BBK SEASON 10:  ಏರಿಳಿತದ ಹಾದಿಯಲ್ಲಿ ನಮ್ರತಾ ʻಬಿಗ್‌ಬಾಸ್ʼ ಪಯಣ - Vistara News

ಬಿಗ್ ಬಾಸ್

BBK SEASON 10:  ಏರಿಳಿತದ ಹಾದಿಯಲ್ಲಿ ನಮ್ರತಾ ʻಬಿಗ್‌ಬಾಸ್ʼ ಪಯಣ

BBK SEASON 10:  ಈ ಸೀಸನ್‌ನಲ್ಲಿ ಹಲವು ಏಳುಬೀಳುಗಳನ್ನು ಹಾದು ಅಂತಿಮ ಹಂತಕ್ಕೆ ಒಂದೇ ಹೆಜ್ಜೆ ಉಳಿದಿರುವಾಗ ನಮ್ರತಾ ಮನೆಯಿಂದ ಹೊರಬಿದ್ದಿದ್ದಾರೆ. ಕೊನೆಕೊನೆಯ ದಿನಗಳಲ್ಲಿ ಅವರ ಆಟದ ವೈಖರಿಯನ್ನು ಕಂಡು ಹಿಂದೆ ಜರಿದವರೇ ಅವರನ್ನು ಹೊಗಳಿದ್ದು ಅವರ ಸಾಮರ್ಥ್ಯಕ್ಕೆ ಸಾಕ್ಷಿ.

VISTARANEWS.COM


on

Namratha Gowda Bigg Boss Kannada journey through ups and downs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಪುಟ್ಟಗೌರಿ ಮದುವೆ’ ಧಾರಾವಾಹಿಯ ಮೂಲಕ ನಟನೆಗೆ ಕಾಲಿಟ್ಟ ನಮ್ರತಾ ಗೌಡ (BBK SEASON 10), ಬಿಗ್‌ಬಾಸ್‌ ವೇದಿಕೆಗೆ ಕಾಲಿಟ್ಟಿದ್ದು ‘ಡೊಂಟ್ ಯು ನೋ… ಐ ಆಮ್ ವೆರಿ ಸೆಕ್ಸಿ’ ಎಂದು ಹಾಡುತ್ತ… ಸೌಂದರ್ಯ, ಆತ್ಮವಿಶ್ವಾಸ ಮತ್ತು ಸ್ಪಷ್ಟತೆಯ ಹದವಾದ ಮಿಶ್ರಣದಂತೆ ಕಾಣಿಸಿದ್ದ ನಮ್ರತಾ ಅವರಿಗೆ ಪ್ರೀಮಿಯರ್ ವೇದಿಕೆಯಲ್ಲಿ 80% ಮತಗಳು ಬಂದಿದ್ದವು. ಹಾಗೆಯೇ ಈ ಸೀಸನ್‌ನ ಮೊದಲ ಸ್ಪರ್ಧಿಯಾಗಿ ಅವರು ಬಿಗ್‌ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದರು. ‘ಹ್ಯಾಪಿ ಬಿಗ್‌ಬಾಸ್‌’ ಎಂಬ ಟ್ಯಾಗ್‌ಲೈನ್‌ ಅನ್ನು ತಮ್ಮ ವ್ಯಕ್ತಿತ್ವಕ್ಕೂ ನೇತುಹಾಕಿಕೊಂಡಂತಿದ್ದ ನಮ್ರತಾ ಅವರು ಸದಾ ನಗುನಗುತ್ತಲೇ ಎಲ್ಲರ ಗಮನ ಸೆಳೆದಿದ್ದರು.

ಬಿಗ್‌ಬಾಸ್ ಮನೆಯೊಳಗೆ ದಿನಗಳನ್ನು ಕಳೆಯಲಾರಂಭಿಸಿದಂತೆ, ವಿನಯ್, ತುಕಾಲಿ ಸಂತೋಷ್, ಇಶಾನಿ, ಮೈಕಲ್, ಸ್ನೇಹಿತ್‌, ಗೌರಿಶ್ ಮತ್ತು ಸಿರಿ ಅವರ ಜೊತೆಗೆ ಆಪ್ತರಾಗಿದ್ದರು. ‘ಶಾಡೋ’, ‘ಚಮಚ’ ‘ಇನ್‌ಪ್ಲ್ಯೂಯೆನ್ಸ್‌ ಆಗುವವರು’ ಪದೇ ಪದೇ ಇಂಥ ಮಾತುಗಳನ್ನು ಕೇಳುತ್ತಲೇ ಬಂದ ನಮ್ರತಾ, ಬಿಗ್‌ಬಾಸ್‌ ಮನೆಯಲ್ಲಿ ಹದಿನೈದು ವಾರಗಳನ್ನು ಉಳಿದುಕೊಂಡಿರುವುದೇ ಈ ಎಲ್ಲವಕ್ಕೂ ಉತ್ತರದಂತಿತ್ತು.

ಈ ಸೀಸನ್‌ನಲ್ಲಿ ಹಲವು ಏಳುಬೀಳುಗಳನ್ನು ಹಾದು ಅಂತಿಮ ಹಂತಕ್ಕೆ ಒಂದೇ ಹೆಜ್ಜೆ ಉಳಿದಿರುವಾಗ ನಮ್ರತಾ ಮನೆಯಿಂದ ಹೊರಬಿದ್ದಿದ್ದಾರೆ. ಕೊನೆಕೊನೆಯ ದಿನಗಳಲ್ಲಿ ಅವರ ಆಟದ ವೈಖರಿಯನ್ನು ಕಂಡು ಹಿಂದೆ ಜರಿದವರೇ ಅವರನ್ನು ಹೊಗಳಿದ್ದು ಅವರ ಸಾಮರ್ಥ್ಯಕ್ಕೆ ಸಾಕ್ಷಿ.

ಇದನ್ನೂ ಓದಿ: BBK SEASON 10: ಬಿಗ್‌ ಬಾಸ್‌ ಮನೆಯಿಂದ ಹೊರಬಂದ ನಮ್ರತಾ ಗೌಡ

ಜಿಯೊ ಸಿನಿಮಾ ಫನ್‌ ಫ್ರೈಡೆನಲ್ಲಿ ನಮ್ರತಾ ಹೆಜ್ಜೆ ಗುರುತು

ಜಿಯೊ ಸಿನಿಮಾ ಫನ್‌ ಫ್ರೈಡೆ ಟಾಸ್ಕ್‌ಗಳಲ್ಲಿ ನಮ್ರತಾ ಅವರ ಕಾಂಟ್ರಿಬ್ಯೂಷನ್ ದೊಡ್ಡದಿದೆ. ‘ಹೂಂ ಅಂತಿಯಾ ಊಹೂಂ’ ಅಂತಿಯಾ ಟಾಸ್ಕ್‌ನಲ್ಲಿ ಆನೆಗೆ ನಿಖರವಾಗಿ ಬಾಲ ಬಿಡಿಸುವುದರ ಮೂಲಕ ಅವರು ಗಮನಸೆಳೆದಿದ್ದರು. ಗೇಮ್‌ ಆಡುವುದು, ಜೊತೆಗೆ ಆಡುವ ಆಟಗಾರರಿಗೆ ಪ್ರೋತ್ಸಾಹಿಸುವುದು ಈ ಎರಡರಲ್ಲಿಯೂ ನಮ್ರತಾ ಅವರದ್ದು ಎತ್ತಿದ ಕೈ. ಹುಡುಕಿ ತಂದವರೇ ಮಹಾಶೂರ’ ಟಾಸ್ಕ್‌ನಲ್ಲಿ ಅವರು ತೋರಿದ ಚಾಕಚಕ್ಯತೆ ಅವರ ತಂಡಕ್ಕೆ ದೊಡ್ಡ ಬಲ ತಂದಿತ್ತಿತ್ತು.

ತನಿಷಾ ಜತೆಗೆ ಕ್ಲಾಶ್‌

ಈ ಸೀಸನ್‌ನ ಆರಂಭದ ದಿನಗಳಲ್ಲಿ ನಮ್ರತಾ ವಿನಯ್ ಮತ್ತು ಇಶಾನಿ ಅವರನ್ನು ಸಾಕಷ್ಟು ಹಚ್ಚಿಕೊಂಡಿದ್ದರು. ಅದರಲ್ಲಿಯೂ ವಿನಯ್‌ ಅವರ ಜೊತೆಗಿನ ಅವರ ಬಾಂಧವ್ಯ ಕೊನೆಯ ದಿನದವರೆಗೂ ಕಿಂಚಿತ್ ಊನಗೊಳ್ಳದೆ ಬೆಳೆದುಕೊಂಡು ಬಂದಿತ್ತು. ಕ್ರಿಕೆಟ್‌ ಟಾಸ್ಕ್‌ನಲ್ಲಿ ತನಿಷಾ ಜತೆಗೆ ನಡೆದ ಮಾತಿನ ಚಕಮಕಿ ನಮ್ರತಾ ಅವರ ವ್ಯಕ್ತಿತ್ವದ ಮತ್ತೊಂದು ಸ್ಟ್ರಾಂಗ್ ಆಯಾಮವನ್ನು ಜನರೆದುರು ತೆರೆದಿಟ್ಟಿತ್ತು. ಹಾಗೆಯೇ ‘ಹಳ್ಳಿಮನೆ’ ಟಾಸ್ಕ್‌ನಲ್ಲಿಯೂ ತನಿಷಾ ಜೊತೆಗೆ ನಮ್ರತಾ ಮಾತಿನ ಚಕಮಕಿ ಜೋರಾಗಿಯೇ ನಡೆದಿತ್ತು. ಈ ಚಕಮಕಿ ಬೆಂಕಿಯಾಗಿ ಹೊತ್ತಿಕೊಂಡು ಮನೆಯ ನೆಮ್ಮದಿಯನ್ನೇ ಕೆಡಿಸಿದ್ದು, ಬಿಗ್‌ಬಾಸ್ ಮನೆಯ ಆಚೆಗೂ ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ಸಂಗೀತಾ ಮತ್ತು ತನಿಷಾ ಜೊತೆಗೆ ಅಂದು ಹುಟ್ಟಿಕೊಂಡಿದ್ದ ಭಿನ್ನಾಭಿಪ್ರಾಯದ ಕಿಡಿ ಆರಲು ಸಾಕಷ್ಟು ದಿನಗಳನ್ನೇ ತೆಗೆದುಕೊಂಡಿತು. ತನಿಷಾ ಮನೆಯಿಂದ ಹೊರಗೆ ಹೋಗುವ ಹೊತ್ತಿನಲ್ಲಿಯೂ ನಮ್ರತಾ ಅವರನ್ನೇ ನಾಮಿನೇಟ್ ಮಾಡಿದ್ದು ಇದಕ್ಕೊಂದು ಉದಾಹರಣೆ. ಆದರೆ ಸಂಗಿತಾ ಜೊತೆಗಿನ ಅವರ ಹಳಸಿದ್ದ ಸಂಬಂಧ ಕೊನೆದಿನಗಳಲ್ಲಿ ಸರಿಹೋಗಿತ್ತು. ನಮ್ರತಾ ಹಲವು ಸಲ ಕುಗ್ಗಿದಾಗ ಸಂಗೀತಾ ಹೆಗಲೆಣೆಯಾಗಿ ನಿಂತು ಸಂತೈಸಿದ್ದರು.

ಸ್ನೇಹಿತ್ ಜತೆಗಿನ ಮಧುರ ಬಾಂಧವ್ಯ

ಈ ಸೀಸನ್‌ನಲ್ಲಿ ನಮ್ರತಾ ನಂತರ ಮನೆಯೊಳಗೆ ಹೊಕ್ಕಿದ್ದು ಸ್ನೇಹಿತ್‌. ಮನೆಯೊಳಗೆ ಪರಸ್ಪರ ಎಲ್ಲರಿಗಿಂತ ಮೊದಲು ಮೀಟ್ ಆಗಿದ್ದ ಅವರ ನಡುವಿನ ಬಾಂಧವ್ಯ ನಂತರದ ದಿನಗಳಲ್ಲಿಯೂ ಮುಂದುವರಿದಿತ್ತು.
ಅದರಲ್ಲಿಯೂ ಸ್ನೇಹಿತ್ ಅವರಂತೂ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ, ‘ನಿಮ್ಮ ಬಗ್ಗೆ ನನಗೆ ಸೀರಿಯಸ್‌ ಆಗಿ ಒಲವಿದೆ’ ಎಂಬರ್ಥದ ಮಾತುಗಳನ್ನು ಆಡಿಯೂ ಇದ್ದರು. ಸದಾ ಕಾಲ ನಮ್ರತಾ ಹಿಂದೆ ಸುತ್ತುತ್ತ, ಸಮಯ ಸಿಕ್ಕಾಗೆಲ್ಲ ಅವರನ್ನು ಹೊಗಳುತ್ತ, ಅವರಿಗೆ ಸಹಾಯ ಮಾಡುತ್ತ ಕೆಲವೊಮ್ಮೆ ಕಿರಿಕಿರಿಯಾಗುಷ್ಟು ಜೊತೆಗಿದ್ದರು ಸ್ನೇಹಿತ್. ನಮ್ರತಾ ಮಾತ್ರ ಅವರನ್ನು ತಮಾಷೆಯಾಗಿಯೇ ನೋಡುತ್ತ, ಅವರ ಮಾತಿಗೆಲ್ಲ ನಗುನಗುತ್ತಲೇ ಹಾರಿಕೆಯ ಉತ್ತರ ನೀಡುತ್ತಿದ್ದರು.

ತಾವು ಎಲಿಮಿನೇಟ್ ಆಗುವ ವಾರದಲ್ಲಿ ಪಡೆದ ವಿಶೇಷ ಅಧಿಕಾರವನ್ನೂ ಸ್ನೇಹಿತ್, ನಮ್ರತಾ ಅವರನ್ನು ಇಂಪ್ರೆಸ್ ಮಾಡುವ ರೀತಿಯಲ್ಲಿಯೇ ಉಪಯೋಗಿಸಿದ್ದು ಮನೆಯ ಉಳಿದವರ ಅಸಮಧಾನಕ್ಕೂ ಕಾರಣವಾಗಿತ್ತು. ಆದರೆ ಸ್ನೇಹಿತ್ ಎಲಿಮಿನೇಟ್ ಆಗುವ ಸುದ್ದಿ ಕೇಳುತ್ತಿದ್ದ ಹಾಗೆಯೇ ನಮ್ರತಾ ಬಿಕ್ಕಿ ಬಿಕ್ಕಿ ಅತ್ತಿದ್ದರು. ಹೋಗುವಾಗ ‘ಇನ್ನು ಮೇಲೆ ನೀವು ನಿಮಗೊಬ್ಬರಿಗೆ ಮಾತ್ರವಲ್ಲ, ನನ್ನ ಪರವಾಗಿಯೂ ಆಡುತ್ತಿದ್ದೀರಿ. ಆಡಿ ಗೆದ್ದು ಬನ್ನಿ’ ಎಂದು ಹೇಳಿಯೇ ಸ್ನೇಹಿತ್ ಹೊರಗೆ ಹೋಗಿದ್ದರು. ಸ್ನೇಹಿತ್ ಅವರ ನೆನಪಿಗಾಗಿ ಅವರು ಕಾಫಿ ಕುಡಿಯುತ್ತಿದ್ದ ಕಪ್ ಅನ್ನು ನಮ್ರತಾ ಉಳಿಸಿಕೊಂಡಿದ್ದರು. ಅಲ್ಲದೆ, ಮನೆಯಲ್ಲಿದ್ದಾಗ ಅವರ ಜೊತೆಗೆ ನಡೆದುಕೊಂಡು ರೀತಿಯ ಬಗ್ಗೆ ಪಶ್ಚಾತ್ತಾಪದಿಂದ ಮಾತಾಡಿದ್ದರು. ತಾವು ಕ್ಯಾಪ್ಟನ್ ಆದಾಗಲೂ ಅದನ್ನು ಸ್ನೇಹಿತ್‌ ಅವರಿಗೆ ಅರ್ಪಿಸಿದ್ದರು.

ಪ್ರತಾಪ್ ಜತೆಗಿನ ಬಾಂಧವ್ಯ

ಪ್ರತಾಪ್ ಜೊತೆಗಿನ ನಮ್ರತಾ ಬಾಂಧವ್ಯವೂ ವಿಶೇಷವಾದದ್ದು. ಅಷ್ಟೇ ಏರಿಳಿತಗಳುಳ್ಳದ್ದು. ಮೊದಲ ವಾರದಲ್ಲಿ ಪ್ರತಾಪ್ ಮನೆಯ ಸದಸ್ಯರ ಮಾತಿನಿಂದ ಕುಗ್ಗಿ, ಬಾತ್‌ರೂಮಿಗೆ ಹೋಗಿ ಅಳುವಾಗ ಅವರ ಜೊತೆಗೆ ನಿಂತಿದ್ದು ನಮ್ರತಾ. ನಂತರದ ದಿನಗಳಲ್ಲಿಯೂ ನಮ್ರತಾ ಹಲವು ಬಾರಿ ಪ್ರತಾಪ್ ಅವರ ನೋವಿಗೆ ಸಂತೈಸಿದ್ದಾರೆ. ಜೊತೆಗೆ ನಿಂತಿದ್ದಾರೆ. ಪ್ರತಾಪ್ ಅವರಿಗೆ ಡಾನ್ಸ್‌ ಕಲಿಸಿ, ವೀಕೆಂಡ್‌ನಲ್ಲಿ ಸುದೀಪ್ ಅವರೆದುರು ಪ್ರತಾಪ್ ಡಾನ್ಸ್ ಮಾಡಿ ಮೆಚ್ಚುಗೆ ಗಳಿಸಿದಾಗ ಖುಷಿಪಟ್ಟಿದ್ದರು. ಆದರೆ ಕೆಲವು ಸಲ ಅವರ ನಡುವೆ ವೈಮನಸ್ಸು ಬಂದಿದ್ದೂ ಇದೆ. ನಾನು ನೋಡಿದ ಪ್ರತಾಪ್ ಇವನಲ್ಲ. ಹಾಗಾಗಿ ನಾನು ಅವನ ಜೊತೆಗೆ ಮೊದಲಿನ ಹಾಗೆ ಇರಲಾರೆ ಎಂದು ನಮ್ರತಾ ಸ್ಪಷ್ಟವಾಗಿ ಹೇಳಿದ್ದೂ ಇದೆ. ಆದರೆ ಕೊನೆಯ ಹಂತದಲ್ಲಿ ಮತ್ತೆ ಅವರಿಬ್ಬರ ಬಾಂಧವ್ಯ ಗಟ್ಟಿಗೊಂಡಿತ್ತು.

ಕ್ಯಾಪ್ಟನ್ಸಿ ಟೆಸ್ಟ್!

ಮನೆಯ ಕ್ಯಾಪ್ಟನ್ ಆಗಬೇಕು ಎಂಬ ನಮ್ರತಾ ಅವರ ಆಸೆ ಹಲವು ಬಾರಿ ನನಸಾಗುವ ಹಂತಕ್ಕೆ ಬಂದು ಛಿದ್ರವಾಗಿದ್ದಿದೆ. ಆಗೆಲ್ಲ ಅವರು ಕೂತು ಅತ್ತಿದ್ದಾರೆ. ‘ನಾನು ಮನೆಯವರ ಫೋಟೊ ನೋಡಬೇಕು. ಹಾಗಾಗಿ ನಾನು ಕ್ಯಾಪ್ಟನ್ ಆಗಬೇಕು’ ಎಂದು ಕೇಳಿಕೊಂಡಿದ್ದಿದೆ. ಕೊನೆಗೂ ಅವರ ಪ್ರಯತ್ನ ಯಶಸ್ವಿಯಾಗಿ ಮನೆಯ ಕ್ಯಾಪ್ಟನ್ ಆದರು. ಯಾರ ಮೇಲೆಯೂ ಅಧಿಕಾರ ಚಲಾಯಿಸದೆ, ಕೂಲ್‌ ಆಗಿ ಎಲ್ಲರನ್ನೂ, ಎಲ್ಲವನ್ನೂ ಹ್ಯಾಂಡಲ್ ಮಾಡಿದ್ದು ಅವರ ಕ್ಯಾಪ್ಟನ್ಸಿಯ ವಿಶೇಷ. ಅವರು ಕ್ಯಾಪ್ಟನ್ ಆಗಿದ್ದಾಗಲೇ ಮನೆಯ ಸದಸ್ಯರ ಕುಟುಂಬದವರು ಬಂದು ಹೋಗಿದ್ದೂ ಒಂದು ಸ್ಮರಣೀಯ ನೆನಪು.

ಇದನ್ನೂ ಓದಿ; BBK SEASON 10: ಬುಲೆಟ್ ಪ್ರಕಾಶ್ ಮಗನಾಗಿ ಹೆಸರು ಉಳಿಸಿಕೊಳ್ಳಿ ಎಂದು ರಕ್ಷಕ್‌ಗೆ ಎಚ್ಚರಿಕೆ ಕೊಟ್ಟ ಸುದೀಪ್‌!

ಕಾರ್ತಿಕ್ ಜತೆಗಿನ ಸಿಹಿ-ಕಹಿ ಒಡನಾಟ

ಸ್ನೇಹಿತ್ ಮನೆಯಿಂದ ಹೊರಹೋದ ಮೇಲೆ ಅವಿನಾಶ್ ಶೆಟ್ಟಿ, ನಮ್ರತಾ ಜತೆಗೆ ತುಸು ಸಲಿಗೆಯಿಂದಿರಲು, ಅವರ ಮೆಚ್ಚುಗೆ ಗಳಿಸಿಕೊಳ್ಳಲು ಯತ್ನಿಸಿದ್ದಿದೆ. ಆದರೆ ನಮ್ರತಾ ಅವಿನಾಶ್ ಕಡೆಗೆ ಗಮನವನ್ನೇ ಹರಿಸಿರಲಿಲ್ಲ. ಆದರೆ ಕೊನೆಯ ಕೆಲವು ವಾರಗಳಲ್ಲಿ ನಮ್ರತಾ ಮತ್ತು ಕಾರ್ತಿಕ್ ನಡುವಿನ ಸಂಬಂಧ ಸಾಕಷ್ಟು ಚರ್ಚೆಗೆ ಒಳಗಾಗಿತ್ತು.
ಕಾರ್ತಿಕ್, ನಮ್ರತಾ ಜೊತೆಗೆ ಫ್ಲರ್ಟ್ ಮಾಡುವಂತೆ ನಡೆದುಕೊಳ್ಳುತ್ತಿದ್ದದ್ದು, ನಮ್ರತಾ ಅದನ್ನು ಸೀರಿಯಸ್ ಆಗಿ ತೆಗೆದುಕೊಂಡಂತೆ ನಟಿಸುತ್ತಿದ್ದದ್ದು ಮನರಂಜನೆಯ ದೃಷ್ಟಿಯಿಂದ ಸಾಕಷ್ಟು ಮಜ ಕೊಟ್ಟಿದ್ದಂತೂ ನಿಜ. ‘ಕಾರ್ತಿಕ್ ನನ್ನ ಕೈ ಹಿಡಿದುಕೊಳ್ಳುವುದು ಕೆಟ್ಟ ಉದ್ದೇಶದಿಂದ ಎಂದು ನನಗೆ ಖಂಡಿತ ಅನಿಸುವುದಿಲ್ಲ. ಅವರು ಹಾಗೆ ಹಿಡಿದುಕೊಂಡಾಗ ನನಗೆ ಕಂಫರ್ಟ್‌ ಫೀಲ್ ಆಗಿದೆ’ ಎಂದೇ ನಮ್ರತಾ ಹಲವು ಸಲ ನೇರವಾಗಿ ಹೇಳಿದ್ದಾರೆ.
ಆದರೆ ಈ ಸಂಬಂಧಕ್ಕೆ ಬೇರೆಯದೇ ಆಯಾಮ ದೊರೆತಿದ್ದು ಈ ಸೀಸನ್‌ನ ಹಳೆಯ ಸ್ಪರ್ಧಿಗಳೂ ಮನೆಯೊಳಗೆ ಬಂದಾಗ. ಅದರಲ್ಲಿಯೂ ವಿಶೇಷವಾಗಿ ಸ್ನೇಹಿತ್ ಅವರು ಈ ಸಂಬಂಧಕ್ಕೆ ಬಳಿದ ಬಣ್ಣ, ಕೆಸರು ಎರೆಚುವ ಪ್ರಯತ್ನದಂತೆ ಕಂಡಿದ್ದು ಸುಳ್ಳಲ್ಲ. ಹೊರಗೇನೋ ಬಹಳ ಚರ್ಚೆ ನಡೆಯುತ್ತಿದೆ. ‘ಅಗ್ಲಿ’ಯಾಗಿ ಕಾಣಿಸುತ್ತಿದೆ ಎಂದು ಅವರು ಹೇಳಿದ ಮಾತು ನಮ್ರತಾ ಅವರನ್ನಷ್ಟೇ ಅಲ್ಲ, ಕಾರ್ತಿಕ್ ಅವರನ್ನೂ ದಿಕ್ಕೆಡಿಸಿತ್ತು. ಆದರೆ ವೀಕೆಂಡ್ ಎಪಿಸೋಡಿನಲ್ಲಿ ಸುದೀಪ್ ಅವರು ಸ್ನೇಹಿತ್ ಅವರನ್ನುಈ ವಿಷಯಕ್ಕೆ ತರಾಟೆ ತೆಗೆದುಕೊಂಡಿದ್ದಲ್ಲದೆ,ನಮ್ರತಾ ಕಾರ್ತಿಕ್ ಅವರಿಗೆ ಸಮಾಧಾನವನ್ನೂ ಮಾಡಿದ್ದರು.

ತಾವು ಅತಿಯಾಗಿನೆಚ್ಚಿಕೊಂಡಿದ್ದ ಸ್ನೇಹಿತ್ ಅವರ ಬಗ್ಗೆಯೇ ನಮ್ರತಾ, ‘ಅವರ ಹೆಸರು ತೆಗೆದುಕೊಳ್ಳುವಷ್ಟು ಯೋಗ್ಯ ವ್ಯಕ್ತಿ ಅವರಲ್ಲ. ಅವರ ಬಗ್ಗೆ ಮಾತಾಡುವುದು ಟೈಮ್ ವೇಷ್ಟ್’ ಎಂದು ಪರೋಕ್ಷವಾಗಿ ಹೇಳುವಷ್ಟು ಹಳಸಿದ್ದು ಸಂಬಂಧಗಳ ಬಗ್ಗೆ ಹೊಸ ಪಾಠವನ್ನೇ ಹೇಳುವಂತಿತ್ತು. ಸತತ ಹದಿನೈದು ವಾರಗಳ ಕಾಲ ಮನೆಯೊಳಗೆ ನಮ್ರತಾ ಆಡಿದ ಆಟ, ನಡೆದುಕೊಂಡ ರೀತಿ ಅವರಿಗೆ ಹಲವು ಅಭಿಮಾನಿಗಳನ್ನು ದೊರಕಿಸಿಕೊಟ್ಟಿರುವುದಂತೂ ನಿಜ. ಉತ್ತಮ, ಕ್ಯಾಪ್ಟನ್ಸಿ, ಟಾಸ್ಕ್ಗಳಲ್ಲಿ ಅತ್ಯುತ್ತಮ ಪರ್ಫಾರ್ಮೆನ್ಸ್ ಹೀಗೆ ಅವರು ನೆನಪುಳಿಯುವಂತ ಹಲವು ಗಳಿಗೆಗಳನ್ನು ಈ ಸೀಸನ್‌ಗೆ ಕೊಟ್ಟಿದ್ದಾರೆ. ಮನೆಯೊಳಗಿಂದ ಬದುಕಿನಲ್ಲಿ ಮರೆಯಾಗದಂಥ ಹಲವು ಸಂಬಂಧಗಳನ್ನು, ನೆನಪುಗಳನ್ನು ಹೊತ್ತೊಯ್ದಿದ್ದಾರೆ. ಅವರ ಅದ್ಭುತ ಪಯಣವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
MS Dhoni Bike Riding
ಕ್ರೀಡೆ37 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ57 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ1 hour ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ2 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ2 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ2 hours ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌