ವಾಗ್ದೇವಿ ವಿಲಾಸ ಶಾಲೆಯಲ್ಲಿ ಜ. 22ರಂದು ಸಂಪೂರ್ಣ ರಾಮಾಯಣ ಪ್ರದರ್ಶನ, ಶ್ರೀರಾಮ ಜಯಂ ಪುಸ್ತಕ ಬಿಡುಗಡೆ - Vistara News

ನೋಟಿಸ್ ಬೋರ್ಡ್

ವಾಗ್ದೇವಿ ವಿಲಾಸ ಶಾಲೆಯಲ್ಲಿ ಜ. 22ರಂದು ಸಂಪೂರ್ಣ ರಾಮಾಯಣ ಪ್ರದರ್ಶನ, ಶ್ರೀರಾಮ ಜಯಂ ಪುಸ್ತಕ ಬಿಡುಗಡೆ

ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಗ್ದೇವಿ ವಿಲಾಸ ಶಾಲೆಯಲ್ಲಿ ಜ. 22ರಂದು ʼಸಂಪೂರ್ಣ ರಾಮಾಯಣʼ ಪ್ರದರ್ಶನ, ಶ್ರೀರಾಮ ಜಯಂ ಪುಸ್ತಕ ಬಿಡುಗಡೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

VISTARANEWS.COM


on

Sampoorna Ramayana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠಾಪನಾ ಅಂಗವಾಗಿ ಜನವರಿ 22ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಮಾರತಹಳ್ಳಿಯ ಮುನ್ನೇಕೊಳಲುವಿನ ವಾಗ್ದೇವಿ ವಿಲಾಸ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ʼಸಂಪೂರ್ಣ ರಾಮಾಯಣʼ ಪ್ರದರ್ಶನ, ಶ್ರೀರಾಮ ಜಯಂ ಪುಸ್ತಕ ಬಿಡುಗಡೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 9.30 ರಿಂದ 10.45 ರವರೆಗೆ ವಿದ್ಯಾರ್ಥಿಗಳಿಂದ ‘ಸಂಪೂರ್ಣ ರಾಮಾಯಣ’ ಪ್ರದರ್ಶನ ನಡೆಯಲಿದೆ. ಬೆಳಗ್ಗೆ 10.45 ರಿಂದ 11.30ರವರೆಗೆ ‘ಶ್ರೀರಾಮ ಜಯಂ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗುಜರಾತ್‌ನ ಶ್ರೀ ವೇದಿಕ್ ಮಿಷನ್ ಟ್ರಸ್ಟ್ ಸಂಸ್ಥಾಪಕರಾದ ಸ್ವಾಮಿ ಧರ್ಮಬಂಧು ಮಹಾರಾಜ್, ಗೌರವ ಅತಿಥಿಗಳಾಗಿ ಹಿರಿಯ ಪ್ರಚಾರಕರು ಹಾಗೂ ಪುಸ್ತಕದ ಲೇಖಕರಾದ ಕಾ. ಶ್ರೀ. ನಾಗರಾಜ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Ayodhya Rama Mandir : ಮಂದಿರ ಲೋಕಾರ್ಪಣೆ ಹಿನ್ನೆಲೆ; ಕೇಸರಿ ಧ್ವಜ, ಪುಸ್ತಕಗಳಿಗೆ ಭಾರಿ ಬೇಡಿಕೆ

ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಹರೀಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12.15 ರಿಂದ 1.00 ಗಂಟೆವರೆಗೆ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ದೇವರ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಹಾಪ್ರಸಾದ ವಿತರಣೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Mandya News : ಮಂಡ್ಯ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು (Karnataka Rain) , ಕಾವೇರಿ ನದಿ ಉಕ್ಕಿ (Cauvery River) ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದರೊಟ್ಟಿಗೆ ಪ್ರವಾಸಿ ತಾಣಗಳಾದ ಮುತ್ತತ್ತಿ ಹಾಗೂ ನಿಮಿಷಾಂಬ ದೇಗುಲದ ಸ್ನಾನ ಘಟ್ಟಕ್ಕೆ ನಿಷೇಧ ಹೇರಲಾಗಿದೆ. ಜತೆಗೆ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್‌ ಹಾಕಲಾಗಿದೆ.

VISTARANEWS.COM


on

By

karnataka rain
Koo

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

land slide: ಹಾಸನದ ಸಕಲೇಶಪುರ (Sakaleshpur) ತಾಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಹೀಗಾಗಿ ಇಂದಿನಿಂದ ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

VISTARANEWS.COM


on

By

Landslide on railway track in Edakumeri Express trains suspended till July 29
Koo

ಬೆಂಗಳೂರು: ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ (Karnataka Rain News) ಮುಂದುವರಿದಿದೆ. ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು ಕುಸಿತ (landslide) ಆಗಿದೆ. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದೆ. ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದೆ. ಈ ಕಾರಣ ಕೆಲವು ರೈಲುಗಳನ್ನು ಮರು ನಿಗದಿಪಡಿಸಲಾಗಿದೆ ಜತೆಗೆ ರದ್ದುಪಡಿಸಲಾಗಿದೆ.

ಮೈಸೂರು ವಿಭಾಗದ ಹಾಸನ ಮತ್ತು ಶಾಂತಿಗ್ರಾಮ ನಡುವೆ ಭೂಕುಸಿತದಿಂದಾಗಿ ಮಾರ್ಗ ಬದಲಿಸಲಾದ ಪ್ಯಾರಿಂಗ್ ರೈಲು ತಡವಾಗಿ ಚಲಿಸಲಿದೆ. ಹೀಗಾಗಿ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ಮಧ್ಯಾಹ್ನ 12 ಗಂಟೆ ಬದಲಿಗೆ ಸಂಜೆ 06:30ಕ್ಕೆ ವಿಜಯಪುರದಿಂದ ಹೊರಡಲಿದೆ (ನಿಗದಿತ ನಿರ್ಗಮನ ದಿನಾಂಕ 27.07.2024ರ 12.00 ಗಂಟೆ)

ಇದನ್ನೂ ಓದಿ: Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

ಯಾವ್ಯಾವ ರೈಲು ಸೇವೆಗಳು ರದ್ದು

  1. 1.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  2. 2.ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  3. 3.ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  4. 4. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  5. 5.ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  6. 6.ರೈಲು ಸಂಖ್ಯೆ 06568 ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  7. 7.ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  8. 8.ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  9. 9.ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 29.07.2024 ರಂದು ರದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

VISTARANEWS.COM


on

By

UGCET 2024 seat allotment process begins Only a few days left for the option to enter
Koo

ಬೆಂಗಳೂರು: ಯುಜಿಸಿಇಟಿ-24ರ (UGCET 2024) ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಳು ದಿನ ಅವಕಾಶ ನೀಡಿತ್ತು. ಅದರಲ್ಲಿ ಐದು ದಿನಗಳು ಈಗಾಗಲೇ ಮುಗಿದಿದ್ದು, ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ. ಜು.29 ಕೊನೆಯ ದಿನ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದರು.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿತ್ತು. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಇಂದಿಗೆ ಐದು ದಿನಗಳು ಮುಗಿದಿದ್ದು, ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ವೈದ್ಯಕೀಯ ಕೋರ್ಸುಗಳು:

ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಆನ್‌ಲೈನ್‌ ವೆರಿಫಿಕೇಶನ್‌

ಯುಜಿಸಿಇಟಿ-2024ಕ್ಕೆ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್‌ ಮೂಲಕ ಪರಿಶೀಲನೆ ಮಾಡಿ, ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಪರಿಶೀಲಿಸಿಕೊಳ್ಳಲು ಜು.29ರಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು. ಜತೆಗೆ ಅರ್ಜಿಯಲ್ಲಿನ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಿ ಆಫ್‌ಲೈನ್‌ ದಾಖಲೆಗಳ ಪರಿಶೀಲನೆಗೆ ಕಳೆದ ಜು.4ರಿಂದ 6ವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಜು.18ರಂದು ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್‌ ನೀಡಲಾಗಿತ್ತು. ಇದನ್ನೂ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಂದೇ ಕೊನೆ ದಿನ

ಡಿಸಿಇಟಿ-2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಅಛಿ ಆಯ್ಕೆಗೆ, ಚಲನ್ ಡೌನ್‌ಲೋಡ್, ಶುಲ್ಕ ಪಾವತಿ ಮತ್ತು ಕಾಲೇಜಿನಲ್ಲಿ ಪ್ರವೇಶ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿತ್ತು. ಜತೆಗೆ ದಿನಾಂಕಗಳನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿತ್ತು.

ಅದರಂತೆ ಅಛಿ ಗಳನ್ನು ಆಯ್ಕೆ ಮಾಡಲು ನಿನ್ನೆ 26ರ ಮಧ್ಯಾಹ್ನ 1ರ ವರೆಗೆ ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಳ್ಳಲು 2 ರವರೆಗೆ, ಶುಲ್ಕ ಪಾವತಿ ಮಾಡಲು ಸಂಜೆ 4 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ದಿನ ಅಂದರೆ 27ರ ಮಧ್ಯಾಹ್ನ 1ರ ವರೆಗೆ ಅಛಿ-1 ಆಯ್ಕೆ ಮಾಡಿ, ಶುಲ್ಕ ಪಾವತಿಸಿ ಮತ್ತು ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಂಜೆ 4.30 ರವರೆಗೆ ಅವಕಾಶವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

Wonderla Offer: ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 4ರಂದು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಹಾಲಿಡೇಸ್ ವಿಶೇಷ ಕೊಡುಗೆ ಘೋಷಿಸಿದೆ. ಆಗಸ್ಟ್‌ 4 ಸ್ನೇಹಿತರ ದಿನದಂದು ಒಂದು ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿರಲಿದೆ. ಈ ಕೊಡುಗೆಯು ಆನ್‌ಲೈನ್‌ನಲ್ಲಿ ಬುಕ್‌ ಮಾಡುವವರಿಗೆ ಮಾತ್ರ ಅನ್ವಯವಾಗಲಿದೆ.

VISTARANEWS.COM


on

On the occasion of Friendship Day Wonderla announced a buy one ticket get another ticket free offer
Koo

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಹಾಲಿಡೇಸ್, ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 4 ರಂದು ವಿಶೇಷ ಕೊಡುಗೆ ಘೋಷಿಸಿದೆ. (Wonderla Offer) ಆಗಸ್ಟ್‌ 4 ಸ್ನೇಹಿತರ ದಿನದಂದು ಒಂದು ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿರಲಿದೆ. ಈ ಕೊಡುಗೆಯು ಆನ್‌ಲೈನ್‌ನಲ್ಲಿ ಬುಕ್‌ ಮಾಡುವವರಿಗೆ ಮಾತ್ರ ಅನ್ವಯವಾಗಲಿದೆ.

ಈ ಕುರಿತು ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ ಮಾತನಾಡಿ, ಸ್ನೇಹಿತರ ದಿನವನ್ನು ಇನ್ನಷ್ಟು ವಿಶೇಷಗೊಳಿಸಲು ವಂಡರ್‌ಲಾ ಟಿಕೆಟ್‌ ಖರೀದಿಯ ಮೇಲೆ ಕೊಡುಗೆ ನೀಡಿದೆ. ಪ್ರತಿಯೊಬ್ಬರು ಹೆಚ್ಚು ಮನರಂಜನೆ ಅನುಭವಿಸುವುದು ಸ್ನೇಹಿತರು ಜತೆಗಿದ್ದ ಸಂದರ್ಭದಲ್ಲಿ. ಈ ಮನರಂಜನೆಗೆ ವೇದಿಕೆಯಾಗಿ ವಂಡರ್‌ಲಾ ಈ ಕೊಡುಗೆ ನೀಡಿರುವುದು, ತಮ್ಮ ಸ್ನೇಹಿತರೊಂದಿಗೆ ವಂಡರ್‌ಲಾಗೆ ಆಗಮಿಸಿ ಇಲ್ಲಿನ ಇನ್ನಷ್ಟು ಮೋಜು ಮಸ್ತಿ ಮಾಡಲು ಪ್ರೇರೇಪಿಸುತ್ತದೆ.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಈ ವಿಶೇಷ ಕೊಡುಗೆಗಳಲ್ಲಿ ಲೈವ್ ಡಿಜೆ, ವಿಶೇಷ ಸಂಜೆ ಜುಂಬಾ ಸೆಷನ್‌ಗಳು, ಮೋಜಿನ ಆಟಗಳು ಮತ್ತು ಬಹುಮಾನಗಳು, ಎಲ್ಲಾ ರೋಮಾಂಚಕ ಪಾರ್ಕ್ ರೈಡ್‌ಗಳು ಮತ್ತು ಸೌಕರ್ಯಗಳನ್ನು ಒದಗಿಸುತ್ತಿದ್ದು, ನಿಮ್ಮ ಸ್ನೇಹಿತರೊಂದಿಗೆ ಮೋಜು-ಮಸ್ತಿ ಮಾಡಲು ವಂಡರ್‌ಲಾ ಉತ್ತಮ ತಾಣವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಎಲ್ಲಾ ಉದ್ಯಾನವನಗಳು ವಿಸ್ತೃತ ಅವಧಿಯವರೆಗೆ ತೆರೆದಿರಲಿವೆ. ಹೀಗಾಗಿ ಸಂಜೆಯ ಹೆಚ್ಚುವರಿ ಸಮಯವನ್ನು ವಂಡರ್‌ಲಾದಲ್ಲಿ ಕಳೆಯಬಹುದು.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

ಆನ್‌ಲೈನ್ ಪೋರ್ಟಲ್ https://bookings.wonderla.com/ ನಲ್ಲಿ ಮುಂಗಡವಾಗಿ ತಮ್ಮ ಪ್ರವೇಶ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಅಥವಾ ಗ್ರಾಹಕರು ನೇರವಾಗಿ ಪಾರ್ಕ್ ಕೌಂಟರ್‌ಗಳಿಂದ ಟಿಕೆಟ್‌ಗಳನ್ನು ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ +91 80372 30333 ಅಥವಾ +91 80350 73966 ಬೆಂಗಳೂರು ಪಾರ್ಕ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
Joe Root
ಕ್ರೀಡೆ5 mins ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ8 mins ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ9 mins ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ36 mins ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು46 mins ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ47 mins ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ47 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು48 mins ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ50 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Drowned in water
ಬಳ್ಳಾರಿ1 hour ago

Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ50 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ6 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ6 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌