Narendra Modi: ಅಂಧರಿಗಾಗಿ ಮೋದಿ ಕುರಿತ ʼದಿ ಮೇಕರ್‌ ಆಫ್‌ ನ್ಯೂ ಇಂಡಿಯಾʼ ಪುಸ್ತಕ ಬಿಡುಗಡೆ ಮಾಡಿದ ಅಮಿತ್‌ ಶಾ - Vistara News

ಕರ್ನಾಟಕ

Narendra Modi: ಅಂಧರಿಗಾಗಿ ಮೋದಿ ಕುರಿತ ʼದಿ ಮೇಕರ್‌ ಆಫ್‌ ನ್ಯೂ ಇಂಡಿಯಾʼ ಪುಸ್ತಕ ಬಿಡುಗಡೆ ಮಾಡಿದ ಅಮಿತ್‌ ಶಾ

Narendra Modi: ಅಂಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಿಳಿಸಿಕೊಡಲು ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗದಲ್ಲಿ ಹುಬ್ಬಳ್ಳಿಯ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಪುಸ್ತಕವನ್ನು ಪ್ರಕಟಿಸಿದೆ.

VISTARANEWS.COM


on

’ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದಿ ಮೇಕರ್ ಆಫ್‌ ನ್ಯೂ ಇಂಡಿಯಾ’ ಎಂಬ ಬ್ರೈಲ್ ಲಿಪಿಯ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಬಿಡುಗಡೆಗೊಳಿಸಿದರು. ವಿಆರ್‌ಎಲ್ ಸಂಸ್ಥೆಯ ಎಂ.ಡಿ. ಡಾ. ಆನಂದ ಸಂಕೇಶ್ವರ, ಸೆನ್ಸ್ ಎಸೆನ್ಸ್ ಸಂಸ್ಥೆಯ ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಇದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷ ಇರುವವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದಿ ಮೇಕರ್ ಆಫ್‌ ನ್ಯೂ ಇಂಡಿಯಾ’ (A Promised Nation Hon’ble Shri Narendra Modi- the Maker of New India’) ಎಂಬ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆಗೊಳಿಸಿದರು.

ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಈ ಪುಸ್ತಕ ಹೊರತರಲಾಗಿದೆ.
ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕಚೇರಿಯಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಆನಂದ ಸಂಕೇಶ್ವರ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕಿಯರಾದ ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಪುಸ್ತಕ ಬಿಡುಗಡೆಗೊಳಿಸಿದರು.

‘ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು. ಇದು ನಿಜಕ್ಕೂ ಸಾಹಸಮಯ ಕೆಲಸ. ವಿಆರ್‌ಎಲ್ ಸಂಸ್ಥೆ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಗೆ ಅಭಿನಂದನೆಗಳು’ ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | Book On Narendra Modi : ದಿ ಮೇಕರ್‌ ಆಫ್‌ ನ್ಯೂ ಇಂಡಿಯಾ; ಮೋದಿ ಬಗ್ಗೆ ಬ್ರೈಲ್‌ ಲಿಪಿ ಪುಸ್ತಕ ಬಿಡುಗಡೆ

‘ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ದೇಶದ ನಾಗರಿಕ ಮೌಲ್ಯ ಮತ್ತು ಸಾಂಸ್ಕೃತಿಕ ತತ್ವಗಳನ್ನು ಪುನರುಜ್ಜೀವನಗೊಳಿಸಿ, ಹೊಸ ಭಾರತದ ಸೌಧವನ್ನು ನಿರ್ಮಾಣ ಮಾಡಿದ್ದಾರೆ. ಈ ಹಾದಿಯಲ್ಲಿ ಮೋದಿಯವರು ಭಾರತದ ಅಂತರಂಗದ ಜಗತ್ತನ್ನು ಮತ್ತಷ್ಟು ಜಾಗೃತಗೊಳಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟ ಅಮಿತ್ ಶಾ, ಈ ಪುಸ್ತಕ ಬ್ರೈಲ್ ಲಿಪಿಯಲ್ಲಿದೆ. ಮೋದಿಯವರ ಜೀವನ, ಕಾರ್ಯ, ಮಾಡಿದ ಸಾಧನೆಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ | Budget 2024: ವಿತ್ತ ಸಚಿವೆ ಸೀತಾರಾಮನ್ ಬ್ರೀಫ್‌ಕೇಸ್ ಬಿಟ್ಟು ಕೆಂಪು ಬಣ್ಣದ ‘ವಹಿ ಖಾತಾ’ ಬಳಸಿದ್ದು ಏಕೆ?

ಅಂಧರಿಗಾಗಿ ಶ್ರಮಿಸಬೇಕೆಂಬ ಉದ್ದೇಶ

ಯಶ್ವಿ ಭಂಡಾರಿ ಮತ್ತು ರುಷಾಲಿ ದೋಶಿ 2019ರಲ್ಲಿ ಸೆನ್ಸ್ ಎಸೆನ್ಸ್ ಸಂಸ್ಥೆ ಹುಟ್ಟು ಹಾಕಿದರು. ಕರೊನಾ ಮಹಾಮಾರಿ ಕಾಲದಲ್ಲಿ ದೃಷ್ಟಿ ದೋಷವುಳ್ಳವರ ಸಲುವಾಗಿ ಕೆಲಸ ಮಾಡಲು ಶುರು ಮಾಡಿದ್ದರು. ಈಗಾಗಲೇ, ‘ಲವ್ ಯುವರ್ ಐಸ್’ ಎಂಬ ಯೋಜನೆ ಮೂಲಕ ರೈಲ್ವೆ ನಿಲ್ದಾಣಗಳಲ್ಲಿ ದೃಷ್ಟಿ ದೋಷವಿದ್ದವರ ನೆರವಿಗೆ ಧಾವಿಸಿದ್ದಾರೆ. ಸ್ಪರ್ಶಜ್ಞಾನದಿಂದ ತಿಳಿಯಬಹುದಾದ ಮ್ಯಾಪ್, ಬ್ರೈಲ್ ಸೈನ್ ಬೋರ್ಡ್‌ಗಳನ್ನೊಳಗೊಂಡಿರುವ ಪುಸ್ತಕ ಇದಾಗಿದ್ದು, ಧಾರವಾಡ ಮತ್ತು ಬೆಳಗಾವಿ ರೈಲ್ವೆ ನಿಲ್ದಾಣಗಳಲ್ಲಿ ಕಾಣಬಹುದಾಗಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು 2022ರ ಅಕ್ಟೋಬರ್ 11ರಂದು ಬಿಡುಗಡೆಗೊಳಿಸಿದ್ದರು. ಅದೇ ರೀತಿ, ಮ್ಯಾಜಿಕಲ್ ಡಾಟ್ಸ್ ಎಂಬ ನಿಯತಕಾಲಿಕವನ್ನು ಕೂಡ ಸೆನ್ಸ್ ಎಸೆನ್ಸ್ ಸಂಸ್ಥೆ ಹೊರತಂದಿದೆ. ಇದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2021ರ ಆಗಸ್ಟ್ 30ರಂದು ಬಿಡುಗಡೆ ಮಾಡಿದ್ದರು. ಬ್ರೈಲ್ ಲಿಪಿಯಲ್ಲಿರುವ ಕರ್ನಾಟಕದ ಮೊಟ್ಟಮೊದಲ ಮ್ಯಾಗಜೀನ್ ಇದಾಗಿದ್ದು, ಅಂಧ ವಿದ್ಯಾರ್ಥಿಗಳಿರುವ ಅನೇಕ ಶಾಲೆಗಳಿಗೂ ಪೂರೈಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಚಿತ್ರಣ

ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕತ್ವದಲ್ಲಿ ದೇಶವನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವುದರಿಂದ, ದೇಶದ ಅನೇಕರಿಗೆ ಅವರು ಪ್ರೇರಣಾದಾಯಿಯಾಗಿದ್ದಾರೆ. ಹೀಗಾಗಿ, ಈ ಸಾಧಕ ಪ್ರಧಾನಿ ಬಗ್ಗೆ ಅಂಧ ಮಕ್ಕಳೂ ತಿಳಿದುಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಈ ಪುಸ್ತಕ ಸಿದ್ಧಪಡಿಸಲು ಮುಂದಾದೆವು. ಪುಸ್ತಕ ರೂಪಿಸಲು ಕಳೆದ ಹಲವು ತಿಂಗಳುಗಳಿಂದ ಸಾಕಷ್ಟು ಶ್ರಮಿಸಿದ್ದೇವೆ. ನಮ್ಮನ್ನು ಪ್ರೋತ್ಸಾಹಿಸಿದ ವಿಆರ್‌ಎಲ್ ಸಂಸ್ಥೆಯ ಎಂಡಿ ಡಾ. ಆನಂದ ಸಂಕೇಶ್ವರ ಅವರಿಗೂ ನಾವು ಆಭಾರಿಯಾಗಿದ್ದೇವೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಅರ್ಜುನ್ ರಾಮ್ ಮೇಘ್ವಾಲ್, ಸ್ಮೃತಿ ಇರಾನಿ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಆರ್‌ಎಸ್‌ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸೇರಿ ಹಲವರು ನಮ್ಮ ಕೆಲಸಕ್ಕೆ ಬೆಂಬಲ ನೀಡಿದ್ದಾರೆ ಎಂದು ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಹೇಳಿದ್ದಾರೆ.

ಇದನ್ನೂ ಓದಿ | Ram Mandir: ರಾಮಮಂದಿರದ 2ನೇ ಮಹಡಿ ನಿರ್ಮಾಣ‌ ಯಾವಾಗ? ಇಲ್ಲಿದೆ ಡೇಟ್

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿ. ವತಿಯಿಂದ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ನಾವು ಆರೋಗ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರಗಳಲ್ಲಿ ಹಲವು ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಗೆ ಪ್ರಯತ್ನಿಸಿದ್ದೇವೆ. ಈ ಕೆಲಸಗಳ ಧನಾತ್ಮಕ ಪರಿಣಾಮಗಳ ಬಗ್ಗೆ ನಮಗೆ ಹೆಮ್ಮೆಯಿದೆ. ಸಮಾಜದ ಪ್ರತಿಯೊಬ್ಬರ ಏಳಿಗೆಗೆ ನಮ್ಮ ಶ್ರಮ, ಪ್ರಯತ್ನಗಳನ್ನು ಮುಂದುವರಿಸುತ್ತಲೇ ಇರುತ್ತೇವೆ. ಪ್ರಧಾನಿ ಅವರ ಜೀವನ ಸಾಧನೆ ಮತ್ತು ಅವರ ಕೈಂಕರ್ಯಗಳು ಅಂಧರಿಗೂ ಪ್ರೇರಣೆ ಆಗಲಿ ಎನ್ನುವ ಸದುದ್ದೇಶದಿಂದ ಈ ಪುಸ್ತಕ ಪ್ರಕಟಿಸಲು ನೆರವಾಗಿದ್ದೇವೆ. ಪುಸ್ತಕವು ದೇಶದ ಕೋಟ್ಯಂತರ ದೃಷ್ಟಿ ದೋಷವುಳ್ಳವರಿಗೆ ನೆರವಾಗಬಹುದು ಎಂಬುದು ನಮ್ಮ ಭಾವನೆ.
| ಡಾ. ಆನಂದ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕರು, ವಿಆರ್‌ಎಲ್ ಸಮೂಹ ಸಂಸ್ಥೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Bangalore Rain: ಬೆಂಗಳೂರಿನಲ್ಲಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಹಲವೆಡೆ ಭಾರಿ ಮಳೆಯಿಂದ ಹತ್ತಾರು ಮರಗಳು ಧರೆಗುರುಳಿದ್ದು, ಹಲವು ವಾಹನಗಳು ಜಖಂಗೊಂಡಿವೆ.

VISTARANEWS.COM


on

Bangalore Rain
Koo

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇನ್ನು ಕೆಲವು ಕಡೆ ಬೃಹತ್‌ ಮರಗಳು ನೆಲಕ್ಕುರುಳಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ತಪ್ಪಿದ ಮತ್ತೊಂದು ದುರಂತ

ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಮೂವ್ ಆಗ್ತಿದ್ದಂತೆ, ಅಪಾಯದ ಮುನ್ಸೂಚನೆ ಅರಿತು ಬಸ್ ಚಾಲಕ ಅಲ್ಲೇ ನಿಲ್ಲಿಸಿದ್ದಾರೆ. ನಂತರ ಬಸ್‌ನಲ್ಲಿದ್ದವರನ್ನು ಸ್ಥಳೀಯ ವ್ಯಕ್ತಿ ಮಣಿಕಂಠ ಹೊರ ಕರೆತಂದಿದ್ದಾರೆ. ಓರ್ವ ವೃದ್ಧೆ, ಇಬ್ಬರು ಮಹಿಳೆಯರು, ಮಗುವನ್ನು ಬಸ್‌ನಿಂದ ರಕ್ಷಣೆ ಮಾಡಲಾಗಿದೆ.

ಅಂಡರ್‌ಪಾಸ್‌ನಲ್ಲಿ ನೀರಿಗೆ ಬಿದ್ದ ಇಬ್ಬರು ಯುವಕರು

ಬಿರುಸಿನ ಮಳೆಯಿಂದ ಕೋರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್, ಡೈರಿ ಸರ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು K.R. ಸರ್ಕಲ್ ಅಂಡರ್ ಪಾಸ್‌ನಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿತ್ತು. ಹೆಚ್ಚು ನೀರು ಇರುವುದು ತಿಳಿಯದೇ ಬೈಕ್‌ನಲ್ಲಿ ವೇಗವಾಗಿ ಬಂದ ಇಬ್ಬರು ಯುವಕರು ನೀರಿಗೆ ಬಿದ್ದಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.‌

ಮೆಟ್ರೋ ವಯಡಕ್ಟ್ ಮೇಲೆ ಬಿದ್ದ ಮರ

ಸಂಜೆ ಭಾರಿ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ರೋಡ್‌ ನಿಲ್ದಾಣದ ನಡುವಿನ ವಯಡಕ್ಟ್ ಟ್ರ್ಯಾಕ್‌ನಲ್ಲಿ ಮರ ಬಿದ್ದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ರೈಲು ಸೇವೆ ಸ್ಥಗಿತಗೊಂಡಿದೆ. ಆದರೆ, ಇಂದಿರಾನಗರ ಮತ್ತು ವೈಟ್‌ಫೀಲ್ಡ್ ನಡುವೆ ಶಾರ್ಟ್ ಲೂಪ್‌ಗಳು ಚಾಲನೆಯಲ್ಲಿವೆ. ಚಲ್ಲಘಟ್ಟ ಮತ್ತು ಎಂಜಿ ರೋಡ್ ನಡುವೆ
ಉಂಟಾದ ಅನನುಕೂಲತೆ ಬಗ್ಗೆ ಬಿಎಂಆರ್‌ಸಿಎಲ್‌ ವಿಷಾದ ವ್ಯಕ್ತಪಡಿಸಿದೆ.

ನಗರದ ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ, ಜಯನಗರ, ಪೀಣ್ಯ, ಬನ್ನೇರುಘಟ್ಟ ರಸ್ತೆ, ಮಲ್ಲೇಶ್ವರ, ರೇಸ್ ಕೋರ್ಸ್, ವಿಜಯನಗರ, ಶಾಂತಿನಗರ, ಎಂಜಿ ರೋಡ್, ಕೆ.ಆರ್ ಸರ್ಕಲ್, ಚಾಲುಕ್ಯ ಸರ್ಕಲ್ ಸೇರಿದಂತೆ ಹಲವು ಕಡೆ ಬಿರುಸಿನ ಮಳೆಯಾಗಿದೆ.

ಮರಗಳು ಬಿದ್ದು ಹಲವು ವಾಹನ ಜಖಂ

ಭಾರಿ ಮಳೆಯಿಂದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಜಯನಗರ-ಬನ್ನೇರುಘಟ್ಟ ರಸ್ತೆ, ಪೀಣ್ಯ ಬಳಿ ಮರಗಳು ನೆಲಕ್ಕುರುಳಿವೆ. ಪೀಣ್ಯದ ಅರವಿಂದ ಮೋಟಾರ್ಸ್ ಬಳಿ ಕಾರಿನ ಮೇಲೆ ಮರ ಬಿದ್ದಿದ್ದು, ಕಾರಿನಲ್ಲಿ ಸಿಲುಕಿರುವ ಚಾಲಕನನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು ಬನ್ನೇರುಘಟ್ಟ ರಸ್ತೆ ವೆಗಾ ಸಿಟಿ ಮಾಲ್ ಬಳಿ ಮರ ಧರೆಗುರುಳಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅದೇ ರೀತಿ ಜಯನಗರದ 4ನೇ ಟಿ ಬ್ಲಾಕ್ ಬಳಿ ಮರ ಧರೆಗುರುಳಿದಿದೆ, ರಾಜಾಜಿನಗರದ ಮಂಜುನಾಥನಗರದಲ್ಲಿ ಮರ ಬಿದ್ದಿದೆ. ಬಸವನಗುಡಿ ರಾಮಕೃಷ್ಣ ಆಶ್ರಮ ಬಳಿ ಮತ್ತು ಕೆಜಿ ರಸ್ತೆ ಪೋತೀಸ್ ಮುಂಭಾಗ ಬೃಹತ್ ಮರ ಧರೆಗಿರುಳಿದೆ. ಹುಳಿಮಾವು ರಸ್ತೆಯಲ್ಲಿ ಮರ ಧರೆಗುರುಳಿದಿದ್ದು, ಪಾನಿಪುರಿ ಅಂಗಡಿ, ಸುಮಾರು 10 ಬೈಕ್‌ಗಳು ಜಖಂಗೊಂಡಿವೆ.

ಇದನ್ನೂ ಓದಿ | Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಇನ್ನು ಹಲವು ಕಡೆ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗೋವಿಂದರಾಜ ನಗರದ ಪಟ್ಟೇಗಾರ ಪಾಳ್ಯದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜೋರಾದ ಮಳೆ ಹಿನ್ನೆಲೆ ಪ್ರಮುಖ ರಸ್ತೆಗಳು ಹೊಳೆಯಂತೆ ಬದಲಾಗಿದ್ದರಿಂದ ಬೈಕ್ ಸವಾರರು ಪರದಾಡಿದರು. ಹಲವೆಡೆ ವಾಹನಗಳು ಕೆಟ್ಟುನಿಂತು ಸವಾರರು ತೊಂದರೆಪಟ್ಟರು.

Continue Reading

ಕೊಪ್ಪಳ

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Koppal Lok Sabha Constituency: ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಹಾಗಾಗಿ, ಕೊಪ್ಪಳದ ಲೋಕಸಭೆ ಚುನಾವಣೆಯು ಕುತೂಹಲ ಕೆರಳಿಸಿದೆ.

VISTARANEWS.COM


on

Koppal Lok Sabha Constituency
Koo

ಕೊಪ್ಪಳ: ಕೊಪ್ಪಳದಲ್ಲಿ ಮಾಜಿ ಶಾಸಕರ ಪುತ್ರರ ನಡುವೆ ಲೋಕಸಭೆ ಚುನಾವಣೆ (Koppal Lok Sabha Constituency) ಸಮರ ನಡೆದಿದ್ದು, ಬದಲಾದ ರಾಜಕೀಯ ವಿದ್ಯಮಾನದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ಕೊಪ್ಪಳ ಮಾಜಿ ಶಾಸಕ ಕೆ. ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ಕೆ. ರಾಜಶೇಖರ್‌ ಹಿಟ್ನಾಳ್‌ (Rajashekar Hitnal) ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿಯಿಂದ ಕುಷ್ಟಗಿ ಮಾಜಿ ಶಾಸಕ ಕೆ. ಶರಣಪ್ಪ ಅವರ ಪುತ್ರ ಡಾ.ಬಸವರಾಜ್‌ ಕ್ಯಾವಟರ್‌ (Dr Basavaraj Kyavator) ಅವರು ಕಣಕ್ಕಿಳಿದಿದ್ದು, ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ಖಂಡಿತವಾಗಿಯೂ ನರೇಂದ್ರ ಮೋದಿ ಅವರ ಅಲೆಯು ಕೆಲಸ ಮಾಡಲಿದೆ. ಆದರೆ, ಟಿಕೆಟ್‌ ವಂಚಿತ ಸಂಗಣ್ಣ ಕರಡಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಬಸವರಾಜ್‌ ಕ್ಯಾವಟರ್‌ ಅವರಿಗೆ ನುಂಗಲಾರದ ತುತ್ತಾಗಿದೆ. ಹಾಗಾಗಿ, ಕೊಪ್ಪಳ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಡಾ.ಬಸವರಾಜ್‌ ಕ್ಯಾವಟರ್‌ ಅವರ ರಾಜಕೀಯ ಅನುಭವದ ಕೊರತೆಯನ್ನು ಪ್ಲಸ್‌ ಪಾಯಿಂಟ್ ಅನ್ನಾಗಿ ಮಾಡಿಕೊಂಡಿದ್ದಾರೆ. ಆದರೂ, ತೀವ್ರ ಪೈಪೋಟಿ ಇದೆ.

ಮತದಾರರ ಸಂಖ್ಯೆ

ಪುರುಷರು9.12 ಲಕ್ಷ
ಮಹಿಳೆಯರು9.38 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು132
ಒಟ್ಟು18.51 ಲಕ್ಷ

2014, 2019ರ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಗಣ್ಣ ಕರಡಿ ವಿರುದ್ಧ ಕಾಂಗ್ರೆಸ್‌ ಮಾಜಿ ಶಾಸಕ ಬಸವರಾಜ್‌ ಹಿಟ್ನಾಳ್‌ ಸೋಲನುಭವಿಸಿದ್ದರು. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ರಾಜಶೇಖರ್‌ ಹಿಟ್ನಾಳ್‌ ಅವರು ಸ್ಪರ್ಧಿಸಿ, ಬಿಜೆಪಿಯ ಸಂಗಣ್ಣ ಕರಡಿ ಅವರ ವಿರುದ್ಧವೇ ಪರಾಭವಗೊಂಡಿದ್ದರು. ಸುಮಾರು 38 ಸಾವಿರ ಮತಗಳಿಂದ ರಾಜಶೇಖರ್‌ ಹಿಟ್ನಾಳ್‌ ಅವರು ಸೋಲನುಭವಿಸಿದ್ದರು. ಈಗ ರಾಜಶೇಖರ್‌ ಹಿಟ್ನಾಳ್‌ ಅವರಿಗೆ ಮೊದಲ ಬಾರಿಗೆ ಸಂಗಣ್ಣ ಕರಡಿಯೇತರ ಕುಟುಂಬದವರು ಎದುರಾಳಿಯಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Continue Reading

ಪ್ರಮುಖ ಸುದ್ದಿ

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

kolar lok sabha constituency : ಸ್ವಾತಂತ್ರ್ಯದ ನಂತರ ನಡೆದ ಒಟ್ಟು 16 ಚುನಾವಣೆಗಳಲ್ಲಿ 15 ರಲ್ಲಿ ಕಾಂಗ್ರೆಸ್​ ಗೆದ್ದಿದ್ದು, ಈ ಪಕ್ಷದಭದ್ರಕೋಟೆ ಎಂದು ಕರೆಯಬಹುದು. ಬಿಜೆಪಿಗೆ ಇಲ್ಲಿ ತನ್ನ ಛಾಪು ಮೂಡಿಸಲು ಸಾಧ್ಯವಾಗಿಲ್ಲ. 1984ರಲ್ಲಿ ಜನತಾ ಪಕ್ಷದ ವಿ.ವೆಂಕಟೇಶ್ ಗೆಲುವು ಸಾಧಿಸಿದಾಗ ಕಾಂಗ್ರೆಸ್ ಪಕ್ಷ ಈ ಸ್ಥಾನವನ್ನು ಕಳೆದುಕೊಂಡಿತ್ತು. 2019ರಲ್ಲಿ ಬಿಜೆಪಿಯ ಎಸ್​, ಮುನಿಸ್ವಾಮಿ ಗೆಲುವು ಸಾಧಿಸಿದ್ದರು.

VISTARANEWS.COM


on

kolar lok sabha constituency
Koo

ಕರ್ನಾಟಕದ ಕೋಲಾರ ಪ್ರದೇಶವು ಖನಿಜ ಸಂಪತ್ತಿನ ಮೂಲಕ ಪ್ರಖ್ಯಾತಿ. ಕೆಜಿಎಫ್​​ ಚಿನ್ನ ಗಣಿ ಇಲ್ಲಿದೆ. ಈ ಪ್ರದೇಶವು ಹಾಲು ಉತ್ಪಾದನೆಯಲ್ಲಿಯೂ ದಾಖಲೆಯನ್ನು ನಿರ್ಮಿಸಿದೆ. ರಾಜಧಾನಿ ಬೆಂಗಳೂರಿನಿಂದ 65 ಕಿಲೋಮೀಟರ್​ ದೂರದಲ್ಲಿರುವ ಈ ನಗರವು ದೇವಾಲಯಗಳು ಮತ್ತು ಪ್ರಾಚೀನ ಇತಿಹಾಸಕ್ಕೆ ಹೆಸರುವಾಸಿಯಾಗಿದೆ. ಕೋಲಾರ ಲೋಕಸಭಾ ಕ್ಷೇತ್ರವು (Kolar lok sabha constituency) ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಒಂದು . ಇದರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಸ್ವಾತಂತ್ರ್ಯದ ನಂತರ ನಡೆದ ಒಟ್ಟು 16 ಚುನಾವಣೆಗಳಲ್ಲಿ 15 ರಲ್ಲಿ ಕಾಂಗ್ರೆಸ್​ ಗೆದ್ದಿದ್ದು, ಈ ಪಕ್ಷದಭದ್ರಕೋಟೆ ಎಂದು ಕರೆಯಬಹುದು. ಬಿಜೆಪಿಗೆ ಇಲ್ಲಿ ತನ್ನ ಛಾಪು ಮೂಡಿಸಲು ಸಾಧ್ಯವಾಗಿಲ್ಲ. 1984ರಲ್ಲಿ ಜನತಾ ಪಕ್ಷದ ವಿ.ವೆಂಕಟೇಶ್ ಗೆಲುವು ಸಾಧಿಸಿದಾಗ ಕಾಂಗ್ರೆಸ್ ಪಕ್ಷ ಈ ಸ್ಥಾನವನ್ನು ಕಳೆದುಕೊಂಡಿತ್ತು. 2019ರಲ್ಲಿ ಬಿಜೆಪಿಯ ಎಸ್​, ಮುನಿಸ್ವಾಮಿ ಗೆಲುವು ಸಾಧಿಸಿದ್ದರು.

2024 ರ ಲೋಕಸಭಾ ಚುನಾವಣೆಯ 2 ನೇ ಹಂತದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಮತದಾನ ನಡೆಯಿತು. ಜೂನ್ 4, 2024 ರಂದು ಮತ ಎಣಿಕೆ ನಡೆಯಲಿದೆ.ಈ ಬಾರಿ ಕಾಂಗ್ರೆಸ್ ನ ಕೆ.ವಿ.ಗೌತಮ್ ಅವರು ಜೆಡಿಎಸ್ ನ ಮಲ್ಲೇಶ್ ಬಾಬು ವಿರುದ್ಧ ಕಣದಲ್ಲಿದ್ದಾರೆ.

ಕೋಲಾರ ಕ್ಷೇತ್ರದ ವಿಶೇಷವೇನು?

ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಮತ್ತು ಮತ್ತು ಇಡೀ ಕೋಲಾರ ಜಿಲ್ಲೆಯನ್ನು ಈ ಕ್ಷೇತ್ರ ಹೊಂದಿದೆ. 2019ರಲ್ಲಿ ಈ ಕ್ಷೇತ್ರದಲ್ಲಿ 16,29,961 ಮತದಾರರಿದ್ದರು. ಸರಾಸರಿ ಸಾಕ್ಷರತಾ ಪ್ರಮಾಣವನ್ನು 86.13% ಎಂದು ಸೂಚಿಸುತ್ತದೆ – ಅದರಲ್ಲಿ ಪುರುಷರು ಮತ್ತು ಮಹಿಳೆಯರು ಕ್ರಮವಾಗಿ 90.05% ಮತ್ತು 82.18% ರಷ್ಟಿದ್ದಾರೆ. ಕೋಲಾರ ಜಿಲ್ಲೆಯ 68.75% ಜನಸಂಖ್ಯೆಯು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದೆ.

ಇದನ್ನೂ ಓದಿ: mandya lok sabha constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

ಕೋಲಾರ ಲೋಕಸಭಾ ಕ್ಷೇತ್ರವು ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ ಗೋಲ್ಡ್ ಫೀಲ್ಡ್ಸ್, ಬಂಗಾರಪೇಟೆ, ಕೋಲಾರ ಮತ್ತು ಮಾಲೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಂಪ್ರದಾಯಿಕವಾಗಿ ಪ್ರಬಲವಾಗಿವೆ.

ದಶಕಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು 2019 ರಲ್ಲಿ ಬಿಜೆಪಿ ಕಸಿದುಕೊಂಡಿತ್ತು. ಬಿಜೆಪಿಯ ಎಸ್.ಮುನಿಸ್ವಾಮಿ ಅವರು ನಾಲ್ಕು ಬಾರಿ ಕಾಂಗ್ರೆಸ್ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.

ಹಿಂದಿನ ಫಲಿತಾಂಶಗಳು ಇಂತಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಎಸ್ .ಮುನಿಸ್ವಾಮಿ ಅವರು ಕಾಂಗ್ರೆಸ್​​ನ ಕೆ.ಎಚ್.ಮುನಿಯಪ್ಪ ಅವರನ್ನು 2,10,021 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.56.32ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು ಜೆಡಿಎಸ್ ನ ಕೋಲಾರ ಕೇಶವ ಅವರನ್ನು 47,850 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.16% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು ಬಿಜೆಪಿಯ ಡಿ.ಎಸ್.ವೀರಯ್ಯ ಅವರನ್ನು 23,006 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 37.17% ಮತಗಳನ್ನು ಪಡೆದಿತ್ತು.

Continue Reading

ಪ್ರಮುಖ ಸುದ್ದಿ

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Mandya Lok Sabha Constituency: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

VISTARANEWS.COM


on

mandya lok sabha constituency
Koo

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವು (mandya lok sabha constituency) ಇಡೀ ಮಂಡ್ಯ ಜಿಲ್ಲೆ ಮತ್ತು ಮೈಸೂರು ಜಿಲ್ಲೆಯ ಒಂದು ಭಾಗವನ್ನು ಒಳಗೊಂಡಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಂಡ್ಯ ಕ್ಷೇತ್ರವು ಆರಂಭಗೊಂಡ ಬಳಿಕದಿಂದ ಶ್ರೀಮಂತ ರಾಜಕೀಯ ಇತಿಹಾಸ ಹೊಂದಿದೆ. ಮಂಡ್ಯದಲ್ಲಿ 3 ಬಾರಿ ಜೆಡಿಎಸ್ , 2 ಬಾರಿ ಜತನಾ ದಳ ಹಾಗೂ ಒಂದು ಬಾರಿ ಜನತಾ ಪಕ್ಷ ಗೆಲುವು ಸಾಧಿಸಿದೆ. ಹಿಂದಿನ ಬಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿಜಯ ಕಂಡಿದ್ದರು. ಮೂಲತಃ ಮೈಸೂರು ರಾಜ್ಯದ ಭಾಗವಾಗಿದ್ದ ಮಂಡ್ಯ 1977 ರ ನಂತರ ಕರ್ನಾಟಕಕ್ಕೆ ಸೇರಿತು.

2024ರ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಮತದಾನ ನಡೆಯಿತು. ಈ ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಷ್ಠಿತ ಸ್ಥಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ರೂಪದಲ್ಲಿ ಕಣಕ್ಕಿಳಿದಿದ್ದಾರೆ. ಕುಮಾರಸ್ವಾಮಿ ಅವರನ್ನು ಎದುರಿಸಲು ಸ್ಟಾರ್ ಚಂದ್ರು ಎಂದೇ ಖ್ಯಾತರಾದ ವೆಂಕಟರಮಣೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಇಲ್ಲಿ ಗೆದ್ದವರು ಯಾರು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

ಇದನ್ನೂ ಓದಿ: Bangalore Rural Lok Sabha Constituency : ಡಿ.ಕೆ ಸುರೇಶ್​​ ನಾಗಾಲೋಟಕ್ಕೆ ಡಾ. ಮಂಜುನಾಥ್​ ಅಡ್ಡಿಯಾಗುವ ಆತಂಕ

2018ರ ಉಪಚುನಾವಣೆಯಲ್ಲಿ ಜೆಡಿಎಸ್ ನ ಎಲ್.ಆರ್.ಶಿವರಾಮಗೌಡ 5,69,347 ಮತಗಳನ್ನು ಪಡೆದು ಗೆದ್ದಿದ್ದರು. ಬಿಜೆಪಿಯ ಡಿ.ಆರ್.ಸಿದ್ದರಾಮಯ್ಯ 2,44,404 ಹಾಗೂ ಪಕ್ಷೇತರ ಅಭ್ಯರ್ಥಿ ಎಂ.ಹೊನ್ನೇಗೌಡ 17,842 ಮತಗಳನ್ನು ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ರಮ್ಯಾ 4,84,085 ಮತಗಳನ್ನು ಪಡೆದು ಜಯಗಳಿಸಿದ್ದರು.

ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ತಾರೆ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು. 2013ರಲ್ಲಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚೆಲುವರಾಯಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ನಟಿ ರಮ್ಯಾ ಗೆಲುವು ಸಾಧಿಸಿದರು. 2018 ರ ಉಪಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡಿತು.

ಹೇಗಿದೆ ಕ್ಷೇತ್ರ

ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 17,12,004. 2019ರಲ್ಲಿ ಶೇ.80.4ರಷ್ಟು ಮತದಾನವಾಗಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ 1 ಸ್ಥಾನಗಳನ್ನು ಹೊಂದಿವೆ.

ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯನ್ನು ಜೆಡಿಎಸ್ ಮುರಿದಿದೆ. ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು 2019 ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

2011ರ ಜನಗಣತಿ ಪ್ರಕಾರ ಮಂಡ್ಯದಲ್ಲಿ 1805769 ಜನಸಂಖ್ಯೆ ಇತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 70.40% – ಮಹಿಳೆಯರಲ್ಲಿ 62.54% ಮತ್ತು ಪುರುಷರಲ್ಲಿ 78.27% ಆಗಿತ್ತು. ಗ್ರಾಮೀಣ ಮತದಾರರು ಇಎಲ್ ನ 83.4% ರಷ್ಟಿದ್ದಾರೆ.

Continue Reading
Advertisement
Bangalore Rain
ಕರ್ನಾಟಕ11 mins ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ13 mins ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ15 mins ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ43 mins ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್43 mins ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ46 mins ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ1 hour ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್1 hour ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ1 hour ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Pro-Palestinian Protest
ಕರ್ನಾಟಕ2 hours ago

Pro-Palestinian Protest: ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ; ಮಹಿಳೆಯರು ಸೇರಿ ಹಲವರು ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌