ವಿಸ್ತಾರ ಸಂಪಾದಕೀಯ: ಹೃದ್ರೋಗಿಗಳಿಗೆ ಡಾ. ಸಿ.ಎನ್. ಮಂಜುನಾಥ್ ಸೇವೆ ಅವಿಸ್ಮರಣೀಯ - Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ಹೃದ್ರೋಗಿಗಳಿಗೆ ಡಾ. ಸಿ.ಎನ್. ಮಂಜುನಾಥ್ ಸೇವೆ ಅವಿಸ್ಮರಣೀಯ

Vistara Editorial: 16 ವರ್ಷಗಳ ಕಾಲ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಜನ ಮೆಚ್ಚುವ ಸೇವೆಯನ್ನು ನೀಡಿದ್ದಾರೆ. ಅವರ ಕಾರಣದಿಂದಲೇ ಸಂಸ್ಥೆಯು ಇಂದು ದಕ್ಷಿಣ ಏಷ್ಯಾದ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆಯಾಗಿ ಬೆಳೆದು ನಿಂತಿದೆ.

VISTARANEWS.COM


on

Vistara Editorial, Dr. C.N. Manjunath service is unforgettable
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯದ ಹಾಗೂ ದೇಶದ ಪ್ರತಿಷ್ಠಿತ ಹೃದ್ರೋಗ ಸಂಸ್ಥೆಗಳಲ್ಲೊಂದಾದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Jayadeva Hospital) ನಿರ್ದೇಶಕ ಮತ್ತು ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರ ಸೇವಾವಧಿ ಜ.31ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಂಗಳವಾರ ಭಾವಪೂರ್ಣವಾಗಿ ಬೀಳ್ಕೊಟ್ಟರು. ಎರಡ್ಮೂರು ವರ್ಷಗಳ ಹಿಂದೆಯೇ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದರೂ ಸರ್ಕಾರಗಳು ಅವರ ಸೇವಾವಧಿಯನ್ನು ವಿಸ್ತರಿಸುತ್ತಾ ಬಂದಿದ್ದವು. ದಕ್ಷ ವ್ಯಕ್ತಿಯ ನೇತೃತ್ವ ದೊರೆತರೆ ಸಂಸ್ಥೆಯೊಂದು ಯಾವ ರೀತಿ ಅಭಿವೃದ್ದಿಯಾಗಬಲ್ಲದು ಮತ್ತು ಅದು ಹೇಗೆ ಜನೋಪಕಾರಿಯಾಗಬಹುದು ಎಂಬುದಕ್ಕೆ ಇಂದು ಜಯದೇವ ಹೃದ್ರೋಗ ಸಂಸ್ಥೆ ಉದಾಹರಣೆಯಾಗಿದೆ. ಅದರ ಬಹುತೇಕ ಶ್ರೇಯವು ಡಾ. ಮಂಜನಾಥ್ ಅವರಿಗೇ ಸಲ್ಲುತ್ತದೆ(Vistara Editorial).

1989ರಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಸೇರಿದ ಡಾ. ಮಂಜುನಾಥ್ ಅವರು 2007ರಲ್ಲಿ ಸಂಸ್ಥೆಗೆ ನಿರ್ದೇಶಕರಾದರು. ಅಲ್ಲಿಂದ ಈ ಆಸ್ಪತ್ರೆಯ ಒಟ್ಟು ಚಿತ್ರಣವೇ ಬದಲಾಯಿತು. ಪ್ರಪಂಚದ ಯಾವುದೇ ಖಾಸಗಿ ಆಸ್ಪತ್ರೆಯ ವ್ಯವಸ್ಥೆಯನ್ನು ಮೀರಿಸುವ, ʼಮೊದಲು ಆರೈಕೆ ನಂತರ ಪಾವತಿʼ ನೀತಿಯನ್ನು ಜಾರಿಗೆ ತಂದರು. ಇದರಿಂದ ಲಕ್ಷಾಂತರ ಹೃದಯ ರೋಗಿಗಳಿಗೆ ಭಾರಿ ಉಪಕಾರವಾಗಿದೆ. ಡಾ. ಮಂಜುನಾಥ್ ಅವರು ಇಎಸ್ಐ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಮೈಸೂರು, ಬೀದರ್‌ನಂಥ ಹಿಂದುಳಿದ ಜಿಲ್ಲೆಗಳ ಆಸ್ಪತ್ರೆಗಳಲ್ಲೂ ಶಾಖೆಗಳನ್ನು ವಿಸ್ತರಿಸಿ ನಾಡಿನ ಆರೋಗ್ಯ ಕ್ಷೇತ್ರಕ್ಕೆ ನೆರವಾಗಿದ್ದಾರೆ. ಅಂತಹ ಪರಿಣಿತರ ಶುದ್ಧ ಹಸ್ತ ಆಡಳಿತ ಧುರೀಣರನ್ನು ನಮ್ಮೊಂದಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಉಳಿಸಿಕೊಂಡು ಅವರ ಪರಿಣತಿಯನ್ನು ಸಾಮಾನ್ಯ ಜನರಿಗೆ ಒದಗಿಸುವ ಅವಶ್ಯಕತೆ ಮುಂದೆಯೂ ಇದೆ. ಹೃದ್ರೋಗ ಸಂಸ್ಥೆಯಿಂದ ಅವರು ಹೊರ ಬಂದರೂ, ಅವರ ಸೇವೆಯನ್ನು ಯಾವುದೇ ರೂಪದಲ್ಲಾದರೂ ಸರ್ಕಾರವು ಬಳಸಿಕೊಳ್ಳಬೇಕು.

ಡಾ. ಸಿ.ಎನ್. ಮಂಜುನಾಥ್ ಅವರು ನಿರ್ದೇಶಕರಾಗಿ 16 ವರ್ಷಗಳ ಕಾಲ ದುಡಿದಿದ್ದಾರೆ. ಈ ಅವಧಿಯಲ್ಲಿ ಸಂಸ್ಥೆಯು ಶೇ.500ರಷ್ಟು ಪ್ರಗತಿ ಸಾಧಿಸಿದೆ. 300 ಹಾಸಿಗೆಗಳಿದ್ದ ಆಸ್ಪತ್ರೆಯು ಇಂದು 2000 ಹಾಸಿಗೆಗಳ ಆಸ್ಪತ್ರೆಯಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿದೊಡ್ಡ ಹೃದ್ರೋಗ ಆಸ್ಪತ್ರೆಯಾಗಿ ಗುರುತಿಸಿಕೊಂಡಿದೆ. ಆಸ್ಪತ್ರೆಯನ್ನು ಪಂಚತಾರಾ ಆಸ್ಪತ್ರೆಯನ್ನಾಗಿ ರೂಪಿಸುವ ಕನಸು ಕಂಡು, ಅದನ್ನು ನನಸು ಮಾಡಿದ್ದಾರೆ. ಆ ಖುಷಿ ಅವರಲ್ಲಿದೆ. ಶ್ರೀಮಂತರಿಗೆ ದೊರೆಯುವ ಆರೋಗ್ಯ ಸೇವೆಯನ್ನು ಡಾ. ಮಂಜುನಾಥ್ ಅವರು ನಿರ್ಗತಿಕರು, ಬಡವರಿಗೂ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾಗಿ, ನಿಜರ್ಥದಲ್ಲಿ ಅವರು ‘ವೈದ್ಯೋ ನಾರಾಯಣೋ ಹರಿಃ’

ಡಾ. ಸಿ.ಎನ್. ಮಂಜುನಾಥ್ ಅವರು ತಮ್ಮ ಅವಧಿಯಲ್ಲಿ 75 ಲಕ್ಷ ಹೊರ ರೋಗಿಗಳಿಗೆ ಚಿಕಿತ್ಸೆ ಕಲ್ಪಿಸಿದ್ದಾರೆ. 8 ಲಕ್ಷ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದೊರೆಯುವ ಗುಣಮಟ್ಟದ ಚಿಕಿತ್ಸೆ, ಪಾರದರ್ಶಕ ಆಡಳಿತ ವ್ಯವಸ್ಥೆಗೆ ಕೇಂದ್ರ ಸರ್ಕಾರವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ಮಾದರಿಯನ್ನು ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳು ಅಳಡಿಸಿಕೊಳ್ಳಲು ಶಿಫಾರಸು ಮಾಡಿರುವುದು ಡಾ. ಮಂಜುನಾಥ ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಕಾರಣಕ್ಕಾಗಿಯಾಗಿಯೇ ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಕೂಡ ಅರಸಿ ಬಂದಿದೆ.

ಡಾ. ಸಿ.ಎನ್. ಮಂಜುನಾಥ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರ ಅಳಿಯ. 2005ರಲ್ಲಿ ಮಂಜುನಾಥ್ ಅವರು ಆಸ್ಪತ್ರೆ ತೊರೆದು ವಿದೇಶಕ್ಕೆ ಹೋಗುವ ಮನಸ್ಸು ಮಾಡಿದ್ದರು. ಆಗ ದೇವೇಗೌಡರು ಇಲ್ಲೇ ಉಳಿಯುವಂತೆ ಸೂಚಿಸಿದ್ದರು. ಅವರ ಮಾತಿಗೆ ಮನ್ನಣೆ ನೀಡಿ ಉಳಿದರು ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಯನ್ನು ವಿಶ್ವಮಾನ್ಯ ಆಸ್ಪತ್ರೆಯನ್ನಾಗಿ ಮಾಡಿದರು. ಒಂದು ವೇಳೆ, ಅಂದು ವಿದೇಶಕ್ಕೆ ಹೋಗಿದ್ದರೆ, ಕನಿಷ್ಠ ವೆಚ್ಚದಲ್ಲಿ ಬಡವರಿಗೆ ಹೃದಯ ರೋಗ ವಾಸಿ ಎಂಬ ಮಾತು ವಾಸ್ತವಕ್ಕೆ ಬರುತ್ತಿರಲಿಲ್ಲ! 66 ವರ್ಷದ ಡಾ. ಮಂಜುನಾಥ ಅವರ ಪೂರ್ಣ ಹೆಸರು. ಚೋಳೇನಹಳ್ಳಿ ನಂಜಪ್ಪ ಮಂಜುನಾಥ್. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೋಳೇನಹಳ್ಳಿ ಅವರ ಊರು. ಡಾ. ಮಂಜುನಾಥ ಅವರಿಂದಾಗಿ ಈ ಊರು ಕೂಡ ಪ್ರಸಿದ್ಧವಾಗಿದೆ ಎಂದರೆ ಉತ್ಪ್ರೇಕ್ಷೆಯಾಗಲಾರದು.

ಒಳ್ಳೆಯದೆಲ್ಲವೂ ಅಂತ್ಯವಾಗಲೇಬೇಕು ಎಂಬ ಮಾತಿನಂತೆ ಡಾ. ಸಿ.ಎನ್. ಮಂಜುನಾಥ್ ಅವರು ಸಂತೋಷದಿಂದಲೇ ತಮ್ಮ ಹುದ್ದೆಯಿಂದ ಈಗ ನಿರ್ಗಮಿಸುತ್ತಿದ್ದಾರೆ. ಅವರು ತೋರಿದ ಹಾದಿಯಲ್ಲಿ ಮುಂಬರುವ ನಿರ್ದೇಶಕರು ನಡೆಯಲಿ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಗೆ ಬರುವ ರೋಗಿಗಳಿಗೆ ಡಾ.ಮಂಜುನಾಥ್ ಅವರ ಕೊರತೆಯಾಗದಂತೆ ನೋಡಿಕೊಳ್ಳಲಿ. ಡಾ. ಮಂಜುನಾಥ್ ಅವರು ಸೇವೆಯಿಂದ ನಿವೃತ್ತರಾಗಿದ್ದಾರಷ್ಟೇ. ಅವರ ತಜ್ಞತೆಯನ್ನು ಸರ್ಕಾರವು ಅಗತ್ಯ ಬಿದ್ದಾಗ ಪಡೆದುಕೊಳ್ಳಲು ಹಿಂಜರಿಯಬಾರದು.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಮಿ ನಿಷೇಧಿಸಿದರೆ ಸಾಲದು, ಇದರ ತಳಿಗಳನ್ನೂ ನಿಗ್ರಹಿಸಬೇಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Rain News : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯು ಮುಂದುವರಿಯಲಿದೆ. ಜೂ.9 ರಿಂದ 14ರವೆರೆಗೆ‌ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ (Karnataka Weather Forecast) ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Rain News) ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು, ಸಿಡಿಲಿನ ಆರ್ಭಟ ಇರಲಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಜತೆಗೆ ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ಬಿರುಗಾಳಿಯ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Davanagere News: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

Karnataka police
Koo

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮುಸ್ಲಿಂ ಯುವಕನ ಮೇಲೆಯೇ ಹಲವು ಮುಸ್ಲಿಂ ಯುವಕರು ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ, ಹಲ್ಲೆ ಮಾಡಿದ ಪ್ರಕರಣವನ್ನು (Davanagere News) ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 31ರಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಬಳಿಯ ಖಾಲಿ‌ ಕೊಠಡಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಈಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹರಿಹರದ ಕಾಳಿದಾಸ ನಗರದ ನಿವಾಸಿ ಮಹಮ್ಮದ್ ಅಲಿ (26) ಮೇಲೆ ಏಳು ಯುವಕರು ಹಲ್ಲೆ ನಡೆಸಿದ್ದರು. ಆಸೀಫ್, ಗೌಸ್, ತೌಫಿಕ್, ಸಯ್ಯದ್, ದಾದು, ಚೋಟು, ಫಿರೋಜ್‌ ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ಏಳು ಜನರಲ್ಲಿ ನಾಲ್ವರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಖಾಲಿ ಕೊಠಡಿಯಲ್ಲಿ ಯುವಕನ ಮೇಲೆ ಆರೋಪಿಗಳು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಸಾಮಾಜಿಕ‌ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೊ ವೈರಲ್‌ ಆಗಿತ್ತು. ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾರಣ ಕ್ರಮ ತೆಗೆದುಕೊಳ್ಳುವಂತೆ ಜನ ಆಗ್ರಹಿಸಿದ್ದರು.

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading

ದಾವಣಗೆರೆ

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Davanagere News: ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kittur Rani Chennamma Residential School
Koo

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading
Advertisement
Modi 3.0 Cabinet
ಪ್ರಮುಖ ಸುದ್ದಿ10 mins ago

Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

Eating Style
ಲೈಫ್‌ಸ್ಟೈಲ್11 mins ago

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

Narendra Modi
ದೇಶ40 mins ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

karnataka weather forecast
ಮಳೆ41 mins ago

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Narendra Modi
ದೇಶ1 hour ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

5:2 Diet
ಆರೋಗ್ಯ1 hour ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ2 hours ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್8 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ9 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌