CM Siddaramaiah: ರಾಮಭಕ್ತ ಗಾಂಧೀಜಿ ಕೊಂದ ಗೋಡ್ಸೆಯನ್ನು ಪೂಜಿಸುವವರಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ - Vistara News

ರಾಜಕೀಯ

CM Siddaramaiah: ರಾಮಭಕ್ತ ಗಾಂಧೀಜಿ ಕೊಂದ ಗೋಡ್ಸೆಯನ್ನು ಪೂಜಿಸುವವರಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

CM Siddaramaiah: ಇಂದು ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

VISTARANEWS.COM


on

CM Siddaramaiah in Gandhiji Programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು (Lord Rama) ಪೂಜಿಸುವ ಮಹಾತ್ಮ ಗಾಂಧಿಯವರನ್ನು (Mahatma Gandhi) ಮತಾಂಧನಾಗಿದ್ದ ನಾಥೂರಾಮ್ ಗೋಡ್ಸೆ (Nathuram Godse) ಹತ್ಯೆಗೈಯುತ್ತಾನೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಮಂಗಳವಾರ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಜಾತಿ ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮ ಗಾಂಧಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

CM Siddaramaiah in Gandhiji Programme

ಗಾಂಧೀಜಿ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು

ಇಂದು ಮಹಾತ್ಮ ಗಾಂಧೀಜಿಯವರು 1948ರ ಜನವರಿ 30 ರಂದು ನಾಥೂರಾಮ್ ಗೋಡ್ಸೆಯ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಈ ದೇಶಕ್ಕೆ ಗಾಂಧೀಜಿ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್‌ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ

ಗಾಂಧೀಜಿ ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾನೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಾಜದಲ್ಲಿ ಶಾಂತಿ ನೆಲೆಸಬೇಕು

ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ, ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದು ಹೇಳಿದರು.

ಮಂಡ್ಯ ಘಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ

ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಅಲ್ಲದೆ, ಅಲ್ಲಿ ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Vice Chancellor: ಕುಲಪತಿಗಳ ಖಾಲಿ ಹುದ್ದೆ ಭರ್ತಿ, ಹೊಸ ವಿವಿಗಳಿಗೆ ಅನುದಾನ ನೀಡಿ: ಅಶ್ವತ್ಥನಾರಾಯಣ ಆಗ್ರಹ

ಫೆಬ್ರವರಿ 8ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕರೆ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Subramanian Swamy:ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

VISTARANEWS.COM


on

subramanian swamy
Koo

ನವದೆಹಲಿ: ಸ್ವಪಕ್ಷ ನಾಯಕರು, ಪ್ರಧಾನಿ ಮೋದಿ(PM Narendra Modi) ವಿರುದ್ಧವೇ ಅಚ್ಚರಿಕೆಯ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ(BJP Leader) ಸುಬ್ರಮಣಿಯನ್‌ ಸ್ವಾಮಿ(Subramanian Swamy) ಮತ್ತೆ ಸದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆ(Lok Sabha Elections 2024)ಯ ಆರನೇ ಹಂತದ ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ವೋಟ್‌ ಮಾಡಿರೋದಾಗಿ ಬಹಿರಂಗಪಡಿಸಿದ್ದಾರೆ. ಮತದಾನ ಅನ್ನೋದು ಅತ್ಯಂತ ಗೌಪ್ಯ ವಿಚಾರ. ಅದಾಗ್ಯೂ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ತಾವು ಯಾರಿಗೆ ಮತ ಚಲಾಯಿಸಿದ್ದು ಮತ್ತು ಆ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಮೋದಿಯನ್ನು ಬೈಯುತ್ತಲೇ ಅವರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ.

ಸ್ವಾಮಿಯ ಟ್ವೀಟ್‌ನಲ್ಲಿ ಏನಿದೆ?

ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮತದಾನಕ್ಕೆ ಎರಡು ದಿನ ಮೊದಲೂ ಇಂತಹದ್ದೇ ಒಂದು ಪೋಸ್ಟ್‌ ಮಾಡಿದ್ದ ಅವರು ಹರ್ಷ್‌ ಮಲ್ಹೋತ್ರಾ ಅವರನ್ನು ಹೊಗಳಿದ್ದರು. “ಇದೇ ಬರುವ ಶನಿವಾರ ಬೆಳಗ್ಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಮತ ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ. ಅವರೊಬ್ಬ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಇದೆ. ಸಂಸದರಾಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ನಾನು ಪೂರ್ವ ನಿಜಾಮುದ್ಧೀನ್‌ ಪ್ರದೇಶದಲ್ಲಿ ವಾಸವಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಸ್ವಾಮಿಯವರ ಟ್ವೀಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದು, ಶಾಹಿ ಹಾಕಿರುವ ಬೆರಳಿನೊಂದಿಗೆ ಫೊಟೋ ತೆಗೆದು ಅಪ್‌ಲೋಡ್‌ ಮಾಡಿ ಎಂದು ಅನೇಕ ಮನವಿ ಮಾಡಿದ್ದಾರೆ.

ಈ ಹಿಂದೆ ಸುಬ್ರಮಣಿಯನ್‌ ಸ್ವಾಮಿ, ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ, ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Continue Reading

ಪ್ರಮುಖ ಸುದ್ದಿ

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Election Commission: ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

VISTARANEWS.COM


on

election commission
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ ಪ್ರಮಾಣದ ಮತದಾನದ ಆಗಿರುವುದರಿಂದ ಚೈತನ್ಯ ಪಡೆದಿರುವ ಚುನಾವಣಾ ಆಯೋಗವು (Election Commission) ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಪ್ರಕ್ರಿಯೆ ಆರಂಭಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮದೇ ಸರ್ಕಾರದ ವ್ಯಾಪ್ತಿಗೆ ಸೇರಲು ಅರ್ಹರು ಎಂದು ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಕ್ರಿಯೆಗಳು ಮತ್ತು ವಿಧಾನಸಭಾ ಚುನಾವಣೆ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯಿಂದ ಚುನಾವಣಾ ಆಯೋಗವು ತುಂಬಾ ಪ್ರೇರಣೆಗೊಂಡಿದೆ. ಅವರ ಉತ್ಸಾಹ ನಮಗೆ ಖುಷಿಯ ವಿಚಾರ. ಯುವಕರು, ಮಹಿಳೆಯರು ಸಂತೋಷದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಜಮ್ಮು ಕಾಶ್ಮೀರದ ಮಂದಿ ತಮ್ಮ ಸರ್ಕಾರಕ್ಕೆ ಅರ್ಹರು. ನಾವು ಶೀಘ್ರದಲ್ಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ಮತದಾನಕ್ಕಾಗಿ ತುಂಬಾ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ನಡೆಯುತ್ತಿರುವ ಮೊದಲ ಚುನವಾಣೆ ಇದಾಗಿದೆ. ಇಲ್ಲಿನ ಭಾಗವಹಿಸುವಿಕೆಯನ್ನು ನೋಡಿದ ಬಳಿಕ ಇದೀಗ ವಿಧಾನಸಭಾ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯು ಸಾಮಾನ್ಯವಾಗಿ ಒಂದು ತಿಂಗಳ ಕಾಲ ನಡೆಯುತ್ತದೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ನಂತರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನಿಗದಿಪಡಿಸಿದ ಸ್ಥಾನಗಳನ್ನು ಹೊರತುಪಡಿಸಿ ವಿಧಾನಸಭಾ ಸ್ಥಾನಗಳ ಸಂಖ್ಯೆ 83 ರಿಂದ 90 ಕ್ಕೆ ಏರಿಕೆಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಡಿಸೆಂಬರ್​ನಲ್ಲಿ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

Continue Reading

ಕರ್ನಾಟಕ

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest statement about channagiri case
Koo

ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.

ಇದನ್ನೂ ಓದಿ: Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.

ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ ಡಿವೈಎಸ್‌ಪಿ ಮತ್ತು ಸಿಪಿಐ ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಇಲ್ಲದ ತ್ವರಿತ ಕ್ರಮ ಚನ್ನಗಿರಿಯಲ್ಲೇಕೆ?

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಸಚಿವರು, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Continue Reading

ಕರ್ನಾಟಕ

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಏಪ್ರಿಲ್ 21 ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Union Minister Pralhad Joshi statement about Prajwal revanna case
Koo

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಪಾಸ್‌ಪೋರ್ಟ್ ರದ್ದು ಆಗಲ್ಲ. ರದ್ದು ಮಾಡಲು ಪೊಲೀಸ್‌ ಇಲಾಖೆಯಿಂದ ಸೂಕ್ತ ಮನವಿ ಮಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆದರೆ ಸಾಲದು. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು. ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಎಸ್‌ಐಟಿ ಈಗ ಮಾಹಿತಿ ನೀಡಿದೆ

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ಈಗ ಕೇಂದ್ರಕ್ಕೆ ಮಾಹಿತಿ ನೀಡಿದೆ. ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಮೇ 21ರಂದು ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಕೇಂದ್ರದಿಂದ ಅತ್ಯಂತ ತ್ವರಿತ ಕ್ರಮ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಅತ್ಯಂತ ತ್ವರಿತ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದ ಮೇಲೆ 10 ದಿನಗಳ ಸಮಯ ಇರುತ್ತದೆ. ಅದರಂತೆ ಮೇ 21ಕ್ಕೆ ಎಸ್‌ಐಟಿ ಮಾಹಿತಿ ನೀಡುತ್ತಲೇ ಮುಂದಿನ ಕ್ರಮ ಕೈಗೊಂಡಿದೆ. ಮೇ 25ಕ್ಕೆ ಅಂದರೆ ಎರಡೇ ದಿನದಲ್ಲಿ ಆಗಲೇ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ. ಕಾನೂನು ಪ್ರಕಾರ ಇನ್ನು 8 ದಿನದಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜಕಾರಣ ಮಾಡುವುದಕ್ಕಿಂತ ಹೆಚ್ಚಾಗಿ ಗಂಭೀರವಾಗಿ ಪರಿಗಣಿಸಬೇಕು. ವಿದೇಶಕ್ಕೆ ಹಾರಿರುವ ಪ್ರಜ್ವಲ್‌ರನ್ನು ಹಿಡಿದು ಕರೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸಿಎಂ ಪತ್ರ ಬರೆದು ರಾಜಕಾರಣ ಮಾಡೋದಲ್ಲ

ಪಾಸ್‌ಪೋರ್ಟ್ ರದ್ದುಪಡಿಸುವ ವಿಚಾರದಲ್ಲಿ ಮುಖ್ಯಮಂತ್ರಿಯೇ ಅಲ್ಲ ಯಾರೂ ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡೋದು ಅಲ್ಲ. ಕಾನೂನು ಪ್ರಕಾರ ಸಂಬಂಧಪಟ್ಟ ಪೊಲೀಸ್ ಇಲಾಖೆ ನೋಟಿಸ್ ನೀಡಬೇಕು. ಪ್ರಜ್ವಲ್ ತನಿಖೆಗೆ ಲಭ್ಯವಾಗುತ್ತಿಲ್ಲ ಎಂದು ಎಫ್‌ಐಆರ್‌ ಸಮೇತ ಕೇಂದ್ರಕ್ಕೆ ಅಧಿಕೃತ, ನಿರ್ಧಿಷ್ಟ ಮಾಹಿತಿ ನೀಡಬೇಕು ಅಥವಾ ಕೋರ್ಟ್ ಆದೇಶ ಹೊರಡಿಸಬೇಕು. ಇದು ವಕೀಲಿಕಿ ಮಾಡಿದ ಸಿಎಂಗೆ ಗೊತ್ತಿಲ್ಲವೆ ಎಂದು ಜೋಶಿ ಪ್ರಶ್ನಿಸಿದರು.

ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ

ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಜೋಶಿ ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಏಪ್ರಿಲ್ 21ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು? ಆಗಲೇ ಏಕೆ ಬಂಧಿಸಲಿಲ್ಲ? ಈ ಪ್ರಶ್ನೆಗಳಿಗೆ ಇನ್ನುವರೆಗೂ ಸಿಎಂ ಬಳಿ ಉತ್ತರವಿಲ್ಲ ಎಂದು ಜೋಶಿ ಹೇಳಿದರು.

ಕೇಂದ್ರ ರೆಡ್ ಅಲರ್ಟ್ ಘೋಷಿಸುತ್ತಿತ್ತು

ಏಪ್ರಿಲ್ 21, 22ರಂದೇ ರಾಜ್ಯ ಸರ್ಕಾರ ಭಾರತ ಸರ್ಕಾರಕ್ಕೆ ಅಧಿಕೃತ ಮಾಹಿತಿ ಕೊಟ್ಟಿದ್ದರೆ, ಕೇಂದ್ರ ಅಂದೇ ಎಲ್ಲಾ ವಿಮಾನ ನಿಲ್ದಾಣಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡುತ್ತಿತ್ತು. ಪ್ರಜ್ವಲ್ ವಿದೇಶಕ್ಕೆ ಹಾರಲು ಅವಕಾಶ ಕೊಡುತ್ತಿರಲಿಲ್ಲ. ಆದರೆ, ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 24 ಮಂದಿ ದಾರುಣ ಸಾವು

ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರವಾಗಿದ್ದರೂ ರಾಜ್ಯ ಸರ್ಕಾರ ಅದರಲ್ಲಿ ರಾಜಕಾರಣ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಕಾನೂನು ಕ್ರಮವನ್ನು ಅನುಸರಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

Continue Reading
Advertisement
Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 min ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ5 mins ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ29 mins ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ34 mins ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ39 mins ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Mother Sentiment
ಅಂಕಣ1 hour ago

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

subramanian swamy
ದೇಶ1 hour ago

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Mint Leaf Water
ಆರೋಗ್ಯ2 hours ago

Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

Karnataka weather Forecast
ಮಳೆ3 hours ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ3 hours ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌