Karnataka Weather : ಬೆಂಗಳೂರು ಸೇರಿ ನಾಳೆ ಎಲ್ಲೆಲ್ಲಿ ಹೇಗಿದೆ ವಾತಾವರಣ - Vistara News

ಮಳೆ

Karnataka Weather : ಬೆಂಗಳೂರು ಸೇರಿ ನಾಳೆ ಎಲ್ಲೆಲ್ಲಿ ಹೇಗಿದೆ ವಾತಾವರಣ

Karnataka Weather Forecast : ಬೆಂಗಳೂರು ಸೇರಿದಂತೆ ವಿವಿಧೆಡೆ ಶುಷ್ಕ ವಾತಾವರಣ (Dry weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

Dry weather conditions prevailed over the Karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಒಣಹವೆ (Dry Weather) ಇತ್ತು. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶವು 12 ಡಿ.ಸೆ ದಾಖಲಾಗಿತ್ತು. ಮುಂದಿನ 24 ಗಂಟೆಯಲ್ಲಿ ಹವಾಮಾನವು ರಾಜ್ಯಾದ್ಯಂತ ಒಣಹವೆಯೇ (Karnataka Weather Forecast) ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ನಂತರ ಆಕಾಶವು ನಿರ್ಮಲವಾಗಿರಲಿದ್ದು, ಮಧ್ಯಾಹ್ನದಂದು ಬಿಸಿಲು ಹೆಚ್ಚಿರಲಿದೆ. ಚಳಿಯ ತೀವ್ರತೆಯು ಕಡಿಮೆ ಆಗಲಿದೆ. ಗರಿಷ್ಠ ಉಷ್ಣಾಂಶ 31 ಹಾಗೂ ಕನಿಷ್ಠ ಉಷ್ಣಾಂಶ 17 ಡಿ.ಸೆ ಇರಲಿದೆ.

ಹಾಸನ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಕೊಡಗಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ನಿಂದ 13 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿತ್ತು.

ಉತ್ತರ ಕನ್ನಡ, ಚಿತ್ರದುರ್ಗ, ಮೈಸೂರು, ಗದಗ, ಕೊಪ್ಪಳ ಹಾಗೂ ಕಲಬುರಗಿ, ಹಾವೇರಿ, ಧಾರವಾಡ, ಚಾಮರಾಜನಗರ, ವಿಜಯಪುರ, ಶಿವಮೊಗ್ಗ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಗರಿಷ್ಠ ತಾಪಮಾನವು 34ರಿಂದ 36 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Physical Abuse : ಬೆಟ್ಟಿಂಗ್ ಕಟ್ಟಿ ಯುವತಿ ಸೊಂಟ ಮುಟ್ಟಿದವನ ಬೆಂಡೆತ್ತಿದ ಪೊಲೀಸರು

ಚಳಿಗಾಲದಲ್ಲಿ ಟ್ರೆಂಡಿಯಾದ 3 ಶೈಲಿಯ ಫುಲ್‌ ಸ್ಲೀವ್‌ ಬ್ಲೌಸ್‌!

ಫುಲ್‌ ಸ್ಲೀವ್‌ ಸೀರೆ ಬ್ಲೌಸ್‌ಗಳು (Saree Blouse Fashion) ಈ ಚಳಿಗಾಲದಲ್ಲಿ ಕಾಲಿಟ್ಟಿದ್ದು, ಅವುಗಳಲ್ಲಿ 3 ಶೈಲಿಯವು ಟ್ರೆಂಡಿಯಾಗಿವೆ. ಈ ಸೀಸನ್‌ನಲ್ಲಿ ಸೀರೆಗಳೊಂದಿಗೆ ಫುಲ್‌ ಸ್ಲೀವ್‌ ಬ್ಲೌಸ್‌ಗಳನ್ನು ಧರಿಸುವುದು ಹೆಚ್ಚಾಗಿದೆ. ಹೊರಗಿನ ಹವಾಮಾನದಲ್ಲಿ ಬೆಚ್ಚಗಿಡುವ ಈ ಬ್ಲೌಸ್‌ಗಳು ಸೀರೆಗಳೊಂದಿಗೆ ಮ್ಯಾಚ್‌ ಮಾಡುವುದು ಸಾಮಾನ್ಯವಾಗಿದೆ. ಬಗೆಬಗೆಯ ಬ್ಲೌಸ್‌ಗಳು ಚಾಲ್ತಿಯಲ್ಲಿವೆಯಾದರೂ ಅತಿ ಸುಲಭವಾಗಿ ರೆಡಿಮೇಡ್‌ನಲ್ಲಿ ದೊರಕುವ ಅಥವಾ ಹೊಲೆಸಬಹುದಾದ ಬ್ಲೌಸ್‌ಗಳಲ್ಲಿ 3 ಶೈಲಿಯವು ಹೆಚ್ಚು ಪ್ರಚಲಿತದಲ್ಲಿವೆ.

Let it suit the personality

ಪರ್ಸನಾಲಿಟಿಗೆ ತಕ್ಕಂತಿರಲಿ

“ಚಳಿಗಾಲದಲ್ಲಿ ಸೀರೆ ಪ್ರಿಯರು, ಅದರಲ್ಲೂ ಇಂಡೋ-ವೆಸ್ಟರ್ನ್ ಲುಕ್‌ ನೀಡಲು ಬಯಸುವವರು ಅಥವಾ ಕೊಂಚ ಫ್ಯಾಷನ್‌ ಲುಕ್‌ ನೀಡಲು ಇಷ್ಟಪಡುವವರು ಡಿಫರೆಂಟ್‌ ಲುಕ್‌ ನೀಡುವ ಸಲುವಾಗಿ ಹಾಗೂ ಸೀಸನ್‌ಗೆ ಹೊಂದುವಂತಹ ಫುಲ್‌ ಸ್ಲೀವ್‌ ಸೀರೆ ಬ್ಲೌಸ್‌ಗಳ ಆಯ್ಕೆ ಮಾಡತೊಡಗಿದ್ದಾರೆ. ಇದು ಚಳಿಗಾಲಕ್ಕೆ ಕೈಗಳನ್ನು ಬೆಚ್ಚಗಿಡುವುದರೊಂದಿಗೆ ನೋಡಲು ಕೊಂಚ ಭಿನ್ನ ಲುಕ್‌ ನೀಡುತ್ತವೆ. ಟೈಲರ್‌ ಬಳಿಯು ಇವನ್ನು ಹೊಲೆಸಬಹುದು ಅಥವಾ ಇದೀಗ ಶಾಪ್‌ಗಳಲ್ಲೂ ರೆಡಿಮೇಡ್‌ನಲ್ಲಿ ಲಭ್ಯ” ಎನ್ನುತ್ತಾರೆ ಬ್ಲೌಸ್‌ ಡಿಸೈನರ್‌ ರಾಜಾ. ಅವರ ಪ್ರಕಾರ, ಅವರವರ ಪರ್ಸನಾಲಿಟಿಗೆ ತಕ್ಕಂತೆ ಡಿಸೈನ್‌ ಹೊಲೆಸುವುದು ಹಾಗೂ ಆಯ್ಕೆ ಮಾಡುವುದು ಉತ್ತಮ.

Velvet Full Sleeve Blouse

ವೆಲ್ವೆಟ್‌ ಫುಲ್‌ ಸ್ಲೀವ್‌ ಬ್ಲೌಸ್‌

ಇದೀಗ ವೆಲ್ವೆಟ್‌ ಫ್ಯಾಬ್ರಿಕ್‌ನ ಫುಲ್‌ ಸ್ಲೀವ್ ಬ್ಲೌಸ್‌ಗಳು ಆಗಮಿಸಿವೆ. ಅದರಲ್ಲೂ ಡಾರ್ಕ್ ಶೇಡ್‌ನವು ಟ್ರೆಂಡಿಯಾಗಿವೆ. ಇನ್ನು ಬ್ಲಾಕ್‌ ಕಲರ್‌ನವು ಅತಿ ಹೆಚ್ಚು ಟ್ರೆಂಡಿಯಾಗಿವೆ. ಇವನ್ನು ಯಾವ ಸೀರೆಗೆ ಬೇಕಾದರೂ ಮ್ಯಾಚ್‌ ಮಾಡಬಹುದು. ಬಾರ್ಡರ್‌ ಸೀರೆಯಿಂದಿಡಿದು ಸಾಮಾನ್ಯ ಸೀರೆಗೂ ಧರಿಸಬಹುದು.

ಶೀರ್‌ ಡಿಸೈನ್‌ ಫುಲ್‌ ಸ್ಲೀವ್‌ ಬ್ಲೌಸ್‌

ಪಾರದರ್ಶಕವಾಗಿರುವ ಫ್ಯಾಬ್ರಿಕ್‌ನ ಫುಲ್‌ ಸ್ಲೀವ್‌ ಬ್ಲೌಸ್‌ಗಳು ಇದೀಗ ನಾನಾ ಬಗೆಯ ಡಿಸೈನರ್‌ ಸೀರೆಗಳೊಂದಿಗೆ ಕಾಣಿಸಿಕೊಳ್ಳುತ್ತಿವೆ. ಇವು ಸೀರೆಯೊಂದಿಗೆ ನೋಡಲು ಫ್ಯಾಷೆನಬಲ್‌ ಆಗಿ ಕಾಣಿಸುತ್ತವೆ. ಸೀರೆಯ ಮ್ಯಾಚಿಂಗ್‌ ಕೆಲವೊಮ್ಮೆ ಕಾಂಟ್ರಾಸ್ಟ್ ಶೇಡ್‌ನಲ್ಲಿ ಧರಿಸಿದಾಗ ನೋಡಲು ಆಕರ್ಷಕವಾಗಿ ಕಾಣುತ್ತವೆ.

Readymade Full Sleeve Blouse

ರೆಡಿಮೇಡ್‌ ಫುಲ್‌ ಸ್ಲೀವ್‌ ಬ್ಲೌಸ್‌

ರೆಡಿಮೇಡ್‌ ಫುಲ್‌ ಸ್ಲೀವ್‌ ಬ್ಲೌಸ್‌ಗಳು ಇದೀಗ ಮಾರುಕಟ್ಟೆಯಲ್ಲಿ ಕೈಗೆಟಕುವ ಬೆಲೆಯಲ್ಲಿ ದೊರೆಯುತ್ತಿವೆ. ನಾನಾ ವರ್ಣಗಳಲ್ಲಿ ದೊರೆಯುವ ಇವನ್ನು ಮ್ಯಾಚಿಂಗ್‌ ಸೀರೆಗೆ ತಕ್ಕಂತೆ ಧರಿಸಬಹುದು. ಇವು ಸ್ಟ್ರೆಚಬಲ್‌ ಫ್ಯಾಬ್ರಿಕ್‌ ಹೊಂದಿರುವುದರಿಂದ ಒಂದು ಬ್ಲೌಸನ್ನು ಯಾರೂ ಬೇಕಾದರೂ ಧರಿಸಬಹುದು. ನೆಕ್‌ಲೈನ್‌ ಅಗಲವಾಗಿರುವುದಿಲ್ಲ. ಹಾಗಾಗಿ ಸೀರೆಗೆ ಹೊಂದುವುದೇ ಎಂಬುದನ್ನು ನೋಡಿಕೊಂಡು ಆಯ್ಕೆ ಮಾಡುವುದು ಉತ್ತಮ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Weather Updates: ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

VISTARANEWS.COM


on

Weather Report
Koo

ನವದೆಹಲಿ: ದೇಶಾದ್ಯಂತ ಒಂದೆಡೆ ಬಿಸಿಲು(Heat wave) ಮತ್ತೊಂದೆಡೆ ಮಳೆರಾಯನ(Heavy Rain) ಅಬ್ಬರ ಜೋರಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೆಲವು ದಿನಗಳಿಂದ ಮಳೆಯ ಅಬ್ಬರ ಶುರುವಾಗಿದ್ದು, ಉತ್ತರಭಾರತದ ರಾಜ್ಯಗಳಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ(Weather Updates). ಉತ್ತರಭಾರತದಲ್ಲಿ ಬುಧವಾರ ಗರಿಷ್ಠ ತಾಪಮಾನ ದಾಖಲೆ ಆಗಿದ್ದು, ಅಧಿಕೃತ ಮಾಹಿತಿ ಪ್ರಕಾರ ದಿಲ್ಲಿ, ಪಂಜಾಬ್‌, ಹರ್ಯಾಣ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್‌ ಮತ್ತು ಮಧ್ಯಪ್ರದೇಶದ ಒಟ್ಟು 24 ಪ್ರದೇಶಗಳಲ್ಲಿ ಬುಧವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ.

ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಕೇರಳದಲ್ಲಿ ಭಾರೀ ಮಳೆ

ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕೇರಳದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಇನ್ನು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು. ಇನ್ನು ಭಾರೀ ಮಳೆಗೆ ಇದುವರೆಗೆ ನಾಲ್ವರು ಬಲಿ ಆಗಿದ್ದಾರೆ.

ಕೇರಳದಲ್ಲಿ ವಿಮಾನ ಸಂಚಾರಕ್ಕೆ ಸ್ಥಗಿತ

ಇನ್ನು ಕೇರಳದಲ್ಲಿ ಭಾರೀ ಮಳೆಯಿಂದಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಕಲ್ಲಿಕೋಟೆ ವಿಮಾನ ನಿಲ್ದಾಣದಿಂದ ಹೊರಡಬೇಕಾಗಿದ್ದ ವಿಮಾನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ದೋಹಾ, ಮಸ್ಕತ್‌, ದುಬೈ, ದಾಮನ್‌ ಮತ್ತು ರಿಯಾಧ್‌ನಿಂದ ಬರುತ್ತಿದ್ದ ವಿಮಾನಗಳನ್ನು ಡೈವರ್ಟ್‌ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಜೆಡ್ಡಾ, ಕುವೈತ್ ಮತ್ತು ದುಬೈಗೆ ಹೋಗುವ ವಿಮಾನಗಳು ವಿಳಂಬವಾಗಿದ್ದರೆ, ದೋಹಾಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ:Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಒಡಿಶಾದಲ್ಲಿ ಈ ವಾರ ಭಾರೀ ಮಳೆ

ಇನು ಒಡಿಶಾದಲ್ಲೂ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಂದಾಜಿಸಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದ್ದು, ಅದರ ಪ್ರಭಾವದಿಂದ ಉತ್ತರ ಒಡಿಶಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ.

Continue Reading

ಕರ್ನಾಟಕ

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ | Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ 23ರಂದು ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ (40-50 ಕಿ.ಮೀ) ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಮೇ 24ರಂದು ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಾಪಮಾನದ ಮುನ್ಸೂಚನೆ

ಮೇ 23 ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಲಿಯನ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಂಟೆಗೆ 40 ಕಿ.ಮೀ. ನಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನು ಓದಿ | Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

Rain News: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Rain News
Koo

ಯಾದಗಿರಿ: ಯಾದಗಿರಿ ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ಬುಧವಾರವೂ ಬಿರುಗಾಳಿ ಸಹಿತ ಭಾರಿ ಮಳೆ (Rain News) ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಯಾದಗಿರಿ ಜಿಲ್ಲೆಯ ಕಂಚಗಾರಹಳ್ಳಿ ತಾಂಡಾದಲ್ಲಿ 6 ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್‌ಗಳು ಹಾಗೂ ಚಾಮನಳ್ಳಿ ತಾಂಡಾದಲ್ಲಿ 4 ಮನೆಗಳ ಮೇಲಿನ ಶೀಟ್‌ಗಳು ಹಾರಿಹೋಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಯರಗೋಳ ಹೊಬಳಿ ಭಾಗದಲ್ಲಿ ಭಾರಿ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಕಂಚಗಾರಹಳ್ಳಿ ತಾಂಡಾದಲ್ಲಿ 6 ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್‌ ಹಾರಿ ಹೋಗಿದ್ದು, ಶೀಟ್‌ ಬಿದ್ದು ಪ್ರಿಯಾಂಕ ಎಂಬ ಮಹಿಳೆಗೆ ಗಾಯಗಳಾಗಿವೆ. ಅದೇ ರೀತಿ ಎರಡು ಕುರಿಗಳಿಗೆ ಗಾಯಗಳಾಗಿದ್ದು, 20ಕ್ಕೂ ಹೆಚ್ಚು ಬೃಹತ್ ಮರಗಳು ಧರೆಗುರುಳಿವೆ. ಹಾಗೆಯೇ ಹಲೆವೆಡೆ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ.

ಇನ್ನು ಯಾದಗಿರಿ ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಮಳೆ ಭಾರಿ ಅವಾಂತರ ಸೃಷ್ಟಿಸಿದ್ದು, ಬಿರುಗಾಳಿ ಸಹಿತ ಮಳೆಗೆ ಹೋಟೆಲ್‌ ಶೀಟ್‌ ಹಾರಿ ಹೋಗಿದ್ದು, ಗೀತಾ ಎಂಬ ಮಹಿಳೆಗೆ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಗ್ರಾಮದಲ್ಲಿ 4 ಕ್ಕೂ ಹೆಚ್ಚು ಮನೆಗಳ ಶೀಟ್‌ ಹಾರಿ ಹೋಗಿದ್ದು, ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿವೆ.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ನಾಳೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗುಡುಗು, ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಮೇ 23ರಂದು ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ (40-50 ಕಿ.ಮೀ) ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಮೇ 24ರಂದು ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಾಪಮಾನದ ಮುನ್ಸೂಚನೆ

ಮೇ 23 ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಲಿಯನ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಂಟೆಗೆ 40 ಕಿ.ಮೀ. ನಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನು ಓದಿ | Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
Karnataka rain
ಮಳೆ6 mins ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ8 mins ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ11 mins ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ12 mins ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ16 mins ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ17 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ34 mins ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ36 mins ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Dengue Fever
ಆರೋಗ್ಯ39 mins ago

Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Star Gown Fashion
ಫ್ಯಾಷನ್54 mins ago

Star Gown Fashion: ಕೇಪ್‌ ಗೌನ್‌ನಲ್ಲಿ ತ್ರಿಲೋಕ ಸುಂದರಿಯಂತೆ ಕಂಡ ನಟಿ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ14 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌