Facebook turns 20: ಫೇಸ್‌ಬುಕ್‌ಗೆ ಇಪ್ಪತ್ತು ವರ್ಷ; ಅಂದಿನ ದಿನಗಳನ್ನು ಮೆಲುಕು ಹಾಕಿಕೊಂಡ ಜುಕರ್‌ಬರ್ಗ್‌ - Vistara News

ವಿದೇಶ

Facebook turns 20: ಫೇಸ್‌ಬುಕ್‌ಗೆ ಇಪ್ಪತ್ತು ವರ್ಷ; ಅಂದಿನ ದಿನಗಳನ್ನು ಮೆಲುಕು ಹಾಕಿಕೊಂಡ ಜುಕರ್‌ಬರ್ಗ್‌

Facebook turns 20: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ಫೇಸ್‌ಬುಕ್‌ ಆರಂಭವಾಗಿ 20 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥಾಪಕರಲ್ಲಿ ಒಬ್ಬರಾದ ಮಾರ್ಕ್ ಜುಕರ್‌ಬರ್ಗ್‌ ಅಂದಿನ ದಿನಗಳನ್ನು ಮೆಲುಕು ಹಾಕಿದ್ದಾರೆ.

VISTARANEWS.COM


on

facebook
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ಫೇಸ್‌ಬುಕ್‌ ಆರಂಭವಾಗಿ 20 ವರ್ಷವಾಗಿದೆ (Facebook turns 20). 2004ರಲ್ಲಿ ಇದು ಆರಂಭವಾಗಿತ್ತು. 2004ರ ಫೆಬ್ರವರಿ 4ರಂದು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ (Harvard University) ವಿದ್ಯಾರ್ಥಿಯಾಗಿದ್ದ 19 ವರ್ಷದ ಮಾರ್ಕ್ ಜುಕರ್‌ಬರ್ಗ್‌ (Mark Zuckerberg) ತಮ್ಮ ರೂಮ್‌ಮೇಟ್‌ನೊಂದಿಗೆ ʼದಿ ಫೇಸ್‌ಬುಕ್‌ʼ ಎನ್ನುವ ಹೆಸರಿನೊಂದಿಗೆ ಈ ಸೋಷಿಯಲ್‌ ಮೀಡಿಯಾವನ್ನು ಪ್ರಾಂಭಿಸಿದ್ದರು. ಇದೀಗ 20 ವರ್ಷಾಚರಣೆಯ ಹಿನ್ನೆಲೆಯಲ್ಲಿ ಮಾರ್ಕ್ ಜುಕರ್‌ಬರ್ಗ್‌ ತಮ್ಮ ಅಂದಿನ ಪ್ರೊಫೈಲ್‌ ಪೇಜ್‌ನ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇದರ ಜತೆಗೆ ಎರಡು ದಶಕಗಳ ಪ್ರಮುಖ ಕ್ಷಣಗಳನ್ನು ಒಳಗೊಂಡ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಅಂದಿನ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ. ಸದ್ಯ ಈ ವಿಡಿಯೊ ನೆಟ್ಟಿಗರ ಗಮನ ಸೆಳೆಯುತ್ತಿದೆ.

ವಿಡಿಯೊದಲ್ಲೇನಿದೆ?

ʼʼಇಪ್ಪತ್ತು ವರ್ಷ ಎಷ್ಟು ಬೇಗ ಕಳೆದು ಹೋಯಿತು. ನಿಜವಾಗಿಯೂ ದಿನಗಳು ವೇಗವಾಗಿ ಸಾಗಿವೆʼʼ ಎನ್ನುವ ಹೇಳಿಕೆಯೊಂದಿಗೆ ವೀಡಿಯೊ ಆರಂಭವಾಗುತ್ತದೆ. ಆರಂಭಿಕ ದಿನಗಳಲ್ಲಿ ಎಡ್ವರ್ಡೊ ಸವೆರಿನ್ ಅವರೊಂದಿಗೆ ಕಾರ್ಯ ನಿರ್ವಹಿಸಿದ ಅನುಭವ, ಪತ್ನಿ ಪ್ರಿಸಿಲ್ಲಾ ಚಾನ್ ಮತ್ತು ಮೆಟಾದ ಮಾಜಿ ಸಿಒಒ ಶೆರಿಲ್ ಸ್ಯಾಂಡ್ಬರ್ಗ್ ಅವರೊಂದಿಗೆ ಮಾರ್ಕ್ ಜುಕರ್‌ಬರ್ಗ್‌ ಕಳೆದ ಕ್ಷಣಗಳವರೆಗಿನ ಈ ತುಣುಕು ಈ ವಿಡಿಯೊದಲ್ಲಿ ಕಂಡು ಬಂದಿದೆ.

ಇದರ ಜತೆಗೆ ಫೇಸ್‌ಬುಕ್‌ನ ಇತಿಹಾಸದ ಪುಟದಲ್ಲಿ ದಾಖಲಾದ ವಿವಾದಗಳ ಬಗ್ಗೆಯೂ ಈ ವಿಡಿಯೊ ಬೆಳಕು ಚೆಲ್ಲುತ್ತದೆ. ಮಾರ್ಕ್ ಜುಕರ್‌ಬರ್ಗ್ ಮತ್ತು ಎಡ್ವರ್ಡೊ ಸವೆರಿನ್ ನಡುವೆ ನಡೆದ ಸಂಘರ್ಷದ ಬಗ್ಗೆಯೂ ಪ್ರಸ್ತಾವಿಸಲಾಗಿದೆ. ಷೇರು ಹಂಚಿಕೆ ಮತ್ತು ನಿಧಿ ನಿರ್ವಹಣೆಗೆ ಸಂಬಂಧಿಸಿದಂತೆ ಮಾರ್ಕ್ ಜುಕರ್‌ಬರ್ಗ್ ಅವರ ನಿರ್ಧಾರಗಳನ್ನು‌ ಎಡ್ವರ್ಡೊ ಸವೆರಿನ್ ಪ್ರಶ್ನಿಸಿದ್ದರಿಂದ ಕಾನೂನು ವಿವಾದಗಳು ಉದ್ಭವಿಸಿದ್ದವು. ಸದ್ಯ ಈ ಎಲ್ಲ ತೊಡಕುಗಳನ್ನು ಮೆಟ್ಟಿ ನಿಂತು ವಿಶ್ವಾದ್ಯಂತ 3 ಶತಕೋಟಿ ಬಳಕೆದಾರರೊಂದಿಗೆ ಸಮಗ್ರ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ಫೇಸ್‌ಬುಕ್‌ ಅಭಿವೃದ್ಧಿ ಹೊಂದಿದೆ.

ಆರಂಭಿಕ ದಿನಗಳು

ಹಾರ್ವರ್ಡ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸಾಮಾಜಿಕ ನೆಟ್‌ವರ್ಕಿಂಗ್ ವೇದಿಕೆಯನ್ನು ರಚಿಸುವುದು ಮಾರ್ಕ್ ಜುಕರ್‌ಬರ್ಗ್ ಮತ್ತು ಅವರ ತಂಡದ ಗುರಿಯಾಗಿತ್ತು. ಬಳಿಕ ಅದರ ಜನಪ್ರಿಯತೆ ಮತ್ತು ಬೇಡಿಕೆಯಿಂದಾಗಿ ಇತರ ವಿಶ್ವವಿದ್ಯಾಲಯಗಳಿಗೆ ವಿಸ್ತರಿಸಲ್ಪಟ್ಟಿತು. 2006ರಲ್ಲಿ ಫೇಸ್‌ಬುಕ್ ಸಾರ್ವಜನಿಕರಿಗೆ ಮುಕ್ತವಾಯಿತು ಮತ್ತು ಶೀಘ್ರವಾಗಿ ಅಂತರ್ಜಾಲದ ಅತ್ಯಂತ ಜನಪ್ರಿಯ ಸಾಮಾಜಿಕ ನೆಟ್‌ವರ್ಕಿಂಗ್ ಸೈಟ್‌ ಪಟ್ಟಕ್ಕೇರಿತು.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಅಂತರ್ಜಾಲವನ್ನು ಸಾಮಾಜಿಕಗೊಳಿಸಿದ ಫೇಸ್‌ಬುಕ್‌ಗೆ ಇಪ್ಪತ್ತು ವರ್ಷ

ಭಾರತದಲ್ಲಿ ಬಹು ಜನಪ್ರಿಯ

ಪ್ರಸ್ತುತ ಭಾರತದಲ್ಲಿಯೂ ಫೇಸ್‌ಬುಕ್‌ ಬಹು ಜನಪ್ರಿಯವಾಗಿದೆ. ವಯಸ್ಸಿನ ಬೇಧವಿಲ್ಲದೆ ಇದನ್ನು ಬಳಲಾಗುತ್ತಿದೆ. ನಮ್ಮ ದೇಶಲ್ಲಿ ಮೂರು ಕೋಟಿಗಿಂತ ಅಧಿಕ ಫೇಸ್‌ಬುಕ್ ಬಳಕೆದಾರರಿದ್ದಾರೆ. 2021ರ ಅಕ್ಟೋಬರ್‌ನಲ್ಲಿ ಫೇಸ್‌ಬುಕ್ ತನ್ನನ್ನು ತಾನು ‘ಮೆಟಾ’ ಎಂದು ಮರು ಬ್ರ್ಯಾಂಡ್‌ ಮಾಡಿಕೊಂಡಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸ್‌ ಆ್ಯಪ್ ಮತ್ತು ಆಕ್ಯುಲಸ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳು ಮತ್ತು ಉತ್ಪನ್ನಗಳ ಮೇಲ್ವಿಚಾರಣೆಯನ್ನು ಮೆಟಾ ಕಂಪನಿ ನೋಡಿಕೊಳ್ಳುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Singapore Airlines: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ: ಇಲ್ಲಿದೆ ನೋಡಿ ಭೀಕರತೆಯನ್ನು ಸಾರುವ ಫೋಟೊಗಳು

Singapore Airlines: ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಕ್ಷುಬ್ಧತೆ ಉಂಟಾಗಿ ಒಬ್ಬರು ಮೃತಪಟ್ಟು 30 ಜನ ಗಾಯಗೊಂಡಿರುವ ಘಟನೆ ಮಂಗಳವಾರ (ಮೇ 21) ನಡೆದಿದೆ. ಸದ್ಯ ವಿಮಾನದೊಳಗಿನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿವೆ.

VISTARANEWS.COM


on

Turbulence
Koo

ಲಂಡನ್‌: ಬ್ರಿಟನ್‌ ರಾಜಧಾನಿ ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಕ್ಷುಬ್ಧತೆ (Turbulence) ಉಂಟಾಗಿ ಒಬ್ಬರು ಮೃತಪಟ್ಟು 30 ಜನ ಗಾಯಗೊಂಡಿರುವ ಘಟನೆ ಮಂಗಳವಾರ (ಮೇ 21) ನಡೆದಿದೆ. ಬಳಿಕ ಈ ಸಿಂಗಾಪುರ ಏರ್‌ಲೈನ್ಸ್‌ (Singapore Airlines) ವಿಮಾನವನ್ನು ಬ್ಯಾಂಕಾಕ್‌ನ ಸುವರ್ಣಭೂಮಿ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡ್‌ ಮಾಡಲಾಯಿತು. ಕೂಡಲೇ ವೈದ್ಯರು ಧಾವಿಸಿ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಿದ್ದಾರೆ. ಸದ್ಯ ವಿಮಾನದೊಳಗಿನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿವೆ.

ವಿಮಾನವು ಹಾರಾಟ ನಡೆಸುವಾಗ ಹವಾಮಾನ ವೈಪರೀತ್ಯದಿಂದಾಗಿ ಗಾಳಿಯ ಒತ್ತಡದಲ್ಲಿ ದಿಢೀರನೆ ಏರುಪೇರಾಗುತ್ತದೆ. ಇದರ ತೀವ್ರತೆಗೆ ವಿಮಾನವು ಹಾರಾಟ ನಡೆಸುವಾಗಲೇ ಏಕಾಏಕಿ ಅಲುಗಾಡುತ್ತದೆ. ಹೀಗೆ ದಿಢೀರನೆ ಅಲುಗಾಡುವುದನ್ನೇ ಟರ್ಬುಲೆನ್ಸ್‌ ಅಥವಾ ಪ್ರಕ್ಷುಬ್ಧತೆ ಎಂದು ಕರೆಯುತ್ತಾರೆ. ಸಣ್ಣಪುಟ್ಟ ಪ್ರಕ್ಷುಬ್ಧತೆ ಉಂಟಾದರೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ತೀವ್ರ ಪ್ರಮಾಣದಲ್ಲಿ ಉಂಟಾದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಲಗೇಜ್‌ಗಳು ಪ್ರಯಾಣಿಕರ ಮೈಮೇಲೆ ಬೀಳುತ್ತವೆ. ಮಂಗಳವಾರ ತೀವ್ರತರವಾದ ಟರ್ಬುಲೆನ್ಸ್‌ಗೆ ಒಳಗಾದ ಸಿಂಗಾಪುರ ಏರ್‌ಲೈನ್ಸ್‌ನಲ್ಲಿನ ಪರಿಸ್ಥಿತಿ ಭೀಕರವಾಗಿತ್ತು.

ಇಲ್ಲಿದೆ ಆ ಭೀಕರ ಫೋಟೊಗಳು

ಗಾಳಿಯಲ್ಲಿ ನೇತಾಡುತ್ತಿರುವ ಬಾಕ್ಸ್‌: ಹೌದು, ವಿಮಾನ ಏಕಾಏಕಿ ಅಲುಗಾಡಿದ ಕಾರಣ ಮೇಲೆ ಪೇರಿಸಿಟ್ಟಿದ್ದ ಬಾಕ್ಸ್‌ಗಳ ಪೈಕಿ ಕೆಲವು ಉರುಳಿ ಬಿದ್ದರೆ ಇನ್ನು ಕೆಲವು ನೇತಾಡುತ್ತಿದ್ದವು.

ಬಿರುಕುಬಿಟ್ಟ ಓವರ್‌ಹೆಡ್‌ ಬಿನ್‌: ಇನ್ನು ಓವರ್‌ಹೆಡ್‌ ಬಿನ್‌ನಲ್ಲಿ ಬಿರುಕು ಬಿಟ್ಟು, ತುಂಡಾದ ವೈರ್‌, ಮಾಸ್ಕ್‌ ಇತ್ಯಾದಿ ಪ್ರಯಾಣಿಕರ ತಲೆ ಮೇಲೆ ಜೋತು ಬಿದ್ದಿದ್ದವು.

ಚೆಲ್ಲಾಪಿಲ್ಲಿಯಾಗಿ ಬಿದ್ದ ಸಾಮಾಗ್ರಿಗಳು: ನೀರಿನ ಬಾಟಲಿ, ಕಾಫಿ ಮಗ್‌, ಮದ್ಯದ ಗ್ಲಾಸ್‌ ಸೇರಿದಂತೆ ಆಹಾರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ಘಟನೆಯ ಗಂಭೀರತೆಯನ್ನು ಸಾರಿ ಹೇಳುವಂತಿತ್ತು.

ಛಾವಣಿ ತುಂಡು: ಅಲುಗಾಟದ ತೀವ್ರತೆಗೆ ವಿಮಾನದ ಛಾವಣಿಯ ಭಾಗ ತುಂಡಾಗಿ ಬಿದ್ದು, ಒಳಗಿನ ಪಾರ್ಟ್‌ಗಳೆಲ್ಲ ಕಾಣಿಸಿಕೊಂಡಿದ್ದವು.

ಗಾಯಗೊಂಡ ಪ್ರಯಾಣಿಕರು: ಮುಖ, ಕೈಗಳಿಗೆ ಗಾಯಗಳಾಗಿ, ಭಯಭೀತರಾಗಿ ಕುಳಿತಿರುವ ಪ್ರಯಾಣಿಕರ ಫೋಟೊ ಕೂಡ ವೈರಲ್‌ ಅಗಿದೆ.

ಇದನ್ನೂ ಓದಿ: Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

ಅನುಭವ ಹಂಚಿಕೊಂಡ ಪ್ರಯಾಣಿಕರು

ಇನ್ನು ಈ ವಿಮಾನದಲ್ಲಿದ್ದ ಪ್ರಯಾಣಿಕರು ತಮ್ಮ ಅನುಭವವನ್ನು ಸುದ್ದಿ ಸಂಸ್ಥೆ ರಾಯಿಟರ್ಸ್‌ ಜತೆ ಹಂಚಿಕೊಂಡಿದ್ದಾರೆ. ʼʼಇದ್ದಕ್ಕಿದ್ದಂತೆ ನಾವಿದ್ದ ವಿಮಾನ ಅಲುಗಾಡಲು ಆರಂಭಿಸಿತು. ಯಾರಿಗೆ ಏನಾಗುತ್ತದೆ ಎನ್ನುವುದೇ ತೋಚದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸೀಟ್ ಬೆಲ್ಟ್ ಧರಿಸದವರು ಬಿದ್ದು ಬಿಟ್ಟರು. ಕೆಲವರ ತಲೆ ಬ್ಯಾಗೇಜ್ ಕ್ಯಾಬಿನ್ ಡಿಕ್ಕಿ ಹೊಡೆಯಿತು. ಘಟನೆಯಲ್ಲಿ ಹಲವರು ಗಾಯಗೊಂಡರುʼʼ ಎಂದು ತಿಳಿಸಿದ್ದಾರೆ.

ಇನ್ನೊಬ್ಬರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. “ನಾನು ಸಾಧ್ಯವಾದಷ್ಟು ಇತರರಿಗೆ ಸಹಾಯ ಮಾಡಿದೆ. ನಾನು ಸೇರಿದಂತೆ ಗಾಯಗೊಂಡಿಲ್ಲದವರು ಬ್ಯಾಂಕಾಕ್ ವಿಮಾನ ನಿಲ್ದಾಣದ ಹೋಲ್ಡಿಂಗ್ ಪ್ರದೇಶದಲ್ಲಿದ್ದೇವೆ. ಇದೊಂದು ಮರೆಯಲಾರದ ಭಯಾನಕ ಅನುಭವ. ಬ್ಯಾಂಕಾಕ್‌ನ ತುರ್ತು ಸೇವೆ ತ್ವರಿತವಾಗಿ ಸ್ಪಂದಿಸಿ ಅಗತ್ಯ ನೆರವು ನೀಡಿದೆʼʼ ಎಂದು ಅವರು ಹೇಳಿದ್ದಾರೆ.

Continue Reading

ವಿದೇಶ

Car Crash: ಅಮೆರಿಕದಲ್ಲಿ ಮತ್ತೆ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು; ಕಾರಣವೇನು?

Car Crash: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದೆ. ಕಳೆದ ವಾರ ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿದ್ದು, ಅವರಿಗೆ ಆಲ್ಫಾರೆಟ್ಟಾದಲ್ಲಿನ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Car Crash
Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದೆ. ಕಳೆದ ವಾರ ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತ (Car Crash)ದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇವರೆಲ್ಲರೂ 18 ವರ್ಷದವರು ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿದ್ದು, ಅವರಿಗೆ ಆಲ್ಫಾರೆಟ್ಟಾದಲ್ಲಿನ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಣವೇನು?

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿದೆ. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿದೆ.

ಆರ್ಯನ್‌ ಜೋಷಿ ಮುಂದಿನ ವಾರ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡಿದೆ. ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: Student Murder: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಕೊಲೆ; 9ನೇ ಘಟನೆ

ಸರಣಿ ಸಾವು

ಕೆಲವು ದಿನಗಳಿಂದ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸರಣಿ ಸಾವು ಗಾಬರಿ ಹುಟ್ಟಿಸುವಂತಿದೆ. 2024ರ ಆರಂಭದಿಂದ, ಅಮೆರಿಕದಲ್ಲಿ ಕನಿಷ್ಠ ಅರ್ಧ ಡಜನ್ ಭಾರತೀಯ ಮತ್ತು ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವುಗಳು ಸಂಭವಿಸಿವೆ. ಇವರ ಮೇಲಿನ ದಾಳಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದ್ದು, ಸಮುದಾಯದಲ್ಲಿ ಆತಂಕಕ್ಕೂ ಕಾರಣವಾಗಿದೆ.

ಮಾರ್ಚ್‌ನಲ್ಲಿ ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿ ಭಾರತದ 34 ವರ್ಷದ ಶಾಸ್ತ್ರೀಯ ನೃತ್ಯಗಾರ ಅಮರನಾಥ್ ಘೋಷ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಪರ್ಡ್ಯೂ ವಿಶ್ವವಿದ್ಯಾನಿಲಯದ 23 ವರ್ಷದ ಭಾರತೀಯ-ಅಮೆರಿಕನ್ ವಿದ್ಯಾರ್ಥಿ ಸಮೀರ್ ಕಾಮತ್ ಫೆಬ್ರವರಿ 5ರಂದು ಇಂಡಿಯಾನಾದ ವನ್ಯ ಉದ್ಯಾನದಲ್ಲಿ ಶವವಾಗಿ ಪತ್ತೆಯಾಗಿದ್ದರು.

Continue Reading

ಪ್ರಮುಖ ಸುದ್ದಿ

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Turbulence: ಟರ್ಬುಲೆನ್ಸ್‌ನಿಂದಾಗಿ ಸಿಂಗಾಪುರ ಏರ್‌ಲೈನ್ಸ್‌ನ ಎಸ್‌ಕ್ಯೂ 321 ವಿಮಾನದಲ್ಲಿದ್ದ 30 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಆದರೆ, ಗಾಯಾಳುಗಳ ಸಂಖ್ಯೆ ಕುರಿತು ವಿಮಾನಯಾನ ಸಂಸ್ಥೆಯು ಯಾವುದೇ ಮಾಹಿತಿ ನೀಡಿಲ್ಲ.

VISTARANEWS.COM


on

Turbulence
Koo

ಲಂಡನ್‌: ಬ್ರಿಟನ್‌ ರಾಜಧಾನಿ ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಕ್ಷುಬ್ಧತೆ (Turbulence) ಉಂಟಾಗಿದ್ದು, ಒಬ್ಬರು ಮೃತಪಟ್ಟರೆ 30 ಜನ ಗಾಯಗೊಂಡಿದ್ದಾರೆ. ಸಿಂಗಾಪುರ ಏರ್‌ಲೈನ್ಸ್‌ ವಿಮಾನವು (Singapore Airlines) ಹೀಥ್ರೂ ಏರ್‌ಪೋರ್ಟ್‌ನಿಂದ ಸಿಂಗಾಪುರಕ್ಕೆ ಹಾರಾಟ ಆರಂಭಿಸಿತ್ತು. ಆದರೆ, ಹಾರಾಟ ನಡೆಸಿದ ಕೆಲ ಹೊತ್ತಿನಲ್ಲಿಯೇ ಪ್ರಕ್ಷುಬ್ಧತೆ ಉಂಟಾದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬ್ಯಾಂಕಾಕ್‌ನ ಸುವರ್ಣಭೂಮಿ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡ್‌ ಮಾಡಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಒಬ್ಬರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಸಿಂಗಾಪುರ ಏರ್‌ಲೈನ್ಸ್‌ನ ಎಸ್‌ಕ್ಯೂ 321 ವಿಮಾನದಲ್ಲಿದ್ದ 30 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಆದರೆ, ಗಾಯಾಳುಗಳ ಸಂಖ್ಯೆ ಕುರಿತು ವಿಮಾನಯಾನ ಸಂಸ್ಥೆಯು ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಟರ್ಬುಲೆನ್ಸ್‌ ಉಂಟಾಗಿರುವುದನ್ನು ಸಿಂಗಾಪುರ ಏರ್‌ಲೈನ್ಸ್‌ ದೃಢಪಡಿಸಿದ್ದು, ಪ್ರಯಾಣಿಕರಿಗೆ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದಷ್ಟೇ ಮಾಹಿತಿ ನೀಡಿದೆ. ಒಬ್ಬರು ಮೃತಪಟ್ಟಿರುವುದನ್ನು ಕೂಡ ವಿಮಾನಯಾನ ಸಂಸ್ಥೆಯು ದೃಢಪಡಿಸಿದೆ.

ವಿಮಾನವನ್ನು ಏಕಾಏಕಿ 6 ಸಾವಿರ ಅಡಿ ಕೆಳಗಿಳಿಸಿದ ಪರಿಣಾಮವಾಗಿ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ವಿಮಾನವು ಸುಮಾರು 37 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ ದಿಢೀರನೆ 31 ಸಾವಿರ ಅಡಿಗೆ ಇಳಿಸಿದ ಕಾರಣ ಪ್ರಯಾಣಿಕರಿಗೆ ಭಾರಿ ಪ್ರಮಾಣದಲ್ಲಿ ಗಾಯಗಳಾಗಲು, ಒಬ್ಬ ವ್ಯಕ್ತಿ ಮೃತಪಡಲು ಕಾರಣವಾಗಿದೆ ಎಂದು ತಿಳಿದುಬಂದಿದೆ.

“ಮೇ 20ರಂದು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಿದ ಬಳಿಕ ಟರ್ಬುಲೆನ್ಸ್‌ ಉಂಟಾಗಿದೆ. ಇದರಿಂದಾಗಿ ಬ್ಯಾಂಕಾಕ್‌ನಲ್ಲಿ ವಿಮಾನವನ್ನು ತುರ್ತು ಲ್ಯಾಂಡ್‌ ಮಾಡಲಾಯಿತು. ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಆದ ನಷ್ಟಕ್ಕೆ ಸಿಂಗಾಪುರ ಏರ್‌ಲೈನ್ಸ್‌ ವಿಷಾದ ವ್ಯಕ್ತಪಡಿಸುತ್ತದೆ.‌ ಉಳಿದ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಲಾಗುತ್ತಿದೆ” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿಂಗಾಪುರ ಏರ್‌ಲೈನ್ಸ್ ಮಾಹಿತಿ ನೀಡಿದೆ.

ಏನಿದು ಟರ್ಬುಲೆನ್ಸ್?‌

ವಿಮಾನವು ಹಾರಾಟ ನಡೆಸುವಾಗ ಹವಾಮಾನ ವೈಪರೀತ್ಯದಿಂದಾಗಿ ಗಾಳಿಯ ಒತ್ತಡದಲ್ಲಿ ದಿಢೀರನೆ ಏರುಪೇರಾಗುತ್ತದೆ. ಇದರ ತೀವ್ರತೆಗೆ ವಿಮಾನವು ಹಾರಾಟ ನಡೆಸುವಾಗಲೇ ಏಕಾಏಕಿ ಅಲುಗಾಡುತ್ತದೆ. ಹೀಗೆ ದಿಢೀರನೆ ಅಲುಗಾಡುವುದನ್ನೇ ಟರ್ಬುಲೆನ್ಸ್‌ ಅಥವಾ ಪ್ರಕ್ಷುಬ್ಧತೆ ಎಂದು ಕರೆಯುತ್ತಾರೆ. ಸಣ್ಣಪುಟ್ಟ ಪ್ರಕ್ಷುಬ್ಧತೆ ಉಂಟಾದರೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ತೀವ್ರ ಪ್ರಮಾಣದಲ್ಲಿ ಉಂಟಾದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಲಗೇಜ್‌ಗಳು ಪ್ರಯಾಣಿಕರ ಮೈಮೇಲೆ ಬೀಳುತ್ತವೆ. ಇನ್ನೂ ಹಲವು ತೊಂದರೆಗಳನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಟರ್ಬುಲೆನ್ಸ್‌ ಉಂಟಾದಾಗ ದಿಢೀರನೆ ವಿಮಾನ ಹಾರುವ ಎತ್ತರವನ್ನು ಕಡಿಮೆಗೊಳಿಸುವುದು ಕೂಡ ಅಪಾಯಕಾರಿ ಎನಿಸಿದೆ.

ಇದನ್ನೂ ಓದಿ: Japan Planes collide: ಜಪಾನ್‌ನಲ್ಲಿ ವಿಮಾನ ದುರಂತ; 6 ಕೋಸ್ಟ್ ಗಾರ್ಡ್ ಸಿಬ್ಬಂದಿ ಪೈಕಿ ಐವರು ಸಾವು

Continue Reading

ವಿದೇಶ

Ebrahim Raisi: ಹೆಲಿಕಾಪ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ದುರಂತ ಸಾವು; ಇಸ್ರೇಲ್ ಫಸ್ಟ್‌ ರಿಯಾಕ್ಷನ್‌ ಏನು?

Ebrahim Raisi:ರೂಟರ್ಸ್‌ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್‌ ಅಧಿಕಾರಿಗಳು, ರೈಸಿ ಸಾವಿಗೂ ಇಸ್ರೇಲ್‌ಗೂ ಯಾವುದೇ ಸಂಬಂಧ ಇಲ್ಲ. ಹೆಲಿಕಾಪ್ಟರ್‌ ದುರಂತದಲ್ಲಿ ಇಸ್ರೇಲ್‌ ಕೈವಾಡ ಇದೆ ಎಂಬ ಆರೋಪ ನಿರಾಧಾರ. ಈ ದುರ್ಘಟನೆಗೂ ಇಸ್ರೇಲ್ಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದೆ.

VISTARANEWS.COM


on

Ebrahim Raisi
Koo

ಜೆರುಸಲೇಂ: ಹೆಲಿಕಾಪ್ಟರ್‌ ಪತನಗೊಂಡು (Helicopter Crash) ದುರಂತ ಸಾವನ್ನಪ್ಪಿದ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಾವಿನ ಬೆನ್ನಲ್ಲೇ ಇದೊಂದು ಆಕಸ್ಮಿಕ ಘಟನೆ ಅಲ್ಲ ವಿಧ್ವಂಸಕ ಕೃತ್ಯ ಎಂಬ ಶಂಕೆ ವ್ಯಕ್ತವಾಗಿತ್ತು. ಪ್ರಪಂಚಾದ್ಯಂತ ಇರಾನ್‌ನ ಬದ್ಧ ವೈರಿ ರಾಷ್ಟ್ರವಾಗಿರುವ ಇಸ್ರೇಲ್‌(Israel)ನ ಕುಕೃತ್ಯ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಆದರೆ ಈ ಎಲ್ಲಾ ಅನುಮಾನಗಳಿಗೆ ಇಸ್ರೇಲ್‌ ತೆರೆ ಎಳೆಯುವ ಪ್ರಯತ್ನ ಮಾಡಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್‌ ಈ ದುರಂತಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದೆ.

ರೂಟರ್ಸ್‌ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್‌ ಅಧಿಕಾರಿಗಳು, ರೈಸಿ ಸಾವಿಗೂ ಇಸ್ರೇಲ್‌ಗೂ ಯಾವುದೇ ಸಂಬಂಧ ಇಲ್ಲ. ಹೆಲಿಕಾಪ್ಟರ್‌ ದುರಂತದಲ್ಲಿ ಇಸ್ರೇಲ್‌ ಕೈವಾಡ ಇದೆ ಎಂಬ ಆರೋಪ ನಿರಾಧಾರ. ಈ ದುರ್ಘಟನೆಗೂ ಇಸ್ರೇಲ್ಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದೆ. ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಸಂದರ್ಭದಲ್ಲಿ ಹಮಾಸ್‌, ಹೆಜ್‌ಬೊಲ್ಲಾ ಮತ್ತು ಹೌತಿಸ್‌ ಉಗ್ರರಿಗೆ ಇರಾನ್‌ ಬೆಂಬಲ ನೀಡಿತ್ತು. ಆ ಯುದ್ಧದಲ್ಲಿ ಇಸ್ರೇಲ್‌ನಲ್ಲಿ 1,200 ಜನರನ್ನು ಹಮಾಸ್‌ ಉಗ್ರರು ಹತ್ಯೆ ಮಾಡಿದ್ದರು. ಇದಾದ ಬಳಿಕ ಇರಾನ್‌ ಮತ್ತು ಇಸ್ರೇಲ್‌ ನಡುವಿನ ವೈರತ್ವ ಇನ್ನೂ ಹತ್ತು ಪಟ್ಟು ಹೆಚ್ಚಾಗಿತ್ತು. ಈ ಎಲ್ಲಾ ಅಂಶಗಳನ್ನು ಗಮನಿಸಿ ಅನೇಕರು ರೈಸಿ ಹತ್ಯೆಯಲ್ಲಿ ಇಸ್ರೇಲ್‌ ಕೈವಾಡ ಇದೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.

ಜೂ.28ರಂದು ಇರಾನ್‌ನಲ್ಲಿ ಚುನಾವಣೆ

ರೈಸಿ ಸಾವಿನಿಂದ ತೆರವಾಗಿರುವ ಇರಾನ್‌ ಅಧ್ಯಕ್ಷ ಸ್ಥಾನಕ್ಕೆ ಜೂ.28ರಂದು ಚುನಾವಣೆ ನಡೆಸಲು ನಿರ್ಧರಿಸಿಲಾಗಿದೆ. ಇರಾನಿಯನ್‌ ಸಂವಿಧಾನದ ಪ್ರಕಾರ ದೇಶದ ‍ಅಧ್ಯಕ್ಷ ಸಾವನ್ನಪ್ಪಿದರೆ ಅಲ್ಲಿನ ಟಾಪ್‌ ಮೂವರು ಅಧಿಕಾರಿಗಳು 50ದಿನಗಳೊಳಗಾಗಿ ಕಡ್ಡಾಯವಾಗಿ ಚುನಾವಣೆಗೆ ನಡೆಸಲು ಸಿದ್ದತೆ ಮಾಡಬೇಕು. ಪ್ರಸ್ತುತ ಉಪಾಧ್ಯಕ್ಷ ಮೊಹಮ್ಮದ್‌ ಮೊಕ್ಬರ್‌ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ಹಿಸಲಿದ್ದಾರೆ.

ಇರಾನಿನ ಮಾಧ್ಯಮಗಳ ಪ್ರಕಾರ, ರೈಸಿ ಅವರ ಅಂತಿಮ ವಿಧಿವಿಧಾನ ಸಮಾರಂಭಗಳು ಮಂಗಳವಾರದಿಂದ ಗುರುವಾರದವರೆಗೆ ತಬ್ರಿಜ್, ಕೋಮ್, ಟೆಹ್ರಾನ್ ಮತ್ತು ಬಿರ್ಜಾಂಡ್ ನಗರಗಳಲ್ಲಿ ನಡೆಯಲಿದೆ. ಮಸ್ಶಾದ್‌ನಲ್ಲಿರುವ ಇಮಾಮ್ ರೆಜಾ ಶ್ರೈನ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಿರಿಯಾ, ಈಜಿಪ್ಟ್, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಜೋರ್ಡಾನ್, ಇರಾಕ್ ಮತ್ತು ಪಾಕಿಸ್ತಾನದ ನಾಯಕರು ಸೇರಿದಂತೆ ಇರಾನ್‌ನ ಇತರ ಪ್ರಾದೇಶಿಕ ನೆರೆಹೊರೆಯವರು ಮತ್ತು ಮಿತ್ರರಾಷ್ಟ್ರಗಳಿಂದ ಸಂತಾಪ ಸಂದೇಶಗಳು ಹರಿದು ಬಂದಿದೆ.

ಇದನ್ನೂ ಓದಿ: Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಹೆಲಿಕಾಪ್ಟರ್‌ನಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಕೂಡ ಇದ್ದರು. ಮಂಜು ಕವಿದ ವಾತಾವರಣದ ಕಾರಣ ಪೈಲೆಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದರು. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಇರಾನ್ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಮತ್ತು ಇತರ ಗಣ್ಯರು ಅಜರ್‌ಬೈಜಾನ್‌ಗೆ ತೆರಳಿದ್ದರು.

Continue Reading
Advertisement
Physical Abuse
ಕ್ರೈಂ8 mins ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ12 mins ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್15 mins ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Hanuman Chalisa
ಧಾರ್ಮಿಕ35 mins ago

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

RCB
ಕ್ರೀಡೆ40 mins ago

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

Cyber Crime
ಕ್ರೈಂ58 mins ago

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

vegetable rates increase
ಪ್ರಮುಖ ಸುದ್ದಿ1 hour ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ1 hour ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ1 hour ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

vistara news impact medical negligence
ವಿಜಯನಗರ2 hours ago

Medical Negligence: ಅಮಾಯಕ ಬಾಲಕನ ಜೀವ ತೆಗೆದ ಆಸ್ಪತ್ರೆಗೆ ಬೀಗ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ6 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌