BBK SEASON 10: ಬಿಗ್‌ಬಾಸ್ ಕನ್ನಡ ಸೀಸನ್‌ 10ರ ಅವಿಸ್ಮರಣೀಯ ಗಳಿಗೆಗಳು - Vistara News

ಬಿಗ್ ಬಾಸ್

BBK SEASON 10: ಬಿಗ್‌ಬಾಸ್ ಕನ್ನಡ ಸೀಸನ್‌ 10ರ ಅವಿಸ್ಮರಣೀಯ ಗಳಿಗೆಗಳು

BBK SEASON 10: ಯಶಸ್ವಿಯಾಗಿ ಬಿಗ್‌ಬಾಸ್ ಕನ್ನಡ ಸೀಸನ್‌ 10 ಅಂತಿಮ ಹಂತಕ್ಕೆ ಬಂದು ನಿಂತಿದೆ. ನೂರ ಹದಿನಾರು ದಿನಗಳ ಈ ದೀರ್ಘ ಪ್ರಯಾಣದಲ್ಲಿ ಎಣಿಸಲಾಗದಷ್ಟು ಅಮೂಲ್ಯವಾದ ಅವಿಸ್ಮರಣೀಯ ಗಳಿಗೆಗಳು ನಡೆದಿವೆ. ಆ ಪೈಕಿ ಆಯ್ದವು ಇಲ್ಲಿದೆ.

VISTARANEWS.COM


on

fun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶಸ್ವಿಯಾಗಿ ಬಿಗ್‌ಬಾಸ್ ಕನ್ನಡ ಸೀಸನ್‌ 10 (BBK SEASON 10) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಚಾಂಪಿಯನ್‌ ಯಾರು ಎನ್ನುವುದು ತಿಳಿದು ಬರಲಿದೆ. ನೂರ ಹದಿನಾರು ದಿನಗಳ ಈ ದೀರ್ಘ ಪ್ರಯಾಣದಲ್ಲಿ ಎಣಿಸಲಾಗದಷ್ಟು ಅಮೂಲ್ಯವಾದ ಅವಿಸ್ಮರಣೀಯ ಗಳಿಗೆಗಳು ನಡೆದಿವೆ. ಅವುಗಳಲ್ಲಿ ಕೆಲವು ಸಿಹಿಯಾಗಿದ್ದವು, ಕೆಲವು ಕಹಿಯಾಗಿದ್ದವು. ಅಂಥ ಅಸಂಖ್ಯಾತ ಅವಿಸ್ಮರಣೀಯ ಗಳಿಗೆಗಳಲ್ಲಿ ಕೆಲವನ್ನು ಹೆಕ್ಕಿ ಕೊಡುವ ಪ್ರಯತ್ನ ಇಲ್ಲಿದೆ.

ಜಿಯೊ ಸಿನಿಮಾ ಫನ್ ಫ್ರೈಡೆ

ಜಿಯೊ ಸಿನಿಮಾ ಕಡೆಯಿಂದ ಪ್ರತಿ ಶುಕ್ರಮವಾರ ಆಯೋಜಿಸಲಾಗುತ್ತಿದ್ದ ‘ಫನ್‌ ಫ್ರೈಡೆ’ ಎಲ್ಲ ಸ್ಪರ್ಧಿಗಳಿಗೂ ತುಂಬ ಖುಷಿಕೊಡುತ್ತಿದ್ದ ಸಮಯ. ಮನೆಯಿಂದ ಹೊರಬಿದ್ದ ಸ್ಪರ್ಧಿಗಳೆಲ್ಲರೂ ಜಿಯೊ ಸಿನಿಮಾ ಫನ್‌ ಫ್ರೈಡೆಯನ್ನು ಮೆಚ್ಚಿಕೊಂಡು ಮಾತಾಡಿರುವುದೇ ಇದಕ್ಕೆ ಸಾಕ್ಷಿ. ವಾರವಿಡೀ ಬಗೆಬಗೆಯ ಟಾಸ್ಕ್‌ಗಳಲ್ಲಿ ಜಿದ್ದಿಗೆ ಬಿದ್ದು ಆಡುತ್ತಿದ್ದ ಸ್ಪರ್ಧಿಗಳಿಗೆ ವಾರಾಂತ್ಯಕ್ಕೂ ಮುನ್ನ ರಿಲ್ಯಾಕ್ಸ್‌ ಭಾವ ಮೂಡುತ್ತಿದ್ದದ್ದು ಫನ್‌ ಫ್ರೈಡೆ. ಕಥೆ ಹೇಳುವ ಟಾಸ್ಕ್ ಇರಲಿ, ಲಗೋರಿ ಆಟವಿರಲಿ, ಮ್ಯೂಸಿಕಲ್ ಪಾಟ್‌ ಇರಲಿ, ಹಿಟ್ಟು ಪಾಸ್ ಮಾಡುವ ಮೋಜಿನ ಟಾಸ್ಕ್‌ ಇರಲಿ… ಎಲ್ಲ ಸ್ಪರ್ಧಿಗಳಿಗೂ ಖುಷಿ ಕೊಡುತ್ತಿದ್ದ ರಿಫ್ರೆಶ್ ಭಾವ ಹುಟ್ಟಿಸುತ್ತಿದ್ದ ಚಟುವಟಿಕೆ ಬಿಗ್‌ಬಾಸ್ ಮನೆಯಲ್ಲಿ ಹಲವು ಮೋಜಿನ ಗಳಿಗೆಗಳನ್ನು ಸೃಷ್ಟಿ ಮಾಡಿದೆ. ಫನ್‌ಫ್ರೈಡೆಯ ಮೋಜಿನ ರಂಜನೆ ಹೇಗಿತ್ತು ಎಂಬುದರ ಸಣ್ಣ ಝಲಕ್ ಈ ಇಲ್ಲಿ ನೋಡಬಹುದು: https://go.jc.fm/fRhd/pokh4dcf

ಟಿಕೆಟ್ ಟು ಫಿನಾಲೆ

ಫಿನಾಲೆ ವಾರಕ್ಕೆ ನೇರ ಪ್ರವೇಶ ಪಡೆಯಲು ಬಿಗ್‌ಬಾಸ್ ಮನೆಯ ಸದಸ್ಯರಿಗೆ ಒಂದು ಅವಕಾಶ ನೀಡಿತ್ತು,. ಈ ʼಟಿಕೆಟ್ ಟು ಫಿನಾಲೆ’ ವಾರದಲ್ಲಿ ಹಲವು ಬಗೆಯ ಟಾಸ್ಕ್‌ಗಳನ್ನು ನೀಡಿ ಅವುಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಲ್ಲಿ ಒಬ್ಬರು ನೇರವಾಗಿ ಟಿಕೆಟ್ ಟು ಫಿನಾಲೆ ಪ್ರವೇಶ ಪಡೆಯುತ್ತಾರೆ ಎಂದು ಹೇಳಿದ್ದರು.

ಈ ವಾರದಲ್ಲಿ ಪ್ರತಾಪ್‌ ಹಲವು ಟಾಸ್ಕ್‌ಗಳಲ್ಲಿ ಚೆನ್ನಾಗಿ ಆಡಿ ಗೆದ್ದು 420 ಅಂಕಗಳನ್ನು ಗಳಿಸಿದ್ದರು. 360 ಅಂಕಗಳನ್ನು ಗಳಿಸಿ ಸಂಗೀತಾ ಎರಡನೇ ಸ್ಥಾನದಲ್ಲಿದ್ದರು. ನಮ್ರತಾ ಮೂರನೇ ಸ್ಥಾನದಲ್ಲಿದ್ದರು. ಬಿಗ್‌ಬಾಸ್‌ ಅತಿ ಹೆಚ್ಚು ಅಂಕ ಗಳಿಸಿದ ಮೂರು ಸ್ಪರ್ಧಿಗಳಲ್ಲಿ ಯಾರು ಟಿಕೆಟ್ ಟು ಫಿನಾಲೆಗೆ ಪ್ರವೇಶ ಪಡೆಯಲು ಹೆಚ್ಚು ಅರ್ಹರು ಎಂಬುದನ್ನು ಮನೆಯ ಸದಸ್ಯರು ಬಹುಮತದ ಆಧಾರದಲ್ಲಿ ನಿರ್ಧರಿಸಬೇಕಾಗಿತ್ತು. (https://go.jc.fm/fRhd/0npc69a5) ಇದರಲ್ಲಿ ಮೂರು ಮತಗಳನ್ನು ಪಡೆದು ಸಂಗೀತಾ ಶೃಂಗೇರಿ ನೇರವಾಗಿ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದರು. ಅನಿರೀಕ್ಷಿತವಾಗಿ ತಮಗೆ ಒದಗಿ ಬಂದ ಈ ಅವಕಾಶವನ್ನು ಸಂಗೀತಾ ಸಂಭ್ರಮಿಸಿದ್ದೊಂದು ಅವಿಸ್ಮರಣೀಯ ಗಳಿಗೆ.

ಕುಟುಂಬ ಸದಸ್ಯರು ಬಂದಿದ್ದು

ಈ ಸೀಸನ್‌ ಅತಿ ಭಾವುಕವಾದ ವಾರ ಎಂದರೆ ಸ್ಪರ್ಧಿಗಳ ಕುಟುಂಬದವರು ಮನೆಯೊಳಗೆ ಬಂದಿದ್ದು. ಆ ವಾರ ಬಿಗ್‌ಬಾಸ್‌ ಮನೆಯವರಿಗೆ ಇಡೀ ವಾರ ಪಾಸ್‌- ಪ್ಲೇ ಟಾಸ್ಕ್‌ ಕೊಡುತ್ತಿದ್ದರು. ಪಾಸ್‌ ಎಂದಾಗ ಎಲ್ಲ ಸದಸ್ಯರೂ ನಿಶ್ಚಲವಾಗಬೇಕಾಗಿತ್ತು. ಹಾಗೆಯೇ ಪ್ಲೇ ಎಂದಾಗ ಚಲಿಸಬಹುದಿತ್ತು. ಒಬ್ಬೊಬ್ಬ ಮನೆಯ ಸದಸ್ಯ ಮನೆಯೊಳಗೆ ಬಂದಾಗಲೂ ಅವರ ಉತ್ಸಾಹ ಉಕ್ಕೇರುತ್ತಿತ್ತು. ಆದರೆ ಅಷ್ಟರೊಳಗೆ ಬಿಗ್‌ಬಾಸ್ ಅವರಿಗೆ ಪಾಸ್ ಹೇಳಿ ಬಿಟ್ಟಿರುತ್ತಿದ್ದರು. ಆಗ ತಮ್ಮ ಮನೆಯ ಸದಸ್ಯರು ಬಂದಿದ್ದರೂ ಅವರ ಮಾತಿಗೆ ಪ್ರತಿಕ್ರಿಯಿಸದೆ ನಿಶ್ಚಲರಾಗಿ ನಿಂತಿರಬೇಕಿತ್ತು. ಈ ನಿಲ್ಲು, ಚಲಿಸುವ ಆಟ ವಾರವಿಡೀ ಮುಂದುವರಿದು ಭಾವನೆಗಳೂ ಕಟ್ಟಿ, ಕಟ್ಟೊಡೆದು ಹರಿಯುತ್ತಿತ್ತು. (https://go.jc.fm/fRhd/6dtk61sb)

ಬಿಗ್‌ಬಾಸ್‌ ಪ್ರಾಥಮಿಕ ಶಾಲೆ!

‘ರಕ್ಕಸರು-ಗಂಧರ್ವರುʼ ಟಾಸ್ಕ್‌ ಇರುವ ವಾರದಲ್ಲಿ ಮನೆಯಲ್ಲಿ ಉಂಟಾಗಿದ್ದ ಗರಂ ಅನ್ನು ಕಡಿಮೆ ಮಾಡುವಂತೆ ಮುಂದಿನ ವಾರ ಬಿಗ್‌ಬಾಸ್ ಮನೆಯಲ್ಲಿ ಪ್ರಾಥಮಿಕ ಶಾಲೆಯನ್ನು ತೆರೆಯಲಾಗಿತ್ತು. ಬಿಗ್‌ಬಾಸ್ ಮನೆಯ ಸದಸ್ಯರಲ್ಲಿ ಕೆಲವರು ವಿದ್ಯಾರ್ಥಿಗಳಾಗಿದ್ದರೆ, ಇನ್ನು ಕೆಲವರು ಶಿಕ್ಷಕರಾಗಿದ್ದರು. ವ್ಯಕ್ತಿತ್ವ ವಿಕಸನ, ಇತಿಹಾಸ, ಕನ್ನಡ, ಗಣೀತ, ಪಿಟಿ ತರಗತಿಗಳು ನಡೆದವು. ತುಂಟ ವಿದ್ಯಾರ್ಥಿಗಳ ಕಾಟದಲ್ಲಿ ಶಿಕ್ಷಕರು ಬಸವಳಿದರು. ಸಿಟ್ಟಿಗೆದ್ದು ಶಿಕ್ಷಿಸಿದರು. ಜತೆಗೆ ಸೇರಿ ಡಾನ್ಸ್ ಮಾಡಿದರು. ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಸ್ಟಾರ್ ನೀಡಿದರು. ವಿದ್ಯಾರ್ಥಿಗಳು ತಾವು ಇಷ್ಟಪಡದ ಶಿಕ್ಷಕರ ವಿರುದ್ಧ ದೂರು ನೀಡಿದರು. ಒಟ್ಟಾರೆ ಬಿಗ್‌ಬಾಸ್ ಮನೆಯೊಳಗಿನ ಸದಸ್ಯರು ಒಂದು ವಾರದ ಮಟ್ಟಿಗೆ ತಮ್ಮೊಳಗೆ ಅಡಗಿದ್ದ ಮಗುಮನಸ್ಸನ್ನು ಅನಾವರಣಗೊಳಿಸಿತು. (https://go.jc.fm/fRhd/jhjlejxw)

ರಕ್ಕಸರು ವರ್ಸಸ್ ಗಂಧರ್ವರು

ಈ ಸಲದ ಬಿಗ್‌ಬಾಸ್ ಕನ್ನಡ ಮನೆ ಅತಿ ಹೆಚ್ಚು ಹೀಟ್‌ ಅನುಭವಿಸಿದ್ದು ರಕ್ಕಸರು- ಗಂಧರ್ವರ ಟಾಸ್ಕ್‌ನಲ್ಲಿ. ಟಾಸ್ಕ್‌ ಎಂಬುದು ಎದುರಾಳಿಗಳನ್ನು ಕೆರಳಿಸುವ ಅವಕಾಶವಾಗಿ ಬದಲಾಗಿ, ಅದ್ಕೆ ಸೇಡು ತೀರಿಸಿಕೊಳ್ಳಲು ಮತ್ತೊಂದು ತಂಡ ಪ್ರಯತ್ನಿಸುವತ್ತ ಹೋಗಿ, ಅದು ಅತಿರೇಕಕ್ಕೆ ಹೋಗಿ ಸಂಗೀತಾ ಮತ್ತು ಪ್ರತಾಪ್ ಅವರ ಕಣ್ಣಿಗೆ ಗಾಯವಾಗಿ ಆಸ್ಪತ್ರೆ ಸೇರುವಂತಾಗಿದ್ದು ಇದೇ ವಾರದಲ್ಲಿ. ವಿನಯ್ ಮತ್ತು ಕಾರ್ತಿಕ್ ನಡುವೆ ಗಲಾಟೆಯಾಗಿ, ಕಾರ್ತಿಕ್‌ ನೆಲಕ್ಕೆಸೆದ ಚಪ್ಪಲಿ ಸಿಡಿದು ವಿನಯ್‌ಗೆ ತಗುಲಿದ್ದು ಇದೇ ವಾರದಲ್ಲಿ. ಹಲವು ಅಟ್ಟಹಾಸಕ್ಕೆ, ಇನ್ನು ಕೆಲವರ ಪ್ರಾಣಸಂಕಟಕ್ಕೆ ಈ ವಾರ ಸಾಕ್ಷಿಯಾಗಿತ್ತು. (https://go.jc.fm/fRhd/dpto8g5r)

ಡ್ರೋನ್‌ ಪ್ರತಾಪ್ ತಂತ್ರಗಾರಿಕೆ

ಡ್ರೋನ್‌ ಪ್ರತಾಪ್ ಅವರ ತಂತ್ರಗಾರಿಕೆ ಹಲವು ಬಾರಿ ಮನೆಯೊಳಗೆ ಯಶಸ್ವಿಯಾಗಿ ಪ್ರಯೋಗ ಕಂಡಿದೆ. ಅವರು ನಾಯಕರಾದಾಗ, ನಮ್ರತಾ ಅವರು ಕ್ಯಾಪ್ಟನ್ ಆಗಿ ಆಯ್ಕೆಯಾಗುವ ಹಂತದಲ್ಲಿ ವಿಶೇಷವಾಗಿ ಪ್ರತಾಪ್ ತಂತ್ರಗಾಗಿಕೆ ಗಮನಸೆಳೆದಿತ್ತು. ಹಾಗೆಯೇ ಟಿಕೆಟ್ ಟು ಫಿನಾಲೆ ಟಾಸ್ಕ್‌ಗಳಲ್ಲಯೂ ಕೂಡ ಪ್ರತಾಪ್‌ ಅವರು ತಮ್ಮ ತಂತ್ರಗಾರಿಕೆಯಿಂದಲೇ ಅತಿ ಹೆಚ್ಚು ಅಂಕ ಗಳಿಸಿದ್ದರು. (https://go.jc.fm/fRhd/3dsz9pzz)

ಸಂಗೀತಾ-ವಿನಯ್ ಹಣಾಹಣಿ

ಬಿಗ್‌ಬಾಸ್ ಮನೆಯೊಳಗೆ ಆರಂಭದಿಂದಲೂ ಮಾತಿನ ಚಕಮಕಿ ನಡೆದಿತ್ತು. ಅದು ಹಲವು ಸಲ ಅತಿರೇಕಕ್ಕೂ ಹೋಗಿತ್ತು. ಹಳ್ಳಿ ಟಾಸ್ಕ್‌ನಲ್ಲಯಂತೂ ಸಂಗೀತಾ ವಿನಯ್ ಮುಖಾಮುಖಿ ಜೋರಾಗಿಯೇ ನಡೆದಿತ್ತು. ಮಾತಿಗೆ ಮಾತು, ಜಗಳಕ್ಕೆ ಜಗಳ ಇಡೀ ಮನೆಯನ್ನು ಪ್ರಕ್ಷುಬ್ದತೆಗೆ ದೂಡಿತ್ತು. ಅದನ್ನು ಹೊರತುಪಡಿಸಿಯೂ ಎಲಿಮಿನೇಷನ್ ಸಂದರ್ಭದಲ್ಲಿ ಗೇಮ್ ಸಂದರ್ಭದಲ್ಲಿ ವಿನಯ್ ಮತ್ತು ಸಂಗೀತ ನಡುವೆ ಜಗಳ ನಡೆಯುತ್ತಲೇ ಇತ್ತು. (https://go.jc.fm/fRhd/vmvk0szk).

ನಮ್ರತಾ ಕಮ್‌ಬ್ಯಾಕ್‌!

ಆರಂಭದ ದಿನಗಳಲ್ಲಿ ವಿನಯ್ ಗುಂಪಿನಲ್ಲಿ ಸೇರಿಕೊಂಡು ತಮ್ಮ ಸ್ವಂತ ಅಸ್ತಿತ್ವವನ್ನೇ ಕಾಣಿಸಲಾಗದೆ ಒದ್ದಾಡುತ್ತಿದ್ದ ನಮ್ರತಾ ನಂತರದ ದಿನಗಳಲ್ಲಿ ಅದರಲ್ಲಿಯೂ ಮನೆಯಿಂದ ಹೊರಗೆ ಬರುವ ಹಿಂದಿನ ಕೆಲವು ವಾರಗಳಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದರು. ಅವರು ಸದಾಕಾಲ ದ್ವೇಷಿಸುತ್ತಿದ್ದ ಸಂಗೀತಾ ಜೊತೆಗೆ ಸ್ನೇಹಬೆಳೆಸಿಕೊಂಡು ಆಪ್ತರಾದರು. ಆಗ ನಮ್ರತಾ ಅವರ ಸ್ವಂತ ವ್ಯಕ್ತಿತ್ವ, ಶಕ್ತಿ ಎಲ್ಲವೂ ಕಾಣಿಸಿಕೊಂಡಿದ್ದು ಆ ವಾರಗಳಲ್ಲಿಯೇ. (https://go.jc.fm/fRhd/n6l23myp)

ಪ್ರತಾಪ್‌ಗೆ ತುಕಾಲಿ ಸಂತೋಷ್‌ ಪ್ರೋತ್ಸಾಹ

ತುಕಾಲಿ ಸಂತೋಷ್ ಬಿಗ್‌ಬಾಸ್ ಮನೆಯಲ್ಲಿ ಅತಿಹೆಚ್ಚು ಎಂಟರ್‌ಟೈನ್‌ಮೆಂಟ್‌ ನೀಡಿದ ಸದಸ್ಯ . ಪ್ರತಾಪ್ ಅವರಿಗೆ ಒಂದು ಕಾಲಕ್ಕೆ ಅವರ ಹಾಸ್ಯ ನೋವನ್ನುಂಟು ಮಾಡಿತ್ತು. ನಂತರದ ದಿನಗಳಲ್ಲಿ ತುಕಾಲಿ ಅವರೇ ಪ್ರತಾಪ್ ಬೆಂಬಲಕ್ಕೆ ನೀಡಿದ್ದರು (https://go.jc.fm/fRhd/74lusrqd)

ಇದನ್ನೂ ಓದಿ: BBK SEASON 10: ʻನಮ್ರತಾʼ ಓದಿದ್ದು ಯಾರ ಹೆಸರು? ಅದೃಷ್ಟ ಕೈ ಕೊಟ್ಟಿದ್ದು ಯಾರಿಗೆ?

ಹಬ್ಬದ ಸಂಭ್ರಮ

ಸಂಕ್ರಾಂತಿಯ ಸಂದರ್ಭದಲ್ಲಿ ಮನೆಯೆಲ್ಲ ಹಬ್ಬದ ಸಂಭ್ರಮದಲ್ಲಿ ಮುಳುಗಿತ್ತು. ವಾರಾಂತ್ಯದಲ್ಲಿ ಎಲಿಮಿನೇಷನ್ ಸಂದರ್ಭದಲ್ಲಿ ವರ್ತೂರು ಮತ್ತು ತುಕಾಲಿ ಸಂತೋಷ್ ಅವರು ಎಲಿಮಿನೇಷನ್‌ ಸೀಟ್‌ನಲ್ಲಿ ಕೂತಿದ್ದರು. ಆ ಸಂದರ್ಭವು ಅವರ ನಡುವಿನ ಸ್ನೇಹಸಂಬಂಧವನ್ನೂ ಕರ್ನಾಟಕಕ್ಕೆ ಪರಿಚಯಿಸಿತ್ತು. ಕೊನೆಗೆ ಸುದೀಪ್, ಆ ವಾರದ ಎಲಿಮಿನೇಷನ್‌ ಅನ್ನು ಹೋಲ್ಡ್‌ನಲ್ಲಿ ಇರಿಸಿ ವರ್ತೂರು ಮತ್ತು ತುಕಾಲಿ ಸಂತೋಷ್ ಇಬ್ಬರನ್ನೂ ಮನೆಯೊಳಗೆ ಉಳಿಸಿದ್ದರು. ಆ ವಾರ ಮಿಡ್‌ವೀಕ್‌ ಎಲಿಮಿನೇಷನ್‌ನಲ್ಲಿ ತುನಿಷಾ ಮನೆಯಿಂದ ಹೊರಗೆ ಬಂದಿದ್ದರು. (https://go.jc.fm/fRhd/2hk2k61q)

ಹಲವು ಪರ್ಫಾರ್ಮೆನ್ಸ್‌, ಕಲರ್‌ಫುಲ್‌ ಡಾನ್ಸ್‌, ಕಚಗುಳಿಯ ಮಾತುಕತೆ ಎಲ್ಲವೂ ತಂಬಿರುವ ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಫಿನಾಲೆ ಶನಿವಾರ ಮತ್ತು ಭಾನುವಾರ ಜಿಯೊಸಿನಿಮಾದಲ್ಲಿ ಸಂಜೆ 7.30ಯಿಂದ ಪ್ರಸಾರವಾಗುತ್ತಿದೆ. ಕಲರ್ಸ್‌ ಕನ್ನಡದಲ್ಲಿಯೂ ಅದೇ ಸಮಯದಲ್ಲಿ ಫಿನಾಲೆ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Tumkur Accident
ಕರ್ನಾಟಕ15 mins ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ17 mins ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ30 mins ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್58 mins ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ1 hour ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Dolly Dhananjay Koti Movie Kannada First song will out
ಸ್ಯಾಂಡಲ್ ವುಡ್1 hour ago

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

esim cyber safety column
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Nijjar Killing Case
ವಿದೇಶ2 hours ago

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

HD Revanna
ಪ್ರಮುಖ ಸುದ್ದಿ2 hours ago

HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

Maggi Tragedy
ದೇಶ2 hours ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು20 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌