Rahul Gandhi: ʻ...ರಾಜೀನಾಮೆ ನೀಡಿದೆʼ ಎಂದ ಹಿಮಂತ ಶರ್ಮಾ; ನಾಯಿ ಬಿಸ್ಕೆಟ್‌ ನೀಡಿದ ರಾಹುಲ್‌ ಗಾಂಧಿ ವೈರಲ್‌ ವಿಡಿಯೋಗೆ ಕಾಮೆಂಟ್ - Vistara News

ವೈರಲ್ ನ್ಯೂಸ್

Rahul Gandhi: ʻ…ರಾಜೀನಾಮೆ ನೀಡಿದೆʼ ಎಂದ ಹಿಮಂತ ಶರ್ಮಾ; ನಾಯಿ ಬಿಸ್ಕೆಟ್‌ ನೀಡಿದ ರಾಹುಲ್‌ ಗಾಂಧಿ ವೈರಲ್‌ ವಿಡಿಯೋಗೆ ಕಾಮೆಂಟ್

ನಾಯಿ ತಿನ್ನದ ಬಿಸ್ಕೆಟ್‌ ಅನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್‌ ಗಾಂಧಿ (Rahul Gandhi) ವಿಡಿಯೋಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ನೀಡಿದ ಕಾಮೆಂಟ್ ಕೂಡ ಈಗ ವೈರಲ್‌ ಆಗುತ್ತಿದೆ.

VISTARANEWS.COM


on

rahul gandhi himanata sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ನಾಯಿ ತಿನ್ನದ ಬಿಸ್ಕೆಟ್‌ ಅನ್ನು ಕಾಂಗ್ರೆಸ್‌ ಕಾರ್ಯಕರ್ತನಿಗೆ (Congress leader) ನೀಡಿದ ರಾಹುಲ್‌ ಗಾಂಧಿ (Rahul Gandhi) ಅವರ ವಿಡಿಯೋ ವೈರಲ್‌ (Viral video) ಆಗುತ್ತಿದ್ದು, ಅದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ನೀಡಿದ ಕಾಮೆಂಟ್ ಕೂಡೀಗ ವೈರಲ್‌ ಆಗುತ್ತಿದೆ.

ಅಸ್ಸಾಂನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ (Bharat Jodo Nyay Yatra) ಈ ಘಟನೆ ನಡೆದಿದೆ. ವಿಡಿಯೋದಲ್ಲಿ, ಮೊದಲು ಪ್ಯಾಕೆಟ್‌ನಿಂದ ತೆಗೆದ ಬಿಸ್ಕತ್ತನ್ನು ರಾಹುಲ್‌ ಗಾಂಧಿ ಅವರು ನಾಯಿಯ ಮುಂದೆ ಹಿಡಿಯುತ್ತಾರೆ. ಆದರೆ ನಾಯಿ ಅದನ್ನು ತಿನ್ನುವುದಿಲ್ಲ. ರಾಹುಲ್‌ ಅವರು ಆ ಬಿಸ್ಕೆಟನ್ನು ನಂತರ ಕಾರ್ಯಕರ್ತನಿಗೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೋಮವಾರ ತಡರಾತ್ರಿ ಈ ವೀಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್‌ ಆಗಿತ್ತು.

ಈ ವಿಡಿಯೋ ಶೇರ್‌ ಮಾಡಿಕೊಂಡಿರುವ ಬಿಜೆಪಿಯ ಮತ್ತೊಬ್ಬ ನಾಯಕಿ ಪಲ್ಲವಿ ಸಿಟಿ, ರಾಹುಲ್‌ ಅವರನ್ನು “ನಾಚಿಕೆಯಿಲ್ಲದ ವ್ಯಕ್ತಿ” ಎಂದಿದ್ದರು. ಮಾಜಿ ಕಾಂಗ್ರೆಸ್ ನಾಯಕ ಮತ್ತು ಈಗಿನ ಅಸ್ಸಾಂ ಮುಖ್ಯಮಂತ್ರಿ “ಹಿಮಂತ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿಯವರ ಮುದ್ದಿನ ನಾಯಿಯಾದ ಪಿಡಿಯ ಅದೇ ಪ್ಲೇಟ್‌ನಿಂದ ಬಿಸ್ಕೆಟ್‌ಗಳನ್ನು ತಿನ್ನುವಂತೆ ಮಾಡಿದ” ದಿನಗಳನ್ನು ನೆನಪಿಸಿಕೊಂಡಿದ್ದರು.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಹಿಮಂತ ಬಿಸ್ವಾ ಶರ್ಮಾ, “ಪಲ್ಲವಿ ಜೀ, ರಾಹುಲ್ ಗಾಂಧಿ ಮಾತ್ರವಲ್ಲ ಅವರ ಇಡೀ ಕುಟುಂಬ ಕೂಡ ಆ ಬಿಸ್ಕೆಟ್ ಅನ್ನು ನನಗೆ ತಿನ್ನಿಸಲು ಸಾಧ್ಯವಾಗಲಿಲ್ಲ. ನಾನು ಹೆಮ್ಮೆಯ ಅಸ್ಸಾಮಿ ಮತ್ತು ಭಾರತೀಯ. ನಾನು ಅದನ್ನು ತಿನ್ನಲು ನಿರಾಕರಿಸಿದೆ ಮತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದೆ” ಎಂದಿದ್ದಾರೆ.

ಅಧಿಕೃತ ಭಾರತ್ ಜೋಡೋ ಯಾತ್ರಾ ಹ್ಯಾಂಡಲ್, ರಾಹುಲ್‌ ಗಾಂಧಿ ನಾಯಿಮರಿಯನ್ನು ಮುದ್ದಿಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದೆ. ಆದರೆ ಆ ಕ್ಲಿಪ್‌ನಲ್ಲಿ ಕಾರ್ಯಕರ್ತನಿಗೆ ಬಿಸ್ಕೆಟ್ ನೀಡಿದ್ದು ಇಲ್ಲ. ಆ ನಾಯಿಮರಿಯು ರಾಹುಲ್‌ ಗಾಂಧಿ ಮಾತನಾಡುತ್ತಿದ್ದ ಅದೇ ಬೆಂಬಲಿಗನಿಗೆ ಸೇರಿದ್ದು ಎಂದು ಕೆಲವು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ತನ್ನ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

ಈಗ ಬಿಜೆಪಿಯಿಂದ ಅಸ್ಸಾಂ ಮುಖ್ಯಮಂತ್ರಿಯಾಗಿರುವ ಹಿಮಂತ ಬಿಸ್ವ ಶರ್ಮಾ ಹಿಂದೆ ಕಾಂಗ್ರೆಸ್‌ ನಾಯಕರಾಗಿದ್ದವರು. ಈ ಘಟನೆಯ ವಿಡಿಯೋವನ್ನು ಹಲವರು ಶರ್ಮಾ ಜೊತೆಗೆ ಶೇರ್‌ ಮಾಡಿಕೊಂಡಿದ್ದಾರೆ. ಶರ್ಮಾ ಅವರು ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಒಂದು ಮೀಟಿಂಗ್‌ಗಾಗಿ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿದ ಘಟನೆಯನ್ನು ಈ ಹಿಂದೆ ಆಗಾಗ್ಗೆ ನೆನಪಿಸಿಕೊಂಡಿದ್ದರು. “ರಾಹುಲ್‌ ಗಾಂಧಿಯವರ ಮುದ್ದಿನ ನಾಯಿ ಪಿಡಿಗೆ ಅದರ ಪ್ಲೇಟ್‌ನಲ್ಲಿ ಬಿಸ್ಕೆಟ್‌ಗಳನ್ನು ಕೊಡಲಾಯಿತು. ನಂತರ ಕಾಂಗ್ರೆಸ್ ನಾಯಕರಿಗೆ ಅದೇ ಪ್ಲೇಟ್‌ನಿಂದ ಬಿಸ್ಕೆಟ್ ನೀಡಲಾಯಿತು” ಎಂದು ಶರ್ಮಾ ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

ರಾಹುಲ್‌ ಗಾಂಧಿ ಪಕ್ಷದ ಪ್ರಮುಖ ವಿಷಯಗಳ ಬಗ್ಗೆ ಗಂಭೀರತೆ ಹೊಂದಿಲ್ಲ ಎಂದು ಅವರು ಆರೋಪಿಸಿದ್ದರು. ಇದಾದ ಕೆಲವೇ ಸಮಯದ ಬಳಿಕ ಅವರು ಕಾಂಗ್ರೆಸ್ ತೊರೆದಿದ್ದರು.

ವೈರಲ್ ವೀಡಿಯೊದ ಬಗ್ಗೆ ಇತರ ಬಿಜೆಪಿ ನಾಯಕರು ಗಾಂಧಿ ಅವರನ್ನು ಟೀಕಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ನಾಯಿಗಳಂತೆ ನೋಡಿಕೊಳ್ಳುವ ಯುವರಾಜರ ಪಕ್ಷ ನಿರ್ನಾಮವಾಗುವುದು ಸಹಜ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ನಾಯಿ ಪ್ಲೇಟ್‌ನಿಂದ ಬಿಸ್ಕೆಟ್‌ ತೆಗೆದು ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೊಟ್ರಾ ರಾಹುಲ್‌ ಗಾಂಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Viral News:ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಬಾರ್‌ನಲ್ಲಿ ತಡರಾತ್ರಿ ಪಾರ್ಟಿ(Mumbai Bar) ಮುಗಿಸಿ ಮೂವರು ಯುವತಿಯ ಮಾರಾಮಾರಿ ನಡೆದಿದ್ದು, ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ನಶೆಯಲ್ಲಿ ತೂರಾಡುತ್ತಿದ್ದ ಯುವತಿಯರ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್(Viral News) ಆಗಿದೆ. ಪಾರ್ಟಿಯ ಮೂಡಿನಲ್ಲಿದ್ದ ಯುವತಿಯರನ್ನು ಕೊನೆಗೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮುಂಬೈನ ವಿರಾರ್ ಪ್ರದೇಶದ ಗೋಕುಲ್ ಟೌನ್‌ಶಿಪ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆ ವಿವರ:

ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕಿಡಿದ ನಶೆಯಲ್ಲಿ ಪೊಲೀಸರನ್ನು ಅಚಾಚ್ಯ ಶಬ್ಧಗಳಿಂದ ನಿಂದಿಸಿದ ಯುವತಿಯರು, ಮಹಿಳಾ ಪೊಲೀಸ್ ಪೇದೆಯೊಬ್ಬರ ಕೈ ಕಚ್ಚಿದ್ದಲ್ಲದೆ, ಆಕೆಯ ಸಮವಸ್ತ್ರವನ್ನೂ ಹರಿದಿದ್ದಾರೆ. ಮತ್ತೊಬ್ಬ ಕಾನ್ ಸ್ಟೇಬಲ್ ತಲೆಗೆ ಬಕೆಟ್ ನಿಂದ ಹೊಡೆದಿದ್ದಾನೆ. ಅವರ ಕೈಯನ್ನೂ ಕಚ್ಚಿದ್ದಾರೆ. ಪೊಲೀಸರು ಆರೋಪಿಗಳನ್ನು ಕಾವ್ಯ, ಅಶ್ವಿನಿ ಮತ್ತು ಪೂಣಂ ಎಂದು ಗುರುತಿಸಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ:Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

ಕೆಲವು ತಿಂಗಳ ಹಿಂದೆ ಕಲಬುರಗಿಯಲ್ಲೂ ಇಂತಹದ್ದೇ ಒಂದಿ ಘಟನೆ ನಡೆದಿತ್ತು. ಪರೀಕ್ಷೆ ವೇಳೆ ಕಾಪಿ ಮಾಡಲು ಅವಕಾಶ ನೀಡಲಿಲ್ಲ ಎಂದು ಇಬ್ಬರು ವ್ಯಕ್ತಿಗಳು ಪೊಲೀಸ್ ಮುಖ್ಯ ಪೇದೆ ಮೇಲೆ ಹಲ್ಲೆ ನಡೆಸಿದ್ದರು. ಲಾಠಿ ಕಸಿದು, ಕಲ್ಲಿನಿಂದ ಹೊಡೆದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿತ್ತು. ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 20ರಂದು ಹಲ್ಲೆ ಮಾಡಿದ ಆರೋಪಿಗಳ ಪೈಕಿ ಒಬ್ಬರ ಸಹೋದರಿಯ ಪರೀಕ್ಷೆ ಬರೆಯುತ್ತಿದ್ದರು. ಈ ವೇಳೆ ಈ ಆಕೆಯ ಅಣ್ಣ ತಾನು ತಂಗಿಗೆ ಸಹಾಯ ಮಾಡಲು ಮುಂದಾಗಿದ್ದ. ಈ ವೇಳೆ ಆತನನ್ನು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ತಡೆದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಹೋದರ ಪೋಲಸ್ ಅಂತಲೂ ನೋಡದೇ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಂಗಿ ಪರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಯುವಕ ತಕರಾರು ಎತ್ತಿದ್ದ. ಅದಕ್ಕೆ ಒಪ್ಪದೇ ಇದ್ದಾಗ ಆರೋಪಿ ಹಲ್ಲೆ ಮಾಡಿದ್ದಾನೆ.

Continue Reading

ಕ್ರೈಂ

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

Physical Abuse : ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಕಕ್ಷಿದಾರ ಮಹಿಳೆಯನ್ನು ಲಾಡ್ಜ್‌ಗೆ ಕರೆದ ಪಬ್ಲಿಕ್‌ ಪ್ರಾಸಿಕ್ಯೂಟರ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬೆಂಗಳೂರಿನಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

VISTARANEWS.COM


on

By

Physical Abuse The public prosecutor called the client woman to the lodge
ಸಿಕ್ಕಿ ಬಿದ್ದಿದ್ದಕ್ಕೆ ಓಡಿ ಹೋಗುತ್ತಿದ್ದ ಪಬ್ಲಿಕ್‌ ಪ್ರಾಸಿಕ್ಯೂಟರ್ ಶ್ರೀರಾಂ
Koo

ಬೆಂಗಳೂರು: ಕಕ್ಷಿದಾರ ಮಹಿಳೆಗೆ ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ (Physical Abuse) ನಡೆಸಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪಬ್ಲಿಕ್ ಪ್ರಾಸಿಕ್ಯೂಟರ್‌ ಶ್ರೀರಾಂ ಬಂಧಿಸಲಾಗಿದೆ.

ಮಹಿಳೆ ನೀಡಿದ್ದ ಹಳೆಯ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಹೀಗಾಗಿ ಆ ಮಹಿಳೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಆದೇಶ ಪ್ರತಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್ ಬಳಿ ಕೇಳಿದ್ದಳು. ಮೆಜೆಸ್ಟಿಕ್‌ ಬಳಿ ಇರುವ ಹೋಟೆಲ್‌ ಸಮೀಪ ಪ್ರಾಸಿಕ್ಯೂಟರ್ ಶ್ರೀರಾಂ ಆದೇಶ ಪ್ರತಿ ಕೊಡುವುದಾಗಿ ಮಾತನಾಡಿದ್ದಾನೆ. ಇಲ್ಲೇ ಕಾಟನ್‌ಪೇಟೆಯ ಲಾಡ್ಜ್‌ವೊಂದಕ್ಕೆ ಬನ್ನಿ ಕೇಸ್ ಬಗ್ಗೆ ಮಾತಾಡೋಣ ಎಂದಿದ್ದಾನೆ. ಮಹಿಳೆಯನ್ನು ನಾನಾ ರೀತಿಯಲ್ಲಿ ಒತ್ತಾಯ ಮಾಡಿ ಲಾಡ್ಜ್‌ ಹೋಗೊಣಾ ಎಂದಿದ್ದಾನೆ. ಲೈಂಗಿಕವಾಗಿ ಸಹಕರಿಸಲು ಕೋರಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಪಬ್ಲಿಕ್‌ ಪ್ರಾಸಿಕ್ಯೂಟರ್ ವರ್ತನೆಗೆ ಪ್ರತಿರೋಧ ತೋರಿದ ಮಹಿಳೆ, ಆತನಿಗೆ ಗೊತ್ತಿಲ್ಲದಂತೆ ಕೂಡಲೆ ಪತಿಗೆ ಕರೆ ಮಾಡಿ ಅಸಭ್ಯ ವರ್ತನೆ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾಳೆ. ತಕ್ಷಣ ಮಾಹಿತಿ ಪಡೆದು ಬಂದ ಮಹಿಳೆಯ ಪತಿ ಹಾಗೂ ಅವರ ಸ್ನೇಹಿತರು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಲಾಡ್ಜ್‌ಗೆ ಕರೆಯುವುದನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ. ರಸ್ತೆಯಲ್ಲೇ ನಿಂತು ಮಹಿಳೆಯನ್ನು ಲಾಡ್ಜ್‌ಗೆ ಕರೆದಿದ್ದಾನೆ. ಈ ವೇಳೆ ಮಹಿಳೆಯ ಪತಿ ಹಾಗೂ ಸ್ನೇಹಿತರು ಸಹಾಯಕ್ಕೆ ದೌಡಾಯಿಸಿದ್ದಾರೆ. ಯಾವ ಲಾಡ್ಜ್‌ಗೆ ಬರಬೇಕೆಂದು ಪ್ರಶ್ನೆ ಮಾಡಿದಾಗ ಇವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಎಲ್ಲರೂ ಸೇರಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟನ್ ಪೇಟೆ ಪೊಲೀಸರು ಆರೋಪಿ ಶ್ರೀರಾಂನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ಶ್ರೀಂರಾಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Viral Video:ಛೀ.. ಎಂಥಾ ಹೇಯ ಕೃತ್ಯ! ಶಾಲಾ ಬಾಲಕಿ ಮೇಲೆ ಆಟೋ ಚಾಲಕನ ನೀಚ ಕೃತ್ಯ; ಶಾಕಿಂಗ್‌ ವಿಡಿಯೋ ವೈರಲ್‌

Viral Video:10ನೇ ತರಗತಿ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿ ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ಕೊಡಲು ಶುರು ಮಾಡುತ್ತಾನೆ. ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಆ ವಿಡಿಯೋ ವೈರಲ್‌ ಆಗಿದೆ.

VISTARANEWS.COM


on

Viral video
Koo

ನಾಗ್ಪುರ:ಕಾಮುಕರ ಅಟ್ಟಹಾಸಕ್ಕೆ ಸಣ್ಣ ಪುಟ್ಟ ಮಕ್ಕಳು ಬಲಿಯಾಗುತ್ತಿರುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅಪರಿಚಿತರಿಂದ ಮಕ್ಕಳು ಲೈಂಗಿಕ ಕಿರುಕುಳ(Physical Abuse)ಕ್ಕೆ ಒಳಗಾಗುವುದಕ್ಕಿಂತ ಹೆಚ್ಚಾಗಿ ಪರಿಚಿತರಿಂದಲೇ ದೌರ್ಜನ್ಯಕ್ಕೊಳಗಾಗುತ್ತಿರುವ ಹೇಯ ಘಟನೆ ಬೆಳಕಿಗೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದ್ದು, ಅದರ ವಿಡಿಯೋ ವೈರಲ್‌(Viral Video) ಆಗಿದೆ. ಶಾಕಿಂಗ್‌ ವಿಡಿಯೋ ನೋಡಿದರೆ ಮನೆಯಲ್ಲಿ ಪುಟ್ಟ ಮಕ್ಕಳಿರುವವರಂತೂ ಆಘಾತಕ್ಕೊಳಗಾಗುವುದಂತು ಗ್ಯಾರಂಟಿ. ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನೇ ಬಾಲಕಿ ಮೇಲೆ ನೀಚ ಕೃತ್ಯ ಎಸಗಿದ್ದಾನೆ.

ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿ ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ಕೊಡಲು ಶುರು ಮಾಡುತ್ತಾನೆ. ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಆ ವಿಡಿಯೋ ವೈರಲ್‌ ಆಗಿದೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇದೀಗ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಆಟೋ ರಿಕ್ಷಾದ ಹೊರಗೆ ನಿಂತಿರುವ ಚಾಲಕ ಮತ್ತು ಅಪ್ರಾಪ್ತ ಬಾಲಕಿ ಕುಳಿತಿದ್ದ ಹಿಂದಿನ ಸೀಟಿನಲ್ಲಿ ನುಸುಳುತ್ತಿರುವ ದೃಶ್ಯವು ಸೆರೆಯಾಗಿದೆ. ಆಟೋ ಚಾಲಕನ ಹೀನಾ ಕೃತ್ಯವನ್ನು ದೂರದಿಂದ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪೊಲೀಸರು ಚಾಲಕನನ್ನು ಹುಡುಕಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ:PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

ಕೆಲವು ತಿಂಗಳ ಹಿಂದೆ ಮೈಸೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿಗೆ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯನ್ನು ಕರೆಸಿಕೊಂಡ ಈ ವೃದ್ಧ ಮರ್ಮಾಂಗವನ್ನು ಹಿಡಿದುಕೊಳ್ಳುವಂತೆ, ಜತೆಗೆ ಬಟ್ಟೆಯನ್ನು ಬಿಚ್ಚುವಂತೆ ಪೀಡಿಸುತ್ತಿದ್ದ ಜಗದೀಶ್‌ ಎಂಬಾತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು.

Continue Reading

Latest

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Dog Bite: ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

VISTARANEWS.COM


on

Dog bite
Koo

ನವ ದೆಹಲಿ: ನೋಯ್ಡಾದ ಸೆಕ್ಟರ್ -70 ರ (Noida Society) ವಸತಿ ಸೊಸೈಟಿಯಲ್ಲಿ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಕಚ್ಚಿದ ಪರಿಣಾಮ (Dog Bite) ಕೆರಳಿ ಕೆಂಡವಾದ ಅಪಾರ್ಟ್​ಮೆಂಟ್ ನಿವಾಸಿಗಳು, ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪರ- ವಿರೋಧ ಚರ್ಚೆ ಜೋರಾಗಿ ನಡೆದಿದೆ. ಅದಕ್ಕಿಂತಲೂ ಹೆಚ್ಚಾಗಿ ಅಪಾರ್ಟ್​ಮೆಂಟ್​ ಒಳಗೆ ದೊಡ್ಡ ಸಂಖ್ಯೆಯಲ್ಲಿ ಜನರ ಏಕಾಏಕಿ ಜಮಾಯಿಸಿದ್ದು ಕಂಡು ಸಾಕಷ್ಟು ಜನರು ಇಂಥದ್ದು ನಡೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

ಉದ್ರಿಕ್ತ ಗುಂಪು ಶುಭಂ ಮತ್ತು ಸಂಕಲಿತಾ ಎಂಬ ಹೆಸರಿನ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಕೂಡ ಪೊಲೀಸ್​ ದೂರು ನೀಡಿದ್ದಾರೆ. ಇದೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರನ್ನು ತಳ್ಳಿದ್ದಾರೆ ಎನ್ನಲಾಗಿದೆ. ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್​​ಗಳು ಈ ಬಗ್ಗೆ ದೂರು ನೀಡಿದ್ದಾರೆ. ಗಲಾಟೆ ವೇಳೆ ಕೆಲವರು ಸಿಸಿ ಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲು ಸಹ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ದಂಪತಿಯ ಆರೋಪ

ಗಲಾಟೆಯನ್ನು ರೆಕಾರ್ಡ್ ಮಾಡಲು ಮುಂದಾದಾಗ ಅವರಲ್ಲಿ ಒಬ್ಬರು ನನ್ನ ಹೆಂಡತಿಯ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅಲ್ಲದೆ ಅವಳಿಗೆ ಗಾಯ ಮಾಡಿದ್ದಾರೆ ಎಂದು ಶುಭಮ್ ಹೇಳಿದ್ದಾರೆ. ನನ್ನನ್ನು ರಕ್ಷಿಸಲು ಬಂದ ತನ್ನ ಕೆಲವು ಸ್ನೇಹಿತರನ್ನೂ ಎಳೆದಾಡಿದ್ದಾರೆ. ಅದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, ಗುಂಪಿನ ವೀಡಿಯೊವನ್ನು ಹಂಚಿಕೊಂಡಿದೆ. “ನೋಯ್ಡಾದ ಸೆಕ್ಟರ್ 70 ರ ಪಾನ್ ಒಯಾಸಿಸ್​ನಲ್ಲಿ ಹಿಂಸಾತ್ಮಕ ಗುಂಪು ನಾಯಿಗಳಿಗೆ ಆಹಾರ ಮತ್ತು ಆರೈಕೆ ಮಾಡುವ ಯುವ ದಂಪತಿ ಮೇಲೆ ದಾಳಿ ಮಾಡಿ ಕಾನೂನು ಉಲ್ಲಂಘಿಸಿದೆ. ಪೊಲೀಸರನ್ನು ಸಹ ತಳ್ಳಲಾಗಿದೆ. ಗಲಭೆಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.

ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಿ ಲಸಿಕೆ ಹಾಕಿದ ಆರೈಕೆದಾರಿಗೆ ಹಲ್ಲೆ ಮಾಡಲಾಗಿದೆ. ಅಶ್ಲೀಲವಾಗಿ ನಿಂದಿಸಲಾಗಿದೆ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪ್ರಾಣಿ ಕಲ್ಯಾಣ ಸಂಸ್ಥೆ ಹೇಳಿದೆ.

Continue Reading
Advertisement
Court Order
ದೇಶ34 mins ago

Cash Transfers: ಚುನಾವಣೆ; ಸರ್ಕಾರದ 14 ಸಾವಿರ ಕೋಟಿ ರೂ. ಜನರ ಖಾತೆಗೆ ವರ್ಗಾಯಿಸಲು ಕೋರ್ಟ್‌ ತಡೆ!

Prajwal Revanna Case
ಕರ್ನಾಟಕ38 mins ago

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Mr. & Mrs. Mahi'
ಪ್ರಮುಖ ಸುದ್ದಿ45 mins ago

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

888 rupees postpaid plan with 15 OTT applications for JioFiber AirFiber customers
ತಂತ್ರಜ್ಞಾನ1 hour ago

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Prajwal Revanna case SIT to issue Red Corner Notice against Prajwal
ಕ್ರೈಂ1 hour ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ2 hours ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Prajwal Revanna case Three FIRs against Prajwal Wanted list in all three
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna case Another rape case filed against Prajwal
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ9 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ11 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ12 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ19 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌