Ravindra Jadeja : ವಿಕೆಟ್​ಗಳ ದಾಖಲೆಯಲ್ಲಿ ಜಾವಗಲ್ ಶ್ರೀನಾಥ್ ಹಿಂದಿಕ್ಕಿದ ಜಡೇಜಾ - Vistara News

ಪ್ರಮುಖ ಸುದ್ದಿ

Ravindra Jadeja : ವಿಕೆಟ್​ಗಳ ದಾಖಲೆಯಲ್ಲಿ ಜಾವಗಲ್ ಶ್ರೀನಾಥ್ ಹಿಂದಿಕ್ಕಿದ ಜಡೇಜಾ

ಎಲ್ಲಾ ಮಾದರಿಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ರವೀಂದ್ರ ಜಡೇಜಾ (Ravindra Jadeja) ಒಂದು ಹೆಜ್ಜೆ ಮುಂದೆ ಸಾಗಿದ್ದಾರೆ.

VISTARANEWS.COM


on

Ravindra Jadeja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾದ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja) ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಭಾರತದ ಸ್ಟಾರ್ ಆಲ್​ರೌಂಡರ್​ ಎರಡನೇ ಇನ್ನಿಂಗ್ಸ್​ನಲ್ಲಿ ಜಾನಿ ಬೇರ್​ಸ್ಟೋವ್​ ವಿಕೆಟ್ ಪಡೆಯುವ ಮೂಲಕ ಭಾರತದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಅವರನ್ನು ಹಿಂದಿಕ್ಕಿದ್ದಾರೆ.

ಜಡೇಜಾ 332 ಪಂದ್ಯಗಳಲ್ಲಿ 29.34ರ ಸರಾಸರಿಯಲ್ಲಿ 552 ವಿಕೆಟ್ ಪಡೆದಿದ್ದಾರೆ. ಜಾವಗಲ್ ಶ್ರೀನಾಥ್ 296 ಪಂದ್ಯಗಳಲ್ಲಿ 551 ವಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ 401 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 953 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಹೊಂದಿದ್ದಾರೆ. ಆರ್ ಅಶ್ವಿನ್​ 276 ಪಂದ್ಯಗಳಿಂದ 718 ವಿಕೆಟ್​, ಹರ್ಭಜನ್ ಸಿಂಗ್​ 367 ಪಂದ್ಯಗಳಿಂದ 711 ವಿಕೆಟ್​, ಕಪಿಲ್ ದೇವ್​ 356 ಪಂದ್ಯಗಳಿಂದ 686 ವಿಕೆಟ್​, ಜಹೀರ್​ ಖಾನ್​ 309 ಪಂದ್ಯಗಳಿಂದ 610 ವಿಕೆಟ್​, ಮೊಹಮ್ಮದ್ ಶಮಿ 188 ಪಂದ್ಯಗಳಲ್ಲಿ 448 ವಿಕೆಟ್​, ಇಶಾಂತ್ ಶರ್ಮಾ 199 ಪಂದ್ಯಗಳಲ್ಲಿ 434 ವಿಕೆಟ್​, ಬುಮ್ರಾ 183 ಪಂದ್ಯಗಳಲ್ಲಿ 364 ವಿಕೆಟ್​ ಪಡೆದಿದ್ದಾರೆ.

ವಿಶ್ವದ ಪ್ರಖ್ಯಾತ ಆಲ್​ರೌಂಡರ್​ಗಳ ಪಟ್ಟಿ ಸೇರಿದ ರವೀಂದ್ರ ಜಡೇಜಾ

ಹೈದರಾಬಾದ್​: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೈದರಾಬಾದ್​ನಲ್ಲಿ ನಡೆಯುತ್ತಿರುವ ಸರಣಿಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ತಂಡ ಪ್ರವಾಸಿ ತಂಡದ ವಿರುದ್ಧ ಪ್ರಭಾವ ಸಾಧಿಸಲು ಜಡೇಜಾ ನೆರವಾಗಿದ್ದಾರೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರವೀಂದ್ರ ಜಡೇಜಾ 180 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸೇರಿದಂತೆ 87 ರನ್ ಗಳಿಸಿ ಔಟಾದರು. ಆದಾಗ್ಯೂ, ಎಡಗೈ ಬ್ಯಾಟರ್​ ತಮ್ಮ ನಾಲ್ಕನೇ ಟೆಸ್ಟ್ ಶತಕವನ್ನು ತಲುಪಲು ವಿಫಲರಾದರು. ಏಕೆಂದರೆ ಅವರನ್ನು ಮೂರನೇ ದಿನದಂದು ಜೋ ರೂಟ್ ಎಸೆತಕ್ಕೆ ವಾದಾತ್ಮಕವಾಗಿ ಔಟ್ ಆದರು.

ಜಡೇಜಾ ಔಟಾದ ನಂತರ ಮೆನ್ ಇನ್ ಬ್ಲೂ ತಂಡದ ಉಳಿದ ಆಟಗಾರರು ಒಟ್ಟು ಮೊತ್ತಕ್ಕೆ ಒಂದೂ ರನ್ ಸೇರಿಸದೇ ಉಳಿದ ಎರಡು ವಿಕೆಟ್ ಗಳನ್ನು ಕಳೆದುಕೊಂಡಿತು. ಜಸ್ಪ್ರೀತ್ ಬುಮ್ರಾ ಮೊದಲ ಎಸೆತದಲ್ಲಿ ಡಕ್ ಔಟ್ ಆದರೆ, ರೆಹಾನ್ ಅಹ್ಮದ್ ಅಕ್ಷರ್ ಪಟೇಲ್ ಅವರನ್ನು ಔಟ್ ಮಾಡಿದರು. ಮೊದಲ ಇನ್ನಿಂಗ್ಸ್ ನಲ್ಲಿ ಆತಿಥೇಯರು 436 ರನ್ ಗಳಿಸಿದ್ದು, 190 ರನ್ ಗಳ ಮುನ್ನಡೆ ಸಾಧಿಸಿದ್ದಾರೆ.

ರವೀಂದ್ರ ಜಡೇಜಾ (Ravindra Jadeja) ಕೊಡುಗೆ

ಇದಕ್ಕೂ ಮೊದಲು ಸರಣಿಯ ಆರಂಭಿಕ ಪಂದ್ಯದ ಮೊದಲ ಇನಿಂಗ್ಸ್​ನ್ಲಿ ಎಡಗೈ ಸ್ಪಿನ್ನರ್ ಚೆಂಡಿನೊಂದಿಗೆ ಗಮನಾರ್ಹ ಕೊಡುಗೆಗಳನ್ನು ಕೊಟ್ಟರು. ತಮ್ಮ 18 ಓವರ್​ಗಳಲ್ಲಿ 88 ರನ್​ಗಳಿಗೆ ಮೂರು ವಿಕೆಟ್​ಗಳನ್ನು ಪಡೆದರು. ಅವರು ಮೊದಲ ದಿನ ಒಲ್ಲಿ ಪೋಪ್, ಜೋ ರೂಟ್ ಮತ್ತು ಪದಾರ್ಪಣೆ ಆಟಗಾರ ಟಾಮ್ ಹಾರ್ಟ್ಲೆ ಸೇರಿದಂತೆ ಪ್ರಮುಖ ಬ್ಯಾಟರ್​ಗಳನ್ನು ಔಟ್ ಮಾಡಿದರು.

ಇದನ್ನೂ ಓದಿ : Ravindra Jadeja : ಜಡೇಜಾ ಔಟ್ ಅಲ್ಲ; ಅಂಪೈರ್​ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು!

ರವೀಂದ್ರ ಜಡೇಜಾ 41 ಟೆಸ್ಟ್​ ಪಂದ್ಯಗಳಲ್ಲಿ 40.95 ಸರಾಸರಿಯಲ್ಲಿ 1679 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು ತವರು ನೆಲದಲ್ಲಿ 20.59 ಸರಾಸರಿಯಲ್ಲಿ 197 ವಿಕೆಟ್​ಗಳನ್ನು ಪಡೆದಿದ್ದಾರೆ. 10 ಬಾರಿ ಐದು ವಿಕೆಟ್​ಗಳ ಗೊಂಚಲು ಪಡೆದಿದ್ದಾರೆ. ಒಟ್ಟಾರೆಯಾಗಿ ಈ ಆಲ್ರೌಂಡರ್ 69 ಟೆಸ್ಟ್ ಪಂದ್ಯಗಳಲ್ಲಿ 36.59 ಸರಾಸರಿಯಲ್ಲಿ 2891 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಶತಕಗಳು ಮತ್ತು 20 ಅರ್ಧಶತಕಗಳು ಸೇರಿವೆ. ಎಡಗೈ ಸ್ಪಿನ್ನರ್ ಟೆಸ್ಟ್ ಕ್ರಿಕೆಟ್ನಲ್ಲಿ 24.13 ಸರಾಸರಿಯಲ್ಲಿ 278 ವಿಕೆಟ್​​ಗಳನ್ನು ಕಬಳಿಸಿದ್ದಾರೆ.

ಗ್ಯಾರಿ ಸೋಬರ್ಸ್, ಜಾಕ್ ಕಾಲಿಸ್, ಇಮ್ರಾನ್ ಖಾನ್ ಮತ್ತು ಶಾನ್ ಪೊಲಾಕ್ ಸೇರಿದಂತೆ ಪ್ರಮುಖ ಆಲ್ರೌಂಡರ್​ಗಳ ಎಲೈಟ್ ಗುಂಪಿನ ಭಾಗವಾಗಿದ್ದಾರೆ ಸೌರಾಷ್ಟ್ರದ ಕ್ರಿಕೆಟಿಗ. ಬ್ಯಾಟಿಂಗ್ ಮತ್ತು ಬೌಲಿಂಗ್ ಸರಾಸರಿಯ ನಡುವೆ 12.93 ಗಮನಾರ್ಹ ವ್ಯತ್ಯಾಸವನ್ನು ಹೊಂದಿದ್ದಾರೆ. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30.

VISTARANEWS.COM


on

Job Alert
Koo

ನವದೆಹಲಿ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸೈಂಟಿಫಿಕ್‌ ಆಫೀಸರ್‌- 15 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಟೆಕ್ನಿಕಲ್‌ ಆಫೀಸರ್‌- 20 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪದವಿ.
ನರ್ಸ್‌- 25 ಹುದ್ದೆ, ವಿದ್ಯಾರ್ಹತೆ: ನರ್ಸಿಂಗ್‌ನಲ್ಲಿ ಡಿಪ್ಲೋಮಾ / ಪದವಿ.
ಟೆಕ್ನೀಷಿಯನ್‌- 30 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ + ಸರ್ಟಿಫಿಕೇಷನ್‌

ವಯೋಮಿತಿ

ಸೈಂಟಿಫಿಕ್‌ ಆಫೀಸರ್‌: ಗರಿಷ್ಠ ವಯಸ್ಸು 35 ವರ್ಷ, ಟೆಕ್ನಿಕಲ್‌ ಆಫೀಸರ್‌: ಗರಿಷ್ಠ ವಯಸ್ಸು 30 ವರ್ಷ, ನರ್ಸ್‌: ಗರಿಷ್ಠ ವಯಸ್ಸು 32 ವರ್ಷ ಮತ್ತು ಟೆಕ್ನೀಷಿಯನ್‌: ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ದೇಶಾದ್ಯಂತ 25 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿವೆ. ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

IGCAR Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ವಿವರಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಈಗ ಅಪ್ಲಿಕೇಷನ್‌ ಫಾರಂ ತೆರೆದುಕೊಳ್ಳುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 044 – 47749014ಕ್ಕೆ ಕರೆ ಮಾಡಿ. ಇಮೇಲ್‌ ವಿಳಾಸ: email: techsupport@i-register.co.in.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಸಭೆ ನಡೆದಿದೆ ಎಂದು ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಇದನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ತಳ್ಳಿ ಹಾಕಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಮತ್ತೊಬ್ಬ ಸಚಿವರ ಹೆಸರು ಕೇಳಿಬಂದಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ನಡೆದಿದೆ ಎಂದು ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಆದರೆ, ತಮ್ಮ ಮೇಲಿನ ಆರೋಪಗಳನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅಲ್ಲಗಳೆದಿದ್ದು, ನನ್ನ ಕಚೇರಿಯಲ್ಲಿ ಯಾವುದೇ ಸಭೆ ನಡೆದಿಲ್ಲ, ಅಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಾಲ್ಮೀಕಿ ನಿಗಮ 187 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಪ್ರಕರಣದ ಎಂಟನೇ ಆರೋಪಿ ಪರಶುರಾಮ್‌, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಸಾಕ್ಷ್ಯ ನಾಶ ಮಾಡಿದ ಆರೋಪ ಮಾಡಿದ್ದಾರೆ.

ಏನಿದು ಆರೋಪ?

ಸಚಿವ ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿ ಮೇ 24 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ಸಭೆ ನಡೆಸಿದ್ದಾರೆ. ಅಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ಆಗಿದೆ. ಸಭೆಯಲ್ಲಿ ಶರಣ ಪ್ರಕಾಶ್ ಪಾಟೀಲ್, ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಭಾಗವಹಿಸಿದ್ದರು. ಹೀಗಾಗಿ ಕೊಠಡಿಯ ಸಿಸಿಟಿವಿ ಫುಟೇಜ್‌ಗಳನ್ನು ತರಿಸಿಕೊಂಡು ಸಾಕ್ಷ್ಯಗಳನ್ನು ರಕ್ಷಣೆ ಮಾಡಲು ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕು ಹಾಗೂ ಜತೆಗೆ ತಾನು ದದ್ದಲ್ ಜತೆ ವಾಟ್ಸ್ಆ್ಯಪ್‌ ಚಾಟ್ ಮಾಡಿರುವುದನ್ನು ಸಹ ರಕ್ಷಣೆ ಮಾಡಬೇಕು ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿ ಮನವಿ ಮಾಡಿದ್ದಾರೆ.

ಸಭೆ ನಡೆದ ದಿನ ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ

ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಬಂಧಿತ ಆರೋಪಿ ಪರಶುರಾಮ್ ಸಭೆ ನಡೆಸಿದ್ದಾರೆಂಬ ಎಂಬ ಆರೋಪ ಬಗ್ಗೆ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ಇದರ ಬಗ್ಗೆ ತನಿಖೆ ನಡೆಸಲಿ. ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇರಲಿಲ್ಲ. ವಿಕಾಸ ಸೌಧದಲ್ಲಿ ತಮಗೆ ಹಂಚಿಕೆಯಾಗಿರುವ ಕೊಠಡಿ ಸರ್ಕಾರದ ಕಚೇರಿ. ಅಲ್ಲಿಗೆ ಸಾಕಷ್ಟು ಜನ ಬರುತ್ತಾರೆ, ಹೋಗುತ್ತಾರೆ. ಬಂಧಿತ ಪರಶುರಾಮ್ ವೈದ್ಯಕೀಯ ಶಿಕ್ಷಣ ಸಚಿವರು ಅಂತ ಹೇಳಿಲ್ಲ. ಸಚಿವರ ಕಚೇರಿಯಲ್ಲಿ ಅಂತ ಹೇಳಿದ್ದಾರೆ. ಅಂದು ನಾನು ಕಚೇರಿಗೆ ಹೋಗಿಲ್ಲ. ನಮ್ಮ ಕಚೇರಿಯಲ್ಲಿ ಸಭೆ ಆಗಿರುವುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಕಚೇರಿ ಸಿಬ್ಬಂದಿಯನ್ನು ಕೇಳಿದೆ. ಆ ರೀತಿ ಯಾವುದೇ ಸಭೆ ಆಗಿಲ್ಲ ಅಂತ ಹೇಳಿದ್ದಾರೆ. ಶಾಸಕರು ಬರುತ್ತಾರೆ, ಹೋಗುತ್ತಾರೆ ಅಂತ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೂ ನನಗೂ ಸಂಬಂಧ ಇಲ್ಲ. ಬೇಕಾದರೆ ಸಿಸಿಟಿವಿ ಫುಟೇಜ್ ಪರಿಶೀಲಿಸಲಿ, ನನ್ನ ಕಚೇರಿಯಲ್ಲಿ ಸಭೆ ಆಗಿದ್ದರೆ ತನಿಖೆ ನಡೆಯಲಿ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರಲಿದೆ. ನಾನು ಪ್ರಾಮಾಕವಾಗಿ ಕೆಲಸ ಮಾಡುವವನು ಎಂದು ಹೇಳಿದ್ದಾರೆ.

ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದ‌ ಶಾಸಕ ದದ್ದಲ್

ವಾಲ್ಮೀಕಿ ನಿಗಮ ಪ್ರಕರಣ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಹುತೇಕ ಎಲ್ಲ ಅರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಯಾರದ್ದೇ ಹೆಸರು ಕೇಳಿಬಂದರೂ ತನಿಖೆ ನಡೆಸುತ್ತಾರೆ. ನಮ್ಮ ಪಾತ್ರ ಇದ್ದರೂ ಕರೆಯುತ್ತಾರೆ. ಸತ್ಯಾಂಶವನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಈಗಾಗಲೇ ಸಿಬಿಐ ಎಫ್ಐ‌ಆರ್ ಮಾಡಿಕೊಂಡಿದೆ. ಎರಡು ಸಂಸ್ಥೆಗಳ ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂದು ಶಾಸಕ ಬಸನಗೌಡ ದದ್ದಲ್‌ ಹೇಳಿದರು.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ಆರೋಪದಂತೆ ಸಭೆ ಆಗಿದ್ದು ನಿಜವೇ ಎಂಬ ಪ್ರಶ್ನಗೆ ಉತ್ತರಿಸಿ, ಆರೋಪಿ ಎಸ್ಐಟಿಗೆ ಏನು ಹೇಳಿಕೆ ಕೊಟ್ಟಿದ್ದಾರೆ, ಅದರಲ್ಲಿ ಸತ್ಯಾಂಶ ಇದ್ದರೆ ಕರೆಯುತ್ತಾರೆ. ನನ್ನನ್ನು ಈವರೆಗೂ ತನಿಖೆಗೆ ಕರೆದಿಲ್ಲ. ನಾನು ಪರಿಶಿಷ್ಟ ಪಂಗಡದಲ್ಲಿ ಹುಟ್ಟಿದ್ದವನು. ಇಂತಹ ದುಸ್ಸಾಹಸಗಳಿಗೆ ಕೈ ಹಾಕಲು ಸಾಧ್ಯವಿಲ್ಲ. ಎಲ್ಲವೂ ಇನ್ನೊಂದು ವಾರದೊಳಗೆ ಅಥವಾ ಐದಾರು ದಿನಗಳಲ್ಲಿ ಹೊರ ಬರಲಿದೆ. ನೀತಿ ಸಂಹಿತೆ ಜಾರಿ ಇದ್ದ ಕಾರಣ ನಾನು ಕಚೇರಿಗೆ ಹೋಗಿಲ್ಲ. ಸಭೆಗಳನ್ನು ಮಾಡಿಲ್ಲ ಎಂದು ತಿಳಿಸಿದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತ್ತಷ್ಟು ನಿಗಮ ಮತ್ತು ಮಂಡಳಿಗಳ ಮೇಲೆ ಅನುಮಾನ ಮೂಡಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಸುಮಾರು 1 ಸಾವಿರ ಕೋಟಿ ರೂ. ಖಾಸಗಿ ಬ್ಯಾಂಕ್‌ಗಳಲ್ಲಿ ಜಮೆ ಮಾಡಲಾಗಿದ್ದು, ನಿಗಮ, ಮಂಡಳಿಗಳ ಈ ಬ್ಯಾಂಕ್ ಖಾತೆಗಳನ್ನ ತಕ್ಷಣದಿಂದಲೇ ಸ್ಥಗಿತಗೊಳಿಸಲು ಹಣಕಾಸು ಇಲಾಖೆ ಪತ್ರ ಬರೆದಿದೆ.

ಎಲ್ಲ ಬ್ಯಾಂಕ್‌ಗಳಿಗೆ ಪತ್ರ ಬರೆದು ಖಾತೆಗಳ ಬಗ್ಗೆ ಹೆಚ್ಚಿನ ವಿವರ ಕೇಳಿದೆ. ರಾಜ್ಯದ 25 ನಿಗಮ ಹಾಗೂ ಮಂಡಳಿಗಳಿಂದ 1 ಸಾವಿರ ಕೋಟಿಗೂ ಅಧಿಕ ಹಣ ಖಾಸಗಿ ಬ್ಯಾಂಕ್‌ನಲ್ಲಿ ಜಮೆ ಮಾಡಲಾಗಿದ್ದು, ಈ ಪೈಕಿ ಒಂದೇ ನಿಗಮ 10 ಖಾಸಗಿ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವುದು ಬೆಳಕಿಗೆ ಬಂದಿದೆ. ಈ ಎಲ್ಲ ಕಾರಣಗಳಿಂದ ಕ್ರಮಕ್ಕೆ ಮುಂದಾದ ಅಧಿಕಾರಿಗಳು ಈ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಸೂಚಿಸಿದ್ದಾರೆ.

ನಿಯಮ ಏನು ಹೇಳುತ್ತದೆ?

ಎಲ್ಲ ನಿಗಮ ಹಾಗೂ ಮಂಡಳಿಗಳು ಸರ್ಕಾರದ ಖಜಾನೆಯಲ್ಲಿಯೇ ಖಾತೆಗಳನ್ನ ತೆರೆದು ಹಣವನ್ನು ಅಲ್ಲಿಯೇ ಜಮೆ ಮಾಡಬೇಕೆಂಬ ಆದೇಶವಿದೆ. ಆದರೂ ಸರ್ಕಾರದ ಆದೇಶ ಉಲ್ಲಂಘಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ ಸಾವಿರಾರು ಕೋಟಿ ರೂ. ಜಮೆ ಮಾಡಲಾಗಿದೆ. ಸದ್ಯ ಯಾವ ಬ್ಯಾಂಕ್‌ನಲ್ಲಿ ಎಷ್ಟು ಹಣ ಜಮೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಹಣಕಾಸು ಇಲಾಖೆ ಕೇಳಿದೆ. ಈಗಾಗಲೇ ಎಲ್ಲ ಇಲಾಖೆಗೆ ಪತ್ರ ಬರೆದು ಮಾಹಿತಿ ಸಂಗ್ರಹ ನಡೆಸುತ್ತಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. 88 ಕೋಟಿ ರೂ. ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Continue Reading

ಕರ್ನಾಟಕ

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

NDA 3.0: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

VISTARANEWS.COM


on

NDA 3.0
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (National Democratic Alliance) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಕ್ಯಾಬಿನೆಟ್ ಮಂತ್ರಿ ಹುದ್ದೆ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದ್ದು, ಬಿಜೆಪಿಯಿಂದ ಯಾರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ಮೂವರಿಗೆ ಸಚಿವ ಸ್ಥಾನ?

ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಇಬ್ಬರು ಸಂಸದರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಮೂವರಿಗೆ ಮಂತ್ರಿ ಪಟ್ಟ ಸಿಕ್ಕಂತಾಗಲಿದೆ. ಈಗಿನ ಸನ್ನಿವೇಶದಲ್ಲಿ ಮೂರಕ್ಕಿಂತ ಹೆಚ್ಚು ಸಚಿವ ಸ್ಥಾನ ರಾಜ್ಯಕ್ಕೆ ಸಿಗುವುದು ಕಷ್ಟ ಎನ್ನುವ ಮಾತೂ ಕೇಳಿ ಬಂದಿದೆ. ಮುಂಬರುವ ಚುನಾವಣಾ ರಾಜ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೈ ಕಮಾಂಡ್, ಮಹಾರಾಷ್ಟ್ರ, ಹರಿಯಾಣ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಜತೆಗೆ ಮಿತ್ರ ಪಕ್ಷಗಳಿಗೂ ಆದ್ಯತೆ ನೀಡಬೇಕಿದೆ.

ಪ್ರಲ್ಹಾದ್ ಜೋಶಿಗೆ ಮತ್ತೆ ಅವಕಾಶ?

ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌. ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜತೆಗೆ ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜತೆಗಿದೆ.

ಸದ್ಯ ಕರ್ನಾಟಕಕ್ಕೆ 2+1+1 ಫಾರ್ಮುಲಾ ಅನುಸರಿಸಲು ಬಿಜೆಪಿ ಹೈ ಕಮಾಂಡ್ ಚಿಂತನೆ ಎನ್ನಲಾಗಿದ್ದು, ಬಿಜೆಪಿಯಿಂದ 2 ಸಚಿವರು, ಜೆಡಿಎಸ್‌ಗೆ 1 ಹಾಗೂ 1 ರಾಜ್ಯ ಸಚಿವರನ್ನಾಗಿ ಮಾಡಲೂ ಬಿಜೆಪಿ ಚಿಂತನೆ ನಡೆಸಿದೆ ಎನ್ನುವ ಮಾತೂ ಕೇಳಿ ಬಂದಿದೆ.

ಇದನ್ನೂ ಓದಿ: Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Continue Reading
Advertisement
Job Alert
ಉದ್ಯೋಗ3 mins ago

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

assault case
ಬೆಂಗಳೂರು11 mins ago

Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Kumar Bangarappa attack by Shivarajkumar Supporters
ರಾಜಕೀಯ27 mins ago

Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

Pakistan
ವಿದೇಶ27 mins ago

Pakistan: ಇಡೀ ಜಗತ್ತೇ ಮೋದಿಗೆ ಅಭಿನಂದಿಸಿದರೂ ಪಾಕಿಸ್ತಾನ ಮಾತ್ರ ಇನ್ನೂ Congratulations ಎಂದಿಲ್ಲ!

Valmiki Corporation Scam
ಪ್ರಮುಖ ಸುದ್ದಿ28 mins ago

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Gold Rate Today
ಚಿನ್ನದ ದರ57 mins ago

Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

MM Hills
ಚಾಮರಾಜನಗರ1 hour ago

MM Hills : ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಒಬ್ಬರು ಸಾವು, ಮೂವರು ಗಂಭೀರ

Viral News
ದೇಶ1 hour ago

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್2 hours ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು2 hours ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ21 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌