Dina Bhavishya: ಇಂದು ಈ ರಾಶಿಯವರ ಜೀವನದಲ್ಲಿ ಹೊಸ ತಿರುವು ಸಿಗಲಿದೆ - Vistara News

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯವರ ಜೀವನದಲ್ಲಿ ಹೊಸ ತಿರುವು ಸಿಗಲಿದೆ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your horoscope today 12 january 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶುಕ್ರವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮಿಥುನ ರಾಶಿಯವರು ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕನ್ಯಾ ರಾಶಿಯವರು ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅದರಿಂದ ದೂರ ಇರಿ. ಧನಸ್ಸು ರಾಶಿಯವರು ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಆದರೆ ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಪಾಡ್ಯ 14:22 ವಾರ: ಶುಕ್ರವಾರ
ನಕ್ಷತ್ರ: ಉತ್ತರಾಷಾಡ 15:17 ಯೋಗ: ಹರ್ಷಣ 14:03
ಕರಣ: ಭವ 14:22 ಅಮೃತ ಕಾಲ: ಬೆಳಗ್ಗೆ 09:32 ರಿಂದ 10:58ರವರೆಗೆ
ದಿನದ ವಿಶೇಷ: ಸ್ವಾಮಿ ವಿವೇಕಾನಂದರ ಜನ್ಮದಿನ (ಯುವದಿನ), ಚಂದ್ರದರ್ಶನ

ಸೂರ್ಯೋದಯ : 06:45  ಸೂರ್ಯಾಸ್ತ : 06:11

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಕಾಳಜಿ ವಹಿಸಿ.ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅದರಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದ ಕಾರ್ಯವು ಆಯಾಸವನ್ನುಂಟು ಮಾಡಲಿದೆ. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನವು ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜೀವನದಲ್ಲಿ ಭರವಸೆ ಮೂಡಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯಲ್ಲಿ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬರಲಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

CM Siddaramaiah: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಸಿದರು. ಕಾರ್ಯಾದೇಶ ಸಿಕ್ಕಿರುವ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸಿಎಂ ಸೂಚಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಯಿತು. ಈ ವೇಳೆ ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಾರ್ಯದರ್ಶಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.

ಸಭೆಯ ಮುಖ್ಯಾಂಶಗಳು

  1. ಕೆಎಂಇಆರ್‌ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ.
  2. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ.
  3. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ.
  4. ಈ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
  5. ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಸೂಚಿಸಿದರು.
  6. ವರ್ಷ ಕಳೆದರೂ DPR ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ. ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆಗಿ ಎಚ್ಚರಿಸಿದರು.
  7. ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ mobilization advance ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟ ಪಡಿಸಲು ಸೂಚಿಸಿದರು.
  8. ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ. , ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ. , ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ.
  9. ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಸೂಚಿಸಿದರು.
  10. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ಮಾಡುವಂತೆ ಸಿಎಂ ಸೂಚಿಸಿದರು.
  11. ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚನೆ.
  12. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡುವಂತೆ ಸೂಚನೆ.
  13. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸುವಂತೆ ಸೂಚಿಸಿದರು.
  14. ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು ಎಂದರು.
  15. ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ ಇದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

ಸಿಎಂ ಭೇಟಿಯಾದ ಹಾಪ್‌ಕಾಮ್ಸ್ ಪದಾಧಿಕಾರಿಗಳು

ಬೆಂಗಳೂರಿನ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್‌ಕಾಮ್ಸ್) ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ನಿರ್ದೇಶಕ ಮಂಡಳಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಶಾಸಕರಾದ ಕೊತ್ತೂರು ಮಂಜುನಾಥ್, ಹಾಪ್‌ಕಾಮ್ಸ್‌ ಅಧ್ಯಕ್ಷ ಗೋಪಾಲಕೃಷ್ಣ, ವ್ಯವಸ್ಥಾಪಕ ನಿರ್ದೇಶಕ ಉಮೇಶ್‌ ಮಿರ್ಜಿ ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Continue Reading

ಉದ್ಯೋಗ

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

Job Alert: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದುಕೊಂಡಿರುವವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಕೆ ಹೇಗೆ, ಪರೀಕ್ಷೆ ಯಾವ ರೀತಿಯಲ್ಲಿ ಇರುತ್ತದೆ ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಂದ ಹಾಗೆ, ಅರ್ಜಿ ಸಲ್ಲಿಸಲು ಜೂನ್‌ 27 ಕೊನೇ ದಿನ.

VISTARANEWS.COM


on

Job Alert
Koo

-ಆರ್.ಕೆ. ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಫ್ಟ್‌ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು

ಬ್ಯಾಂಕ್ ಸಿಬ್ಬಂದಿ ನೇಮಕಾತಿ (Job Alert) ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.  ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂ ಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 27 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ.8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET):

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ)

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.

ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/_ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

Continue Reading

ಕರ್ನಾಟಕ

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Liquor Price Karnataka: ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

VISTARANEWS.COM


on

Liquor Price karnataka
Koo

ಬೆಂಗಳೂರು: ಜುಲೈ 1ರಿಂದ ಮದ್ಯದ ಹೊಸ ದರಗಳನ್ನು (Liquor Price Karnataka) ಜಾರಿ ಮಾಡಲು ರಾಜ್ಯದ ಸಿಎಂ ಸಿದ್ದರಾಮಯ್ಯ (CM Siddaramaiah) ಸರಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಗೆ (Guarantee schemes) ಹಣ ಹೊಂಚಲು ಸಿಕ್ಕ ಸಿಕ್ಕಲ್ಲೆಲ್ಲಾ ದರ ಏರಿಕೆ (Price hike) ಮಾಡುತ್ತಿರುವ ಸರಕಾರ, ಇದೀಗ ಬಡವರ ಎಣ್ಣೆ ರೇಟ್‌ ಏರಿಸಲು ಯೋಚಿಸಿದೆ. ಅದೇ ಸಮಯಕ್ಕೆ, ಶ್ರೀಮಂತರು ಸೇವಿಸುವ ಪ್ರೀಮಿಯಂ ಬ್ರಾಂಡ್‌ಗಳ (Premium liquor) ಮದ್ಯಗಳ ಬೆಲೆ ಇಳಿಕೆಗೂ ಚಿಂತಿಸುತ್ತಿದೆ.

ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

ಹಾಲಿ ಒಟಿ ವಿಸ್ಕಿ 180 mlಗೆ 123 ರೂಪಾಯಿ ಇದೆ. ಜುಲೈ 1ರಿಂದ ಒಟಿ ಬೆಲೆ 130 ರೂಪಾಯಿ ನಿಗದಿಯಾಗಲಿದೆ. 8 ಪಿಎಂ ವಿಸ್ಕಿ 123 ರೂ. ಯಿಂದ 130ಕ್ಕೇರಿಕೆ ಸಾಧ್ಯತೆ ಇದೆ. ಚಾಯ್ಸ್ 80 ರೂಪಾಯಿ ಇದ್ದು ಜುಲೈನಿಂದ 83 ರೂಪಾಯಿ, ಹೈವರ್ಡ್ಸ್ 80 ರೂಪಾಯಿಯಿಂದ 83 ರೂಪಾಯಿ, ಬಿಪಿ ವಿಸ್ಕಿ ದರ ಹಾಲಿ 159 ರೂಪಾಯಿ ಇದ್ದು, ಜುಲೈನಿಂದ 154 ರೂಪಾಯಿ ಆಗುವ ಸಾಧ್ಯತೆ ಇದೆ.

ಇದೇ ವೇಳೆಗೆ ಬೆಲೆಬಾಳುವ ಪ್ರೀಮಿಯಂ ಮದ್ಯಗಳ ದರಗಳಲ್ಲಿ ಇಳಿಕೆಯಾಗುತ್ತಿದೆ. ಕ್ವಾರ್ಟರ್‌ಗೆ 300 ರೂಪಾಯಿ ಮೇಲಿರುವ ಬ್ರ್ಯಾಂಡ್‌ಗಳ ದರ 60ರಿಂದ 100 ರೂಪಾಯಿ ಇಳಿಕೆಯಾಗಲಿದೆ. 383 ರೂಪಾಯಿ ಬೆಲೆ ಬಾಳುವ ಮದ್ಯ 295 ರೂ.ಗೆ, 680 ರೂ. ಬೆಲೆ ಬಾಳುವ ಮದ್ಯ 595 ರೂಪಾಯಿಗೆ ಇಳಿಕೆ ಆಗುವ ಸಾಧ್ಯತೆ ಇದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೀಡೆ

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

IND vs ENG Semi Final: ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ.

VISTARANEWS.COM


on

Koo

ಟರೂಬ/ಪ್ರೊವಿಡೆನ್ಸ್‌: ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಾರತಕ್ಕೆ ಕೊಹ್ಲಿಯದ್ದೇ ಚಿಂತೆ


ಪ್ರತಿ ಐಸಿಸಿ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿಯ ಬ್ಯಾಟ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸದ್ದು ಮಾಡುತ್ತಿಲ್ಲ. ಇದು ಭಾರತ ತಂಡಕ್ಕೆ ದೊಡ್ಡ ಚಿಂತೆ ಉಂಟು ಮಾಡಿದೆ. ಆಡಿದ 7 ಪಂದ್ಯಗಳಲ್ಲಿ 2 ಶೂನ್ಯ ಸುತ್ತಿದ್ದಾರೆ. ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ದಾಟಿದ್ದಾರೆ. ಹೀಗಾಗಿ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಸಿಡಿದು ನಿಲ್ಲಬೇಕಾದುದ ಅನಿವಾರ್ಯತೆ ಇದೆ. ಕೊಹ್ಲಿ ಜತೆಗೆ ಶಿವಂ ದುಬೆ ಕೂಡ ಸಿಡಿದು ನಿಲ್ಲಬೇಕಿದೆ. ಐಪಿಎಲ್​ನಲ್ಲಿ ತೋರಿದ ಬ್ಯಾಟಿಂಗ್​ ಆರ್ಭಟವನ್ನು ದುಬೆ ಈ ಟೂರ್ನಿಯಲ್ಲಿ ಇದುವರೆಗೆ ತೋರಿಸಿಲ್ಲ. ಎಲ್ಲ ಪಂದ್ಯಗಳಲ್ಲಿಯೂ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆ ಉಂಟುಮಾಡುತ್ತಿದ್ದಾರೆ.

ಉಪನಾಯಕ ಹಾರ್ದಿಕ್​ ಪಾಂಡ್ಯ ಅವರು ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದರು. ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಆದರೆ, ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ನೆರವಾಗುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂದು ಪಾಂಡ್ಯ ಬೇಡ ಎಂದವರು ಇಂದು ಪಾಂಡ್ಯ ಇಲ್ಲದೇ ಇದ್ದರೆ ಗೆಲುವು ಕಷ್ಟ ಎನ್ನುತ್ತಿದ್ದಾರೆ. ಕಳೆದ ಆಸೀಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ನಂಬಿಕೆ ಇರಿಸಿದೆ.

ಇದನ್ನೂ ಓದಿ IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

ಇಂಗ್ಲೆಂಡ್​ ಕೂಡ ಬಲಿಷ್ಠ

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

ಸೇಡಿನ ಪಂದ್ಯ

2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

Continue Reading
Advertisement
Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ4 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

CM Siddaramaiah
ಪ್ರಮುಖ ಸುದ್ದಿ5 mins ago

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

Job Alert
ಉದ್ಯೋಗ7 mins ago

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

Parliament Sessions
ದೇಶ17 mins ago

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Pavithra Gowda lipstick case Notice to PSI
ಕ್ರೈಂ33 mins ago

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

PGCET 2024
ಕರ್ನಾಟಕ43 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ45 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ1 hour ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್1 hour ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ1 hour ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌