Shivaram Karanth Layout: ಜ. 25ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ: ಡಿಕೆಶಿ - Vistara News

ಕರ್ನಾಟಕ

Shivaram Karanth Layout: ಜ. 25ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ: ಡಿಕೆಶಿ

Shivaram Karanth Layout: ಶಿವರಾಮ ಕಾರಂತ ಬಡಾವಣೆಯಲ್ಲಿ ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Dk Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜನವರಿ 25ರಿಂದ ಶಿವರಾಮ ಕಾರಂತ ಬಡಾವಣೆ (Shivaram Karanth Layout) ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು. ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಿಡಿಎ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ ಕಾರಂತ ಬಡಾವಣೆ ನಿವೇಶನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು. ಉಳಿದಂತೆ ಬೆಂಗಳೂರಿನ ವಿವಿಧ ಬಿಡಿಎ ಕಚೇರಿಗಳಲ್ಲಿ ಆಪ್‌ಲೈನ್ ಮೂಲಕ ಅರ್ಜಿಗಳ ಸ್ವೀಕಾರ ಮಾಡಲಾಗುವುದು ಎಂದು ಹೇಳಿದರು.

ಅರ್ಜಿ ಹಾಕಿದ ನಂತರ ಅರ್ಜಿದಾರರು ಒಂದು ತಿಂಗಳಲ್ಲಿ ನಿವೇಶನ ಒಟ್ಟು ಮೊತ್ತದ ಶೇ.12.5 ಷ್ಟು ಆರಂಭಿಕ ಠೇವಣಿ ಕಟ್ಟಬೇಕು. ಪರಿಶಿಷ್ಟರು ಶೇ. 5 ರಷ್ಟು ಠೇವಣಿ ಕಟ್ಟಬೇಕು. ಬಹಳ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಯಾರು ಬೇಕಾದರೂ ಮಾಹಿತಿ ಪಡೆಯಲು ಹಾಗೂ ನೋಡಲು ಅವಕಾಶ ಕಲ್ಪಿಸಲಾಗುವುದು. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ.

ಇದನ್ನೂ ಓದಿ | Sangolli Rayanna: ತಾಯ್ನಾಡಿಗಾಗಿ ಸಂಗೊಳ್ಳಿ ರಾಯಣ್ಣನ ಹೋರಾಟ ನಮಗೆಲ್ಲಾ ಮಾದರಿ: ಸಿದ್ದರಾಮಯ್ಯ

ಶಿವರಾಮ ಕಾರಂತ ಬಡಾವಣೆಯಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣಕ್ಕೆ 45 ಅಡಿ ರಸ್ತೆ ಇರುವ ಕಡೆ 25-30 ಎಕರೆ ಜಾಗ ಗುರುತಿಸಲಾಗಿದೆ. ಕಂಠೀರವ ಕ್ರೀಡಾಂಗಣ ಮಾದರಿಯಲ್ಲಿ ಬೆಂಗಳೂರು ಉತ್ತರ ಭಾಗದಲ್ಲಿ ಮತ್ತೊಂದು ಕ್ರೀಡಾಂಗಣ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಸಿಎ ನಿವೇಶನ, ಪಾರ್ಕ್ ಎಲ್ಲವೂ ಇದೆ. ಇಲ್ಲಿ ಶೇ.42 ರಷ್ಟು ಜಾಗದಲ್ಲಿ ನಿವೇಶನ ಮಾಡಲಾಗಿದ್ದು, ಉಳಿದ ಜಾಗವನ್ನು ಅಗಲವಾದ ರಸ್ತೆ ಹಾಗೂ ಇತರೆ ಸೌಕರ್ಯಕ್ಕೆ ಬಳಸಲಾಗಿದೆ ಎಂದು ಮಾಹಿತಿ ನೀಡಿದರು.

ನಾವು ರೈತರಿಗೆ ಈಗ ನಿವೇಶನಗಳನ್ನು ಹಂಚಿಕೆ ಮಾಡಬೇಕಾದ ಹಿನ್ನೆಲೆಯಲ್ಲಿ ಈ ನಿವೇಶನಗಳ ಬೆಲೆ ದುಬಾರಿಯಾಗಿದೆ. ಈ ಮುನ್ನ ಅವರಿಗೆ ಹಣಕಾಸಿನ ಪರಿಹಾರ ನೀಡಿ ಭೂಮಿ ವಶಪಡಿಸಿಕೊಳ್ಳಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ನಿವೇಶನವನ್ನು ನೀಡುತ್ತಿದ್ದೇವೆ. ಈ ಬಡಾವಣೆಯಲ್ಲಿ ಪ್ರತಿ ಚದರ ಅಡಿಗೆ 4900 ರೂ. ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಭೂಮಿ ಕಳೆದುಕೊಂಡ ರೈತರಿಗೆ ಮೊದಲ ಆದ್ಯತೆ

ಶಿವರಾಮ ಕಾರಂತ ಲೇಔಟ್ ಸಂಬಂಧ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ 3069 ಎಕರೆಯನ್ನು ನಮ್ಮ ವಶಕ್ಕೆ ತೆಗೆದುಕೊಳ್ಳಲಾಗಿದೆ. 17 ಗ್ರಾಮದಲ್ಲಿ ಒಟ್ಟು 18 ಸಾವಿರ ಮಂದಿ ಭೂಮಿ ಕಳೆದುಕೊಂಡಿದ್ದು, ಅವರಿಗೆ ಮೊದಲ ಆದ್ಯತೆಯಲ್ಲಿ ಶೇ. 40 ರಷ್ಟು ನಿವೇಶನಗಳನ್ನು ನೀಡಲಾಗುವುದು. ಅವರದೇ ಜಮೀನಿನಲ್ಲಿ ನಿವೇಶನ ನೀಡಲಾಗುವುದು. ಸಾಧ್ಯವಾಗದಿದ್ದರೆ ಅವರದೇ ಊರಿನಲ್ಲಿ ಸೈಟ್ ನೀಡಲಾಗುವುದು. ಭೂ ಸಂತ್ರಸ್ತರು ಎಲ್ಲಾ ದಿಕ್ಕಿನ ನಿವೇಶನಗಳನ್ನು ಪಡೆಯಲು ಸಿದ್ಧರಿರಬೇಕು. ನಮಗೆ ನಿರ್ದಿಷ್ಟ ದಿಕ್ಕಿನ ನಿವೇಶನ ಬೇಕು ಎಂದು ಪಟ್ಟು ಹಿಡಿಯುವಂತಿಲ್ಲ ಎಂದು ಡಿಸಿಎಂ ತಿಳಿಸಿದರು.

ಈ ಬಡವಾಣೆಯಲ್ಲಿ 9500 ನಿವೇಶನಗಳನ್ನು ಭೂಮಿ ಕಳೆದುಕೊಂಡವರಿಗೆ ನೀಡಬೇಕಾಗಿದೆ. 4750 ಕ್ಕೂ ಹೆಚ್ಚು ಕಾರ್ನರ್ ನಿವೇಶನಗಳನ್ನು ಕಾನೂನಿನ ಪ್ರಕಾರದಂತೆ ಇ-ಹರಾಜು ಹಾಕಲಾಗುವುದು. ಉಳಿದ 10 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಜನರಿಗೆ ಹಂಚಿಕೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆಗೆ 9 ಬ್ಯಾಂಕುಗಳನ್ನು ಗುರುತಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Vistara Top 10 News : ಕಾಂಗ್ರೆಸ್‌ನಲ್ಲಿ ಯತೀಂದ್ರ ಹೇಳಿಕೆ ತಲ್ಲಣ, ಮಂದಿರ ಪ್ರವೇಶಿಸಿದ ರಾಮಲಲ್ಲಾ!

ಪಿಆರ್‌ಆರ್ ರಸ್ತೆ ಈಗ ಬೆಂಗಳೂರು ಬಿಸಿನೆಸ್ ಕಾರಿಡಾರ್

ಬೆಂಗಳೂರಿನ ಉತ್ತರದಲ್ಲಿ ಫೆರಿಫೆರಲ್ ರಿಂಗ್ ರಸ್ತೆ ಮಾಡಲು ತೀರ್ಮಾನಿಸಿದ್ದು, ಬಹಳ ಒತ್ತಡವಿದ್ದರೂ ಇದರ ಡಿನೋಟಿಫಿಕೇಶನ್ ಮಾಡುವುದಿಲ್ಲ. ಇದಕ್ಕೆ ಈಗ ಬೆಂಗಳೂರು ಬಿಸಿನೆಸ್ ಕಾರಿಡಾರ್ (BBC)ಎಂದು ನಾಮಕರಣ ಮಾಡಿದ್ದೇವೆ. ಮುಂದಿನ ಒಂದು ವಾರದಲ್ಲಿ ಈ ರಸ್ತೆಯ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಯಾರು ಬೇಕಾದರೂ ಭಾಗವಹಿಸಬಹುದು. ಭೂಮಿ ಕಳೆದುಕೊಳ್ಳುವ ರೈತರಿಗೆ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಡಿನೋಟಿಫಿಕೇಶನ್ ಮಾಡುವುದಿಲ್ಲ

ಬಿಬಿಸಿ ಸೇರಿದಂತೆ ಯಾವುದೇ ಯೋಜನೆಗೆ ಒಮ್ಮೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡರೆ. ನಂತರ ಅದನ್ನು ಡಿನೋಟಿಫಿಕೇಶನ್ ಮಾಡುವುದಿಲ್ಲ ಎಂಬ ತೀರ್ಮಾನ ಮಾಡಲಾಗಿದೆ ಎಂದ ಅವರು, ಕೆಂಪೇಗೌಡ ಬಡಾವಣೆಯ ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಹೊಸ ಲೂಪ್ ರಸ್ತೆ ಸೇರಿಸಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ. 3278 ವಸತಿ ಮನೆಗಳನ್ನು ಆದಷ್ಟು ಬೇಗ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಪ್ರಶ್ನೋತ್ತರ

ಬಿಬಿಸಿ ರಸ್ತೆಗೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡುವ ಬಗ್ಗೆ ಬಹಳ ಗೊಂದಲವಾಗುತ್ತಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೀರಾ ಎಂದು ಕೇಳಿದಾಗ, “ರೈತರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂದಿದ್ದೇವೆ. ಅವರನ್ನು ಕರೆಸಿ ಮಾತನಾಡಿದ್ದೇವೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಹೊಸದಾಗಿ ಹಣ ನೀಡುವಂತಿಲ್ಲ. ಹೀಗಾಗಿ ರೈತರಿಗೆ ಹೇಗೆ ಸಹಾಯ ಮಾಡಬಹುದು ಎಂಬುದನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಕೆಶಿ ತಿಳಿಸಿದರು.

ಬಿಡಿಎ ಮುಖ್ಯಸ್ಥ ಸ್ಥಾನಕ್ಕೆ ಎನ್.ಎ ಹ್ಯಾರಿಸ್ ಅವರ ಹೆಸರು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, “ನಿಗಮ, ಮಂಡಳಿ ಪಟ್ಟಿಗೆ ಮುಖ್ಯಮಂತ್ರಿಗಳು ಸಹಿ ಹಾಕಬೇಕಿದೆ. ಬಿಡಿಎ ಮುಖ್ಯಸ್ಥರು ಹಾಗೂ ಆಯುಕ್ತರ ಕುರ್ಚಿಯಲ್ಲಿ ಇವರು ಕೂತಿದ್ದಾರೆ” ಎಂದು ರಾಕೇಶ್ ಸಿಂಗ್ ಅವರ ಕಡೆ ತೋರಿಸಿದರು.

ಕೆಂಪೇಗೌಡ ಲೇಔಟ್ ಜಾಗದ ಕೋರ್ಟ್ ಕೇಸ್ ಬಗ್ಗೆ ಕೇಳಿದಾಗ, “ಈ ಪ್ರಕರಣಗಳಲ್ಲಿ ಯಾರು ಸರ್ಕಾರದ ಪರ ಕೆಲಸ ಮಾಡದ ವಕೀಲರನ್ನು ತೆಗೆದುಹಾಕಿ ಹೊಸಬರನ್ನು ನೇಮಕ ಮಾಡಲಾಗುವುದು” ಎಂದು ತಿಳಿಸಿದರು.

ಪರ್ಯಾಯ ನಿವೇಶನದ ಬಗ್ಗೆ ಕೇಳಿದಾಗ, ನಾನು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಜನರನ್ನು ಭೇಟಿ ಮಾಡಿದಾಗ ಶೇ. 25 ರಷ್ಟು ಜನ ಪರ್ಯಾಯ ನಿವೇಶನಕ್ಕೆ ಅರ್ಜಿ ಹಾಕಿದ್ದಾರೆ. ಅವುಗಳನ್ನು ನೋಂದಣಿ ಮಾಡಿಸಿದ್ದು, ಕಾನೂನು ಪ್ರಕಾರವಾಗಿ ಯಾವುದನ್ನು ಬಗೆಹರಿಸಬಹುದೋ ಅದನ್ನು ಬಗೆಹರಿಸಲು ಸೂಚಿಸಲಾಗುವುದು” ಎಂದರು.

ಜಯನಗರ, ಮಲ್ಲೇಶ್ವರಂ ಬಿಟ್ಟರೆ ಶಿವರಾಮ ಕಾರಂತ ಉತ್ತಮ ಬಡಾವಣೆ

ಶಿವರಾಮ ಕಾರಂತ ಬಡಾವಣೆ ನಿವೇಶನ ದರ ಸ್ವಲ್ಪ ದುಬಾರಿಯಾಯಿತಲ್ಲವೇ ಎಂದು ಕೇಳಿದಾಗ, “ನಾವು ಲಾಭ ಮಾಡಲು ಹೊರಟಿಲ್ಲ. ಖಾಸಗಿಯವರು ಲೇಔಟ್ ಮಾಡಿದರೆ 55% ನಿವೇಶನಕ್ಕೆ ಸಿಗುತ್ತದೆ. ನಾವು ಮಾಡಿರುವ ಲೇಔಟ್ ನಲ್ಲಿ 42% ಮಾತ್ರ ನಿವೇಶನಗಳಾಗಿವೆ. ನಾವು ದೊಡ್ಡ ರಸ್ತೆಗಳು, ದೊಡ್ಡ ಪವರ್ ಸ್ಟೇಷನ್, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ನನ್ನ ಅನುಭವದಲ್ಲಿ ಜಯನಗರ, ಮಲ್ಲೇಶ್ವರಂ ನಂತರ ಅತಿ ಸುಸಜ್ಜಿತ ಹಾಗೂ ಅತ್ಯುತ್ತಮ ಯೋಜಿತ ಲೇಔಟ್ ಎಂದರೆ ಅದು ಶಿವರಾಮ್ ಕಾರಂತ ಲೇಔಟ್. ಈ ಭಾಗದ ರೈತರು ಪುಣ್ಯವಂತರು” ಎಂದರು.

ಪಿಪಿಪಿ ಮಾದರಿಯಲ್ಲಿ ಬಿಡಿಎ ಕಾಂಪ್ಲೆಕ್ಸ್

ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಪಿಪಿಪಿ ಮಾದರಿಯಲ್ಲಿ ಮಾಡುವ ಪ್ರಸ್ತಾಪದ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರದಲ್ಲೇ ಈ ಪ್ರಸ್ತಾವನೆ ಇತ್ತು. ಯಡಿಯೂರಪ್ಪನವರ ಸರ್ಕಾರದಲ್ಲಿ ಬಾಕಿ ಉಳಿದಿತ್ತು. ನಾನು ಈ ಫೈಲ್‌ಗಳನ್ನು ಕ್ಲಿಯರ್ ಮಾಡುತ್ತಿದ್ದೇನೆ. ಒಂದೊಂದು ದಿನ ತಡವಾದರೂ ಸರ್ಕಾರಕ್ಕೆ ನಷ್ಟವಾಗುತ್ತದೆ. ಎಲ್ಲವನ್ನು ಕ್ಲಿಯರ್ ಮಾಡಿ ಕಟ್ಟಡ ತೆರವುಗೊಳಿಸಿ ಕೆಲಸ ಶುರು ಮಾಡಿ ಸರ್ಕಾರಕ್ಕೆ ಏನು ನೀಡಬೇಕೋ ಅದನ್ನು ನೀಡಲು ತಿಳಿಸಿದ್ದೇನೆ. ಇದರ ಅನುಪಾತವನ್ನು ನಾವು ಬದಲಿಸಿಲ್ಲ. ಈ ಹಿಂದೆ ಏನಿತ್ತೋ ಅದನ್ನೇ ಮುಂದುವರಿಸಲಾಗಿದೆ” ಎಂದು ತಿಳಿಸಿದರು.

ಹೊಸ ಲೇಔಟ್ ಮಾಡುತ್ತೀರಾ ಎಂದು ಕೇಳಿದಾಗ, “ಹೊಸ ಲೇಔಟ್‌ಗಳನ್ನು ಮಾಡಬೇಕು, ಪ್ಲಾನ್ ಮಾಡಬೇಕು, ಜಾಗಗಳನ್ನು ಗುರುತಿಸಿ ಭೂಸ್ವಾಧೀನ ಮಾಡಬೇಕು. ಇದಕ್ಕಾಗಿ ಜಾಗ ಗುರುತಿಸುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ | Election Commission : ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಚುನಾವಣಾ ಆಯೋಗದ ರಾಷ್ಟ್ರ ಪ್ರಶಸ್ತಿ

ಬಿಡಿಎದಲ್ಲಿ ಹಣವಿಲ್ಲ ಎನ್ನಲಾಗುತ್ತಿದೆ ಎಂದು ಕೇಳಿದಾಗ, “ಬಿಡಿಎ ಲಾಭದಾಯಕ ಉದ್ಯಮ ಸಂಸ್ಥೆಯಲ್ಲ. ಬೇರೆಯವರು ಲೇಔಟ್ ಮಾಡುವ ಮುನ್ನ ಯೋಜನೆಗೆ ಅನುಮತಿ ಸಿಕ್ಕ ತಕ್ಷಣವೇ ಗ್ರಾಹಕರಿಂದ 10%- 20% ಹಣವನ್ನು ಪಡೆಯುತ್ತಾರೆ. ಇವರು ಲೇಔಟ್ ನಂತರ ಹಣ ಪಡೆಯುತ್ತಿದ್ದಾರೆ. ಬಿಡಿಎ ಎಂದಿಗೂ ರಿಯಲ್ ಎಸ್ಟೇಟ್ ಸಂಸ್ಥೆಯಾಗಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಲು ಸಜ್ಜಾದಂತಿದೆ. ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿದ್ದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಮೂರನೇ ಬಾರಿ ಬೆಲೆಯೇರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಅಬಕಾರಿ ಇಲಾಖೆಯು ವರ್ಷದಲ್ಲಿ ಒಮ್ಮೆ ಬೆಲೆ ಪರಿಷ್ಕರಣೆ ಮಾಡುತ್ತದೆ. ಆದರೆ, ಸಂಪನ್ಮೂಲ ಕ್ರೋಡೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Alcohal
Koo

ಬೆಂಗಳೂರು: ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದು, ಹಲವು ಉಚಿತ ಕೊಡುಗೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು (Karnataka Government), ವರ್ಷಕ್ಕೆ ಇವುಗಳಿಗೆಂದೇ ಸುಮಾರು 59 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ಸಂಪನ್ಮೂಲ ಕ್ರೋಡೀಕರಿಸಲು ರಾಜ್ಯ ಸರ್ಕಾರವು ಹಲವು ರೀತಿಯ ಬೆಲೆಯೇರಿಕೆಯ ಅಸ್ತ್ರ ಬಳಸುತ್ತಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರವು ಈಗ ವರ್ಷದೊಳಗೇ ಮೂರನೇ ಬಾರಿ ಬೆಲೆಯೇರಿಕೆ (Liquor Price Hike ) ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಮದ್ಯಪ್ರಿಯರಿಗೆ ಶಾಕಿಂಗ್‌ ಎನಿಸಿದೆ.

ಹೌದು, ಅಬಕಾರಿ ಇಲಾಖೆಯು ಮದ್ಯದ ಬೆಲೆಯೇರಿಕೆ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಹಾಗೊಂದು ವೇಳೆ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡಿದರೆ ಓಲ್ಡ್‌ ಮಾಂಕ್‌, ಎಂಸಿ ರಮ್‌, ಬಿಪಿ, ಒಟಿ ಹಾಗೂ 8 ಪಿಎಂ ಬ್ರ್ಯಾಂಡ್‌ನ ಮದ್ಯದ ಬಾಟಲಿಗಳ ಬೆಲೆಯೇರಿಕೆ ಆಗಲಿದೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಡೀಕರಣ ಮಾಡಲು ಮದ್ಯದ ಬೆಲೆಯೇರಿಕೆ ಪ್ರಮುಖ ಅಸ್ತ್ರವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಲೆಯೇರಿಕೆ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Constables

2023ರ ಜೂನ್‌ ತಿಂಗಳಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ 10 ರೂ.ನಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿತ್ತು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬಡ್ ವೈಸರ್ ಬಿಯರ್ ದರ 198 ರೂ.ನಿಂದ 220 ರೂ.ಗೆ ಏರಿಕೆ ಮಾಡಲಾಗಿತ್ತು. ಕಿಂಗ್‌ಫಿಶರ್ ಬಿಯರ್ ದರವನ್ನು 160 ರೂ.ನಿಂದ 170 ರೂ.ಗೆ ಏರಿಕೆ ಮಾಡಲಾಗಿತ್ತು. ಯುಬಿ ಪ್ರೀಮಿಯಂ ದರವನ್ನು 125 ರೂ.ನಿಂದ 130-135 ರೂ.ಗೆ ಏರಿಕೆಸಲಾಗಿತ್ತು.

ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಬಿಯರ್‌ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ 2024ರ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಅದರಂತೆ, ಒಂದು ಬಿಯರ್‌ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಬೆಲೆಯೇರಿಕೆ ಕುರಿತು ಘೋಷಣೆ ಮಾಡಿದ್ದರು. ಈಗ ಮೂರನೇ ಬಾರಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 500 ಕೋಟಿ ರೂ. ಸೇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಕರ್ನಾಟಕ

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Koppala News: ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ 6 ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

disqualification for hanawala Gram Panchayat Vice President and Cancellation of membership ordered
Koo

ಗಂಗಾವತಿ: ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ ಸದಸ್ಯತ್ವ ರದ್ದು ಮಾಡಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ (Koppala News) ಹೊರಡಿಸಿದ್ದಾರೆ.

ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರನ್ನು ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ರದ್ದು ಮಾಡಿ, ಮುಂದಿನ ಆರು ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

ಸರ್ಕಾರದ ಮತ್ತು ಇಲಾಖೆಯ ನಿಯಮಗಳನ್ನು ಮೀರಿ ಹಣಕಾಸು ಅವ್ಯವಹಾರಕ್ಕೆ ಸಾಥ್ ನೀಡಿರುವ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗುತ್ತಿರುವ ನಿರ್ಗಮಿತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು. ಮಲ್ಲಿಕಾರ್ಜುನ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವ ಇಲಾಖೆ, ದುರುಪಯೋಗವಾಗಿರುವ ಹಣದ ಅರ್ಧ ಮೊತ್ತ ವಸೂಲಿ ಮಾಡುವಂತೆ ಸೂಚಿಸಲಾಗಿದೆ.

ಹಣವಾಳ ಗ್ರಾಮ ಪಂಚಾಯಿತಿಯ ಹಾಲಿ ಅಧ್ಯಕ್ಷೆ ಯಂಕಮ್ಮ ಈರಣ್ಣ ಕುರಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ವಿಚಾರಣೆ ಕೈಗೊಂಡ ಇಲಾಖೆಯ ಅಧಿಕಾರಿಗಳಿಗೆ ಹಣಕಾಸು ಅಕ್ರಮ ನಡೆದಿರುವುದು ಗೋಚರಿಸಿದ ಹಿನ್ನೆಲೆಯಲ್ಲಿ ಪಿಡಿಒ ಯು. ಮಲ್ಲಿಕಾರ್ಜುನ ಮತ್ತು ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆ ಇದೀಗ ಕ್ರಮವಾಗಿದೆ.

ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ 2021-22 ಹಾಗೂ 2022-23ನೇ ಸಾಲಿನಲ್ಲಿ ಖಾಸಗಿ ಸಂಸ್ಥೆಗಳ ಹೆಸರು ಸೂಚಿಸಿ ಆಗಿನ ಅಧ್ಯಕ್ಷೆಯಾಗಿದ್ದ ನಂದಿನಿ, ತಮ್ಮ ಸಂಬಂಧಿಕರ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಸರ್ಕಾರದ ಅನುದಾನ ಹೊರತು ಪಡಿಸಿ ಕರವಸೂಲಿಯಲ್ಲಿ ಈ ಕಾಮಗಾರಿಗಳಿಗೆ ಹಣ ಸಂದಾಯ ಮಾಡಲು ಅವಕಾಶವಿಲ್ಲದ್ದರ ಮಧ್ಯೆಯೂ ನಿಯಮಬಾಹಿರವಾಗಿ ಪಿಡಿಒ ಮಲ್ಲಿಕಾರ್ಜುನ ಅವರ ಜತೆ ಶಾಮೀಲಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಯಂಕಮ್ಮ ದೂರು ದಾಖಲಿಸಿದ್ದರು.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳು ಸಲ್ಲಿಸಿದ ಹಣಕಾಸು ಅಕ್ರಮದ ವರದಿ ಶಿಫಾರಸ್ಸಿನ ಮೇರೆಗೆ ಹಣವಾಳ ಗ್ರಾಮ ಪಂಚಾಯಿತಿಯ ಆಗಿನ ಅಧ್ಯಕ್ಷೆ, ಹಾಲಿ ಉಪಾಧ್ಯಕ್ಷೆ ನಂದಿನಿ ಅವರನ್ನು ಹುದ್ದೆಯಿಂದ ಅನರ್ಹತೆ ಮಾಡಿ ಹಾಗೂ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ ಆರು ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Rain News: ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಅದೇ ರೀತಿ ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯ ಕಿನ್ನಾಳ ರಸ್ತೆ ಜಲಾವೃತವಾಗಿರುವುದು.
Koo

ವಿಜಯನಗರ/ಕೊಪ್ಪಳ: ರಾಜ್ಯದ ವಿಜಯನಗರ, ಕೊಪ್ಪಳ ಜಿಲ್ಲೆಯ ಹಲವೆಡೆ ಬುಧವಾರ ಮಳೆ (Rain News) ಆರ್ಭಟಿಸಿದ್ದು, ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ರಸ್ತೆಗಳು ಕೆರೆಗಳಂತೆ ಬದಲಾಗಿದ್ದವು. ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿ ಸುತ್ತಮುತ್ತಲಿನ ಹಂಪಿ, ಕಮಲಾಪುರ, ಚಿತ್ತವಾಡಗಿ, ಶಾನಭಾಗ ಸರ್ಕಲ್ ಸೇರಿ ಹಲವು ಕಡೆ ನಿರಂತರ ಮಳೆ ಸುರಿದಿದ್ದರಿಂದ ಬೈಕ್ ಸವಾರರು ಹೈರಾಣಾದರು. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಹಳ್ಳದಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಕೂಡ್ಲಿಗಿ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಹಳ್ಳದಂತೆ ಮಳೆ ನೀರು ಹರಿಯಿತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಗ್ರಾಮದೊಳಕ್ಕೆ ನೀರು ನುಗಿದ್ದರಿಂದ ಜನ ಪರದಾಡುವಂತಾಗಿದೆ. ಇನ್ನು ಹೊಸಪೇಟೆಯ ರಾಣಿಪೇಟೆಯಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಹೊಸಪೇಟೆಯಲ್ಲಿ ಭಾರಿ ಮಳೆ: ಮಳೆಯಿಂದಾಗಿ ಹೊಸಪೇಟೆಯ ಕೆಲವು ರಸ್ತೆಗಳು ಕೆರೆಯಂತಾಗಿದ್ದವು. ಕಾಲೇಜು ರಸ್ತೆ, ನೂರು ಹಾಸಿಗೆ ಆಸ್ಪತ್ರೆ ರಸ್ತೆ ಸೇರಿದಂತೆ ಕೆಲವು ಕಡೆ ಹಳ್ಳದಂತೆ ಮಳೆ ನೀರು ಹರಿಯಿತು. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಅರ್ಧಕ್ಕರ್ಧ ಮುಳುಗಿದವು. ಮಳೆ ನೀರು ರಸ್ತೆ ಮೇಲೆಯೇ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು.

ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಭರ್ಜರಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೊಪ್ಪಳ ನಗರದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಗೆ ರಸ್ತೆಗಳು ಹಳ್ಳಗಳಾಗಿ ಪರಿವರ್ತನೆಯಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಇದನ್ನೂ ಓದಿ | Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಜಿಲ್ಲೆಯ ಕಿನ್ನಾಳದಲ್ಲಿ ರಾಜಕಾಲುವೆ ತುಂಬಿ ಹರಿದಿದ್ದರಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿತ್ತು. ಇದರಿಂದ ಮಂಗಳೂರು, ಕಿನ್ನಾಳ ಗ್ರಾಮಗಳಿಗೆ ತೆರಳಲು ಜನರ ಪರದಾಡಿದರು. ಪ್ರಗತಿ ನಗರ, ಕಲ್ಯಾಣ ನಗರಗಳಿಗೆ ತೆರಳಲೂ ಸಹ ಜನರ ಪರದಾಡುವಂತಾಯಿತು.

Continue Reading

ಧಾರ್ಮಿಕ

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Ballari News: ಬಳ್ಳಾರಿ ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ ನಡೆಯಿತು.

VISTARANEWS.COM


on

Chellagurki Shri Yerrithathanavara Maharathotsava in Ballari
Koo

ಬಳ್ಳಾರಿ: ಜಿಲ್ಲೆಯ‌ ಸುಕ್ಷೇತ್ರ ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯೆ ಭಕ್ತಿ ಭಾವದಿಂದ ಬುಧವಾರ ಸಂಜೆ ನೆರವೇರಿತು. ರಥಕ್ಕೆ ಭಕ್ತರು ಹೂವು-ಹಣ್ಣು ಸಮರ್ಪಿಸುವ ಮೂಲಕ ಭಕ್ತಿ ಭಾವ ಮೆರೆದರು. ಮಳೆಯ ಮಧ್ಯೆ ರಥೋತ್ಸವವು ಸಂಭ್ರಮದಿಂದ (Ballari News) ಜರುಗಿತು.

ಮಹಾರಥೋತ್ಸವದ ನಂತರ ಹರಕೆ ಹೊತ್ತ ಭಕ್ತರು ಕರ್ಪೂರ ಆರತಿಯೊಂದಿಗೆ ಪ್ರದಕ್ಷಿಣೆ ಮಾಡಿ, ತಮ್ಮ ಹರಕೆ‌ ತೀರಿಸಿದರು. ಮಹಾರಥೋತ್ಸವದ ಅಂಗವಾಗಿ ಶ್ರೀ ಎರ‍್ರಿತಾತನವರ ಮೂರ್ತಿಗೆ ವಿಶೇಷ ಅಲಂಕಾರ ಮತ್ತು ವಿವಿಧ ಅಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು.

ಬುಧವಾರ ಬೆಳಿಗ್ಗೆ ಮಹಾರಥೋತ್ಸವದ ಅಂಗವಾಗಿ ಸತತ ಏಳು ದಿನಗಳಿಂದ ಹಗಲಿರುಳು ನಡೆದ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಶ್ರೀ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಉರವಕೊಂಡದ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿದರು.

ನಂತರ ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್‌ನ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ, ರಕ್ತದಾನದ ಮಹತ್ವ ಕುರಿತು ತಿಳಿಸಿಕೊಟ್ಟರು.

ಇದನ್ನೂ ಓದಿ: Munnar Tour: ಮುನ್ನಾರ್‌ನ ಈ 5 ರಮಣೀಯ ಸ್ಥಳಗಳನ್ನು ನೋಡಲೇಬೇಕು!

ಜೂ.13ರಂದು ಗುರುವಾರ ಸಂಜೆ 7 ಗಂಟೆಗೆ ಹೂವಿನ ರಥೋತ್ಸವ, ನಂತರ ಬಾಣೋತ್ಸವ ನಡೆಯಲಿದೆ.

Continue Reading
Advertisement
Tips For Rainy Season
ಆರೋಗ್ಯ24 mins ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ1 hour ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ7 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ7 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ7 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ7 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ8 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ8 hours ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ9 hours ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌