MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ - Vistara News

ರಾಜಕೀಯ

MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

MLC Election: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ (ಜ. 29) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

VISTARANEWS.COM


on

MLC Election Bangalore Teachers Constituency By election NDA candidate AP Ranganath files nomination
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok sabha Elections 2024) ಇನ್ನು ಕೆಲವೇ ತಿಂಗಳು ಬಾಕಿ ಇದೆ. ರಾಜ್ಯ ರಾಜಕಾರಣ (Karnataka Politics) ರಂಗೇರಿದೆ. ಈ ನಡುವೆ ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ (ಜ. 29) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದ ಬಿಜೆಪಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯುತ್ತಲಿದೆ. ಇದಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಯಾವ ಪಕ್ಷದವರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಈಚೆಗೆ ಮಾಜಿ ಸಿಎಂಗಳಾದ ಬಿ.ಎಸ್.‌ ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ನಡೆದಿತ್ತು. ಕೊನೆಗೆ ಜೆಡಿಎಸ್‌ಗೆ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದರು. ಬಳಿಕ ಈ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್‌ (BJP high command) ಗಮನಕ್ಕೆ ತಂದು ಅಲ್ಲಿಂದಲೂ ಒಪ್ಪಿಗೆ ಪಡೆದುಕೊಂಡಿದ್ದರು.

ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದ ಬಿ.ಎಸ್.‌ ಯಡಿಯೂರಪ್ಪ

ವಿಧಾನ ಪರಿಷತ್‌ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರವನ್ನು ದೆಹಲಿಗೆ ತಿಳಿಸುತ್ತೇವೆ. ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದ್ದು, ಒಟ್ಟಾಗಿ ಎದುರಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರು ಅಂದಿನ ಸಭೆ ಬಳಿಕ ಮಾಧ್ಯಮದವರಿಗೆ ಹೇಳಿದ್ದರು.

ಇದನ್ನೂ ಓದಿ: Hanuman Flag : ಕಾಂಗ್ರೆಸ್‌ ಶಾಸಕ ರವಿ ಗಣಿಗ ಫ್ಲೆಕ್ಸ್‌ ಹರಿದು ಛಿದ್ರಗೊಳಿಸಿದ ಹನುಮ ಭಕ್ತರು

ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಎಂದು ಹೇಳಿದ್ದ ಎಚ್‌ಡಿಕೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಇಂದು ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಇದು ಮೊದಲ ಸಭೆಯಾಗಿದ್ದು, ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ವಿಧಾನ ಪರಿಷತ್‌ಗೆ ಬೈ ಎಲೆಕ್ಷನ್ ಇದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇವೆ. ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಅದು ತೊಲಗಬೇಕು ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ; ಸಿದ್ದರಾಮಯ್ಯ ಉತ್ತರ ಏನಿತ್ತು?

CM Siddaramaiah: ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

VISTARANEWS.COM


on

cm siddaramaiah kempegowda jayanthi
Koo

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಕೇಳಿಕೊಂಡರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರು ಕೂಡಾ ಉಪಸ್ಥಿತರಿದ್ದರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.

ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದು ಹೇಳಿದರು. ಈ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶ ರವಾನೆ ಮಾಡಿದರು. ಡಿಕೆಶಿ ಸಿಎಂ ಆಗೋದು ಹೈಕಮಾಂಡ್ ಕೈಯಲ್ಲಿ ಇದೆ ಅನ್ನುವುದನ್ನು ಸ್ಪಷ್ಟಪಡಿಸಿದರು.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

ಡಿಸಿಎಂ ಕೂಗು ಎಬ್ಬಿಸಿದ್ದ ಸಿದ್ದರಾಮಯ್ಯ ಬಣಕ್ಕೆ ಮಾಸ್ಟರ್ ಸ್ಟ್ರೋಕ್ ಕೊಡಲು ಡಿಕೆ ಶಿವಕುಮಾರ್ ಈ ಮೂಲಕ ಮುಂದಾದರೇ ಎಂಬ ಅನುಮಾನವೂ ಮೂಡಿದೆ. ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದು ಸಿಎಂ ಆಪ್ತ ಸಚಿವರು ಹೇಳಿದ್ದರು. ನಿನ್ನೆ ಡಿಕೆಶಿ ಬಣದ ಶಾಸಕರಿಂದ, ಡಿಕೆ ಶಿವಕುಮಾರ್ ಸಿಎಂ ಮಾಡಿ ಎಂಬ ಹಕ್ಕೊತ್ತಾಯ ಬಂದಿತ್ತು. ಹತ್ತು ಜನರನ್ನು ಡಿಸಿಎಂ ಮಾಡಿ ಅಂತ ಹೇಳಿಕೆಯೂ ಬಂದಿತ್ತು. ಅದರ ಬೆನ್ನಲ್ಲೇ ಸ್ವಾಮೀಜಿಯಿಂದಲೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಅಂತ ಸಲಹೆ ಬಂದಿದೆ. ಆ ಮೂಲಕ ಸಿಎಂ ಬಣದ ಏಟಿಗೆ ಡಿಕೆಶಿ ಬಣ ಎದಿರೇಟು ನೀಡಲಾಗಿದೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

Continue Reading

ದೇಶ

Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Parliament Sessions: ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

VISTARANEWS.COM


on

Parliament Sessions
Koo

ಹೊಸದಿಲ್ಲಿ: 18ನೇ ಲೋಕಸಭಾ ಅಧಿವೇಶನ(Parliament Sessions)ದಲ್ಲಿ ಇಂದು ಸಭಾಧ್ಯಕ್ಷರ ಪೀಠದ ಬಳಿ ಇರುವ ಸೆಂಗೋಲ್‌(Sengol) ರಾಜದಂಡ ವಿಚಾರ ಚರ್ಚೆಗೆ ಗ್ರಾಸವಾಯಿತು. ಸೆಂಗೋಲ್‌(Sengol) ಅನ್ನು ಬದಲಿಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಸಮಾಜವಾದಿ ಪಕ್ಷದ ಸಂಸದ ಆರ್‌.ಕೆ. ಚೌಧರಿ ಈ ಬಗ್ಗೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸೆಂಗೋಲ್‌ ಬದಲಾಗಿ ಸಂವಿಧಾನದ ಪ್ರತಿಯನ್ನು ಇಡುವಂತೆ ಒತ್ತಾಯಿಸಿದ್ದಾರೆ.

ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿತು ಮತ್ತು ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರ ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೊಲ್’ ಅನ್ನು ಸ್ಥಾಪಿಸಿತು. ಸೆಂಗೋಲ್ ಎಂಬುದು ತಮಿಳು ಪದವಾಗಿದ್ದು, ಇದರ ಅರ್ಥ ರಾಜದಂಡ. ರಾಜದಂಡ ಎಂದರೆ ರಾಜನ ಕೋಲು ಎಂದೂ ಅರ್ಥ. ರಾಜಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ. ಈಗ, ಅರ್ಹ ಮತದಾರರಾಗಿರುವ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ಈ ದೇಶವನ್ನು ನಡೆಸಲು ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಹಾಗಾದರೆ ದೇಶವು ಸಂವಿಧಾನದಿಂದ ನಡೆಯುತ್ತದೋ? ಅಥವಾ ರಾಜದಂಡದಿಂದ ನಡೆಸಲ್ಪಡುತ್ತದೆಯೇ? ‘ಸೆಂಗೊಲ್’ ಬದಲಿಗೆ ಪ್ರಜಾಪ್ರಭುತ್ವವನ್ನು ಉಳಿಸಲು ಸಂವಿಧಾನದ ಪ್ರತಿಯನ್ನು ಇರಿಸಬೇಕೆಂದು ಒತ್ತಾಯಿಸಿದರು.

ಈ ಸೆಂಗೋಲ್‌ ಅನ್ನು ಸ್ಥಾಪಿಸುವಾಗ ಪ್ರಧಾನಿ ಮೋದಿ ತಲೆಬಾಗಿ ನಮಸ್ಕರಿಸಿದ್ದರು. ಆದರೆ ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅದಕ್ಕೆ ನಮಸ್ಕರಿಸುವುದನ್ನು ಮರೆತಿದ್ದಾರೆ. ನಾವೇ ಇದೀಗ ಅವರಿಗೆ ಇದನ್ನು ನೆನಪಿಸಬೇಕಾಗಿದೆ ಎಂದು ಚೌಧರಿ ಕುಟುಕಿದರು. ಚೌಧರಿ ಬೇಡಿಕೆಗೆ ಹಿರಿಯ ಕಾಂಗ್ರೆಸ್‌ ಮುಖಂಡ ಮಾಣಿಕ್ಯಂ, ಆರ್‌ಜೆಡಿ ಸಂಸದರು ಹಾಗೂ ಲಾಲೂ ಪ್ರಸಾದ್‌ ಪುತ್ರಿ ಮೀಸಾ ಭಾರತಿ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ತಿರುಗೇಟು

ಪ್ರತಿಪಕ್ಷಗಳ ಆರೋಪಕ್ಕೆ ಬಿಜೆಪಿ ಸೇರಿದಂತೆ ಎನ್‌ಡಿಎ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಸಮಾಜವಾದಿ ಪಕ್ಷವು ಮೊದಲು ರಾಮಚರಿತಮಾನಸ್ ಮತ್ತು ಈಗ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಮತ್ತು ವಿಶೇಷವಾಗಿ ತಮಿಳು ಸಂಸ್ಕೃತಿಯ ಭಾಗವಾಗಿರುವ ಸೆಂಗೋಲ್ ಮೇಲೆ ದಾಳಿ ಮತ್ತು ನಿಂದನೆ ಮಾಡಿದೆ. ಸೆಂಗೋಲ್‌ನ ಈ ಅವಮಾನವನ್ನು ಅವರು ಬೆಂಬಲಿಸುತ್ತಾರೆಯೇ ಎಂಬುದನ್ನು ಡಿಎಂಕೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ದೇಶ

Droupadi Murmu: ನೀಟ್‌ ಅಕ್ರಮ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

Droupadi Murmu: ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ಅವರು ಮಾತನಾಡಿ ಈ ಭರವಸೆ ನೀಡಿದ್ದಾರೆ.

VISTARANEWS.COM


on

Droupadi Murmu
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಮಾತನಾಡಿದ್ದಾರೆ. ಈ ವೇಳೆ ಅವರು ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೆಸ್‌ ಮಾರ್ಕ್‌ ನೀಡುವ ಮೂಲಕ ವಿವಾದ ಎಬ್ಬಿಸಿದ ನೀಟ್‌ (NEET) ಪರೀಕ್ಷೆ ಬಗ್ಗೆ ಪ್ರಸ್ತಾವಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ” ಎಂದು ರಾಷ್ಟ್ರಪತಿ ತಿಳಿಸಿದ್ದಾರೆ. ʼʼಪ್ರಶ್ನೆ ಪತ್ರಿಕೆ ಸೋರಿಕೆ ಹಲವು ರಾಜ್ಯಗಳಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದುʼʼ ಎಂದು ಹೇಳಿದ್ದಾರೆ.

“ಸರ್ಕಾರಿ ನೇಮಕಾತಿಗಳು ಮತ್ತು ಪರೀಕ್ಷೆಗಳಲ್ಲಿ ಪಾವಿತ್ರ್ಯತೆ, ಪಾರದರ್ಶಕತೆ ಅತ್ಯಗತ್ಯ. ನ್ಯಾಯಯುತ ತನಿಖೆ ನಡೆಸಲು ಮತ್ತು ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳಲ್ಲಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

ಇತ್ತೀಚೆಗೆ ಕೇಂದ್ರ ಸರ್ಕಾರ ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿರುವ ಬಗ್ಗೆ ಪ್ರಸ್ತಾವಿಸಿದ ದ್ರೌಪದಿ ಮುರ್ಮು ಅವರು, ʼʼಪ್ರಸ್ತುತ ದಿನಗಳಲ್ಲಿ ಸಾವಯವ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿಸುತ್ತಿದೆ. ಈ ಬೇಡಿಕೆಯನ್ನು ಪೂರೈಸಲು ಭಾರತೀಯ ರೈತರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ. ಸರ್ಕಾರ ಖಾರಿಫ್ ಬೆಳೆಗಳ ಬೆಂಬಲ ಬೆಲೆಯನ್ನೂ ಹೆಚ್ಚಿಸಿದೆ. ನಾವು ಹೆಚ್ಚು ಹೆಚ್ಚು ಸ್ವಾವಲಂಬಿಗಳಾಗಬೇಕು ಎಂಬ ಕಲ್ಪನೆಯನ್ನು ಇಟ್ಟುಕೊಂಡು ನೀತಿಯನ್ನು ರೂಪಿಸಲಾಗಿದೆʼʼ ಎಂದು ಹೇಳಿದ್ದಾರೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಮತ್ತು ಆರ್ಥಿಕತೆಯ ಗಾತ್ರದ ದೃಷ್ಟಿಯಿಂದ 2014ರ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದೆ ಎಂದ ಅವರು ʼʼಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯತ್ತ ಸರ್ಕಾರ ಈಗ ಗಮನ ಹರಿಸಿದೆ. ಉತ್ಪಾದನೆ, ಸೇವೆ ಮತ್ತು ಕೃಷಿ ಈ ಮೂರೂ ವಿಭಾಗಗಳಿಗೆ ಸರ್ಕಾರ ಸಮಾನ ಆದ್ಯತೆ ನೀಡುತ್ತಿದೆ. ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ತ್ವರಿತಗತಿಯಲ್ಲಿ ಆತ್ಮನಿರ್ಭರವಾಗುತ್ತಿದೆʼʼ ಎಂದು ನುಡಿದಿದ್ದಾರೆ.

ಸಂಸತ್ತು ಸುಗಮವಾಗಿ ನಡೆಯುವ ಅಗತ್ಯವನ್ನು ಒತ್ತಿ ಹೇಳಿದ ಅವರು, “ಸಂಸತ್ತು ತನ್ನ ವ್ಯವಹಾರವನ್ನು ಸುಗಮವಾಗಿ ನಡೆಸಿದಾಗ, ಇಲ್ಲಿ ಆರೋಗ್ಯಕರ ಚರ್ಚೆಗಳು ನಡೆದಾಗ, ದೂರಗಾಮಿ ನಿರ್ಧಾರಗಳನ್ನು ತೆಗೆದುಕೊಂಡಾಗ, ಜನರು ಸರ್ಕಾರದ ಮೇಲೆ ಮಾತ್ರವಲ್ಲದೆ ಇಡೀ ವ್ಯವಸ್ಥೆಯ ಮೇಲೆ ವಿಶ್ವಾಸವನ್ನು ಇಡುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಸಂಸತ್ತಿನ ಪ್ರತಿ ಕ್ಷಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಾರೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡುತ್ತಾರೆ ಎನ್ನುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading
Advertisement
Paris Olympics 2024
ಕ್ರೀಡೆ15 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್20 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ20 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ29 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ33 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest1 hour ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Ashada Sale 2024
ಫ್ಯಾಷನ್1 hour ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌