ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ, ಇ -ಶ್ರಮ್ ಯೋಜನೆಯಲ್ಲಿ ವಯೋಮಾನ ಹೆಚ್ಚಿಸಲು ಸಿಎಂಗೆ ಮನವಿ - Vistara News

ಬೆಂಗಳೂರು

ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ, ಇ -ಶ್ರಮ್ ಯೋಜನೆಯಲ್ಲಿ ವಯೋಮಾನ ಹೆಚ್ಚಿಸಲು ಸಿಎಂಗೆ ಮನವಿ

ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

newspaper distributors
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬರುವ 2024-25ನೇ ಸಾಲಿನ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ 5 ಕೋಟಿ ರೂ. ಮೀಸಲಿಡುವಂತೆ ಶಕ್ತಿಪೀಠದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರಿಗೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಮನವಿ ಪತ್ರ ಸಲ್ಲಿಸಿದರು.

ಪತ್ರಿಕಾ ವಿತರಣೆಯಲ್ಲಿ 60 ವರ್ಷ ಮೇಲ್ಪಟ್ಟ ಅನೇಕ ವಿತರಕರು ಕಾರ್ಯನಿರ್ವಹಿಸುತ್ತಿರುವುದರಿಂದ ಇ-ಶ್ರಮ್‌ನಲ್ಲಿ ವಿತರಕರ ವಯೋಮಿತಿಯನ್ನು 59 ವರ್ಷದಿಂದ 75 ವರ್ಷಕ್ಕೆ ಏರಿಸುವಂತೆಯೂ ಮನವಿ ಮಾಡಲಾಯಿತು. ಇನ್ನಿತರೆ ಬೇಡಿಕೆಗಳಾದ ವಿತರಕರಿಗಾಗಿ ಸಮುದಾಯ ಭವನ ನಿರ್ಮಿಸಲು ಜಾಗ, ವಿತರಕರ ನಿವೇಶನಗಳಿಗೆ ಜಾಗ ಹಾಗೂ ಎಲೆಕ್ಟ್ರಿಕ್ ಬೈಕ್ ಅನ್ನು ಉಚಿತವಾಗಿ ನೀಡುವಂತೆಯೂ ಕೋರಲಾಯಿತು.

ಇದನ್ನೂ ಓದಿ | Ahinda Convention: ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಬೃಹತ್‌ ಜಾಗೃತಿ ಸಮಾವೇಶ

ಮನವಿ ಪತ್ರ ಸ್ವೀಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಅವರು, ಮನವಿ ಪತ್ರದ ಬಗ್ಗೆ ಸಿಎಂ ಗಮನಕ್ಕೆ ತಂದು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

CET Ranking : ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವು ಜೂ 1ರಂದು ಪ್ರಕಟಗೊಂಡಿತ್ತು. ಇದರಲ್ಲಿ ಸುಮಾರು ಮೂರು ಸಾವಿರ ಅಭ್ಯರ್ಥಿಗಳ ಸಿಇಟಿ ರ‍್ಯಾಂಕ್‌ ತಡೆಹಿಡಿಯಲಾಗಿದೆ. ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟವಾಗಿರುವುದಿಲ್ಲ.

VISTARANEWS.COM


on

By

CET Ranking
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ರ‍್ಯಾಂಕ್‌ (CET Ranking) ತಡೆಹಿಡಿದಿರುವ ಅಥವಾ ರ‍್ಯಾಂಕ್‌ ನೀಡದೇ ಇರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ಜೂನ್‌ 3ರ ಸೋಮವಾರದಿಂದ ಕೆಇಎ (KEA) ಬಿಡುಗಡೆ ಮಾಡುವ ಪೋರ್ಟಲ್‌ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ‍್ಯಾಂಕ್‌ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪಿಯುಸಿಯಲ್ಲಿ ನೀಡಿದ್ದ ಯೂನಿಕ್‌ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ತಪ್ಪಾಗಿ ನಮೂದಿಸಿದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟಣೆ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ.

ಈ ರೀತಿ ರ‍್ಯಾಂಕ್‌ ತಡೆಹಿಡಿದಿರುವ ಸುಮಾರು ಮೂರು ಸಾವಿರ ಅಭ್ಯರ್ಥಿಗಳು ಇದ್ದಾರೆ. ಅಂತಹವರಿಗೆ ಈ ತೀರ್ಮಾನದಿಂದ ಅನುಕೂಲ ಆಗಲಿದೆ. ಪ್ರತಿ ಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುವ ಕಾರಣ ಹಾಗೆ ಆಗಿದೆ ಎಂದು ಪ್ರಸನ್ನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Valmiki Corporation Scam: 87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ ರೂ. ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಸಚಿವ ನಾಗೇಂದ್ರ ಮತ್ತು ಅಧಿಕಾರಿಗಳು ಈವರೆಗೆ ಸುಮಾರು 68 ಕೋಟಿ ವಾಪಸ್‌ ಆಗಿದೆ ಎಂದು ಹೇಳಿದ್ದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು. ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.

87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ. ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಫಿಕ್ಸ್ ಎನ್ನಲಾಗಿದೆ.

ಸಚಿವ ಬಿ‌ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟುಹಿಡಿದಿದೆ. ಸಚಿವರ ರಾಜೀನಾಮೆ ಪಡೆಯಲು ಜೂನ್ 6ರವರೆಗೂ ಗಡುವು ನೀಡಿರುವ ಬಿಜೆಪಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

ಮತ್ತೊಂದೆಡೆ ಬಿಜೆಪಿ ಕಾಲದ ಹಗರಣಗಳನ್ನು ಪ್ರಸ್ತಾಪ ಮಾಡಲು ನಾಗೇಂದ್ರ ಮುಂದಾಗಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಸಿಬಿಐ ಎಂಟ್ರಿ ತಪ್ಪಿಸಲು ಹೊಸ ದಾಳ ಪ್ರಯೋಗಕ್ಕೆ ನಾಗೇಂದ್ರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾಲದಲ್ಲಿ ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣ ಕುರಿತು ಪ್ರಸ್ತಾಪ ಮಾಡಲು ಸಚಿವ ಪ್ಲ್ಯಾನ್‌ ಮಾಡಿದ್ದಾರೆ.

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

MLC Election: ವಿಧಾನಪರಿಷತ್‌ ಚುನಾವಣೆಗೆ ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

VISTARANEWS.COM


on

MLC Election
Koo

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ (MLC Election) ನಡೆಯವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​. ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿ ಅವರಿಗೆ ಪರಿಷತ್‌ ಟಿಕೆಟ್‌ ಒಲಿದಿದೆ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಟಿಕೆಟ್‌ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಅವಕಾಶ ಸಿಕ್ಕಿಲ್ಲ.

ಇನ್ನು ಮಾಜಿ ಶಾಸಕ ಎಂ.ಜಿ ಮುಳೆ ಅವರು ಮರಾಠ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್‌ ಸಿಕ್ಕಿದೆ.

ಇದನ್ನೂ ಓದಿ | Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

ಹೈಕಮಾಂಡ್‌ ನಾಯಕರಿಗೆ ಸಿ.ಟಿ.ರವಿ ಧನ್ಯವಾದ

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಚಿವ ಸಿ.ಟಿ.ರವಿ ಅವರು ಹೈಕಮಾಂಡ್‌ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್‌.ಸತೋಷ್, ,ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ‌ ಎನ್‌. ರವಿಕುಮಾರ್ ಹಾಗೂ ಎಂ.ಜಿ. ಮೂಳೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Electric Shock: ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದಾರೆ.

VISTARANEWS.COM


on

By

Electric shock Electronic City
Koo

ಬೆಂಗಳೂರು: ಪಲ್ಲಕ್ಕಿ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) ಇಬ್ಬರು ದುರ್ಮರಣ ಹೊಂದಿದ್ದಾರೆ . ಈ ದಾರುಣ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಗೊಲ್ಲಹಳ್ಳಿಯಲ್ಲಿ (Gollahalli) ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು.

ಗೊಲ್ಲಹಳ್ಳಿ ಗ್ರಾಮದ ಜಾತ್ರೆಯಲ್ಲಿ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆಗೆ ಧಾವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

ಮೈಸೂರಿನಲ್ಲಿ ಕಣ್ಣಿದ್ದು ಕುರುಡಾದ ಸೆಸ್ಕ್ ಸಿಬ್ಬಂದಿ

ಮೈಸೂರಿನಲ್ಲಿ ಸೆಸ್ಕ್ ಸಿಬ್ಬಂದಿ ಕಣ್ಣಿದ್ದು ಕುರುಡಾಗಿದ್ದಾರೆ. ವಿದ್ಯುತ್ ವೈಯರ್ ಮೇಲೆ ಒಣ ಮರ ಬಿದ್ದಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕಳೆದ 15 ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಮಳೆಗೆ ಮರ ಬಿದ್ದಿದ್ದು, ತೆರವು ಮಾಡುವಲ್ಲಿ ಸೆಸ್ಕ್ ಸಿಬ್ಬಂದಿ ಮೀನಾಮೇಷ ಎಣಿಸುತ್ತಿದ್ದಾರೆ.

ವಾಹನ ಸವಾರರ ಮೇಲೆ ಬಿದ್ದು ಅನಾಹುತ ಸಂಭವಿಸವುದಕ್ಕೂ ಮುನ್ನ ತೆರವು ಮಾಡುತ್ತಾರಾ? ಅಥವಾ ಅನಾಹುತ ಆದಮೇಲೆ ತೆರವು ಮಾಡುತ್ತಾರಾ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಟೋಲ್ ಗೇಟ್‌ನಿಂದ ಪಡುವಾರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಘಟನೆ ನಡೆದಿದೆ. ಬಿರುಗಾಳಿಗೆ ಒಣ ಮರ ಸಂಪೂರ್ಣ ವಿದ್ಯುತ್ ತಂತಿ ಮೇಲೆ ಬಿದ್ದಿದ್ದರೂ ಯಾರೊಬ್ಬರು ತಲೆ ಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Continue Reading
Advertisement
lok Sabha Election
ಪ್ರಮುಖ ಸುದ್ದಿ3 mins ago

Lok Sabha Election 2024 : ಸೂರ್ಯನ ತೇಜಸ್ಸು ಕಡಿಮೆ ಮಾಡಲು ಸೌಮ್ಯ ಹೋರಾಟ ಸಾಲುವುದೇ?

Kannada Upcoming Movies KD Martin Bheema Movies
ಸ್ಯಾಂಡಲ್ ವುಡ್20 mins ago

Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

KMF T20 World Cup
ಕ್ರೀಡೆ24 mins ago

KMF T20 World Cup: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಕೆಎಂಎಫ್‌

Jairam Ramesh
ದೇಶ38 mins ago

Jairam Ramesh: 150 ಡಿಸಿಗಳಿಗೆ ಅಮಿತ್‌ ಶಾ ಕರೆ; ಜೈರಾಮ್‌ ರಮೇಶ್‌ ಆರೋಪಕ್ಕೆ ಇಸಿ ಪ್ರತಿಕ್ರಿಯೆ- ಏನಿದು ವಿವಾದ?

Assembly Election Results 2024
ದೇಶ41 mins ago

Assembly Election Results 2024: ಸಿಕ್ಕಿಂ ಮತ್ತೆ ಎಸ್‌ಕೆಎಂ ತೆಕ್ಕೆಗೆ; 32 ಸ್ಥಾನಗಳ ಪೈಕಿ 31 ಕಡೆ ಗೆಲುವು

Bhavya Narasimhamurthy
ದೇಶ45 mins ago

Bhavya Narasimhamurthy: ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಈಗ ಸೇನಾಧಿಕಾರಿ!

Lok Sabha Election
ಕಲಬುರಗಿ47 mins ago

Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

Kannada New Movie chef chidambara Trailer out
ಸ್ಯಾಂಡಲ್ ವುಡ್1 hour ago

Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

Virat Kohli
ಕ್ರೀಡೆ1 hour ago

Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

CET Ranking
ಬೆಂಗಳೂರು1 hour ago

CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು24 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌