BBK SEASON 10: ಇದ್ದಷ್ಟೂ ದಿನ ಮನೆಯಲ್ಲಿ ರಂಜಿಸಿ, ಹೊರಗೆ ಬಂದ ತುಕಾಲಿ ಜರ್ನಿ ಹೇಗಿತ್ತು? - Vistara News

ಬಿಗ್ ಬಾಸ್

BBK SEASON 10: ಇದ್ದಷ್ಟೂ ದಿನ ಮನೆಯಲ್ಲಿ ರಂಜಿಸಿ, ಹೊರಗೆ ಬಂದ ತುಕಾಲಿ ಜರ್ನಿ ಹೇಗಿತ್ತು?

BBK SEASON 10: ಮನೆಯಲ್ಲಿ ಇದ್ದಷ್ಟೂ ದಿನ ಎಲ್ಲರನ್ನೂ ನಗಿಸುತ್ತಲೇ ಇದ್ದ ತುಕಾಲಿ, ನಗುನಗುತ್ತಲೇ ಹೊರಗೆ ಬಂದಿದ್ದಾರೆ. ತಮ್ಮ ಸಹಸ್ಪರ್ಧಿಗಳಿಗೆ ಶುಭಾಶಯ ಕೋರಿದ್ದಾರೆ.

VISTARANEWS.COM


on

Tukali Santhosh came out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ತುಕಾಲಿ ಸಂತೋಷ್’ ಈ ಹೆಸರು (BBK SEASON 10) ಕೇಳಿದರೆ ಸಾಕು ಒಮ್ಮೆ ಹುಬ್ಬು ಮೇಲೇರುತ್ತದೆ. ಮರುಗಳಿಗೆ ತುಟಿಗಳಲ್ಲಿ ನಗು ಮೂಡುತ್ತದೆ. ಹುಬ್ಬೇರಿಸುವ ಅಚ್ಚರಿ, ನಗುಮೂಡಿಸುವ ವೈಖರಿ ಇದು ತುಕಾಲಿ ಸಂತೋಷ್‌ ಬಿಗ್‌ಬಾಸ್‌ ಸೀಸನ್‌ 10ನಲ್ಲಿ ಮೂಡಿಸಿರುವ ಹೆಜ್ಜೆಗುರುತಿಗೆ ಪುರಾವೆ. ಅಂತಿಮ ಹಂತಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇರುವಾಗ ತುಕಾಲಿ ಸಂತೋಷ್‌ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಮನೆಯಲ್ಲಿ ಇದ್ದಷ್ಟೂ ದಿನ ಎಲ್ಲರನ್ನೂ ನಗಿಸುತ್ತಲೇ ಇದ್ದ ತುಕಾಲಿ, ನಗುನಗುತ್ತಲೇ ಹೊರಗೆ ಬಂದಿದ್ದಾರೆ. ತಮ್ಮ ಸಹಸ್ಪರ್ಧಿಗಳಿಗೆ ಶುಭಾಶಯ ಕೋರಿದ್ದಾರೆ.

ಶನಿವಾರದ (ಜ.27) ಸಂಚಿಕೆಯಲ್ಲಿ ಮನೆಯಿಂದ ಹೊರಗೆ ಬಂದ ತುಕಾಲಿ ಸಂತೋಷ್ ಅವರ ಜರ್ನಿಯೂ ಅಷ್ಟೇ ಮನರಂಜನಾತ್ಮಕವಾಗಿತ್ತು. ಅದನ್ನು ಕಟ್ಟಿಕೊಡುವ ಪ್ರಯತ್ನವನ್ನು ಜಿಯೊಸಿನಿಮಾ ಮಾಡುತ್ತಿದೆ.
‘ಈ ಸಲ ಎಂಟರ್‍‌ಟೈನ್ಮೆಂಟ್ ಕಡಿಮೆ ಇದೆ’ ಎಂಬ ಕೆಲವರ ಗೊಣಗಾಟಕ್ಕೆ ಉತ್ತರವಾಗಿ ತುಕಾಲಿ ಸಂತೋಷ್ ಮನೆಯೊಳಗಿದ್ದರು. ಅಗ್ರೆಶನ್‌ನಲ್ಲಿ ಆಡಲಾಗದ, ಸ್ಪೋರ್ಟ್ಸ್‌ ಹಿನ್ನೆಲೆ ಇಲ್ಲದ ಅವರು ಮನೆಯೊಳಗೆ ವಾರದಿಂದ ವಾರಕ್ಕೆ ತಮ್ಮ ಜಾಗವನ್ನು ವಿಸ್ತರಿಸುತ್ತ ಬಂದಿದ್ದೊಂದು ಕುತೂಹಲಕಾರಿ ವಿದ್ಯಮಾನ. ಅದೂ ಮನೆಯೊಳಗೆ ಜನರು ಕಡಿಮೆಯಾಗುತ್ತ ಬಂದಷ್ಟೂ ತುಕಾಲಿ ಸಂತೋಷ್‌ ಪ್ರಭಾವ ಹೆಚ್ಚುತ್ತಲೇ ಹೋಗಿದ್ದು ಇನ್ನೊಂದು ಕುತೂಹಲಕಾರಿ ಬೆಳವಣಿಗೆ. ಎಲ್ಲರೊಳಗೆ ಒಂದಾಗುತ್ತ, ಎಲ್ಲರಿಗೂ ಪಿನ್ನು ಚುಚ್ಚುತ್ತ ತಮ್ಮ ಪಯಣವನ್ನು ಮುಂದುವರಿಸಿಕೊಂಡು ಬಂದಿರುವ ತುಕಾಲಿ ಅವರ ಜರ್ನಿಯ ಕೆಲವು ಮುಖ್ಯಘಟ್ಟಗಳ ನೆನಪು ಇಲ್ಲಿವೆ.

ಮಾತಿನಲ್ಲೇ ಮನೆಯ ಕಟ್ಟುವ ಮಲ್ಲ!

ತುಕಾಲಿ ಸಂತೋಷ್ ಅವರು ಮೈಕಟ್ಟಿನಲ್ಲಂತೂ ‘ಮಲ್ಲ’ನಲ್ಲ. ಆದರೆ ಮಾತಿಗೆ ನಿಂತರೆ ಮಲ್ಲರ ಮಲ್ಲ. ನೋಡನೋಡುತ್ತಿದ್ದ ಹಾಗೆಯೇ ಮಾತಲ್ಲೇ ಮಹಡಿಮೇಲೆ ಮಹಡಿ ಕಟ್ಟಿ ಅದರ ಮೇಲಿಂದ ಕಾಗೆ ಹಾರಿಸುವ ಅವರ ಪ್ರತಿಭೆ ಆರಂಭದ ಕೆಲವು ದಿನಗಳಲ್ಲಿಯೇ ಮನೆಮಂದಿಗೆಲ್ಲ ಪರಿಚಯವಾಗಿತ್ತು. ‘ನನ್ನ ತಾಯಿ ಗರ್ಭಿಣಿಯಾಗಿದ್ದಾಗ, ನಿನ್ನ ಹೊಟ್ಟೆಯಲ್ಲಿ ಮಹಾತ್ಮ ಹುಟ್ತಾನೆ ಅಂತ ಹೇಳಿದ್ರಂತೆ ದೊಡ್ಡವರೊಬ್ಬರು. ನಾನು ಹುಟ್ಟುವಾಗ ಗುಡುಗು ಸಿಡಿಲು ಎಲ್ಲ ಇತ್ತು. ಮಳೆ ಬರ್ತಿತ್ತು. ಆಗ ನಾನು ಹುಟ್ಟಿದೆ…’ಎಂದು ತಮ್ಮ ಜನ್ಮವೃತ್ತಾಂತವನ್ನು ಅರುಹುತ್ತ ಹೋದ ಹಾಗೆ ಮನೆಯವರೆಲ್ಲರೂ ಬೆಕ್ಕಸ ಬೆರಗಾಗಿ ನೋಡುತ್ತಿದ್ದರು. ಅವರು ಕಾಗೆ ಹಾರಿಸುತ್ತಿದ್ದಾರೆ ಎಂದು ಗೊತ್ತಿದ್ದೂ ಅವರ ಮಾತುಗಳನ್ನು ಕೇಳಿಸಿಕೊಳ್ಳಲು ಬಿಗ್‌ಬಾಸ್ ಮನೆಯ ಸದಸ್ಯರು ಕಾದು ಕೂತಿರುತ್ತಿದ್ದದ್ದು ಸುಳ್ಳಲ್ಲ.

ಇದನ್ನೂ ಓದಿ: BBK SEASON 10: ಬಿಗ್‌ಬಾಸ್‌ 10 ಗ್ರ್ಯಾಂಡ್‌ ಫಿನಾಲೆ; ತುಕಾಲಿ ಸಂತೋಷ್‌ ಔಟ್

ಆದರೆ ಆರಂಭಿಕ ಹಂತದಲ್ಲಿ ತುಕಾಲಿ ಅವರು ಮನೆಯ ಸದಸ್ಯರನ್ನು ನಗಿಸಲು ಅನುಸರಿದ ದಾರಿ ಟೀಕೆಗೂ ಒಳಗಾಗಿತ್ತು. ಅವರು ಪ್ರತಾಪ್ ಬಗ್ಗೆ ಆಡಿದ ಮಾತುಗಳು, ಮನೆಯ ಉಳಿದ ಸದಸ್ಯರ ಬಗ್ಗೆ ಆಡಿದ ಮಾತುಗಳ ಬಗ್ಗೆ ಕಿಚ್ಚ ಸುದೀಪ್ ವಾರಾಂತ್ಯದ ಎಪಿಸೋಡ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದರು. ಭಾಗ್ಯಶ್ರೀ ಮತ್ತು ಸಿರಿ ಅವರನ್ನು ಮಿಮಿಕ್ ಮಾಡಿದ್ದಕ್ಕಾಗಿ ಸುದೀಪ್ ವಾರವಿಡೀ ತುಕಾಲಿ ಅವರ ಸೊಂಟಕ್ಕೆ ಹಗ್ಗ ಕಟ್ಟಿ ಅದರ ಎರಡುಬದಿಗಳಲ್ಲಿ ಸಿರಿ ಮತ್ತು ಭಾಗ್ಯಶ್ರೀ ಇರುವ ಶಿಕ್ಷೆ ಕೊಟ್ಟಿದ್ದರು. ಇಂಥ ಶಿಕ್ಷೆಯನ್ನು ತುಕಾಲಿ ಕಾಮಿಡಿ ಸೃಷ್ಟಿಗೇ ಬಳಸಿಕೊಂಡರು ಅನ್ನುವುದು ಬೇರೆ ಮಾತು.

‘ಅನ್ಯರನ್ನು ನೋಯಿಸಿ ಮತ್ಯಾರನ್ನೋ ನಗಿಸುವುದು ಹಾಸ್ಯನಟನ ಘನತೆಗೆ ತಕ್ಕುದಲ್ಲ’ ಎಂಬ ಕಿಚ್ಚನ ಮಾತುಗಳನ್ನು ತುಕಾಲಿ ಗಂಭೀರವಾಗಿಯೇ ತೆಗೆದುಕೊಂಡರು. ಆದರೆ ಮನೆಯ ಸದಸ್ಯರು ಮಾತ್ರ ‘ಅವರು ಉಳಿದವರನ್ನು ನೋಯಿಸಿ ಹಾಸ್ಯ ಮಾಡುತ್ತಾರೆ’ ಎಂದು ಆರೋಪಿಸುವುದನ್ನು ನಿಲ್ಲಿಸಲಿಲ್ಲ. ಇದರಿಂದ ತುಕಾಲಿ ಅವರು ಕೆಲಕಾಲ ಕುಗ್ಗಿದ್ದು, ಮಾತಾಡಲೇ ಹಿಂಜರಿಯುವಂತಾಗಿದ್ದು ಸುಳ್ಳಲ್ಲ.

ಕ್ಯಾಪ್ಟನ್ ಆಗುವ ಕನಸು

ಮನೆಯ ಕ್ಯಾಪ್ಟನ್ ಆಗಬೇಕು ಎಂಬುದು ಈ ಸೀಸನ್‌ ಉದ್ದಕ್ಕೂ ತುಕಾಲಿ ಸಂತೋಷ್ ಕಂಡಂತ ಕನಸು. ಆ ಕನಸು ಮೊಳೆತಿದ್ದು ಮೊದಲ ವಾರದಲ್ಲಿಯೇ. ಮೊದಲ ವಾರ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಸ್ನೇಹಿತ್ ಮತ್ತು ನಮ್ರತಾ ಅವರ ಜೊತೆಯಲ್ಲಿ ತುಕಾಲಿ ಕೂಡ ರೇಸ್‌ನಲ್ಲಿ ಇದ್ದರು. ತಿರುಗುವ ಚಕ್ರದ ಮೇಲೆ ಅತಿಹೆಚ್ಚು ಕಾಲ ನಿಲ್ಲುವ ಟಾಸ್ಕ್‌ನಲ್ಲಿ ಬರಿಗಾಲಿನಲ್ಲಿ ನಿಂತಿದ್ದ ತುಕಾಲಿ ಎಲ್ಲರಿಗಿಂತ ಮೊದಲೇ ಕೆಳಗಿಳಿದರು. ಮೊದಲ ವಾರದ ಸೋಲು ಕೊನೆಯ ಹಂತದವರೆಗೂ ಬೆನ್ನುಬಿಟ್ಟಿಲ್ಲ. ಹಲವು ಸಲ ಅವರು ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಭಾಗವಹಿಸಿ ಚೆನ್ನಾಗಿ ಆಡಿ ಗೆಲುವಿನ ಹೊಸ್ತಿಲವರೆಗೂ ಹೋಗಿ ಬಂದಿದ್ದಾರೆ. ಆದರೆ ಗೆದ್ದು ಕ್ಯಾಪ್ಟನ್ ಆಗುವ ಕನಸು ಮಾತ್ರ ನನಸಾಗಿಲ್ಲ. ನಾಲ್ಕನೇ ವಾರದಲ್ಲಿ ಹಳ್ಳಿ ಮನೆ ಟಾಸ್ಕ್‌ನಲ್ಲಿ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಅಂತಿಮ ಹಂತದವರೆಗೂ ತುಕಾಲಿ ಬಂದಿದ್ದರು. ಆಗ ಅವರು ಸಿರಿ ಮತ್ತು ವಿನಯ್ ಇಬ್ಬರಲ್ಲಿ ಒಬ್ಬರನ್ನು ಆರಿಸಿಕೊಳ್ಳಬೇಕಾಗಿತ್ತು. ಆಗ ಅವರು ಸಿರಿ ಅವರನ್ನು ಹೊರಗಿಟ್ಟು ವಿನಯ್ ಅವರನ್ನು ಆಯ್ದುಕೊಂಡರು. ವಿನಯ್ ವಿರುದ್ಧ ಸೋತರು. ಕೊನೆಗೂ ತುಕಾಲಿ ಸಂತೋಷ್ ಕ್ಯಾಪ್ಟನ್ ಆಗಲೇ ಇಲ್ಲ. ಆದರೆ ಅವರು ತಮ್ಮ ಆಸೆ ಈಡೇರಿಸಿಕೊಳ್ಳದೇ ಬಿಡಲೂ ಇಲ್ಲ. ಕಳೆದ ವಾರ ನಡುರಾತ್ರಿ ಬಿಗ್‌ಬಾಸ್‌ ಮನೆಯ ಕ್ಯಾಪ್ಟನ್ ರೂಮ್ ಹೊಕ್ಕು ಬೆಡ್ ಮೇಲೆ ಎರಡು ನಿಮಿಷ ಮಲಗಿ ಖುಷಿಪಟ್ಟರು.

ನಗುವಿನ ಜೊತೆಯಲಿ ಆಕ್ರೋಶವೂ ಇದೆ

ತುಕಾಲಿ ಸಂತೋಷ್ ಅವರ ಬಿಗ್‌ಬಾಸ್‌ ಜರ್ನಿಯಲ್ಲಿ ನಗುವಿನ ಸಿಕ್ವೇಲ್‌ಗಳು ಸಾಕಷ್ಟಿವೆ. ತಾನು ಸದಾ ಎಲ್ಲರನ್ನೂ ನಗಿಸುತ್ತ ಇರುತ್ತೇನೆ ಎಂದು ಹೇಳುವ ತುಕಾಲಿ ಕೆಲವು ಸಲ ತಾಳ್ಮೆಗೆಟ್ಟಿದ್ದೂ ಇದೆ. ಆರಂಭಿಕ ವಾರದಲ್ಲಿ ತಮ್ಮ ನೆಚ್ಚಿನ ಸ್ಪರ್ಧಿಯನ್ನು ನಾಮಿನೇಷನ್‌ನಿಂದ ಕಾಪಾಡುವ ಟಾಸ್ಕ್‌ನಲ್ಲಿ ಇಶಾನಿ ಜೊತೆಗೆ ಮಾತಿಗೆ ಮಾತು ಬೆಳೆದು ಅದು ದೊಡ್ಡ ಜಗಳವಾಗಿಬಿಟ್ಟಿತ್ತು. ಹಾಗೆಯೇ ಸಂಗೀತಾ ಜೊತೆಗೂ ಅವರಿಗೆ ಹಲವು ಬಾರಿ ಮಾತಿನ ಚಕಮಕಿ ನಡೆದಿದೆ. ಕಳೆದ ವಾರವಷ್ಟೇ ಟಾಸ್ಕ್‌ ವೋಟಿಂಗ್ ಸಂದರ್ಭದಲ್ಲಿ ವಿನಯ್ ಜೊತೆಗೆ ಜೋರಾಗಿಯೇ ಮಾತಿನ ಚಕಮಕಿ ನಡೆದಿದೆ. ಆದರೆ ಈ ಜಗಳದ ಕಿಡಿ ನಂದಿದ ನಂತರ ಅವರು ಮತ್ತೆ ಆ ಸ್ಪರ್ಧಿಯ ಜೊತೆಗೆ ಕೈ ಜೊಡಿಸುತ್ತಾರೆ. ಅದು ಅವರ ಸ್ವಭಾವ.

ಸಂತು- ಪಂತು ಫವರ್‍‌ಫುಲ್‌ ಫ್ರೆಂಡ್‌ಷಿಪ್

‘ಮತ್ಯಾರಲ್ಲೂ ನೋಡದ, ನಿಷ್ಕಳಂಕವಾದ ಸ್ನೇಹವನ್ನು ನಿಮ್ಮಿಬ್ಬರಲ್ಲಿ ನೋಡಿದ್ದೀನಿ’ ಕಿಚ್ಚ ಸುದೀಪ್‌ ವಾರಾಂತ್ಯದ ಎಪಿಸೋಡ್‌ನಲ್ಲಿ ಹೀಗೆ ಹೇಳಿದ್ದು ವರ್ತೂರು ಸಂತೋಷ್ ಮತ್ತು ತುಕಾಲಿ ಸಂತೋಷ್ ಸ್ನೇಹದ ಬಗ್ಗೆ. ಎಲಿಮಿನೇಷನ್‌ ಸಂದರ್ಭದಲ್ಲಿ ಇಬ್ಬರಲ್ಲಿ ಒಬ್ಬರು ಹೊರಗೆ ಹೋಗುತ್ತಾರೆ ಎಂಬ ಹಂತದಲ್ಲಿ ಕೂತಿದ್ದಾಗಲೂ ಅವರಿಬ್ಬರೂ ಒಬ್ಬರಿಗೊಬ್ಬರು ಬೆಂಬಲವಾಗಿಯೇ ಮಾತಾಡಿದ್ದರು. ಸಂತು – ಪಂತು ಜೋಡಿಯಾದ ಇಬ್ಬರೂ ಆಡಿದ ಮಾತುಗಳಿಗೆ, ಆಡಿದ ಆಟಗಳಿಗೆ ಲೆಕ್ಕವೇ ಇಲ್ಲ. ಎಷ್ಟೇ ಮಾತುಗಳು ಕೇಳಿಬಂದರೂ ಅವರ ಸ್ನೇಹದಲ್ಲಿ ಬಿರುಕು ಬರಲೇ ಇಲ್ಲ. ಹಾಗೆಂದು ಭಿನ್ನಾಭಿಪ್ರಾಯಗಳಿಲ್ಲ ಎಂದಲ್ಲ. ಒಬ್ಬರಿಗೊಬ್ಬರು ಮಾತುಗಳಲ್ಲಿ ತಿವಿದುಕೊಂಡಿದ್ದು ಇದೆ, ಮುನಿಸಿಕೊಂಡಿದ್ದು ಇದೆ. ಆದರೆ ಮರುಕ್ಷಣದಲ್ಲಿಯೇ ಅದು ಸರಿಹೋಗಿ ಬಿಗ್‌ಬ್ಯಾಗ್‌ ಮೇಲೆ ಕೂತು ಹರಟಿದ್ದಾರೆ. ಈ ಬಿನ್‌ಬ್ಯಾಗ್‌ ಸ್ಟೋರಿ ಮನೆಯೊಳಗೂ ಹೊರಗೂ ಸಾಕಷ್ಟು ಸದ್ದು ಮಾಡಿತು. ತುಕಾಲಿ ಅವರ ತಂತ್ರಗಾರಿಕೆ ರೂಪುಗೊಳ್ಳುತ್ತಿದ್ದದ್ದೇ ಈ ಬಿನ್‌ಬ್ಯಾಗ್‌ ಮೇಲೆ.

ಇದನ್ನೂ ಓದಿ: BBK SEASON 10 : ಬಿಗ್‌ ಬಾಸ್‌ ಮನೆಯಿಂದ ಮೊದಲು ತುಕಾಲಿ, ನಂತ್ರ ವಿನಯ್‌ ಔಟ್‌?

ಸ್ಕೂಲ್‌ ಟಾಸ್ಕ್‌ನಲ್ಲಿ ಮಾಡಿದ ಮೋಡಿ

ತುಕಾಲಿ ಸಂತೋಷ್ ಅವರ ರಂಜನೀಯ ಪ್ರತಿಭೆ ಹೊರಗೆ ಬಂದಿದ್ದು ಸ್ಕೂಲ್‌ ಟಾಸ್ಕ್‌ನಲ್ಲಿ. ಉಳಿದವರು ತಮ್ಮ ಎದುರಾಳಿಗಳನ್ನು ತಿವಿಯಲು, ದೂರಲುಈ ಅವಕಾಶವನ್ನು ಬಳಸಿಕೊಂಡರೆ, ತುಕಾಲಿ ಸಂತೋಷ್ ಮಾತ್ರ ಬಾಲ್ಯದೊಳಗೆ ಹೋಗಿ ಬಂದಂತಿದ್ದರು. ‘ಹೊಡಿತೀನಿ’ ಎಂದು ಅವರು ಆಡುತ್ತಿದ್ದ ರೀತಿ ಹಲವು ವಾರಗಳ ಕಾಲ ಆಗಾಗ ಮನೆಯೊಳಗೆ ಪ್ರತಿಧ್ವನಿಸುತ್ತಲೇ ಇತ್ತು. ಅಲ್ಲದೇ ಬೃಂದಾವನ ಧಾರಾವಾಹಿ ತಂಡ ಮನೆಯೊಳಗೆ ಬಂದಾಗ ತುಕಾಲಿ ಸಂತೋಷ್‌, ವರ್ತೂರು ಸಂತೋಷ್, ಭಾಗ್ಯ, ತನಿಷಾ ಸೇರಿಕೊಂಡು ಮಾಡಿದ್ದ ಕಾಮಿಡಿಸ್ಕಿಟ್ ಕೂಡ ಎಲ್ಲರನ್ನೂ ನಕ್ಕುನಲಿಸಿತ್ತು. ಇದೇ ವಾರ ಅವರು ತೆಗೆದುಕೊಂಡ ಇಂಗ್ಲಿಷ್‌ ಕ್ಲಾಸ್‌ ಅಂತೂ ಮನೆಯ ಉಳಿದ ಸದಸ್ಯರಿಗೆ ಇಂಗ್ಲಿಷ್ ಕಲಿಸುವ ಬದಲು ಬರುವ ಇಂಗ್ಲಿಷ್ ಅನ್ನೂ ಮರೆಸುವಂತೆ ಮಾಡಿತ್ತು. ವಾರಾಂತ್ಯದಲ್ಲಿಯೂ ಕಿಚ್ಚ ಸುದೀಪ್ ಅವರು ತುಕಾಲಿ ಬಾಯಲ್ಲಿ ಇಂಗ್ಲಿಷ್ ಕೇಳಲು ಇಷ್ಟಪಡುತ್ತಿದ್ದರು.

ತಂತ್ರದಲ್ಲಿ ಚಾಣಕ್ಯ!

ಬರೀ ನಗಿಸುವುದನ್ನೇ ನೆಚ್ಚಿಕೊಂಡಿದ್ದರೆ ತುಕಾಲಿ ಸಂತೋಷ್ ಇಷ್ಟು ದಿನಗಳ ಕಾಲ ಮನೆಯೊಳಗೆ ಇರಲು ಸಾಧ್ಯವೇ ಇರಲಿಲ್ಲವೇನೋ. ಆದರೆ ತುಕಾಲಿ ವ್ಯಕ್ತಿತ್ವ ಅಷ್ಟಕ್ಕೇ ಸೀಮಿತವಾಗಿರಲಿಲ್ಲ. ಅವರೊಳಗೊಬ್ಬ ತಂತ್ರಗಾರನೂ ಇದ್ದ. ಗಾಸಿಪ್ ಮಾಡುತ್ತೇನೆ ಎಂದು ಹೇಳಿಕೊಂಡೇ ಅವರು ಆಡಿದ ಗಾಳಿಸುದ್ದಿಗಳು ಮನೆಯೊಳಗೆ ಬೆಂಕಿ ಹಚ್ಚಿದ್ದೂ ಇದೆ. ಅದರಲ್ಲಿಯೂ ಕಳೆದ ಕೆಲವು ವಾರಗಳಿಂದ ಅವರು ವರ್ತೂರು ಸಂತೋಷ್ ಅವರೊಂದಿಗೆ ಸೇರಿ ಮಾಡಿದ ತಂತ್ರಗಾರಿಕೆಗೆ ಉಳಿದ ಸದಸ್ಯರೆಲ್ಲ ಬೆಕ್ಕಸ ಬೆರಗಾಗಿದ್ದಂತೂ ಹೌದು. ಇತ್ತೀಚೆಗೆ ಕೂಡ, ಫಿನಾಲೆಯಲ್ಲಿ ನಿಮ್ಮ ಜೊತೆ ಇರಬೇಕಾದ ಇನ್ನೊಂದು ಕೈ ಯಾರದು ಎಂಬಪ್ರಶ್ನೆಗೆ ತುಕಾಲಿ ಅವರು, ‘ಸಂಗೀತಾ’ ಎಂದಿದ್ದರು. ಆದರೆ ಮುಂದಿನ ವಾರವೇ ಅವರು ಸಂಗೀತಾ ವಿರುದ್ಧ ಕಾರ್ತಿಕ್ ಅವರಿಗೆ ಸಪೋರ್ಟ್‌ ಮಾಡಿ ಮುಂದೆ ಬಿಟ್ಟರು. ಹೀಗೆ ಕಾಲಕ್ಕೆ ತಕ್ಕ ಹಾಗೆ ತಮ್ಮ ತಂತ್ರಗಾರಿಕೆ ಬದಲಿಸುತ್ತ, ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ವಾತಾವರಣ ರೂಪಿಸಿಕೊಳ್ಳುವ ಚಾಣಕ್ಯ ಜಾಣತನವೇ ಅವರನ್ನು ಇಲ್ಲಿಯವರೆಗೆ ತಂದಿದೆ.

ಸವಾಲಿಗೆ ಸವಾಲ್‌

ಆರಂಭಿಕ ದಿನಗಳಲ್ಲಿ ವಿನಯ್ ಅವರ ಗುಂಪಿನಲ್ಲಿ ಗುರ್ತಿಸಿಕೊಂಡಿದ್ದ ತುಕಾಲಿ ಅವರು, ಹಳ್ಳಿ ಟಾಸ್ಕ್‌ನಲ್ಲಿ ಅವರ ತಂಡವನ್ನೇ ಸಪೋರ್ಟ್‌ ಮಾಡಿ ಸಂಗೀತಾ ತಂಡ ಸೋಲುವಂತೆ ಮಾಡಿದ್ದರು. ನಂತರದ ದಿನಗಳಲ್ಲಿ ವಿನಯ್ ತಂಡದಿಂದ ಒಬ್ಬೊಬ್ಬರಾಗಿ ಎಲಿಮಿನೇಟ್ ಆಗಿ ಮನೆಯಿಂದ ಹೊರಬೀಳತೊಡಗಿದರು. ಆಗ ತುಕಾಲಿ ಅವರ ತಂಡದಿಂದ ಹೊರಬಿದ್ದು ಸಂಗೀತಾ ಅವರಿಗೆ ಹತ್ತಿರವಾದರು. ಆದರೆ ಎಂಟನೇ ವಾರದಲ್ಲಿ ಸಂಗೀತಾ, ವಿನಯ್ ತಂಡವನ್ನು ಸೇರಿಕೊಂಡಾಗ ತುಕಾಲಿ ಅವರಿಗೆ ಎದುರಾಳಿಯಾದರು. ‘ನಿಮ್ಮ ತಂಡದಿಂದ ಕಾರ್ತಿಕ್ ಮತ್ತು ತುಕಾಲಿ ತಲೆ ಬೋಳಿಸಿಕೊಳ್ಳಬೇಕು’ ಎಂದು ಸಂಗೀತಾ ಸವಾಲು ಹಾಕಿದಾಗ ಕೊಂಚವೂ ಯೋಚಿಸದೆ ತಲೆಯನ್ನು ಬೋಳಿಸಿಕೊಂಡು ತಮ್ಮ ಬದ್ಧತೆಯನ್ನು ಮೆರೆದರು.

ನಗುವಿನ ಬುಗ್ಗೆಯ ಹಿಂದೆ ನೋವಿನ ಒರತೆ

ಸದಾ ನಗುತ್ತ ನಗಿಸುತ್ತ ಇರುವ ತುಕಾಲಿ ಸಂತೋಷ್ ಅವರು ಮನೆಮಂದಿಯನ್ನೆಲ್ಲ ಭಾವುಕತೆಯಲ್ಲಿ ಮುಳುಗಿಸಿದ್ದೂ ಇದೆ. ಬಿಗ್‌ಬಾಸ್ ಮನೆಯ ಸದಸ್ಯರ ಕುಟುಂಬದವರು ಮನೆಗೆ ಭೇಟಿ ಕೊಡುವ ವಾರದಲ್ಲಿ ತುಕಾಲಿ ಅವರ ಹೆಂಡತಿ ಕೊಟ್ಟ ಎಂಟ್ರಿ ಮಾತ್ರ ತುಂಬ ವಿಚಿತ್ರವಾಗಿತ್ತು. ಎಲ್ಲರೂ ಕೈಯಲ್ಲಿ ತಿನಿಸಿನ ಡಬ್ಬ ಹಿಡಿದು ಬಂದರೆ ಅವರು ಬೆತ್ತ ಹಿಡಿದು ಬಂದಿದ್ದರು. ಎಲ್ಲ ಮನೆಯವರ ಮಂದಿ ಬರುವಾಗ, ‘ಬಿಗ್‌ಬಾಸ್ ದಯವಿಟ್ಟು ನನ್ ಹೆಂಡ್ತಿನ ಮಾತ್ರ ಇಲ್ಲಿಗೆ ಕರೆಸ್ಬೇಡಿ’ ಎಂದು ಬೇಡಿಕೊಳ್ಳುತ್ತಿದ್ದರು. ಇದನ್ನೇ ಇಟ್ಟುಕೊಂಡು ತುಕಾಲಿ ಹೆಂಡತಿ ಮನೆಯನ್ನೆಲ್ಲ ಅಟ್ಟಾಡಿಸಿಕೊಂಡು ಹೊಡೆದಿದ್ದರು. ಅವರನ್ನು ನೋಡಿ ಮನೆಯ ಸದಸ್ಯರೆಲ್ಲ ನಕ್ಕು ನಕ್ಕು ಸುಸ್ತಾಗಿದ್ದರು. ಆದರೆ ತುಕಾಲಿ ಅವರ ಹೆಂಡತಿ, ತುಕಾಲಿ ಅವರ ಒಳ್ಳೆಯ ಗುಣಗಳ ಬಗ್ಗೆ ಹೇಳುತ್ತ, ತಮ್ಮ ಕುಟುಂಬದ ಕಷ್ಟಕ್ಕೆ ಅವರು ಒದಗಿದ ರೀತಿ, ಕಷ್ಟದ ದಿನಗಳನ್ನು ನೆನಪಿಸಿಕೊಂಡಾಗ ಕ್ಷಣಕಾಲದ ಹಿಂದೆ ನಕ್ಕವರೇ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು.

ಇದನ್ನೂ ಓದಿ: BBK SEASON 10: ಹಳೆಯ ಬೇಸರ ಮರೆತು ಕಾರ್ತಿಕ್‌ಗೆ ಸಪೋರ್ಟ್‌ ಮಾಡಿ ಎಂದ ತನಿಷಾ!

ಬಿಗ್‌ಬಾಸ್‌ ಮನೆಯೊಳಗೆ ಉಳಿದ ಎಲ್ಲ ಸದಸ್ಯರಿಗಿಂತ ಲೂ ತುಂಬ ಭಿನ್ನವಾದ ವ್ಯಕ್ತಿತ್ವ ಹೊಂದಿರುವ ತುಕಾಲಿ ಸಂತೋಷ್, ತಂತ್ರಗಾರಿಕೆ ಮತ್ತು ಮನರಂಜನೆಯ ವಿಶಿಷ್ಟ ಮಿಶ್ರಣ. ಕ್ಯಾಪ್ಟನ್ ಆಗುವ ಕನಸು ನನಸಾಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದ ಹಾಗೆಯೇ ನಡುರಾತ್ರಿ ಕ್ಯಾಪ್ಟನ್ ಕೋಣೆಯ ಒಳಹೊಕ್ಕು, ಹಾಸಿಗೆಯಲ್ಲಿ ಮಲಗಿ ಹೊರಳಾಡಿ, ಆಮೇಲೆ ಕ್ಷಮೆ ಕೇಳುವ ಮುಗ್ಧ ಕೂಡ ಹೌದು. ನಿಮ್ಮ ಆಸೆ ಏನು ಎಂದು ಕೇಳಿದಾಗ ಹುಂಡೆ ಕೋಳಿ ಊಟ ಮಾಡಬೇಕು ಎನ್ನಬಲ್ಲ ರಸಾಸ್ವಾದಕ. ಹೀಗೆ ಹಲವು ಗುಣಗಳು ಸೇರಿ ರೂಪುಗೊಂಡಿರುವ ತುಕಾಲಿ ಸಂತೋಷ್‌ ಬಿಗ್ ಬಾಸ್‌ ಈ ಸೀಸನ್‌ನ ಯಶಸ್ಸಿಗೆ ಕೊಟ್ಟಿರುವ ಕೊಡುಗೆ ಖಂಡಿತ ಗಮನಾರ್ಹವಾದದ್ದು. ಅವರು ಮಾಡಿದ ಕಾಮಿಡಿಯ ತುಣುಕುಗಳು, ಅವರ ತಂತ್ರಗಾರಿಕೆಯ ಮಿಣುಕುಗಳು, ಬಿನ್‌ಬ್ಯಾಗ್‌ ಕಥನಗಳನ್ನು ಈಗಲೂ ಜಿಯೊಸಿನಿಮಾ ಆಪ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading
Advertisement
cm siddaramaiah water price hike
ಕರ್ನಾಟಕ39 seconds ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್2 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest3 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ5 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ8 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ42 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್50 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

IND vs ENG
ಕ್ರಿಕೆಟ್51 mins ago

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

VHP leader murder
ದೇಶ55 mins ago

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್1 hour ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌