Lok Sabha Election 2024: 28 ಲೋಕಸಭಾ ಕ್ಷೇತ್ರ ಗೆಲ್ಲಲು ಬಿಜೆಪಿ ಟಾಸ್ಕ್;‌ 10ಕ್ಕೂ ಹೆಚ್ಚು ಕ್ಷೇತ್ರದಲ್ಲಿದೆ ತೊಂದರೆ! - Vistara News

ರಾಜಕೀಯ

Lok Sabha Election 2024: 28 ಲೋಕಸಭಾ ಕ್ಷೇತ್ರ ಗೆಲ್ಲಲು ಬಿಜೆಪಿ ಟಾಸ್ಕ್;‌ 10ಕ್ಕೂ ಹೆಚ್ಚು ಕ್ಷೇತ್ರದಲ್ಲಿದೆ ತೊಂದರೆ!

Lok Sabha Election 2024: 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎದ್ದಿರುವ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಕ್ಷೇತ್ರಗಳು ಕೈ ತಪ್ಪುವ ಭೀತಿ ಎದುರಾಗಿದೆ. ಇದನ್ನು ಬಗೆಹರಿಸಿಕೊಳ್ಳುವುದು ಸದ್ಯದ ಟಾಸ್ಕ್‌ ಆಗಿದೆ ಎಂದು ಹೇಳಲಾಗುತ್ತಿದೆ. ಅಂದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೇರಾನೇರ ಪೈಪೋಟಿ ನಡೆಸಿದ್ದ ಕ್ಷೇತ್ರಗಳದ್ದೇ ತಲೆನೋವಾಗಿ ಪರಿಣಮಿಸಿದೆ.

VISTARANEWS.COM


on

BJP Karnataka and JDS Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಂತ್ರಗಾರಿಕೆಯನ್ನು ಶುರು ಮಾಡಿವೆ. ಈ ಬಾರಿ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾಡಿಕೊಂಡಿರುವುದರಿಂದ ರಾಜ್ಯದಲ್ಲಿ ಚಿತ್ರಣ ಬದಲಾಗಿದೆ. ಅಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP Karnataka) 25 + 1 ಸೀಟುಗಳನ್ನು ಗೆದ್ದು ಬೀಗಿತ್ತು. ಈಗ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವತ್ತ ಪ್ಲಾನ್‌ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ಈ ಗುರಿ ಮುಟ್ಟಲು ಕೆಲವು ಕ್ಷೇತ್ರಗಳು ಸಮಸ್ಯೆಯಾಗುತ್ತಿದ್ದು, ಎರಡೂ ಪಕ್ಷಗಳ ಮುಖಂಡರಿಗೆ ತಲೆನೋವಾಗಿದೆ.

ಒಂದು ವೇಳೆ ಈ ಕ್ಷೇತ್ರಗಳಲ್ಲಿ ಎದ್ದಿರುವ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಕ್ಷೇತ್ರಗಳು ಕೈ ತಪ್ಪುವ ಭೀತಿ ಎದುರಾಗಿದೆ. ಇದನ್ನು ಬಗೆಹರಿಸಿಕೊಳ್ಳುವುದು ಸದ್ಯದ ಟಾಸ್ಕ್‌ ಆಗಿದೆ ಎಂದು ಹೇಳಲಾಗುತ್ತಿದೆ. ಅಂದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೇರಾನೇರ ಪೈಪೋಟಿ ನಡೆಸಿದ್ದ ಕ್ಷೇತ್ರಗಳದ್ದೇ ತಲೆನೋವಾಗಿ ಪರಿಣಮಿಸಿದೆ.

ರಾಜಧಾನಿಯಲ್ಲಿ ನಾಯಕರು ಒಂದುಗೂಡಿದರೂ ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಮಾತ್ರ ಇನ್ನೂ ಒಂದಾಗುತ್ತಿಲ್ಲ. ಅಲ್ಲದೆ, ನಾಯಕರ ಹೇಳಿಕೆಗಳಿಂದಲೂ ಕಾರ್ಯಕರ್ತರು ಮತ್ತಷ್ಟು ಗೊಂದಲಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಈ ಸಮಸ್ಯೆ ತಲೆದೋರಿದೆ.

ಆ ಕ್ಷೇತ್ರಗಳು ಯಾವುವು..? ಅವುಗಳಲ್ಲಿ ಕಾರ್ಯಕರ್ತರ ಒಗ್ಗೂಡಿಸಲು ರಾಜ್ಯ ನಾಯಕರು ಪ್ಲ್ಯಾನ್ ಅನ್ನು ಸಹ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಒಬ್ಬೊಬ್ಬರೇ ಬಹಿರಂಗ ಹೇಳಿಕೆಯನ್ನು ನೀಡಲು ಪ್ರಾರಂಭಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡ ಅವರಿಂದ ಬಹಿರಂಗ ಮಾತನಾಡಿ, ಹಾಸನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಕುಟುಂಬದ ವಿರುದ್ಧ ರಾಜಕೀಯ ಮಾಡಿಕೊಂಡು ಬಂದಿರುವ ಪ್ರೀತಂಗೌಡ, ಹಾಸನವನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಈ ನಡುವೆ ಕೆ.ಆರ್ ಪೇಟೆಯಲ್ಲೂ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಭಿನ್ನಾಭಿಪ್ರಾಯ ಶುರುವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಚಿವ ನಾರಾಯಣ ಗೌಡ, ಮಂಡ್ಯ ಬಿಜೆಪಿಗೆ ಬಿಟ್ಟು ಕೊಡುವಂತೆ ಬಹಿರಂಗ ಹೇಳಿಕೆ ನೀಡಿದ್ದಾರೆ. ಇನ್ನು ತುಮಕೂರು ಜಿಲ್ಲೆಯಲ್ಲಿ ಮಾಜಿ ಸಚಿವ ಮಾಧುಸ್ವಾಮಿ ಅವರಿಂದ ವಿರೋಧ ಕೇಳಿಬಂದಿದೆ. ನಾವು ಒಂದಾದರೂ ಬೂತ್ ಮಟ್ಟದ ಕಾರ್ಯಕರ್ತರು ಒಂದಾಗಲ್ಲ ಅಂತ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಕಡಿಮೆಯಾಗದ ಅಸಹನೆ

ಇನ್ನು ಹಾಸನ ಮತ್ತು ಸಕಲೇಶಪುರದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಒಂದಾಗುವುದಕ್ಕೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮತ್ತು ಎಚ್‌.ಡಿ. ಕುಮಾರಸ್ವಾಮಿ ಬೆಂಬಲಿಗರು ಒಂದಾಗುವುದೇ ಕಷ್ಟ. ದೇವದುರ್ಗದಲ್ಲಿ ಶಿವನಗೌಡ ನಾಯಕ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ಯುದ್ಧ ಮುಗಿಯುತ್ತಿಲ್ಲ. ಹೀಗೆ ರಾಜ್ಯದಲ್ಲಿ ಹದಿನೈದಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಇದೆ.

ಅಖಾಡಕ್ಕೆ ಧುಮುಕಲು ಸಿದ್ಧರಾದರಾ ಎಚ್‌ಡಿಕೆ, ವಿಜಯೇಂದ್ರ?

ಭಿನ್ನಾಭಿಪ್ರಾಯ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಚುನಾವಣೆಯೊಳಗೆ ಭಿನ್ನಾಭಿಪ್ರಾಯವನ್ನು ಬಗೆಹರಿಸದಿದ್ದರೆ ಅದರ ಲಾಭ ಕಾಂಗ್ರೆಸ್‌ಗೆ ಆಗುತ್ತಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಅಲರ್ಟ್ ಆಗಿರುವ ಮೈತ್ರಿ ಪಕ್ಷಗಳ ನಾಯಕರು ಕಾರ್ಯಕರ್ತರನ್ನು ಒಂದುಗೂಡಿಸುವ ಪ್ರಯುತ್ನದಲ್ಲಿದ್ದಾರೆ.

ಇದನ್ನೂ ಓದಿ: Congress Protest : ದಯವಿಟ್ಟು ಪ್ರತಿಭಟನೆಗೆ ಬನ್ನಿ; ಬಿಜೆಪಿ ಸೇರಿ ಎಲ್ಲ ಸಂಸದರಿಗೆ ಸಿಎಂ ಪತ್ರ

ಹೀಗಾಗಿ ಬೂತ್ ಮಟ್ಟದ ಕಾರ್ಯಕರ್ತರು ಒಂದಾಗಿ ಚುನಾವಣೆ ಎದುರಿಸಲು ಪ್ಲ್ಯಾನ್ ಅನ್ನು ರೂಪಿಸಲಾಗುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖುದ್ದು ಅಖಾಡಕ್ಕೆ ಇಳಿದು ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

R Ashok: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ದೂರಿದ್ದಾರೆ

VISTARANEWS.COM


on

There is a Taliban government in the state Opposition party leader R Ashok alleges
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ (Congress Government) ತಾಲಿಬಾನ್‌ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ (BJP) ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ (R Ashok) ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್‌ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ.‌ ಬಿಜೆಪಿ ಕಾರ್ಯಕರ್ತರು ಭಾರತ್‌ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಸಮರ್ಪಕ ತನಿಖೆ ನಡೆಯಲಿ

ಚಿತ್ರನಟ ದರ್ಶನ್‌ ಪೊಲೀಸರಿಗೆ ದೂರು ನೀಡಿ, ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು.

ರಾಜ್ಯದಲ್ಲಿ ಅಪರಾಧಿ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್‌ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ತಿಳಿಸಿದರು.

ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದರು.

ಇದನ್ನೂ ಓದಿ: Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

ಮಕ್ಕಳಿಗೆ ಪುಸ್ತಕ ಇಲ್ಲ

ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಕೊಡದೆ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಗೊಂದಲದಲ್ಲಿಟ್ಟಿದೆ. ಸರ್ಕಾರಿ ಶಾಲೆಗೆ ಮಕ್ಕಳು ಬರುವುದೇ ಕಡಿಮೆಯಾಗಿರುವಾಗ ಇಂತಹ ಸಮಸ್ಯೆ ಉಂಟಾಗಿದೆ. ಒಂದು ಕಡೆ ಗ್ಯಾರಂಟಿಗಳನ್ನು ನೀಡಿ, ಮತ್ತೊಂದು ಕಡೆ ಪುಸ್ತಕಗಳನ್ನು ನೀಡಿಲ್ಲ. ಸರ್ಕಾರಿ ಖಜಾನೆ ಖಾಲಿಯಾಗಿದ್ದು, ಕಸಕ್ಕೂ ತೆರಿಗೆ ಹಾಕಲು ಮುಂದಾಗಿದ್ದಾರೆ. ಕರ್ನಾಟಕ ಮಾಡಲ್‌ ಯಾವುದು ಎಂದು ತಿಳಿಯಲು ಆರ್ಥಿಕ ಇಲಾಖೆಯ ಒಂದು ವರ್ಷದ ಪ್ರಗತಿ ಕಾರ್ಡ್‌ ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು.

ಬರ ಪರಿಹಾರ ನೀಡಿಲ್ಲ

ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ಅಜ್ಞಾನ ಪ್ರದರ್ಶನ ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನವಲಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎಚ್‌.ಕೋನರೆಡ್ಡಿ ಅವರು ತಮ್ಮ ಕ್ಷೇತ್ರದಲ್ಲಿ ಇನ್ನೂ ಕೆಲವು ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಆರ್‌.ಅಶೋಕ್‌ ದೂರಿದರು.

ರೈತರಿಗೆ ತಲುಪಬೇಕಾದ ಪರಿಹಾರದ ಹಣ ಇನ್ನೂ ತಲುಪಿಲ್ಲ ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಪತ್ರ ಬರೆದು ರಾಜ್ಯ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3,454 ಕೋಟಿ ರೂ. ಬರ ಪರಿಹಾರವನ್ನು ನೀಡಿದೆ. ಅದನ್ನು ರೈತರಿಗೆ ವಿತರಣೆ ಮಾಡಿ ಎಂದರೂ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ಆಗುತ್ತಿಲ್ಲ. ಬರ ಪರಿಹಾರ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಆಗದಿದ್ದರೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಲಿ, ರೈತರ ಬದುಕಿನ ಜತೆ ಚೆಲ್ಲಾಟವಾಡುವುದು ಬೇಡ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ನನಗೆ ನಿಯಮ ಪ್ರಕಾರ ಸರ್ಕಾರಿ ನಿವಾಸ ನೀಡಲು ಸರ್ಕಾರ ಬಹಳ ತಡ ಮಾಡುತ್ತಿದೆ. ನಾನು ಡಿ.ಕೆ.ಶಿವಕುಮಾರ್‌ ಅವರ ಮನೆ ಕೇಳುತ್ತಿಲ್ಲ. ನಮ್ಮ ಸರ್ಕಾರ ಇದ್ದಾಗ ಕಾಂಗ್ರೆಸ್‌ ಜತೆಗೆ ಮಾದರಿಯಾಗಿ ನಡೆದುಕೊಂಡಿತ್ತು. ಅದೇ ರೀತಿ ಈಗಲೂ ಸರ್ಕಾರ ನಡೆದುಕೊಳ್ಳಬೇಕು. ಈ ಬಗ್ಗೆ ಮೂರು ಪತ್ರ ಬರೆದರೂ ಸ್ಪಂದಿಸಿಲ್ಲ. ನಿವಾಸ ಕೊಡದಿದ್ದರೂ ಜನಸೇವೆ ಮಾಡುವ ಶಕ್ತಿ ಇದೆ ಎಂದು ತಿಳಿಸಿದರು.

Continue Reading

Latest

Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

Kangana Ranaut: ಸಿನಿಮಾ ರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ನಟಿ ಕಂಗನಾ ರಣಾವತ್ ಈಗ ಸಂಸದೆಯಾಗಿದ್ದಾರೆ. ಸಂಸದರು ತಿಂಗಳಿಗೆ 1 ಲಕ್ಷ ರೂ. ಮೂಲ ವೇತನವನ್ನು ಪಡೆಯುತ್ತಾರೆ. ಹಣದುಬ್ಬರ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಗಳನ್ನು ಭರಿಸಲು 2018ರಲ್ಲಿ ವೇತನ ಹೆಚ್ಚಳ ಮಾಡಿದ ನಂತರ ಈ ಮೊತ್ತವನ್ನು ನೀಡಲಾಗುತ್ತಿದೆ. ಸಂಬಳದ ಜತೆ ಇನ್ನೂ ಏನೇನು ಸೌಲಭ್ಯವನ್ನು ಅವರು ಪಡೆಯುತ್ತಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Kangana Ranaut
Koo

ದೆಹಲಿ: ನಟಿ ಕಂಗನಾ ರಣಾವತ್ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಟಿ. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಕಂಗನಾ ರಾಜಕೀಯ ರಂಗವನ್ನು ಪ್ರವೇಶಿಸಿ ಸೈ ಎನಿಸಿಕೊಂಡಿದ್ದಾರೆ. 2024ರ ಲೋಕಸಭೆಯ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಜಯಗಳಿಸಿದ ನಟಿ ಕಂಗನಾ ರಣಾವತ್‌ (Kangana Ranaut) ಅವರು ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದಾರೆ.

ಸಿನಿಮಾ ರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ನಟಿ ಸಂಸದೆಯಾದ ಕಾರಣ ಹಲವು ರೀತಿಯ ಸವಲತ್ತುಗಳನ್ನು ಹೊಂದಿರುತ್ತಾರೆ. ಹಾಗಾದ್ರೆ ಅವರ ಸಂಬಳ ಮತ್ತು ಸವಲತ್ತುಗಳ ಬಗ್ಗೆ ತಿಳಿಯೋಣ:

ತಿಂಗಳ ಸಂಬಳ: ಸಂಸದರು ತಿಂಗಳಿಗೆ 1 ಲಕ್ಷ ರೂ. ಮೂಲ ವೇತನವನ್ನು ಪಡೆಯುತ್ತಾರೆ. ಹಣದುಬ್ಬರ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಗಳನ್ನು ಭರಿಸಲು 2018ರಲ್ಲಿ ವೇತನ ಹೆಚ್ಚಳ ಮಾಡಿದ ನಂತರ ಈ ಮೊತ್ತವನ್ನು ನೀಡಲಾಗುತ್ತಿದೆ.

ಸವಲತ್ತುಗಳ ವಿವರ ಹೀಗಿದೆ:

  • ಕ್ಷೇತ್ರ ಭತ್ಯೆ : ಕಂಗನಾ ಅವರಿಗೆ ತಮ್ಮ ಕ್ಷೇತ್ರದಲ್ಲಿ ಕಚೇರಿಗಳನ್ನು ನಿರ್ವಹಿಸಲು ಮತ್ತು ಮತದಾರರೊಂದಿಗೆ ಸಂವಹನ ಸಾಧಿಸುವ ವೆಚ್ಚವನ್ನು ಭರಿಸಲು ಕ್ಷೇತ್ರ ಭತ್ಯೆಯಾಗಿ ತಿಂಗಳಿಗೆ 70,000 ರೂ. ನೀಡುತ್ತಾರೆ.
  • ದೈನಂದಿನ ಭತ್ಯೆ : ಸಂಸತ್ತಿನ ಅಧಿವೇಶನಗಳು ಮತ್ತು ಸಮಿತಿ ಸಭೆಗಳಲ್ಲಿ ದಿಲ್ಲಿಯಲ್ಲಿದ್ದಾಗ ಕಂಗನಾ ಅವರು ವಸತಿ, ಆಹಾರ ಮತ್ತು ಇತರ ವೆಚ್ಚಗಳಿಗಾಗಿ 2000 ರೂ. ದೈನಂದಿನ ಭತ್ಯೆಯಾಗಿ ಪಡೆಯುತ್ತಾರೆ.
  • ಪ್ರಯಾಣ ಭತ್ಯೆ : ಎಲ್ಲಾ ಸಂಸದರು ತಮಗೆ ಹಾಗೂ ತಮ್ಮ ಕುಟುಂಬದವರಿಗೆ ವರ್ಷಕ್ಕೆ 34 ಬಾರಿ ಉಚಿತ ದೇಶಿಯ ವಿಮಾನ ಪ್ರಯಾಣವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅವರು ಅಧಿಕೃತ ಮತ್ತು ವೈಯಕ್ತಿಕ ಉದ್ದೇಶಗಳಿಗಾಗಿ ಉಚಿತ ಪ್ರಥಮ ದರ್ಜೆ ರೈಲು ಪ್ರಯಾಣವನ್ನು ಸಹ ಪಡೆಯುತ್ತಾರೆ ಮತ್ತು ತಮ್ಮ ಕ್ಷೇತ್ರಗಳಲ್ಲಿ ರಸ್ತೆಯಲ್ಲಿ ಪ್ರಯಾಣಿಸಲು ಮೈಲೇಜ್ ಭತ್ಯೆವನ್ನು ಪಡೆಯಬಹುದು.
  • ವಸತಿ: ಸಂಸದರಿಗೆ ಅವರ 5 ವರ್ಷದ ಆಡಳಿತ ಅವಧಿಯಲ್ಲಿ ಬಂಗಲೆಗಳು, ಪ್ಲ್ಯಾಟ್‌ಗಳು ಅಥವಾ ಹಾಸ್ಟೆಲ್ ಕೊಠಡಿಗಳು ಹಾಗೂ ಬಾಡಿಗೆ ಮುಕ್ತ ವಸತಿಯನ್ನು ಒದಗಿಸಲಾಗುವುದು. ಒಂದು ವೇಳೆ ಅಧಿಕೃತ ವಸತಿ ಸೌಕರ್ಯವನ್ನು ಬಳಸದವರಿಗೆ ತಿಂಗಳಿಗೆ 2,00,000 ರೂ. ವಸತಿ ಭತ್ಯೆವನ್ನು ಪಡೆಯಬಹುದು.
  • ವೈದ್ಯಕೀಯ ಸೌಲಭ್ಯ : ಕಂಗನಾ ಮತ್ತು ಅವರ ಕುಟುಂಬದವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (CCHS) ಅಡಿಯಲ್ಲಿ ಉಚಿತ ವೈದ್ಯಕೀಯ ಸೇವೆಯನ್ನು ಪಡೆಯುತ್ತಾರೆ. ಇದರಿಂದ ಸರ್ಕಾರಿ ಅಥವಾ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
  • ಇತರೆ: ಸಂಸದರಿಗೆ ವರ್ಷಕ್ಕೆ 1,50,000 ರೂ.ನಷ್ಟು ಉಚಿತ ದೂರವಾಣಿ ಕರೆಗಳನ್ನು ನೀಡಲಾಗುತ್ತದೆ ಮತ್ತು ಅವರು ತಮ್ಮ ನಿವಾಸದಲ್ಲಿ ಮತ್ತು ಕಚೇರಿಗಳಲ್ಲಿ ಉಚಿತ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕಗಳನ್ನು ಪಡೆಯಬಹುದಾಗಿದೆ. ಹಾಗೆಯೇ ಅವರಿಗೆ ವರ್ಷಕ್ಕೆ 50,000 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಮತ್ತು 4,000 ಕಿಲೋ ಲೀಟರ್‌ನಷ್ಟು ನೀರನ್ನು ಉಚಿತವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Continue Reading

Latest

JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಕೇಂದ್ರ ಆರೋಗ್ಯ ಸಚಿವರಾದ ಜೆಪಿ ನಡ್ಡಾ (JP Nadda) ಅವರು ಆರೋಗ್ಯಕ್ಕೆ ಹಾನಿಕಾರಕವಾದ ಗುಟ್ಕಾ ಸೇವಿಸಿದ್ದಾರೆ ಎಂಬ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜೆ ಪಿ ನಡ್ಡಾ ಅವರು ನಿಜಕ್ಕೂ ಗುಟ್ಕಾ ತಿಂದರಾ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

JP Nadda
Koo

ದೆಹಲಿ: ಗುಟ್ಕಾ ಇದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದನ್ನು ಸೇವಿಸುವುದರಿಂದ ಕ್ಯಾನ್ಸರ್, ಉಸಿರಾಟದಂತಹ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಇದೆಲ್ಲ ಗೊತ್ತಿದ್ದರೂ ಗುಟ್ಕಾ ತಿನ್ನುವವರು ಕಡಿಮೆಯಾಗಿಲ್ಲ. ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ (JP Nadda) ಅವರು ಗುಟ್ಕಾ ತಿನ್ನುತ್ತಿದ್ದಾರೆ ಎನ್ನಲಾದ ವಿಡಿಯೊ ಒಂದು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ (Viral Video) ಆಗಿದೆ. ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಕೇಂದ್ರ ಆರೋಗ್ಯ ಸಚಿವರಾದ ಜೆ ಪಿ ನಡ್ಡಾ ಅವರು ಆರೋಗ್ಯಕ್ಕೆ ಹಾನಿಕಾರಕವಾದ ಗುಟ್ಕಾ ಸೇವಿಸಿದ್ದಾರೆ ಎಂಬ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದಕ್ಕೆ ಸಂಬಂಧಿಸಿದ ಪೋಸ್ಟ್‌ವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು. ಅದಕ್ಕೆ ನೆಟಿಜನ್ ಸಚಿವರ ಮೇಲೆ ಕಿಡಿಕಾರಿದ್ದಾರೆ.

ನಿಜಕ್ಕೂ ತಿಂದಿದ್ದೇನು?:

ವೈರಲ್ ಆದ ವಿಡಿಯೊದಲ್ಲಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಸಣ್ಣ ಪೆಟ್ಟಿಗೆಯಂತಹ ಪ್ಯಾಕೆಟ್‌ನಿಂದ ಏನೋ ತಿನ್ನುತ್ತಾರೆ. ಆಗ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಅವರ ಕೈಯಿಂದ ತಾವೂ ಸ್ವಲ್ಪ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ಈ ಪೋಸ್ಟ್ ನೋಡಿದ ನೆಟಿಜನ್ ಕೇಂದ್ರ ಸಚಿವರು ಗುಟ್ಕಾ ಸೇವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಕೆಲವು ಮಂದಿ ಇದು ಸುಳ್ಳು, ಅವರು ಸೇವಿಸುತ್ತಿರುವುದು ಗುಟ್ಕಾ ಅಲ್ಲ ‘ಯೋಗಿ ಕಂಠಿಕಾ ಮಾತ್ರೆ’ ಎಂದು ಸಮರ್ಥನೆ ನೀಡಿದ್ದಾರೆ. ಹಾಗೆಯೇ ಯೋಗಿ ಕಂಠಿಕಾದ ಪೋಟೊವನ್ನು ಶೇರ್ ಮಾಡಿದ ಬಳಕೆದಾರರು ಅದು ಗಂಟಲಿನಲ್ಲಿ ಕಿರಿಕಿರಿಯಾದಾಗ ಸೇವಿಸುವ ಆಯುರ್ವೇದದ ಮಾತ್ರೆ. ನಡ್ಡಾ ಮತ್ತು ಗಡ್ಕರಿ ಅದನ್ನು ಗಂಟಲು ಸರಿಮಾಡಿಕೊಳ್ಳುವುದಕ್ಕಾಗಿ ಸೇವಿಸಿದ್ದಾರೆ ಎಂದು ಸಚಿವರ ಪರ ಬ್ಯಾಟ್‌ ಬೀಸಿದ್ದಾರೆ.

ಇದನ್ನೂ ಓದಿ: Viral Video: ಪುಷ್ಪ 2 ಚಿತ್ರದ ‘ಅಂಗಾರನ್’ ಹಾಡಿಗೆ ಪತ್ನಿ ಜೊತೆ ಸ್ಟೆಪ್‌ ಹಾಕಿದ ವಿಶೇಷ ಚೇತನ

ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಕ್ಯಾಬಿನೆಟ್‌ನಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿದ್ದ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವನ್ನು ಹಂಚಿಕೆ ಮಾಡಲಾಗಿದೆ. ನವೆಂಬರ್ 9, 2014ರಿಂದ ಮೇ 30, 2019ರವರೆಗೆ ಪ್ರಧಾನಿ ಮೋದಿಯವರ ಮೊದಲ ಕ್ಯಾಬಿನೆಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ನಡ್ಡಾ ಅವರು ಇದೀಗ ಮತ್ತೆ ಸಚಿವಾಲಯದ ಮುಖ್ಯಸ್ಥರಾಗಿದ್ದಾರೆ. 63 ವರ್ಷದ ಜೆಪಿ ನಡ್ಡಾ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಮಂತ್ರಿಮಂಡಲಕ್ಕೆ ಮರಳಿದ್ದು, ಕ್ಯಾಬಿನೆಟ್‌ನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Continue Reading

ದೇಶ

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Pema Khandu: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ ಪದಗ್ರಹಣ ಮಾಡಿದರು. ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು.

VISTARANEWS.COM


on

Pema Khandu
Koo

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು (Pema Khandu) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ (Chowna Mein) ಪದಗ್ರಹಣ ಮಾಡಿದರು.

ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು. ಇಟಾನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ನಿಂಗ್‌, ಜೆ.ಪಿ.ನಡ್ಡಾ, ಕಿರಣ್‌ ರಿಜಿಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಮತ್ತಿತರರು ಪಾಲ್ಗೊಂಡಿದ್ದಾರೆ.

ಬಿಯುರಾಮ್ ವಾಘೆ, ನ್ಯಾಟೊ ಡುಕಾಮ್, ಗ್ಯಾನ್ರಿಯಲ್ ಡೆನ್ವಾಂಗ್ ವಾಂಗ್ಸು, ವಾಂಕಿ ಲೋವಾಂಗ್, ಪಸಾಂಗ್ ದೋರ್ಜಿ ಸೋನಾ, ಮಾಮಾ ನಾತುಂಗ್, ದಸಾಂಗ್ಲು ಪುಲ್, ಬಾಲೊ ರಾಜಾ, ಕೆಂಟೊ ಜಿನಿ ಮತ್ತು ಓಜಿಂಗ್ ತಾಸಿಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು. ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಕಲಿಖೋ ಪುಲ್ ಅವರ ಪತ್ನಿ ದಸಾಂಗ್ಲು ಪುಲ್ ಅವರು ದಶಕಗಳ ನಂತರ ಆಯ್ಕೆಯಾದ ಏಕೈಕ ಸಚಿವೆ ಎನಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯೊಂದಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 60 ಸೀಟುಗಳ ಪೈಕಿ ಬಿಜೆಪಿ 46 ಕಡೆ ಜಯ ಗಳಿಸಿ ಬಹುಮತ ಪಡೆದು ಸರ್ಕಾರ ರಚಿಸಿದೆ. ವಿಶೇಷ ಎಂದರೆ 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆಯಾದ ಶಾಸಕರು.

44 ವರ್ಷದ ಪೇಮಾ ಖಂಡು ಮೊದಲು ಕಾಂಗ್ರೆಸ್‌ನಲ್ಲಿದ್ದರು. ಬಳಿಕ ಕೇಸರಿ ಪಾಳಯದತ್ತ ಮುಖ ಮಾಡಿದರು. 2016ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷದ ಕೊನೆಯಲ್ಲಿ ಖಂಡು ನೇತೃತ್ವದ 43 ಶಾಸಕರು ಕಾಂಗ್ರೆಸ್‌ನಿಂದ ಬಿಜೆಪಿ ಮಿತ್ರ ಪಕ್ಷವಾದ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (PPA)ಕ್ಕೆ ಪಕ್ಷಾಂತರಗೊಂಡರು. ಇದರ ನಂತರ 33 ಪಿಪಿಎ ಶಾಸಕರು ಬಿಜೆಪಿಗೆ ಸೇರಿದ ಬಳಿಕ ಪೇಮಾ ಖಂಡು ಮುಖ್ಯಮಂತ್ರಿಯಾಗಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸಿದರು. 2019ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಚುಕ್ಕಾಣಿ ಹಿಡಿಯಿತು. ಆಗಲೂ ಮುಖ್ಯಮಂತ್ರಿಯಾಗಿ ಪೇಮಾ ಖಂಡು ಆಯ್ಕೆಯಾಗಿದರು.

ಇದನ್ನೂ ಓದಿ: Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

ಚುನಾವಣೆಯಲ್ಲಿ ಬಹುಮತ ಪಡೆದ ಬಳಿಕ ಜೂನ್‌ 3ರಂದು ಪೇಮಾ ಖಂಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದರು. ʼʼಮತ ಚಲಾಯಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಉನ್ನತಿಗಾಗಿ ಹಗಲಿರುಳು ಶ್ರಮಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದರು.

Continue Reading
Advertisement
ISIS Terrorists
ಕರ್ನಾಟಕ1 min ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ51 mins ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ52 mins ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್2 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ2 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ2 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು2 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ2 hours ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ3 hours ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ3 hours ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌