Drone Prathap: ಡ್ರೋನ್‌ ಪ್ರತಾಪ್‌ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಕೇಸ್‌! - Vistara News

ಬಿಗ್ ಬಾಸ್

Drone Prathap: ಡ್ರೋನ್‌ ಪ್ರತಾಪ್‌ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಕೇಸ್‌!

Drone Prathap: ಪ್ರತಾಪ್ ಆರೋಪಗಳನ್ನು ಅಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದರು. ಇದೀಗ ಬಿಬಿಎಂಪಿ ಅಧಿಕಾರಿ (BBMP Officer) ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Drone Prathap
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಗ್‌ ಬಾಸ್‌ ಸೀಸನ್‌ 10ರ 8ನೇ (BBK SEASON 10) ವಾರ ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಚಟುವಟಿಕೆ ಒಂದನ್ನು ನೀಡಿದ್ದರು. ಸ್ಪರ್ಧಿಗಳು ತಮ್ಮ ತಮ್ಮ ಜೀವನದಲ್ಲಿ ಎದುರಿಸಿದ ಸದಾ ಕಾಡುವ ನೋವಿನ ಘಟನೆಗಳನ್ನು ಹಂಚಿಕೊಳ್ಳಬೇಕಿತ್ತು. ಈ ವೇಳೆ ಪ್ರತಾಪ್‌ ವಿವಾದದಲ್ಲಿ ಸಿಲುಕಿದಾಗ ಏನೆಲ್ಲ ಕಷ್ಟಗಳನ್ನು ಎದುರಿಸಿದೆ. ಹಾಗೇ ʻಮೆಂಟಲಿ ಅನ್‌ಸ್ಟೇಬಲ್‌ (Mentally Unstable) ಎಂದು ಬರೆದುಕೊಡು’ ಎಂದು ತಲ್‌ ತಲೆ ಮೇಲೆ ಹೊಡೆದರು ಎಂದು ಹೇಳಿ ಬಿಕ್ಕಿ ಬಿಕ್ಕಿ ಅತ್ತಿದ್ದರು. ಪ್ರತಾಪ್ ಆರೋಪಗಳನ್ನು ಅಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದರು. ಇದೀಗ ಬಿಬಿಎಂಪಿ ಅಧಿಕಾರಿ (BBMP Officer) ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಪ್ರಕಾರ, ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಗುರುವಾರ (ಜ.18) ಕೋರ್ಟ್‌ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.

ಪ್ರತಾಪ್‌ ಹೇಳಿದ್ದೇನು?

ಪ್ರತಾಪ್‌ ಮಾತನಾಡಿ ʻʻನನ್ನ ಜೀವನದಲ್ಲಿ ಏನು ಆಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ನಾನು ದೇಶ ಬಿಟ್ಟು ಹೊರಗೆ ಹೋಗಿದ್ದೆ. ನನ್ನ ಜತೆ ಇದ್ದ ಬ್ಲಾಗರ್ಸ್‌ ಕೆಲಸ ಮಾಡಿದವರು. ನನ್ನ ಬಗ್ಗೆ ಒಂದಷ್ಟು ಕಥೆಗಳನ್ನ ಕ್ರಿಯೇಟ್ ಮಾಡಿದರು. ಡ್ರೋನ್ ಪ್ರತಾಪ್ ದುಡ್ಡು ತಗೊಂಡಿದ್ದಾನೆ ಎಂದು ಮೂರು ವ್ಯಕ್ತಿಗಳು ನನ್ನ ಬಗ್ಗೆ ಇಲ್ಲ ಸಲ್ಲದ್ದನ್ನು ಹೇಳಿದರು. ಜೀವನದಲ್ಲಿ ಒಂದೆರಡು ಮಾತುಗಳನ್ನ ಬಾಯ್ತಪ್ಪಿ ಹೇಳಿದ್ದೀನಿ. ಸಾಕಷ್ಟು ಅನುಭವಿಸಿದೆ. ನಾನು ಸರಿಯಾಗಿದ್ದರೂ ಮಾತನಾಡಲು ಆಗ್ತಾ ಇರಲಿಲ್ಲʼʼ ಎಂದಿದ್ದರು.

ಇದನ್ನೂ ಓದಿ: BBK SEASON 10: ʻನಾಮಿನೇಷನ್‌ʼನಿಂದ ಪಾರಾದ ಡ್ರೋನ್‌ ಪ್ರತಾಪ್‌; ಕಣ್ಣೀರಿಟ್ಟ ನಮ್ರತಾ!

ಇದನ್ನೆಲ್ಲಾ ಮನಸ್ಸಿನಲ್ಲಿ ಇಟ್ಟುಕೊಂಡು ಇಲ್ಲಿಗೆ ಬಂದ್ಮೇಲೆ ಹೆಂಗೋ ಪರಿಚಯ ಆಯ್ತು. ಹೋಗಿ ಮಾತನಾಡಿಸಿದೆ. ಅಲ್ಲಿಂದ ಕರ್ಕೊಂಡ್ ಹೋಗಿ ನನ್ನನ್ನ ಯಾರಿಗೋ ಪರಿಚಯ ಮಾಡಿಸಿದರು. ಅಲ್ಲಿಂದ ನಾನು ಮೈಸೂರಿಗೆ ಹೊರಟು ಬಂದೆ. ಆಗ ಅವರು ನನಗೆ 2 ಸಾವಿರ ರೂಪಾಯಿ ನೋಟು ಕೊಟ್ಟರು. ಅದು ಬಿಟ್ಟರೆ ನಾನು ಒಂದು ರೂಪಾಯಿ ಹಣ ತಗೊಂಡಿಲ್ಲʼʼಎಂದಿದ್ದರು.

ʻಚಿಕ್ಕಮಗಳೂರಿನಲ್ಲೇ ಇದ್ದೆ. ತಂದೆ ಕರ್ಕೊಂಡು ಹೋಗಿ ಕ್ವಾರಂಟೈನ್‌ ಕೇಸ್‌ಗೆ ಪೊಲೀಸ್‌ ಸ್ಟೇಷನ್‌ನಲ್ಲಿ ಇರಿಸಿದರು. ಶೂಟ್‌ ಅಟ್‌ ಸೈಟ್‌ ಆರ್ಡರ್‌ ಕೊಟ್ಟಿದ್ದಾರೆ ಎಂದು ಊರೆಲ್ಲ ಸುದ್ದಿಯಾಯ್ತು. ನನ್ನ ಅಪ್ಪ – ಅಮ್ಮ ಹೊರಗಡೆ ಬಂದಿಲ್ಲ. ನನ್ನ ತಾಯಿ ಬಾಗಿಲು ಹಾಕಿಕೊಂಡು ತೋಟದ ಕಡೆ ಓಡಿದ್ರು. ಊಟದಲ್ಲಿ ವಿಷ ಹಾಕಿ ಸಾಯಿಸಬೇಕಿತ್ತು.. ಯಾಕೆ ಬಿಟ್ಟಿದ್ದೀರಾ ಇನ್ನೂ ಎಂದು ಸಂಬಂಧಿಕರು ಅಂದರು. ಚಿಕ್ಕಮಗಳೂರಿನಿಂದ ಬಂದಮೇಲೆ ಬೆಂಗಳೂರಿನ ಶಾಂತಿನಗರದಲ್ಲಿರುವ ಹೋಟೆಲ್‌ನಲ್ಲಿ ನನ್ನನ್ನ ಇರಿಸಿದರು. ಅಲ್ಲಿ ಸ್ಕ್ರೀನ್ ಓಪನ್ ಮಾಡಿದರೆ ಸುತ್ತ ಕ್ಯಾಮೆರಾಗಳು.. ಯಾವ ಪ್ರತಾಪ್‌ನ ಮೆರೆಸಿದ್ರೋ, ಹೋಟೆಲ್ ಸುತ್ತ ಪೊಲೀಸ್ ರಿಸರ್ವ್. ಆಮೇಲೆ ಆ ನ್ಯೂಸ್‌ ಜತೆ ಮಾತನಾಡು, ಈ ನ್ಯೂಸ್‌ ಜತೆ ಮಾತನಾಡು, ಆ ಪೇಪರ್‌ನವರ ಬಳಿ ಮಾತನಾಡು.. ಎಲ್ಲವನ್ನೂ ಒಪ್ಪಿಕೋ ಎಂದು ಕೊಡಬಾರದ ಹಿಂಸೆ ಕೊಟ್ಟರು. ನಿನ್ನ ತಂಗಿಯನ್ನ ಯಾರು ಮದುವೆ ಆಗ್ತಾರೆ? ನಿನ್ನ ತಂಗಿಗೆ ಮದುವೆಯಾಗದ ಹಾಗೆ ಮಾಡ್ತೀವಿ. ನಿನ್ನ ಅಮ್ಮ ಹುಚ್ಚಿ ತರಹ ರೋಡ್‌ನಲ್ಲಿ ಅಲೆಯಬೇಕು. ನಿನ್ನ ತಂದೆಗೆ ಯಾರೂ ಇರಬಾರದು. ಯಾರೂ ಸಹಾಯ ಮಾಡಬಾರದು ಎಂದು ಹೇಳಿದ್ದರುʼʼಎನ್ನುವಾಗ ಬಿಕ್ಕಿ ಬಿಕ್ಕಿ ಅತ್ತಿದ್ದರು.

ಇದನ್ನೂ ಓದಿ: BBK SEASON 10: ಮನೆಗೆ ಮರಳುತ್ತಿದ್ದಂತೆ ದೇವರಿಗೆ ಊದಿನ ಕಡ್ಡಿ ಹಚ್ಚಿ ಪೂಜೆ ಮಾಡಿದ ಡ್ರೋನ್‌ ಪ್ರತಾಪ್‌!

’ಮೆಂಟಲ್ ಆಸ್ಪತ್ರೆಯಿಂದ ಡಾಕ್ಟರ್‌ನ ಕರ್ಕೊಂಡ್ ಬಂದರು. ಮೆಂಟಲಿ ಅನ್‌ಸ್ಟೇಬಲ್ ಅಂತ ಬರೆದುಕೊಡು ಎಂದು ಹಿಂಸೆ ಕೊಟ್ಟರು. ನನ್ನ ಪಾಸ್‌ಪೋರ್ಟ್‌, ಐಪ್ಯಾಡ್‌ ಕಿತ್ತುಕೊಂಡರು. ಎಲ್ಲ ಕಿತ್ತುಕೊಂಡು.. ಮೆಂಟಲಿ ಅನ್‌ಸ್ಟೇಬಲ್ ಬರಿ ಎಂದು ಸ್ಟೇಟ್‌ಮೆಂಟ್‌ ರೆಡಿ ಮಾಡಿಸಿದರು. ಕೊನೆಗೆ ನಾನು ಯಾವುದಕ್ಕೂ ಸಹಿ ಹಾಕಲಿಲ್ಲ. ನನ್ನ ತಂದೆ – ತಾಯಿ ಜತೆಗೆ ಮಾತನಾಡಿದರು. ಮೆಂಟಲಿ ಅನ್‌ಸ್ಬೇಬಲ್ ಎಂದು ಬರೆದುಕೊಡು ಎಂದು ತಲೆ ಮೇಲೆ ಹೊಡೆಯುತ್ತಿದ್ದರು ನನಗೆ’’ ಎಂದು ಅತ್ತಿದ್ದರು.

ಪ್ರಯಾಗ್ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಪ್ರಯಾಗ್ ಅವರು ಮಾತನಾಡಿ ʻಪ್ರತಾಪ್‌ ಹೇಳಿರುವುದು ಸುಳ್ಳು. ಸತ್ಯ ಆಗಿದ್ದರೆ, ಮೂರು ವರ್ಷಗಳ ಕಾಲ ಸುಮ್ಮನೆ ಇರುತ್ತಿರಲಿಲ್ಲ. ಒಂದು ಪಕ್ಷ ನಾನು ಹೊಡೆದಿದ್ದೇ ಆಗಿದ್ದರೆ, ಆಗಲೇ ಅವನು ಕಂಪ್ಲೇಂಟ್‌ ಮಾಡಬೇಕಿತ್ತು. ನಾವು ನಮ್ಮ ಪವರ್‌ ಮಿಸ್‌ಯೂಸ್‌ ಮಾಡಿದ್ದೇ ಆಗಿದ್ದರೆ, ನಮಗೆ ಕೆಲಸಾನೇ ಹೋಗುತ್ತಿತ್ತು. ಈಗ ಆತ ಪ್ರೂವ್‌ ಮಾಡಬೇಕು. ಸಾರ್ವಜನಿಕರು ನಮ್ಮ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬಹುದು. ಆತ ಬೇಕಿದ್ದರೆ ಸಾಬೀತು ಮಾಡಲಿʼʼ ಎಂದಿದ್ದರು.

ʻʻಕ್ವಾರಂಟೈನ್ ನಿಯಮ ಉಲ್ಲಂಘಿಸಿ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ಕೂತು ಸಂದರ್ಶನದಲ್ಲಿ ಮಾತನಾಡಿದ್ದ. ಆತ ಹೇಳುವಂತೆ ಇಡೀ ಪೊಲೀಸ್ ಪಡೆ ಅವನನ್ನು ಸುತ್ತುವರಿದಿರಲಿಲ್ಲ. ತಂದೆ ತಾಯಿ ವಿಚಾರ ಬಂದಾಗ ಆತ ವೀಕ್‌ ಆಗುತ್ತಿದ್ದ. ಆಗ ನಾವು ತಂದೆ ತಾಯಿ ಕರೆಸಿ ಮಾತನಾಡಿದ್ದೆವು. ಆತ ಡಿಗ್ರಿ ಮಾಡಿರುವುದು ನನಗೆ ಅನುಮಾನ ಇದೆ. ಆತ ಹೇಳುತ್ತಿರುವುದೆಲ್ಲಾ ಸುಳ್ಳು. ಆಯಾ ದೇಶಗಳಿಂದಲೇ ಪ್ರತಾಪ್ ಹೇಳುತ್ತಿರುವುದೆಲ್ಲಾ ಸುಳ್ಳು ಎಂದು ನಮಗೆ ಮಾಹಿತಿ ಸಿಕ್ಕಿತ್ತುʼʼ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading
Advertisement
Rock Salt Or Powder Salt
ಆರೋಗ್ಯ49 mins ago

Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

Actor Darshan Arrested
ಪ್ರಮುಖ ಸುದ್ದಿ2 hours ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

Dina Bhavishya
ಭವಿಷ್ಯ2 hours ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Health Benefits Of Jaggery
ಆರೋಗ್ಯ2 hours ago

Health Benefits Of Jaggery: ಬೆಲ್ಲ ಉಳಿದ ಆಹಾರದಂಥಲ್ಲ; ಇದರ ಲಾಭಗಳು ಏನೇನು ತಿಳಿದುಕೊಂಡಿರಿ

T20 World Cup
ಪ್ರಮುಖ ಸುದ್ದಿ7 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ8 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ8 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ8 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ9 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ10 hours ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ15 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ16 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ17 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ20 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌