Shiva Rajkumar: ‘ಇನ್ಸ್‌ಪೆಕ್ಟರ್‌ ವಿಕ್ರಂ’ ಮತ್ತೆ ಬರ್ತಿದ್ದಾರೆ; ಹೊಸ ಸಿನಿಮಾದಲ್ಲಿ ಶಿವಣ್ಣನ ಖಾಕಿ ಖದರ್‌ ಹೇಗಿರಲಿದೆ? - Vistara News

ಸ್ಯಾಂಡಲ್ ವುಡ್

Shiva Rajkumar: ‘ಇನ್ಸ್‌ಪೆಕ್ಟರ್‌ ವಿಕ್ರಂ’ ಮತ್ತೆ ಬರ್ತಿದ್ದಾರೆ; ಹೊಸ ಸಿನಿಮಾದಲ್ಲಿ ಶಿವಣ್ಣನ ಖಾಕಿ ಖದರ್‌ ಹೇಗಿರಲಿದೆ?

Shiva Rajkumar: 34 ವರ್ಷಗಳ ಹಿಂದೆ ದಿನೇಶ್‌ ಬಾಬು ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ‘ಐವಿ ರಿಟರ್ನ್ಸ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಸೋದರ ಸಂಬಂಧಿ ಲಕ್ಕಿ ಗೋಪಾಲ್‌ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣ ಖಾಕಿ ಖದರ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Shiva Rajkumar IV Returns New Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 1989 ರಲ್ಲಿ ಬಿಡುಗಡೆ ಆಗಿದ್ದ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಸಿನಿಮಾ ಶಿವರಾಜ್‌ಕುಮಾರ್‌ (Shiva Rajkumar) ಕರಿಯರ್‌ನಲ್ಲಿ ಅತ್ಯಂತ ವಿಶೇಷವಾಗಿತ್ತು. ಅವರು ತರಲೆ ಪೊಲೀಸ್‌ ಆಗಿ ನಟಿಸಿದ್ದ ಈ ಸಿನಿಮಾ ಆ ಕಾಲಕ್ಕೆ ಸೂಪರ್‌ ಡ್ಯೂಪರ್‌ ಹಿಟ್‌ ಆಗಿತ್ತು. ಈಗ ಅವರು ಮತ್ತೆ ಅಂತಹದ್ದೇ ಕಥೆಯೊಂದಿಗೆ ‘ಐವಿ ರಿಟರ್ನ್ಸ್’ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

34 ವರ್ಷಗಳ ಹಿಂದೆ ದಿನೇಶ್‌ ಬಾಬು ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ‘ಐವಿ ರಿಟರ್ನ್ಸ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಸೋದರ ಸಂಬಂಧಿ ಲಕ್ಕಿ ಗೋಪಾಲ್‌ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣ ಖಾಕಿ ಖದರ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕೆಲವೊಂದು ಸಿನಿಮಾಗಳು ಸೆಟ್ಟೇರುವುದಕ್ಕೂ ಮುನ್ನವೇ ಭರ್ಜರಿ ಸೌಂಡು ಮಾಡುತ್ತವೆ. ಮೇಕಿಂಗ್‌, ಬಜೆಟ್‌, ಬೃಹತ್‌ ತಾರಾಗಣ, ನೂರಾರು ದಿನಗಳ ಚಿತ್ರೀಕರಣ, ಸ್ಟಾರ್‌ ಮಟ್ಟದ ತಾಂತ್ರಿಕ ಬಳಗ, ಹೀಗೆ ನಾನಾ ಕಾರಣಗಳಿಂದಾಗಿ ಪ್ರೇಕ್ಷಕರ ಗಮನ ಸೆಳೆಯುತ್ತವೆ. ಈಗ ‘ ಐವಿ ರಿರ್ಟನ್ಸ್’ ಸಿನಿಮಾ ಹೆಸರಾಂತ ತಾಂತ್ರಿಕ ಬಳಗದ ಕಾರಣದಿಂದ ಸುದ್ದಿಯಲ್ಲಿದೆ.

ಇದನ್ನೂ ಓದಿ: Shiva Rajkumar: ಕೊನೆಗೂ ಅನೌನ್ಸ್‌ ಆಯ್ತು ಶಿವಣ್ಣ ಜತೆ ಹೇಮಂತ್ ರಾವ್ ಸಿನಿಮಾ!

ಲಕ್ಕಿ ಗೋಪಾಲ್ ಚೊಚ್ಚಲ ಪ್ರಯತ್ನದ ʻಐವಿ ರಿರ್ಟನ್ಸ್ʼ ಸಿನಿಮಾದಲ್ಲಿ ಹೆಸರಾಂತ ಟೆಕ್ನಿಷಿಯನ್‌ ಕೆಲಸ ಮಾಡಲಿದ್ದಾರೆ. ಹೀಗಾಗಿ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ತಮಿಳಿನ ಹೆಸರಾಂತ ಸಂಗೀತ ನಿರ್ದೇಶಕ ಅಮ್ರಿಷ್ ಈ ಸಿನಿಮಾದ ಹಾಡುಗಳನ್ನು ಕಂಪೋಸ್‌ ಮಾಡಿದ್ದು, ʻರುಸ್ತುಂʼ, ʻಘೋಸ್ಟ್ʼ ಚಿತ್ರದ ಖ್ಯಾತಿಯ ಮಹೇನ್ ಸಿಂಹ ಸಿನಿಮಾಟೋಗ್ರಫಿಯಲ್ಲಿ ʻಐವಿ ರಿರ್ಟನ್ಸ್ʼ ಸಿನಿಮಾ ಮೂಡಿ ಬರಲಿದೆ.

ಸೂರಿ ಅವರ ಚಿತ್ರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ದೀಪು ಎಸ್ ಕುಮಾರ್ ಚಿತ್ರಕ್ಕೆ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ. ವಿದ್ಯಾಧರಣ್ ಕಥೆ, ಮಾಸ್ತಿ ಪಂಚಿಂಗ್ ಮಾತು, ಚೇತನ್ ಡಿಸೋಜಾ ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಮತ್ತಷ್ಟು ರಂಗು ತುಂಬಲಿದೆ. ವೇಣುಗೋಪಾಲ್ ಅಸೋಸಿಯೇಟ್ ಡೈರೆಕ್ಟರ್ ಆಗಿ, ರೇಣುಕಾ ಪ್ರಸಾದ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ, ಮೈಸೂರು ರಮೇಶ್ ಪ್ರೊಡಕ್ಷನ್ ಮ್ಯಾನೇಜರ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಈ ಚಿತ್ರಕ್ಕೆ ಮೈಲಾರಿ ಎಂ ಹಣ ಹಾಕುತ್ತಿದ್ದಾರೆ. ಪ್ರಿ ಪ್ರೊಡಕ್ಷನ್ ಕೆಲಸ ಮುಗಿದಿದ್ದು, ಶೀಘ್ರದಲ್ಲೇ ಇನ್ಸ್ ಪೆಕ್ಟರ್ ವಿಕ್ರಂ ರಿಪೋರ್ಟಿಂಗ್ ಶುರು ಮಾಡಲಿದ್ದಾರೆ. ಅಂದರೆ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

Kannada New Movie: ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Kannada New Movie sanju weds geetha another movie came
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ “ಸಂಜು ವೆಡ್ಸ್ ಗೀತಾ“, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ (Kannada New Movie) ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. “ಕವಲುದಾರಿ”, “ಆಪರೇಷನ್ ಅಲುಮೇಲಮ್ಮ” ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಈ ನೂತನ ಚಿತ್ರದ ಸಹ ನಿರ್ಮಾಪಕರು.

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೇ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಡಿಸ್ನಿ ಹಾಟ್‌ಸ್ಟಾರ್‌ ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ನಿರ್ಮಾಪಕ ಪ್ರಮೋದ್ ನಾರಾಯಣ್.

ಈಗಾಗಲೇ ರಿಷಿ ನಟನೆಯ ʻರಾಮನ ಅವತಾರ ಸಿನಿಮಾ ಎರಡನೇ ವಾರ ಚಿತ್ರಮಂದಿರದಲ್ಲಿ ಓಡುತ್ತಿದೆ. ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ʻಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ.

Continue Reading

ಸಿನಿಮಾ

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

Kantara Movie: ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ ಮೊತ್ತಗೆ ಸೇಲ್‌ ಆಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದಾರೆ. ಹಾಗಾಗಿ, ಕಾಂತಾರ ಚಾಪ್ಟರ್‌ 1 ಕುತೂಹಲ ಹೆಚ್ಚಿಸಿದೆ. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ಸಿನಿಮಾ ಬಿಡುಗಡೆಗೆ ಮೊದಲೇ ಕಾಂತಾರ ಭರ್ಜರಿ ಆದಾಯ ಗಳಿಸಿದಂತಾಗಿದೆ.

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

Rishab Shetty

ಚಿತ್ರೀಕರಣ ಆರಂಭ

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Continue Reading

ಸಿನಿಮಾ

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

VISTARANEWS.COM


on

Kannada New Movie Sambavami Yuge Yuge 4K Motion Poster
Koo

ಬೆಂಗಳೂರು: ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” (Kannada New Movie) ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌. ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ.

ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

“ಸಂಭಾವಮಿ ಯುಗೇಯಗೇ” ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

IPL 2024: ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

VISTARANEWS.COM


on

IPL 2024 The people paid revenge for the controversial post ashwini Puneeth Rajkumar
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕೀಳುಮಟ್ಟದ ಟ್ವೀಟ್‌ ಬಗ್ಗೆ ಸಮಾಧಾನವಾಗಿಯೇ ಉತ್ತರ ಕೊಟ್ಟಿದ್ದ ದೊಡ್ಮನೆ ಸೊಸೆ!

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Continue Reading
Advertisement
MS Dhoni Bike Riding
ಕ್ರೀಡೆ8 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ27 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ32 mins ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ1 hour ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ1 hour ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ1 hour ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ1 hour ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ1 hour ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌