BBK Season 10: ʻಬಿಗ್‌ ಬಾಸ್‌ʼ ಗೆದ್ದವರಿಗೆ 50 ಲಕ್ಷ ರೂ. ಜತೆ ಏನೆಲ್ಲ ಗಿಫ್ಟ್‌ ಸಿಗಲಿದೆ? - Vistara News

ಬಿಗ್ ಬಾಸ್

BBK Season 10: ʻಬಿಗ್‌ ಬಾಸ್‌ʼ ಗೆದ್ದವರಿಗೆ 50 ಲಕ್ಷ ರೂ. ಜತೆ ಏನೆಲ್ಲ ಗಿಫ್ಟ್‌ ಸಿಗಲಿದೆ?

BBK Season 10:  ಕಳೆದ ವಾರ ಇಶಾನಿ, ಭಾಗ್ಯಶ್ರೀ, ನೀತು, ಮೈಕೆಲ್ ಅಜಯ್, ಸಿರಿ, ಸ್ನೇಹಿತ್ ದೊಡ್ಮನೆಗೆ ಭೇಟಿ ನೀಡಿ ಮನೆಗೆ ಸ್ಪರ್ಧಿಗಳೊಂದಿಗೆ ಮಾತು ಕತೆ ನಡೆಸಿದ್ದರು. ಇದಾದ ಬಳಿಕ ಕೆಲವು ಸ್ಪರ್ಧಿಗಳ ವರ್ತನೆಗೆ ಕಿಚ್ಚ ಕೂಡ ಗರಂ ಆಗಿದ್ದರು.

VISTARANEWS.COM


on

what will winner get at grand finale prize money BBK Season 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಬಿಗ್‌ ಬಾಸ್‌ ಕನ್ನಡʼ (BBK Season 10) ಫಿನಾಲೆಗೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಆರು ಸ್ಪರ್ಧಿಗಳು ಫಿನಾಲೆಗೆ ತಲುಪಿದ್ದಾರೆ. ಸಂಗೀತಾ, ತುಕಾಲಿ, ವರ್ತೂರ್‌, ಪ್ರತಾಪ್‌, ವಿನಯ್‌, ಕಾರ್ತಿಕ್‌ ಅವರಲ್ಲಿ ಯಾರು ಟ್ರೋಫಿ ಎತ್ತಿ ಹಿಡಿಯುತ್ತಾರೆ ಎಂಬುದು ವೀಕ್ಷಕರಲ್ಲಿ ಇದೆ ಕುತೂಹಲ. ನಾಲ್ಕು ತಿಂಗಳ ಕಾಲ ನಡೆದ ಈ ಕಾರ್ಯಕ್ರಮದ ವಿಜೇತರನ್ನು ಗ್ರ್ಯಾಂಡ್ ಫಿನಾಲೆಯಲ್ಲಿ ಭಾನುವಾರ ಘೋಷಿಸಲಾಗುತ್ತದೆ.

ಹಲವು ವಿವಾದಗಳಿಂದ ಈ ಬಾರಿ ʻಬಿಗ್‌ ಬಾಸ್‌ʼ ಕನ್ನಡ ಸಾಕಷ್ಟು ಸುದ್ದಿಯಲ್ಲಿತ್ತು. ಇದೀಗ ವಿಜೇತರಿಗೆ ಬಹುಮಾನ ಏನೆಲ್ಲ ಇರಬಹುದು ಎಂಬುದು ವೀಕ್ಷಕರಿಗೆ ಕುತೂಹಲ. ಬಿಗ್ ಬಾಸ್‌ನ ಟ್ರೋಫಿಯ ಹೊರತಾಗಿ, ಬಿಗ್ ಬಾಸ್ 10 ವಿಜೇತರು ನಗದು ಬಹುಮಾನದ ಹಣದ ಜತೆಗೆ ಹೊಚ್ಚ ಹೊಸ ಕಾರನ್ನು ಸಹ ಪಡೆಯುತ್ತಾರೆ. ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿಜೇತರಿಗೆ ಶೋ ಗೆದ್ದ ನಂತರ 50 ಲಕ್ಷ ರೂಪಾಯಿ, ಅದ್ದೂರಿ ಕಾರು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಹುಮಾನವಾಗಿ ನೀಡಲಾಗುತ್ತಿದೆ.

ಕಳೆದ ವಾರ ಇಶಾನಿ, ಭಾಗ್ಯಶ್ರೀ, ನೀತು, ಮೈಕೆಲ್ ಅಜಯ್, ಸಿರಿ, ಸ್ನೇಹಿತ್ ದೊಡ್ಮನೆಗೆ ಭೇಟಿ ನೀಡಿ ಮನೆಗೆ ಸ್ಪರ್ಧಿಗಳೊಂದಿಗೆ ಮಾತು ಕತೆ ನಡೆಸಿದ್ದರು. ಇದಾದ ಬಳಿಕ ಕೆಲವು ಸ್ಪರ್ಧಿಗಳ ವರ್ತನೆಗೆ ಕಿಚ್ಚ ಕೂಡ ಗರಂ ಆಗಿದ್ದರು. ಈ ವಾರದ ಆರಂಭದಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮತ್ತು ಜಾಹ್ನವಿ ಬಿಗ್ ಬಾಸ್ ನ್ಯೂಸ್ ವರದಿಗಾರರಾಗಿ ಕಾರ್ಯಕ್ರಮಕ್ಕೆ ಬಂದಿದ್ದರು.

ಇದನ್ನೂ ಓದಿ: BBK Season 10: ʻಬಿಗ್ ಬಾಸ್ʼ ಗ್ರ್ಯಾಂಡ್‌ ಫಿನಾಲೆ; ಇಂದು ಎಷ್ಟು ಮಂದಿ ಎಲಿಮಿನೇಟ್‌ ಆಗ್ತಾರೆ?

ಇದೀಗ ಕಿರುತೆರೆಯ ಅತಿದೊಡ್ಡ ಕಾರ್ಯಕ್ರಮ ಎಂದೇ ಕರೆಸಿಕೊಂಡ ಬಿಗ್‌ ಬಾಸ್‌ ಅಂತ್ಯಗೊಳ್ಳುತ್ತಿದೆ. ಈಗಾಗಲೇ ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ವೋಟ್ ಮಾಡಿದ್ದು, ಕಾತುರದಿಂದ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಬಿಗ್ ಬಾಸ್

Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

Bigg Boss Kannada: ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

VISTARANEWS.COM


on

Bigg Boss Kannada paru fame mokshita pai participate season 11
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್​ಬಾಸ್​ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.

ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

Continue Reading

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಬಿಗ್ ಬಾಸ್

Actress Siri: ನಾನೇನು ʻಮದುವೆʼಯ ವಿರೋಧಿ ಅಲ್ಲ, ವಿವಾಹ ಬೇಡ ಎಂದೂ ಅಂದುಕೊಂಡಿರಲಿಲ್ಲ ಎಂದ ಸಿರಿ!

Actress Siri: ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

VISTARANEWS.COM


on

Actress Siri Reaction about late marriage
Koo

ಬೆಂಗಳೂರು: `ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿರುವುದು ಗೊತ್ತೇ ಇದೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

ಸಿರಿ ಮಾತನಾಡಿ ʻʻಇಷ್ಟು ವರ್ಷ ನನಗೆ ಮದುವೆ ಬಗ್ಗೆ ಏನೂ ಅನ್ನಿಸುತ್ತಿರಲಿಲ್ಲ. ನಮ್ಮ ತಾಯಿ ಬಿಟ್ಟರೆ ನಾನು ಮದುವೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನನ್ನ ತಾಯಿಗೆ ಒಂದು ಮಾತು ಹೇಳುತ್ತ ಇದ್ದೆ. ನಿನ್ನ ಮಗಳು ಖುಷಿಯಾಗಿ ಇರಬೇಕು. ಅದೇ ಮುಖ್ಯ ಅಂದರೆ ನೋಡು ಅಂತಿದ್ದೆ. ಆದರೆ ಬಿಗ್‌ ಬಾಸ್‌ ಆದ ಬಳಿಕ ಆಗಬೇಕು ಎಂಬ ಮನಸ್ಸು ಬಂತು. ಆದರೆ ಒತ್ತಡ ಅಂತೇನಿಲ್ಲ. ಹೀಗೆ ಆಗಬೇಕು ಎಂದು ಅನ್ನಿಸಿತ್ತು. ಹೊರಗೆ ಬಂದ ಮೇಲೆ ಈ ಬಗ್ಗೆ ನಿರ್ಧಾರ ಮಾಡಿದೆ. ಬಳಿಕ ಇವರನ್ನ ಮದುವೆ ಆಗಬಹುದು ಎಂದು ಅನ್ನಿಸಿದ ಮೇಲೆ ನಾನು ಮದುವೆಯಾದೆʼʼಎಂದರು.

ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿಲ್ಲ. ನನ್ನ ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದೇ ಇತ್ತು. ಮದುವೆ ವಿರುದ್ಧನೂ ಅಲ್ಲ ನಾನು. ನನ್ನ ಹಣೆಬರಹದಲ್ಲಿ ಈಗ ಬರ್ದಿದೆ. ಮನೆಯಲ್ಲಿ ಪ್ರಯತ್ನ ಮಾಡಿದ್ದರು. ಆದರೆ ಈಗ ಆ ಕಾಲ ಕೂಡಿ ಬಂದಿದೆ. ಮದುವೆ ಬೇಗ ಆಗಿ ಏನಾದರೂ ಸಮಸ್ಯೆ ಮಾಡಿಕೊಳ್ಳುವುದಿಕ್ಕಿಂತ , ನಾನು ರೆಡಿ ಇದ್ದೀನಿ.. ಎಂದು ರೆಡಿ ಆದ ಮೇಲೆ ಮದುವೆ ಮದುವೆಯಾಗೋದು ಸರಿ. ಯಾರಿಗಾದರೂ ಇದು ದೊಡ್ಡ ನಿರ್ಧಾರ. ನನಗೆ ನನ್ನ ಪತಿ ಬದುಕು ಸೀರಿಯಲ್‌ ನಿಂದ ಪರಿಚಯ. ಇಬ್ಬರು ಸ್ನೇಹಿತರಾಗಿದ್ದೇವು. ಬಳಿಕ ಮತ್ತೆ ವರ್ಷಗಳ ನಂತರ ಟಚ್‌ನಲ್ಲಿ ಬಂದೆವು. ನಂತರ ಇಬ್ಬರು ಮದುವೆಯಾಗೋಣ ಎಂದು ನಿರ್ಧಾರ ಮಾಡಿದೆವು. ಈಗಲೂ ಫ್ರೆಂಡ್‌ ಜತಗೆ ಇದ್ದೇನೆ ಎಂದು ಅನ್ನಿಸುತ್ತೆ. ಇಬ್ಬರಲ್ಲೂ ಪ್ರಪೋಸ್‌ ಏನೂ ಆಗಿಲ್ಲ. ಮಾತುಕತೆ ಆಯ್ತು. ಹಾಗೇ ಮದುವೆ ಆದೆವುʼʼಎಂದರು.

ಇದನ್ನೂ ಓದಿ: Actress Siri: ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀವೆ; ಪತಿಯನ್ನು ಬಣ್ಣಿಸಿದ ಸಿರಿ!

ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

Continue Reading
Advertisement
Vaccin for Hiv
ಆರೋಗ್ಯ22 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ31 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ46 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ48 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ49 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ58 mins ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ1 hour ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌