Employees protest : 7ನೇ ವೇತನ ಆಯೋಗ ಶಿಫಾರಸು ತಕ್ಷಣ ಜಾರಿ; ಫೆ. 7ರಂದು ಸರ್ಕಾರಿ ನೌಕರರ ಪ್ರತಿಭಟನೆ - Vistara News

ನೌಕರರ ಕಾರ್ನರ್

Employees protest : 7ನೇ ವೇತನ ಆಯೋಗ ಶಿಫಾರಸು ತಕ್ಷಣ ಜಾರಿ; ಫೆ. 7ರಂದು ಸರ್ಕಾರಿ ನೌಕರರ ಪ್ರತಿಭಟನೆ

Employees Protest: 7ನೇ ವೇತನ ಆಯೋಗದ ಶಿಫಾರಸುಗಳ ಜಾರಿ,
ರಾಜ್ಯದ ಎಲ್ಲಾ ನೌಕರರಿಗೂ PFRDA ಕಾಯ್ದೆ /NPS ಪದ್ದತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪನೆ ಆಗ್ರಹಿಸಿ ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ ನಡೆಯಲಿದೆ.

VISTARANEWS.COM


on

Employees protest Bangalore Representational photo
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರ ವಿರೋಧಿ ನೀತಿಗಳನ್ನು (Anti Employees policy) ಖಂಡಿಸಿ ಫೆಬ್ರವರಿ 7ರಂದು (ಬುಧವಾರ) ಬೃಹತ್‌ ಪ್ರತಿಭಟನೆ (Employees Protest) ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಟನೆ (Karnataka State Employees Association) ನಿರ್ಧರಿಸಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾಗಿರುವ ಎಚ್.ಎಸ್. ಜೈಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಶೋಭಾ ಲೋಕನಾಗಣ್ಣ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ವಿ. ಕಮ್ಮಾರ ಅವರು ತಿಳಿಸಿದ್ದಾರೆ.

ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ನೌಕರರು ಒಂದು ದಿನದ ರಾಜ್ಯ ಮಟ್ಟದ ಪ್ರತಿಭಟನಾ ಧರಣಿ ನಡೆಸಲಿದ್ದಾರೆ. ಅದರಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರದ ವಿವಿಧ ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.

ಕೇಂದ್ರ ಸರ್ಕಾರದ ವಿರುದ್ಧ ಯಾಕೆ ಆಕ್ರೋಶ?

  1. ಸರ್ಕಾರದ ನೀತಿಗಳು ದೈನಂದಿನ ಸರಕು ಸೇವೆಗಳ ಬೆಲೆಯೇರಿಕೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳ ಹೆಚ್ಚಳ ಮಾಡಿ ಜನತೆಗೆ ಸಂಕಷ್ಟ ತಂದೊಡ್ಡಿದ್ದು, ಖಾಸಗೀಕರಣ ನೀತಿಗಳ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚಿನ ಲಾಭ ಹರಿದು ಹೋಗಲು ಈ ನೀತಿಗಳು ಸಹಕಾರಿಯಾಗಿವೆ.
  2. PFRDA ಕಾಯ್ದೆ / NPS ಪದ್ದತಿ ರದ್ದುಪಡಿಸಿ, ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪಿಸಲು ಒತ್ತಾಯಿಸಿ ದೇಶಾದ್ಯಂತ ಸರ್ಕಾರಿ ನೌಕರರು ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರವು ಕೇವಲ ಪರಿಶೀಲನಾ ಸಮಿತಿ ರಚಿಸಿ ಮೌನವಾಗಿದೆ.
  3. ರಾಜ್ಯ ಮಟ್ಟದಲ್ಲಿ ಕೆಲವು ರಾಜ್ಯಗಳು ಎನ್.ಪಿ.ಎಸ್ ಪದ್ದತಿಯನ್ನು ರದ್ದುಪಡಿಸಿದ್ದರೂ ರಾಜಕೀಯ ಪಕ್ಷಗಳು/ ಸರ್ಕಾರಗಳು ಬದಲಾದಾಗ ಮತ್ತೆ ಓPS ಅನ್ನು ಮರುಸ್ಥಾಪಿಸಲು ಕ್ರಮ ವಹಿಸುತ್ತಿರುವ ಸುದ್ದಿಗಳು ರಾಜಸ್ತಾನದಂತಹ ರಾಜ್ಯಗಳಿಂದ ಬರುತ್ತಿವೆ.

ಕರ್ನಾಟಕ ಸರ್ಕಾರದ ಮೇಲೆ ಯಾಕೆ ಸಿಟ್ಟು?

  1. ಕರ್ನಾಟಕ ರಾಜ್ಯದ ಸರಕಾರಿ ನೌಕರರು ದಕ್ಷಿಣ ರಾಜ್ಯಗಳಲ್ಲಿಯೇ ಅತಿ ಕಡಿಮೆ ಸಂಬಳ ಪಡೆಯುತ್ತಾರೆ. ಪ್ರಸ್ತುತ ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ ಎರಡನೇ ಬಾರಿಗೆ ಆರು ತಿಂಗಳ ಕಾಲ ವಿಸ್ತರಿಸಿರುವುದು ನೌಕರರಲ್ಲಿ ತೀವ್ರ ನಿರಾಶೆ ಮತ್ತು ಆಕ್ರೋಶ ಮೂಡಿಸಿದೆ.
  2. ರಾಜ್ಯ ಸರ್ಕಾರವು 7ನೇ ವೇತನ ಪರಿಷ್ಕರಣೆ ಜಾರಿಗೊಳಿಸಲು ವಿಳಂಬ ಧೋರಣೆ ಅನುಸರಿಸುತ್ತಿದೆ.
  3. 2016ರಲ್ಲಿ ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯದಲ್ಲಿ ಗುತ್ತಿಗೆ/ ದಿನಗೂಲಿ/ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡದೆ ಹೊರಗುತ್ತಿಗೆ ಏಜೆನ್ಸಿಗಳು ಶೋಷಣೆ ಮಾಡುತ್ತಿವೆ.
  4. ಘೋಷಣೆ ಮಾತ್ರವೇ ಆಗಿ ಉಳಿದಿರುವ ನಗದು-ರಹಿತ ವಿಮಾ ಯೋಜನೆ,
  5. ಅನುದಾನಿತ ಸಂಸ್ಥೆಗಳ ನೌಕರರು ಪಿಂಚಣಿ-ವಂಚಿತರಾಗಿರುವುದು, ಅಸಂವಿಧಾನಿಕ ನಡತೆ ನಿಯಮಗಳು, ಪಿಡಿಒ ಅಧಿಕಾರಿಗಳ ಸಮಸ್ಯೆಗಳು, ನೌಕರ-ವಿರೋಧಿ ಅಂಶಗಳನ್ನು ಒಳಗೊಂಡಿರುವ ಆಡಳಿತ ಸುಧಾರಣೆಗಳು, ಇತ್ಯಾದಿ ನೌಕರ ಸಮಸ್ಯೆಗಳು ಆಗರವಾಗಿ ಬೆಳೆಯುತ್ತಿವೆ.

ಧರಣಿಗೆ ಹಲವು ಸಂಘಟನೆಗಳ ಬೆಂಬಲ

ಈ ಧರಣಿ ಕಾರ್ಯಕ್ರಮವು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ(ರಿ.)ದ ನೇತೃತ್ವದಲ್ಲಿ ನಡೆಯುತ್ತಿದ್ದು, ಹಲವು ಸಂಘಟನೆಗಳು ಬೆಂಬಲ ನೀಡಿವೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಸಮನ್ವಯ ನೌಕರರ ಸಂಘ
ಕರ್ನಾಟಕ ರಾಜ್ಯ ಸರ್ಕಾರಿ ಪಿ.ಡಿ.ಓ ಕ್ಷೇಮಾಭ್ಯುದಯ ಸಂಘ
ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘ
ಕರ್ನಾಟಕ ರಾಜ್ಯ ಅನುದಾನಿತ ಪ್ರೌಢಶಾಲೆಗಳ ಕ್ಷೇಮಾಭ್ಯುದಯ ಸಂಘ
ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ
ಕರ್ನಾಟಕ ಸರ್ಕಾರ ಸಚಿವಾಲಯ ವಾಹನ ಚಾಲಕರ ಸಂಘ
ಅಖಿಲ ಕರ್ನಾಟಕ ರಾಜ್ಯ ಪಿಂಚಣಿದಾರರ ಒಕ್ಕೂಟ
ಕಾನೂನು ಮಾಪನ ಶಾಸ್ತ್ರ ಇಲಾಖೆ ಪ.ಜಾ ಮತ್ತು ಪ.ಪಂ ನೌಕರರ ಸಂಘ
ಶಾಲಾ/ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ
ಕಾನೂನು ಮಾಪನ ಶಾಸ್ತç ಇಲಾಖೆ ಪರೀವೀಕ್ಷಕರ ಸಂಘ
ಕರ್ನಾಟಕ ರಾಜ್ಯ ಸರ್ಕಾರ ಗ್ರಂಥಾಲಯ ಇಲಾಖೆ ನೌಕರರ ಸಂಘ
ಕರ್ನಾಟಕ ರಾಜ್ಯ ಆಯುಷ್ ಶುಶ್ರೂಷಾಧಿಕಾರಿಗಳ ಸಂಘ
ಬಿ.ಬಿ.ಎಂ.ಪಿ ಪ.ಜಾ/ಪ.ಪಂ ಅಧಿಕಾರಿ/ನೌಕರರ ಕೇಂದ್ರ ಒಕ್ಕೂಟ
ಕರ್ನಾಟಕ ರಾಜ್ಯ ಅನುದಾನಿತ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ
ಕರ್ನಾಟಕ ರಾಜ್ಯ ಅನುದಾನಿತ ಬೋಧಕ/ಬೋಧಕೇತರ ಸಂಘಟನೆಗಳ ಒಕ್ಕೂಟ

ಇದನ್ನೂ ಓದಿ: Labour protest: ಸರ್ಕಾರದ ವಿರುದ್ಧ ಸಿಡಿದೆದ್ದ ಕಾರ್ಮಿಕರು, ಬೃಹತ್‌ ಪ್ರತಿಭಟನೆ

ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಗಳೇನು?

  1. ಶೇ. 40ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೊಳಿಸುವುದು.
  2. ರಾಜ್ಯದ ಎಲ್ಲಾ ನೌಕರರಿಗೂ PFRDA ಕಾಯ್ದೆ /NPS ಪದ್ದತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪಿಸುವುದು
  3. ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು.
  4. ಗುತ್ತಿಗೆ/ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು. ಇವರ ವೇತನವನ್ನು ಸರ್ಕಾರಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು. ಇವರುಗಳನ್ನು ಎಲ್ಲಾ ನೇರ ನೇಮಕಾತಿಗಳಲ್ಲಿ ಕಾಯಂಗೊಳಿಸುವುದು. ಇನ್ನು ಮುಂದೆ ಗುತ್ತಿಗೆ/ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಖಾಯಂ ನೇಮಕಾತಿ ಮಾಡಿಕೊಳ್ಳುವುದು.\
  5. ಕೋವಿಡ್ ನೆಪದಲ್ಲಿ ತಡೆಹಿಡಿಯಲಾಗಿರುವ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ ಮಾಡುವುದು.
  6. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಶೀಘ್ರ ಪರಿಷ್ಕರಣೆ ಮಾಡಿ, ಜೇಷ್ಠತಾ ಪಟ್ಟಿ ಸಿದ್ಧಪಡಿಸುವುದು ಹಾಗೂ ನಿಯಮಾನುಸಾರ ಪದೋನ್ನತಿ ನೀಡುವುದು.
  7. ಆಡಳಿತ ಸುಧಾರಣೆಗಳ ನೆಪದಲ್ಲಿ ಇಲಾಖೆಗಳ ವಿಲೀನ, ನೌಕರರ ಸಂಖ್ಯೆ ಕಡಿತ, ಸಾರ್ವಜನಿಕ ಉದ್ದಿಮೆಗಳ/ಸರ್ಕಾರದ ಯೋಜನೆಗಳ ಖಾಸಗೀಕರಣ, ಹೊರಗುತ್ತಿಗೆ ನೇಮಕಾತಿ ಪ್ರಸ್ತಾವನೆಗಳನ್ನು ಕೈಬಿಡುವುದು.
  8. ಬಡ್ತಿ ಮೀಸಲಾತಿ ಕಾಯ್ದೆ ಸಂಪೂರ್ಣ ಅನುಷ್ಠಾನಗೊಂಡು ಬ್ಯಾಕ್ ಲಾಗ್‌ಹುದ್ದೆ ಭರ್ತಿ ಮಾಡುವುದು.
  9. ರಾಜ್ಯದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಕೆಲಸದ ಒತ್ತಡ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು “ತಜ್ಞರ ಸಮಿತಿ” ನೇಮಕ ಮಾಡುವುದು.
  10. ಎಲ್ಲಾ ನೌಕರರಿಗೂ ಹಾಗೂ ಎಲ್ಲಾ ನಿವೃತ್ತರಿಗೂ ನಗದು ರಹಿತ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡುವುದು.
  11. ಮಹಿಳಾ ನೌಕರರ ಮೇಲಿನ ದೌರ್ಜನ್ಯ ತಡೆಗಟ್ಟುವುದು.
  12. ಅನುದಾನಿತ ಶಾಲಾ/ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 60 ಸಾವಿರ ಬೋಧಕ/ಭೋದಕೇತರ ನಿಶ್ಚಿತ ಪಿಂಚಣಿ ಸೌಲಭ್ಯ ಮರುಸ್ಥಾಪಿಸುವುದು.
  13. ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮ(೨೦೨೧) ಗಳಲ್ಲಿನ ನೌಕರ-ವಿರೋಧಿ ಅಂಶಗಳನ್ನು ಕೈಬಿಡುವುದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC 2024 Exam 2: ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮಾಡಲು ಉದ್ದೇಶಿಸಲಾಗಿದ್ದ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಲಾಗಿದೆ. ಮೇ 29ರಿಂದ ಜೂ.6ರವರೆಗೆ ಈ ವಿಶೇಷ ತರಗತಿಗಳು ನಡೆಯಲಿವೆ. ಇನ್ನು ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ

VISTARANEWS.COM


on

SSLC Exam 2024
Koo

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2

ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ (Karnataka SSLC 2024 Exam 2) ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ. ಈ ಹಿಂದೆ ಜೂನ್‌ 7ರಿಂದ 14ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ-2 ನಿಗದಿಯಾಗಿತ್ತು. ಆದರೆ, ಪರೀಕ್ಷೆ ಮುಂದೂಡಿಕೆಯಾಗಿದ್ದು, ಜೂನ್‌ 14ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024 SSLC 2nd and 3rd exam aspirants to have special classes

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

Continue Reading

ಕರ್ನಾಟಕ

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

Pratibha Puraskar: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

Pratibha Puraskar
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು

  • ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
  • ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
  • ವಿದ್ಯಾರ್ಥಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
  • ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್‌ಲೋಡ್ ಮಾಡುವುದು.
  • ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)

ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading
Advertisement
Karnataka Police
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ4 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ4 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ5 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ5 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ6 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ6 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ6 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ7 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ7 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌