ್ಬ ಬಲಿಯಾದರೆ, ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೊಬ್ಬ ಬಾಲಕ ಅಸುನೀಗಿದ್ದಾನೆ.

VISTARANEWS.COM


on

By

Drowned in water
ಮೃತ ದುರ್ದೈವಿಗಳು
Koo

ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ (Drowned in Water) ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.

ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್‌ ಮೃತದುರ್ದೈವಿ.

ವಸಂತ್‌ ನೀರು ಕುಡಿಯಲು ಕೃಷಿ ಹೊಂಡಕ್ಕೆ‌ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ‌ ಪೊಲೀಸ್ ಠಾಣೆಯಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

Murder case : ಪಾಪಿ ಮಗನೊಬ್ಬ ನಡುರಸ್ತೆಯಲ್ಲೇ ಚಿಕ್ಕಮ್ಮನನ್ನು ಹೊಡೆದು ಬಡಿದು ಕೊಂದು ಹಾಕಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

VISTARANEWS.COM


on

By

murder case
ಕೊಲೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು
Koo

ಬೆಂಗಳೂರು: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಮಗನಿಂದಲೆ ಚಿಕ್ಕಮ್ಮನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಸಿದ್ದಾರ್ಥ ನಗರದ ಬಳಿ ತಡರಾತ್ರಿ ಘಟನೆ (Murder Case) ನಡೆದಿದೆ. ಬೆಂಗಳೂರಿನ ದೊಮ್ಮಸಂದ್ರ ಮೂಲದ ಚಂದ್ರಮ್ಮ ( 40 ) ಮೃತ ದುರ್ದೈವಿ. ಆರೋಪಿ ವೆಂಕಟೇಶ್ ಎಂಬಾತ ಕೊಲೆ ಮಾಡಿ ಎಸ್ಕೇಪ್ ಆದವನು.

ಚಂದ್ರಮ್ಮ ಕೈವಾರಕ್ಕೆ ದೇವಸ್ಥಾನಕ್ಕೆ ಹೋಗಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ‌ ಹೊಸಕೋಟೆ ಬಳಿ ಚಂದ್ರಮ್ಮ ಇದ್ದ ಬೈಕ್ ಅಡ್ಡ ಗಟ್ಟಿದ ವೆಂಕಟೇಶ್‌ ಗಲಾಟೆ ಶುರು ಮಾಡಿದ್ದ. ಗಲಾಟೆಯಲ್ಲಿ ಮಾತಿಗೆ ಮಾತು ಬೆಳೆದಿದ್ದು, ಅಲ್ಲೆ ಇದ್ದ ದೊಣ್ಣೆಯಿಂದ ಚಂದ್ರಮ್ಮನ ತಲೆಗೆ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಚಂದ್ರಮ್ಮ ತೀವ್ರ ರಕ್ತವಾಗಿ ರಸ್ತೆಯಲ್ಲೆ ಬಿದ್ದು ಒದ್ದಾಡಿದ್ದಾರೆ.

ಮಾರಣಾಂತಿಕ ಹಲ್ಲೆ ಮಾಡಿದ ವೆಂಕಟೇಶ್‌ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಚಂದ್ರಮ್ಮಳನ್ನು ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಚಂದಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

murder Case

ಪರಾರಿ ಆಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ‌ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

ಚಿಮ್ಮಿದ ರಕ್ತ, ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

ಚಿಕ್ಕೋಡಿ: ಭಾನುವಾರ ತಡರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ‌ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದವನು.

ಯಕ್ಸಂಬಾ ಪಟ್ಟಣದ ಬೀರೇಶ್ವರ ಕಾಲೋನಿಯಲ್ಲಿ ಈ ಕೃತ್ಯ ನಡೆದಿದೆ. ಮುಂಜಾನೆ ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Prajwal Revanna Case: ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

VISTARANEWS.COM


on

Prajwal revanna case
Koo

ಬೆಂಗಳೂರು: ಇಂದು ಹಾಸನ (Hassan Ex MP) ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ (Prajwal Revanna Case) ಅವರ ವಿರುದ್ಧದ ಒಂದು ಅತ್ಯಾಚಾರ ಪ್ರಕರಣದಲ್ಲಿ (physical Abuse) ಪೊಲೀಸ್‌ ಕಸ್ಟಡಿ (Police Custody) ಮುಕ್ತಾಯವಾಗುತ್ತಿದ್ದು, ಕೋರ್ಟ್‌ಗೆ (court) ಹಾಜರುಪಡಿಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ (SIT) ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಎರಡೆರಡು ಬಾರಿ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದಾರೆ. ಕೋರ್ಟ್‌ಗೆ ಮನವರಿಕೆ ಮಾಡಿ, ಪ್ರಜ್ವಲ್ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣವಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಎಸ್ಐಟಿ ಹಾಜರುಪಡಿಸಲಿದೆ. ಸಿಐಡಿಯಲ್ಲಿ ದಾಖಲಾಗಿರುವ ರೇಪ್ ಕೇಸಿನಲ್ಲಿ ಇನ್ನಷ್ಟು ತನಿಖೆ ಅಗತ್ಯವಾಗಿರುವ ಕಾರಣ ಮತ್ತೆ ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರೇವಣ್ಣ ಕಸ್ಟಡಿಗೆ ಪಡೆಯಲು ಎಸ್‌ಐಟಿ ಕೋರ್ಟ್‌ಗೆ ಮನವಿ ಮಾಡಲಿದೆ.

ಪ್ರತಿಯೊಂದು ಪ್ರಕರಣದಲ್ಲಿಯೂ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಒಟ್ಟು ಮೂರು ಪ್ರಕರಣಗಳಿದ್ದು, ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್ಐಟಿ ಹರಸಾಹಸ ಪಡುತ್ತಿದೆಯಾದರೂ, ಅದು ಸಾಧ್ಯವಾಗಿಲ್ಲ. ಎಸ್‌ಐಟಿ ವಶದಲ್ಲಿರುವ ಅಶ್ಲೀಲ ವಿಡಿಯೋಗಳಲ್ಲಿ ಪ್ರಜ್ವಲ್‌ ಮುಖ ಕಾಣಿಸುತ್ತಿಲ್ಲ. ಹಲವಾರು ಮಹಿಳೆಯರ ಜೊತೆಗಿನ ಲೈಂಗಿಕ ಕ್ರಿಯೆಗಳು ದಾಖಲಾಗಿವೆಯಾದರೂ, ಅವರಲ್ಲಿ ಯಾರೂ ದೂರು ನೀಡಿಲ್ಲ. ಪ್ರಜ್ವಲ್‌ ಮನೆಯಲ್ಲಿ ನಡೆದ ಮಹಜರು ವೇಲೆ ವಶಪಡಿಸಿಕೊಳ್ಳಲಾದ ವಸ್ತುಗಳಲ್ಲಿ ಸಂಸದರ ವಿರುದ್ಧ ನಿಲ್ಲಬಹುದಾದ ಮಹತ್ವದ ಸಾಕ್ಷಿಗಳು ದೊರೆತಿಲ್ಲ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆದಿದ್ದಾರೆ. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading
Advertisement
bhavani revanna bail
ಕ್ರೈಂ7 mins ago

Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Viral News
Latest13 mins ago

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Drowned in water
ಯಾದಗಿರಿ28 mins ago

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

WI vs AFG
ಕ್ರೀಡೆ28 mins ago

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

NEET UG 2024
Latest51 mins ago

NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

Sidhartha Mallya
ಸಿನಿಮಾ56 mins ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ1 hour ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

How Much Salt Is Too Much
ಆರೋಗ್ಯ1 hour ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ2 hours ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ2 hours ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು23 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು24 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌