Karnataka Weather: ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌! ಎಲ್ಲೆಲ್ಲಿ ಇರಲಿದೆ ಭಾರಿ ಚಳಿ? - Vistara News

ಉಡುಪಿ

Karnataka Weather: ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌! ಎಲ್ಲೆಲ್ಲಿ ಇರಲಿದೆ ಭಾರಿ ಚಳಿ?

Karnataka Weather: ಬೆಳಗಾವಿಯಲ್ಲಿ ಜನವರಿ 28ರಿಂದ 31 ರವರೆಗಿನ ನಾಲ್ಕು ದಿನ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ. ಅಂದರೆ ಬೆಳಗಿನ ವೇಳೆ ಬಿಸಿಲು ಹೆಚ್ಚಾಗಿ ಇರಲಿದ್ದು, ಮುಂಜಾನೆ, ಸಂಜೆ ಮತ್ತು ರಾತ್ರಿ ವೇಳೆ ಚಳಿಯು ಪ್ರಭಾವಳಿ ಬೀರಲಿದೆ. ಮುಂಜಾನೆ ಕೆಲವು ಕಡೆ ದಟ್ಟ ಮಂಜು ಆವರಿಸಬಹುದು ಎಂದು ಅಂದಾಜಿಸಲಾಗಿದೆ.

VISTARANEWS.COM


on

Karnataka cold Weather with girl
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಹಲವೆಡೆ ಶುಕ್ರವಾರ ಒಣ ಹವೆ ವಾತಾವರಣ ಇರಲಿದೆ. ಆದರೆ, ಚಳಿ ಸಹ ಅದೇ ಪ್ರಮಾಣದಲ್ಲಿ ಇರಲಿದೆ. ಉತ್ತರ ಕರ್ನಾಟಕ (Uttara Karnataka) ಭಾಗದ ಕೆಲವು ಕಡೆ ಭಾರಿ ಪ್ರಮಾಣದಲ್ಲಿ ಚಳಿ ಇರಲಿದೆ ಎಂದು ಹೇಳಲಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಬೆಳಗಾವಿಯಲ್ಲಿ ಶುಕ್ರವಾರ ಮತ್ತು ಶನಿವಾರ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ. ಅಂದರೆ, ಈ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಚಳಿ ದಾಖಲಾಗಲಿದೆ ಎಂದು ಎಚ್ಚರಿಕೆ ನೀಡಿದೆ.

Belagavi weather report January 26
ಬೆಳಗಾವಿಯಲ್ಲಿ ಮುಂದಿನ ಒಂದು ವಾರದ ಹವಾಮಾನ ಹೇಗಿರಲಿದೆ ಎಂಬ ವಿವರ ಇಲ್ಲಿದೆ

ಬೆಳಗಾವಿಯಲ್ಲಿ ಜನವರಿ 28ರಿಂದ 31 ರವರೆಗಿನ ನಾಲ್ಕು ದಿನ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ. ಅಂದರೆ ಬೆಳಗಿನ ವೇಳೆ ಬಿಸಿಲು ಹೆಚ್ಚಾಗಿ ಇರಲಿದ್ದು, ಮುಂಜಾನೆ, ಸಂಜೆ ಮತ್ತು ರಾತ್ರಿ ವೇಳೆ ಚಳಿಯು ಪ್ರಭಾವಳಿ ಬೀರಲಿದೆ. ಮುಂಜಾನೆ ಕೆಲವು ಕಡೆ ದಟ್ಟ ಮಂಜು ಆವರಿಸಬಹುದು ಎಂದು ಅಂದಾಜಿಸಲಾಗಿದೆ.

ಕರಾವಳಿಯಲ್ಲಿ ಬಿಸಿಲು ಹೆಚ್ಚು ಮತ್ತು ಚಳಿ ಕಡಿಮೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಚಳಿ ಪ್ರಮಾಣ ಕಡಿಮೆ ಇದ್ದು, ಬೆಳಗ್ಗೆ ಬಿಸಿಲಿನ ತೀವ್ರತೆ ಇರಲಿದೆ. ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಮಿಶ್ರ ವಾತಾವರಣ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಅಲ್ಪ ಮಟ್ಟಿಗೆ ಚಳಿ ಇರಲಿದೆ. ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಚಳಿಯ ವಾತಾವರಣ ಇರಲಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 32 ಡಿ.ಸೆ- 18 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 11 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರವಾಸ

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

ಆಧ್ಯಾತ್ಮಿಕತೆ, ನೈಸರ್ಗಿಕ ಸೌಂದರ್ಯ ಮತ್ತು ಸಾಂಸ್ಕೃತಿಕ ಅನುಭವಗಳ ಪರಿಪೂರ್ಣ ಮಿಶ್ರಣವನ್ನು ನೀಡುವ ಉಡುಪಿ ಸ್ಮರಣೀಯ ಪ್ರವಾಸಕ್ಕೆ (Udupi Tour) ಸೂಕ್ತವಾದ ತಾಣವಾಗಿದೆ. ಸಾಹಸ, ವಿಶ್ರಾಂತಿ ಅಥವಾ ಆಧ್ಯಾತ್ಮಿಕತೆಯ ಅನುಭವದಲ್ಲಿ ಮಿಂದೇಳಲು ಬಯಸಿದರೆ ಇಲ್ಲಿಗೊಮ್ಮೆ ಭೇಟಿ ನೀಡಲು ಮರೆಯದಿರಿ.

VISTARANEWS.COM


on

By

Udupi Tour
Koo

ಕೃಷ್ಣನ ನಾಡು ಉಡುಪಿಯಲ್ಲಿ ಪ್ರವಾಸಿಗರನ್ನು (Udupi Tour) ಸೆಳೆಯುವ ಹಲವಾರು ತಾಣಗಳಿವೆ. ಸ್ನೇಹಿತರು, ಬಂಧುಗಳೊಂದಿಗೆ ಉಡುಪಿಗೆ ಭೇಟಿ ನೀಡಿದಾಗ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆ, ಪಾಕಶಾಲೆಯ ಸವಿರುಚಿ, ನಯನ ಮನೋಹರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಮರೆಯದಿರಿ.

ಕರ್ನಾಟಕದ (karnataka) ಕರಾವಳಿ ಪ್ರದೇಶದಲ್ಲಿ ( coastal region) ನೆಲೆಸಿರುವ ಉಡುಪಿಯು ಹಲವಾರು ಸುಂದರ ಅನುಭವಗಳನ್ನು ನೀಡುತ್ತದೆ. ಸ್ಮರಣೀಯ ಪ್ರವಾಸಕ್ಕೆ ಇದೊಂದು ಸೂಕ್ತ ತಾಣವಾಗಿದೆ. ಪ್ರಾಚೀನ ದೇವಾಲಯಗಳಿಂದ (temples) ಹಿಡಿದು ಸುಂದರ ಕಡಲತೀರಗಳವರೆಗೆ (beach).. ಉಡುಪಿಯಲ್ಲಿ ಭೇಟಿ ನೀಡಬಹುದಾದ ಕೆಲವು ಅತ್ಯುತ್ತಮ ತಾಣಗಳಿವೆ.


ಶ್ರೀ ಕೃಷ್ಣ ದೇವಾಲಯ

ಉಡುಪಿಯ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೃಷ್ಣ ದೇವಸ್ಥಾನದಿಂದ ಪ್ರವಾಸವನ್ನು ಆರಂಭಿಸಬಹುದು. ಭಗವಾನ್ ಕೃಷ್ಣನಿಗೆ ಸಮರ್ಪಿತವಾಗಿರುವ ಈ ದೇವಾಲಯವು ವಿಶಿಷ್ಟವಾದ ವಾಸ್ತುಶಿಲ್ಪ ಮತ್ತು ಧಾರ್ಮಿಕ ಮಹತ್ವಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ಹಲವು ಆಚರಣೆಗಳು ಯಾತ್ರಿಕರನ್ನು ಸಮ್ಮೋಹನಗೊಳಿಸುವುದು.


ಮಲ್ಪೆ ಬೀಚ್

ವಿಶ್ರಾಂತಿ ಬಯಸಿದರೆ ಮಲ್ಪೆ ಬೀಚ್‌ ಗಿಂತ ಉತ್ತಮ ತಾಣ ಬೇರೆ ಇಲ್ಲ. ಚಿನ್ನದ ಮರಳು ಮತ್ತು ಆಕಾಶ ನೀಲಿ ನೀರಿನ ಸುಂದರವಾದ ದೃಶ್ಯವನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು. ಬಿಸಿಲಿನಲ್ಲಿ ಬೇಯುತ್ತಿರಲಿ, ದಡದಲ್ಲಿ ಆರಾಮವಾಗಿ ಅಡ್ಡಾಡುತ್ತಿರಲಿ ಅಥವಾ ಪ್ಯಾರಾಸೈಲಿಂಗ್ ಮತ್ತು ಜೆಟ್-ಸ್ಕೀಯಿಂಗ್‌ನಂತಹ ರೋಮಾಂಚಕ ಜಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬಹುದು.


ಸೇಂಟ್ ಮೇರಿಸ್ ದ್ವೀಪ

ಮಲ್ಪೆ ಬೀಚ್‌ನಿಂದ ಸೇಂಟ್ ಮೇರಿಸ್ ದ್ವೀಪಕ್ಕೆ ಚಿಕ್ಕದಾದ ದೋಣಿ ವಿಹಾರವನ್ನು ನಡೆಸಬಹುದು. ಇದು ವಿಶಿಷ್ಟವಾದ ಕಲ್ಲಿನ ರಚನೆಗಳು ಮತ್ತು ಪ್ರಾಚೀನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.


ಮಣಿಪಾಲ

ಶೈಕ್ಷಣಿಕ ಸಂಸ್ಥೆಗಳು, ಉತ್ಸಾಹಭರಿತ ಕೆಫೆಗಳು ಮತ್ತು ಸಾಂಸ್ಕೃತಿಕ ಆಕರ್ಷಣೆಗಳಿಗೆ ನೆಲೆಯಾಗಿರುವ ಮಣಿಪಾಲದ ರೋಮಾಂಚಕ ಪಟ್ಟಣವನ್ನು ಸುತ್ತಾಡಬಹುದು. ಇಲ್ಲಿನ ಮಣಿಪಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್, ಹೆರಿಟೇಜ್ ವಿಲೇಜ್, ತಾರಾಲಯ ಸೇರಿದಂತೆ ಪ್ರವಾಸಿಗರು ಇಷ್ಟಪಡುವ ಇನ್ನೂ ಅನೇಕ ತಾಣಗಳು ಇಲ್ಲಿವೆ. ಸ್ಥಳೀಯ ತಿನಿಸುಗಳಲ್ಲಿ ರುಚಿಕರವಾದ ಬೀದಿ ಆಹಾರವನ್ನು ಇಲ್ಲಿ ಸವಿಯಬಹುದು.


ಪಡುಕೆರೆ ಬೀಚ್

ಪಡುಕೆರೆ ಬೀಚ್‌ನಲ್ಲಿ ನಗರದ ಜೀವನದ ಜಂಜಾಟದಿಂದ ದೂರವಾಗಿ ಪ್ರಶಾಂತ ಸಮುದ್ರ ತೀರದಲ್ಲಿ ಸುತ್ತಾಡಬಹುದು. ಕಡಲ ತೀರವಾಸಿಗಳ ಜನ ಜೀವನವನ್ನು ಕಾಣಬಹುದು. ಶಾಂತವಾದ ವಾತಾವರಣ ಮತ್ತು ವಿಹಂಗಮ ನೋಟಗಳಿಗೆ ಹೆಸರುವಾಸಿಯಾದ ಪ್ರಶಾಂತ ಕರಾವಳಿ ಇದನ್ನು ಸ್ವರ್ಗ ಮಾಡಿದೆ.


ಆನೆಗುಡ್ಡೆ ವಿನಾಯಕ ದೇವಸ್ಥಾನ

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿ. ಹಚ್ಚ ಹಸಿರಿನ ಬೆಟ್ಟಗಳ ನಡುವೆ ನೆಲೆಸಿರುವ ಈ ಪವಿತ್ರ ಕ್ಷೇತ್ರದಲ್ಲಿ ದೇವಾಲಯದ ಸಂಕೀರ್ಣ ವಾಸ್ತುಶೈಲಿಯನ್ನು ಗಮನಿಸಿ. ಹತ್ತಿರದಲ್ಲೇ ಇರುವ ನೀರಿನ ನಡುವೆ ನೆಲೆಯಾಗಿರುವ ಈಶ್ವರ ದೇವಾಲಯಕ್ಕೆ ಭೇಟಿ ನೀಡುವುದನ್ನು ತಪ್ಪಿಸಿಕೊಳ್ಳಬೇಡಿ.


ಕೂಡ್ಲು ಜಲಪಾತ

ಪಶ್ಚಿಮ ಘಟ್ಟಗಳಲ್ಲಿ ಅಡಗಿರುವ ಗುಪ್ತ ರತ್ನವಾದ ಕೂಡ್ಲು ಜಲಪಾತವನ್ನು ತಲುಪಲು ಹಸಿರು ಕಾಡುಗಳ ಮೂಲಕ ರಮಣೀಯವಾದ ಚಾರಣವನ್ನು ಪ್ರಾರಂಭಿಸಿ. ಹಸಿರು ಎಲೆಗಳು ಮತ್ತು ಚಿಲಿಪಿಲಿ ಹಕ್ಕಿಗಳಿಂದ ಸುತ್ತುವರೆದಿರುವ ನೀರಿನ ಸೌಂದರ್ಯ ನಿಮ್ಮ ತನುಮನವನ್ನು ತಣಿಸುವ ಅನುಭವ ಕೊಡುವುದು.


ಕಾಪು ಬೀಚ್

ಕಾಪು ಬೀಚ್‌ನ ಪ್ರಶಾಂತ ತೀರದಲ್ಲಿ ಪ್ರಾಚೀನ ಮರಳುಗಳು ಅರೇಬಿಯನ್ ಸಮುದ್ರದ ಶಾಂತ ಅಲೆಗಳನ್ನು ಸಂಧಿಸುತ್ತವೆ. ಸ್ನೇಹಿತರೊಂದಿಗೆ ವಿರಾಮದ ಪಿಕ್ನಿಕ್ ಅನ್ನು ಇಲ್ಲಿ ಆನಂದಿಸಬಹುದು. ಕಡಲತೀರದ ಮೇಲೆ ಮರಳು ಕೋಟೆಗಳನ್ನು ನಿರ್ಮಿಸಿ ಮತ್ತು ಕರಾವಳಿಯ ಉದ್ದಕ್ಕೂ ಇರುವ ಸ್ಥಳೀಯ ತಿನಿಸುಗಳಲ್ಲಿ ತಾಜಾ ಸಮುದ್ರಾಹಾರ ಭಕ್ಷ್ಯಗಳನ್ನು ಸವಿಯಬಹುದು.


ಅಂಬಲಪಾಡಿ ಮಹಾಕಾಳಿ ದೇವಸ್ಥಾನ

ದೈವಿಕ ಸೆಳವು ಕೊಡುವ ಅಂಬಲಪಾಡಿ ಮಹಾಕಾಳಿ ದೇವಾಲಯ ಸಾಕಷ್ಟು ಪ್ರವಾಸಿಗರನ್ನು ತನ್ನತ್ತ ಸೆಳೆಯುವುದು. ದೇವಾಲಯದ ವಾಸ್ತುಶಿಲ್ಪದ ಭವ್ಯತೆಗೆ ಸಾಕ್ಷಿಯಾಗಿದೆ. ಇಲ್ಲಿನ ಉತ್ಸವಗಳು ರೋಮಾಂಚನ ಉಂಟು ಮಾಡುತ್ತದೆ.


ಇದನ್ನೂ ಓದಿ: Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

ಉಡುಪಿ ಪಾರಂಪರಿಕ ಗ್ರಾಮ

ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಸಾಂಸ್ಕೃತಿಕ ಎನ್‌ಕ್ಲೇವ್ ಉಡುಪಿ ಹೆರಿಟೇಜ್ ವಿಲೇಜ್‌ ಗೆ ಭೇಟಿ ನೀಡಲು ಸಮಯ ಮೀಸಲಿಡಿ. ಪಾರಂಪರಿಕ ಮನೆಗಳಿಂದ ಕೂಡಿದ ವಿಲಕ್ಷಣ ಬೀದಿಗಳಲ್ಲಿ ಸ್ಥಳೀಯ ಕುಶಲಕರ್ಮಿಗಳ ಕಾರ್ಯಾಗಾರಗಳನ್ನು ಕಾಣಬಹುದು.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ | Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ 23ರಂದು ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ (40-50 ಕಿ.ಮೀ) ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಮೇ 24ರಂದು ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಾಪಮಾನದ ಮುನ್ಸೂಚನೆ

ಮೇ 23 ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಲಿಯನ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಂಟೆಗೆ 40 ಕಿ.ಮೀ. ನಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನು ಓದಿ | Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
bulldozer justice
ಪ್ರಮುಖ ಸುದ್ದಿ15 mins ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ31 mins ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ34 mins ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Road Accident
ಪ್ರಮುಖ ಸುದ್ದಿ53 mins ago

Road Accident : ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಮಂದಿಗೆ ಗಾಯ

koti kannada movie
ಪ್ರಮುಖ ಸುದ್ದಿ1 hour ago

koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ranebennuru road accident
ಹಾವೇರಿ1 hour ago

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Udho Udho Shri Renuka Yellamma
ಪ್ರಮುಖ ಸುದ್ದಿ1 hour ago

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

superstar rajnikanth
ಪ್ರಮುಖ ಸುದ್ದಿ2 hours ago

Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

thunderbolt
ಚಿಕ್ಕೋಡಿ2 hours ago

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Fruit Juice Side Effects
ಆರೋಗ್ಯ2 hours ago

Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌