CM Siddaramaiah : ರಾಮನಿಂದ ಸೀತೆಯನ್ನು ದೂರ ಮಾಡಿದ ಬಿಜೆಪಿ; ಮತ್ತೆ ಜೈ ಶ್ರೀರಾಮ್‌ ಎಂದ ಸಿದ್ದರಾಮಯ್ಯ - Vistara News

ಕರ್ನಾಟಕ

CM Siddaramaiah : ರಾಮನಿಂದ ಸೀತೆಯನ್ನು ದೂರ ಮಾಡಿದ ಬಿಜೆಪಿ; ಮತ್ತೆ ಜೈ ಶ್ರೀರಾಮ್‌ ಎಂದ ಸಿದ್ದರಾಮಯ್ಯ

CM Siddaramaiah : ಬೆಂಗಳೂರಿನಲ್ಲಿ ದೇವಸ್ಥಾನ ಉದ್ಘಾಟನೆ ಮಾಡುವ ವೇಳೆ ಜೈ ಶ್ರೀರಾಮ್‌ ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಪಿರಿಯಾ ಪಟ್ಟಣದಲ್ಲೂ ಅದನ್ನೇ ರಿಪೀಟ್‌ ಮಾಡಿದ್ದಾರೆ. ನಾವು ಹಿಂದುಗಳಲ್ವಾ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Rama Mandir Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಿರಿಯಾಪಟ್ಟಣ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ (Rama Mandira) ಲೋಕಾರ್ಪಣೆಯ ದಿನವೇ ಬೆಂಗಳೂರಿನಲ್ಲಿ ರಾಮ ಮಂದಿರವೊಂದನ್ನು ಉದ್ಘಾಟನೆ ಮಾಡಿ ಜೈ ಶ್ರೀರಾಮ್‌ ಎಂದು ಘೋಷಣೆ (Jai Shri Rama Slogan) ಕೂಗಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇದೀಗ ಮತ್ತೆ ಜೈ ಶ್ರೀರಾಮ್‌ ಎಂದು ಘೋಷಣೆ ಮೊಳಗಿಸಿದ್ದಾರೆ. ಜತೆಗೆ ಬಿಜೆಪಿಯವರು ರಾಮನಿಂದ ಸೀತೆಯನ್ನು ಬೇರ್ಪಡಿಸಿದ್ದಾರೆ (BJP divided between Rama and Seetha) ಎಂದು ಹೇಳಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯವರು ಮಾತ್ರ ಹಿಂದುಗಳಾ? ನಾವ್ಯಾರೂ ಹಿಂದುಗಳಲ್ವಾ ಎಂಬ ಪ್ರಶ್ನೆಯನ್ನು ಮುಂದಿಟ್ಟರು.

ʻʻಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ.
ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ, ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವ ?
ರಾಮನ ಭಜನೆ ಮಾಡಲ್ವ? ಧನುರ್ ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆʼʼ ಎಂದು ಹೇಳಿದ ಸಿದ್ದರಾಮಯ್ಯ ಇಲ್ಲೂ ಜೈ ಶ್ರೀರಾಮ್‌ ಘೋಷಣೆ ಮೊಳಗಿಸಿದರು.

ನಮ್ಮ ಕುಟುಂಬದ ಎಲ್ಲರ ಹೆಸರಲ್ಲೂ ರಾಮನಿದ್ದಾನೆ

ʻʻನನ್ನ ಹೆಸರು ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ. ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡʼʼ ಎಂದು ಹೇಳಿದ ಅವರು ರಾಮನ ಹೆಸರನ್ನೇ ಇಟ್ಟುಕೊಂಡಿರುವ ನಾವ್ಯಾರೂ ಹಿಂದೂಗಳಲ್ವಾʼʼ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: CM Siddaramaiah: ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಟ್ಟ ಮೋದಿ: ಸಿದ್ದರಾಮಯ್ಯ ಲೇವಡಿ

ರಾಮನನ್ನು ಸೀತೆಯಿಂದ ಬೇರ್ಪಡಿಸಿದ್ದಾರೆ ಎಂದ ಸಿದ್ದರಾಮಯ್ಯ

ʻʻನಾವು ಮಹಾತ್ಮ ಗಾಂಧಿ ಹೇಳುವ ರಾಮನ ಮೇಲೆ ನಂಬಿಕೆ ಇಟ್ಟಿದ್ದೇವೆ. ರಘುಪತಿ ರಾಘವ ರಾಜಾರಾಮ್, ಪತೀತ‌ ಪಾವನ ಸೀತಾರಾಮ್ ಅಂತ ಹೇಳಿದ್ದಾರೆ. ನಾವು ಪೂಜಿಸುವ ರಾಮನ ಜತೆಗೆ ಸೀತೆ, ಲಕ್ಷ್ಮಣ, ಹನುಮಂತ ಇರುತ್ತಾರೆ. ಅದಕ್ಕೆ ನಾವು ಸೀತಾರಾಮ ಅಂತ ಕರೆಯುತ್ತೇವೆ. ಬಿಜೆಪಿಯವರು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ.
ಆದ್ದರಿಂದಲೇ ಸೀತೆ, ಲಕ್ಷ್ಮಣ, ಹನುಮಂತನನ್ನು ಬೇರ್ಪಡಿಸಿದ್ದಾರೆ. ರಾಮ‌ನನ್ನು ಮಾತ್ರ ಉಳಿಸಿಕೊಂಡಿದ್ದಾರೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ಏನೂ ಕೆಲಸ ಮಾಡದ ನರೇಂದ್ರ ಮೋದಿ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ʻʻನರೇಂದ್ರ ಮೋದಿ ಕೆಲಸ ಮಾಡಿಲ್ಲ. ಎರಡು ಕೋಟಿ ಉದ್ಯೋಗ ಕೊಡಿಸುತ್ತೇನೆ ಎಂದು ಹೇಳಿದವರು ಕೆಲಸ ಕೊಡಿಸಲಿಲ್ಲ. ಪೆಟ್ರೋಲ್, ಡೀಸೆಲ್, ಗೊಬ್ಬರದ ಬೆಲೆ ಬಗ್ಗೆ ಅವರು ಮಾತನಾಡುವುದಿಲ್ಲ. ಈಗ ರಾಮ ರಾಮ ಅಂತಿದ್ದಾರೆ. ಜನ ಬುದ್ಧಿವಂತರಾಗಿದ್ದಾರೆ., ಎಲ್ಲವೂ ಅರ್ಥ ಆಗುತ್ತದೆʼʼ ಎಂದು ‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Self Harming Attempt: ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು.

VISTARANEWS.COM


on

self harming attempt
Koo

ರಾಯಚೂರು: ರಾಯಚೂರಲ್ಲಿ (Raichur news) ಅಕ್ಷರ ದಾಸೋಹ (Akshra dasoha) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ (Self Harming Attempt) ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಭಾರಿ ಸುದ್ದಿಯಾಗಿದೆ. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಸಿಡಿಲಿಗೆ ಬಾಲಕ, ಮಹಿಳೆ ಬಲಿ

ಗದಗ/ಕೊಪ್ಪಳ: ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Continue Reading

ಕ್ರೈಂ

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Love Sex Dhoka: ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು.

VISTARANEWS.COM


on

love sex dhoka koppala
Koo

ಕೊಪ್ಪಳ: ಕೊಪ್ಪಳದಲ್ಲೊಂದು ಲವ್ ಸೆಕ್ಸ್ ದೋಖಾ (love dhoka) ಪ್ರಕರಣ (Fraud Case) ನಡೆದಿದೆ. ಪ್ರೀತಿಸುವ ನಾಟಕವಾಡಿ ಅತ್ಯಾಚಾರ (Physical abuse) ಎಸಗಿ ಕೈ ಕೊಟ್ಟ ಯುವಕನನ್ನು ಬಂಧಿಸಲು ಆಗ್ರಹಿಸಿ ಯುವತಿಯೊಬ್ಬಳು ಪೊಲೀಸ್‌ ಠಾಣೆ ಮುಂದೆ ಧರಣಿ ಕೂತಿದ್ದಾಳೆ.

ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಮೊಸ ಮಾಡಿದ ಯುವಕನ ವಿರುದ್ಧ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಾದರೂ ಯುವಕನನ್ನು ಆರೆಸ್ಟ್ ಮಾಡಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾರಟಗಿ ಪೊಲೀಸ್ ಠಾಣೆ ಮುಂದೆ ಯುವತಿ ಮತ್ತು ಆಕೆಯ ಕುಟುಂಬ ಧರಣಿ ಕುಳಿತಿವೆ.

ಯುವಕ ಹಾಗೂ ಯುವತಿ ಕಾಲೇಜ್‌ಮೇಟ್‌ ಆಗಿದ್ದರು ಎಂದು ತಿಳಿದುಬಂದಿದೆ. ಪ್ರೀತಿಸುವ ನಾಟಕವಾಡಿ ಸತತ ಎರಡು ವರ್ಷ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮದುವೆಯಾಗುವ ಆಮಿಷವೊಡ್ಡಿ ಮೋಸ ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ. ನನ್ನ ವಿಡಿಯೋ ಇಟ್ಟುಕೊಂಡು ಮತ್ತೆ ಮತ್ತೆ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

ಗದಗ : ಕ್ಷುಲ್ಲಕ ಕಾರಣವೊಂದಕ್ಕೆ ಮನೆಗಳಿಗೆ ನುಗ್ಗಿ ಮಹಿಳೆಯರು ಸೇರಿದಂತೆ ಮನೆ ಮಂದಿಗೆಲ್ಲ ಡೊಣ್ಣೆ, ಬಡಿಗೆಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದು ದಾಖಲಾಗಿದೆ. ಗದಗ (Gadag News) ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡಾದಲ್ಲಿ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು. ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿಸಿಕೊಳ್ಳಲಾಗಿತ್ತು. ಇದೀಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ ಐವರು ಜನರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

Karnataka Weather forecast : ಒಳನಾಡು, ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ (Heavy Rain news) ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 7 ರಿಂದ 10ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ. ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಯೆಲ್ಲೋ ಅಲರ್ಟ್ ಘೋಷಣೆ:

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಐದು ದಿನಗಳು ಸಮುದ್ರಕ್ಕೆ ಇಳಿಯುವಂತಿಲ್ಲ

ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Mysore News: ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Shri Bhandara Keri Mutt Shri Vidyesh Theertha Swamiji ashirvachan
Koo

ಮೈಸೂರು: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಮತ್ತು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದಲ್ಲಿ ಗುರುವಾರ ಆಯೋಜಿಸಿದ್ದ ವಿದ್ವತ್ ಸಭೆಯ ಸಾನ್ನಿಧ್ಯ ವಹಿಸಿ, ಶ್ರೀಗಳು ಆಶೀರ್ವಚನ ನೀಡಿದರು.

ಕಲಿಕೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ ತೃಪ್ತರಾಗಬಾರದು. ವಿವಿಧ ಗ್ರಂಥಗಳ ಅಧ್ಯಯನ, ಅವಲೋಕನ, ಪರಾಮರ್ಶನ ಮತ್ತು ಚಿಂತನೆಗಳಿಂದ ಜ್ಞಾನವನ್ನು ವಿಸ್ತಾರ ಮಾಡಿಕೊಳ್ಳುತ್ತಿರಬೇಕು. ಕೇವಲ ಪರೀಕ್ಷೆಗಾಗಿ ಓದುವುದು ಒಂದು ಹಂತದ ಸಾಧನೆ. ಆದರೆ ಸುಧಾ ಸೇರಿ ಆಚಾರ್ಯ ಮಧ್ವರ ಗ್ರಂಥಗಳ ಅಧ್ಯಯನ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಬೇಕು. ಆಚಾರ್ಯ ಮಧ್ವರು ನೀಡಿದ ಪ್ರತಿಯೊಂದು ಸಂದೇಶವೂ ಎಲ್ಲ ದೇಶ ಕಾಲಕ್ಕೆ ದಿಕ್ಸೂಚಿಯಾಗಿವೆ ಎಂದರು.

ಇದನ್ನೂ ಓದಿ: Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ತಿಳಿಸಿದರು.

ಸೋಸಲೆ ಶ್ರೀ ವಿದ್ಯಾ ಶ್ರೀಶ ತೀರ್ಥ ಸ್ವಾಮೀಜಿಯವರು ಜ್ಞಾನ ಪ್ರಸರಣ ಮತ್ತು ಶಾಸ್ತ್ರ ವಿದ್ಯೆ ಕಲಿಕೆ ನಿಟ್ಟಿನಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ನೂರಾರು ಜನರಿಗೆ ಪಾಠ ಹೇಳಿರುವ ಅವರು ಈ ಬಾರಿ ನಾಲ್ಕು ವಿದ್ಯಾರ್ಥಿಗಳನ್ನು ಸುಧಾ ಪಂಡಿತರನ್ನಾಗಿಸಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುವಲ್ಲಿ ಅಹರ್ನಿಶಿ ಶ್ರಮಿಸಿರುವುದು ಶ್ಲಾಘನೀಯ ಎಂದು ಶ್ರೀಗಳು ತಿಳಿಸಿದರು.

ಎತ್ತರಕ್ಕೆ ಬೆಳೆಯಿರಿ

ಬೆಂಗಳೂರಿನ ಭುವನಗಿರಿ ಆಶ್ರಮದ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಸಮುದ್ರದಷ್ಟು ಆಳಕ್ಕೆ ಪರ್ವತದಷ್ಟು ಎತ್ತರಕ್ಕೆ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳ ಕೀರ್ತಿ ಬೆಳಗಲಿ ಎಂದು ಹೇಳಿದರು.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿ, ಜ್ಞಾನಕ್ಕೆ ಸಮನಾದದು ಜಗತ್ತಿನಲ್ಲಿ ಯಾವುದೂ ಇಲ್ಲ . ಹಾಗಾಗಿ ವಿದ್ವತ್ತನ್ನು ಪಡೆಯಲು ಶ್ರಮ ಹಾಕಿದರೆ ಭವಿಷ್ಯದಲ್ಲಿ ಸುಖ ಸಂಪತ್ತು ಅರಸಿ ಬರುತ್ತವೆ ಎಂದರು.

ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ವಿದ್ಯಾರ್ಥಿಗಳ ಶಾಸ್ತ್ರ ಜ್ಞಾನ ಪರೀಕ್ಷೆ ಮಾಡಿದರು.

ಪ್ರಣವ ಆಚಾರ್ಯರಿಂದ ಸಮರ್ಥ ಉತ್ತರ

ವಿದ್ಯಾರ್ಥಿ ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯ ಸುಧಾ ತಾತ್ಪರ್ಯ ಚಂದ್ರಿಕಾ ಮತ್ತು ನ್ಯಾಯಾಮೃತ ಗ್ರಂಥಗಳ ಮೇಲಿನ ಪ್ರಶ್ನೆಗಳಿಗೆ ಸಮರ್ಥ ಉತ್ತರವನ್ನು ನೀಡಿ ಗಮನ ಸೆಳೆದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸ ಹರಿದಾಸ ಭಟ್, ಮುಂಬೈ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯ, ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ರಂಗಾಚಾರ್ಯ, ಪ್ರಾಚಾರ್ಯ ವಿದ್ಯಾಧೀಶ ಆಚಾರ್ಯ ಗುತ್ತಲ, ಪಂಡಿತ ಪ್ರಹ್ಲಾದಾಚಾರ್ಯ, ಮಾತರಿಶ್ವಾಚಾರ್ಯ, ಡಿ.ಪಿ. ಅನಂತಾಚಾರ್ಯ, ಡಿ.ಪಿ. ಮಧುಸೂದ‌ನಾಚಾರ್ಯ. ಡಾ. ಶ್ರೀನಿಧಿ ಪ್ಯಾಟಿ ಇದ್ದರು.

Continue Reading
Advertisement
Election Results 2024
Lok Sabha Election 202414 mins ago

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

self harming attempt
ಕ್ರೈಂ15 mins ago

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Lok Sabha Election 2024
ರಾಜಕೀಯ17 mins ago

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

Lok Sabha Election 2024
ರಾಜಕೀಯ25 mins ago

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

Viral Video
ವೈರಲ್ ನ್ಯೂಸ್27 mins ago

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

Manipur violence
ದೇಶ34 mins ago

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

love sex dhoka koppala
ಕ್ರೈಂ45 mins ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

karnataka weather Forecast
ಮಳೆ2 hours ago

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

pulses benefits
ಆರೋಗ್ಯ2 hours ago

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

dry fruits
ಆಹಾರ/ಅಡುಗೆ3 hours ago

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌