Dina Bhavishya : ಇಂದು ಈ ರಾಶಿಯವರು ವಾಹನ ಚಲಾಯಿಸುವಾಗ ಇರಲಿ ಜಾಗ್ರತೆ; ಇಲ್ಲದಿದ್ದರೆ ಅಪಘಾತ! - Vistara News

ಭವಿಷ್ಯ

Dina Bhavishya : ಇಂದು ಈ ರಾಶಿಯವರು ವಾಹನ ಚಲಾಯಿಸುವಾಗ ಇರಲಿ ಜಾಗ್ರತೆ; ಇಲ್ಲದಿದ್ದರೆ ಅಪಘಾತ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for February 8 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರ ಕುಂಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಧನಸ್ಸು ರಾಶಿಯವರಿಗೆ ಅತಿಯಾದ ಚಿಂತೆ, ಒತ್ತಡವು ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (08-02-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ
ತಿಥಿ: ತ್ರಯೋದಶಿ 11:16 ವಾರ: ಗುರುವಾರ
ನಕ್ಷತ್ರ: ಉತ್ತರಾಷಾಢ 26:13 ಯೋಗ: ಸಿದ್ಧಿ 23:08
ಕರಣ: ವಣಿಜ 11:16 ಅಮೃತ ಕಾಲ: ರಾತ್ರಿ 08:28 ರಿಂದ 09:55ರ ವರೆಗೆ

ಸೂರ್ಯೋದಯ : 6:45  ಸೂರ್ಯಾಸ್ತ : 06:23

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ. ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಕಾರಣ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಅನಿವಾರ್ಯವಾಗಿ ಖರ್ಚು ಹೆಚ್ಚಾಗಲಿದೆ. ಜತೆಗೆ ಪ್ರಯಾಣ ಮಾಡುವ ಸಾಧ್ಯತೆಯೂ ಇದೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಉತ್ತಮ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನವಾಗಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭವಾಗಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ನಡೆಸಲಿದ್ದೀರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿಬರುತ್ತದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಇರಿ. ಅಪಘಾತವಾಗುವ ಸಂಭವ ಇದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ ಎಚ್ಚರ ವಹಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವೃಷಭ ರಾಶಿಯವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 27:40 ವಾರ: ಶನಿವಾರ
ನಕ್ಷತ್ರ: ಪುಷ್ಯ 19:38 ಯೋಗ: ವರಿಯಾನ 17:36
ಕರಣ: ಗರಜ 14:59 ಅಮೃತಕಾಲ: ಮಧ್ಯಾಹ್ನ 12:48 PM ರಿಂದ 02:31
ದಿನದ ವಿಶೇಷ: ಶನಿ ಪ್ರದೋಷ, ಇಳಕಲ್ಲು ರಥ, ಶ್ರಾವಣ ಶನಿವಾರ

ಸೂರ್ಯೋದಯ : 06:09   ಸೂರ್ಯಾಸ್ತ : 06:31

ರಾಹುಕಾಲ:ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬದಲ್ಲಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ, ಆದಷ್ಟು ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು.ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ.ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ, ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ.
ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ. ಹೀಗಾಗಿ ಆರ್ಥಿಕವಾಗಿ ಸದೃಢವಾಗಿರಲಿದೆ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ. ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ, ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ. ಸಂಗಾತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿಯದೆ, ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು. ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಶುಕ್ರವಾರ ಮಧ್ಯಾಹ್ನ 01:09 ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ಮಿಥುನ ರಾಶಿಯವರು ಉತ್ಸಾಹ ತುಂಬಿದ ವಾತಾವರಣವಿದು. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಪರಿತಪಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 26:24 ವಾರ: ಶುಕ್ರವಾರ
ನಕ್ಷತ್ರ: ಪುನರ್ವಸು 17:54 ಯೋಗ: ವ್ಯತಿಪಾತ 17:45
ಕರಣ: ಕೌಲವ 13:57 ಅಮೃತಕಾಲ: ಮಧ್ಯಾಹ್ನ 03:24 ರಿಂದ 05:05
ದಿನದ ವಿಶೇಷ: ವೈಷ್ಣ ವೈಕಾದಶೀ, ವಾಘೇ ಶ್ರೀವೈಷ್ಣವ ಆರತ್ಯಮಾನ

ಸೂರ್ಯೋದಯ : 06:08   ಸೂರ್ಯಾಸ್ತ : 06:32

ರಾಹುಕಾಲ:ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತತರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ, ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣವಿದು. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಪರಿತಪಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು.ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಗುರುವಾರವೂ ಕಟಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 25:36 ವಾರ: ಗುರುವಾರ
ನಕ್ಷತ್ರ: ಆರಿದ್ರಾ 16:38 ಯೋಗ: ಸಿದ್ಧಿ 18:15
ಕರಣ: ಭವ 13:24 ಅಮೃತಕಾಲ: ಬೆಳಗ್ಗೆ 06:20 ರಿಂದ 07:59
ದಿನದ ವಿಶೇಷ: ಸರ್ವತ್ರ ಏಕಾದಶಿ

ಸೂರ್ಯೋದಯ : 06:08   ಸೂರ್ಯಾಸ್ತ : 06:32

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ, ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ಬೆಳಗ್ಗೆ 04:4ಕ್ಕೆ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಟಕ ರಾಶಿಯವರು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 25:18 ವಾರ: ಬುಧವಾರ
ನಕ್ಷತ್ರ: ಮೃಗಶಿರಾ 15:51 ಯೋಗ: ವಜ್ರ 19:10
ಕರಣ: ವಣಿಜ 13:21 ಅಮೃತಕಾಲ: ಬೆಳಗ್ಗೆ 06:59 ರಿಂದ 08:36
ದಿನದ ವಿಶೇಷ: ಹೆಮ್ಮರಗಾಲ ಕೃಷ್ಣೋತ್ಸವ

ಸೂರ್ಯೋದಯ : 06:08   ಸೂರ್ಯಾಸ್ತ : 06:34

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡುವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ . ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ- ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Rishab Shetty And NTR
ಸಿನಿಮಾ7 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ8 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ9 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ9 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು9 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ9 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ9 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್10 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು11 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ11 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್14 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌