Road Accident : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ; ನಾಲ್ವರು ಮಹಿಳೆಯರು ದಾರುಣ ಸಾವು - Vistara News

ಬೆಳಗಾವಿ

Road Accident : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ; ನಾಲ್ವರು ಮಹಿಳೆಯರು ದಾರುಣ ಸಾವು

Road Accident : ಕಾಗವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಪಾದಚಾರಿ ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

Road Accident in Kagawada Chikodi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ ಅಡಿ ಸಿಲುಕಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಈ ಅಪಘಾತ (Road Accident) ಸಂಭವಿಸಿದೆ.

ಮಾಲಾಬಾಯಿ ರವಸಾಬ್ ಐನಾಪುರೇ (61), ಚಂಪಾ ಲಕ್ಕಪ್ಪ ತಳಕಟ್ಟಿ (50), ಭಾರತಿ ವಡ್ರಾಳೇ (40) ಹಾಗೂ ಶೇಕೂ ನರಸಾಯಿ (45) ಮೃತ ದುರ್ದೈವಿಗಳು. ನಾಲ್ವರು ಮಹಿಳೆಯರು ಕೃಷಿ ಕೆಲಸವನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಶೇಡಬಾಳ ಗ್ರಾಮದ ಸಮೀಪ ಜಮಖಂಡಿ ಮೀರಜ್ ರಸ್ತೆಯಲ್ಲಿ ಬರುವಾಗ ಟ್ರ್ಯಾಕ್ಟರ್ ಟೇಲರ್ ಚಕ್ರ ಕಟ್ಟಾಗಿ, ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಗವಾಡ ಪೊಲೀಸರು ಸ್ಥಳಕ್ಕಾಗಮಿಸಿ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಇನ್ನು ಅಪಘಾತದಿಂದಾಗಿ ಕಿ.ಮೀ ಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: Taxi Fare revises : ಟ್ಯಾಕ್ಸಿ ಕಂಪನಿಗಳ ಕಳ್ಳಾಟಕ್ಕೆ ಮೂಗುದಾರ; ಏಕರೂಪ ದರ ನಿಗದಿ ಮಾಡಿದ ಸರ್ಕಾರ

ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಖಾನಾಪುರ ತಾಲೂಕಿನ ಗುರಲಗುಂಜಿ ರಸ್ತೆಯಲ್ಲಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ (Road Accident) ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಾಮಲಿಂಗ್ ಮುತ್ಗೇಕರ್ (20) ಹನುಮಂತ ಪಾಟೀಲ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಈ ಯುವಕರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಯುವಕರಿಬ್ಬರೂ ಬೇಕ್ವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.

ಸ್ಥಳಕ್ಕೆ ಶಾಸಕ ವಿಠ್ಠಲ್ ಹಲಗೇಕರ್ ಹಾಗೂ ಖಾನಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Baby Theft : ಕಂಡವರ ಮಗು ಕದ್ದು ಭಿಕ್ಷಾಟನೆಗೆ ಬಳಸಿಕೊಂಡ ಮಹಿಳೆಗೆ 4 ವರ್ಷ ಜೈಲು ಶಿಕ್ಷೆ

ಹಾಸನ, ಮಂಡ್ಯ, ಕೋಲಾರದಲ್ಲಿ ಪ್ರತ್ಯೇಕ ಅಪಘಾತ; ನಾಲ್ವರ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ/ಮಂಡ್ಯ/ಕೋಲಾರ: ರಾಜ್ಯದ ಹಾಸನ, ಮಂಡ್ಯ, ಕೋಲಾರದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಿಂದ (Road Accident) ನಾಲ್ವರು ಮೃತಪಟ್ಟಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಶಾಲೆಯ ಕಾಂಪೌಂಡ್‌ ಹಾಗೂ ಪಕ್ಕದಲ್ಲೇ ಇದ್ದ ಮನೆಗೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರಲ್ಲಿ ಮೂವರು ಪ್ರಯಾಣಿಕರ ಪರಿಸ್ಥಿತಿ ಗಂಭೀರವಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಸ್‌ನ ಆ್ಯಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ್ದು, ಮೊದಲು ಮನೆಗೆ ಡಿಕ್ಕಿ ಹೊಡೆದಿದೆ. ಆದರೂ ನಿಯಂತ್ರಣಕ್ಕೆ ಸಿಗದೇ ಇದ್ದಿದ್ದರಿಂದ ಪಕ್ಕದಲ್ಲೇ ಇದ್ದ ಜೆಎಸ್ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದು ನಿಂತಿದೆ. ಈ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Road accident in Hassan Mandya and Kolar Four killed over 15 injured
Road accident in Hassan Mandya and Kolar Four killed over 15 injured

ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಇದಾಗಿದೆ.

ಜಮೀನಿನಲ್ಲಿದ್ದ ವಾಸದ ಮನೆಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಮನೆ ಜಖಂ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಯುವಕರ ಸಾವು

ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿದ್ದಾರೆ. ಅನಿಕೇತನ್ 30, ಪವನ್ 32 ಹಾಗೂ ಚಿರಂಜೀವಿ 32 ಮೃತಪಟ್ಟವರು. ತಡರಾತ್ರಿ ಕಾರಿನಲ್ಲಿ ವೇಗವಾಗಿ ಚಲಿಸುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಕ್ಕಿ ಹೆಬ್ಬಾಳು ಗ್ರಾಮದ ಹೇಮಾವತಿ ಬ್ರಿಡ್ಜ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸಪುರ ಬಳಿ ಟೆಂಪೋ ಪಲ್ಟಿ; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪನಸ ಮಾಕಲಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಟೆಂಪೋ ವಾಹನ ಬಿದ್ದಿದ್ದು, ಟೆಂಪೋದಲ್ಲಿದ್ದ ಕಾಂಕ್ರಿಟ್ ಕೆಲಸ ಮಾಡುವ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯಗಳಾಗಿವೆ.

Road accident in Hassan Mandya and Kolar Four killed over 15 injured
Road accident in Hassan Mandya and Kolar Four killed over 15 injured

ಶ್ರೀನಿವಾಸಪುರದಿಂದ ಕೋಲಾರ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಟ್ರಾಫಿಕ್ ಸಮಸ್ಯೆಯಾಗಿ ಕೆಲ ಕಾಲ ವಾಹನ ಸವಾರರು ಪರದಾಡುವಂತಾಗಿದೆ. ಗಾಯಾಳುಗಳಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸುಗುಟೂರಿನಿಂದ ಶ್ರೀನಿವಾಸಪುರ ಪಟ್ಟಣಕ್ಕೆ ಈ ಕೂಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿದ್ದರು ಎಂದು ಹೇಳಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

VISTARANEWS.COM


on

By

karnataka Rain
Koo

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಮರ ಬಿದ್ದು ಮನೆ ಜಖಂ

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

ನೀರಿನಲ್ಲಿ ಸಿಲುಕಿದ ಕಾರು

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vaccin for Hiv
ಆರೋಗ್ಯ20 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ28 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ44 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ46 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ47 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ55 mins ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ1 hour ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌