Vice Chancellor: ಕುಲಪತಿಗಳ ಖಾಲಿ ಹುದ್ದೆ ಭರ್ತಿ, ಹೊಸ ವಿವಿಗಳಿಗೆ ಅನುದಾನ ನೀಡಿ: ಅಶ್ವತ್ಥನಾರಾಯಣ ಆಗ್ರಹ - Vistara News

ಶಿಕ್ಷಣ

Vice Chancellor: ಕುಲಪತಿಗಳ ಖಾಲಿ ಹುದ್ದೆ ಭರ್ತಿ, ಹೊಸ ವಿವಿಗಳಿಗೆ ಅನುದಾನ ನೀಡಿ: ಅಶ್ವತ್ಥನಾರಾಯಣ ಆಗ್ರಹ

Vice Chancellor: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಮಯದಿಂದ ಉನ್ನತ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಗೊಂದಲಗಳನ್ನು ನಿರ್ಮಾಣ ಮಾಡುತ್ತಿದೆ. ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾದ ನಿರ್ಣಯಗಳನ್ನು ಮರೆತು ರಾಜಕೀಯಪ್ರೇರಿತವಾಗಿ ಸಮಯವನ್ನು ವ್ಯರ್ಥ ಮಾಡುತ್ತಿದೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

VISTARANEWS.COM


on

Dr CN Ashwathnarayan Pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಾಲಿ ಇರುವ ಕುಲಪತಿಗಳ (Vice Chancellor) ಹುದ್ದೆಗೆ ನೇಮಕವನ್ನು ಕೂಡಲೇ ಮಾಡಬೇಕು. ಈ ಕುರಿತ ಕಡತಗಳನ್ನು ಕೂಡಲೇ ರಾಜ್ಯಪಾಲರಿಗೆ ರವಾನಿಸಬೇಕು. ಅಲ್ಲದೆ, 7 ವಿವಿಗಳಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಒತ್ತಾಯಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಹಂಪಿ ವಿವಿಗೆ ಅನುದಾನವೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ನೀಡುತ್ತೇವೆ ಎಂದು ತಿಳಿಸಿದರು.

ರಾಜ್ಯಪಾಲರ ಗಮನ ಸೆಳೆಯುವೆ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಮಯದಿಂದ ಉನ್ನತ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಗೊಂದಲಗಳನ್ನು ನಿರ್ಮಾಣ ಮಾಡುತ್ತಿದೆ. ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾದ ನಿರ್ಣಯಗಳನ್ನು ಮರೆತು ರಾಜಕೀಯಪ್ರೇರಿತವಾಗಿ ಸಮಯವನ್ನು ವ್ಯರ್ಥ ಮಾಡುತ್ತಿದೆ ಎಂದು ಆರೋಪಿಸಿದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದಲ್ಲದೆ, ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಪಬ್ಲಿಕ್‌ ವಿವಿ, ರಾಜ್ಯದ ವಿವಿಗಳಲ್ಲಿ ಕುಲಪತಿಗಳ ಸ್ಥಾನ ತೆರವಾಗಿ ಬಹಳಷ್ಟು ತಿಂಗಳುಗಳೇ ಕಳೆದಿವೆ. ಜೂನ್ ತಿಂಗಳಿನಲ್ಲಿ ಮಂಗಳೂರು ವಿವಿಯ ಸ್ಥಾನ ತೆರವಾದರೆ, ರಾಣಿ ಚನ್ನಮ್ಮ ವಿವಿ ಜುಲೈ ತಿಂಗಳಿನಲ್ಲಿ, ವಿಜಯನಗರ ವಿಶ್ವವಿದ್ಯಾಲಯದ ಈ ಉನ್ನತ ಸ್ಥಾನ ಆಗಸ್ಟ್‌ನಲ್ಲಿ ಖಾಲಿ ಆಗಿದೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ವಿವರಿಸಿದರು.

ಕುವೆಂಪು ವಿವಿ, ಬಾಗಲಕೋಟೆಯ ತೋಟಗಾರಿಕಾ ವಿವಿ ಹುದ್ದೆಗಳು ಜುಲೈ ತಿಂಗಳಿನಲ್ಲಿ ತೆರವಾಗಿವೆ. ಹಲವು ತಿಂಗಳಾದರೂ ಕುಲಪತಿಗಳ ನೇಮಕಾತಿ ಮಾಡಿಲ್ಲ. ಪರಿಶೋಧನಾ ಸಮಿತಿ ನೇಮಕಗೊಂಡಿದೆ. ಸಮಿತಿ ವರದಿಯನ್ನೂ ಕೊಟ್ಟಿದೆ. ಅದನ್ನು ನೋಡಲು ಮುಖ್ಯಮಂತ್ರಿಗಳಿಗೆ ಸಮಯ ಇಲ್ಲ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಆಕ್ಷೇಪಿಸಿದರು.

ಇದನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿಲ್ಲ. ಇವರು ನಿರ್ಲಕ್ಷಿಸಿದ್ದರಿಂದ ವಿವಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಹಣಕಾಸಿನ ಕೊರತೆ, ಸಿಬ್ಬಂದಿ ಕೊರತೆ, ಮುಖ್ಯಸ್ಥರಾದ ಕುಲಪತಿಗಳ ಕೊರತೆ ಇದೆ. ತಾತ್ಕಾಲಿಕ ಕುಲಪತಿ ಇದ್ದರೆ ಅಲ್ಲಿ ಏನೂ ನಿರ್ಣಯ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದರು.

ವಿವಿಗಳ ವೇತನ ವಿಳಂಬಕ್ಕೆ ಆಕ್ಷೇಪ

ಅಸಡ್ಡೆ, ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಪ್ರತಿ ಜಿಲ್ಲೆಗೊಂದು ವಿವಿ ಇರಬೇಕೆಂಬ ಯುಪಿಎ ಸರ್ಕಾರ ಇರುವಾಗ ಮಾಡಿದ ಶಿಫಾರಸಿನಡಿ ಶೈಕ್ಷಣಿಕ ಹಿಂದುಳಿದ ಜಿಲ್ಲೆಗಳಲ್ಲಿ ವಿವಿ ತೆರೆದಿದ್ದು, ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರಯತ್ನ ನಡೆದಿತ್ತು. ನಾವು 7 ನೂತನ ವಿವಿಗಳನ್ನು ಜಿಲ್ಲೆಗಳಲ್ಲಿ ಆರಂಭಿಸಿದ್ದೇವೆ. ಬೀದರ್, ಕೊಪ್ಪಳ, ಬಾಗಲಕೋಟೆ, ಹಾವೇರಿ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಕುಲಪತಿಗಳ ನೇಮಕ ಆಗಿದೆ. 10 ತಿಂಗಳಾದರೂ ಅವರಿಗೆ ವೇತನ ನೀಡಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಅವರು ಆಕ್ಷೇಪ ವ್ಯಕ್ತಪಡಿಸಿದರು.‌‌

2 ಕೋಟಿ ರೂಪಾಯಿ ಕೊಡಲೂ ಸಾಧ್ಯವಿಲ್ಲವೇ?

ನಾವೇನೂ ದೊಡ್ಡ ಬಜೆಟ್ ಕೊಟ್ಟಿಲ್ಲ. ವರ್ಷಕ್ಕೆ ತಲಾ 2 ಕೋಟಿ ರೂ. ನಿಶ್ಚಯಿಸಿದ್ದೆವು. 10 ತಿಂಗಳಾದರೂ ಸಂಬಳ ಕೊಟ್ಟಿಲ್ಲ. 2 ಕೋಟಿ ರೂಪಾಯಿ ಕೊಡಲೂ ಇವರಿಗೆ ಸಾಧ್ಯವಿಲ್ಲವೇ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಪ್ರಶ್ನಿಸಿದರು. ಇಂಥ ಪರಿಸ್ಥಿತಿಯಲ್ಲಿ ಉತ್ತಮ ಸಮಾಜ ಕಟ್ಟಲು ಹೇಗೆ ಸಾಧ್ಯ ಎಂದು ಕೇಳಿದರು. ಇದು ರಾಜಕೀಯಪ್ರೇರಿತ ದುರುದ್ದೇಶ ಎಂದು ಟೀಕಿಸಿದರು.

ಕುಲಪತಿಗಳ ನೇಮಕಾತಿಯಲ್ಲೂ ವಿಳಂಬ

ವಿವಿಗಳಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರೊಫೆಸರ್‌ಗಳು ಸೇರಿ ಬೋಧಕ, ಬೋಧಕೇತರ ಸಿಬ್ಬಂದಿಯೂ ತೊಂದರೆ ಅನುಭವಿಸುವಂತಾಗಿದೆ. ಹಣ ಕೊಡುವುದಿಲ್ಲ, ನಿರ್ಣಯ ಮಾಡುತ್ತಿಲ್ಲ. ಸ್ಥಾನಗಳನ್ನು ಭರ್ತಿ ಮಾಡುವುದಿಲ್ಲ. ಎಂದಿನಂತೆ ನಡೆಯಬೇಕಾದ ಕುಲಪತಿಗಳ ನೇಮಕಾತಿಯಲ್ಲೂ ವಿಳಂಬ ಮಾಡುತ್ತಿದ್ದಾರೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದರು.

ಕನ್ನಡ ಅಸ್ಮಿತೆ ಬಗ್ಗೆ ಸಿದ್ದರಾಮಯ್ಯನವರು ಉದ್ದುದ್ದ ಭಾಷಣ ಮಾಡುತ್ತಾರೆ. ಹಂಪಿ ಕನ್ನಡ ವಿವಿಗೆ ಅಭಿವೃದ್ಧಿಗೆ 72 ಕೋಟಿ ರೂಪಾಯಿ ಕೇಳಿದ್ದರು. ಆದರೆ, ಕೇವಲ 1.20 ಕೋಟಿ ನೀಡಿದ್ದಾರೆ. ಬರೀ ಖಾಲಿ ಭಾಷಣ, ಖಾಲಿ ಆಶ್ವಾಸನೆ ಕಾಂಗ್ರೆಸ್ ಸರ್ಕಾರದ್ದಾಗಿದೆ. ಯುವಕರ ವಿರೋಧಿ, ಅಭಿವೃದ್ಧಿ ವಿರೋಧಿ, ಶಿಕ್ಷಣ ವಿರೋಧಿ ಸರ್ಕಾರ ಇದೆಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ದೂರಿದರು.‌

ಇದನ್ನೂ ಓದಿ: Congress Karnataka: ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತೆ-ಫೋಟೋಗ್ರಾಫರ್‌ ಮಧ್ಯೆ ಕುರ್ಚಿ ಗಲಾಟೆ!

ಮಾಜಿ ಸಚಿವ ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

UGCET 2024: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳಿಗೆ (UGCET 2024) ಜೂನ್‌ 10 ರಿಂದ 12ರವರೆಗೆ ವೈದ್ಯಕೀಯ ತಪಾಸಣೆಯನ್ನು (Medical Test) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಯೋಜಿಸಿದೆ.

VISTARANEWS.COM


on

By

UGCET 2024
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ (UGCET 2024) ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯು ಜೂ.10 ಸೋಮವಾರದಿಂದ ಆರಂಭವಾಯಿತು. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ನಡೆಯುತ್ತಿರುವ ವೈದ್ಯಕೀಯ ತಪಾಸಣೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಚಾಲನೆ ನೀಡಿದರು.

ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು- ಮೂಗು-ಕಿವಿ (ಇಎನ್ ಟಿ) ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಇದನ್ನು ಖುದ್ದು ಪ್ರಸನ್ನ ಅವರು ಮೇಲ್ವಿಚಾರಣೆ ನಡೆಸಿದರು.

ಇನ್ನೂ ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಇದೇ 12ರ ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಕೆಇಎ ಸಿಬ್ಬಂದಿಯೇ ಅಂತಹವರನ್ನು ವಾಹನದಲ್ಲಿ ಕರೆದೊಯ್ಯುವ ಕೆಲಸ ಮಾಡಲಾಗಿದೆ. ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

ದಾಖಲೆ ಏನು ತರಬೇಕು?

ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು. ಅಭ್ಯರ್ಥಿಗಳು ಬೆಳಗ್ಗೆ 9:30ಕ್ಕೆ ವರದಿ ಮಾಡಿಕೊಳ್ಳಬೇಕು. 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರೇಮಿಗಳ ದಿನಾಚರಣೆ

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

NEET UG : ಒಂದು ನಿರ್ದಿಷ್ಟ ವಿದ್ಯಾಸಂಸ್ಥೆಯ 67 ವಿದ್ಯಾರ್ಥಿಗಳು ಪೂರ್ಣ 720 ಅಂಕಗಳನ್ನು ಪಡೆದಿದ್ದಾರೆ ಎಂಬ ಅಂಶದ ಬಗ್ಗೆ ಅರ್ಜಿದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 29 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದ ತಾತ್ಕಾಲಿಕ ಕೀ ಉತ್ತರಗಳ ಬಗ್ಗೆಯೂ ಹಲವಾರು ದೂರುಗಳಿವೆ ಎಂದು ಗಮನಸೆಳೆಯಲಾಗಿದೆ.

VISTARANEWS.COM


on

NEET UG
Koo

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ಇತ್ತೀಚೆಗೆ ಫಲಿತಾಂಶ ಪ್ರಕಟಗೊಂಡಿರು ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET UG) ಫಲಿತಾಂಶಗಳಲ್ಲಿ ವ್ಯಾಪಕ ವ್ಯತ್ಯಾಸಗಳಿವೆ ಎಂದು ಆರೋಪಿಸಿ, ನೀಟ್-ಯುಜಿ 2024 ಫಲಿತಾಂಶಗಳನ್ನು ಹಿಂಪಡೆಯಲು ಮತ್ತು ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಗ್ರೇಸ್ ಅಂಕಗಳನ್ನು ನೀಡುವಲ್ಲಿ ಏಕಮುಖ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ, ಹಲವಾರು ವಿದ್ಯಾರ್ಥಿಗಳು ಗಳಿಸಿದ 720, 719 ಮತ್ತು 718 ಅಂಕಗಳು ಲೆಕ್ಕಾಚಾರ ಪ್ರಕಾರ ಅಸಾಧ್ಯ ಎಂದು ಅವರು ವಾದಿಸಿದ್ದಾರೆ.

ಪರೀಕ್ಷೆಯ ವಿಳಂಬದಿಂದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಗ್ರೇಸ್ ಅಂಕಗಳನ್ನು ನೀಡಿದೆ. ಇದು ಕೆಲವು ವಿದ್ಯಾರ್ಥಿಗಳಿಗೆ ಹಿಂಬಾಗಿಲ ಪ್ರವೇಶ ಕಲ್ಪಿಸುವಂಥ ದುರುದ್ದೇಶಪೂರಿತ ಅಭ್ಯಾಸ ಎಂದು ಆರೋಪಿಸಲಾಗಿದೆ.

ಒಂದು ನಿರ್ದಿಷ್ಟ ವಿದ್ಯಾಸಂಸ್ಥೆಯ 67 ವಿದ್ಯಾರ್ಥಿಗಳು ಪೂರ್ಣ 720 ಅಂಕಗಳನ್ನು ಪಡೆದಿದ್ದಾರೆ ಎಂಬ ಅಂಶದ ಬಗ್ಗೆ ಅರ್ಜಿದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 29 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದ ತಾತ್ಕಾಲಿಕ ಕೀ ಉತ್ತರಗಳ ಬಗ್ಗೆಯೂ ಹಲವಾರು ದೂರುಗಳಿವೆ ಎಂದು ಗಮನಸೆಳೆಯಲಾಗಿದೆ.

ಹಲವಾರು ದೂರುಗಳು ದಾಖಲು

ಮೇ 5 ರಂದು ನಡೆದ ನೀಟ್​​ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ವ್ಯಾಪಕ ದೂರುಗಳನ್ನು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಕ್ರಮದ ಆಧಾರದ ಮೇಲೆ ಇಡೀ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ 2 ಅರ್ಜಿಗಳನ್ನು ಸಲ್ಲಿಸಲಾಗಿದೆ. ಮೇ 17 ರಂದು ಸುಪ್ರೀಂ ಕೋರ್ಟ್ ಅಂತಹ ಒಂದು ಅರ್ಜಿಯ ಬಗ್ಗೆ ನೋಟಿಸ್ ನೀಡಿತ್ತು. ಆದರೆ ಫಲಿತಾಂಶಗಳ ಘೋಷಣೆಗೆ ತಡೆ ನೀಡಲು ಸಮ್ಮತಿಸಿರಲಿಲ್ಲ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

ತೆಲಂಗಾಣ ಮತ್ತು ಆಂಧ್ರಪ್ರದೇಶ ಮೂಲದ ಅಬ್ದುಲ್ಲಾ ಮೊಹಮ್ಮದ್ ಫೈಜ್ ಮತ್ತು ಡಾ.ಶೇಖ್ ರೋಷನ್ ಮೊಹಿದ್ದೀನ್ ಅವರು ಪ್ರಸ್ತುತ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆ ಪೂರ್ಣಗೊಳ್ಳುವವರೆಗೆ ನೀಟ್-ಯುಜಿ 2024 ಪ್ರವೇಶಕ್ಕಾಗಿ ನಡೆಸಬೇಕಾದ ಕೌನ್ಸೆಲಿಂಗ್​ಗೆ ತಡೆ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ. ಇದಲ್ಲದೆ, ಪರೀಕ್ಷೆಯ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆಯೂ ಕೋರಲಾಗಿದೆ.

ಈ ವರ್ಷದ ನೀಟ್ (ಪದವಿಪೂರ್ವ) ಪರೀಕ್ಷೆಗೆ ಹಾಜರಾಗುವಾಗ ತಡವಾಗಿದ್ದ ಸಮಯದ ನಷ್ಟವನ್ನು ಸರಿದೂಗಿಸಲು “ಗ್ರೇಸ್ ಅಂಕಗಳನ್ನು” ಪಡೆದ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ನಾಲ್ಕು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ಶನಿವಾರ ಪ್ರಕಟಿಸಿದೆ.

Continue Reading

ಬೆಂಗಳೂರು ಗ್ರಾಮಾಂತರ

Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

Electric shock : ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಯೊಬ್ಬ ಬಟ್ಟೆ ಒಣ ಹಾಕಲು ಹೋದಾಗ ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ಕುಟುಂಬಸ್ಥರು ಈ ಸಂಬಂಧ ದೂರು ನೀಡಿದ್ದಾರೆ.

VISTARANEWS.COM


on

By

Electric shock
Koo

ದೇವನಹಳ್ಳಿ: ಡಾ.ಬಿಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಘಟನೆ ನಡೆದಿದೆ. ಸಾಯಿಭವನ್ (13) ಮೃತ ದುರ್ದೈವಿ.

ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಸಾಯಿಭವನ್‌ ಕಳೆದ ಎರಡು ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹಾಸ್ಟೆಲ್‌ನಲ್ಲಿದ್ದ ಸಾಯಿಭವನ್‌ ಭಾನುವಾರ ಬೆಳಗ್ಗೆ ಬಟ್ಟೆ ಒಣ ಹಾಕಲು ಹೋಗಿದ್ದಾನೆ. ಈ ವೇಳೆ ವಸತಿ ನಿಲಯದ ಮೇಲಿನ 11KV ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌

ಬೆಂಗಳೂರು/ಚಿಕ್ಕಬಳ್ಳಾಪುರ: ಕರೆಂಟ್ ಶಾಕ್ (Electric shock) ಹೊಡೆದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಾಡುಗೋಡಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬೇನ ಅಗ್ರಹಾರದಲ್ಲಿ ನಡೆದಿದೆ. ಬಿಪುಲ್ ಕುಮಾರ್ (35) ಮೃತ ದುರ್ದೈವಿ.

ಟೈಲ್ಸ್ ಶೋ ರೂಂನಲ್ಲಿ ಕೆಲಸ‌ ಮಾಡುತ್ತಿದ್ದ ಬಿಪುಲ್, ಫ್ಯಾನ್ ಆನ್ ಮಾಡಲು ಹೋಗಿದ್ದಾನೆ. ಈ ವೇಳೆ ಕರೆಂಟ್ ಶಾಕ್ ಬಡಿದಿದ್ದು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬಿಪುಲ್‌ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

ರಿಪೇರಿ ಮಾಡುವಾಗಲೇ ಪ್ರವಹಿಸಿದ ವಿದ್ಯುತ್‌; ಲೈನ್‌ಮ್ಯಾನ್‌ ಸಾವು

ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ದುರ್ಮರಣ ಬೆನ್ನಲ್ಲೆ ಗೌರಿಬಿದನೂರಿನ ಬಿಸಲಹಳ್ಳಿ ಗ್ರಾಮದಲ್ಲಿ ಮೊತ್ತೊಬ್ಬ ಬೆಸ್ಕಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾವಣಗೆರೆ ಮೂಲದ ಉದಯ್ ಕುಮಾರ್ (28 ) ಮೃತ ದುರ್ದೈವಿ.

ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಹೋದ ಉದಯ್‌ಗೆ ವಿದ್ಯುತ್‌ ಪ್ರವಹಿಸಿದ್ದು ಕ್ಷಣ ಮಾತ್ರದಲ್ಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇನ್ನೂ ಕಂಬದಲ್ಲೇ ಲೈನ್ ಮ್ಯಾನ್ ಮೃತದೇಹ ನೇತಾಡುತ್ತಿದ್ದು, ದುರ್ಘಟನೆ ಸಂಭವಿಸಿ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಯಾವೊಬ್ಬ ಬೆಸ್ಕಾ ಅಧಿಕಾರಿಗಳು ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು.

ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ

ವಿದ್ಯುತ್ ದುರಸ್ಥಿ ವೇಳೆ ಲೈನ್ ಮ್ಯಾನ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕ ತಡವಾಗಿ ಬಂದ ಬೆಸ್ಕಾ ಅಧಿಕಾರಿಗಳಿಗೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಬಳಿಕ ವಿದ್ಯುತ್‌ ಕಂಬದಲ್ಲಿದ್ದ ಮೃತದೇಹವನ್ನು ಕೆಳಗೆ ಇಳಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

JEE Advanced 2024 Result: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಹೀಗೆ ಚೆಕ್‌ ಮಾಡಿ

JEE Advanced 2024 Result: ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್ಡ್ ಫಲಿತಾಂಶಗಳನ್ನು ಇಂದು (ಜೂನ್‌ 9) ಬೆಳಿಗ್ಗೆ ಪ್ರಕಟಿಸಲಾಗಿದೆ. ಐಐಟಿ ದೆಹಲಿ ವಲಯದ ವೇದ್‌ ಲಹೋಟಿ 360 ಅಂಕಗಳಲ್ಲಿ 355 ಅಂಕ ಗಳಿಸುವ ಮೂಲಕ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಐಐಟಿ ಪ್ರವೇಶಕ್ಕಾಗಿ ಒಟ್ಟು 48,248 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು, ಅವರಲ್ಲಿ 7,964 ಮಹಿಳೆಯರು.

VISTARANEWS.COM


on

JEE Advanced Result 2024
Koo

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ (JEE Advanced 2024) ಫಲಿತಾಂಶಗಳನ್ನು ಇಂದು (ಜೂನ್‌ 9) ಪ್ರಕಟಿಸಲಾಗಿದೆ (JEE Advanced 2024 Result). ಐಐಟಿ ದೆಹಲಿ ವಲಯದ ವೇದ್‌ ಲಹೋಟಿ 360 ಅಂಕಗಳಲ್ಲಿ 355 ಅಂಕ ಗಳಿಸುವ ಮೂಲಕ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಐಐಟಿ ಪ್ರವೇಶಕ್ಕಾಗಿ ಒಟ್ಟು 48,248 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು, ಅವರಲ್ಲಿ 7,964 ಮಹಿಳೆಯರು.

ಮೇ 26ರಂದು ಪರೀಕ್ಷೆ ನಡೆಸಲಾಗಿತ್ತು. ಎರಡು ಪತ್ರಿಕೆಗಳಲ್ಲಿ ನಡೆದ ಪರೀಕ್ಷೆಯಲ್ಲಿ 1,80,200 ಮಂದಿ ಭಾಗವಹಿಸಿದ್ದರು. ಐಐಟಿ ಬಾಂಬೆ ವಲಯದ ದ್ವಿಜಾ ಧರ್ಮೇಶ್‌ ಕುಮಾರ್‌ ಪಟೇಲ್‌ 360 ಅಂಕಗಳಲ್ಲಿ 322 ಅಂಕ ಪಡೆದು ಮಹಿಳಾ ಅಭ್ಯರ್ಥಿಗಳ ಪೈಕಿ ಅಗ್ರಸ್ಥಾನ ಪಡೆದಿದ್ದಾರೆ. ಅವರಿಗೆ ಅಖಿಲ ಭಾರತದಲ್ಲಿ 7ನೇ ರ‍್ಯಾಂಕ್‌ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಷ್ಟು ಮಂದಿಗೆ ಅರ್ಹತೆ?

1,43,637 ಪುರುಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 1,39,180 ಮಂದಿ ಎರಡೂ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 40,284 ಮಂದಿ ಐಐಟಿ ಪ್ರವೇಶಕ್ಕಾಗಿ ಅರ್ಹತೆ ಪಡೆದಿದ್ದಾರೆ. ಇನ್ನು ಹೆಸರು ನೋಂದಾಯಿಸಿದ 42,947 ಮಹಿಳಾ ಅಭ್ಯರ್ಥಿಗಳ ಪೈಕಿ 41,020 ಮಂದಿ ಎರಡು ಪತ್ರಿಕೆಗಳನ್ನು ಎದುರಿಸಿದ್ದಾರೆ. ಅವರ ಪೈಕಿ 7,964 ಮಂದಿ ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಪರೀಕ್ಷೆ ಬರೆದ 1,86,584 ಅಭ್ಯರ್ಥಿಗಳ ಪೈಕಿ 48,248 ಮಂದಿ ಐಐಟಿ ಪ್ರವೇಶಿಸಲು ಅರ್ಹರಾಗಿದ್ದಾರೆ.

ಟಾಪ್‌ ಟೆನ್‌ ಅಭ್ಯರ್ಥಿಗಳು

ವೇದ್ ಲಹೋಟಿ (ಐಐಟಿ ದೆಹಲಿ ವಲಯ), ಆದಿತ್ಯ (ಐಐಟಿ ದೆಹಲಿ ವಲಯ), ಪೊಗಲ್‌ಪಲ್ಲಿ ಸಂದೇಶ್‌ (ಐಐಟಿ ಮದ್ರಾಸ್‌‍ ವಲಯ), ರಿದಮ್‌ ಕೆಡಿಯಾ (ಐಐಟಿ ರೂರ್ಕಿ ವಲಯ), ಪುಟ್ಟಿ ಕುಶಾಲ್‌ ಕುಮಾರ್‌ (ಐಐಟಿ ಮದ್ರಾಸ್‌‍ ವಲಯ), ರಾಜ್‌ದೀಪ್‌ ಮಿಶ್ರಾ (ಐಐಟಿ ಬಾಂಬೆ ವಲಯ), ದ್ವಿಜಾ ಧರ್ಮೇಶ್ ಕುಮಾರ್ ಪಟೇಲ್ (ಐಐಟಿ ಬಾಂಬೆ ವಲಯ), ಕೊಡೂರಿ ತೇಜೇಶ್ವರ್‌ (ಐಐಟಿ ಮದ್ರಾಸ್‌‍ ವಲಯ), ಧ್ರುವಿನ್ ಹೇಮಂತ್ ದೋಷಿ (ಐಐಟಿ ಬಾಂಬೆ ವಲಯ) ಅಲ್ಲದಬೋನ ಎಸ್‌‍ಎಸ್‌‍ಡಿಬಿ ಸಿಧ್ವಿಕ್‌ ಸುಹಾಸ್‌‍ (ಐಐಟಿ ಮದ್ರಾಸ್‌‍ ವಲಯ).

ಫಲಿತಾಂಶವನ್ನು ಪರಿಶೀಲಿಸುವ ವಿಧಾನ

ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ 2024 ಅನ್ನು ಪರಿಶೀಲಿಸಲು, ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಅಗತ್ಯ.

ಜೆಇಇ-ಮೇನ್‌‍, ಇದು ದೇಶಾದ್ಯಂತ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಪ್ರವೇಶ ಪರೀಕ್ಷೆಯಾಗಿದ್ದು, ಜೆಇಇ-ಅಡ್ವಾನ್ಸ್ಡ್‌ ಅರ್ಹತಾ ಪರೀಕ್ಷೆಯಾಗಿದೆ.

ಇದನ್ನೂ ಓದಿ: NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

Continue Reading
Advertisement
Narendra Modi 3.20
ಪ್ರಮುಖ ಸುದ್ದಿ37 mins ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ40 mins ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Yuva Rajkumar Allegation of cruelty against wife
ಸ್ಯಾಂಡಲ್ ವುಡ್53 mins ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು54 mins ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ1 hour ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು1 hour ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ1 hour ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್1 hour ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ2 hours ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ2 hours ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌